Author: admin
ರೂ. 308.58 ಲಕ್ಷ ನಿವ್ವಳ ಲಾಭ: ಆತ್ಮಶಕ್ತಿಯ ನಿರಂತರ ಸಾಧನೆಗೆ ಸದಸ್ಯರ ಶ್ಲಾಘನೆ ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 2025-26ನೇ ಸಾಲಿನ 15ನೇ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಭಾನುವಾರ ಪಡೀಲಿನ ಬೈರಾಡಿಕೆರೆ ಹತ್ತಿರದ ಸಂಘದ ಪ್ರಧಾನ ಕಚೇರಿ “ಆತ್ಮಶಕ್ತಿ ಸೌಧ”ದ ಸಭಾಂಗಣದಲ್ಲಿ ಜರುಗಿತು. https://chat.whatsapp.com/FCEnlTkAKCC0MGPhXtX4i4 ಸಂಘದ 2025-26ನೇ ಸಾಲಿನ ವಾರ್ಷಿಕ ವರದಿ ಲೆಕ್ಕಪತ್ರವನ್ನು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಮಂಡಿಸಿದರು. ಸಂಘದ ಅಧ್ಯಕ್ಷರಾದ ಚಿತ್ತರಂಜನ್ ಬೋಳಾರ್ ಮಾತನಾಡಿ ಸಂಘವು ಪ್ರಸ್ತುತ ಅವಿಭಜಿತ ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ಒಟ್ಟು 35 ಶಾಖೆಗಳನ್ನು ಹೊಂದಿದ್ದು, 2026-27ನೇ ಸಾಲಿನಲ್ಲಿ ಸಂಘದ ಕಾರ್ಯವ್ಯಾಪ್ತಿಯಲ್ಲಿ ಇನ್ನೂ ಹೆಚ್ಚಿನ ಹೊಸ ಶಾಖೆಗಳನ್ನು ತೆರೆದು, ಹೆಚ್ಚಿನ ಸದಸ್ಯರನ್ನು ಸೇರ್ಪಡೆಗೊಳಿಸಿ ಪಾಲು ಬಂಡವಾಳವನ್ನು ರೂ. 3 ಕೋಟಿಗೆ ಹೆಚ್ಚಿಸಿ, ವಿವಿಧ ಯೋಜನೆಗಳ ಮೂಲಕ ಸದಸ್ಯರಿಂದ ರೂ.375 ಕೋಟಿಗೂ ಮಿಕ್ಕಿ ಠೇವಣಿಗಳನ್ನು ಸಂಗ್ರಹಿಸಿ, ರೂ. 325 ಕೋಟಿಗೂ ಮಿಕ್ಕಿ ಸಾಲ…
ಮೈಸೂರು: ಇಲ್ಲಿನ ತ್ಯಾಗರಾಜ ರಸ್ತೆ, ಕೆ.ಆರ್.ಮೊಹಲ್ಲಾದಲ್ಲಿರುವ ದಿವ್ಯ ಸಮಾಜ ನಿರ್ಮಾಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ನೇತ್ರ ಚಿಕಿತ್ಸಾ ಶಿಬಿರ ಜುಲೈ 26ರಂದು ಭಾನುವಾರ ಬೆಳಗ್ಗೆ 11 ಗಂಟೆಗೆ ದಿ ಮೈಸೂರು ಸಿಟಿ ಕೋ-ಆಪರೇಟಿವ್ ಹೌಸಿಂಗ್ ಸೊಸೈಟಿಯ ಸಮುದಾಯ ಭವನದಲ್ಲಿ ನಡೆಯಲಿದೆ. https://chat.whatsapp.com/FCEnlTkAKCC0MGPhXtX4i4 ಸಂಘದ ಅಧ್ಯಕ್ಷರಾದ ಬಿ.ಎಸ್. ಶ್ರೀನಾಥ್ ಅಧ್ಯಕ್ಷತೆ ವಹಿಸುವರು. ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಕಟಣೆ ತಿಳಿಸಿದೆ. ವಾರ್ಷಿಕ ಮಹಾಸಭೆಯ ಜೊತೆಗೆ ಎ.ಎಸ್.ಜಿ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಉಚಿತ ಕಣ್ಣಿನ ತಪಾಸಣೆ ಶಿಬಿರವನ್ನು ಬೆಳಗ್ಗೆ 10ರಿಂದ ಮಧ್ಯಾಹ್ನ 2ರ ತನಕ ಆಯೋಜಿಸಲಾಗಿದೆ. ಶಿಬಿರದಲ್ಲಿ ಕಂಪ್ಯೂಟರೈಸ್ಡ್ ಕಣ್ಣಿನ ತಪಾಸಣೆ (ಎ.ಆರ್. ಯಂತ್ರ), ದೂರದಷ್ಟಿ ಮತ್ತು ಸಮೀಪ ದೃಷ್ಟಿ ಪರೀಕ್ಷೆಗಳು, ನುರಿತ ಕೌನ್ಸಿಲಿಂಗ್ ತಂಡದಿಂದ ಸಲಹೆ, ಕುಟುಂಬದ ಸದಸ್ಯರಿಗೆ ರೂ. 800 ಮೌಲ್ಯದ ತಪಾಸಣಾ ಕೂಪನ್, ಇ.ಎಸ್.ಐ. ಮತ್ತು ಯಶಸ್ವಿನಿ ಇದ್ದಲ್ಲಿ ಶುಲ್ಕ ರಹಿತ ಆಪರೇಷನ್ ಸೌಲಭ್ಯವಿದೆ.
ಉಡುಪಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ 25 ಸಾವಿರ ಕೋಟಿ ರೂ. ಅನುದಾನ ಮೀಸಲಿಟ್ಟಿದ್ದು, ಜಿಲ್ಲೆಯ ಮೀನುಗಾರರು ಹೆಚ್ಚಿನ ಪ್ರಯೋಜನ ಪಡೆಯುವಂತಾಗಬೇಕು. ಈ ಬಗ್ಗೆ ಅಧಿಕಾರಿಗಳು ವಿಶೇಷ ಆಸಕ್ತಿ ವಹಿಸಿ ಯೋಜನೆಗಳನ್ನು ಜಾರಿಗೊಳಿಸಬೇಕು ಎಂದು ಶಾಸಕ ಯಶ್ಪಾಲ್ ಎ. ಸುವರ್ಣ ಹೇಳಿದರು. https://chat.whatsapp.com/FCEnlTkAKCC0MGPhXtX4i4 ರಾಜ್ಯ ಸಹಕಾರ ಮಹಾಮಂಡಳ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಸಹಕಾರ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಉಡುಪಿ, ಬ್ರಹ್ಮಾವರ ಮತ್ತು ಕಾಪು ತಾಲೂಕಿನ ಮೀನುಗಾರರ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಆಯೋಜಿಸಿದ್ದ ಆಡಳಿತ ನಿರ್ವಹಣೆ ಕುರಿತ ವಿಶೇಷ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ ಕ್ಷೇತ್ರವಾಗಿದ್ದು, ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ಸಹಯೋಗದಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿದೆ. ಇಲಾಖೆಯ ಅಧಿಕಾರಿಗಳು ನಿರಂತರವಾಗಿ ಶಿಬಿರದಲ್ಲಿ ಪಾಲ್ಗೊಂಡು, ಸರ್ಕಾರದ ಹೊಸ ಯೋಜನೆಗಳ ಮಾಹಿತಿಯನ್ನು ಮೀನುಗಾರರಿಗೆ ತಲುಪಿಸಬೇಕು. ಆಗ ಮಾತ್ರ ಯೋಜನೆಯ…
ರಾಜ್ಯ ಸಹಕಾರಿ ಬ್ಯಾಂಕ್‌ಗಳಲ್ಲಿ ಎನ್‌ಪಿಎ ಏರಿಕೆ: ರಾಜ್ಯಸಭೆಯಲ್ಲಿ ಸಚಿವ ಪಂಕಜ್ ಚೌಧರಿ ಮಾಹಿತಿ ನವದೆಹಲಿ: ಅರ್ಬನ್ ಕೋ ಆಪರೇಟಿವ್ ಬ್ಯಾಂಕ್‌ಗಳಲ್ಲಿ ಎನ್‌ಪಿಎ (ಅನುತ್ಪಾದಕ ಆಸ್ತಿ) ಪ್ರಮಾಣವು ಮಾರ್ಚ್ 31, 2026ರ ವೇಳೆಗೆ 21,769 ಕೋಟಿ ರೂ.ಗೆ ಇಳಿಕೆಯಾಗಿದೆ. ಇದು ಕಳೆದ ಆರು ವರ್ಷಗಳಲ್ಲೇ ಅತ್ಯಂತ ಕಡಿಮೆ ಪ್ರಮಾಣದ್ದಾಗಿದೆ ಎಂದು ಕೇಂದ್ರ ಹಣಕಾಸು ಖಾತೆಯ ರಾಜ್ಯ ಸಚಿವ ಪಂಕಜ್ ಚೌಧರಿ ರಾಜ್ಯಸಭೆಯಲ್ಲಿ ಮಾಹಿತಿ ನೀಡಿದ್ದಾರೆ. https://chat.whatsapp.com/FCEnlTkAKCC0MGPhXtX4i4 ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಪಟ್ಟಣ ಸಹಕಾರಿ ಬ್ಯಾಂಕುಗಳಲ್ಲಿ 2021ರ ಮಾರ್ಚ್ ವೇಳೆಗೆ ಇದ್ದ ಅನುತ್ಪಾದಕ ಆಸ್ತಿ ಎನ್‌ಪಿಎ ಪ್ರಮಾಣ 37,993 ಕೋಟಿ ರೂ.ನಿಂದ ಆರು ವರ್ಷಗಳಲ್ಲಿ 21,769 ಕೋಟಿ ರೂ.ಗೆ ಇಳಿಕೆಯಾಗಿದೆ ಎಂದು ಹೇಳಿದರು. ಇದಕ್ಕೂ ಮೊದಲು ಸಂಸತ್ತಿನ ಮುಂದೆ ಇರಿಸಲಾದ ರಾಷ್ಟ್ರೀಕೃತ ಬ್ಯಾಂಕುಗಳ 6.17 ಲಕ್ಷ ಕೋಟಿಯ ಎನ್‌ಪಿ ಪ್ರಮಾಣವು ಆರು ವರ್ಷಗಳಲ್ಲಿ 2.46 ಲಕ್ಷ ಕೋಟಿಗೆ ಇಳಿಕೆ ಮತ್ತು ಖಾಸಗಿ ಬ್ಯಾಂಕುಗಳ ಎನ್‌ಪಿಎ ಪ್ರಮಾಣವು 2.02 ಲಕ್ಷ ಕೋಟಿಯಿಂದ 1.26 ಲಕ್ಷ…
ರಾಜ್ಯಸಭೆಯಲ್ಲಿ ಕೇಂದ್ರ ಸಹಕಾರ ಸಚಿವ ಅಮಿತ್ ಷಾ ಮಾಹಿತಿ ನವದೆಹಲಿ: ದೇಶಾದ್ಯಂತ ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗಾಗಿ ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (ಎನ್‌ಸಿಡಿಸಿ) ಒಟ್ಟಾರೆಯಾಗಿ 5,74,090.48 ಕೋಟಿ ರೂ.ಗಳನ್ನು ವಿತರಿಸಿದೆ ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಷಾ ಬುಧವಾರ ರಾಜ್ಯಸಭೆಯಲ್ಲಿ ಮಾಹಿತಿ ನೀಡಿದ್ದಾರೆ. https://chat.whatsapp.com/FCEnlTkAKCC0MGPhXtX4i4 ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅಮಿತ್ ಷಾ, ಸಹಕಾರ ಸಚಿವಾಲಯದ ಅಡಿಯಲ್ಲಿರುವ ಶಾಸನಬದ್ಧ ಸಂಸ್ಥೆಯಾದ ಎನ್‌ಸಿಡಿಸಿ, ವ್ಯಾಪಕ ಶ್ರೇಣಿಯ ಅಧಿಸೂಚಿತ ಸರಕು ಮತ್ತು ಸೇವೆಗಳಲ್ಲಿ ಸಹಕಾರಿ ಅಭಿವೃದ್ಧಿಗೆ ಹಣಕಾಸಿನ ನೆರವು ನೀಡುತ್ತದೆ. ಒಟ್ಟಾರೆಯಾಗಿ 5,74,090.48 ಕೋಟಿ ರೂ.ಗಳನ್ನು ವಿತರಿಸಿದ್ದು ಕಳೆದ ಐದು ವರ್ಷಗಳಲ್ಲಿ 3,96,763 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಕೃಷಿ ಮತ್ತು ಸಂಬಂಧಿತ ಮೂಲಸೌಕರ್ಯಗಳ ರಚನೆ, ಮೌಲ್ಯ ಸರಪಳಿ ಅಭಿವೃದ್ಧಿ ಮತ್ತು ಸಹಕಾರಿ ಸಂಸ್ಥೆಗಳ ಸಾಮರ್ಥ್ಯ ವೃದ್ಧಿಯನ್ನು ನಿಗಮವು ಬೆಂಬಲಿಸುತ್ತಿದ್ದು, ಆಯಾ ವಲಯಗಳಲ್ಲಿ ಸಹಕಾರಿ ಚಳವಳಿಯನ್ನು ಬಲಪಡಿಸಲು ಇದು ಕಾರಣವಾಗುತ್ತದೆ ಎಂದು ಹೇಳಿದರು. ತಂತ್ರಜ್ಞಾನ-ಚಾಲಿತ ಮತ್ತು ಡಿಜಿಟಲ್ ಆಗಿ ಸಕ್ರಿಯಗೊಳಿಸಲಾದ ಸಹಕಾರಿ ಸಂಸ್ಥೆಗಳ ಮೇಲೆ…
ಮಂಗಳೂರು: ಇಲ್ಲಿನ ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಭಾರತ ಸೇನೆಯ ಅಪ್ರತಿಮ ಯೋಧರ ಸಾಹಸ ಮತ್ತು ಬಲಿದಾನಗಳ ಗೌರವ ಸ್ಮರಣೆಯ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮವನ್ನು ಜುಲೈ 25ರಂದು ಶನಿವಾರ ಸಂಜೆ 5.30ಕ್ಕೆ ಮಂಗಳಾದೇವಿಯ ರಾಮಕೃಷ್ಣ ಆಶ್ರಮದ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ಆಯೋಜಿಸಲಾಗಿದೆ. https://chat.whatsapp.com/FCEnlTkAKCC0MGPhXtX4i4 ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜೀ ಮಹಾರಾಜ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಭಾರತೀಯ ಭೂಸೇನೆಯ ನಿವೃತ್ತ ಸೇನಾಧಿಕಾರಿ ಕರ್ನಲ್ ಎನ್.ಎಸ್. ಭಂಡಾರಿ ಕಾರ್ಗಿಲ್ ವಿಜಯಗಾಥೆ ಪ್ರಸ್ತುತಪಡಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕಿ ಭಾರತಿ ಜಿ.ಭಟ್ ಭಾಗವಹಿಸಲಿದ್ದಾರೆ. ಸಂಘದ ಅಧ್ಯಕ್ಷ ಎಂ.ಎಸ್ ಗುರುರಾಜ್, ಉಪಾಧ್ಯಕ್ಷ ಉದಯ ಶಾಸ್ತ್ರಿ, ಸಿಇಒ ಚಿತ್ರಾ ಡಿಸೋಜ ಉಪಸ್ಥಿತರಿರಲಿದ್ದಾರೆ. ನಿವೃತ್ತ ಸೈನಿಕರ, ಗಣ್ಯರ, ದೇಶಭಕ್ತರ ಉಪಸ್ಥಿತಿಯಲ್ಲಿ ಅಮರ ಯೋಧರಿಗೆ ಪುಷ್ಪಾಂಜಲಿ, ಕಾರ್ಗಿಲ್ ಯುದ್ಧವೀರರಿಗೆ ಸನ್ಮಾನ ಹಾಗೂ ಕಾರ್ಗಿಲ್ ವಿಜಯದ ಕುರಿತಾದ ಸಾಕ್ಷ್ಯಚಿತ್ರ ಪ್ರದರ್ಶನ ಮಾಡಲಾಗುವುದು ಎಂದು ಪ್ರಕಟಣೆ…
ವಿಜಯಪುರದಲ್ಲಿ ಸೌಹಾರ್ದ ಸಹಕಾರ ಸಂಘಗಳ ಸಂಪರ್ಕ ಸಭೆಯಲ್ಲಿ ಜಿ. ನಂಜನ ಗೌಡ ಸಲಹೆ ವಿಜಯಪುರ : ಸೌಹಾರ್ದ ಸಹಕಾರ ಸಂಘಗಳು ಸೌಹಾರ್ದ ಕಾಯ್ದೆಯ ಚೌಕಟ್ಟಿನೊಳಗೆ ಕಾರ್ಯನಿರ್ವಹಿಸುತ್ತ ಸದಸ್ಯರಿಗೆ ಉತ್ತಮ ಸೇವೆ ಒದಗಿಸಿ ಸಂಘಗಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದ ಅಧ್ಯಕ್ಷ ಜಿ. ನಂಜನ ಗೌಡ ಕರೆ ನೀಡಿದರು. https://chat.whatsapp.com/FCEnlTkAKCC0MGPhXtX4i4 ವಿಜಯಪುರದಲ್ಲಿ ಜಿಲ್ಲೆಯ ಸೌಹಾರ್ದ ಸಹಕಾರ ಸಂಘಗಳಿಗಾಗಿ ಆಯೋಜಿಸಲಾಗಿದ್ದ ಸೌಹಾರ್ದ ಸಹಕಾರ ಸಂಘಗಳ ಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು. ಸಹಕಾರ ಸಂಘಗಳ ಪದಾಧಿಕಾರಿಗಳು ಅತ್ಯಂತ ಜವಾಬ್ದಾರಿಯುತ ಸ್ಥಾನದಲ್ಲಿರುತ್ತಾರೆ. ಸಂಘದಿಂದ ನೀಡಲಾದ ಸಾಲಗಳು ಸಕಾಲದಲ್ಲಿ ಮರುಪಾವತಿಯಾಗದಿದ್ದರೆ ಕಾನೂನಿನ ಪ್ರಕಾರ ನಿರ್ದೇಶಕ ಮಂಡಳಿಯ ಜವಾಬ್ದಾರಿ ನಿಶ್ಚಿತವಾಗುತ್ತದೆ. ಆದ್ದರಿಂದ ಪಾರದರ್ಶಕ ಆಡಳಿತ, ಆರ್ಥಿಕ ಶಿಸ್ತು ಹಾಗೂ ಸದಸ್ಯರಿಗೆ ಗುಣಮಟ್ಟದ ಸೇವೆ ನೀಡುವುದು ಅತ್ಯಗತ್ಯ ಎಂದು ಹೇಳಿದರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಸಂಸ್ಥೆಯ ನಿರ್ದೇಶಕ ಸಂಜಯ್ ಬಿ. ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯ ಎಲ್ಲಾ ಸೌಹಾರ್ದ…
ಮಂಗಳೂರು: ಮಂತ್ರಾಲಯದ ಬಳಿ ಮಂಗಳವಾರ ನಸುಕಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರಿನ ಹಾಪ್‌ಕಾಮ್ಸ್ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ (43) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಅವರ ಮೂವರು ಸ್ನೇಹಿತರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. https://chat.whatsapp.com/FCEnlTkAKCC0MGPhXtX4i4 ಮಂಗಳೂರಿನಿಂದ ರವಿ ಶೆಟ್ಟಿಯವರು ತಮ್ಮ ಸ್ನೇಹಿತರಾದ ಪ್ರದೀಪ್ ಆಳ್ವ, ಪುರುಷೋತ್ತಮ ಭಂಡಾರಿ ಮತ್ತು ಸಿಎ ಸುದೇಶ್ ರೈಯವರೊಂದಿಗೆ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಯ ದರ್ಶನಕ್ಕಾಗಿ ಕಾರಿನಲ್ಲಿ ತೆರಳುತ್ತಿದ್ದರು. ಮಂಗಳವಾರ ಮುಂಜಾನೆ ಮಂತ್ರಾಲಯ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು, ರಸ್ತೆ ಬದಿಯ ಡಿವೈಡರ್‌ಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ತೀವ್ರ ರಕ್ತಸ್ರಾವದಿಂದ ರವಿ ಶೆಟ್ಟಿಯವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕಾರಿನಲ್ಲಿದ್ದ ಇತರ ಪ್ರಯಾಣಿಕರಾದ ಪ್ರದೀಪ್ ಆಳ್ವ, ಪುರುಷೋತ್ತಮ ಭಂಡಾರಿ ಹಾಗೂ ಸಿಎ ಸುಧೇಶ್ ರೈ ಅವರಿಗೆ ಗಂಭೀರ ಗಾಯಗಳಾಗಿವೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ತಕ್ಷಣವೇ ಸ್ಪಂದಿಸಿ, ಗಾಯಾಳುಗಳನ್ನು ಕಾರಿನಿಂದ ಹೊರತೆಗೆದಿದ್ದಾರೆ. ಗಾಯಗೊಂಡ ಮೂವರನ್ನು…
ಟೈಬ್ರೇಕರ್‌ನಲ್ಲಿ ಗೆಲುವು ದಾಖಲಿಸಿದ ರಾಜ್ಯದ ಹಿರಿಯ ಸಹಕಾರಿ ನವದೆಹಲಿ: ಕಳೆದ ಶನಿವಾರ ನಡೆದಿದ್ದ ನ್ಯಾಷನಲ್ ಕೋ-ಆಪರೇಟಿವ್ ಯೂನಿಯನ್ ಆಫ್ ಇಂಡಿಯಾ (ಎನ್‌ಸಿಯುಐ) ಚುನಾವಣೆಯಲ್ಲಿ ಕರ್ನಾಟಕ ರಾಜ್ಯದ ಇಬ್ಬರು ಹಿರಿಯ ಸಹಕಾರಿಗಳು ಗೆಲುವು ಸಾಧಿಸಿದ್ದಾರೆ. ಬೆಳಗಾವಿಯ ಹಿರಿಯ ನಾಯಕ ಅಣ್ಣಾಸಾಹೇಬ್ ಜೊಲ್ಲೆ ರಾಜ್ಯಮಟ್ಟದ ಸಹಕಾರಿ ಒಕ್ಕೂಟಗಳು ಮತ್ತು ಸಂಘಗಳ (ಪಶ್ಚಿಮ ಮತ್ತು ದಕ್ಷಿಣ ಭಾರತ) ಕ್ಷೇತ್ರದ ಸ್ಥಾನದಿಂದ ಗೆಲುವು ಸಾಧಿಸಿದರೆ, ಹಿರಿಯ ಸಹಕಾರಿ ಧುರೀಣ ಎಚ್.ಕೆ ಪಾಟೀಲ್ ಜಿದ್ದಾಜಿದ್ದಿನ ಸಮರದಲ್ಲಿ ಟೈಬ್ರೇಕರ್‌ನಲ್ಲಿ ಜಯ ಸಾಧಿಸಿದ್ದಾರೆ. ಚುನಾವಣೆಯಲ್ಲಿ ಸಹಕಾರಿ ಭಾರತಿ ಬೆಂಬಲಿತ ಅಭ್ಯರ್ಥಿಗಳು ಮೇಲುಗೈ ಸಾಧಿಸಿರುವುದು ವಿಶೇಷ. https://chat.whatsapp.com/FCEnlTkAKCC0MGPhXtX4i4 ರಾಷ್ಟ್ರೀಯ ಒಕ್ಕೂಟಗಳ ಕ್ಷೇತ್ರದಲ್ಲಿ ಎನ್‌ಸಿಸಿಎಫ್ ಅಧ್ಯಕ್ಷ ವಿಶಾಲ್ ಸಿಂಗ್ (11 ಮತಗಳು), ಇಫ್ಕೋ ಅಧ್ಯಕ್ಷ ದಿಲೀಪ್ ಸಂಘಾನಿ (10), ನಾಫೆಡ್ ನಿರ್ದೇಶಕ ಮೋಹನ್‌ಬಾಯ್ ಕುಂದರಿಯಾ (9) ಗೆಲುವು ದಾಖಲಿಸಿದರು. ರಾಜ್ಯ ಸಹಕಾರಿ ಸಂಘಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕ್ಷೇತ್ರದಲ್ಲಿ ವಿನಯ್ ಶಾಹಿ ಮತ್ತು ಜೀನಾ ಪೋತ್ಸಂಗ್‌ಬಮ್ ವಿಜಯಿಯಾದರು. ಬಿಹಾರ ರಾಜ್ಯ ಸಹಕಾರಿ ಒಕ್ಕೂಟದ ಅಧ್ಯಕ್ಷರಾಗಿರುವ…
ಮಂಗಳೂರು: ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ ಬೆಂಗಳೂರು ಮತ್ತು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಂಗಳೂರು ಇದರ ಸಮನ್ವಯದಲ್ಲಿ ನಡೆಸಲ್ಪಡುವ ಸಹಕಾರ ನಿರ್ವಹಣೆಯಲ್ಲಿ ಉನ್ನತ ಡಿಪ್ಲೊಮಾ ಇದರ 9ನೇ ಬ್ಯಾಚ್ ಹಾಗೂ 74 ಮತ್ತು 75ನೇ ಅಧಿವೇಶನದ ಉದ್ಘಾಟನಾ ಸಮಾರಂಭ ಭಾನುವಾರದಂದು ಪಡೀಲ್‌ನ ಆತ್ಮಶಕ್ತಿ ಸೌಧದಲ್ಲಿ ಜರುಗಿತು. https://chat.whatsapp.com/FCEnlTkAKCC0MGPhXtX4i4 ಶಿಕ್ಷಣಾರ್ಥಿಗಳಿಗೆ ಪಠ್ಯಪುಸ್ತಕ ವಿತರಿಸುವ ಮುಖಾಂತರ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಾಯಿತು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಪ್ರಾಸ್ತಾವಿಕ ಮಾತನಾಡಿ ನವದೆಹಲಿಯ ನ್ಯಾಷನಲ್ ಕೌನ್ಸಿಲ್ ಫಾರ್ ಕೋ-ಆಪರೇಟಿವ್ ಟ್ರೇನಿಂಗ್ (ಎನ್.ಸಿ.ಸಿ.ಟಿ) ಇದರ ಅಂಗಸಂಸ್ಥೆ ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ (ಆರ್.ಐ.ಸಿ.ಎಂ) ಬೆಂಗಳೂರು, ಇವರಿಂದ ನಡೆಸಲ್ಪಡುವ ಸಹಕಾರ ನಿರ್ವಹಣೆಯಲ್ಲಿ ಉನ್ನತ ಡಿಪ್ಲೊಮಾ ತರಬೇತಿಯನ್ನು ಕಳೆದ ಹತ್ತು ವರ್ಷಗಳಿಂದ ಮಂಗಳೂರನ್ನು ಕೇಂದ್ರೀಕೃತವಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಹಭಾಗಿತ್ವದಲ್ಲಿ ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಯ ಸಹಕಾರಿಗಳಿಗೆ ನೆರವಾಗುವ ನಿಟ್ಟಿನಲ್ಲಿ ನಿರಂತರವಾಗಿ ನಡೆಸುತ್ತ ಬರಲಾಗುತ್ತಿದೆ. ಸಹಕಾರ ಸಂಘದ ಸಿಬ್ಬಂದಿ ನೇಮಕಾತಿ…
