Author: admin

ಬಳ್ಳಾರಿ: ಇಲ್ಲಿನ ಶ್ರೀ ಶರಣ ಸಕ್ಕರೆ ಕರಡೀಶ ಸೌಹಾರ್ದ ಪತ್ತಿನ ಸಹಕಾರಿ ಸಂಘದ ಎಂಟನೇ ವಾರ್ಷಿಕ ಮಹಾಸಭೆ ಸೆಪ್ಟೆಂಬರ್‌ 21ರಂದು ಬೆಳಗ್ಗೆ 11ಕ್ಕೆ ಬಳ್ಳಾರಿಯ ಸಂಗನಕಲ್ಲು ರಸ್ತೆಯ ಕೆಪಿಟಿಸಿಎಲ್‌ ಆವರಣದ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮದ ನೌಕರರ ಸಂಘ ಸಮುದಾಯ ಭವನದಲ್ಲಿ ನಡೆಯಲಿದೆ. ಅದೇ ದಿನ ಬೆಳಗ್ಗೆ 9ರಿಂದ 10.30ರ ತನಕ ಕಚೇರಿಯ ಸ್ವಂತ ಕಟ್ಟಡದಲ್ಲಿ ಪೂಜೆ ಹಮ್ಮಿಕೊಳ್ಳಲಾಗಿದೆ. 2017ರಲ್ಲಿ ಆರಂಭವಾದ ಶ್ರೀ ಶರಣ ಸಕ್ಕರೆ ಕರಡೀಶ ಸೌಹಾರ್ದ ಪತ್ತಿನ ಸಹಕಾರಿ ಸಂಘವು ಕೇವಲ 8 ವರ್ಷಗಳ ಅವದಿಯಲ್ಲಿ ಸಹಕಾರ ಕ್ಷೇತ್ರದಲ್ಲಿ ಬೃಹದಾಕಾರವಾಗಿ ಬೆಳೆದು ನಿಂತಿದೆ. ಪ್ರಾರಂಭದ ದಿನಗಳಲ್ಲಿ ರೂ.42 ಲಕ್ಷ ಷೇರು ಹಣದೊಂದಿಗೆ ಪ್ರಾರಂಭವಾದ ಈ ಸಹಕಾರಿ ಸಂಘವು ಸದಸ್ಯರ ಷೇರು ಬಂಡವಾಳ, ಠೇವಣಿ, ನಿರಂತರ ಪಿಗ್ಮಿ ಯೋಜನೆ, ಸಿ.ಆರ್.ಡಿ ಯೋಜನೆ, ಚಾಲ್ತಿ ಖಾತೆಗಳ ಮೂಲಕ ಬಂಡವಾಳ ದೃಢೀಕರಿಸಿ ದುಡಿಯುವ ಬಂಡವಾಳದ ಆರ್ಥಿಕ ಬಲವನ್ನು ಹೆಚ್ಚಿಸಿಕೊಂಡು ಪತ್ತಿನ ವ್ಯಾಪಾರ ವಹಿವಾಟಿನ ಮೂಲಕ ವೃತ್ತಿಪರತೆಯಿಂದ ಮುನ್ನೆಡೆಸುತ್ತ ಬಂದಿದೆ. ತನ್ನ ಕಾರ್ಯಕ್ಷೇತ್ರದ ವ್ಯಾಪ್ತಿಯ…

Read More

ಮಂಗಳೂರು: ನಿವೃತ್ತ ಬ್ಯಾಂಕ್ ನೌಕರರ ಹಾಗೂ ಅಧಿಕಾರಿಗಳ ಕ್ರೆಡಿಟ್ ಸೌಹಾರ್ದ ಕೋ ನಿಯಮಿತ ಇದರ 5ನೇ ಸರ್ವ ಸದಸ್ಯರ ಮಹಾಸಭೆ ಮಂಗಳೂರು ನಗರದ ಮಣ್ಣಗುಡ್ಡೆಯಲ್ಲಿರುವ ರೋಟರಿ ಬಾಲಭವನದಲ್ಲಿ ಭಾನುವಾರ ಜರಗಿತು.https://chat.whatsapp.com/Ge11n7QCiMj5QyPvCc0H19 ಸಭೆಯಲ್ಲಿ ಅಧ್ಯಕ್ಷ ರವೀಂದ್ರನಾಥ್ ಶೆಟ್ಟಿ ಮತ್ತು ನಿರ್ದೇಶಕರಾದ ಕೆ.ಟಿ ರೈ, ಟಿ.ವಿ ರೈ, ನರೇಂದ್ರನಾಥ್ ಕಾಮತ್, ಶಾಲಿನಿ ಶೆಟ್ಟಿ, ಶಾಮಸುಂದರ ರಾವ್, ಪ್ರೇಮನಾಥ್, ಜೆ.ವಿ ಶೆಟ್ಟಿ ಸದಾಶಿವ ವಿ.ಎಸ್, ಯೋಗೀಶ್ ಭಟ್ ಉಪಸ್ಥಿತರಿದ್ದರು. ಸಭೆಯಲ್ಲಿ ಸದಸ್ಯರಿಗೆ 2023 -2024ನೇ ಸಾಲಿನ ಶೇಕಡಾ 10 ಲಾಭಾಂಶ ಘೋಷಣೆ ಮಾಡಲಾಯಿತು.

Read More

ಭಾರತ ಸಹಕಾರಿ ಒಕ್ಕೂಟದಿಂದ 2023-24ರ ಅತ್ಯುತ್ತಮ ಸಹಕಾರಿ ಸಂಘವೆಂದು ಖ್ಯಾತಿ ಸಂಘದ ಅಧ್ಯಕ್ಷ ಜಾಕೀ‌ರ್ ಮೋಹಿಯುದ್ದೀನ್ ಮಾಹಿತಿ ರಾಯಚೂರು: ಮಾನ್ವಿ ಪಟ್ಟಣದ ಶಿವಪ್ರಿಯ ಪತ್ತಿನ ಸೌಹಾರ್ದ ಸಹಕಾರಿ ಸಂಘವು ವರದಿ ವರ್ಷದಲ್ಲಿ 70.60 ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಜಾಕೀ‌ರ್ ಮೋಹಿಯುದ್ದೀನ್ ಹೇಳಿದರು. ಸಂಘದ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ 10ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, 2023-24ನೇ ಸಾಲಿನಲ್ಲಿ ಶಿವಪ್ರಿಯ ಪತ್ತಿನ ಸೌಹಾರ್ದ ಸಹಕಾರಿ ಸಂಘವು ಉತ್ತಮ ಸಹಕಾರಿ ಸೇವೆಗಾಗಿ ಭಾರತ ಸಹಕಾರಿ ಒಕ್ಕೂಟದಿಂದ ಅತ್ಯುತ್ತಮ ಸಹಕಾರಿ ಸಂಘವೆಂದು ಖ್ಯಾತಿ ಪಡೆದಿದೆ ಎಂದು ತಿಳಿಸಿದರು. 2014ರಲ್ಲಿ ಆರಂಭಗೊಂಡ ಶಿವಪ್ರಿಯ ಪತ್ತಿನ ಸೌಹಾರ್ದ ಸಹಕಾರಿ ಸಂಘವು 2015-16ನೇ ಸಾಲಿನಲ್ಲಿ ಸಂಪೂರ್ಣ ರಾಯಚೂರು ಜಿಲ್ಲೆಯಲ್ಲಿ ಕಾರ್ಯ ಆರಂಭಿಸಿ, 2018-19ರ ವೇಳೆಗೆ ರಾಯಚೂರು, ಬಳ್ಳಾರಿ, ಕೊಪ್ಪಳ, ಯಾದಗಿರಿ, ಕಲಬುರಗಿ ಜಿಲ್ಲೆಯನ್ನೊಳಗೊಂಡ ಕಾರ್ಯವ್ಯಾಪ್ತಿಯಲ್ಲಿ ಕೆಲಸ ವಿಸ್ತರಿಸಿಕೊಂಡಿದೆ. ಉತ್ತಮ ಸಹಕಾರಿ ಸೇವೆಗಾಗಿ ಭಾರತ ಸಹಕಾರಿ ಒಕ್ಕೂಟದಿಂದ ಉತ್ತಮ ಸಹಕಾರಿ…

Read More

ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಬೆಂಗಳೂರು ನಿರ್ದೇಶಕ ಮಂಜುನಾಥ್ ಎಸ್.ಕೆ. ಅಭಿಪ್ರಾಯ ಬಡ ಕುಟುಂಬದ ಭವಾನಿ ಜಿ.ನಾಯಕ್‌ ಕುಟುಂಬಕ್ಕೆ ನಿರ್ಮಿಸಿದ ಮನೆ ಹಸ್ತಾಂತರ ಉಡುಪಿ: ಉಡುಪಿ ಜಿಲ್ಲೆಗೆ ಕೋಡಿ ಕನ್ಯಾಣದ ಶ್ರೀ ರಾಮಾಂಜನೇಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘವು ಸಿಂಧೂರವಿದ್ದಂತೆ. ಸಹಕಾರಿ ಕ್ಷೇತ್ರದಲ್ಲಿ ಶ್ರೀ ರಾಮಾಂಜನೇಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘವು ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದಿದೆ ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಬೆಂಗಳೂರು ಇದರ ನಿರ್ದೇಶಕ ಮಂಜುನಾಥ್ ಎಸ್.ಕೆ. ಹೇಳಿದರು. ಕೋಡಿ ಕನ್ಯಾನದ ಶ್ರೀ ರಾಮಾಂಜನೇಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ವತಿಯಿಂದ ತಥಾಸ್ತು ಎಂಬ ಯೋಜನೆಯಡಿ ಬಡ ಕುಟುಂಬದ ಭವಾನಿ ಜಿ.ನಾಯಕ್ ಅವರಿಗೆ ನಿರ್ಮಿಸಿಕೊಟ್ಟ ಹೊಸ ಮನೆಯನ್ನು ಶನಿವಾರ ಲೋಕಾರ್ಪಣೆಗೊಳಿಸಿ ಮಾತನಾಡಿದರು. https://chat.whatsapp.com/Ge11n7QCiMj5QyPvCc0H19 ಗ್ರಾಮೀಣ ಭಾಗದಲ್ಲಿ ಸಹಕಾರಿ ರಂಗವನ್ನು ಸ್ಥಾಪಿಸಿ ಬಡವರ ಕಣ್ಣೀರೊರೆಸುವ ಕಾಯಕ ಅತ್ಯಂತ ಶ್ರೇಷ್ಠವಾದ ಕಾರ್ಯ. ಸಹಕಾರಿ ರಂಗ ವ್ಯವಹಾರಕ್ಕೆ ಸೀಮಿತಗೊಳ್ಳದೆ ಅಶಕ್ತರಿಗೆ ಮಿಡಿಯುತ್ತಿದೆ ಎಂದರೆ ಈ ಕ್ಷೇತ್ರ ಬದಲಾವಣೆಯ ಪರ್ವವನ್ನು…

Read More

ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌ ಶ್ಲಾಘನೆ ಕೋಟೆಕಾರು ಬೀರಿಯಲ್ಲಿ ಕೆ.ಸುಬ್ಬಣ್ಣಯ್ಯ ಸ್ಮಾರಕ ಸಹಕಾರ ಸೌಧ ಲೋಕಾರ್ಪಣೆ ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘವು ಪ್ರಸಕ್ತ ಏಳು ಶಾಖೆಗಳನ್ನು ಹೊಂದಿದ್ದು 173 ಕೋಟಿ ರೂ. ಸಾಲ ನೀಡಿ 2.45 ಕೋಟಿ ರೂಪಾಯಿಗಳ ಪಾಲು ಬಂಡವಾಳ ಹೊಂದಿ ಷೇರುದಾರರಿಗೆ ಶೇ.25 ಡಿವಿಡೆಂಡ್‌ ನೀಡುತ್ತಿದೆ. ಈ ಮೂಲಕ ಸಂಘವು ಯಶಸ್ವಿಯಾಗಿ ಕಾರ್ಯನಿರ್ವಹಣೆ ಮಾಡುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ ಅಧ್ಯಕ್ಷ, ಸಹಕಾರ ರತ್ನ ಡಾ.ಎಂ. ಎನ್. ರಾಜೇಂದ್ರ ಕುಮಾರ್ ಹೇಳಿದರು. ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ವತಿಯಿಂದ ಕೋಟೆಕಾರು ಗ್ರಾಮದ ಬೀರಿಯಲ್ಲಿ ಕೆ.ಸುಬ್ಬಣ್ಣಯ್ಯ ಸ್ಮಾರಕ ಸಹಕಾರ ಸೌಧವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು. ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘವು ವಿದ್ಯಾರ್ಥಿಗಳು, ಕೃಷಿಕರಿಗೆ ಪ್ರೋತ್ಸಾಹ ನೀಡಿ ಸಮಾಜಮುಖಿ ಕೆಲಸದಲ್ಲಿ ತೊಡಗಿಸಿಕೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಬಹಳಷ್ಟು ದೊಡ್ಡ ಹೆಸರು ಮಾಡಿರುವ ಜಿಲ್ಲೆ. ದೇಶದಲ್ಲೇ…

Read More

ಐದನೇ ವಾರ್ಷಿಕ ಮಹಾಸಭೆಯಲ್ಲಿ 25% ಡಿವಿಡೆಂಡ್‌ ಘೋಷಣೆ ಮಂಗಳೂರು: ಶ್ರೀಶಾ ಕೋ ಆಪರೇಟಿವ್ ಸೊಸೈಟಿಯ ಐದನೇ ವಾರ್ಷಿಕ ಮಹಾಸಭೆ ಭಾನುವಾರ ಶ್ರೀನಿವಾಸ ಹೋಟೆಲ್‌ನ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀಶಾ ಸೊಸೈಟಿಯ ಅಧ್ಯಕ್ಷ ಶ್ರೀ ಎಂ.ಎಸ್‌.ಗುರುರಾಜ್, ಶ್ರೀಶಾ ಸೊಸೈಟಿ ಆರಂಭವಾಗಿ ಕೇವಲ ಐದು ವರ್ಷಗಳಲ್ಲೇ ಐದು ಸುಸಜ್ಜಿತ ಶಾಖೆಗಳನ್ನು ತೆರೆದಿದೆ. 2023-24ನೇ ಸಾಲಿನಲ್ಲಿ ಅಭೂತಪೂರ್ವ ವ್ಯವಹಾರ ನಡೆಸಿ 123 ಲಕ್ಷ ರೂ. ನಿವ್ವಳ ಲಾಭ ಗಳಿಸಿ ಇಂದು ಸದಸ್ಯರಿಗೆ ನೀಡುತ್ತಿರುವುದು 25% ಡಿವಿಡೆಂಡ್‌ ತಮಗೆ ಅತೀವ ಸಂತಸ ತಂದಿದೆ. ಲಾಭ ಗಳಿಕೆಯೊಂದೇ ಧ್ಯೇಯವಾಗಿರದೆ ಗಳಿಸಿದ ಲಾಭಾಂಶದಲ್ಲಿ ದೊಡ್ಡ ಪಾಲನ್ನು ಮರಳಿ ಸಮಾಜ ಸೇವಾ ಕಾರ್ಯಗಳಿಗೆ ವಿನಿಯೋಗಿಸುತ್ತಿದೆ. ಅದರಲ್ಲೂ ಮುಖ್ಯವಾಗಿ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ. ಶ್ರೀಶಾ ಸೊಸೈಟಿಯು ಐದು ವರ್ಷಗಳನ್ನು ಪೂರೈಸಿದ ಹಿನ್ನಲೆಯಲ್ಲಿ 10 ದೊಡ್ಡ ಮಟ್ಟದ ಸಾಮಾಜಿಕ ಸೇವಾ ಕಾರ್ಯಗಳನ್ನು ಕೈಗೊಳ್ಳುತ್ತಿದೆ. ಅವುಗಳಲ್ಲಿ ಹೆಚ್ಚಿನವುಗಳನ್ನು ಸರಕಾರಿ ಕನ್ನಡ ಮಾಧ್ಯಮ ಶಾಲೆಗಳಿಗೆ ಮತ್ತು ಅಲ್ಲಿನ ವಿದ್ಯಾರ್ಥಿಗಳಿಗೆ…

Read More

ಮಂಗಳೂರು: ಸಹಕಾರಿ ಬ್ಯಾಂಕಿಂಗ್ ರಂಗದಲ್ಲಿ 110 ವರ್ಷಗಳ ಸಾರ್ಥಕ ಸೇವೆ ಪೂರೈಸಿ ಜನಸಾಮಾನ್ಯರ ಶಕ್ತಿಯಾಗಿ ಬೆಳೆದಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್(ಎಸ್‌ ಸಿಡಿಸಿಸಿ ಬ್ಯಾಂಕ್‌)ಗೆ ಅಟಲ್ ಪಿಂಚಣಿ ಯೋಜನೆಯ ರಾಷ್ಟ್ರೀಯ ಪ್ರಶಸ್ತಿ (ಎಪಿವೈ ಪ್ರಶಸ್ತಿ) ಹಾಗೂ ರಾಜ್ಯದ ಪ್ರತಿಷ್ಠಿತ ಅಪೆಕ್ಸ್ ಬ್ಯಾಂಕಿನ ಪ್ರಥಮ ಪ್ರಶಸ್ತಿಯನ್ನು ಶುಕ್ರವಾರ ಬೆಂಗಳೂರಿನಲ್ಲಿ ಪ್ರದಾನ ಮಾಡಲಾಯಿತು. ಕರ್ನಾಟಕ ಸಹಕಾರಿ ಅಪೆಕ್ಸ್ ಬ್ಯಾಂಕ್‌ನ ವಾರ್ಷಿಕ ಮಹಾಸಭೆಯಲ್ಲಿ ಅಟಲ್ ಪಿಂಚಣಿ ಯೋಜನೆಯ ರಾಷ್ಟ್ರೀಯ ಪ್ರಶಸ್ತಿ ಹಾಗೂ ಅಪೆಕ್ಸ್ ಬ್ಯಾಂಕಿನ ಪ್ರಥಮ ಪ್ರಶಸ್ತಿಯನ್ನು ಅಪೆಕ್ಸ್ ಬ್ಯಾಂಕಿನ ಅಧ್ಯಕ್ಷ ಬೆಳ್ಳಿಪ್ರಕಾಶ್ ಅವರಿಂದ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ|ಎಂ.ಎನ್ ರಾಜೇಂದ್ರಕುಮಾರ್ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಗೋಪಾಲಕೃಷ್ಣ ಭಟ್ ಸ್ವೀಕರಿಸಿದರು. ಭಾರತ ಸರ್ಕಾರದ ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ ಕೋರಿಕೆಯಂತೆ ಎಸ್‌ಸಿಡಿಸಿಸಿ ಬ್ಯಾಂಕ್ 2019ರ ಜನವರಿ -11ರಂದು ಅಟಲ್ ಪಿಂಚಣಿ ಯೋಜನೆ ಅಡಿಯಲ್ಲಿ ನೋಂದಾಯಿಸಲ್ಪಟ್ಟಿದ್ದು , ಬ್ಯಾಂಕಿನ ಪ್ರತಿ ಶಾಖೆಗಳಲ್ಲಿ ಅಟಲ್ ಪಿಂಚಣಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಟಾನಕ್ಕೆ ತಂದು ಚಂದಾದಾರರನ್ನು ನೊಂದಾಯಿಸುವ…

Read More

ಭಾರತ ಸಂವಿಧಾನ ಉಪನ್ಯಾಸ ಕಾರ್ಯಕ್ರಮದಲ್ಲಿ ಡಾ.ಎಸ್‌.ಆರ್‌.ಹರೀಶ್‌ ಆಚಾರ್ಯ ಅಭಿಮತ ಮಂಗಳೂರು: ಸಹಕಾರ ಕ್ಷೇತ್ರ ಎಂದರೆ ಸಂವಿಧಾನದ ತೊಟ್ಟಿಲು. ಇಲ್ಲಿ ರಚನಾತ್ಮಕ ದೃಷ್ಟಿಕೋನದ ಸಾಮೂಹಿಕ ಜವಾಬ್ದಾರಿಯ ಮೂಲಕ ಸೊಸೈಟಿಯ ಚಟುವಟಿಕೆಗಳು ನಡೆಯುತ್ತಿದ್ದು ಎಲ್ಲರನ್ನೂ ಒಳಗೊಂಡು ಸಹಕಾರ ಸಂಘಗಳ ಸಂವಿಧಾನ ರಚನೆಯಾಗಿರುತ್ತದೆ ಎಂದು ಸ್ಪಂದನ ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಡಾ.ಎಸ್‌.ಆರ್‌.ಹರೀಶ್‌ ಆಚಾರ್ಯ ಹೇಳಿದರು. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK ಮಂಗಳೂರಿನ ಕುದ್ಮಲ್‌ ರಂಗರಾವ್‌ ಪುರಭವನದಲ್ಲಿ ಶನಿವಾರ ಭಾರತ ಸಂವಿಧಾನದ 75ನೇ ವರುಷದ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡ ಭಾರತ ಸಂವಿಧಾನ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಸಹಕಾರ ಕ್ಷೇತ್ರ ಶೇ.1, 2ರಷ್ಟಾದರೂ ಸಂವಿಧಾನದ ಆಶಯಗಳನ್ನು ಜನಸಾಮಾನ್ಯರಿಗೆ ತಲುಪಿಸುತ್ತದೆ. ಸಹಕಾರ ಸಂಘಗಳ ಬೈಲಾಗಳು ಸಂವಿಧಾನದ ಆಶಯಗಳಿಗೆ ಪೂರಕವಾಗಿಯೇ ರಚನೆಯಾಗಿರುತ್ತದೆ ಎಂದು ಬಣ್ಣಿಸಿದರು. ಸಂವಿಧಾನದ ಬಗ್ಗೆ ಉಪನ್ಯಾಸ ನೀಡಲಿರುವ ಡಾ.ಪಿ.ಅನಂತಕೃಷ್ಣ ಭಟ್‌ ಅವರು ಭಾರತದ ಸಂವಿಧಾನದ ಚಲಿಸುವ ಸಾಧನ ಎಂದು ಬಣ್ಣಸಿದ ಡಾ.ಎಸ್‌.ಆರ್‌.ಹರೀಶ್‌ ಆಚಾರ್ಯ ಅವರು, 75ರ ಹರೆಯದಲ್ಲೂ ಹಲವಾರು ಕಡೆ ಸಂವಿಧಾನದ ಬಗ್ಗೆ ಉಪನ್ಯಾಸ…

Read More

ಹಳೆಯಂಗಡಿ: ಇಲ್ಲಿನ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ 2023-24ನೇ ಸಾಲಿನ ಮಹಾಸಭೆ ಹಳೆಯಂಗಡಿಯ ಹರಿ ಓಂ ಸಭಾಭವನದಲ್ಲಿ ಇತ್ತೀಚೆಗೆ ಸೊಸೈಟಿಯ ಅಧ್ಯಕ್ಷ ಎಚ್.ವಸಂತ್ ಬೆರ್ನಾರ್ಡ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ವರದಿ ವರ್ಷದಲ್ಲಿ ಸೊಸೈಟಿಯು ರೂ. 19.14 ಲಕ್ಷ ಲಾಭಾಂಶ ಗಳಿಸಿ, ಸದಸ್ಯರಿಗೆ 6% ಪಾಲು ಮುನಾಫೆಯನ್ನು ಘೋಷಿಸಲಾಯಿತು. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3 ಶಾಖೆಯನ್ನು ಹೊಂದಿರುವ ಹಳೆಯಂಗಡಿ ಕೋ ಆಪರೇಟಿವ್ ಸೊಸೈಟಿಯು ತನ್ನ ಮೂರು ವರ್ಷದ ಅವಧಿಯಲ್ಲಿ ಉತ್ತಮ ಸಾಧನೆಯನ್ನು ಮಾಡಿದೆ. ಮಾರ್ಚ್ ಅಂತ್ಯಕ್ಕೆ ರೂ. 21.22 ಕೋಟಿ ಠೇವಣಿ, ರೂ. 85.76 ಲಕ್ಷ ಪಾಲು ಬಂಡವಾಳ, ರೂ. 18.21 ಕೋಟಿ ಸಾಲ ನೀಡಿದ್ದು, ಆಡಿಟ್ ವರ್ಗಿಕರಣದಲ್ಲಿ ‘ಎ’ ಎಂದು ಘೋಷಿಸಲಾಗಿದೆ. ಇದರಿಂದಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೀಡಿದ “ವಿಶಿಷ್ಟ ಸಾಧನಾ ಪ್ರಶಸ್ತಿ”ಯನ್ನು ಪಡೆದುಕೊಂಡಿದೆ. ಸೊಸೈಟಿಯು 15 ಸಿಬ್ಬಂದಿಗಳನ್ನು ಹೊಂದಿದ್ದು, 1903 ಸದಸ್ಯರನ್ನು ಹೊಂದಿದೆ ಎಂದು ಅಧ್ಯಕ್ಷ ವಸಂತ್ ಬೆರ್ನಾರ್ಡ್ ತಿಳಿಸಿದರು. ಇದೇ…

Read More

ಶಿರ್ವ: ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಎರಡನೇ ವರ್ಷಕ್ಕೆ ಪದಾರ್ಪಣೆಗೊಂಡ ಹಿನ್ನೆಲೆಯಲ್ಲಿ ಶಿರ್ವ ಪಾಂಬೂರಿನ ಮಾನಸ ವಿಶೇಷ ಮಕ್ಕಳ ಶಾಲೆಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು. ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಜೀವನ್ ಡಿಸೋಜ ಮಾನಸ ಶಾಲೆಯ ಅಧ್ಯಕ್ಷರಿಗೆ ದಿನಸಿ ವಸ್ತುಗಳನ್ನು ಹಸ್ತಾಂತರಿಸಿ ಮಾತನಾಡಿ, ಇಂತಹ ಸಾಮಾಜಿಕ ಕಾರ್ಯಕ್ರಮ ಹಮ್ಮಿಕೊಳ್ಳಲು ಮೂಲ ಪ್ರೇರಣೆ ಮತ್ತು ಮುಖ್ಯ ಉದ್ದೇಶ ದಿ.ಫಾ.ವಲೇರಿಯನ್ ಮೆಂಡೋನ್ಸಾ. ಸಂಸ್ಥೆಯ ಉದ್ಘಾಟನಾ ಸಮಾರಂಭದಲ್ಲಿ ಸಮಾಜಮುಖಿ ಚಿಂತನೆ ಮತ್ತು ಕಾರ್ಯಕ್ರಮದ ಬಗ್ಗೆ ತಿಳಿ ಹೇಳಿ ನಮ್ಮನ್ನು ಪ್ರೇರೇಪಿಸಿದ್ದರು. ಇವರ ಆಗಲುವಿಕೆ ನನಗೆ ತುಂಬಲಾಗದ ನಷ್ಟ ಮಾಡಿದೆ. ಅದರ ಸಲುವಾಗಿ ಈ ಕಾರ್ಯಕ್ರಮದ ಎಲ್ಲ ಶ್ರೇಯಸ್ಸು ದಿ.ಫಾ.ವಲೇರಿಯನ್ ಮೆಂಡೋನ್ಸಾ ಇವರಿಗೆ ಅರ್ಪಿಸುತ್ತೇನೆ. ಅವರಿಗೆ ಗೌರವ ಸಮರ್ಪಣೆಯಿಂದ ನಾವು ಇಂದು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸ್ಥಳೀಯ ಹೋಲಿಕ್ರಾಸ್ ದೇವಾಲಯ ಪಾಂಬೂರು ಇಲ್ಲಿಯ ಪ್ರಧಾನ ಧರ್ಮಗುರುಗಳಾದ ಫಾ.ಹೆನ್ರಿ ಮಸ್ಕರೇನ್ಹಸ್…

Read More