Author: admin
ಸಂಪರ್ಕ ಸಭೆ, ತರಬೇತಿ ಕಾರ್ಯಕ್ರಮದಲ್ಲಿ ಜಿ.ನಂಜನ ಗೌಡ ಅಭಿಪ್ರಾಯ ಮಂಗಳೂರು: ಅತ್ಯಂತ ಬಡವರೂ ಏಳಿಗೆ ಹೊಂದಬೇಕು ಎಂಬುದು ಸೌಹಾರ್ದ ಸಹಕಾರಿಯ ಉದ್ದೇಶ. ಈ ಕ್ಷೇತ್ರದಲ್ಲಿ ಅಧಿಕಾರಿಗಳ ಹಸ್ತಕ್ಷೇಪ ಕಡಿಮೆ. ಆದರೆ ಸೌಹಾರ್ದದ ನಿಯಮಾವಳಿಯ ದುರುಪಯೋಗ ಯಾವತ್ತೂ ಆಗಬಾರದು ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷ ಜಿ.ನಂಜನ ಗೌಡ ಅಭಿಪ್ರಾಯಪಟ್ಟರು. ಮಂಗಳೂರಿನಲ್ಲಿ ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಸೌಹಾರ್ದ ಸಹಕಾರಿಗಳ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಹಮ್ಮಿಕೊಂಡ ಸಂಪರ್ಕ ಸಭೆ ಹಾಗೂ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸೌಹಾರ್ದ ಸಹಕಾರಿ ಸಂಸ್ಥೆಗಳು ತಮ್ಮ ಕಾರ್ಯಕ್ಷೇತ್ರದಲ್ಲಿ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಯಾರಿಗಾದರೂ ಸಾಲ ಕೊಡುವಾಗ ಸಂಸ್ಥೆಯ ಅಧ್ಯಕ್ಷರು, ನಿರ್ದೇಶಕರು ಅತ್ಯಂತ ಜಾಗರೂಕರಾಗಿರಬೇಕು. ಪ್ರತಿಯೊಬ್ಬ ನಿರ್ದೇಶಕರೂ ಸಂಸ್ಥೆಯ ಎಲ್ಲ ಆಸ್ತಿಗಳ ಬಗ್ಗೆ ಪೂರ್ಣ ಮಾಹಿತಿ ಹೊಂದಿರಬೇಕು. ಸಂಸ್ಥೆಯ ಬೆಳವಣಿಗೆ, ನಿರ್ವಹಣೆಯ ಬಗ್ಗೆ ಸಂಪೂರ್ಣ ಜ್ಞಾನ ಹೊಂದಿರಬೇಕು ಮತ್ತು ಸಂಸ್ಥೆಯ ಅಭಿವೃದ್ಧಿ ಕಾರ್ಯದಲ್ಲಿ ಭಾಗಿಯಾಗಬೇಕು. ಸಂಸ್ಥೆಯ ವಿಶ್ವಾಸಕ್ಕೆ ಒಮ್ಮೆ ಧಕ್ಕೆಯಾದರೆ ಇಡೀ ವ್ಯವಸ್ಥೆಯೇ ಹಾಳಾಗುತ್ತದೆ…
ಪುರುಷರ ಏಕಸ್ವಾಮ್ಯಕ್ಕೆ ೩೩ ಶೇಕಡಾ ಮೀಸಲಾತಿಯ ತಡೆ ಮಂಗಳೂರು: ಇಂದು ಮಹಿಳೆಯರು ಪ್ರವೇಶಿಸದ ಕ್ಷೇತ್ರವೇ ಇಲ್ಲ. ಅಡುಗೆ ಮನೆಯಿಂದ ಹಿಡಿದು ಆರ್ಥಿಕ ಕ್ಷೇತ್ರದವರೆಗೂ ಮಹಿಳೆಯರು ತಮ್ಮ ಕಾರ್ಯಬಾಹುಳ್ಯವನ್ನು ವಿಸ್ತರಿಸಿಕೊಂಡಿದ್ದಾರೆ. ಇದೀಗ ಸಹಕಾರ ಕ್ಷೇತ್ರದಲ್ಲೂ ಮಹಿಳೆಯರ ಸಾಮರ್ಥ್ಯ ಪ್ರದರ್ಶನಕ್ಕೆ ವೇದಿಕೆ ರೆಡಿಯಾಗಿದೆ. ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರಿಗೆ ಶೇಕಡಾ 33ರ ಸ್ಥಾನಮಾನ ನೀಡಬೇಕೆಂಬ ಕೂಗು ಬಹಳ ಹಳೆಯದು. ಈಗ ಸಹಕಾರ ಕ್ಷೇತ್ರಕ್ಕೂ ಶೇಕಡಾ 33ರ ಬೇಡಿಕೆ ಕಾಲಿಟ್ಟಿದೆ. ಇದು ಸಹಕಾರಿ ಕ್ಷೇತ್ರದಲ್ಲಿ ಪುರುಷರ ಏಕಸ್ವಾಮ್ಯಕ್ಕೆ ಅಂತ್ಯ ಹಾಡಲಿದೆ. ಇಂಥದೊಂದು ಬೋಲ್ಡ್ ಆದೇಶ ಹೊರಡಿಸಿದ್ದು ಉತ್ತರಾಖಂಡ ಸರ್ಕಾರ. ಹೌದು, ಉತ್ತರಾಖಂಡದ ಸಹಕಾರಿ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಆದೇಶವನ್ನು ಅಲ್ಲಿನ ಸರ್ಕಾರ ಕಳೆದ ವಾರ ಹೊರಡಿಸಿದೆ. ಅಲ್ಲಿನ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮೀಸಲಾತಿ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಅದನ್ನು ಆದೇಶ ಮಾಡಿ ಸರ್ಕಾರ ನಿಯಮ ಜಾರಿಗೆ ತಂದಿದ್ದು ಶನಿವಾರ ಅಂತಾರಾಷ್ಟ್ರೀಯ ಸಹಕಾರ ದಿನಾಚರಣೆಯ ಕಾರ್ಯಕ್ರಮದಲ್ಲಿ…
ಕೇಂದ್ರ ಸಹಕಾರ ಸಚಿವ ಅಮಿತ್ ಷಾ ಕರೆ ಗಾಂಧಿನಗರ: ದೇಶದಲ್ಲಿರುವ ಲಕ್ಷಾಂತರ ಬಡಜನರಿಗೆ ಮೂಲಸೌಲಭ್ಯವೊದಗಿಸಲು, ಸಮೃದ್ಧತೆ ತರಲು ಮತ್ತು ಅವರಲ್ಲಿ ಆತ್ಮವಿಶ್ವಾಸ ವೃದ್ಧಿಸುವಂತೆ ಮಾಡಲು ಸಹಕಾರ ಕ್ಷೇತ್ರವನ್ನು ಕೊಂಡಿಯಾಗಿ ಬಳಸಬೇಕು ಎಂದು ಕೇಂದ್ರ ಗೃಹಸಚಿವ ಅಮಿತ್ ಷಾ ಕರೆ ನೀಡಿದರು. ಗುಜರಾತ್‌ನ ಗಾಂಧಿನಗರದಲ್ಲಿ ಇತ್ತೀಚೆಗೆ 102ನೇ ಅಂತಾರಾಷ್ಟ್ರೀಯ ಸಹಕಾರ ದಿನ ಆಚರಣೆ ಕಾರ್ಯಕ್ರಮದಲ್ಲಿ ಈ ವಿಷಯದ ಬಗ್ಗೆ ಮಾತನಾಡಿದರು. 2029ರಲ್ಲಿ ಅಂತಾರಾಷ್ಟ್ರೀಯ ಸಹಕಾರ ದಿನ ಆಚರಿಸುವ ವೇಳೆ ದೇಶದ ಎಲ್ಲ ಪಂಚಾಯಿತಿಗಳಲ್ಲೂ ಕೋ ಆಪರೇಟಿವ್ ಸೊಸೈಟಿಗಳು ಸ್ಥಾಪನೆಯಾಗಲಿವೆ. ಅದರಲ್ಲೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರಚನೆಯಾಗಲಿವೆ ಎಂಬ ವಿಶ್ವಾಸವಿದೆ ಎಂದು ಅಮಿತ್ ಷಾ ಹೇಳಿದರು. ಕೇಂದ್ರ ಸರ್ಕಾರವು ಸಹಕಾರಿ ವಲಯದಲ್ಲಿ ಎರಡು ಹೊಸ ಯೋಜನೆಗಳನ್ನು ಜಾರಿಗೆ ತರಲಿದೆ ಎಂದು ಅಮಿತ್ ಷಾ ತಿಳಿಸಿದರು. ಮೆಕ್ಕೆಜೋಳ ಬೆಳೆಯುವ ರೈತರನ್ನು ಹುರಿದುಂಬಿಸಲು ಎಥೆನಾಲ್ ಮೂಲಕ ಇಂಧನ ತಯಾರಿಸುವುದನ್ನು ಪ್ರೋತ್ಸಾಹಿಸಲಾಗುವುದು. ಆನ್‌ಲೈನ್ ಖರೀದಿ ಮೂಲಕ ಕನಿಷ್ಠ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿಗೆ ಎರಡು ಪ್ರಮುಖ…
ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರ ಜನ್ಮದಿನೋತ್ಸವ ಪ್ರಯುಕ್ತ ಆಗಸ್ಟ್ ೪ರಂದು ಆಯೋಜನೆಮಂಗಳೂರು: ಒಡಿಯೂರು ಪೂಜ್ಯ ಶ್ರೀಗಳವರ ಜನ್ಮದಿನೋತ್ಸವ, ಗ್ರಾಮೋತ್ಸವ, ಸೇವಾ ಸಂಭ್ರಮ ಪ್ರಯುಕ್ತ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಗಸ್ಟ್ 4ರಂದು ಭಾನುವಾರ ಬೆಳಗ್ಗೆ 9.30ರಿಂದ ಹಂಪನಕಟ್ಟೆಯ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ ಮತ್ತು ಒಡಿಯೂರು ಶ್ರೀ ಬ್ಲಡ್ ಡೋನರ್ಸ್ ಗ್ರೂಪ್ ರಚನೆ ಹಾಗೂ ದುಶ್ಚಟಮುಕ್ತ ಸಮಾಜ ನಿರ್ಮಾಣ ಜನಜಾಗೃತಿ ಕಾರ್ಯಕ್ರಮ ನಡೆಯಲಿದೆ. ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ದಕ್ಷಿಣ ಕನ್ನಡ ಜಿಲ್ಲಾ ಘಟಕ, ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಮತ್ತು ವಿವಿಧ ಘಟಕಗಳು, ಬಂಟರ ಯಾನೆ ನಾಡವರ ಮಾತೃಸಂಘ ಮಂಗಳೂರು ತಾಲೂಕು ಸಮಿತಿ, ಬಂಟರ ಸಂಘ ಜಪ್ಪು, ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ, ಶ್ರೀ ಗುರುದೇವ ಸೇವಾ ಬಳಗ ಮಂಗಳೂರು, ಜಪ್ಪಿನಮೊಗರು ಬಂಟರ ಸಂಘ, ಕ್ರೀಡಾ ಭಾರತಿ ಮಂಗಳೂರು, ಶ್ರೀ ಸಂಸ್ಥಾನ ಒಡಿಯೂರು ತುಳು…
ಇದುವರೆಗೆ 77 ಸಾಮಾನ್ಯ, 15 ಮಧ್ಯಂತರ ಆಯವ್ಯಯಗಳ ಮಂಡನೆ ಮೋಹನ್‌ದಾಸ್ ಮರಕಡ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್ ಮಂಡನೆಗೆ ತಯಾರಾಗಿದ್ದಾರೆ. ಬಹುತೇಕ ಜುಲೈ 24ರಂದು ಬಜೆಟ್ ಮಂಡನೆಯಾಗಲಿದೆ ಎಂದು ಹೇಳಲಾಗುತ್ತಿದೆ. ಸಂಸತ್‌ನಲ್ಲಿ ಬಜೆಟ್ ಮಂಡಿಸುವ ಸಂಪ್ರದಾಯ ಪ್ರಾರಂಭವಾದಾಗಿನಿಂದ ಈ ತನಕ 92 ಬಜೆಟ್‌ಗಳು ಮಂಡನೆಯಾಗಿವೆ. ಈ ಬಾರಿ ಸಂಸತ್ತಿನಲ್ಲಿ ಮಂಡನೆಯಾಗಲಿರುವುದು 93ನೇ ಬಜೆಟ್. ಇದುವರೆಗೆ 77 ಸಾಮಾನ್ಯ ಬಜೆಟ್ ಮತ್ತು 15 ಮಧ್ಯಂತರ ಬಜೆಟ್‌ಗಳನ್ನು ಲೋಕಸಭೆಯಲ್ಲಿ ಮಂಡಿಸಲಾಗಿದೆ. ಭಾರತದಲ್ಲಿ ೧860ರಲ್ಲಿ ಬಜೆಟ್ ಅನ್ನು ಅರ್ಥಶಾಸ್ತ್ರಜ್ಞ ಜೇಮ್ಸ್ ವಿಲ್ಸನ್ ಪರಿಚಯಿಸಿದರು. ಭಾರತ ಬ್ರಿಟಿಷ್ ಸಂಕೋಲೆಯಿಂದ ಹೊರಬಂದು ಸ್ವತಂತ್ರ ದೇಶವಾಗಿ ಮೂಡಿಬಂದ ಬಳಿಕ 1947ರ ನವೆಂಬರ್ 26ರಂದು ಹಣಕಾಸು ಸಚಿವ ಆರ್.ಕೆ. ಷಣ್ಮುಖಂ ಚೆಟ್ಟಿ ಮಂಡಿಸಿದರು. ಅವರು ಮಂಡಿಸಿದ ಈ ಬಜೆಟ್‌ನ ಗಾತ್ರ 197.39 ಕೋಟಿ ರೂ. ಆಗಿತ್ತು. ಇದರಲ್ಲಿ ರಕ್ಷಣಾ ಇಲಾಖೆಯೊಂದಕ್ಕೇ 92.74 ಕೋಟಿ ರೂ. ಮೀಸಲಿಡಲಾಗಿತ್ತು. 1948ರ…
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕಾಳಜಿಗೆ ಗಣ್ಯರ ಮೆಚ್ಚುಗೆ ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪ್ಪಿನಂಗಡಿ ಶಾಖೆಯ ಆರನೇ ವಾರ್ಷಿಕೋತ್ಸವ ಪ್ರಯುಕ್ತ ಜೇಸಿಐ ಉಪ್ಪಿನಂಗಡಿ ಚಾರಿಟೇಬಲ್ ಟ್ರಸ್ಟ್, ಜೇಸಿಐ ಉಪ್ಪಿನಂಗಡಿ ಜಂಟಿ ಸಹಯೋಗದೊಂದಿಗೆ ಕಣಚೂರು ಆಯುರ್ವೇದ ಆಸ್ಪತ್ರೆ ನಾಟೆಕಲ್ ಇವರ ವೈದ್ಯರ ತಂಡದಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಉಪ್ಪಿನಂಗಡಿ ಎಚ್. ಎಮ್.ಆಡಿಟೋರಿಯಂನಲ್ಲಿ ಭಾನುವಾರ ನಡೆಯಿತು. ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಕೆ.ವಿ.ಪ್ರಸಾದ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು, ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮುಂದಾಳತ್ವದಲ್ಲಿ ಬ್ಯಾಂಕಿಂಗ್ ವ್ಯವಹಾರದ ಜೊತೆಗೆ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಜನರ ಆರೋಗ್ಯದ ದೃಷ್ಟಿಯಿಂದ ಇಂತಹ ಶಿಬಿರಗಳನ್ನು ಆಯೋಜಿಸಿ ಕಾಳಜಿ ವಹಿಸುತ್ತಿರುವುದು ಶ್ಲಾಘನೀಯ ಎಂದು ಬಣ್ಣಿಸಿದರು. ಮುಖ್ಯ ಅತಿಥಿ ಜೇಸಿಐ ಉಪ್ಪಿನಂಗಡಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪ್ರಶಾಂತ್ ಕುಮಾರ್ ರೈ ಹಲಸು ಹಬ್ಬದ ಜೊತೆಗೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಹಭಾಗಿತ್ವದೊಂದಿಗೆ ನಡೆಯುತ್ತಿರುವ ಉಚಿತ ವೈದ್ಯಕೀಯ ಶಿಬಿರದಿಂದ ಜನರಿಗೆ…
Mangalore: Newly appointed Vidhan Parishad member Ivan D’Souza, Karnataka Konkani Sahitya Academy President Stany Alwaris and Karnataka Byari Sahitya Academy President Umar U.H. was felicitated by MCC Bank Limited on Saturday. MCC Bank Chairman Anil Lobo welcomed and said, “MCC Bank has a lot of responsibility towards the society, for the last six years the bank has been conducting several social programs for the benefit of the society. We hope to have 125 branches in the state by the silver jubilee after the centenary of the bank,” he said. Former MLA J.R. Lobo gave a congratulatory speech, recalling his relationship…
ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಆಶಯಅಂತಾರಾಷ್ಟ್ರೀಯ ಸಹಕಾರ ದಿನ ಪ್ರಯುಕ್ತ ಸಹಕಾರದಿಂದ ಸಮೃದ್ಧಿ ಕಾರ್ಯಕ್ರಮ ಆಯೋಜನೆ ಅಹಮದಾಬಾದ್: ಸಹಕಾರಿ ಕ್ಷೇತ್ರವನ್ನು ದೇಶದ ಆರ್ಥಿಕತೆಯ ಅತ್ಯಂತ ಬಲವಾದ ಸ್ತಂಭವನ್ನಾಗಿ ಮಾಡಿ ಅಭಿವೃದ್ಧಿಶೀಲ ಭಾರತದ ನಿರ್ಮಾಣ ಮಾಡಲಾಗುವುದು ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಆಶಯ ವ್ಯಕ್ತಪಡಿಸಿದರು. ಅಂತಾರಾಷ್ಟ್ರೀಯ ಸಹಕಾರ ದಿನದ ಪ್ರಯುಕ್ತ ಶನಿವಾರ ಗುಜರಾತ್‌ನ ಗಾಂಧಿನಗರದ ಮಹಾತ್ಮಾ ಮಂದಿರದಲ್ಲಿ ಆಯೋಜಿಸಿದ ‘ಸಹಕಾರದಿಂದ ಸಮೃದ್ಧಿ’ ಕಾರ್ಯಕ್ರಮದಲ್ಲಿ ಮಾತನಾಡಿದರು.ಸಹಕಾರಿ ಸಂಸ್ಥೆಗಳು ಮೆಕ್ಕಜೋಳವನ್ನು ಎಂ.ಎಸ್.ಪಿ.ಯಲ್ಲಿ ಖರೀದಿಸಲಿವೆ ಮತ್ತು ಅದರಿಂದ ಎಥೆನಾಲ್ ಉತ್ಪಾದನೆ ಮಾಡಲಾಗುವುದು ಎಂದರು. ಗುಜರಾತ್ ಮುಖ್ಯಮಂತ್ರಿ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ಕೇಂದ್ರ ಸಹಕಾರ ಸಚಿವ ಶ್ರೀ ಅಮಿತ್ ಶಾ ಸಹಕಾರಿ ಕ್ಷೇತ್ರದಲ್ಲಿ ‘ಸಬ್ಕಾ ಸಾಥ್, ಸಬ್ಕಾ ವಿಕಾಸ್’ ಮಂತ್ರವನ್ನು ಸಾಕಾರಗೊಳಿಸಿದ್ದಾರೆ. ಗುಜರಾತಿನಲ್ಲಿ ಸಹಕಾರಿ ಸಂಸ್ಥೆಗಳು ವೈದ್ಯಕೀಯ ಕಾಲೇಜುಗಳಿಂದ ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣದಂತಹ ಸೇವಾ ಕಾರ್ಯಗಳಲ್ಲಿ ಸಹಾಯ ಮಾಡುತ್ತಿದೆ. ಗುಜರಾತಿನಲ್ಲಿ ಸಹಕಾರಿ ಆಧಾರದ ಮೇಲೆ ಪ್ರಾಕೃತಿಕ ಕೃಷಿಯನ್ನು…
ಮಂಗಳೂರು: ನೂತನವಾಗಿ ನೇಮಕಗೊಂಡ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಅಲ್ವಾರಿಸ್ ಮತ್ತು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್. ಅವರಿಗೆ ಎಂಸಿಸಿ ಬ್ಯಾಂಕ್ ಲಿಮಿಟೆಡ್ ವತಿಯಿಂದ ಸನ್ಮಾನ ಕಾರ್ಯಕ್ರಮ ಶನಿವಾರ ನಡೆಯಿತು. ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಸ್ವಾಗತಿಸಿ ಮಾತನಾಡಿ, “ಎಂ.ಸಿ.ಸಿ ಬ್ಯಾಂಕ್ ಸಮಾಜದ ಬಗ್ಗೆ ಹೆಚ್ಚಿನ ಜವಾಬ್ದಾರಿ ಹೊಂದಿದೆ, ಕಳೆದ ಆರು ವರ್ಷಗಳಿಂದ ಸಮಾಜದ ಒಳಿತಿಗಾಗಿ ಬ್ಯಾಂಕ್ ಹಲವಾರು ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. ಬ್ಯಾಂಕಿನ ಶತಮಾನೋತ್ಸವದ ನಂತರದ ರಜತ ಮಹೋತ್ಸವದ ಸಂದರ್ಭ ರಾಜ್ಯದಲ್ಲಿ 125 ಶಾಖೆಗಳನ್ನು ಹೊಂದುವ ಆಶಯವಿದೆ” ಎಂದು ಹೇಳಿದರು. ಮಾಜಿ ಶಾಸಕ ಜೆ.ಆರ್.ಲೋಬೊ ಅಭಿನಂದನಾ ಭಾಷಣ ಮಾಡಿ, ಸನ್ಮಾನಿತರೊಂದಿಗಿನ ತಮ್ಮ ಸಂಬಂಧವನ್ನು ಸ್ಮರಿಸಿ, ಗಣ್ಯ ವ್ಯಕ್ತಿಗಳಿಗೆ ನೀಡುವ ಸನ್ಮಾನಗಳು ಸಮಾಜದ ಮೇಲಿನ ಜವಾಬ್ದಾರಿಯನ್ನು ಹೆಚ್ಚಿಸುತ್ತವೆ ಎಂದರು.ಐವನ್ ಡಿಸೋಜ, ಸ್ಟ್ಯಾನಿ ಅಲ್ವಾರಿಸ್ ಮತ್ತು ಉಮರ್ ಯು.ಎಚ್. ಅವರನ್ನು ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ…
ಉಪ್ಪಿನಂಗಡಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪ್ಪಿನಂಗಡಿ ಶಾಖೆಯ ವಾರ್ಷಿಕೋತ್ಸವ ಪ್ರಯುಕ್ತ, ಜೇಸಿಐ ಉಪ್ಪಿನಂಗಡಿ ಚಾರಿಟೇಬಲ್ ಟ್ರಸ್ಟ್, ಜೇಸಿಐ ಉಪ್ಪಿನಂಗಡಿ ಸಹಯೋಗದೊಂದಿಗೆ ಹಲಸು ಹಬ್ಬ ಕಾರ್ಯಕ್ರಮದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಜುಲೈ 7ರಂದು ಬೆಳಗ್ಗೆ 9.30ರಿಂದ ಅಪರಾಹ್ನ 2ರವರೆಗೆ ಉಪ್ಪಿನಂಗಡಿಯ ಎಚ್.ಎಂ ಆಡಿಟೋರಿಯಂನಲ್ಲಿ ಆಯೋಜಿಸಲಾಗಿದೆ. ದ್ಯಕೀಯ ಶಿಬಿರದಲ್ಲಿ ದೇರಳಕಟ್ಟೆಯ ನಾಟೆಕಲ್ ಕಣಚೂರು ಆಯುರ್ವೇದ ಆಸ್ಪತ್ರೆಯ ನುರಿತ ವೈದರ ತಂಡದವರಿಂದ ಸಾಮಾನ್ಯ ವೈದ್ಯಕೀಯ ಪರೀಕ್ಷೆ, ಮಧುಮೇಹ ರಕ್ತ ಪರೀಕ್ಷೆ, ರಕ್ತದೊತ್ತಡ ಪರೀಕ್ಷೆ, ಕೀಲು ಮತ್ತು ಗಂಟುನೋವು ತಪಾಸಣೆ, ಮೂಲವ್ಯಾದಿ ತಪಾಸಣೆ, ಸ್ತ್ರೀರೋಗ ಮತ್ತು ಪ್ರಸೂತಿ ತಪಾಸಣೆ, ಉಚಿತ ಔಷಧ ವಿತರಣೆ, ಹೆಚ್ಚಿನ ಚಿಕಿತ್ಸೆಗೆ ಸೂಕ್ತ ಸಲಹೆ ನೀಡಲಾಗುವುದು, ಇದರ ಜೊತೆಗೆ ಇತರ ವೈದ್ಯಕೀಯ ಸೌಲಭ್ಯವೂ ಇರಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಹಕಾರಿ ಸಂಸ್ಥೆಗಳ ಸುದ್ದಿ ಪ್ರಕಟಣೆಗಾಗಿ ಈ ಕೆಳಗಿನ ಮೇಲ್ ಮಾಡಿ:ಇಮೇಲ್: sahakaraspandana@gmail.comಮಾಹಿತಿಗೆ ಸಂಪರ್ಕಿಸಿ:…
