Author: admin
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು, ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ಹಾಗೂ ಖಾಯಂ ಜನತಾ ನ್ಯಾಯಾಲಯ ಮಂಗಳೂರು ಇವರ ಜಂಟಿ ಸಹಯೋಗದೊಂದಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಸಹಕಾರ ಸಂಘಗಳಿಗೆ ಸಹಕಾರ ಸಂಘಗಳ ಕಾನೂನು, ಭದ್ರತೆ ಹಾಗೂ ಸುರಕ್ಷತಾ ಬಗ್ಗೆ ಅರಿವು ಕಾರ್ಯಾಗಾರವು ಪಡೀಲ್‌ನ ಆತ್ಮಶಕ್ತಿ ಸೌಧದಲ್ಲಿ ನಡೆಯಿತು. https://chat.whatsapp.com/FCEnlTkAKCC0MGPhXtX4i4 ಕರ್ನಾಟಕ ಸರ್ಕಾರದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಐ.ತಾರಾನಾಥ ಪೂಜಾರಿ ಕಾರ್ಯಾಗಾರ ಉದ್ಘಾಟಿಸಿ, ಮಾತನಾಡಿ ಜಸ್ಟಿಸ್ ಎಂದರೆ ಅಲ್ಲಿ ಸೋಲು ಗೆಲುವಿನ ಪ್ರಶ್ನೆಯಲ್ಲ. ನ್ಯಾಯ ಅಂದರೆ ಸಂದರ್ಭವನ್ನು ಎದುರಿಸುವ ಶಕ್ತಿ. ಸಹಕಾರ ಕ್ಷೇತ್ರದಲ್ಲಿ ಸಂಘಗಳ ಪ್ರಗತಿಗೆ ಸಂಘದ ಅಧ್ಯಕ್ಷರು, ಆಡಳಿತ ಮಂಡಳಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಹಾಗೂ ಸಿಬ್ಬಂದಿಗಳ ಕೊಡುಗೆ ಅಪಾರವಾದುದ್ದು, ಎಂದು ಹೇಳಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅತೀ ಕಡಿಮೆ ಅವಧಿಯಲ್ಲಿ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮುಂದಾಳತ್ವದಲ್ಲಿ ೩೫…
ಕಾರ್ಕಳ: ವಿಶ್ವಕರ್ಮ ಸಹಕಾರ ಬ್ಯಾಂಕಿನ ಸ್ವರ್ಣ ಸಂಭ್ರಮ ಪ್ರಯುಕ್ತ ಕಾರ್ಕಳ ತಾಲೂಕು ಚಿನ್ನ ಬೆಳ್ಳಿ ಕೆಲಸಗಾರರ ಸಂಘ ಕಾರ್ಕಳ ಸಹಯೋಗದೊಂದಿಗೆ ಡಾ.ಟಿ.ಎಂ.ಪೈ ರೋಟರಿ ಆಸ್ಪತ್ರೆ ಕಾರ್ಕಳ ನುರಿತ ವೈದ್ಯರಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮದ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಲಾಯಿತು. https://chat.whatsapp.com/FCEnlTkAKCC0MGPhXtX4i4 ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಪಿ.ಜಗದೀಶ್ ಆಚಾರ್ಯ, ನಿರ್ದೇಶಕರಾದ ಕೆ.ಹರೀಶ್ ಕುಮಾರ್, ಡಿ.ಭಾಸ್ಕರ ಆಚಾರ್, ಉದ್ಯಮಿಗಳಾದ ಕಮಲಾಕ್ಷ ನಾಯಕ್ ಕಾರ್ಕಳ, ಕಾರ್ಕಳ ತಾಲೂಕು ಚಿನ್ನ ಬೆಳ್ಳಿ ಕೆಲಸಗಾರರ ಸಂಘ ಕಾರ್ಕಳ ಇದರ ಅಧ್ಯಕ್ಷರಾದ ಎಂ.ರಮೇಶ್ ಆಚಾರ್, ನೆಕ್ಲಾಜೆ ಕಾಳಿಕಾಂಬಾ ದೇವಸ್ಥಾನ ಕಾರ್ಕಳ ಇದರ ಆಡಳಿತ ಮೊಕ್ತೇಸರರಾದ ಪಿ.ರವಿ ಆಚಾರ್, ಟಿ.ಎಂ.ಎ.ಪೈ ಇದರ ವೈದ್ಯಾಧಿಕಾರಿ ನಿಖಿತಾ ಕಾಳಿಕಾಂಬಾ ಮಹಿಳಾ ಸೇವಾ ಸಮಿತಿ ಕಾರ್ಕಳ ಇದರ ಅಧ್ಯಕ್ಷರಾದ ಕವಿತಾ ಹರೀಶ್ ಉಪಸ್ಥಿತರಿದ್ದರು. ಬ್ಯಾಂಕಿನ ಗ್ರಾಹಕರು ಹಾಗೂ ಸಾರ್ವಜನಿಕರು ಈ ಶಿಬಿರದಲ್ಲಿ ಭಾಗವಹಿಸಿ ಸದುಪಯೋಗ ಪಡಿಸಿಕೊಂಡರು.
‘ಮೊಗೆದಷ್ಟೂ ಮೊಳೆಯುವ ಮೊಳಹಳ್ಳಿ’ ಪುಸ್ತಕ ಬಿಡುಗಡೆ ಸಮಾರಂಭದ ಸಂವಾದ ಕಾರ್ಯಕ್ರಮದಲ್ಲಿ ಅಭಿಪ್ರಾಯ ವ್ಯಕ್ತ ಮಂಗಳೂರು: ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆ, ಮಂಗಳೂರು ಪ್ರಕಟಿಸಿರುವ ಚಿಂತಕರು ಹಾಗೂ ಶಿಕ್ಷಕರಾದ ಅರವಿಂದ ಚೊಕ್ಕಾಡಿ ರಚಿಸಿರುವ ‘ಮೊಗೆದಷ್ಟೂ ಮೊಳೆಯುವ ಮೊಳಹಳ್ಳಿ’ ಪುಸ್ತಕ ಬಿಡುಗಡೆ ಮತ್ತು ಸಂವಾದ ಕಾರ್ಯಕ್ರಮ ನಗರದ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನ ಡಾ. ಕೆ. ಶಿವರಾಮ ಕಾರಂತ ಸಭಾಭವನದಲ್ಲಿ ಭಾನುವಾರ ಜರುಗಿತು. ಕಾರ್ಯಕ್ರಮದಲ್ಲಿ ನಡೆದ ಸಂವಾದದಲ್ಲಿ ಸಹಕಾರ ಸಂಸ್ಥೆಗಳಲ್ಲಿ ಆಯಾ ಸಂಸ್ಥೆಗಳ ಸಂಸ್ಥಾಪಕರ ದಿನ ಆಚರಣೆಗೆ ಸೂಕ್ತ ನಿಯಮ ಜಾರಿಗೆ ಬರಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು. https://chat.whatsapp.com/FCEnlTkAKCC0MGPhXtX4i4 ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಅವರು ಕಾರ್ಯಕ್ರಮ ಉದ್ಘಾಟಿಸಿ ಪುಸ್ತಕ ಬಿಡುಗಡೆ ಮಾಡಿ, ಕೃತಿಯ ಸಮಗ್ರ ವಿಶ್ಲೇಷಣೆ ಮಾಡಿದರು. ಸಹಕಾರ ಚಳುವಳಿಯ ಮೂಲಕ ಸಮಾಜ ನಿರ್ಮಾಣದ ಕನಸು ಕಂಡು, ಅದನ್ನು ಕಾರ್ಯರೂಪಕ್ಕೆ ತಂದ ಸಹಕಾರ ಪಿತಾಮಹ ಮೊಳಹಳ್ಳಿ ಶಿವರಾಯರ ಜೀವನ ಮತ್ತು ಸಾಧನೆಯ ವಿವಿಧ ಆಯಾಮಗಳನ್ನು ಪರಿಚಯಿಸುವ ಈ ಕೃತಿ,…
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಆಶ್ರಯದಲ್ಲಿ ದ.ಕ. ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ ಮಂಗಳೂರು, ಲಯನ್ಸ್ ಹಾಗೂ ಲಿಯೋ ಕ್ಲಬ್ ಮಂಗಳೂರು ಇವರ ಜಂಟಿ ಸಹಯೋಗದೊಂದಿಗೆ ಡಾಕ್ಟರ್ ಅಗರವಾಲ್ಸ್ ಕಣ್ಣಿನ ಆಸ್ಪತ್ರೆ, ಮಂಗಳೂರು ಎ.ಜೆ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್, ಮಂಗಳೂರು, ಮಂಗಳ ಕಾಲೇಜು, ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್, ಕದ್ರಿ, ಮಂಗಳೂರು ಇವರ ನುರಿತ ತಜ್ಞ ವೈದ್ಯ ತಂಡದವರಿಂದ ಆಗಸ್ಟ್ 30ರಂದು 9.30ರಿಂದ ಅಪರಾಹ್ನ 12.00ರವರೆಗೆ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ ನಡೆಯಲಿದೆ. https://chat.whatsapp.com/FCEnlTkAKCC0MGPhXtX4i4 ಸ್ಥಳ : 2ನೇ ಮಹಡಿ, ರಾಜ್ಯ ಸರಕಾರಿ ನೌಕರರ ಸಂಘದ ಸಮುದಾಯ ಭವನ ಕಟ್ಟಡ, ಮಂಗಳೂರು ಇಲ್ಲಿ ಶಿಬಿರ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಇದರ ಪ್ರಯೋಜನ ಪಡೆಯುವಂತೆ ಆತ್ಮಶಕ್ತಿ ಸಹಕಾರ ಸಂಘದ ಪ್ರಕಟಣೆ ತಿಳಿಸಿದೆ.
ಮಂಗಳೂರು: ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆ ಪ್ರಕಟಿಸಿರುವ, ಚಿಂತಕ ಹಾಗೂ ಶಿಕ್ಷಕರಾದ ಅರವಿಂದ ಚೊಕ್ಕಾಡಿಯವರು ಕರಾವಳಿಯ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾವ್ ಅವರ ಕುರಿತು ರಚಿಸಿರುವ ಮೊಗೆದಷ್ಟೂ ಮೊಳೆಯುವ ಮೊಳಹಳ್ಳಿ ಎಂಬ ಕೃತಿಯ ಬಿಡುಗಡೆ ಹಾಗೂ ಸಂವಾದ ಕಾರ್ಯಕ್ರಮ ಆಗಸ್ಟ್ 30ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಮಂಗಳೂರಿನ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನ ಡಾ. ಕೆ. ಶಿವರಾಮ ಕಾರಂತ ಸಭಾಭವನದಲ್ಲಿ ನಡೆಯಲಿದೆ. https://chat.whatsapp.com/FCEnlTkAKCC0MGPhXtX4i4 ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆಯವರು ಕೃತಿ ಬಿಡುಗಡೆ ಮಾಡಿ ಸಮಗ್ರ ವಿಶ್ಲೇಷಣೆ ಮಾಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಹಿಳಾ ಸಬಲೀಕರಣದ ನೆಲೆಯಲ್ಲಿ ಮೊಗೆದಷ್ಟೂ ಮೊಳೆಯುವ ಮೊಳಹಳ್ಳಿ ಎಂಬ ವಿಷಯದ ಬಗ್ಗೆ ಉಡುಪಿಯ ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು…
ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್ನಿಂದ ನಾಳೆ ಭತ್ತ ಕೃಷಿಗೆ ಪ್ರೋತ್ಸಾಹ ಧನ ವಿತರಣೆ, ಪ್ರತಿಭಾ ಪುರಸ್ಕಾರ
ಉಳ್ಳಾಲ: ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್ ವತಿಯಿಂದ ಆಗಸ್ಟ್ 30ರಂದು ಭತ್ತ ಕೃಷಿಗೆ ಪ್ರೋತ್ಸಾಹ ಧನ ವಿತರಣೆ, ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದೆ. https://chat.whatsapp.com/FCEnlTkAKCC0MGPhXtX4i4 ಬ್ಯಾಂಕಿನ ಸಭಾಂಗಣದಲ್ಲಿ ಬೆಳಗ್ಗೆ 9-30ಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಡಾ| ದೇವಿಪ್ರಸಾದ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವ ಯು.ಟಿ ಖಾದರ್ ಅವರನ್ನು ಸನ್ಮಾನಿಸಲಾಗುವುದು. ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್ ಅಧ್ಯಕ್ಷರಾದ ಕೃಷ್ಣ ಶೆಟ್ಟಿ, ಕೆಳಗಿನ ಕೋಟೆಕಾರುಗುತ್ತು ಅಧ್ಯಕ್ಷತೆ ವಹಿಸಲಿದ್ದಾರೆ. ಕೋಟೆಕಾರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮಾಲಿನಿ, ಉಳ್ಳಾಲ ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟದ ಅಧ್ಯಕ್ಷರಾದ ದೇವಕಿ ಆರ್. ಉಳ್ಳಾಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬ್ಯಾಂಕಿನ ಉಪಾಧ್ಯಕ್ಷರಾದ ಕೆ.ಬಿ. ಅಬುಸಾಲಿ ಕಿನ್ಯಾ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರ್ಷವರ್ಧನ ಉಳ್ಳಾಲ್ ಉಪಸ್ಥಿತರಿರಲಿದ್ದಾರೆ. ನಿರ್ದೇಶಕರಾದ ಗಂಗಾಧರ್ ಯು, ಕೆ. ಕೃಷ್ಣಪ್ಪ ಸಾಲಿಯಾನ್, ಉದಯಕುಮಾರ್ ಶೆಟ್ಟಿ,…
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ: ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಲು ಹೈಕೋರ್ಟ್ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ. https://chat.whatsapp.com/FCEnlTkAKCC0MGPhXtX4i4 ಈ ಸಂಬಂಧ ಬ್ಯಾಂಕಿನ ನಿರ್ದೇಶಕರೂ ಆಗಿರುವ ಕಡೂರಿನ ಮಾಜಿ ಶಾಸಕ ಕೆ.ಎಸ್.ಪ್ರಕಾಶ್ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. ಅರ್ಜಿದಾರರ ಪರ ಹಿರಿಯ ವಕೀಲ ಜಯಕುಮಾರ್ ಎಸ್.ಪಾಟೀಲ್ ಅವರ ವಾದ ಆಲಿಸಿದ ನ್ಯಾಯಪೀಠ, ರಾಜ್ಯ ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಸಹಕಾರ ಸಂಘಗಳ ನಿಬಂಧಕರು, ಅಪೆಕ್ಸ್ ಬ್ಯಾಂಕ್ ಚುನಾವಣಾಧಿಕಾರಿ, ಸಹಕಾರ ಚುನಾವಣಾ ಪ್ರಾಧಿಕಾರ, ಬೆಂಗಳೂರು ಕಂದಾಯ ವಿಭಾಗದ ಪ್ರಾದೇಶಿಕ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು. ಅಪೆಕ್ಸ್ ಬ್ಯಾಂಕ್‌ಗೆ ತುರ್ತು ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಸೆಪ್ಟೆಂಬರ್ 2ಕ್ಕೆ ಮುಂದೂಡಿದೆ. ಅರ್ಜಿದಾರರ ಪರ ಹೈಕೋರ್ಟ್ ವಕೀಲ ದೇವಿಪ್ರಸಾದ್ ಶೆಟ್ಟಿ ವಕಾಲತ್ತು ವಹಿಸಿದ್ದಾರೆ. ಅರ್ಜಿಯಲ್ಲಿ ಏನಿದೆ?: ‘ಅಪೆಕ್ಸ್ ಬ್ಯಾಂಕ್…
ಬೆಳ್ತಂಗಡಿ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ವಾರ್ಷಿಕ ಮಹಾಸಭೆ ಕೆ.ಹರೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆಯಿತು. https://chat.whatsapp.com/FCEnlTkAKCC0MGPhXtX4i4 ಸಂಘದ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘವು ಕಳೆದ ಆರ್ಥಿಕ ವರ್ಷದಲ್ಲಿ 168 ಕೋಟಿಗೂ ಅಧಿಕ ವ್ಯವಹಾರ ನಡೆಸಿ 71.63 ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ ಶೇ.12ರಷ್ಟು ಡಿವಿಡೆಂಡ್ ನೀಡಲಾಗುವುದು ಎಂದು ತಿಳಿಸಿದರು. ಸಂಘದಲ್ಲಿ 1,032 ಎ ತರಗತಿ, 2,061 ಸಿ ವರ್ಗದ ಸದಸ್ಯರಿದ್ದು, 1 ಕೋಟಿಗೂ ಅಧಿಕ ಪಾಲು ಬಂಡವಾಳ ಹೊಂದಿದೆ. 98 ಕೋಟಿ ಠೇವಣಿ ಸಂಗ್ರಹವಾಗಿದ್ದು, 93 ಕೋಟಿ ಸಾಲ ವಿತರಿಸಲಾಗಿದೆ. ನಿಡ್ಲೆ ಹಾಗೂ ಕಡಬದಲ್ಲಿ ಸಂಘದ ಶಾಖೆಗಳು ಕಾರ್ಯನಿರ್ವಹಿಸುತ್ತಿದ್ದು, ಗ್ರಾಹಕರ ಉತ್ತಮ ವ್ಯವಹಾರದಿಂದ ಸಂಘದ ಬೆಳವಣಿಗೆಗೆ ಸಹಕಾರಿಯಾಗಿದೆ. ಮುಂದಿನ ದಿನಗಳಲ್ಲಿ ಉಜಿರೆ, ನೆರಿಯದಲ್ಲಿ ಶಾಖೆಗಳನ್ನು ತೆರೆಯುವ ಕುರಿತು ಆಲೋಚನೆ ನಡೆಸಲಾಗುತ್ತಿದೆ ಎಂದರು. ಸಂಘದ ನಿರ್ದೇಶಕ ಎ.ಬಿ ಉಮೇಶ್, ಬಿ.ಎಂ. ಅಬ್ದುಲ್ ಹಮೀದ್, ಜಗದೀಶ್ ಹೆಗ್ಡೆ, ಕೆ.ಎಸ್. ಯೋಗೀಶ್ ಕುಮಾರ್,…
ಮಂಗಳೂರು : ನಗರದ ಬಿಜೈ ಪ್ರದೇಶದಲ್ಲಿ ಪ್ರಧಾನ ಕಚೇರಿ ಹೊಂದಿರುವ ಶ್ರೀ ಮಂಗಳಾಜ್ಯೋತಿ ವಿವಿಧೋದ್ಧೇಶ ಸಹಕಾರಿ ಸಂಘ ನಿಯಮಿತ, ಬಿಜೈ, ಮಂಗಳೂರು ಇದರ 31ನೇ ವಾರ್ಷಿಕ ಮಹಾಸಭೆ ಹಾಗೂ 2025-26ನೇ ಸಾಲಿನ ವಾರ್ಷಿಕ ವರದಿ ಮಂಡನೆ ಸಂಘದ ಅಧ್ಯಕ್ಷರಾದ ರಾಜೇಂದ್ರ ಕುಮಾರ್ ಇವರ ಅಧ್ಯಕ್ಷತೆಯಲ್ಲಿ ಬಿಜೈ ಚರ್ಚ್ ಹಾಲ್‌ನಲ್ಲಿ ಜರಗಿತು. https://chat.whatsapp.com/FCEnlTkAKCC0MGPhXtX4i4 ಸಂಘವು ವರದಿ ವರ್ಷ 2025-26ರಲ್ಲಿ 22 ಕೋಟಿ 48 ಲಕ್ಷ ಠೇವಣಿ ಹಾಗೂ 23 ಕೋಟಿ 23 ಲಕ್ಷ ಹೊರಬಾಕಿ ಸಾಲಗಳೊಂದಿಗೆ ಒಟ್ಟು 178 ಕೋಟಿ ರೂಪಾಯಿಗಳ ವ್ಯವಹಾರ ಮಾಡಿದ್ದು 52.84 ಲಕ್ಷ ರೂಪಾಯಿ ಲಾಭ ಗಳಿಸಿದೆ. 98 ಶೇಕಡಾಕ್ಕಿಂತಲೂ ಅಧಿಕ ಸಾಲ ವಸೂಲಾತಿ ದಾಖಲಿಸಿ ಲೆಕ್ಕ ಪರಿಶೋಧನೆಯಲ್ಲಿ ‘ಎ’ ಶ್ರೇಣಿಯಲ್ಲಿ ವರ್ಗಿಕರಣಗೊಂಡಿದೆ. ಸದಸ್ಯರಿಗೆ 18 ಶೇಕಡಾ ಡಿವಿಡೆಂಡ್ ಘೋಷಿಸಲಾಯಿತು. ವರದಿ ವರ್ಷದಲ್ಲಿ ಸಂಘದ ವ್ಯವಹಾರಗಳಲ್ಲಿ ಶೇಕಡಾ 35ರಷ್ಟು ಅಭಿವೃದ್ಧಿ ದಾಖಲಿಸಿದೆ. ಸಂಘದ ಸರ್ವತೋಮುಖ ಅಭಿವೃದ್ಧಿಗಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿಯೂ ಸಂಘಕ್ಕೆ…
ಕುಂದಾಪುರ: ಹೊಸಾಡು ಸೇವಾ ಸಹಕಾರ ಸಂಘ ನಿ. ಮುಳ್ಳಿಕಟ್ಟೆ ಇದರ 2025-26ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಗುರುವಾರ ಹೊಸಾಡು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. https://chat.whatsapp.com/FCEnlTkAKCC0MGPhXtX4i4 ಸಂಘದ ಅಧ್ಯಕ್ಷರಾದ ರಾಘವೇಂದ್ರ ಶೆಟ್ಟಿ ಇವರು ಅಧ್ಯಕ್ಷತೆ ವಹಿಸಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಲೆಕ್ಕಪರಿಶೋಧನಾ ವರದಿ ವಾಚಿಸಿದರು. ನಿರ್ದೇಶಕರಾದ ಸತೀಶ್ ಶೆಟ್ಟಿ ಯಳೂರು ಸ್ವಾಗತಿಸಿದರು. ನಿರ್ದೇಶಕರಾದ ರೇಖಾ ಪುತ್ರನ್ ತಿಳುವಳಿಕೆ ಪತ್ರ ವಾಚಿಸಿದರು. ವರದಿ ವರ್ಷದಲ್ಲಿ ಸಂಘವು ಗಳಿಸಿದ ಲಾಭಾಂಶ ಹಂಚಿಕೆ ಮಾಡಿ ಎ ವರ್ಗದ ಸದಸ್ಯರಿಗೆ ಶೇ.10 ಡಿವಿಡೆಂಡ್ ಘೋಷಿಸಲಾಯಿತು. ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳನ್ನು ಗುರುತಿಸಿ ಗೌರವಿಸಿಲಾಯಿತು. ಸಂಘದ ಉಪಾಧ್ಯಕ್ಷರಾದ ಚಂದ್ರಶೇಖರ, ನಿರ್ದೇಶಕರಾದ ನವೀನ್ ಫೆರ್ನಾಂಡಿಸ್, ದಿನೇಶ್ ಜೋಗಿ, ಪ್ರದೀಪ ಬಿಲ್ಲವ, ರಾಮ ಗಾಣಿಗ, ರೇಖಾ ಪುತ್ರನ್, ಅಕ್ಷತಾ ರವೀಂದ್ರ ಹಾಗೂ ಸಂಘದ ಸದಸ್ಯರು ಹಾಜರಿದ್ದರು. ಸಂಘದ ಸಿಬ್ಬಂದಿ ಶಿಲ್ಪಾ ಕಾರ್ಯಕ್ರಮ ನಿರೂಪಿಸಿದರು. ಸಿಬ್ಬಂದಿ ಪ್ರಶಾಂತ್ ವಂದಿಸಿದರು.
