Author: admin
ಮಂಗಳೂರು: ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ 20ನೇ ಶಾಖೆ ಕಿನ್ನಿಗೋಳಿಯಲ್ಲಿ ಆಗಸ್ಟ್ 28ರಂದು ಕಿನ್ನಿಗೋಳಿ ಬಸ್‌ಸ್ಟ್ಯಾಂಡ್ ಬಳಿಯ ದುರ್ಗಾದಯಾ ಬಿಲ್ಡಿಂಗ್‌ನಲ್ಲಿ ಬೆಳಗ್ಗೆ 10.30ಕ್ಕೆ ಉದ್ಘಾಟನೆಯಾಗಲಿದೆ. ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ. ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತದ ಗೌರವ ಮಾರ್ಗದರ್ಶಕಿ, ಸಾಧ್ವಿ ಶ್ರೀ ಮಾತಾನಂದಮಯೀ ದಿವ್ಯ ಉಪಸ್ಥಿತಿ ವಹಿಸುವರು. ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತದ ಅಧ್ಯಕ್ಷ ಸಹಕಾರ ರತ್ನ ಲಯನ್ ಎ.ಸುರೇಶ್ ರೈ ಅಧ್ಯಕ್ಷತೆ ವಹಿಸುವರು. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಕೆ.ಲಕ್ಷ್ಮೀನಾರಾಯಣ ಆಸ್ರಣ್ಣ, ಶಾಸಕ ಉಮಾನಾಥ ಕೋಟ್ಯಾನ್, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕಿ ಭಾರತಿ ಜಿ.ಭಟ್, ದುರ್ಗಾದಯ ಕಾಂಪ್ಲೆಕ್ಸ್‌ನ ಮಾಲಕ ಕೆ.ಸೀತಾರಾಮ್ ಶೆಟ್ಟಿ, ಯುಗಪುರುಷದ ಸಂಪಾದಕ ಭುವನಾಭಿರಾಮ ಉಡುಪ, ಗುತ್ತಿಗೆದಾರ, ಕಿನ್ನಿಗೋಳಿ ಬಂಟರ ಸಂಘದ ಮಾಜಿ ಅಧ್ಯಕ್ಷ ಸಂತೋಷ್ ಹೆಗ್ಡೆ, ಕಟೀಲು ಶ್ರೀ…
ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ನೂತನ ಕಟ್ಟಡ ಕೆ.ಸುಬ್ಬಣ್ಣಯ್ಯ ಸ್ಮಾರಕ ಕೋಟೆಕಾರು ಸಹಕಾರ ಸೌಧ ಉದ್ಘಾಟನಾ ಸಮಾರಂಭ ಸೆಪ್ಟೆಂಬರ್ 15ರಂದು ಕೋಟೆಕಾರಿನಲ್ಲಿ ನಡೆಯಲಿದೆ. ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರಕುಮಾರ್ ಉದ್ಘಾಟಿಸುವರು. ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಕೆವಿಎಸ್‌ಎಸ್ ಕನ್ವೆನ್ಶನ್ ಹಾಲ್ ಉದ್ಘಾಟಿಸುವರು. ಸಂಸದ ಕ್ಯಾ.ಬ್ರಿಜೇಶ್ ಚೌಟ ದೀಪ ಪ್ರಜ್ವಲನೆ ಮಾಡುವರು. ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರುಗುತ್ತು ಅಧ್ಯಕ್ಷತೆ ವಹಿಸುವರು. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK ಸಚಿವ ದಿನೇಶ್ ಗುಂಡೂರಾವ್ ಉಪಸ್ಥಿತರಿರುವರು. ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಬಿ.ಎಂ.ಫಾರೂಕ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸದಾಶಿವ ಉಳ್ಳಾಲ್, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಮತಾ ಡಿ.ಎಸ್.ಗಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಹಕಾರ ಸಂಘಗಳ ದ.ಕ. ಜಿಲ್ಲಾ ಉಪನಿಬಂಧಕ ಎಚ್.ಎನ್.ರಮೇಶ್, ಸಹಾಯಕ ಉಪನಿಬಂಧಕ ಸುಧೀರ್ ಕುಮಾರ್ ಜೆ, ಮಂಗಳೂರು ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘದ ಅಧ್ಯಕ್ಷ ಮೋನಪ್ಪ…
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ಮಂಗಳೂರು ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 170ನೇ ಜಯಂತಿ ಆಚರಣೆಯನ್ನು ಸಂಘದ ಪ್ರಧಾನ ಕಛೇರಿಯಲ್ಲಿ ಮಂಗಳವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು ಧಾರ್ಮಿಕ ಚಿಂತಕ ಹಾಗೂ ಸಂಘದ ಹಿರಿಯ ಸದಸ್ಯ ಮಾಧವ ಸುವರ್ಣ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಸಿಬ್ಬಂದಿ ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು. ಪುರೋಹಿತರಾದ ರಾಜೇಶ್ ಶಾಂತಿ ಗುರುಪೂಜೆ ನಡೆಸಿದರು. ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್, ಉಪಾಧ್ಯಕ್ಷ ನೇಮಿರಾಜ್ ಪಿ, ನಿರ್ದೇಶಕರಾದ ಜಿ.ಪರಮೇಶ್ವರ್ ಪೂಜಾರಿ, ಸೀತಾರಾಮ್ ಎನ್., ರಮಾನಾಥ್ ಸನಿಲ್, ಗೋಪಾಲ್ ಎಮ್, ಉಮಾವತಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಸಲಹೆಗಾರರಾದ ಅಶೋಕ್ ಕುಮಾರ್, ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷ ವಾಮನ್ ಕೆ ಹಾಗೂ ಸಂಘದ ಸದಸ್ಯರು ಹಾಗೂ ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್:…
ಅಮೃತಸರದಲ್ಲಿ ಆಯೋಜನೆ, ದತ್ತಾತ್ರೇಯ ಹೊಸಬಾಳೆ ಉದ್ಘಾಟನೆ ನವದೆಹಲಿ: ಸಹಕಾರ ಭಾರತಿಯ ಎಂಟನೇ ರಾಷ್ಟ್ರಿಯ ಅಧಿವೇಶನ ಪಂಜಾಬ್‌ನ ಅಮೃತಸರದಲ್ಲಿ ಡಿಸೆಂಬರ್ 6ರಿಂದ 8ರ ತನಕ ನಡೆಯಲಿದೆ. ಏಳನೇ ಅಧಿವೇಶನ ಲಖ್ನೋದಲ್ಲಿ 2021ರಲ್ಲಿ ನಡೆದಿತು. ಎಂಟನೇ ಅಧಿವೇಶನ ಡಿ.6ರ ಬೆಳಗ್ಗೆ ಆರಂಭವಾಗಲಿದ್ದು, 7ರಂದು ಆರೆಸ್ಸೆಸ್ ಸಹ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಕಾರ್ಯಕ್ರಮ ಉದ್ಘಾಟಿಸಿ ಮುಖ್ಯ ಭಾಷಣ ಮಾಡಲಿದ್ದಾರೆ. ಅಧಿವೇಶನದಲ್ಲಿ ಆಹ್ವಾನಿತ ಸದಸ್ಯರಿಗೆ ಮಾತ್ರ ಭಾಗವಹಿಸಲಿದ್ದಾರೆ. ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರು, ಪ್ರಾಂತ ಕಾರ್ಯಕಾರಿ ಸಮಿತಿ ಸದಸ್ಯರು, ಜಿಲ್ಲಾ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆ ಇದೆ. ಗೋಲ್ಡನ್ ಸಿಟಿ ಎಂದು ಕರೆಸಿಕೊಂಡಿರುವ ಅಮೃತಸರ ಹಲವಾರು ಐತಿಹಾಸಿಕ ಘಟನೆಗಳಿಗೆ ಸಾಕ್ಷಿಯಾಗಿದ್ದು ಜಲಿಯನ್‌ವಾಲಾ ಭಾಗ್ ದುರಂತ ಈ ಪ್ರದೇಶದಲ್ಲೇ ನಡೆದಿತ್ತು. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆಗಾಗಿ ಮೇಲ್ ಮಾಡಿ: ಇಮೇಲ್: sahakaraspandana@gmail.com ಮಾಹಿತಿಗೆ: 9901319694
ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನಿಯಮಿತ ಇದರ ಅಂಗವಾಗಿ ಆಗಸ್ಟ್ 25ರಂದು ಭಾನುವಾರ ಬೆಳಗ್ಗೆ 9.30ರಿಂದ ಬ್ಯಾಂಕಿನ ಸಭಾಂಗಣದಲ್ಲಿ ಭತ್ತದ ಕೃಷಿಗೆ ಪ್ರೋತ್ಸಾಹ ಧನ ವಿತರಣೆ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ. ಗೆಜ್ಜೆಗಿರಿ ದೇಯಿ ಬೈದೆತಿ ಕೋಟಿ ಚೆನ್ನಯರ ಮೂಲಕ್ಷೇತ್ರದ ಮೊಕ್ತೇಸರ ಚಂದ್ರಶೇಖರ್ ಉಚ್ಚಿಲ್ ಕಾರ್ಯಕ್ರಮ ಉದ್ಘಾಟಿಸುವರು. ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರುಗುತ್ತು ಅಧ್ಯಕ್ಷತೆ ವಹಿಸುವರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಾಜಿ ನಿರ್ದೇಶಕ ರಮೇಶ್ ಶೆಟ್ಟಿ ಬೋಳಿಯಾರ್, ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನ ಮಾಜಿ ಅಧ್ಯಕ್ಷರಾದ ಎಂ.ಎ.ಮಹಮ್ಮದ್ ಬಶೀರ್, ಹರ್ಷರಾಜ್ ಮುದ್ಯ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ವಿನಯ ಕುಮಾರ್ ನಾಯಕ್, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಯಾದವ ಶೆಟ್ಟಿ, ಕೆಥೊಲಿಕ್ ಸಭಾ ಮಂಗಳೂರಿನ ಅಧ್ಯಕ್ಷ ಆಲ್ವಿನ್ ಡಿಸೋಜ, ಸೋಮೇಶ್ವರ ಪುರಸಭೆ ಸದಸ್ಯೆ ಲತಾ, ಸೋಮೇಶ್ವರ…
336 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಮಂಗಳೂರು: ಸಂತೋಷದ ಬದುಕು ಶಿಕ್ಷಣದ ಮೂಲ ಉದ್ದೇಶವೇ ಹೊರತು ಉತ್ತಮ ಅಂಕಗಳಿಕೆಯೇ ಶಿಕ್ಷಣದ ಮೂಲ ಉದ್ದೇಶ ಅಲ್ಲ ಎಂದು ಎಂದು ವಿಶ್ವಕರ್ಮ ಕಲಾ ಪರಿಷತ್ ಮಂಗಳೂರು ಇದರ ಅಧ್ಯಕ್ಷ ಎಸ್.ಪಿ.ಗುರುದಾಸ್ ಹೇಳಿದರು. ಎಸ್.ಕೆ. ಗೋಲ್ಡ್‌ಸ್ಮಿತ್ ಇಂಡಸ್ಟ್ರಿಯಲ್ ಕೋಆಪರೇಟಿವ್ ಸೊಸೈಟಿ ಮಂಗಳೂರು ಇದರ ವಜ್ರಮಹೋತ್ಸವದ ಪ್ರಯುಕ್ತ ಶರವು ಸಮೀಪದ ಬಾಳಂಭಟ್ ಹಾಲ್‌ನಲ್ಲಿ ನಡೆದ ವಿದ್ಯಾರ್ಥಿವೇತನ ವಿತರಣಾ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು. 1964ರಲ್ಲಿ ಪಾಲ್ಕೆ ಬಾಬುರಾಯ್ ಆಚಾರ್ಯರವರ ಕನಸಿನ ಸಂಸ್ಥೆ ಎಸ್.ಕೆ. ಗೋಲ್ಡ್‌ಸ್ಮಿತ್ ಸಹಕಾರಿ ವಜ್ರಮಹೋತ್ಸವ ಆಚರಿಸುತ್ತಿರುವುದರ ಹಿಂದೆ ಈ ಸಮಾಜ ಶಿಕ್ಷಣ ಹೊಂದಬೇಕು, ಶಿಕ್ಷಣದ ಮೂಲಕ ಸಾಮಾಜಿಕ ಅಭಿವೃದ್ದಿಯಾಗಬೇಕು ಎಂಬ ಕನಸು ಕಂಡಿದ್ದರು. 60ರ ಸಂಭ್ರಮದಲ್ಲಿರುವ ಈ ಸಂಸ್ಥೆ ಯಾವುದೇ ಫಲಾಪೇಕ್ಷೆ ಇಲ್ಲದೆ 40 ಸಮಾಜಮುಖಿ ಕಾರ್ಯಕ್ರಮಗಳನ್ನು ಯಾವುದೇ ಪ್ರಚಾರದ ನಿರೀಕ್ಷೆಯಿಲ್ಲದೆ ಹಮ್ಮಿಕೊಂಡಿರುವುದು ವಿಶೇಷ. ನಾವು ಸಮಾಜದ ಒಂದು ಭಾಗ, ಸಮಾಜವಿಲ್ಲದಿದ್ದರೆ ನಮ್ಮ ಅಸ್ತಿತ್ವವೇ ಇಲ್ಲ. ಈ ನಿಟ್ಟಿನಲ್ಲಿ ವಜ್ರಮಹೋತ್ಸವದ ಪ್ರಯುಕ್ತ ಸಮಾಜದ 350ಕ್ಕೂ…
ಗೋಕಾಕ್: ಬೆಳಗಾವಿ ಜಿಲ್ಲೆಯ ಗೋಕಾಕದ ಶ್ರೀ ವಿಶ್ವಕರ್ಮ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತದ 23ನೇ ವರ್ಷದ ಶ್ರೀ ಮಹಾಲಕ್ಷ್ಮೀ ಪೂಜೆ ಹಾಗೂ ಶ್ರೀ ಮಹಾಸರಸ್ವತಿ ಪೂಜೆ ಆಗಸ್ಟ್ 18ರಂದು ಗೋಕಾಕದ ರವಿವಾರಪೇಟೆಯ ಕಡಲಗಿಕರ ಕಾಂಪ್ಲೆಕ್ಸ್‌ನಲ್ಲಿರುವ ಸಂಘದ ಕಚೇರಿಯಲ್ಲಿ ನಡೆಯಲಿದೆ. ಬೆಳಗ್ಗೆ 9.30ಕ್ಕೆ ಪೂಜಾ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK ಸಂಘದ ಆಡಳಿತ ಮಂಡಳಿ: ವಿನಾಯಕ ಎಸ್.ಚಿಪ್ಪಲಕಟ್ಟಿ (ಅಧ್ಯಕ್ಷರು), ವಿನೋದ ಎಸ್. ಡೊಂಗರೆ (ಉಪಾಧ್ಯಕ್ಷರು), ಅರವಿಂದ ಎಸ್. ಬಡಿಗೇರ (ಕಾರ್ಯದರ್ಶಿ), ನಿರ್ದೇಶಕರು: ಅರುಣ ಎಂ.ಸಾಲಳ್ಳಿ, ಶ್ರೀಕಾಂತ ಎಂ.ಪತ್ತಾರ, ಮಹಾದೇವ ಎ.ಪತ್ತಾರ, ದತ್ತು ಜಿ.ಭೂಸಾರಿ, ಪ್ರದೀಪ ಜೆ.ಮೆಳವಂಕಿ, ಸುರೇಶ ವಿ.ಪತ್ತಾರ, ಬಸಪ್ಪಾ ಐ.ಬಡಿಗೇರ, ಲತಾ ಎಸ್.ಪವಾರ, ಬಿ.ಎಂ.ಪುಷ್ಪಾ, ಸುನೀಲ ಎ.ಹಿರಗಣ್ಣವರ, ಗುರುರಾಜ ಆರ್.ನಿಡೋಣಿ, ಶ್ರೀಕಾಂತ ಎ.ಮೋಹರೆ. ಸಲಹಾ ಮಂಡಳಿ ಸದಸ್ಯರು: ಸಂತೋಷ ಪಿ.ಮುಗಳಿಹಾಳ, ಶಿವಾನಂದ ಎಸ್.ಪತ್ತಾರ. ಕಾನೂನು ಸಲಹೆಗಾರರು: ಬಿ.ಎಸ್.ಕುಂಬಾರ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆಗಾಗಿ ಮೇಲ್ ಮಾಡಿ: ಇಮೇಲ್: sahakaraspandana@gmail.com ಮಾಹಿತಿಗೆ: 9901319694
ಪಾವಂಜೆ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಶಶೀಂದ್ರ ಕುಮಾರ್ ಶ್ಲಾಘನೆ ಹಳೆಯಂಗಡಿ: ಇಲ್ಲಿನ ಪ್ರಿಯದರ್ಶಿನಿ ಕೋ ಅಪರೇಟಿವ್ ಸೊಸೈಟಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ಸೊಸೈಟಿ ಉಪಯೋಗಕ್ಕೆ ಖರೀದಿಸಿರುವ ನೂತನ ವಾಹನದ ಲೋಕಾರ್ಪಣೆ ಕಾರ್ಯಕ್ರಮ ಸೊಸೈಟಿ ಆವರಣದಲ್ಲಿ ಗುರುವಾರ ನಡೆಯಿತು. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಶಶೀಂದ್ರ ಕುಮಾರ್ ನೂತನ ವಾಹನ ಲೋಕಾರ್ಪಣೆಗೊಳಿಸಿ ಮಾತನಾಡಿ, ಹಳೆಯಂಗಡಿಯಂತಹ ಗ್ರಾಮೀಣ ಪ್ರದೇಶದಲ್ಲಿ ಸೊಸೈಟಿಯು ಗ್ರಾಹಕರ ಜತೆ ಉತ್ತಮ ಒಡನಾಟದ ಜತೆಗೆ ಅಸಹಾಯಕರಿಗೆ ಸಹಾಯಹಸ್ತ ನೀಡುವ ಸಹಿತ ಅನೇಕ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ಇಂಥ ಸಮಾಜಮುಖಿ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿ ಎಂದು ಹಾರೈಸಿದರು. ಸೊಸೈಟಿ ಅಧ್ಯಕ್ಷ ಎಚ್.ವಸಂತ್ ಬೆರ್ನಾಡ್ ಅಧ್ಯಕ್ಷತೆ ವಹಿಸಿದ್ದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಸೊಸೈಟಿ ಉಪಾಧ್ಯಕ್ಷೆ ಪ್ರತಿಭಾ ಕುಳಾಯಿ, ನಿರ್ದೇಶಕರಾದ ಧನಂಜಯ ಮಟ್ಟು, ಜೆ.ಕೃಷ್ಣ ಕೋಟ್ಯಾನ್, ಗಣೇಶ್ ಅಮೀನ್ ಸಂಕಮಾರ್, ಉಮಾನಾಥ ಶೆಟ್ಟಿಗಾರ್, ಮಿರ್ಜಾ ಅಹಮದ್, ವಿಜಯ ಸನಿಲ್, ಹರೀಶ್ ಪುತ್ರನ್, ನವೀನ್…
ಮಂಗಳೂರು: ಜಿಲ್ಲೆಯ ಪ್ರತಿಷ್ಠಿತ ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಎರಡನೆಯ ಅವಧಿಗೆ [2024 – 29] ಅಧ್ಯಕ್ಷರಾಗಿ ಎಂ.ಎಸ್.ಗುರುರಾಜ್ ಅವಿರೋಧವಾಗಿ ಪುನರಾಯ್ಕೆಯಾದರು. ಸಹಕಾರಿಯ ಪ್ರಧಾನ ಕಚೇರಿಯಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಹೊಸದಾಗಿ ಆಯ್ಕೆಯಾಗಿದ್ದ ನಿರ್ದೇಶಕರು ಗುರುರಾಜ್ ಅವರನ್ನು ಅಧ್ಯಕ್ಷರನ್ನಾಗಿಯೂ, ಉಪಾಧ್ಯಕ್ಷರಾಗಿ ಉದಯ ವಿ. ಶಾಸ್ತ್ರಿಯವರನ್ನೂ ಆಯ್ಕೆ ಮಾಡಿದರು. ಮೊದಲ ಅವಧಿಯಲ್ಲೇ ಸಹಕಾರಿಯ ಅಭೂತಪೂರ್ವ ಸಾಧನೆಗೆ ಕಾರಣೀಭೂತರಾದ ಅದರ ಅಧ್ಯಕ್ಷರು ಹಾಗೂ ಸ್ಥಾಪಕರೂ ಆಗಿದ್ದ ಗುರುರಾಜ್ ಅವರಿಗೆ ಎಲ್ಲಾ ನಿರ್ದೇಶಕರೂ ಗೌರವ ಸಲ್ಲಿಸಿದರು. ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಉದಯ ವಿ.ಶಾಸ್ತ್ರಿಯವರರನ್ನೂ ಗೌರವಿಸಲಾಯಿತು. https://translate.google.com/website?sl=en&tl=kn&hl=kn&client=srp&u=https://chat.whatsapp.com/KMsVn4jxIFJ7RG1gTWHCLK ಶ್ರೀಶಾ ಸಹಕಾರಿ ಸಂಸ್ಥೆಯು ಸ್ಥಾಪನೆಗೊಂಡ ಕೇವಲ 5 ವರ್ಷಗಳಲ್ಲಿ 5 ಶಾಖೆಗಳನ್ನು ತೆರೆಯಲಾಗಿದ್ದು ಎಲ್ಲಾ ಶಾಖೆಗಳೂ ಲಾಭ ಗಳಿಸುತ್ತಿವೆ ಹಾಗೂ ತನ್ನ ಸದಸ್ಯರಿಗೆ ನಿರಂತರ ಡಿವಿಡೆಂಡ್ ನೀಡುತ್ತಿದೆ. ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುವ ಮೂಲಕ ಸಾಮಾಜಿಕ ಬದ್ಧತೆಯನ್ನೂ ಮೆರೆಯುತ್ತಿದೆ. ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು ಸಹಸ್ರಾರು ಜನ ಇದರ ಲಾಭ ಪಡೆಯುತ್ತಿದ್ದಾರೆ. ಸಹಕಾರ…
ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘವು 2023-24ನೇ ಸಾಲಿನಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ವಾರ್ಷಿಕ ಮಹಾಸಭೆಯಲ್ಲಿ ಪುರಸ್ಕಾರ ನೀಡಿ ಗೌರವಿಸಿದೆ. ಎಸ್‌ಸಿಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ..ಎನ್.ರಾಜೇಂದ್ರ ಕುಮಾರ್ ಅವರು, ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರುಗುತ್ತು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರ್ಷವರ್ಧನ ಉಳ್ಳಾಲ ಅವರಿಗೆ ಪುರಸ್ಕಾರ ಪ್ರದಾನ ಮಾಡಿ ಗೌರವಿಸಿದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆಗಾಗಿ ಮೇಲ್ ಮಾಡಿ: ಇಮೇಲ್: sahakaraspandana@gmail.com ಮಾಹಿತಿಗೆ: 9901319694
