Author: admin

ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ|ಎಂ.ಎನ್.ರಾಜೇಂದ್ರ ಕುಮಾರ್‌ ಹೇಳಿಕೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ 33ನೇ ಶಾಖೆ ಉದ್ಘಾಟನೆ ಮಂಗಳೂರು: ಸಹಕಾರ ಕ್ಷೇತ್ರ ಕ್ಷಿಪ್ರವಾಗಿ ವಿಸ್ತರಣೆಗೊಳ್ಳುತ್ತಾ ಸಾಗುತ್ತಿದ್ದು, ಗ್ರಾಹಕರಿಗೆ ತಳಮಟ್ಟದಿಂದ ಉತ್ತಮ ಸೇವೆ ನೀಡುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ಸಹಕಾರ ಮಾರಾಟ ಮಹಾಮಂಡಲದ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು. ಸುರತ್ಕಲ್ ಕೃಷ್ಣಾಪುರದ ಆರನೇ ಬ್ಲಾಕ್‌ನಲ್ಲಿರುವ ಎಚ್‌ಎನ್‌ಜಿಸಿ ಐಕನ್ ಪ್ಲಾನೆಟ್ ಕಟ್ಟಡದಲ್ಲಿ ಸೋಮವಾರ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 33ನೇ ಶಾಖೆ ಉದ್ಘಾಟಿಸಿ ಮಾತನಾಡಿದರು. ಆತ್ಮಶಕ್ತಿ ಸಹಕಾರ ಸಂಘವು ಕ್ಷಿಪ್ರಗತಿಯಲ್ಲಿ 33 ಶಾಖೆಯವರೆಗೆ ವಿಸ್ತರಿಸಿರುವುದು ಅದರ ಗುಣಮಟ್ಟದ ಸೇವೆ ಹಾಗೂ ಗ್ರಾಹಕರ ವಿಶ್ವಾಸ ಗಳಿಸಿರುವುದಕ್ಕೆ ಸಾಕ್ಷಿ ಎಂದರು. ಸಂಸದ ಬ್ರಿಜೇಶ್ ಚೌಟ ಮಾತನಾಡಿ ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಸಂಸ್ಥೆಯು ಶೇ.95ರಷ್ಟು ಮಹಿಳಾ ಸಿಬ್ಬಂದಿಗೆ ಅವಕಾಶ ನೀಡಿರುವುದು ಶ್ಲಾಘನೀಯ ಎಂದರು. ಮಾಜಿ ಶಾಸಕ ಮೊಯಿದಿನ್ ಬಾವಾ, ಮನಪಾ ಮಾಜಿ ಸದಸ್ಯರಾದ ತಿಲಕ್‌ರಾಜ್ ಕೃಷ್ಣಾಪುರ…

Read More

ಕಿಸಾನ್‌ ಸಮ್ಮಾನ್‌ ನೆರವು 12,000ಕ್ಕೆ ಏರಿಕೆ? ದೆಹಲಿ: ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿ ಬಹುಮತ ಕಳೆದುಕೊಂಡು ಮಿತ್ರಪಕ್ಷಗಳ ನೆರವಿನಿಂದ ಸರ್ಕಾರ ನಡೆಸುತ್ತಿರುವ ಬಿಜೆಪಿ ಮುಂಬರುವ ಚುನಾವಣೆಗಳ ಬಗ್ಗೆ ಅಲರ್ಟ್‌ ಆಗಿದ್ದು, ರೈತರು ಹಾಗೂ ಮಹಿಳೆಯರ ಮನಸ್ಸು ಗೆಲ್ಲಲು ಮುಂದಾಗಿದ್ದು ಬಜೆಟ್‌ನಲ್ಲಿ ರೈತರಿಗೆ ಮತ್ತು ಮಹಿಳೆಯರಿಗೆ ಬಂಪರ್‌ ಘೋಷಣೆಗೆ ಮುಂದಾಗಿದೆ. ಸದ್ಯ ಕೇಂದ್ರದಿಂದ ಕಿಸಾನ್‌ ಸಮ್ಮಾನ್‌ ಸಹಾಯಧನದಡಿಯಲ್ಲಿ ರೈತರಿಗೆ ನೀಡುತ್ತಿರುವ ೬,೦೦೦ ರೂ. ನೆರವನ್ನು ೧೨,೦೦೦ಕ್ಕೇರಿಸುವ ಮಹತ್ವದ ಘೋಷಣೆಯನ್ನು ಬಜೆಟ್‌ನಲ್ಲಿ ಘೋಷಿಸಲಾಗುವುದು ಎಂದು ಹೇಳಲಾಗಿದೆ. ತಕ್ಷಣಕ್ಕೆ ಮಹಾರಾಷ್ಟ್ರ, ಹರ್ಯಾಣ, ಜಾರ್ಖಂಡ್‌ ವಿಧಾನಸಭಾ ಚುನಾವಣೆಗಳು ಬಿಜೆಪಿ ಪಾಲಿಗೆ ನಿರ್ಣಾಯಕವಾಗಿದ್ದು ಇದನ್ನು ಗಮನದಲ್ಲಿಟ್ಟುಕೊಂಡು ಬಜೆಟ್‌ನಲ್ಲಿ ರೈತರು ಮತ್ತು ಮಹಿಳೆಯರ ಮನ ಗೆಲ್ಲಲು ಕೇಂದ್ರ ಸರ್ಕಾರ ಹೆಚ್ಚಿನ ಗಮನ ಹರಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ರೈತರಿಗೆ ವಾರ್ಷಿಕ ನೆರವನ್ನು 12,000 ರೂ.ಗೆ ಹೆಚ್ಚಿಸಬಹುದು ಹಾಗೂ ಬಿಪಿಎಲ್‌ ಕುಟುಂಬದ ಮಹಿಳೆಯರಿಗೆ 1 ಲಕ್ಷ ರೂ. ನೆರವು ನೀಡುವ ಹೊಸ ಯೋಜನೆಯನ್ನೂ ಪ್ರಕಟಿಸುವ…

Read More

ವಿಧಾನ ಪರಿಷತ್‌ನಲ್ಲಿ ಸಚಿವ ಕೆ.ಎನ್. ರಾಜಣ್ಣ ಮಾಹಿತಿ ಬೆಂಗಳೂರು: 2018ನೇ ಸಾಲಿನ ಒಂದು ಲಕ್ಷ ರೂ. ಸಾಲ ಮನ್ನಾ ಯೋಜನೆಯಡಿ 6,048 ರೈತರಿಗೆ 14.45 ಕೋಟಿ ರೂ.ಗಳ ಸಾಲ ಮನ್ನಾ ಮೊತ್ತದ ಬಿಡುಗಡೆ ಬಾಕಿ ಇದ್ದು ಈ ಬಗ್ಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ರಾಜ್ಯದ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಹೇಳಿದರು. ಮಂಗಳವಾರ ವಿಧಾನ ಪರಿಷತ್ತಿನ ಅಧಿವೇಶನದ ಪ್ರಶ್ನೋತ್ತರ ಕಲಾಪದ ವೇಳೆ ಬಿಜೆಪಿ ಸದಸ್ಯ ಎಸ್. ರವಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಡಿ.ಸಿ.ಸಿ. ಬ್ಯಾಂಕುಗಳ ಮೂಲಕ ಸಾಲ ನೀಡುವ ಸಹಕಾರ ಸಂಘಗಳಲ್ಲಿ 86,305 ರೈತ ಸದಸ್ಯರಿಗೆ 359.52 ಕೋಟಿ ರೂ.ಗಳ ಸಾಲ ಮನ್ನಾ ಅರ್ಹತೆಯನ್ನು ಗುರುತಿಸಿ ಹಸಿರು ಪಟ್ಟಿ ತಯಾರಿಸಲಾಗಿದೆ. ಈ ಪೈಕಿ 2018-19, 2019-20, 2020-21ರಲ್ಲಿ 80,257 ರೈತರ 345.08 ಕೋಟಿ ರೂ.ಗಳ ಸಾಲ ಮನ್ನಾ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. 2024-25ನೇ ಸಾಲಿಗೆ 35.10 ಲಕ್ಷ ರೈತರಿಗೆ ರೂ 25,000 ಕೋಟಿ ರೂ.ಗಳ ಅಲ್ಪಾವಧಿ…

Read More

ಉಡುಪಿ: ಶ್ರೀ ರಾಮಾಂಜನೇಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿ ಕೋಡಿ ಕನ್ಯಾಣ ಇದರ ಅಧ್ಯಕ್ಷರಾಗಿ ಶಂಭು ಪೂಜಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮಹಾಬಲ ಕುಂದರ್‌ ಕೋಡಿ ಕನ್ಯಾಣ ಆಯ್ಕೆಯಾಗಿದ್ದಾರೆ. ಆಡಳಿತ ಮಂಡಳಿಯ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದು ಎಲ್ಲರನ್ನು ಅಭಿನಂದಿಸಲಾಯಿತು.

Read More

ಕುಶಾಲನಗರ ಶಾಖೆ ಉದ್ಘಾಟಿಸಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅಭಿಪ್ರಾಯ ಮಂಗಳೂರು: ಪ್ರಣವ ಸೌಹಾರ್ದ ಸಹಕಾರಿ ಸಂಘದ ಬೆಳವಣಿಗೆ ಶ್ಲಾಘನೀಯವಾದುದು. ಉತ್ತಮ, ಪ್ರಾಮಾಣಿಕ ಆಡಳಿತದಿಂದ ಸಂಸ್ಥೆ ಉನ್ನತಿ ಹೊಂದುತ್ತಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಪ್ರಣವ ಸೌಹಾರ್ದ ಸಹಕಾರಿ ಸಂಘದ ಎಂಟನೇ ಶಾಖೆಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು.  ಸಹಕಾರ ತತ್ವದಡಿ ಕೆಲಸ ಮಾಡುವಾಗ ಸಾಮಾಜಿಕ ಬದ್ಧತೆಯನ್ನೂ ಗಣನೆಗೆ ತೆಗೆದುಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ಹೇಳಿದರು. https://translate.google.com/website?sl=en&tl=kn&hl=kn&client=srp&u=https://chat.whatsapp.com/Ge11n7QCiMj5QyPvCc0H19 ಪ್ರಣವ ಸೌಹಾರ್ದ ಸಹಕಾರಿಯ ಅಧ್ಯಕ್ಷ ಜಿ.ಆರ್‌.ಪ್ರಸಾದ್‌ ಸ್ವಾಗತಿಸಿ, ಪ್ರಣವ ಸೌಹಾರ್ದದ ಬೆಳವಣಿಗೆಯ ಬಗ್ಗೆ ಮಾಹಿತಿ ನೀಡಿದರು. ಸಾಮಾಜಿಕ ಕಾರ್ಯಕರ್ತ ಭಾರತೀಶ್‌ ದೇಶದ ಈಗಿನ ವ್ಯವಸ್ಥೆ ಹಾಗೂ ನಮ್ಮ ಕರ್ತವ್ಯಗಳ ಬಗ್ಗೆ ಮಾಹಿತಿ ನೀಡಿದರು. ಧ್ವನಿ ಫೌಂಡೇಶನ್‌ ಅಧ್ಯಕ್ಷೆ ಶ್ವೇತಾ ಮಡಪ್ಪಾಡಿ ಮಾತನಾಡಿ, ಆರ್ಥಿಕ ಸಂಸ್ಥೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗಳ ಸಹಾಯಕ್ಕೆ ನಿಲ್ಲಬೇಕು ಎಂದು ಆಶಯ ವ್ಯಕ್ತಪಡಿಸಿದರು. ಮೈಸೂರು, ಮಂಡ್ಯ, ಕೊಡಗು ಜಿಲ್ಲೆಯ ಸೌಹಾರ್ದ…

Read More

ಮಂಗಳೂರು: ಯುವ ಸ್ಪಂದನ ಸೌಹಾರ್ದ ಕೋ ಆಪರೇಟಿವ್‌ ಸೊಸೈಟಿ ಲಿ. ಇದರ ಅಧ್ಯಕ್ಷರಾಗಿ ಜಿತಿನ್‌ ಜೀಜೋ ಹಾಗೂ ಉಪಾಧ್ಯಕ್ಷರಾಗಿ ಡಿ.ಎಂ.ದೀಕ್ಷಾ ಅವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ದಿನಾಂಕ 12-7-2024ರಂದು ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ನಡೆದ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಈ ಚುನಾವಣಾ ಪ್ರಕ್ರಿಯೆಯು ನಡೆಯಿತು. ರಿಟರ್ನಿಂಗ್ ಅಧಿಕಾರಿಯಾಗಿ ಲೆಕ್ಕ ಪರಿಶೋಧನಾ ಇಲಾಖೆಯ ಶ್ರೀಯುತ ನವೀನ್ ಎಂ.ಎಸ್. ಇವರು ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಯುವ ಸ್ಪಂದನ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಇದರ ನಿರ್ದೇಶಕ ಮಂಡಳಿಗೆ ನಡೆದ ಚುನಾವಣೆಯಲ್ಲಿ ನಿರ್ದೇಶಕರಾಗಿ ಚೇತನ್‌ ಕೊಟ್ಟಾರಿ ಎಚ್‌, ಪೃಥ್ವೀಶ್‌ ಗೌಡ, ಶೆಲ್ಡನ್‌ ಹರ್ಮನ್‌ ತಾವ್ರೊ, ಜಿತಿನ್ ಜೀಜೋ, ಮೇಘೇಶ್‌ ಯು.ಶೆಟ್ಟಿ, ಅನ್ಮೋಲ ಅ.ಬಾಳೇರಿ, ಗುರು ಆದಿತ್ಯ, ನಿಖಿತ್‌ ಕುಮಾರ್‌, ನಿಶ್ಮಾ ವಿ.ಕೆ, ನರಸಿಂಹ ಎಸ್‌.ಭಂಡಾರಿ, ಪೆನಜಾ ರೆಡ್ಡಿ, ಭರತ್‌ ನಿಡ್ಪಳ್ಳಿ ಮತ್ತು ಡಿ.ಎಂ.ದೀಕ್ಷಾ ಇವರುಗಳು ಅವಿರೋಧವಾಗಿ ಚುನಾಯಿತರಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಸಹಕಾರಿ ಸಂಸ್ಥೆಗಳ ಸುದ್ದಿ ಪ್ರಕಟಣೆಗಾಗಿ ಈ ಕೆಳಗಿನ ಮೇಲ್ ಮಾಡಿ: ಇಮೇಲ್: sahakaraspandana@gmail.com ಮಾಹಿತಿಗೆ:…

Read More

ಸುರತ್ಕಲ್‌ ಕೃಷ್ಣಾಪುರದ ಆರನೇ ಬ್ಲಾಕ್‌ನಲ್ಲಿ ಸೋಮವಾರದಿಂದ ಕಾರ್ಯಾರಂಭ ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 33ನೇ ನೂತನ ಶಾಖೆಯು ಸುರತ್ಕಲ್‌ ಕೃಷ್ಣಾಪುರದ 6ನೇ ಬ್ಲಾಕ್‌ನಲ್ಲಿರುವ “HNGC ಐಕನ್ ಪ್ಲಾನೆಟ್”ನಲ್ಲಿ ಜುಲೈ 15ರಂದು ಸೋಮವಾರ ಬೆಳಗ್ಗೆ 10.3೦ಕ್ಕೆ ಉದ್ಘಾಟನೆಯಾಗಲಿದೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ.ಎಂ.ಎನ್‌ ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ದೀಪ ಪ್ರಜ್ವಲನೆ ಮಾಡುವರು. ಶಾಸಕ ಡಾ.ವೈ.ಭರತ್ ಶೆಟ್ಟಿ ಭದ್ರತಾಕೋಶ ಉದ್ಘಾಟನೆ ಮಾಡಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಗಣಕೀಕೃತ ಬ್ಯಾಂಕಿಂಗ್‌ಗೆ ಚಾಲನೆ ನೀಡುವರು. ಮಾಜಿ ಶಾಸಕ ಮೊಯ್ದೀನ್‌ ಬಾವ ನಿರಖು ಠೇವಣಿ ಪತ್ರ ಬಿಡುಗಡೆ ಮಾಡಲಿದ್ದಾರೆ. ಮೈಸೂರು ಪ್ರಾಂತ್ಯದ ಸಹಕಾರ ಸಂಘಗಳ ಜಂಟಿ ನಿಬಂಧಕ ಪ್ರಸಾದ್ ರೆಡ್ಡಿ ಇ-ಮುದ್ರಾಂಕ ಸೇವೆಗೆ ಚಾಲನೆ ನೀಡಲಿದ್ದಾರೆ.     ದಕ್ಷಿಣ ಕನ್ನಡ…

Read More

ಮಂಗಳೂರು: ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ, ಭಾರತೀಯ ಅಂಚೆ ಇಲಾಖೆ, ಮಂಗಳೂರು ವಿಭಾಗ ಹಾಗೂ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಇವುಗಳ ಸಹಯೋಗದೊಂದಿಗೆ ಗ್ರಾಹಕರಿಗಾಗಿ “ಸಮಗ್ರ ರಕ್ಷಣಾ ಯೋಜನೆ ಅಪಘಾತ ವಿಮೆ ಅಭಿಯಾನ”ಕ್ಕೆ ಗುರುವಾರ ಶ್ರೀಶಾ ಸೊಸೈಟಿಯ ಹಂಪನಕಟ್ಟೆ ಶಾಖೆಯಲ್ಲಿ ಚಾಲನೆ ನೀಡಲಾಯಿತು. ಕರ್ನಾಟಕ ರಾಜ್ಯ ಸಂಯುಕ್ತ ಸೌಹಾರ್ದ ಸಹಕಾರಿಯ ಅಧ್ಯಕ್ಷ ಜಿ.ನಂಜನ ಗೌಡ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಶ್ರೀಶಾ ಸೊಸೈಟಿ ಗ್ರಾಹಕರಿಗೆ ನೀಡುತ್ತಿರುವ ಈ ಅಪಘಾತ ವಿಮಾ ಯೋಜನೆ ಅತ್ಯಂತ ಅವಶ್ಯಕವಾಗಿದ್ದು, ಅತ ಕಡಿಮೆ ಪ್ರೀಮಿಯಂ ಜೊತೆಗೆ ಅನೇಕ ಸವಲತ್ತುಗಳನ್ನು ಒಳಗೊಂಡಿದೆ. ಶ್ರೀಶಾ ಸೊಸೈಟಿ ಈ ರೀತಿಯ ಅನೇಕ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಮಾದರಿಯಾಗಿದೆ. ಈ ವಿಮಾ ಯೋಜನೆಯನ್ನು ರಾಜ್ಯದ ಸೌಹಾರ್ದ ಸಹಕಾರಿಗಳಿಗೆ ಪರಿಚಯಿಸುವುದಾಗಿ ಹೇಳಿದರು. ಮುಖ್ಯ ಅತಿಥಿ ಮಂಗಳೂರು ವಿಭಾಗದ ಹಿರಿಯ ಸೂಪರಿಂಟೆಂಡೆಂಟ್ ಆಫ್ ಪೋಸ್ಟ್ ಆಫೀಸಸ್ ಎಂ.ಸುಧಾಕರ್ ಮಲ್ಯ ಮಾತನಾಡಿ, ಶ್ರೀಶಾ ಸೊಸೈಟಿಯ ಈ ಸಹಕಾರಕ್ಕೆ ಮತ್ತು ವಿನೂತನ ಕಾರ್ಯಗಳಿಗೆ ಸಂತಸ ವ್ಯಕ್ತಪಡಿಸಿ,…

Read More

ಸಂಪರ್ಕ ಸಭೆ, ತರಬೇತಿ ಕಾರ್ಯಕ್ರಮದಲ್ಲಿ ಜಿ.ನಂಜನ ಗೌಡ ಅಭಿಪ್ರಾಯ ಮಂಗಳೂರು: ಅತ್ಯಂತ ಬಡವರೂ ಏಳಿಗೆ ಹೊಂದಬೇಕು ಎಂಬುದು ಸೌಹಾರ್ದ ಸಹಕಾರಿಯ ಉದ್ದೇಶ. ಈ ಕ್ಷೇತ್ರದಲ್ಲಿ ಅಧಿಕಾರಿಗಳ ಹಸ್ತಕ್ಷೇಪ ಕಡಿಮೆ. ಆದರೆ ಸೌಹಾರ್ದದ ನಿಯಮಾವಳಿಯ ದುರುಪಯೋಗ ಯಾವತ್ತೂ ಆಗಬಾರದು ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷ ಜಿ.ನಂಜನ ಗೌಡ ಅಭಿಪ್ರಾಯಪಟ್ಟರು. ಮಂಗಳೂರಿನಲ್ಲಿ ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಸೌಹಾರ್ದ ಸಹಕಾರಿಗಳ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಹಮ್ಮಿಕೊಂಡ ಸಂಪರ್ಕ ಸಭೆ ಹಾಗೂ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸೌಹಾರ್ದ ಸಹಕಾರಿ ಸಂಸ್ಥೆಗಳು ತಮ್ಮ ಕಾರ್ಯಕ್ಷೇತ್ರದಲ್ಲಿ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಯಾರಿಗಾದರೂ ಸಾಲ ಕೊಡುವಾಗ ಸಂಸ್ಥೆಯ ಅಧ್ಯಕ್ಷರು, ನಿರ್ದೇಶಕರು ಅತ್ಯಂತ ಜಾಗರೂಕರಾಗಿರಬೇಕು. ಪ್ರತಿಯೊಬ್ಬ ನಿರ್ದೇಶಕರೂ ಸಂಸ್ಥೆಯ ಎಲ್ಲ ಆಸ್ತಿಗಳ ಬಗ್ಗೆ ಪೂರ್ಣ ಮಾಹಿತಿ ಹೊಂದಿರಬೇಕು. ಸಂಸ್ಥೆಯ ಬೆಳವಣಿಗೆ, ನಿರ್ವಹಣೆಯ ಬಗ್ಗೆ ಸಂಪೂರ್ಣ ಜ್ಞಾನ ಹೊಂದಿರಬೇಕು ಮತ್ತು ಸಂಸ್ಥೆಯ ಅಭಿವೃದ್ಧಿ ಕಾರ್ಯದಲ್ಲಿ ಭಾಗಿಯಾಗಬೇಕು. ಸಂಸ್ಥೆಯ ವಿಶ್ವಾಸಕ್ಕೆ ಒಮ್ಮೆ ಧಕ್ಕೆಯಾದರೆ ಇಡೀ ವ್ಯವಸ್ಥೆಯೇ ಹಾಳಾಗುತ್ತದೆ…

Read More

ಪುರುಷರ ಏಕಸ್ವಾಮ್ಯಕ್ಕೆ ೩೩ ಶೇಕಡಾ ಮೀಸಲಾತಿಯ ತಡೆ ಮಂಗಳೂರು: ಇಂದು ಮಹಿಳೆಯರು ಪ್ರವೇಶಿಸದ ಕ್ಷೇತ್ರವೇ ಇಲ್ಲ. ಅಡುಗೆ ಮನೆಯಿಂದ ಹಿಡಿದು ಆರ್ಥಿಕ ಕ್ಷೇತ್ರದವರೆಗೂ ಮಹಿಳೆಯರು ತಮ್ಮ ಕಾರ್ಯಬಾಹುಳ್ಯವನ್ನು ವಿಸ್ತರಿಸಿಕೊಂಡಿದ್ದಾರೆ. ಇದೀಗ ಸಹಕಾರ ಕ್ಷೇತ್ರದಲ್ಲೂ ಮಹಿಳೆಯರ ಸಾಮರ್ಥ್ಯ ಪ್ರದರ್ಶನಕ್ಕೆ ವೇದಿಕೆ ರೆಡಿಯಾಗಿದೆ. ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರಿಗೆ ಶೇಕಡಾ 33ರ ಸ್ಥಾನಮಾನ ನೀಡಬೇಕೆಂಬ ಕೂಗು ಬಹಳ ಹಳೆಯದು. ಈಗ ಸಹಕಾರ ಕ್ಷೇತ್ರಕ್ಕೂ ಶೇಕಡಾ 33ರ ಬೇಡಿಕೆ ಕಾಲಿಟ್ಟಿದೆ. ಇದು ಸಹಕಾರಿ ಕ್ಷೇತ್ರದಲ್ಲಿ ಪುರುಷರ ಏಕಸ್ವಾಮ್ಯಕ್ಕೆ ಅಂತ್ಯ ಹಾಡಲಿದೆ. ಇಂಥದೊಂದು ಬೋಲ್ಡ್‌ ಆದೇಶ ಹೊರಡಿಸಿದ್ದು ಉತ್ತರಾಖಂಡ ಸರ್ಕಾರ. ಹೌದು, ಉತ್ತರಾಖಂಡದ ಸಹಕಾರಿ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಆದೇಶವನ್ನು ಅಲ್ಲಿನ ಸರ್ಕಾರ ಕಳೆದ ವಾರ ಹೊರಡಿಸಿದೆ. ಅಲ್ಲಿನ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮೀಸಲಾತಿ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಅದನ್ನು ಆದೇಶ ಮಾಡಿ ಸರ್ಕಾರ ನಿಯಮ ಜಾರಿಗೆ ತಂದಿದ್ದು ಶನಿವಾರ ಅಂತಾರಾಷ್ಟ್ರೀಯ ಸಹಕಾರ ದಿನಾಚರಣೆಯ ಕಾರ್ಯಕ್ರಮದಲ್ಲಿ…

Read More