Author: admin
ಬ್ಯಾಂಕ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ ಮಾಹಿತಿ ಉಡುಪಿ: ಕರಾವಳಿ ಭಾಗದ ಪ್ರತಿಷ್ಠಿತ ಪಟ್ಟಣ ಸಹಕಾರಿ ಸಂಸ್ಥೆ ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ 2023-24ನೇ ಸಾಲಿನಲ್ಲಿ 921 ಕೋಟಿ ರೂ. ವ್ಯವಹಾರ ನಡೆಸಿದ್ದು, 17.50 ಕೋಟಿ ರೂ. ಲಾಭ ಗಳಿಸಿದೆ. ಕಳೆದ 14 ವರ್ಷಗಳಿಂದ ನಿರಂತರ ಸದಸ್ಯ, ಗ್ರಾಹಕರಿಗೆ ಅತಿ ಹೆಚ್ಚು ಡಿವಿಡೆಂಡ್ ನೀಡುತ್ತಿರುವ ಕರಾವಳಿ ಭಾಗದ ಏಕೈಕ ಪಟ್ಟಣ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ಪಾತ್ರವಾಗಿದೆ. ಶಾಸನಬದ್ಧ ಲೆಕ್ಕಪರಿಶೋಧನೆಯಲ್ಲಿ ‘ಎ’ ಶ್ರೇಣಿ ಗಳಿಸಿದೆ ಎಂದು ಬ್ಯಾಂಕ್‌ನ ಅಧ್ಯಕ್ಷ, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ತಿಳಿಸಿದ್ದಾರೆ. ಮಹಾಲಕ್ಷ್ಮಿ ಕೋ- ಆಪರೇಟಿವ್ ಬ್ಯಾಂಕ್ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಟು ಶಾಖೆಗಳನ್ನು ಹೊಂದಿದ್ದು 40 ಸಾವಿರ ಗ್ರಾಹಕರ ಮೂಲಕ ವ್ಯವಹಾರ ನಡೆಸುತ್ತಿದೆ. 2023-24ನೇ ಸಾಲಿನಲ್ಲಿ 532 ಕೋಟಿ ರೂ. ಠೇವಣಿ, 389 ಕೋಟಿ ರೂ. ಸಾಲ ಮತ್ತು ಮುಂಗಡ, 34 ಕೋಟಿ ರೂ. ಪಾಲು ಬಂಡವಾಳ ಹಾಗೂ ಶೂನ್ಯ ನಿವ್ವಳ…
ವರದಿ ವರ್ಷದಲ್ಲಿ 13.12 ಕೋಟಿ ರೂ. ಲಾಭ ಮಂಗಳೂರು: ಕರ್ನಾಟಕದ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ 112 ವರ್ಷಗಳ ಇತಿಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎಂ.ಸಿ.ಸಿ ಬ್ಯಾಂಕ್ ಲಿಮಿಟೆಡ್ ಮಾ.31ಕ್ಕೆ ಅಂತ್ಯಗೊಂಡ ವಿತ್ತೀಯ ವರ್ಷದಲ್ಲಿ ಲೆಕ್ಕ ಪರಿಶೋಧನಾ ಪೂರ್ವ 13.12 ಕೋಟಿ ರೂ. ವ್ಯವಹಾರಿಕ ಲಾಭ ಗಳಿಸಿದೆ. ಬ್ರಹ್ಮಾವರದಲ್ಲಿ ಎಂ.ಸಿ.ಸಿ ಬ್ಯಾಂಕಿನ 17ನೇ ಶಾಖೆಯನ್ನ ಇತ್ತೀಚೆಗೆ ತೆರೆಯಲಾಗಿದ್ದು, ಕಾವೂರು, ಬೆಳ್ತಂಗಡಿ ಮತ್ತು ಶಿವಮೊಗ್ಗದಲ್ಲಿ ಶೀಘ್ರದಲ್ಲೇ ಶಾಖೆಗಳನ್ನು ತೆರೆಯಲಾಗುವುದು ಎಂದು ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸತತವಾಗಿ ಎನ್.ಪಿ.ಎ. ಪ್ರಮಾಣ ಕಡಿಮೆಗೊಳಿಸಲು ಬ್ಯಾಂಕ್ ಶ್ರಮಿಸುತ್ತಿದ್ದು, ಇತ್ತೀಚಿನ ವರ್ಷಗಳಲ್ಲಿ ಪ್ರಥಮ ಬಾರಿ ಶೇ.1.07 ಎನ್.ಪಿ.ಎ. ದಾಖಲಿಸಿದೆ. ಬ್ಯಾಂಕಿನ ವ್ಯವಹಾರ ಡಿಸೆಂಬರ್ ಅಂತ್ಯಕ್ಕೆ 1000 ಕೋಟಿ ರೂ. ತಲುಪಿದ್ದು, ಈ ಆರ್ಥಿಕ ವರ್ಷದ ಇನ್ನೊಂದು ಮಹತ್ವದ ಸಾಧನೆ ಎಂದು ಅವರು ಮಾಹಿತಿ ನೀಡಿದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದ್ದ ಬ್ಯಾಂಕಿನ ಕಾರ್ಯಕ್ಷೇತ್ರವನ್ನು ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು,…
ಮಂಗಳೂರು: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರ ಆಶೀರ್ವಾದ ಹಾಗೂ ಸಾಧ್ವಿ ಮಾತಾನಂದಮಯಿ ಅವರ ಮಾರ್ಗದರ್ಶನದಲ್ಲಿ 2011ರಲ್ಲಿ ಪ್ರಾರಂಭವಾದ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ವರದಿ ಸಾಲಿನಲ್ಲಿ 546 ಕೋಟಿ ರೂ. ವ್ಯವಹಾರ ದಾಖಲಿಸಿದ್ದು, ಕಳೆದ ಸಾಲಿನ ಒಟ್ಟು ವ್ಯವಹಾರಕ್ಕಿಂತ ಶೇ.26 ಏರಿಕೆ ಕಂಡಿದೆ. ಸಂಘದ ಪ್ರಧಾನ ಕಚೇರಿಯಲ್ಲಿ ಇತ್ತೀಚೆಗೆ ಅವಲೋಕನ ಸಭೆಯಲ್ಲಿ ಮಾಹಿತಿ ನೀಡಿದ ಡಿಯೂರು ಸಹಕಾರಿಯ ಅಧ್ಯಕ್ಷ ಎ.ಸುರೇಶ್ ರೈ, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘವು 2023-24ನೇ ಸಾಲಿನಲ್ಲಿ 4.50 ಕೋಟಿ ರೂ. ಲಾಭ ಗಳಿಸಿದೆ. ಕಳೆದ ಸಾಲಿಗೆ ಹೋಲಿಸಿದರೆ ಶೇ.43 ಪ್ರಗತಿ ಸಾಧಿಸಿದೆ. 19 ಶಾಖೆಗಳ ಮೂಲಕ 302 ಕೋಟಿ ರೂ. ಠೇವಣಿ ಸಂಗ್ರಹಿಸಿದೆ. 244 ಕೋಟಿ ರೂ. ಸಾಲ ಮತ್ತು ಮುಂಗಡಗಳೊಂದಿಗೆ, ಪಾಲು ಬಂಡವಾಳ 2 ಕೋಟಿ ರೂ., ನಿಧಿಗಳು 12.14 ಕೋಟಿ ರೂ. ಮತ್ತು ದುಡಿಯುವ ಬಂಡವಾಳ 320 ಕೋಟಿ ರೂ. ಹೊಂದಿದೆ ಎಂದು ಹೇಳಿದರು. ಎಲ್ಲ ಶಾಖೆಗಳು ಗಣಕೀಕೃತಗೊಂಡು…
ಟರ್ಟಲ್‌ಮಿಂಟ್ ಬ್ರೋಕಿಂಗ್ ಇನ್ಸೂರೆನ್ಸ್ ಕಂಪೆನಿಯ ರಿಟೇಲ್ ಬಿಸಿನೆಸ್‌ನಲ್ಲಿ ೨೦೨೩-೨೪ನೇ ಸಾಲಿನಲ್ಲಿ ವಿಮಾ ಯೋಜನೆಯ ಗುರಿ ಮೀರಿದ ಸಾಧನೆಗೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರಿಗೆ ಟರ್ಟಲ್‌ಮಿಂಟ್ ಬ್ರೋಕಿಂಗ್ ಇನ್ಸೂರೆನ್ಸ್ ಕಂಪೆನಿಯ ಮಂಗಳೂರಿನ ಬ್ಯುಸಿನೆಸ್ ಮ್ಯಾನೇಜರ್ ಆದ ಶ್ರೀಮತಿ ಶ್ವೇತಾ ದಿನೇಶ್‌ರವರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಶ್ರೀ ಗೋಪಾಲ್ ಎಮ್., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಸಲಹೆಗಾರರಾದ ಶ್ರೀ ಅಶೋಕ್ ಕುಮಾರ್, ಸಹಾಯಕ ಪ್ರಬಂಧಕರಾದ ಶ್ರೀ ವಿಶ್ವನಾಥ ಮತ್ತಿತ್ತರರು ಉಪಸ್ಥಿತರಿದ್ದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿAಗ್ ಸೇವೆಯ ಜೊತೆಗೆ ಆರೋಗ್ಯ ಪೂರ್ಣ ಸ್ವಸ್ಥ ಸಮಾಜ ನಿರ್ಮಾಣಕ್ಕೆ ನಿರಂತರವಾಗಿ ಆರೋಗ್ಯ ಕ್ಷೇತ್ರದಲ್ಲಿ ಸೇವೆಯನ್ನು ಸಲ್ಲಿಸುತ್ತಾ ಬರುತ್ತಿದೆ. ಟರ್ಟಲ್‌ಮಿಂಟ್ ಬ್ರೋಕಿಂಗ್ ಇನ್ಸೂರೆನ್ಸ್ ಕಂಪೆನಿಯ ಜೊತೆ ಒಡಂಬಡಿಕೆ ಮಾಡಿಕೊಂಡು ಆರೋಗ್ಯ, ವಾಹನ ಹಾಗೂ ಜೀವ ವಿಮಾ ಸೇವೆಯನ್ನು ಸಂಘದ ಸದಸ್ಯರಿಗೆ ಸ್ಮರ್ಧಾತಕ ದರದಲ್ಲಿ ನೀಡುತ್ತಾ ಬರುತ್ತಿದ್ದು, ಹೆಚ್ಚಿನ…
ಸೌಹಾರ್ದ ಸಹಕಾರ ಕ್ಷೇತ್ರದ ಸಾಧನೆಗಾಗಿ ಲ. ಎ. ಸುರೇಶ್ ರೈ ಇವರಿಗೆ ರಾಜ್ಯ ಸರ್ಕಾರ ದಿಂದ ಸಹಕಾರ ರತ್ನ ಪ್ರಶಸ್ತಿ
ದಿನಾಂಕ:20.11.2023 ರಂದು ಸೋಮವಾರ ಬೆಳಗ್ಗೆ 09.00ಗಂಟೆಗೆ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಆವರಣದಲ್ಲಿ ಜರುಗಲಿರುವ 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ, ಕರ್ನಾಟಕ ರಾಜ್ಯ ಸಹಕಾರ ಚಳುವಳಿಯ ಬೆಳವಣಿಗೆಗೆ ಶ್ರೀಯುತರು ಸಲ್ಲಿಸಿರುವ ಅನುಪಮ ಸೇವೆಯನ್ನು ಗುರುತಿಸಿ ಕರ್ನಾಟಕ ಸರ್ಕಾರವು “ಸಹಕಾರ ರತ್ನ” ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಿದೆ. ಸಹಕಾರ ಕ್ಷೇತ್ರದ ಅನುಭವ : ಸುರೇಶ್ ರೈ ಯವರು ಕಳೆದ 25 ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದು ದಿವ್ಯಜ್ಯೋತಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ 7 ವರ್ಷ 6 ತಿಂಗಳು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಸಂಸ್ಥೆಯನ್ನು ಯಶಸ್ವಿ ಸೊಸೈಟಿಯಾಗಿಸುವ ನಿಟ್ಟಿನಲ್ಲಿ ಸೇವೆ ಸಲ್ಲಿಸಿರುತ್ತಾರೆ. ಶ್ರೀಯುತರು 2011ರಲ್ಲಿ ಓಡಿಯೂರು ಶ್ರೀ ವಿವಿದ್ದೋದ್ದೇಶ ಸೌಹಾರ್ದ ಸಹಕಾರಿಯನ್ನು ಆರಂಭಿಸಿ, ಸ್ಥಾಪಕಾಧ್ಯಕ್ಷರಾಗಿ ಪ್ರಸ್ತುತ ಸಹಕಾರಿಯ ಅಧ್ಯಕ್ಷರ ನೆಲೆಯಲ್ಲಿ ಕಾರ್ಯನಿರ್ವಹಿಸಿ ಸಂಸ್ಥೆಯನ್ನು ರಾಜ್ಯದಲ್ಲೇ ಒಂದು ಮಾದರಿ ಸೌಹಾರ್ದ ಸಹಕಾರಿಯಾಗಿ ಕಟ್ಟಿಬೆಳೆಸಿರುತ್ತಾರೆ. ಓಡಿಯೂರು ಶ್ರೀ ವಿವಿದ್ದೋದ್ದೇಶ ಸೌಹಾರ್ದ ಸಹಕಾರಿಯ ಮೂಲಕ ಸುಮಾರು 6500ಕ್ಕೂ ಹೆಚ್ಚಿನ ಸ್ವಸಹಾಯ ಗುಂಪುಗಳನ್ನು ರಚಿಸಿ ಸುಮಾರು…
ಮಂಗಳೂರು, ನ.17: 2023ನೇ ಸಾಲಿನ ‘ಸಹಕಾರಿ ರತ್ನ’ ರಾಜ್ಯ ಮಟ್ಟದ ಪ್ರಶಸ್ತಿಗೆ ಎಂಸಿಸಿ ಬ್ಯಾಂಕ್ ಲಿಮಿಟೆಡ್ ನ ಅಧ್ಯಕ್ಷರಾದ ಅನಿಲ್ ಲೋಬೊ ಆಯ್ಕೆಯಾಗಿದ್ದಾರೆ. ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕರು, ದಕ್ಷಿಣ ಕನ್ನಡದಲ್ಲಿ ಸಹಕಾರ ಚಳವಳಿಗೆ ನಿಷ್ಠಾವಂತ ನಾಯಕತ್ವ ಮತ್ತು ಸಹಕಾರಿ ತತ್ವದ ಮೂಲಕ ಜನರನ್ನು ತಲುಪಿರುವ ಅನಿಲ್ ಲೋಬೋ ಅವರನ್ನು ಪ್ರಶಸ್ತಿಗೆ ಅರ್ಹರನ್ನಾಗಿ ಆಯ್ಕೆ ಮಾಡಿರುವುದಾಗಿ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ನಡೆಯಲಿರುವ ಅಖಿಲ ಭಾರತ ಸಹಕಾರ ಚಳವಳಿ ಸಪ್ತಾಹದ 70ನೇ ವಾರ್ಷಿಕೋತ್ಸವದ ಸಮಾರೋಪ ಸಮಾರಂಭದಲ್ಲಿ ಅನಿಲ್ ಲೋಬೋ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿರುತ್ತಾರೆ. ಎಂಸಿಸಿ ಬ್ಯಾಂಕ್ ಲಿಮಿಟೆಡ್‌ನ ಎರಡನೇ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಅನಿಲ್ ಲೋಬೋ ಅವರು ಸಹಕಾರ ಚಳವಳಿಯಲ್ಲಿ ನಾಯಕತ್ವ ಮತ್ತು ಸಮಸ್ಯೆ ನಿವಾರಣೆಯ ಗುಣಗಳಿಗೆ ಹೆಸರುವಾಸಿಯಾಗಿದ್ದಾರೆ. ಅವರ ಅಧ್ಯಕ್ಷತೆಯಲ್ಲಿ, MCC ಬ್ಯಾಂಕ್ ತನ್ನ ಲಾಭ ಮತ್ತು ವಿಸ್ತರಣೆಯಲ್ಲಿ ಭಾರಿ ಬೆಳವಣಿಗೆಯನ್ನು ಕಂಡಿತು. ಅವರು ವಿವಿಧ ಗ್ರಾಹಕ-ಸ್ನೇಹಿ ಕಾರ್ಯಕ್ರಮಗಳು ಮತ್ತು ನೀತಿಗಳನ್ನು…
ಆತ್ಮೀಯರೆ,ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ಸಹಕಾರಿ ಕ್ಷೇತ್ರದ ಕುರಿತಾದ ಮಾಹಿತಿಗಳು ಮತ್ತು ಲೇಖನಗಳನ್ನು ಪ್ರಕಟಿಸುತ್ತಿದ್ದ ಸಹಕಾರ ಸ್ಪಂದನ ವೆಬ್ ಪೋರ್ಟಲ್ ಇನ್ನು ಮುಂದೆ ನಿಮ್ಮ ಸಹಕಾರಿ ಸಂಸ್ಥೆಯ ಕುರಿತಾದ ಸ್ಥಳೀಯ, ರಾಷ್ಟ್ರೀಯ ಮತ್ತು ಅಂತರ್-ರಾಷ್ಟ್ರೀಯ ಸುದ್ದಿಗಳನ್ನು ಉಚಿತವಾಗಿ ಪ್ರಕಟಿಸಲಿದೆ. ನಿಮ್ಮ ಸಂಸ್ಥೆಗೆ ಸಂಬಂಧಿಸಿದ ಯಾವುದೇ ಸುದ್ದಿಯನ್ನು ಉಚಿತವಾಗಿ ಪ್ರಕಟಿಸಲು ನಮ್ಮ ಇ-ಮೇಲ್ ವಿಳಾಸ editor@sahakaraspandana.in ಅಥವಾ WhatsApp ಸಂಖ್ಯೆ 8296645109 ಗೆ ಕಳುಹಿಸಿ ಕೊಡಬಹುದು ಸಹಕಾರ ಸ್ಪಂದನ🏳🌈🏳🌈🏳🌈🏳🌈🏳🌈🏳🌈🏳🌈🏳🌈🏳🌈
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸ್ಟೇಟ್‌ಬ್ಯಾಂಕ್ ಶಾಖೆಯ ಎಂಟನೇ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ “ಸಹಕಾರ ರತ್ನ’’ ಶ್ರೀಯುತ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಸ್ಟೇಟ್‌ಬ್ಯಾಂಕ್ ಶಾಖೆಯಲ್ಲಿ ಜರಗಿತು. ಈ ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಶ್ರೀ ರಂಜಿತ್ ಮೈರಾ, ಶ್ರೀ ಶ್ರೀಧರ್ ಪೂಜಾರಿ ಹಾಗೂ ಶ್ರೀ ಚಂದ್ರಹಾಸ್ ಕೊಟ್ಟಾರಿ ರವರು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಉದ್ಘಾಟಿಸಿದರು.ಸಂಘದ ಸದಸ್ಯರಾದ ಶ್ರೀ ರಾಮಕೃಷ್ಣ ಜಿ. ರವರು ಮಾತನಾಡಿ ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ಆಯೋಜಿಸಲಾದ ಗ್ರಾಹಕರ ಸಭೆಗೆ ಸಂತಸವನ್ನು ವ್ಯಕ್ತ ಪಡಿಸಿದರು. ಸಿಬ್ಬಂದಿಗಳ ಕಾರ್ಯವೈಖರಿ ಹಾಗೂ ವಿಶಾಲ ಹೃದಯ ಮನೋಭಾವವನ್ನು ಪ್ರಶಂಶಿಸಿದರು. ಗ್ರಾಹಕರಾದ ಶ್ರೀ ಕೆ ಅಣ್ಣು ಪೈ ರವರು ಮಾತನಾಡಿ ಈಗಾಗಲೇ ಸಂಘವು ಪಿಗ್ಮಿಯನ್ನು ಮೊಬೈಲ್ ಆಪ್ ಮೂಲಕ ಸಂಗ್ರಹಿಸಿತ್ತಿದ್ದು,ಇನ್ನು ಮುಂದಕ್ಕೆ ಸಾಲಗಳ ಮರುಪಾವತಿ ಹಾಗೂ ಇತರ ಯಾವುದೇ ಖಾತೆಗೆ ಹಣವನ್ನು ಜಮೆಮಾಡುವ ವಿಶಿಷ್ಟ ರೀತೀಯ ಯೋಜನೆಗಳನ್ನು ರೂಪಿಸಿ ಸಮಾಜಕ್ಕೆ ಕೊಡುಗೆ ನೀಡುವಂತಾಗಲಿ ಎಂದು ಹಾರೈಸಿದರು.ಶ್ರೀ ರಂಜಿತ್ ಮೈರಾ ಗ್ರಾಹಕ…
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ(ನಿ.)ಉಚಿತ ನೇತ್ರ ತಪಾಸಣಾ, ದಂತ ಚಿಕಿತ್ಸಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರ
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮುಡಿಪು ಶಾಖೆಯ ೭ನೇ ವಾರ್ಷಿಕೋತ್ಸದ ಪ್ರಯುಕ್ತ ೫೫ನೇ ಉಚಿತ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರವು ಕಟ್ಟೆ ಪ್ರೆಂಡ್ಸ್ (ರಿ) ಮುಡಿಪು, ಬ್ರಹ್ಮಶ್ರೀ ಬಿಲ್ಲವ ವೇದಿಕೆ (ರಿ) ಬಾಳೆಪುಣಿ, ಲಯನ್ಸ್ ಮತ್ತು ಲಿಯೋ ಕ್ಲಬ್, ಮಂಗಳೂರು , ಇವರ ಜಂಟಿ ಸಹಯೋಗದೊಂದಿಗೆ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ದಿ ಕೇಂದ್ರ , ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ ಹಾಗೂ ಸಮುದಾಯ ದಂತ ವಿಭಾಗ , ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ , ದೇರಳಕಟ್ಟೆ ಇಲ್ಲಿಯ ನುರಿತ ತಜ್ಞ ವೈದ್ಯ ತಂಡದವರಿAದ ದಿನಾಂಕ ೧೪/೧೦/೨೦೨೩ ರಂದು ಗೋಪಾಲಕೃಷ್ಣ ಸಭಾಗೃಹ ಮುಡಿಪು ಇಲ್ಲಿ ಜರುಗಿತು.ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ಕುರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಲೋಲಾಕ್ಷಿ ರವರು ದೀಪ ಪ್ರಜ್ವಲಿಸುವುದರ ಮೂಲಕ ಉದ್ಘಾಟಿಸಿದರು. ನಮ್ಮ ಸಂಘವು ಹನ್ನೊಂದನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದು ಸಂಘವು ತನ್ನ ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ನಿರಂತರವಾಗಿ ಉಚಿತ ಆರೋಗ್ಯ…
ಬ್ರಹ್ಮಚಾರಿಣಿ: ನವರಾತ್ರಿ ಹಬ್ಬದ ಎರಡನೇ ದಿನದಂದು ತಾಯಿ ದುರ್ಗಾ ದೇವಿಯ ಎರಡನೇ ಅವತಾರ ತಪಸ್ಸಿನ ರೂಪಕವಾದ ಬ್ರಹ್ಮಚಾರಿಣಿ ಪೂಜಿಸಲಾಗುವುದು.
ಹೆಸರೇ ಸೂಚಿಸುವಂತೆʻಬ್ರಹ್ಮಚಾರಿಣಿ’ಬ್ರಹ್ಮ:-ಎಂದರೆ ತಪಸ್ಸು ಅಥವ ಜ್ಞಾನ ಎಂದು ಅರ್ಥಚಾರಿಣಿ:- ಎಂದರೆ ನಡೆಯುವುದು.”ಬ್ರಹ್ಮಚಾರಿಣಿ” :- ಎಂದರೆ ಜ್ಞಾನಮಾರ್ಗದಲ್ಲಿ ನಡೆಯವುದು ಎಂದರ್ಥ. ತಾಯಿ ಬ್ರಹ್ಮಚಾರಿಣಿ ದೇವಿಯು ದೃಢತೆ ಮತ್ತು ನಡವಳಿಕೆಯ ಸಂಕೇತ. ತಾಯಿಯು ಒಂದು ಕೈಯಲ್ಲಿ ಜಪಮಾಲೆಯನ್ನು ಮತ್ತು ಇನ್ನೊಂದು ಕೈಯಲ್ಲಿ ಕಮಂಡಲವನ್ನು ಹಿಡಿದಿರುತ್ತಾಳೆ. ಪಾರ್ವತಿ ದೇವಿಯು ಶಿವನನ್ನು ಪತಿಯಾಗಿ ಪಡೆಯಲು ನಾರದರ ಉಪದೇಶದಂತೆ ಕಠಿಣ ತಪಸ್ಸನ್ನು ಮಾಡುತ್ತಾಳೆ ಈ ಕಾರಣದಿಂದ ದೇವಿಗೆ ತಪಶ್ಚಾರಿಣೀ ಅರ್ಥಾತ್ ಬ್ರಹ್ಮಚಾರಿಣೀ ಎನ್ನುವ ಹೆಸರು ಬಂತು. ತಪಸ್ಸು ಮಾಡುತ್ತಿರುವ ಕಾಲದಲ್ಲಿ ಬರೀ ಹೂವು, ಹಣ್ಣುಗಳನ್ನು ಹಾಗೂ ಎಲೆಗಳನ್ನು ಮಾತ್ರ ಒಂದು ಕಾಲದವರೆಗೂ ಸೇವಿಸುತ್ತಿದ್ದಳು, ನಂತರದಲ್ಲಿ ಎಲೆಯ ಸೇವನೆಯನ್ನೂ ನಿಲ್ಲಿಸಿದಳು, ʻಪರ್ಣʼವೆಂದರೆ ಎಲೆ, ಹಾಗಾಗಿ ಈಕೆಯನ್ನು ʻಅಪರ್ಣಾʼ ಎಂದೂ ಕರೆಯುತ್ತಾರೆ.ನಂತರ ಶಿವನೇ ಒಂದು ಸನ್ಯಾಸಿಯ ರೂಪವನ್ನು ತಾಳಿ ಈಕೆಯ ನಿಷ್ಠೆಯನ್ನು ಪರೀಕ್ಷಿಸುವನು ಹಾಗು ಪಾರ್ವತಿಯ ಅಖಂಡ ನಿಷ್ಠೆಗೆ ಮೆಚ್ಚಿ ಶಿವನು ಆಕೆಗೆ ಒಲಿಯುತ್ತಾನೆ. ನವರಾತ್ರಿಯ ಸಂದರ್ಭದಲ್ಲಿ ಬ್ರಹ್ಮಚಾರಿಣಿ ದೇವಿಯನ್ನು ಪೂಜಿಸುವುದರಿಂದ ಸಂಯಮ, ಪರಿತ್ಯಾಗ ಮತ್ತು ನಿರ್ಲಿಪ್ತತೆಯೊಂದಿಗೆ ವ್ಯಕ್ತಿಯಲ್ಲಿ ಸದ್ಗುಣದ ಭಾವನೆಗಳು…
