Author: admin
ಸತತ ಏಳನೇ ಬಾರಿ ಮುಂಗಡ ಪತ್ರ ಮಂಡಿಸಿ ದಾಖಲೆ ಬರೆಯಲಿದ್ದಾರೆ ನಿರ್ಮಲಾ ಸೀತಾರಾಮನ್ ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜುಲೈ 24ರಂದು ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ 2024-25ನೇ ಸಾಲಿನ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜುಲೈ 22ರಂದು ಮುಂಗಾರು ಅಧಿವೇಶನ ಆರಂಭವಾಗಲಿದ್ದು, 23ರಂದು ಆರ್ಥಿಕ ಸಮೀಕ್ಷೆಯನ್ನು ಮಂಡಿಸಬಹುದು ಮತ್ತು ಜುಲೈ 24ರಂದು ಮೋದಿ 3.0 ಸರ್ಕಾರದ ಮೊದಲ ಬಜೆಟ್ ಮಂಡಿಸುವ ಸಾಧ್ಯತೆ ಇದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ಆದಾಗ್ಯೂ, ಎರಡು ದಿನಾಂಕಗಳ ಕುರಿತು ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಮತ್ತು ಶೀಘ್ರದಲ್ಲೇ ಬಜೆಟ್ ಮಂಡಿಸುವ ದಿನಾಂಕ ಪ್ರಕಟಿಸುವ ಸಾಧ್ಯತೆಯಿದೆ ಎಂದೂ ಮೂಲಗಳು ತಿಳಿಸಿವೆ. ವಾಡಿಕೆ ಪ್ರಕಾರ ಸಂಸತ್ತಿನ ಎರಡು ಅಧಿವೇಶನಗಳ ನಡುವೆ 15 ದಿನಗಳ ಅಂತರ ಇರಬೇಕು. ಜುಲೈ 2ರಂದು 18ನೇ ಲೋಕಸಭೆಯ ಚೊಚ್ಚಲ ಅಧಿವೇಶನ ಮುಕ್ತಾಯಗೊಂಡಿದೆ. ಮುಂದಿನ ಅಧಿವೇಶನ ಜುಲೈ 18ರಿಂದ 22ರ ನಡುವೆ ಪ್ರಾರಂಭವಾಗಬೇಕು. ಆದರೆ, ಈ ಬಾರಿ ಅಧಿವೇಶನ…
ಮಂಗಳೂರು: ಉಪ್ಪಿನಂಗಡಿಯ ಅನುಗ್ರಹ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ರಾಬರ್ಟ್ ಡಿಸೋಜ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಇವರನ್ನು ಅಧ್ಯಕ್ಷರನ್ನಾಗಿ ಘೋಷಿಸಲಾಯಿತು. ಇವರು 1978ರಿಂದ 2004ರವರೆಗೆ 26 ವರ್ಷ ಕಾಲ ಗ್ರಾಮಲೆಕ್ಕಿಗರಾಗಿ, 2004ರಿಂದ ಎಂಟು ವರ್ಷ ಪುತ್ತೂರು ತಾಲೂಕು ಕಚೇರಿಯ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಪ್ರಥಮದರ್ಜೆ ಸಹಾಯಕರಾಗಿ, 2012ರಿಂದ ಉಪತಹಸೀಲ್ದಾರ್ ಆಗಿ 2013ರಲ್ಲಿ ಸೇವೆಯಿಂದ ನಿವೃತ್ತರಾಗಿದ್ದರು. ಒಟ್ಟು 35 ವರ್ಷ ಕಾಲ ಸರಕಾರಿ ಕರ್ತವ್ಯದಲ್ಲಿ ತೊಡಗಿಸಿಕೊಂಡಿದ್ದರು. ಈ ಅವಧಿಯಲ್ಲಿ ಉಪ್ಪಿನಂಗಡಿ ಕ್ರೈಸ್ತ ದೇವಾಲಯದ ಪಾಲನಾ ಸಮಿತಿಯ ಉಪಾಧ್ಯಕ್ಷರಾಗಿ ಒಟ್ಟು 9 ವರ್ಷ(ಮೂರು ವರ್ಷದ ಮೂರು ಅವಧಿ) ಸೇವೆ ಸಲ್ಲಿಸಿದ್ದರು. ಅನುಗ್ರಹ ಕ್ರೆಡಿಟ್ ಸೌಹಾರ್ದ ಸಹಕಾರಿಯಲ್ಲಿ ಎಂಟು ವರ್ಷಗಳಿಂದ ನಿರ್ದೇಶಕರಾಗಿದ್ದ ಈಗ ಅಧ್ಯಕ್ಷರಾಗಿದ್ದಾರೆ. ಉಪ್ಪಿನಂಗಡಿ ಕೆಥೊಲಿಕ್ ವಿವಿಧೋದ್ದೇಶ ಸಹಕಾರಿ ಸಂಘದಲ್ಲೂ ನಿರ್ದೇಶಕರಾಗಿದ್ದಾರೆ. ಸಹಕಾರಿ ಸಂಸ್ಥೆಗಳ ಸುದ್ದಿ ಪ್ರಕಟಣೆಗಾಗಿ ಈ ಕೆಳಗಿನ ಮೇಲ್ ಮಾಡಿ:ಇಮೇಲ್: editor@sahakaraspandana.in , sahakaraspandana@gmail.comಮಾಹಿತಿಗೆ ಸಂಪರ್ಕಿಸಿ: 9901319694.
ಶೇ.5ರಿಂದ 2ಕ್ಕೆ ಇಳಿಸಲು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಮನವಿ ಮಂಗಳೂರು: ರೈತರ ಹಲವು ಸಮಸ್ಯೆಗಳಿಗೆ ಪರಿಹಾರ ಒದಗಿಸುವುದೂ ಸೇರಿದಂತೆ ಅಡಿಕೆ ಮಾರುಕಟ್ಟೆಯ ಚೇತರಿಕೆಗೆ ಕ್ರಮ ಕೈಗೊಳ್ಳಬೇಕೆಂದು ಕ್ಯಾಂಪ್ಕೊ ನಿಯೋಗವು ಮಂಗಳವಾರ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದೆ. ವಿತ್ತ ಸಚಿವರಾಗಿ ಮರು ನೇಮಕಗೊಂಡಿರುವ ನಿರ್ಮಲಾ ಸೀತಾರಾಮನ್ ಅವರನ್ನು ಅಭಿನಂದಿಸಿದ ಕ್ಯಾಂಪ್ಕೊ ಆಡಳಿತ ಮಂಡಳಿ, ಅಡಿಕೆ ಮಾರುಕಟ್ಟೆಯ ಚೇತರಿಕೆಗೆ ಉತ್ತೇಜನ ನೀಡಲು ಮತ್ತು ರೈತರ ಹಲವು ಸಮಸ್ಯೆಗಳಿಗೆ ಪರಿಹಾರ ಒದಗಿಸಿಕೊಡಲು ಮನವಿ ಸಲ್ಲಿಸಿತು. ಅಡಿಕೆಯ ಮೇಲಿನ ಜಿಎಸ್‌ಟಿಯನ್ನು ಶೇ.5ರಿಂದ 2ಕ್ಕೆ ಇಳಿಸಬೇಕು. ಇದರಿಂದ ರೈತರು ಸಹಕಾರಿ ಸಂಸ್ಥೆಗಳಲ್ಲಿ ಅಡಿಕೆ ಖರೀದಿಸಲು ಸಹಕಾರಿಯಾಗುತ್ತದೆ. ಇದರಿಂದ ತೆರಿಗೆ ಕಳ್ಳತನಕ್ಕೂ ಕಡಿವಾಣ ಬೀಳಲಿದ್ದು, ಸರಕಾರಕ್ಕೂ ಹೆಚ್ಚುವರಿ ಆದಾಯ ಬರಲಿದೆ. ಮೈಲುತುತ್ತು ಮೇಲಿನ ಜಿಎಸ್‌ಟಿಯನ್ನು ಶೇ.18ರಿಂದ ಶೇ.5ಕ್ಕೆ ಇಳಿಸಬೇಕು, ಕಾರ್ಬನ್ ಫೈಬರ್ ದೋಟಿಯ ಆಮದು ಸುಂಕವನ್ನೂ ಕಡಿಮೆ ಮಾಡಬೇಕು ಎಂದು ಕ್ಯಾಂಪ್ಕೊ ನಿಯೋಗ ಮನವಿ ಮಾಡಿದೆ. ಅಡಿಕೆ ಮತ್ತು ಕರಿಮೆಣಸಿನ ಅಕ್ರಮ ಆಮದು…
ಉಡುಪಿ: ಸಾಲಿಗ್ರಾಮದ ಶ್ರೀಕೃಷ್ಣ ಸೌಹಾರ್ದ ಸಹಕಾರಿ ಸಂಘದ ೨0 ನೇ ವಾರ್ಷಿಕ ಮಹಾಸಭೆ ಭಾನುವಾರ ಸಾಲಿಗ್ರಾಮ ಗಿರಿಜಾ ಕಲ್ಯಾಣ ಮಂಟಪದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಸತೀಶ ಕೆ.ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕ, ಸಂಘದ ಕಾನೂನು ಸಲಹೆಗಾರ ಮಂಜುನಾಥ್ ಎಸ್.ಕೆ ಹಾಗೂ ಸೌಹಾರ್ದ ಸಂಯುಕ್ತ ಸಹಕಾರಿಯ ಅಭಿವೃದ್ಧಿ ಅಧಿಕಾರಿ ವಿಜಯ್ ಬಿ.ಎಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸುಜನ್ ವಾರ್ಷಿಕ ವರದಿ ಮಂಡಿಸಿದರು. ಸಹಕಾರಿ ರಂಗದಲ್ಲಿ ವಿಶಿಷ್ಟ ಕಾರ್ಯದಕ್ಷತೆಯ ಮೂಲಕ ಸಾಧನೆ ಮಾಡಿರುವ ಶ್ರೀಶ ಸೌಹಾರ್ದ ಸಹಕಾರಿ ಮಂಗಳೂರಿನ ಅಧ್ಯಕ್ಷ ಗುರುರಾಜ್ ಎಂ.ಎಸ್, ಜೈಗಣೇಶ್ ಸೌಹಾರ್ದ ಸಹಕಾರಿ ಶಿರಿಯಾರದ ಅಧ್ಯಕ್ಷ ಅಶೋಕ್ ಪ್ರಭು, ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಉಡುಪಿ ಇದರ ಸಿಬ್ಬಂದಿ ವಿಜೇತಾ ಶೆಟ್ಟಿ, ಶಾಂತಿನಿಕೇತನ ಸೌಹಾರ್ದ ಸಹಕಾರಿ ಹೆಬ್ರಿಯ ಅಧ್ಯಕ್ಷ ರಾಜೇಶ್, ಮದರ್ ಮೇರಿ ಸೌಹಾರ್ದ ಸಹಕಾರಿ ಸಂತೆಕಟ್ಟೆಯ ಸಿ. ಇ. ಒ ಕಾರ್ಲಿಸ್ ಡಿಕುನ್ಹಾ , ಸನ್ನಿಧಿ ಮಹಿಳಾ ಸೌಹಾರ್ದ…
ಶೇಕಡಾ 20 ಡಿವಿಡೆಂಡ್ ಘೋಷಣೆ ಸಿಇಒ ಸತ್ಯಶಂಕರ ಕೆ.ಜಿ.ಬೀಳ್ಕೊಡುಗೆ ಬೆಳ್ತಂಗಡಿ: ಕಳಿಯ ಕೃಷಿ ಪತ್ತಿನ ಸಹಕಾರಿ ಸಂಘವು ಪ್ರಸಕ್ತ ಸಾಲಿನಲ್ಲಿ 263 ಕೋಟಿ ರೂ. ವ್ಯವಹಾರ ನಡೆಸಿದ್ದು, 1.37 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಲಾಭಾಂಶದಲ್ಲಿ ಸದಸ್ಯರಿಗೆ ಶೇ.20 ಡಿವಿಡೆಂಡ್ ನೀಡಲಾಗುವುದು ಎಂದು ಕಳಿಯ ಪ್ಯಾಕ್ಸ್ ಅಧ್ಯಕ್ಷ ವಸಂತ ಮಜಲು ಪ್ರಕಟಿಸಿದರು.ಕಳಿಯ-ಗೇರುಕಟ್ಟೆ ಸಹಕಾರಿ ಸಭಾಭವನದಲ್ಲಿ ಭಾನುವಾರ ಕಳಿಯ ಕೃಷಿ ಪತ್ತಿನ ಸಹಕಾರಿ ಸಂಘದ 2023-24ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ಸಿಇಒ ಸತ್ಯಶಂಕರ ಕೆ.ಜಿ. ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು. ಸಂಘವು ಸ್ಥಾಪನೆಯಾದ ಬಳಿಕ ಪ್ರಥಮ ಬಾರಿ 1.37 ಕೋಟಿ ರೂ. ಲಾಭ ಗಳಿಸಿದೆ. ಸಿಇಒ ಸತ್ಯಶಂಕರ ಅವರು ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿದ್ದಾರೆ. ಪ್ರತಿ ಬಾರಿಯೂ ಕಳಿಯ ಪ್ಯಾಕ್ಸ್ ನ ಮಹಾಸಭೆಗೆ ಅಧಿಕ ಸಂಖ್ಯೆಯಲ್ಲಿ ಸದಸ್ಯರು ಭಾಗವಹಿಸುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.ಗೌರವ ಸ್ವೀಕರಿಸಿ ಮಾತನಾಡಿದ ನಿರ್ಗಮನ ಸಿಇಒ ಸತ್ಯಶಂಕರ ಕೆ.ಜಿ. ಮಾತನಾಡಿ, ಪ್ರೀತಿ, ವಿಶ್ವಾಸ ನೀಡಿ ಸೇವೆಯಲ್ಲಿ ಸಹಕರಿಸಿದ ಆಡಳಿತ…
ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಸಲಹೆ ಪುತ್ತೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ದ.ಕ. ಜಿಲ್ಲಾ ಸಹಕಾರ ಯೂನಿಯನ್, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಸಹಕಾರ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಪುತ್ತೂರು ಉಪವಿಭಾಗದ ವಿವಿಧ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಚುನಾವಣಾ ಪೂರ್ವ ತಯಾರಿ ತರಬೇತಿ ಶಿಬಿರ ಪುತ್ತೂರು ಟೌನ್ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ ನಡೆಯಿತು. ತರಬೇತಿ ಶಿಬಿರವನ್ನು ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಾಲಕಾಲಕ್ಕೆ ಸಹಕಾರಿ ಕಾನೂನಿನಲ್ಲಿ ತಿದ್ದುಪಡಿಯ ಆದಾರದ ಮೇಲೆ ಸಹಕಾರ ಸಂಘಗಳು ನಿಯಮಾನುಸಾರ ಚುನಾವಣೆಯನ್ನು ಕ್ರಮಬದ್ಧವಾಗಿ ನಡೆಸಲು ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಕಾರ್ಯನಿರ್ವಹಿಸಬೇಕು. ಸದ್ಯ ಸಹಕಾರ ಸಂಘಗಳ ನಿಯಮ 13ಡಿ ಅನ್ವಯ 195 ದಿನಗಳ ಮುಂಚೆ ಅನರ್ಹ ಸದಸ್ಯರಿಗೆ ನೋಟಿಸ್ ನೀಡಿ ಚುನಾವಣೆ ಪ್ರಕ್ರಿಯೆ ನಡೆಸಬೇಕು ಎಂದು ಸಲಹೆ ನೀಡಿದರು. ದ.ಕ. ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ರಾಜಶೇಖರ ಜೈನ್ ಮಾತನಾಡಿ, ಇಂದು…
ಬೆಂಗಳೂರು: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದಲ್ಲಿ ಖಾಲಿ ಇರುವ ವಿವಿಧ 39 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸನ್ನದು ಲೆಕ್ಕಪರಿಶೋಧಕರು, ಕಾನೂನು ಅಧಿಕಾರಿ, ಮಾನವ ಸಂಪನ್ಮೂಲ ಅಧಿಕಾರಿ, ಸಹಾಯಕರು ಇತ್ಯಾದಿ ಹಲವು ಹುದ್ದೆಗಳನ್ನು ಭರ್ತಿ ಮಾಡಬೇಕಿದೆ.ಹುದ್ದೆಗಳ ವಿವರಸನ್ನದು ಲೆಕ್ಕಪರಿಶೋಧಕರು (Charted Accountant) : ಸಿಎ/ ಸಿಎಸ್ /ICWA. ಗರಿಷ್ಠ ವಯಸ್ಸು 35 ವರ್ಷ.ಕಾನೂನು ಅಧಿಕಾರಿ (ಅಧಿಕಾರಿ ಶ್ರೇಣಿ) : ಕಾನೂನು ಪದವಿ ಜತೆಗೆ ಕಂಪ್ಯೂಟರ್ ಪರಿಣಿತಿ ಕಡ್ಡಾಯ. ಬ್ಯಾಂಕಿಂಗ್ ಅಥವಾ ಸಹಕಾರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಅನುಭವ ಹೊಂದಿದವರಿಗೆ ಆದ್ಯತೆ. ಗರಿಷ್ಠ 35 ವರ್ಷ.ಮಾನವ ಸಂಪನ್ಮೂಲ ಅಧಿಕಾರಿ (ಎಂಬಿಎ, ಎಚ್.ಆರ್ ) (ಅಧಿಕಾರಿ ಶ್ರೇಣಿ) : ಎಂಬಿಎ, ಎಚ್.ಆರ್ ಪದವಿ. ಗರಿಷ್ಠ 35 ವರ್ಷ.ತರಬೇತಿ ಅಧಿಕಾರಿ (ಅಧಿಕಾರಿ ಶ್ರೇಣಿ) : ಎಂಎ ಕನ್ನಡ ಅಥವಾ MSW ಪದವಿ. 3 ವರ್ಷ ಕನಿಷ್ಠ ಕಾರ್ಯಾನುಭವ. ಗರಿಷ್ಠ 35 ವರ್ಷ.ಸೌಹಾರ್ದ ಅಭಿವೃದ್ಧಿ ಅಧಿಕಾರಿ (ಕಿರಿಯ ಅಧಿಕಾರಿ ಶ್ರೇಣಿ) : ಯಾವುದೇ ಪದವಿ. ಗರಿಷ್ಠ 30…
ಬೆಳಗಾವಿ: ಹಿರಿಯ ಸಹಕಾರಿ ಧುರೀಣ, ಸಹಕಾರಿ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ರಾವ್ ಸಾಹೇಬ ಪಾಟೀಲ್ (ದಾದಾ) ಮಂಗಳವಾರ ನಿಧನ ಹೊಂದಿದರು. ಅವರಿಗೆ 83 ವರ್ಷ ವಯಸ್ಸಾಗಿತ್ತು. 1944ರ ಏಪ್ರಿಲ್ 11ರಂದು ರೈತ ಕುಟುಂಬದಲ್ಲಿ ಜನಿಸಿದ್ದ ರಾವ್ ಸಾಹೇಬ ಪಾಟೀಲ್ ಸಾಮಾಜಿಕ ಕಾರ್ಯಗಳಲ್ಲಿ ಆಸಕ್ತಿ ವಹಿಸಿದ್ದರು. ಬೆಳಗಾವಿ ಜಿಲ್ಲೆಯ ಬೋರೆಗಾಂವ್ ಸುತ್ತಮುತ್ತಲಿನ ಪ್ರದೇಶದ ಅಭಿವೃದ್ಧಿಗೆ ಸಾಕಷ್ಟು ಪ್ರಯತ್ನ ಮಾಡಿ ಅನೇಕ ಪ್ರಗತಿ ಚಟುವಟಕೆಗಳನ್ನು ಕೈಗೊಂಡಿದ್ದರು. ಹಲವಾರು ಸಹಕಾರ ಮತ್ತು ಸಾಮಾಜಿಕ ಕಾರ್ಯಗಳೊಂದಿಗೆ ಧಾರ್ಮಿಕ ಕಾರ್ಯಗಳನ್ನೂ ಸಂಯೋಜಿಸಿದರು. ಬೋರೆಗಾಂವ್‌ನಲ್ಲಿ ಅರಿಹಂತ್ ಉದ್ಯೋಗ್ ಗ್ರೂಪ್ ಎಂಬ ಸಂಸ್ಥೆ ಸ್ಥಾಪಿಸಿ ರೈತರ ಏಳಿಗೆಗೆ ಶ್ರಮಿಸಿದ್ದರು. ವಿವಿಧ ವೇತನ ಯೋಜನೆಗಳು, ಆವಾಸ್ ಯೋಜನೆಗಳು, ಅಂಗವಿಕಲರಿಗೆ ಸೈಕಲ್ ವಿತರಣೆ ಮತ್ತು ನಿರ್ಗತಿಕರಿಗೆ ಶೈಕ್ಷಣಿಕ ಸಾಮಗ್ರಿಗಳ ಮೂಲಕ ಸಮಾಜಸೇವೆಯ ಕೈಂಕಯದಲ್ಲಿ ತೊಡಗಿಸಿಕೊಂಡರು. ರಾಜಕೀಯ ಸೇವೆ ಮಾಡುತ್ತಲೇ ಜನಸಾಮಾನ್ಯರ ಅಭಿವೃದ್ಧಿಗೆ ಶ್ರಮಿಸಿದ ಪಾಟೀಲರು, ಬೋರೆಗಾಂವ್ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಹಲವು ಸಂಘ ಸಂಸ್ಥೆಗಳನ್ನು ಸ್ಥಾಪಿಸಿದರು.ಬೋರೆಗಾಂವ್ ಜೊತೆಗೆ ನಿಪ್ಪಾಣಿ ಕ್ಷೇತ್ರದ ಸವಾಂಗೀಣ ಅಭಿವೃದ್ಧಿಗೂ…
ಬೆಂಗಳೂರಿನ ಬಸವಶ್ರೀ ಫೌಂಡೇಷನ್‌ನಿಂದ ಗೌರವ ವಿಶೇಷ ಸೇವೆ ಸಲ್ಲಿಸಿದ ಗಣ್ಯರ ಗುರುತು ಬೆಂಗಳೂರು: ದಕ್ಷಿಣ ಕನ್ನಡದ ಪ್ರತಿಷ್ಠಿತ ಸಹಕಾರ ಸಂಸ್ಥೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರು ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ವಿಶೇಷ ಸೇವೆಯನ್ನು ಗುರುತಿಸಿ ಶುಕ್ರವಾರ ಬೆಂಗಳೂರಿನಲ್ಲಿ ಸಿದ್ಧಗಂಗಾ ರಾಷ್ಟ್ರೀಯ ರತ್ನ ಪುರಸ್ಕಾರ ನೀಡಿ ಗೌರವಿಸಲಾಗಿದೆ. ಬೆಂಗಳೂರಿನ ಕನ್ನಡ ಭವನದಲ್ಲಿ ಬಸವಶ್ರೀ ಫೌಂಡೇಷನ್ ಬೆಂಗಳೂರು ವತಿಯಿಂದ ಭಗವಾನ್ ಬುದ್ಧ, ಬಸವೇಶ್ವರ, ಡಾ||ಬಿ.ಆರ್ ಅಂಬೇಡ್ಕರ್ ಮತ್ತು ಡಾ||ಶಿವಕುಮಾರ ಸ್ವಾಮೀಜಿಯವರ ಜಯಂತಿ ಪ್ರಯುಕ್ತ ಹಮ್ಮಿಕೊಂಡ ಮಹಾಸಂಗಮ ಸಮಾವೇಶ, ಶಾಸಕರ ಜನಸ್ಪಂದನ ಪತ್ರಿಕೆಯ 15ನೇ ವಾರ್ಷಿಕೋತ್ಸವದ ವಿಶೇಷ ಸಂಚಿಕೆ ಬಿಡುಗಡೆ ಸಮಾರಂಭದಲ್ಲಿ ಪುರಸ್ಕಾರಗಳನ್ನು ನೀಡಲಾಯಿತು. ಬೆಳಗಾವಿಯ ನ್ಯಾಯವಾದಿ ಕೆ.ಎಲ್.ಕುಂದರಗಿ ಅಧ್ಯಕ್ಷತೆ ವಹಿಸಿದ್ದರು. ತುಮಕೂರಿನ ಅರೇಶಂಕರ ಮಠದ ಶ್ರೀ ಸಿದ್ದರಾಮ ಚೈತನ್ಯ ಮಹಾಸ್ವಾಮೀಜಿ, ಶ್ರೀ ಬಸವೇಶ್ವರ ಪ್ರಾಚಿ ಯೋಗ ಮಠದ ಶ್ರೀ ತೋಟಾಪುರಿ ಸೋಮಶೇಖರ್ ಗುರೂಜಿಯವರ ಗೌರವ ಉಪಸ್ಥಿತಿಯಲ್ಲಿ, ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಪಿ.ಕೃಷ್ಣ ಭಟ್, ಚಿತ್ತರಂಜನ್ ಬೋಳಾರ್…
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಪಡುಬಿದ್ರಿ ಶಾಖೆಯ ದ್ವಿತೀಯ ವಾರ್ಷಿಕೋತ್ಸವ ಅಂಗವಾಗಿ ರೋಟರಿ ಕ್ಲಬ್ ಪಡುಬಿದ್ರಿ ಹಾಗೂ ಯುವವಾಹಿನಿ ಪಡುಬಿದ್ರಿ ಘಟಕಗಳ ಜಂಟಿ ಸಹಯೋಗದಲ್ಲಿ ಜೂನ್ 23ರಂದು ಭಾನುವಾರ ಬೆಳಿಗ್ಗೆ 9.3೦ರಿಂದ ಮಧ್ಯಾಹ್ನ 12.3೦ರವರೆಗೆ ಪಡುಬಿದ್ರಿಯ ಕರ್ನಾಟಕ ಪಬ್ಲಿಕ್ ಶಾಲೆ (ಬೋರ್ಡ್ ಶಾಲೆ)ಯಲ್ಲಿ ನಡೆಯಲಿದೆ. ವೈದ್ಯಕೀಯ ಶಿಬಿರದಲ್ಲಿ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಯೇನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಹಾಗೂ ಸಮುದಾಯ ದಂತ ವಿಭಾಗ, ಯೇನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇವರ ನುರಿತ ವೈದ್ಯರ ತಂಡದಿಂದ ಉಚಿತ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ, ಹುಳುಕು ಹಲ್ಲುಗಳ ಭರ್ತಿ, ಶುಚಿಗೊಳಿಸುವುದು, ಕೀಳುವುದು, ಬಿ.ಪಿ. ಮತ್ತು ಮಧುಮೇಹ ತಪಾಸಣೆ, ಸಾಮಾನ್ಯ ರೋಗ ತಪಾಸಣೆ, ಉಚಿತ ಔಷಧಿ ವಿತರಣೆ, ರಕ್ತ ಗುಂಪಿನ ವರ್ಗೀಕರಣ, ಇತರ ವೈದ್ಯಕೀಯ ಸೇವೆಗಳು ಹಾಗೂ ಹೆಚ್ಚಿನ ಚಿಕಿತ್ಸೆಗೆ ಸೂಕ್ತ ಸಲಹೆ ನೀಡಲಾಗುವುದು. ಅಗತ್ಯವುಳ್ಳ ಕಣ್ಣಿನ ರೋಗಿಗಳಿಗೆ ಸಂಘದ ವತಿಯಿಂದ ಕನ್ನಡಕ ಉಚಿತವಾಗಿ…
