Author: admin
ಮಂಗಳೂರು: 1912ರಲ್ಲಿ ಸ್ಥಾಪನೆಯಾಗಿ 114 ವರ್ಷಗಳ ಯಶಸ್ವಿ ಸೇವೆಯನ್ನು ಪೂರೈಸಿರುವ ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ 22ನೇ ಶಾಖೆ ಹಾಗೂ ನೂತನ ಎಟಿಎಂ ಅನ್ನು ಭಾನುವಾರ, ಜೂನ್ 28ರಂದು ದೇರಳಕಟ್ಟೆಯ ಫಾ. ಮುಲ್ಲರ್ ಕಾಂಪ್ಲೆಕ್ಸ್‌ನ ನೆಲ ಮಹಡಿಯಲ್ಲಿ ಉದ್ಘಾಟಿಸಿತು. https://chat.whatsapp.com/FCEnlTkAKCC0MGPhXtX4i4 ನೂತನ ಶಾಖೆಯನ್ನು ಎಂಸಿಸಿ ಬ್ಯಾಂಕ್‌ನ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೊ ಉದ್ಘಾಟಿಸಿದರು. ದೇರಳಕಟ್ಟೆಯ ಫಾ. ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ಆಡಳಿತಾಧಿಕಾರಿ ವಂ. ಫಾ. ನಿಲೇಶ್ ಕ್ರಾಸ್ತಾ ಅವರು ಎಟಿಎಂ ಅನ್ನು ಉದ್ಘಾಟಿಸಿ ಚಾಲನೆ ನೀಡಿದರು. ಉರ್ಸುಲಿನ್ ಫ್ರಾನ್ಸಿಸ್ಕನ್ ಸಿಸ್ಟರ್ಸ್‌ನ ಸುಪೀರಿಯರ್ ಜನರಲ್ ವಂ. ಸಿ. ಮಿಲ್ಲಿ ಫೆರ್ನಾಂಡಿಸ್ ಅವರು ಸೇಫ್ ರೂಂ ಅನ್ನು ಉದ್ಘಾಟಿಸಿದರೆ, ಫಾ. ಮುಲ್ಲರ್ ಹೋಮಿಯೋಪಥಿಕ್ ಫಾರ್ಮಾಸ್ಯುಟಿಕಲ್ ವಿಭಾಗದ (FMHPD) ಆಡಳಿತಾಧಿಕಾರಿ ವಂ. ಫಾ. ನೆಲ್ಸನ್ ದೀರಜ್ ಪಾಯ್ಸ್ ಅವರು ಬ್ಯಾಂಕಿನ ಇ-ಸ್ಟಾಂಪ್ ಸೇವೆಗೆ ಚಾಲನೆ ನೀಡಿದರು. ಪಾಣೀರ್‌ನ ಅವರ್ ಲೇಡಿ ಆಫ್ ಮರ್ಸಿ ಚರ್ಚ್‌ನ ಧರ್ಮಗುರು ವಂ. ಫಾ. ವಿಕ್ಟರ್ ಡಿ’ಮೆಲ್ಲೊ ಅವರು…
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಳ್ಳಾಲ ಶಾಖೆಯ 11ನೇ ವಾರ್ಷಿಕೋತ್ಸವದ ಪ್ರಯುಕ್ತ 111ನೇ ಉಚಿತ ವೈದ್ಯಕೀಯ ತಪಾಸಣಾ ಶಿಬಿರ
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಉಳ್ಳಾಲ ಶಾಖೆಯ 11ನೇ ವಾರ್ಷಿಕೋತ್ಸವದ ಪ್ರಯುಕ್ತ 111ನೇ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಹಾಗೂ ದಂತ ಚಿಕಿತ್ಸಾ ಶಿಬಿರವು ಕಣಚೂರು ಮೆಡಿಕಲ್ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ನಾಟೆಕಲ್, ಮಂಗಳೂರು ಹಾಗೂ ಎ.ಜೆ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್, ಮಂಗಳೂರು ಇವರ ನುರಿತ ತಜ್ಞ ವೈದ್ಯರ ತಂಡದಿಂದ ಸಮುದಾಯ ಭವನ, ಉಳ್ಳಾಲ ನಗರಸಭೆ ಆವರಣ, ಉಳ್ಳಾಲದಲ್ಲಿ ಜರುಗಿತು. https://chat.whatsapp.com/FCEnlTkAKCC0MGPhXtX4i4 ಶಿಬಿರವನ್ನು ಶ್ರೀ ಚೀರುಂಭ ಭಗವತಿ ಕ್ಷೇತ್ರದ ಪ್ರಧಾನ ಅರ್ಚಕರಾದ ಮಂಜಪ್ಪ ಕರ್ನಾವರ್ ಯಾನೆ ಬಾಲಕೃಷ್ಣ ಉಳ್ಳಾಲ್ ಉದ್ಘಾಟಿಸಿದರು. ಉದ್ಘಾಟಿಸಿ ಮಾತನಾಡಿದ ಮಂಜಪ್ಪ ಕರ್ನಾವರ್ ಯಾನೆ ಬಾಲಕೃಷ್ಣ ಉಳ್ಳಾಲ್ “ಸುಮಾರು 11 ವರ್ಷಗಳಿಂದ ಉಳ್ಳಾಲ ಜನರಿಗೆ ಅನುಕೂಲವಾಗುವಂತೆ ಈ ಶಿಬಿರವನ್ನು ಆಯೋಜಿಸುತ್ತಿದ್ದು, ಎಲ್ಲರಿಗೂ ಈ ಶಿಬಿರವು ಪ್ರಯೋಜನಕಾರಿಯಾಗಲೆಂದು ಶುಭ ಹಾರೈಸಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಮಾಡುತ್ತಿರುವ ಇಂತಹ ಸಮಾಜಮುಖಿ ಕಾರ್ಯಕ್ರಮಗಳು ಶ್ಲಾಘನೀಯ” ಎಂದರು. ವಿದ್ಯಾರಣ್ಯ ಕಲಾವೃಂದ ಉಳ್ಳಾಲ ಇದರ ಮಾಜಿ ಅಧ್ಯಕ್ಷರಾದ ರವೀಂದ್ರ…
ಮಂಗಳೂರು: ಕೊಡಿಯಾಲಬೈಲ್ ಉನ್ನತಿ ಕಟ್ಟಡದಲ್ಲಿರುವ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ ಹವಾನಿಯಂತ್ರಿತ ಸಭಾಭವನ ಸಪ್ತವರ್ಣ ಇದರ ಉದ್ಘಾಟನಾ ಸಮಾರಂಭ ಶನಿವಾರ ನಡೆಯಿತು. https://chat.whatsapp.com/FCEnlTkAKCC0MGPhXtX4i4 ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ ಅಧ್ಯಕ್ಷರಾದ ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ಉದ್ಘಾಟಿಸಿದರು. ಸಂಘದ ಉಪಾಧ್ಯಕ್ಷರಾದ ರಾಘವ ಆರ್ ಉಚ್ಚಿಲ್, ನಿರ್ದೇಶಕರಾದ ವಿಶ್ವನಾಥ್ ಕೆ.ಟಿ, ವಿಶ್ವನಾಥ್ ಅಮೀನ್, ದಿವಾಕರ್ ಶೆಟ್ಟಿ, ಪ್ರೇಮರಾಜ್, ಚಂದ್ರಕಲಾ, ಕಿರಣ್ ಕುಮಾರ್ ಶೆಟ್ಟಿ, ನಿಶಿತಾ, ಜಯಪ್ರಕಾಶ್ ರೈ, ಶಿವಾನಂದ ಪಿ, ಚಂದ್ರಕಲಾ ಕೆ, ಮೋಹನ್ ನಾಯ್ಕ್, ವಿಶ್ವೇಶ್ವರ ಐತಾಳ್, ಗೀತಾ ಸುವರ್ಣ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ಪೂಜಾರಿ ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಳ್ಳಾಲ ಶಾಖೆಯ 11ನೇ ವಾರ್ಷಿಕೋತ್ಸವದ ಪ್ರಯುಕ್ತ ಜೂನ್ 28ರಂದು 111ನೇ ಉಚಿತ ವೈದ್ಯಕೀಯ ಶಿಬಿರ
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಳ್ಳಾಲ ಶಾಖೆಯ 11ನೇ ವಾರ್ಷಿಕೋತ್ಸವದ ಪ್ರಯುಕ್ತ 111ನೇ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಹಾಗೂ ದಂತ ಚಿಕಿತ್ಸಾ ಶಿಬಿರವು ಜೂನ್ 28 ಭಾನುವಾರ ಪೂರ್ವಾಹ್ನ 9.30ರಿಂದ ಮಧ್ಯಾಹ್ನ 12.30ರವರೆಗೆ ಉಳ್ಳಾಲ ನಗರಸಭೆ ಆವರಣದ ಸಮುದಾಯ ಭವನದಲ್ಲಿ ನಡೆಯಲಿದೆ. https://chat.whatsapp.com/FCEnlTkAKCC0MGPhXtX4i4 ಈ ವೈದ್ಯಕೀಯ ಶಿಬಿರದಲ್ಲಿ ಎ.ಜೆ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್, ಮಂಗಳೂರು ಇಲ್ಲಿನ ನುರಿತ ತಜ್ಞ ವೈದ್ಯರ ತಂಡದಿಂದ ದಂತ ತಪಾಸಣೆ ಮತ್ತು ಸಲಹೆ, ಅನಾರೋಗ್ಯಕರ ಹಲ್ಲುಗಳನ್ನು ಕೀಳುವುದು, ಹುಳುಕು ಹಲ್ಲುಗಳನ್ನು ಭರ್ತಿ ಮಾಡುವುದು, ಹಲ್ಲುಗಳನ್ನು ಸ್ವಚ್ಛಗೊಳಿಸುವುದು ಹಾಗೂ ಕಣಚೂರು ಮೆಡಿಕಲ್ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ನಾಟೆಕಲ್ ಇವರ ನುರಿತ ತಜ್ಞ ವೈದ್ಯರ ತಂಡದಿಂದ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ, ಮಧುಮೇಹ ತಪಾಸಣೆ, ಬಿ.ಪಿ. ತಪಾಸಣೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಕಿವಿ, ಮೂಗು ಮತ್ತು ಗಂಟಲು ತಪಾಸಣೆ, ಹೆಚ್ಚಿನ ಚಿಕಿತ್ಸೆಗೆ ಹಸಿರು ಕಾರ್ಡನ್ನು ನೀಡುವುದು ಹಾಗೂ ಇನ್ನಿತರ ವೈದ್ಯಕೀಯ…
ಸಹಕಾರ ಸಪ್ತಾಹದ ದಿನಾಂಕ ಬದಲಿಸಿ ನೆಹರೂ ಕೊಡುಗೆಗಳನ್ನು ಕ್ಷೀಣಗೊಳಿಸುವ ಹುನ್ನಾರ: ಅಲೆವೂರು ಹರೀಶ್ ಕಿಣಿ ಅಭಿಪ್ರಾಯ
ಉಡುಪಿ: ಕೇಂದ್ರದಲ್ಲಿ ಸಹಕಾರ ಸಚಿವಾಲಯವನ್ನು ಆರಂಭಿಸಿ ಐದು ವರ್ಷಗಳಾಗಿರುವ ಕಾರಣ ಮುಂದೊಡ್ಡಿ ಕೇಂದ್ರ ಸರ್ಕಾರವು ಜೂನ್ 29ರಿಂದ ಜುಲೈ 6ರ ತನಕ ಸಹಕಾರಿ ಸಪ್ತಾಹವನ್ನು ಆಚರಿಸಲು ಕರೆ ಕೊಟ್ಟಿರುವುದನ್ನು ಆಕ್ಷೇಪಿಸಿರುವ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ, ಸಹಕಾರಿ ಧುರೀಣ ಅಲೆವೂರು ಹರೀಶ್ ಕಿಣಿಯವರು, ಬಿಜೆಪಿ ಸರ್ಕಾರವು ಜವಾಹರಲಾಲ್ ನೆಹರೂ ಅವರನ್ನು ಅವಮಾನಿಸುವ ಚಾಳಿಯನ್ನು ಮುಂದುವರಿಸಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. https://chat.whatsapp.com/FCEnlTkAKCC0MGPhXtX4i4 ಸ್ವತಂತ್ರ ಭಾರತದ ಅಭ್ಯುದಯದಲ್ಲಿ ಸಹಕಾರ ಕ್ಷೇತ್ರದ ಮಹತ್ವವನ್ನು ಮನಗಂಡ ಅಂದಿನ ಪ್ರಧಾನಿ ಜವಹರಲಾಲ್ ನೆಹರೂ ಅವರು ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ಪ್ರಾಧಾನ್ಯತೆ ನೀಡಿದ್ದರು. ಆ ಕಾರಣಕ್ಕಾಗಿ ಅವರ ಜನ್ಮದಿನಾಂಕವಾದ ನವೆಂಬರ್ 14ರಿಂದ ಒಂದು ವಾರಗಳ ಕಾಲ ರಾಷ್ಟ್ರಾದ್ಯಂತ ಸಹಕಾರ ಸಪ್ತಾಹವು ಏಳು ದಶಕಗಳಿಂದ ಆಚರಿಸಲಾಗುತ್ತಿದೆ. ಆದರೆ ಇದೀಗ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ನೂತನ ಸಹಕಾರಿ ಸಚಿವಾಲಯ ಆರಂಭಿಸಿ ಐದು ವರ್ಷ ಕಳೆದಿರುವ ಹೆಸರಿನಲ್ಲಿ ಜೂನ್ 29ರಿಂದ ಜುಲೈ 6ರವರೆಗೆ ರಾಷ್ಟ್ರಾದ್ಯಂತ ಸಹಕಾರ ಸಪ್ತಾಹ ಆಚರಿಸಲು ನಿರ್ಧರಿಸಿದೆ. ಈ…
ಬೆಂಗಳೂರು: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ವತಿಯಿಂದ ರಾಜ್ಯದ ಸೌಹಾರ್ದ ಸಹಕಾರಿಗಳ ನಿರ್ದೇಶಕರುಗಳಿಗೆ ಆಡಳಿತ ಪರಿಣತಿ ಹಾಗೂ ವ್ಯವಹಾರ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಮಂಗಳವಾರ ಹಾಗೂ ಬುಧವಾರ ಮಲ್ಲೇಶ್ವರಂನಲ್ಲಿ ಸಹಕಾರಿ ಸೌಧದಲ್ಲಿ ಆಯೋಜಿಸಲಾಗಿತ್ತು. https://chat.whatsapp.com/FCEnlTkAKCC0MGPhXtX4i4 ಕಾರ್ಯಕ್ರಮವನ್ನು ಸಹಕಾರಿ ನಿಬಂಧಕರಾದ ಡಾ. ವೆಂಕಟೇಶ್ ಎಂ.ವಿ ಕಾರ್ಯಕ್ರಮ ಉದ್ಘಾಟಿಸಿದರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ವ್ಯವಸ್ಥಾಪಕ ನಿರ್ದೇಶಕರಾದ ಶರಣಗೌಡ ಜಿ. ಪಾಟೀಲ ಪ್ರಾಸ್ತಾವಿಕ ಮಾತನಾಡಿದರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷ ಜಿ. ನಂಜನಗೌಡ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಂಯುಕ್ತ ಸಹಕಾರಿಯ ನಿರ್ದೇಶಕರಾದ ಬಿ.ಹೆಚ್. ಕೃಷ್ಣಾರೆಡ್ಡಿ ಹಾಗೂ ಬಿ.ಎಸ್. ಗುಂಡೂರಾವ್, ಸಹಕಾರ ಸಂಘಗಳ ನಿಬಂಧಕರಾದ ಡಾ.ಜಗದೀಶ್, ವೆಂಕಟೇಶ್, ಕವಿತಾ, ಶಶಿಧರ್ ಪಾಲ್ಗೊಂಡಿದ್ದರು. ಸಂಪನ್ಮೂಲ ವ್ಯಕ್ತಿಗಳಾದ ಸಹಕಾರ ಸಂಘಗಳ ಅಪರ ನಿಬಂಧಕ ಎಚ್ ಎಸ್ ನಾಗರಾಜಯ್ಯ ತರಬೇತಿ ನಡೆಸಿಕೊಟ್ಟರು. ಸಂಯುಕ್ತ ಸಹಕಾರಿಯ ಸಹ ಪ್ರಧಾನ ವ್ಯವಸ್ಥಾಪಕರಾದ ರಾಜಶೇಖರ.ಹೆಚ್ ಹೂಗಾರ್ ಸ್ವಾಗತಿಸಿದರು. ಹರ್ಷಪ್ರಭಾ ಪ್ರಾರ್ಥಿಸಿದರು. ತರಬೇತಿ ವಿಭಾಗದ ಅಧಿಕಾರಿ ಕವಿತಾ ಆರ್…
ಎಂಸಿಸಿ ಬ್ಯಾಂಕಿನ 22ನೇ ಶಾಖೆ ಜೂನ್ 28ರಂದು ದೇರಳಕಟ್ಟೆಯಲ್ಲಿ, 23ನೇ ಶಾಖೆ ಕಟಪಾಡಿಯಲ್ಲಿ ಆಗಸ್ಟ್ 2ರಂದು ಉದ್ಘಾಟನೆ
114 ವರ್ಷಗಳ ಇತಿಹಾಸ ಹೊಂದಿರುವ ಎಂಸಿಸಿ ಬ್ಯಾಂಕಿನಿಂದ 1,535 ಕೋಟಿ ರೂಪಾಯಿ ವ್ಯವಹಾರ: ಈ ವರ್ಷದ ಅಂತ್ಯದೊಳಗೆ 25 ಶಾಖೆ ಆರಂಭ: ಸಹಕಾರ ರತ್ನ ಅನಿಲ್ ಲೋಬೊ ಮಾಹಿತಿ ಮಂಗಳೂರು: 114 ವರ್ಷಗಳ ಸೇವೆ ಪೂರ್ಣಗೊಳಿಸಿರುವ ಎಂಸಿಸಿ ಬ್ಯಾಂಕ್ ಲಿಮಿಟೆಡ್ ನ 22ನೇ ನೂತನ ಶಾಖೆಯು ಜೂನ್ 28ರಂದು ದೇರಳಕಟ್ಟೆಯಲ್ಲಿ ಉದ್ಘಾಟನೆಗೊಳ್ಳಲಿದ್ದು, ಆಗಸ್ಟ್ 2ರಂದು ಕಟಪಾಡಿಯಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಎಂಸಿಸಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೊ ತಿಳಿಸಿದರು. https://chat.whatsapp.com/FCEnlTkAKCC0MGPhXtX4i4 ಎಂಸಿಸಿ ಬ್ಯಾಂಕಿನ ಮಂಗಳೂರಿನ ಪ್ರಧಾನ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಎಂಸಿಸಿ ಬ್ಯಾಂಕ್ 31 ಮಾರ್ಚ್ 2026ಕ್ಕೆ ಅಂತ್ಯಗೊಂಡ ಹಣಕಾಸು ವರ್ಷದಲ್ಲಿ ಎಲ್ಲಾ ಪ್ರಮುಖ ವ್ಯವಹಾರ ಕ್ಷೇತ್ರಗಳಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ ಎಂದು ಮಾಹಿತಿ ನೀಡಿದರು. ಬ್ಯಾಂಕ್ ಒಟ್ಟು ವ್ಯವಹಾರ ವಹಿವಾಟಿನಲ್ಲಿ 22.89% ಬೆಳವಣಿಗೆಯೊಂದಿಗೆ ರೂ. 1,535 ಕೋಟಿ ಮೈಲಿಗಲ್ಲನ್ನು ತಲುಪಿದೆ. ಬ್ಯಾಂಕಿನ ನಿವ್ವಳ ಮೌಲ್ಯ ರೂ. 83.76 ಕೋಟಿಯಿಂದ ರೂ. 91.80 ಕೋಟಿಗೆ ಏರಿಕೆಯಾಗಿದ್ದು, ಎನ್‌ಆರ್‌ಐ…
ಕಲಬುರಗಿ ಸಹಕಾರ ಭಾರತಿ ಜಿಲ್ಲಾ ಅಭ್ಯಾಸ ವರ್ಗ ಉದ್ಘಾಟಿಸಿ ಸಾಣೂರು ನರಸಿಂಹ ಕಾಮತ್ ಅಭಿಪ್ರಾಯ ಕಲಬುರಗಿ: ಸಹಕಾರ ಭಾರತಿ ಸಂಘಟನೆಯು ಸಂಘಟನಾತ್ಮಕವಾಗಿ ಬಲಶಾಲಿಯಾದಾಗ ಮಾತ್ರ ಸಹಕಾರ ಕ್ಷೇತ್ರದ ಹಲವಾರು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಸಹಕಾರ ಕ್ಷೇತ್ರಕ್ಕೆ ಪ್ರತ್ಯೇಕ ಸಚಿವಾಲಯ ರಚನೆಯಾಗಿ ಐದು ವರ್ಷಗಳು ಕಳೆದಿದ್ದು, ಹೊಸ ಸಹಕಾರಿ ನೀತಿ ಮತ್ತು ಸಹಕಾರ ಕ್ಷೇತ್ರದಲ್ಲಿ ಆಮೂಲಾಗ್ರ ಬದಲಾವಣೆಗಾಗಿ ಕೇಂದ್ರ ಸರಕಾರ ಹಲವಾರು ಕಾರ್ಯಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ಸಹಕಾರ ಭಾರತಿ ಸಂಘಟನಾತ್ಮಕವಾಗಿ ಬಲಶಾಲಿಯಾದಾಗ ಮಾತ್ರ ಸಹಕಾರ ಕ್ಷೇತ್ರದ ಹಲವಾರು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ತಿಳಿಸಿದರು. https://chat.whatsapp.com/FCEnlTkAKCC0MGPhXtX4i4 ಕರ್ನಾಟಕ ಸೌಹಾರ್ದ ಸಂಯುಕ್ತ ಸಹಕಾರ ಪ್ರಾಂತೀಯ ಕಚೇರಿ ಸಭಾಭವನದಲ್ಲಿ ಮಂಗಳವಾರ ಜರುಗಿದ ಕಲಬುರಗಿ ಸಹಕಾರ ಭಾರತಿ ಜಿಲ್ಲಾ ಅಭ್ಯಾಸ ವರ್ಗ ಉದ್ಘಾಟಿಸಿ ಅವರು ಮಾತನಾಡಿದರು. ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಕಲಬರಗಿ ಜಿಲ್ಲೆಯಲ್ಲಿ ಸಹಕಾರ ಭಾರತಿಯ ನೂತನ ಪೂರ್ಣ ಪ್ರಮಾಣದ ಜಿಲ್ಲಾಸಮಿತಿ ರಚನೆಯಾಗಿ, ಪ್ಯಾಕ್ಸ್,…
ಹಳೆಯಂಗಡಿ: ಕೇಂದ್ರ ಸಹಕಾರ ಇಲಾಖೆಯು ಐದು ವರ್ಷ ಪೂರ್ಣಗೊಳಿಸಿದ ಪ್ರಯುಕ್ತ ಹಮ್ಮಿಕೊಂಡಿರುವ ವಿಶೇಷ ಸಹಕಾರ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ಕರ್ನಾಟಕ ಸರಕಾರದ ಸಹಕಾರ ಇಲಾಖೆಯ ನೇತೃತ್ವದಲ್ಲಿ ಹಳೆಯಂಗಡಿ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ ಆಶ್ರಯದಲ್ಲಿ ಜುಲೈ 1ರಂದು ಬೆಳಗ್ಗೆ 10.30ರಿಂದ ಮೂಲ್ಕಿ ತಾಲೂಕು ಮಟ್ಟದ ಸಹಕಾರ ಸಂಘಗಳ ನಿರ್ದೇಶಕರು ಮತ್ತು ಸಿಬ್ಬಂದಿಗಳಿಗೆ ಸಹಕಾರ ಸಂಘಗಳ ನಿರ್ವಹಣೆಯಲ್ಲಿ ನಮ್ಮ ಪಾತ್ರ ಎಂಬ ವಿಷಯದ ಬಗ್ಗೆ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. https://chat.whatsapp.com/FCEnlTkAKCC0MGPhXtX4i4 ಹಳೆಯಂಗಡಿ ಹರಿಓಂ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಹಾಗೂ ನಿರ್ದೇಶಕರು, ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾದ ಡಾ.ಐಕಳಬಾವ ದೇವಿಪ್ರಸಾದ್ ಶೆಟ್ಟಿಯವರು ಉದ್ಘಾಟಿಸಲಿದ್ದಾರೆ. ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಎಚ್. ವಸಂತ್ ಬೆರ್ನಾರ್ಡ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪಡುಬಿದ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ವೈ.ಸುಧೀರ್ ಭಾಗವಹಿಸಲಿದ್ದು, ಸಹಕಾರ ಸಂಘಗಳ ದ.ಕ. ಉಪ ನಿಬಂಧಕರಾದ ಎಚ್.ಎನ್. ರಮೇಶ್, ಸಹಕಾರ ಸಂಘಗಳ ಮಂಗಳೂರು ಸಹಾಯಕ…
ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಕಲ್ಲಡ್ಕ ಶ್ರೀರಾಮ ಕಾಲೇಜಿನ ವಿದ್ಯಾರ್ಥಿಗೆ ಗೌರವ ಅಭಿನಂದನೆ
ಬಂಟ್ವಾಳ: 2025-2026ನೇ ಸಾಲಿನ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 600ಕ್ಕೆ 594 ಅಂಕಗಳನ್ನು ಪಡೆಯುವ ಮೂಲಕ ರಾಜ್ಯ ಮಟ್ಟದಲ್ಲಿ ಏಳನೇ ರ್ಯಾಂಕ್ ಹಾಗೂ ಕಾಲೇಜಿಗೆ ಪ್ರಥಮ ಸ್ಥಾನ ಪಡೆದ ಕಲ್ಲಡ್ಕ ಶ್ರೀರಾಮ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿ, ಬಂಟ್ವಾಳ ತಾಲೂಕು ಕೊಯಿಲ ಗ್ರಾಮದ ಉಮೇಶ್ ಪೂಜಾರಿ -ಪುಷ್ಪಾವತಿ ದಂಪತಿಯ ಪುತ್ರ ಪ್ರೀತೇಶ್ ಎಂಬವರನ್ನು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಬೆಳ್ಳಿಪಾಡಿ ಕೃಷ್ಣ ರೈ ರೈತ ಸಭಾಂಗಣದಲ್ಲಿ ಗೌರವಿಸಿ ಅಭಿನಂದಿಸಲಾಯಿತು. https://chat.whatsapp.com/FCEnlTkAKCC0MGPhXtX4i4 ಅಭಿನಂದಿಸಿ ಮಾತನಾಡಿದ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಸಿದ್ದಕಟ್ಟೆ ಸಹಕಾರ ಸಂಘದ ವ್ಯಾಪ್ತಿಯಲ್ಲಿ ಬರುವ ವಿದ್ಯಾರ್ಥಿ ಪ್ರೀತೇಶ್ ತನ್ನ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾಬ್ಯಾಸವನ್ನು ಸರಕಾರಿ ಶಾಲೆಯಲ್ಲಿ ಅಭ್ಯಾಸ ಮಾಡಿ ಇದೀಗ ಕಲ್ಲಡ್ಕ ಶ್ರೀರಾಮ ಕಾಲೇಜಿನಲ್ಲಿ ಕಲಿತು ಸಾಧನೆ ಮಾಡಿ ರಾಜ್ಯಮಟ್ಟದಲ್ಲಿ ಏಳನೇ ಸ್ಥಾನ ಪಡೆದಿರುವುದು ಸಂಘಕ್ಕೂ ಹೆಮ್ಮೆಯ ವಿಚಾರವಾಗಿದ್ದು, ಸರಕಾರಿ ಶಾಲೆಯಲ್ಲಿ ಪ್ರಾರಂಭದ ಶಿಕ್ಷಣ ಪಡೆದುಕೊಂಡು ಉನ್ನತ ಸ್ಥಾನ ಪಡೆಯಲು…
