Author: admin

ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಗಿಡ ನೆಡುವ ಕಾರ್ಯಕ್ರಮದಲ್ಲಿ ಭಾರತಿ ಜಿ.ಭಟ್‌ ಆಶಯ ಮಂಗಳೂರು: ಐದು ವರ್ಷಗಳ ಹಿಂದೆ ಕೃಷಿ ಇಲಾಖೆಯ ಅಧೀನದಲ್ಲಿದ್ದ ಸಹಕಾರ ಕ್ಷೇತ್ರವು ಈಗ ಕೇಂದ್ರದಲ್ಲಿ ಪ್ರತ್ಯೇಕ ಸಹಕಾರ ಸಚಿವಾಲಯದ ಅಧೀನಕ್ಕೆ ಬಂದಿದೆ. ಸಮರ್ಥ ಸಹಕಾರ ಸಚಿವರೂ ಸಿಕ್ಕಿದ್ದಾರೆ. ಎಲ್ಲ ವಲಯಗಳಲ್ಲೂ ಸಹಕಾರ ಕ್ಷೇತ್ರದ ಬೇರು ಹರಡಿಸಲು ಇದು ಸಕಾಲ ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕರಾದ ಭಾರತಿ ಜಿ.ಭಟ್‌ ಅಭಿಪ್ರಾಯಪಟ್ಟರು. https://chat.whatsapp.com/FCEnlTkAKCC0MGPhXtX4i4 ಕೇಂದ್ರ ಸಹಕಾರ ಸಚಿವಾಲಯಕ್ಕೆ ಐದು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಆಯೋಜಿಸಲಾಗುತ್ತಿರುವ ವಿಶೇಷ ಸಹಕಾರ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಆಶ್ರಯದಲ್ಲಿ ಶುಕ್ರವಾರ ಮಂಗಳೂರಿನ ಕಾಪಿಕಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಗಿಡ ನೆಡುವ ಕಾರ್ಯಕ್ರಮದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೇಂದ್ರ ಸಹಕಾರ ಸಚಿವಾಲಯಕ್ಕೆ ಐದು ವರ್ಷ ತುಂಬುತ್ತಿರುವ ವಿಶೇಷ ಸಂದರ್ಭದಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಸಹಕಾರ ಕ್ಷೇತ್ರದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಆರೋಗ್ಯ,…

Read More

ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕ ಸಂಜಯ ಪಾಟೀಲ ಸಲಹೆ ವಿಜಯಪುರ: ಕೇಂದ್ರ ಸಹಕಾರ ಸಚಿವಾಲಯ ಸ್ಥಾಪನೆಯಾಗಿ ಐದು ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ‘ಸಹಕಾರದಿಂದ ಸಮೃದ್ಧಿ’ ಎಂಬ ಧ್ಯೇಯವಾಕ್ಯದೊಂದಿಗೆ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ., ಬೆಂಗಳೂರು, ವಿಜಯಪುರ ಸೌಹಾರ್ದ ಸಹಕಾರಿಗಳ ಒಕ್ಕೂಟ ನಿ., ವಿಜಯಪುರ ಹಾಗೂ ಶಾಂತಿನಿಕೇತನ ಶಿಕ್ಷಣ ಸಂಸ್ಥೆ, ವಿಜಯಪುರ ಇವರ ಸಹಯೋಗದೊಂದಿಗೆ ಬುಧವಾರ ಸಹಕಾರ ವಿಚಾರ ಸಂಕಿರಣ ಕಾರ್ಯಕ್ರಮವನ್ನು ವಿಜಯಪುರದ ಶಾಂತಿನಿಕೇತನ ಕಾಲೇಜು ಭವನದಲ್ಲಿ ಆಯೋಜಿಸಲಾಗಿತ್ತು. https://chat.whatsapp.com/FCEnlTkAKCC0MGPhXtX4i4 ಶಾಂತಿನಿಕೇತನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುರೇಶ ಬಿರಾದಾರ ಕಾರ್ಯಕ್ರಮ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಸಂಯುಕ್ತ ಸಹಕಾರಿಯ ನಿರ್ದೇಶಕರಾದ ಸಂಜಯ ಬ.ಪಾಟೀಲ ಮಾತನಾಡಿ, ಯುವಕರು, ಮಹಿಳೆಯರು ಸಹಕಾರಿ ಕ್ಷೇತ್ರದಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಂಡು ವಿಕಸಿತ ಭಾರತ ಆಗಲು ಕೈಜೋಡಿಸಬೇಕು ಎಂದು ಸಲಹೆ ನೀಡಿದರು. ಮುಖ್ಯ ಅತಿಥಿಗಳಾಗಿ ವಿಜಯಪುರ ಸೌಹಾರ್ದ ಸಹಕಾರಿಗಳ ಒಕ್ಕೂಟ ನಿ., ವಿಜಯಪುರ, ಇದರ ಉಪಾಧ್ಯಕ್ಷರಾದ ಚಂದ್ರಶೇಖರ ಕವಟಗಿ, ಒಕ್ಕೂಟದ ನಿರ್ದೇಶಕರಾದ ಸಿದ್ಧು ಮಲ್ಲಿಕಾರ್ಜುನ ಮಠ,…

Read More

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಪ್ರತಿಭಾವಂತ ವಿಧ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. https://chat.whatsapp.com/FCEnlTkAKCC0MGPhXtX4i4 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹಾಗೂ 2025ನೇ ಸಾಲಿನ ಅಂತಿಮ ಪದವಿಯಲ್ಲಿ ಶೇ.90 ಮೇಲ್ಪಟ್ಟು ಅಂಕ ಗಳಿಸಿದ ಸಂಘದ ಸದ್ಯಸರ ಮಕ್ಕಳು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಪ್ರತಿಭಾ ಪುರಸ್ಕಾರದ ಅರ್ಜಿಗಳು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಎಲ್ಲಾ ಶಾಖೆಗಳಲ್ಲಿ ಲಭ್ಯವಿದ್ದು, ಜುಲೈ 15ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯುವಂತೆ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com

Read More

ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ತರಬೇತಿ ಕಾರ್ಯಾಗಾರದಲ್ಲಿ ಬೆಳಪು ಡಾ.ದೇವಿಪ್ರಸಾದ್ ಶೆಟ್ಟಿ ಅಭಿಪ್ರಾಯ ಮೂಲ್ಕಿ: ಕೇಂದ್ರ ಸಹಕಾರ ಸಚಿವಾಲಯಕ್ಕೆ ಐದು ವರ್ಷ ಪೂರ್ಣಗೊಂಡ ಪ್ರಯುಕ್ತ ಆಯೋಜಿಸಲಾಗುತ್ತಿರುವ ವಿಶೇಷ ಸಹಕಾರ ಸಪ್ತಾಹದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ ಇಲಾಖೆಯ ನೇತೃತ್ವದಲ್ಲಿ ಹಳೆಯಂಗಡಿ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿ ಅಶ್ರಯದಲ್ಲಿ ಮೂಲ್ಕಿ ತಾಲೂಕು ಮಟ್ಟದ ಸಹಕಾರ ಸಂಘಗಳ ನಿರ್ದೇಶಕರು ಮತ್ತು ಸಿಬ್ಬಂದಿಗಳಿಗೆ ಬುಧವಾರ ಸಹಕಾರ ಸಂಘಗಳ ನಿರ್ವಹಣೆಯಲ್ಲಿ ನಮ್ಮ ಪಾತ್ರ ಎಂಬ ವಿಷಯದ ಬಗ್ಗೆ ತರಬೇತಿ ಕಾರ್ಯಾಗಾರ ಹಳೆಯಂಗಡಿಯ ಹರಿಓಂ ಸಭಾಂಗಣದಲ್ಲಿ ನಡೆಯಿತು. https://chat.whatsapp.com/FCEnlTkAKCC0MGPhXtX4i4 ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಹಾಗೂ ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾದ ಡಾ.ಐಕಳಬಾವ ದೇವಿಪ್ರಸಾದ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಾಜಿ ಪ್ರಧಾನಿ ಜವಾಹರಲಾಲ್‌ ನೆಹರು ಅವರಿಂದ ಆರಂಭಗೊಂಡ ಸಹಕಾರಿ ಚಳವಳಿ ಅವಿಭಜಿತ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಮೊಳಹಳ್ಳಿ ಶಿವರಾಯರು ಮತ್ತು ಕಾರ್ನಾಡ್ ಶಿವರಾಯರು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಬಹಳಷ್ಟು ಕೊಡುಗೆ…

Read More

ಮೈಸೂರು: ಕೇಂದ್ರ ಸಹಕಾರ ಸಚಿವಾಲಯ ಸ್ಥಾಪನೆಯ ಐದು ವರ್ಷಗಳನ್ನು ಪೂರ್ಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಆಯೋಜಿಸಿರುವ ವಿಶೇಷ ಸಹಕಾರ ಸಪ್ತಾಹ ಅಂಗವಾಗಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಮತ್ತು ಮೈಸೂರು ಜಿಲ್ಲಾ ಸೌಹಾರ್ದ ಸಹಕಾರಿಗಳಿಂದ ಗಿಡ ನೆಡುವ ಕಾರ್ಯಕ್ರಮ ಮಂಗಳವಾರ ಮೈಸೂರಿನ ಲಕ್ಷ್ಮೀಪುರಂ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿತ್ತು. https://chat.whatsapp.com/FCEnlTkAKCC0MGPhXtX4i4 ಗಿಡ ನೆಡುವ ಅಭಿಯಾನಕ್ಕೆ ಶಿಕ್ಷಣ ಸಲಹಾ ಸಮಿತಿ ಸದಸ್ಯ ಹಾಗೂ ಮಾಜಿ ಅಧ್ಯಕ್ಷ ಹೆಚ್.ವಿ.ರಾಜೀವ್ ಚಾಲನೆ ನೀಡಿದರು. ಅಧ್ಯಕ್ಷತೆಯನ್ನು ವೃತ್ತಿಪರ ನಿರ್ದೇಶಕರಾದ ಬಿ.ಮಹದೇವಸ್ವಾಮಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮೈಸೂರು, ಮಂಡ್ಯ ಮತ್ತು ಕೊಡಗು ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟದ ಅಧ್ಯಕ್ಷರಾದ ಎಸ್.ಆರ್. ನಾರಾಯಣ ರಾವ್, ಸಹಕಾರ ಸಂಘಗಳ ಸಹಾಯಕ ನಿಬಂಧಕ ಮನೋಜ್‌ಕುಮಾರ್‌ ಎಸ್‌ ಹೆಚ್‌ ಹಾಗೂ ಲಕ್ಷ್ಮೀಪುರಂ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಮೀನಾಕುಮಾರಿ ಭಾಗವಹಿಸಿದ್ದರು. ಪ್ರಾಂತೀಯ ಅಧಿಕಾರಿ ಗುರುಪ್ರಸಾದ್ ಬಂಗೇರ ಪ್ರಾಸ್ತಾವಿಕ ಮಾತನಾಡಿದರು. ಸೌಹಾರ್ದ ಅಭಿವೃದ್ಧಿ ಅಧಿಕಾರಿ ಸುರೇಶ ಆರ್ ಎಸ್ ಸ್ವಾಗತಿಸಿ, ವಂದಿಸಿದರು. ಒಕ್ಕೂಟದ ಆಡಳಿತ ಮಂಡಳಿ ಸದಸ್ಯರು, ಮೈಸೂರು ಜಿಲ್ಲೆಯ…

Read More

ವಿಟ್ಲ: ವಿಟ್ಲ ಗ್ರಾಮೀಣ ಸಹಕಾರಿ ಸಂಘದ ಐದನೇ ಶಾಖೆಯು ಉಪ್ಪಿನಂಗಡಿಯಲ್ಲಿ ಜುಲೈ 4ರಂದು ಬೆಳಗ್ಗೆ 10.30ಕ್ಕೆ ಉದ್ಘಾಟನೆಗೊಳ್ಳಲಿದೆ. https://chat.whatsapp.com/FCEnlTkAKCC0MGPhXtX4i4 ವಿಟ್ಲ ಗ್ರಾಮೀಣ ಸಹಕಾರಿ ಸಂಘದ ಅಧ್ಯಕ್ಷರಾದ ಹೆಚ್‌.ಜಗನ್ನಾಥ ಸಾಲ್ಯಾನ್‌ ಅಧ್ಯಕ್ಷತೆಯಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಪುತ್ತೂರು ಶಾಸಕರಾದ ಅಶೋಕ್‌ ಕುಮಾರ್‌ ರೈ ಶಾಖಾ ಕಚೇರಿ ಉದ್ಘಾಟಿಸಲಿದ್ದಾರೆ. ಮಾಜಿ ಶಾಸಕರಾದ ಸಂಜೀವ ಮಠಂದೂರು ಭದ್ರತಾ ಕೊಠಡಿ ಉದ್ಘಾಟಿಸಲಿದ್ದಾರೆ. ಸಹಕಾರ ಸಂಘಗಳ ದ.ಕ. ಜಿಲ್ಲಾ ಉಪನಿಬಂಧಕ ಎಚ್‌.ಎನ್‌ ರಮೇಶ್‌ ಶಾಖೆಯ ಗಣಕೀಕರಣ ಉದ್ಘಾಟಿಸಲಿದ್ದಾರೆ. ವಿಧಾನ ಪರಿಷತ್‌ ಸದಸ್ಯರಾದ ಪ್ರತಾಪಸಿಂಹ ನಾಯಕ್‌ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಪ್ಪಿನಂಗಡಿ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷರಾದ ಕೆ.ಅಬ್ದುಲ್‌ ರಹಿಮಾನ್‌, ಸಹಕಾರ ಭಾರತಿ ದ.ಕ. ಜಿಲ್ಲಾ ಉಪಾಧ್ಯಕ್ಷ ಹಾಗೂ ಉಪ್ಪಿನಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷರಾದ ಕೆ.ವಿ ಪ್ರಸಾದ್‌, ಉಪ್ಪಿನಂಗಡಿ ಗಾಂಧಿ ಪಾರ್ಕ್‌ ರಾಮಗೋಪಾಲ ಕಾಂಪ್ಲೆಕ್ಸ್‌ ಕಟ್ಟಡ ಮಾಲೀಕರಾದ ಕೆ.ರಾಜೇಶ್‌ ನಾಯಕ್‌ ಭಾಗವಹಿಸಲಿದ್ದಾರೆ. ವಿಟ್ಲ ಗ್ರಾಮೀಣ ಸಹಕಾರಿ ಸಂಘದ ಉಪಾಧ್ಯಕ್ಷರಾದ ಮನೋರಂಜನ್‌ ಕೆ.ಆರ್‌,…

Read More

ಬ್ರಹ್ಮಾವರ: ಇಲ್ಲಿನ ಕಥೊಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸಿಬ್ಬಂದಿ ತರಬೇತಿ ಕಾರ್ಯಾಗಾರ ಇತ್ತೀಚೆಗೆ ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಜರುಗಿತು. https://chat.whatsapp.com/FCEnlTkAKCC0MGPhXtX4i4 ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿಯ ನ್ಯಾಯವಾದಿ ಲವೀನಾ ಫೆರ್ನಾಂಡಿಸ್‌, ಭೂ ಅಡಮಾನ ಸಾಲ ನೀಡುವಾಗ ಪರಿಶೀಲಿಸಬೇಕಾಗಿರುವ ಅವಶ್ಯವಾದ ಭೂ-ದಾಖಲೆಗಳು ಹಾಗೂ ಅನುಸರಿಸಬೇಕಾದ ಕ್ರಮಗಳು, ಗ್ರಾಹಕರ ಖಾಯಂ ವಾಸ್ತವ್ಯದ ವಿಳಾಸ ಖಚಿತಪಡಿಸುವಲ್ಲಿ ಪರಿಶೀಲಿಸಬೇಕಾದ ಇಲಾಖೆಗಳು ನೀಡಿರುವ ಗುರುತು ಚೀಟಿಗಳು, ಠೇವಣಿ ಸಂಗ್ರಹ ಮತ್ತು ಸಾಲ ನೀಡುವಾಗ ಗ್ರಾಹಕರ ಅರ್ಜಿಯಲ್ಲಿ ಕಾಣಿಸಿರುವ ಎಲ್ಲಾ ವಿಷಯಗಳ ಮಾಹಿತಿಯನ್ನು ಸಂಪೂರ್ಣವಾಗಿ ದಾಖಲೆಗಳೊಂದಿಗೆ ಭರ್ತಿ ಮಾಡುವ ಅವಶ್ಯಕತೆ, ಇನ್ನಿತರ ನಿಯಮಗಳ ಬಗ್ಗೆ ಸವಿವರವಾಗಿ ಮಾಹಿತಿ ನೀಡಿದರು. ಸಿಬ್ಬಂದಿಯವರ ಪ್ರಶ್ನೆಗಳಿಗೆ ಸಂಬಂಧಪಟ್ಟ ಕಾನೂನಿನ ವಿವರಣೆಯೊಂದಿಗೆ ಅವರು ಉತ್ತರಿಸಿದರು. ತರಬೇತಿ ಕಾರ್ಯಾಗಾರದ ಬಳಿಕ 2026-27ನೇ ಆರ್ಥಿಕ ವರ್ಷದ ಮೇ ತಿಂಗಳ ತನಕದ ವ್ಯವಹಾರದ ಬಗ್ಗೆ ವಿಮರ್ಶೆ ನಡೆಸಿ ಪ್ರಥಮ ತ್ರೈಮಾಸಿಕ ಅವಧಿಗೆ ಸಂಸ್ಥೆಯ ಗುರಿಗಳನ್ನು ಈಡೇರಿಸುವಲ್ಲಿ ಕಾರ್ಯಪ್ರವೃತ್ತರಾಗುವಂತೆ ಕಾರ್ಯಯೋಜನೆಗಳನ್ನು ಹಾಕಿಕೊಳ್ಳಲಾಯಿತು. ಸಂಘದ ಅಧ್ಯಕ್ಷರಾದ ಜೆರಾಲ್ಡ್ ಎಂ.ಗೊನ್ಸಾಲ್ವಿಸ್‌ ಅಧ್ಯಕ್ಷತೆ ವಹಿಸಿ, ಪ್ರಾಸ್ತಾವಿಕ…

Read More

ವಿಶೇಷ ಸಹಕಾರ ಸಪ್ತಾಹ ಅಂಗವಾಗಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯಿಂದ ಕಾರ್ಯಕ್ರಮ ಉಡುಪಿ: ಕೇಂದ್ರ ಸಹಕಾರ ಸಚಿವಾಲಯವು ತನ್ನ ಸ್ಥಾಪನೆಯ ಐದು ವರ್ಷಗಳನ್ನು ಪೂರ್ಣಗೊಳಿಸುತ್ತಿರುವ ಹಿನ್ನಲೆಯಲ್ಲಿ ದೇಶಾದ್ಯಂತ ‘ವಿಶೇಷ ಸಹಕಾರ ಸಪ್ತಾಹ’ ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಉಡುಪಿ ಜಿಲ್ಲಾ ಘಟಕದ ವತಿಯಿಂದ ಜುಲೈ 4ರಂದು ಶನಿವಾರ ಬ್ರಹ್ಮಾವರ ಹೇರೂರಿನ ದೇವಕಿ ಕನ್ವೆನ್ಶನ್‌ ಹಾಲ್‌ನಲ್ಲಿ ಸಹಕಾರದಿಂದ ಸಮೃದ್ಧಿ ಎಂಬ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದ್ದು ಇದರಲ್ಲಿ ಉಪನ್ಯಾಸ ಹಾಗೂ ಸಂವಾದ ಏರ್ಪಡಿಸಲಾಗಿದೆ. https://chat.whatsapp.com/FCEnlTkAKCC0MGPhXtX4i4 ಸಹಕಾರದಿಂದ ಸಮೃದ್ಧಿ ಎಂಬ ಧ್ಯೇಯವಾಕ್ಯದೊಂದಿಗೆ ಕೇಂದ್ರ ಸಹಕಾರ ಸಚಿವಾಲಯವು ಕಾರ್ಯತತ್ಪರವಾಗಿದ್ದು, ಈ ಒಂದು ವಾರದ ಕಾರ್ಯಕ್ರಮದಲ್ಲಿ ಸಹಕಾರ ಕ್ಷೇತ್ರವು ನೀಡಿರುವ ಕೊಡುಗೆಗಳು, ಸಾಧನೆಗಳು ಹಾಗೂ ಕೈಗೊಂಡಿರುವ ವಿವಿಧ ಉಪಕ್ರಮಗಳನ್ನು ಜನರಿಗೆ ಪರಿಚಯಿಸುವ ಉದ್ದೇಶದಿಂದ ಪ್ರಚಾರ, ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಹೇರೂರಿನಲ್ಲಿ ನಡೆಯುವ ಕಾರ್ಯಕ್ರಮವನ್ನು ಉಡುಪಿ -ಚಿಕ್ಕಮಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಉಡುಪಿ ವಿಧಾನಸಭಾ ಸದಸ್ಯರಾದ ಯಶ್‌ಪಾಲ್ ಸುವರ್ಣ,…

Read More

ಪಡುಬಿದ್ರಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪಡುಬಿದ್ರಿ ಶಾಖೆಯ ನಾಲ್ಕನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಪಡುಬಿದ್ರಿ ಶಾಖೆಯಲ್ಲಿ ಜರುಗಿತು. https://chat.whatsapp.com/FCEnlTkAKCC0MGPhXtX4i4 ಸಂಘದ ಸದಸ್ಯರಾದ ಶೀನ ಪೂಜಾರಿ ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಗತ್ಯ ಸಂದರ್ಭಗಳಲ್ಲಿ ಗ್ರಾಹಕರ ಮನೆಗೆ ಬಂದು ಸೇವೆ ನೀಡುತ್ತಿದೆ. ಇಂತಹ ಸೇವೆಗಳು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಸಂಘದ ಸದಸ್ಯರಾದ ಸುನಿಲ್ ಕುಮಾರ್ ಮಾತನಾಡಿ ಆತ್ಮಶಕ್ತಿ ಸಂಘವು ಕೇವಲ ಬ್ಯಾಂಕಿಂಗ್ ಕ್ಷೇತ್ರ ಮಾತ್ರವಲ್ಲದೆ ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಸಂಘವು ಇನ್ನಷ್ಟು ಉನ್ನತ ಸ್ಥಾನಕ್ಕೆ ಏರಲಿ ಎಂದು ಶುಭ ಹಾರೈಸಿದರು. ಗ್ರಾಹಕರಾದ ಶಶಿಕಾಂತ್ ಪಡುಬಿದ್ರಿ ಮಾತನಾಡಿ ಉತ್ತಮ ಮಾರ್ಗದರ್ಶನ ನೀಡುವ ಆಡಳಿತ ಮಂಡಳಿ ಹಾಗೂ ಉತ್ತಮ ಸೇವೆ ನೀಡುವ ಸಿಬ್ಬಂದಿ ವರ್ಗದಿಂದ ಸಂಘವು ಉತ್ತಮ ಪ್ರಗತಿ ಸಾಧಿಸುತ್ತಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್…

Read More

ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ವಿಶೇಷ ಸಹಕಾರ ಸಪ್ತಾಹ ಉದ್ಘಾಟಿಸಿ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಅಭಿಪ್ರಾಯ ಮಂಗಳೂರು: ವಾಣಿಜ್ಯ ಬ್ಯಾಂಕ್‌ಗಳಲ್ಲಿ ವ್ಯವಹಾರ ಮಾಡಲು ಹೋಗುವಾಗ ಸಾಮಾನ್ಯ ಜನರನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ. ಆದರೆ ಸಹಕಾರಿ ಬ್ಯಾಂಕ್‌ಗಳು ನಗುಮುಖದ ಸೇವೆಯೊಂದಿಗೆ ಬರಮಾಡಿಕೊಳ್ಳುತ್ತವೆ. ಸಹಕಾರ ಚಳುವಳಿಯಿಂದಲೇ ದೇಶದ ಅಭಿವೃದ್ಧಿ ಎಂಬ ತತ್ವದಲ್ಲಿ ನಂಬಿಕೆ ಇಟ್ಟವರು ನಾವು. ಸಹಕಾರಿ ಬ್ಯಾಂಕ್‌ಗಳು ಬಡವರಿಗೆ, ಜನಸಾಮಾನ್ಯರಿಗೆ ಮುಕ್ತ ಅವಕಾಶವನ್ನು ಕಲ್ಪಿಸಿವೆ. ಸಹಕಾರ ಕ್ಷೇತ್ರದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷರಾದ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಅಭಿಪ್ರಾಯಪಟ್ಟರು. https://chat.whatsapp.com/FCEnlTkAKCC0MGPhXtX4i4 ಕೇಂದ್ರ ಸಹಕಾರ ಸಚಿವಾಲಯವು ಸ್ಥಾಪನೆಯಾಗಿ 5 ವರ್ಷಗಳನ್ನು ಪೂರ್ಣಗೊಳಿಸುತ್ತಿರುವ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್, ಸಹಕಾರ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಮಂಗಳೂರಿನ ಎಸ್‌ಸಿಡಿಸಿಸಿ ಬ್ಯಾಂಕ್‌ ಸಭಾಂಗಣದಲ್ಲಿ ಉದ್ಘಾಟಿಸಿ…

Read More