Author: admin
ಸಿಂಧನೂರು: ವಿದ್ಯಾರ್ಥಿಗಳಿಗೆ ಸಹಕಾರ ಚಳವಳಿಯ ಬಗ್ಗೆ ಮಾಹಿತಿ ನೀಡುವುದು ಅತ್ಯಗತ್ಯವಾಗಿದೆ. ಸಹಕಾರ ಚಳವಳಿ ಆರಂಭವಾದ ಬಗೆ, ಅದರ ಕಾರ್ಯಗಳು ಮತ್ತು ಉಪಯೋಗಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವುದು ಬಹಳ ಮುಖ್ಯವಾಗಿದೆ ಎಂದು ಇಲ್ಲಿನ ಎಕ್ಸಲೆಂಟ್ ಕಾಲೇಜು ಪ್ರಾಂಶುಪಾಲರಾದ ಮಂಜುನಾಥ ಸೋಮಲಾಪುರ ಹೇಳಿದರು. https://chat.whatsapp.com/FCEnlTkAKCC0MGPhXtX4i4 ಸಿಂಧನೂರಿನ ಎಕ್ಸಲೆಂಟ್ ಕಾಲೇಜಿನಲ್ಲಿ ಮಂಗಳವಾರ ರಾಜ್ಯ ಸಹಕಾರ ಮಹಾಮಂಡಳ, ರಾಯಚೂರು ಜಿಲ್ಲಾ ಸಹಕಾರ ಒಕ್ಕೂಟ ಮತ್ತು ಎಕ್ಸಲೆಂಟ್ ಪದವಿಪೂರ್ವ ಕಾಲೇಜು ಆಶ್ರಯದಲ್ಲಿ ಯುವ ಜನರಿಗೆ ಕ್ಲಸ್ಟರ್ ಮಟ್ಟದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ಸಹಕಾರ ಚಳವಳಿ, ಇತಿಹಾಸ, ಸಹಕಾರ ಸಂಘದ ರಚನೆ ಬಗ್ಗೆ ಜಾಗೃತಿ ಮೂಡಬೇಕಿದೆ. ಅದು ಇಂಥ ತರಬೇತಿಯಿಂದ ಮಾತ್ರ ಸಾಧ್ಯ ಎಂದರು. ಕಾರ್ಯದರ್ಶಿ ವೆಂಕಟರಾವ್ ಮಾತನಾಡಿ, ಸಹಕಾರ ಕ್ಷೇತ್ರದಲ್ಲಿ ಯುವಜನರ ಪಾತ್ರ ಪ್ರಮುಖವಾಗಿದ್ದು, ಇಂಥ ತರಬೇತಿಗಳಲ್ಲಿ ಭಾಗವಹಿಸಿ ಅದರ ಮಾಹಿತಿ ಪಡೆದು ಸದುಪಯೋಗ ಪಡಿಸಿಕೊಳ್ಳಬೇಕು. ಸಹಕಾರ ಕ್ಷೇತ್ರದಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿ, ಹೆಚ್ಚಿನ ಉದ್ಯೋಗಾವಕಾಶಗಳನ್ನು ಹೊಂದಬೇಕು ಎಂದು ಸಲಹೆ ನೀಡಿದರು. ರಾಯಚೂರು…
ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ, ಬೆಳ್ತಂಗಡಿ ಇದರ 28ನೇ ನೂತನ ಶಾಖೆಯು ಗುರುಪುರ-ಕೈಕಂಬದ ಅನಂತ ಮಹಲ್ ಕಾಂಪ್ಲೆಕ್ಸ್‌ನಲ್ಲಿ ಜೂನ್ 19ರಂದು ಉದ್ಘಾಟನೆಗೊಳ್ಳಲಿದೆ. https://chat.whatsapp.com/FCEnlTkAKCC0MGPhXtX4i4 ನೂತನ ಶಾಖೆಯ ಕಚೇರಿಯ ಉದ್ಘಾಟನೆಯನ್ನು ಅದ್ಯಪಾಡಿ ಶ್ರೀ ಆದಿನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ಶೆಟ್ಟಿ ಏತಮೊಗರು ದೊಡ್ಡಮನೆ ಅವರು ನೆರವೇರಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಭಗೀರಥ ಜಿ. ಅವರು ವಹಿಸಲಿದ್ದಾರೆ. ಭದ್ರತಾ ಕೊಠಡಿಯನ್ನು ಬಿಲ್ಲವ ಸಮಾಜ ಸೇವಾ ಸಂಘ, ಬಂಟ್ವಾಳ ಇದರ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಭದ್ರತಾ ಕೋಶವನ್ನು ಎಸ್‌ಆರ್‌ಆರ್ ಮಸಾಲ ಇಂಡಸ್ಟ್ರೀಸ್ ಮಂಗಳೂರು ಇದರ ಮ್ಯಾನೇಜಿಂಗ್ ಡೈರೆಕ್ಟರ್ ಶೈಲೇಂದ್ರ ವೈ.ಸುವರ್ಣ, ಗಣಕ ಯಂತ್ರವನ್ನು ಸಾರ್ವಜನಿಕ ಗಣೇಶೋತ್ಸವ ಸಮಿತಿ, ಕೈಕಂಬ ಇದರ ಅಧ್ಯಕ್ಷ ವಿನೋದ್ ಮಾಡ ಅವರು ಉದ್ಘಾಟಿಸಲಿದ್ದಾರೆ. ನಿರಖು ಠೇವಣಿ ಪತ್ರವನ್ನು ಹೊಟೇಲ್ ಶ್ರೀರಾಮ್ ಕೈಕಂಬದ ಮಾಲಕ ಎಂ.ಹರಿರಾವ್, ಉಳಿತಾಯ ಖಾತೆ ಪುಸ್ತಕವನ್ನು ಗಂಜಿಮಠ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷೆ ಮಾಲತಿ ಎಂ.…
ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಪಡೀಲ್ ಶಾಖೆ ದ.ಕ. ಜಿಲ್ಲಾಧಿಕಾರಿ ಕಾರ್ಯಾಲಯ ಪ್ರಜಾಸೌಧಕ್ಕೆ ಸ್ಥಳಾಂತರ
ಮಂಗಳೂರು: ರಾಜ್ಯದ ಮುಂಚೂಣಿಯ ಕ್ರೆಡಿಟ್ ಸಹಕಾರ ಸಂಘವಾದ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಪಡೀಲ್ ಶಾಖೆಯನ್ನು ದ.ಕ. ಜಿಲ್ಲಾಧಿಕಾರಿ ಕಾರ್ಯಾಲಯ ಪ್ರಜಾಸೌಧಕ್ಕೆ ಬುಧವಾರ ಸ್ಥಳಾಂತರ ಮಾಡಲಾಯಿತು. https://chat.whatsapp.com/FCEnlTkAKCC0MGPhXtX4i4 ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಮ್ಮ ಕಚೇರಿ ಸಂಕೀರ್ಣದಲ್ಲಿ ಬ್ಯಾಂಕುಗಳ ಹಾಗೆಯೇ ಜನಸಾಮಾನ್ಯರಿಗೆ ಆರ್ಥಿಕ ಸವಲತ್ತುಗಳನ್ನು ನೀಡಿ ಜನರ ಆರ್ಥಿಕ ಅಭ್ಯುದಯಕ್ಕೆ ಕೊಡುಗೆ ನೀಡುತ್ತಿರುವ ಸಹಕಾರ ಸಂಘಗಳಿಗೆ ಅವಕಾಶ ನೀಡಬೇಕು ಎಂಬ ನಿಟ್ಟಿನಲ್ಲಿ ಸಹಕಾರಿ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಶ್ರೀ ರಾಮಕೃಷ್ಣ ಸೊಸೈಟಿಗೆ ಅವಕಾಶ ಕಲ್ಪಿಸಲಾಗಿದೆ. ಶ್ರೀ ರಾಮಕೃಷ್ಣ ಸೊಸೈಟಿಯು ಹೆಚ್ಚು ಹೆಚ್ಚು ವಹಿವಾಟು ಮಾಡಿ ಇನ್ನಷ್ಟು ಅಭಿವೃದ್ಧಿ ಹೊಂದಲಿ ಎಂದು ಹಾರೈಸಿದರು. ಅಪರ ಜಿಲ್ಲಾಧಿಕಾರಿ ರಾಜು ಕೆ. ಮಾತನಾಡಿ, ರಾಜ್ಯದಲ್ಲಿ ಸಹಕಾರ ಚಳವಳಿಯು ಗದಗದಲ್ಲಿ ಆರಂಭವಾಗಿದ್ದರೂ, ಅದು ಅತ್ಯುತ್ತಮವಾಗಿ ಪ್ರಗತಿ ಹೊಂದಿ ಜನರ ವಿಶ್ವಾಸಕ್ಕೆ ಪಾತ್ರವಾಗಿರುವುದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲೆಗಳಲ್ಲಿ. ಇದಕ್ಕೆ ಪೂರಕವಾಗಿ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್…
ನವದೆಹಲಿ: ಮಹತ್ವದ ನಿರ್ಧಾರವೊಂದರಲ್ಲಿ ಎರಡು ದಶಕಗಳ ಬಳಿಕ ಪಟ್ಟಣ ಸಹಕಾರಿ ಬ್ಯಾಂಕುಗಳಿಗೆ ಹೊಸ ಪರವಾನಗಿ ನೀಡುವುದಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ ಸಜ್ಜಾಗಿದೆ. ಪಟ್ಟಣ ಸಹಕಾರಿ ಬ್ಯಾಂಕಿಂಗ್ ವಲಯದ ಚಟುವಟಿಕೆಗಳನ್ನು ಉತ್ತೇಜಿಸಲು ಕಡಿಮೆ ಬಂಡವಾಳದ ಅವಶ್ಯಕತೆಯ ಬಗ್ಗೆ ಅಭಿಪ್ರಾಯಗಳು ವ್ಯಕ್ತವಾಗುತ್ತಿರುವ ಕಾರಣ ಆರ್‌ಬಿಐ ಈ ಕ್ರಮಕ್ಕೆ ಮುಂದಾಗಿದೆ ಎಂದು ಮೂಲಗಳು ಹೇಳಿವೆ. https://chat.whatsapp.com/FCEnlTkAKCC0MGPhXtX4i4 ವರದಿಯೊಂದರ ಪ್ರಕಾರ ಆರ್‌ಬಿಐ 2004ರಲ್ಲಿ ಪಟ್ಟಣ ಸಹಕಾರಿ ಬ್ಯಾಂಕುಗಳಿಗೆ ಪರವಾನಗಿ ನೀಡುವುದನ್ನು ಸ್ಥಗಿತಗೊಳಿಸಿತ್ತು. ಇದೀಗ ಪಟ್ಟಣ ಸಹಕಾರಿ ಬ್ಯಾಂಕುಗಳಿಗೆ ಹೊಸ ಪರವಾನಗಿಗಳನ್ನು ನೀಡುವ ಪ್ರಸ್ತಾವನೆಗೆ ಅನುಮೋದನೆ ನೀಡುವ ನಿರೀಕ್ಷೆಯಿದೆ. ಪಟ್ಟಣ ಸಹಕಾರಿ ಬ್ಯಾಂಕುಗಳಿಗೆ ಪರವಾನಗಿ ನೀಡುವುದನ್ನು ಪುನರಾರಂಭಿಸಬೇಕೇ, ಬೇಡವೇ ಎಂಬ ಬಗ್ಗೆ ಪ್ರತಿಕ್ರಿಯೆ ಕೋರಿ ಆರ್‌ಬಿಐ ಜನವರಿಯಲ್ಲಿ ಮಾಹಿತಿ ಕೇಳಿತ್ತು. 2004ರಿಂದ ಪಟ್ಟಣ ಸಹಕಾರಿ ಬ್ಯಾಂಕುಗಳಿಗೆ ನಿಯಂತ್ರಕ ಮೇಲ್ವಿಚಾರಣೆ ಮತ್ತು ಮೇಲ್ವಿಚಾರಣಾ ಮಾನದಂಡಗಳು ಗಮನಾರ್ಹವಾಗಿ ಸುಧಾರಿಸಿದ್ದು, ಆರ್‌ಬಿಐ ಈ ವಲಯದಲ್ಲಿ ಪರವಾನಗಿ ನೀಡುವ ಬಗ್ಗೆ ಮುಂದಾಗಿದೆ ಎನ್ನಲಾಗಿದೆ. ಮೇಲ್ವಿಚಾರಣಾ ಕಾರ್ಯವಿಧಾನಗಳು, ಹೆಚ್ಚುವರಿ ಹಣಕಾಸು ಸೇರ್ಪಡೆ, ಸಹಕಾರಿ ಬ್ಯಾಂಕುಗಳ ಸುಧಾರಿತ…
ಪಟ್ಟಣ ಸಹಕಾರಿ ಬ್ಯಾಂಕುಗಳ ನಿರ್ದೇಶಕರ ಅಧಿಕಾರಾವಧಿ ಅಂಕುಶ ಹಾಕುವ ಆರ್‌ಬಿಐ ನಿಯಮದ ವಿರುದ್ಧ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ
ಬೆಂಗಳೂರು: ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಆಡಳಿತಾತ್ಮಕ ಪಾರದರ್ಶಕತೆ ತರಲು ಮತ್ತು ಅಧಿಕಾರದ ದುರ್ಬಳಕೆಗೆ ಬ್ರೇಕ್ ಹಾಕಲು ಮುಂದಾಗಿರುವ ಭಾರತೀಯ ರಿಸರ್ವ್ ಬ್ಯಾಂಕ್ ಪಟ್ಟಣ ಸಹಕಾರಿ ಬ್ಯಾಂಕುಗಳ ನಿರ್ದೇಶಕರ ಅವಧಿಯನ್ನು ಗರಿಷ್ಠ ಹತ್ತು ವರ್ಷಕ್ಕೆ ಸೀಮಿತಗೊಳಿಸಿ ಆ ಬಳಿಕ ಮೂರು ವರ್ಷಗಳ ಕೂಲಿಂಗ್ ಆಫ್ ಅವಧಿಯನ್ನು ಪರಿಚಯಿಸಿರುವ ಕ್ರಮದ ವಿರುದ್ಧ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. https://chat.whatsapp.com/FCEnlTkAKCC0MGPhXtX4i4 ಪಟ್ಟಣ ಸಹಕಾರಿ ಬ್ಯಾಂಕುಗಳ ಆಡಳಿತ ತಿದ್ದುಪಡಿ ನಿರ್ದೇಶನಗಳು, 2026ರ ಸಾಂವಿಧಾನಿಕ ಸಿಂಧುತ್ವ ಮತ್ತು ಬ್ಯಾಂಕಿಂಗ್ ಕಾನೂನುಗಳು (ತಿದ್ದುಪಡಿ) ಕಾಯ್ದೆ, 2025ರ ಕೆಲವು ನಿಬಂಧನೆಗಳನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಕರ್ನಾಟಕ ರಾಜ್ಯ ಸಹಕಾರಿ ಪಟ್ಟಣ ಬ್ಯಾಂಕುಗಳ ಒಕ್ಕೂಟ ಮತ್ತು ಹಿರಿಯ ಸಹಕಾರಿ ಎಣ್ಣೆಗೆರೆ ಆರ್. ವೆಂಕಟರಾಮಯ್ಯ ಅವರು ಆರ್‌ಬಿಐಯು ಪಟ್ಟಣ ಸಹಕಾರಿ ಬ್ಯಾಂಕುಗಳ ಆಡಳಿತ ತಿದ್ದುಪಡಿ ನಿರ್ದೇಶನಗಳು, 2026ರ ಸಾಂವಿಧಾನಿಕ ಸಿಂಧುತ್ವವನ್ನು ಮತ್ತು ಬ್ಯಾಂಕಿಂಗ್ ಕಾನೂನುಗಳು (ತಿದ್ದುಪಡಿ) ಕಾಯ್ದೆ, 2025ರ ಕೆಲವು ನಿಬಂಧನೆಗಳನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ. ಕರ್ನಾಟಕ ಹೈಕೋರ್ಟ್‌ನ ಬೆಂಗಳೂರು…
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿಯಾದ ಕ್ಯಾಂಪ್ಕೊ ನಿಯೋಗ; ಮಂಡಿ ತೆರಿಗೆ ಹೊರೆಯಿಂದ ವಿನಾಯಿತಿ ನೀಡಲು ಮನವಿ
ಮಂಗಳೂರು: ಕ್ಯಾಂಪ್ಕೋ ಅಧ್ಯಕ್ಷರಾದ ಎಸ್.ಆರ್. ಸತೀಶ್ಚಂದ್ರ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಡಾ. ಬಿ.ವಿ.ಸತ್ಯನಾರಾಯಣ ಅವರು ಲಕ್ನೋದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿ, ಅಡಿಕೆ ಬೆಳೆಗಾರರು ಮತ್ತು ಸಹಕಾರ ಸಂಸ್ಥೆಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಿದರು. ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ‘ಮಂಡಿ ತೆರಿಗೆ’ಯಿಂದಾಗಿ ಸಹಕಾರ ಸಂಸ್ಥೆಗಳು ಎದುರಿಸುತ್ತಿರುವ ಸಂಕಷ್ಟಗಳನ್ನು ನಿಯೋಗವು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಸುಮಾರು 1.5 ಲಕ್ಷಕ್ಕೂ ಹೆಚ್ಚು ರೈತ ಸದಸ್ಯರನ್ನು ಹೊಂದಿರುವ ಬಹು-ರಾಜ್ಯ ಸಹಕಾರ ಸಂಸ್ಥೆಯಾದ ಕ್ಯಾಂಪ್ಕೊ ಪ್ರಸ್ತುತ ತೆರಿಗೆ ಪದ್ಧತಿಯಿಂದ ತೀವ್ರವಾಗಿ ತೊಂದರೆಗಳನ್ನು ಅನುಭವಿಸುತ್ತಿದೆ. ಇದರಿಂದಾಗಿ ನ್ಯಾಯಸಮ್ಮತ ವ್ಯಾಪಾರದ ನಡೆಸುವ ಸಹಕಾರ ಸಂಸ್ಥೆಗಳ ವೆಚ್ಚ ಹೆಚ್ಚಾಗಿದ್ದು, ಖಾಸಗಿ ಮಾರುಕಟ್ಟೆ ನಿರ್ವಾಹಕರ ವಿರುದ್ಧ ಪೈಪೋಟಿ ನಡೆಸುವುದು ಕಷ್ಟಕರವಾಗಿದೆ ಎಂದು ವಿವರಿಸಲಾಯಿತು. https://chat.whatsapp.com/FCEnlTkAKCC0MGPhXtX4i4 ಕರ್ನಾಟಕದಿಂದ ಖರೀದಿಸುವ ಅಡಿಕೆಗೆ ಈಗಾಗಲೇ ಮೂಲ ಸ್ಥಳದಲ್ಲಿಯೇ (ಕರ್ನಾಟಕದಲ್ಲಿ) ಎಪಿಎಂಸಿ ಸೆಸ್/ಮಾರುಕಟ್ಟೆ ಶುಲ್ಕವನ್ನು ವಿಧಿಸಲಾಗಿರುತ್ತದೆ. ಇದೇ ಅಡಿಕೆಗೆ ಉತ್ತರ ಪ್ರದೇಶದಲ್ಲಿ ಮತ್ತೆ ಮಂಡಿ ತೆರಿಗೆ ವಿಧಿಸಲಾಗುತ್ತಿದ್ದು, ಒಂದೇ ಕೃಷಿ…
ಮಂಗಳೂರು: ಎಂಸಿಸಿ ಬ್ಯಾಂಕ್‌ನ 2025-26ನೇ ಹಣಕಾಸು ವರ್ಷದ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವು ಶನಿವಾರ ಮಂಗಳೂರು ಆಡಳಿತ ಕಚೇರಿಯ ಪಿ.ಎಫ್.ಎಕ್ಸ್. ಸಲ್ದಾನ್ಹಾ ಸ್ಮಾರಕ ಸಭಾಂಗಣದಲ್ಲಿ ನಡೆಯಿತು. https://chat.whatsapp.com/FCEnlTkAKCC0MGPhXtX4i4 ಮಂಗಳೂರು ಧರ್ಮಪ್ರಾಂತ್ಯದ ಎಸ್ಟೇಟ್ ಮ್ಯಾನೇಜರ್‌ಗಳಾದ ವಂ. ಫಾ. ಮ್ಯಾಕ್ಸಿಂ ರೊಸಾರಿಯೊ ಉದ್ಘಾಟಿಸಿದರು. ತಮ್ಮ ಉದ್ಘಾಟನಾ ಭಾಷಣದಲ್ಲಿ ಅವರು ಎಂಸಿಸಿ ಬ್ಯಾಂಕ್ ಅನ್ನು ಕ್ಯಾಥೋಲಿಕ್ ಸಮುದಾಯದ ಹೆಮ್ಮೆ ಮತ್ತು ಅಮೂಲ್ಯ ರತ್ನವೆಂದು ಬಣ್ಣಿಸಿ, ಬ್ಯಾಂಕ್ ವರ್ಷದಿಂದ ವರ್ಷಕ್ಕೆ ಸಾಧಿಸಿರುವ ಗಮನಾರ್ಹ ಪ್ರಗತಿಯನ್ನು ಶ್ಲಾಘಿಸಿದರು. ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೋ ಅವರ ದೂರದೃಷ್ಟಿಯ ನಾಯಕತ್ವ, ನಿರ್ದೇಶಕರ ಮಂಡಳಿಯ ಮಾರ್ಗದರ್ಶನ ಹಾಗೂ ಸಿಬ್ಬಂದಿಯ ಸಮರ್ಪಿತ ಸೇವೆಯನ್ನು ಪ್ರಶಂಸಿಸಿದ ಅವರು, ಗ್ರಾಹಕ ಸ್ನೇಹಿ ಸೇವೆ, ವೃತ್ತಿಪರತೆ ಮತ್ತು ಬದ್ಧತೆಯೇ ಬ್ಯಾಂಕ್‌ಗೆ ಗ್ರಾಹಕರ ವಿಶ್ವಾಸವನ್ನು ಗಳಿಸಿಕೊಟ್ಟಿದೆ ಎಂದು ಹೇಳಿದರು. ಬ್ಯಾಂಕ್‌ನ ನಿರಂತರ ಬೆಳವಣಿಗೆಗೆ ನವೀನತೆ, ತಂಡದ ಕಾರ್ಯಪಟುತ್ವ, ನಿರಂತರ ಕಲಿಕೆ ಹಾಗೂ ಗ್ರಾಹಕ ಕೇಂದ್ರಿತ ಸೇವೆ ಅಗತ್ಯವೆಂದು ಅವರು ಅಭಿಪ್ರಾಯಪಟ್ಟರು. ಅಧ್ಯಕ್ಷೀಯ ಭಾಷಣದಲ್ಲಿ ಸಹಕಾರ…
ಮಂಗಳೂರು: ಶ್ರೀಶಾ ಸೌಹಾರ್ದ ಸೊಸೈಟಿಯ ಪ್ರಾಯೋಜಕತ್ವದಲ್ಲಿ ದಾಸಸಾಹಿತ್ಯ ಸೇವಾ ಪ್ರತಿಷ್ಠಾನವು ಅಧಿಕ ಮಾಸದ ಪರ್ವಕಾಲದಲ್ಲಿ ಭಾನುವಾರ ಸಂಜೆ 6.30ರಿಂದ 8.30ರವರಿಗೆ ನಗರದ ವಿ.ಟಿ.ರಸ್ತೆಯಲ್ಲಿನ ಕೃಷ್ಣ ಮಂದಿರದಲ್ಲಿ ಭಜನ್ ಸಂಧ್ಯಾ ಕಾರ್ಯಕ್ರಮವನ್ನು ಆಯೋಜಿಸಿತ್ತು. https://chat.whatsapp.com/FCEnlTkAKCC0MGPhXtX4i4 ಮುಂಬೈ ಮೂಲದ ವಿದುಷಿ ಭಾಗ್ಯಶ್ರೀ ದೇಶಪಾಂಡೆಯವರು ಅದ್ಭುತವಾಗಿ ಹಾಡುತ್ತ ಕಿಕ್ಕಿರಿದು ನೆರೆದಿದ್ದ ಶ್ರೋತೃಗಳನ್ನು ಧ್ಯಾನಸ್ಥ ಸ್ಥಿತಿಗೆ ಕೊಂಡೊಯ್ದರು. ಸಂತ ತುಕಾರಾಮರವರ ಕೃತಿಗಳೂ ಸೇರಿದಂತೆ ಅನೇಕ ಸಂತರ ಮರಾಠಿ ಹಾಡುಗಳನ್ನು ಸುಶ್ರಾವ್ಯವಾಗಿ ಹಾಡಿದರು. ಸಹಕಲಾವಿದರಾಗಿ ತಬ್ಲಾದಲ್ಲಿ ರಾಜೇಶ್ ಭಾಗವತ್, ಹಾರ್ಮೋನಿಯನಲ್ಲಿ ಹೇಮಂತ್ ಭಾಗವತ್ ಹಾಗೂ ತಾಳದಲ್ಲಿ ಪಾಂಡುರಂಗ ಭಾಗವತ್ ಸೊಗಸಾಗಿ ಸಾಥ್ ನೀಡಿ ಕಚೇರಿಗೆ ಮೆರಗು ನೀಡಿದರು. ಶ್ರೀಶಾ ಸೌಹಾರ್ದ ಸೊಸೈಟಿ ಹಾಗೂ ದಾಸಸಾಹಿತ್ಯ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಎಂ. ಎಸ್.ಗುರುರಾಜ್ ಅವರು ಕಾರ್ಯಕ್ರಮದ ಬಗ್ಗೆ ಮಾತನಾಡಿ ಹರಿದಾಸರ, ಸಂತರ ಕೃತಿಗಳು ಜೀವನ ಮೌಲ್ಯಗಳನ್ನು ಪ್ರತಿಪಾದಿಸುತ್ತಾ ಜೀವನ ಮಟ್ಟವನ್ನು ಮೇಲೇರಿಸುತ್ತವೆ. ಈ ಎಂದಿಗಿಂತಲೂ ಇವುಗಳು ಈಗ ಹೆಚ್ಚು ಪ್ರಸ್ತುತವೆನಿಸುತ್ತವೆ. ಆದ್ದರಿಂದ ದಾಸಸಾಹಿತ್ಯ ಸೇವಾ ಪ್ರತಿಷ್ಠಾನವು ಹರಿದಾಸರ ಸಂತರ ಸಂಗೀತದ…
ಮಂಗಳೂರು: ಸಹಕಾರ ಕ್ಷೇತ್ರದಲ್ಲಿ ನಿರಂತರ ಸಾಧನೆ ಮಾಡುತ್ತಿರುವ ಮಂಗಳೂರಿನ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಥೈಲ್ಯಾಂಡ್‌ನ ಬ್ಯಾಂಕಾಕ್‌ನಲ್ಲಿ ಆಯೋಜಿಸಲಾದ ಮಣಿಪಾಲ್ ಸಿಗ್ನ ಹೆಲ್ತ್ ಇನ್ಶೂರೆನ್ಸ್ ಕಂಪನಿಯ ಲಕ್ಷ್ಯ – 2026, ಪ್ರತಿಷ್ಟಿತ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. https://chat.whatsapp.com/FCEnlTkAKCC0MGPhXtX4i4 ಈ ಸಮ್ಮೇಳನದಲ್ಲಿ ಮಣಿಪಾಲ್ ಸಿಗ್ನ ಹೆಲ್ತ್ ಇನ್ಶೂರೆನ್ಸ್ ಕಂಪನಿಯ ರಿಟೇಲ್ ಬಿಸಿನೆಸ್‌ನಲ್ಲಿ ರಾಷ್ಟ್ರಮಟ್ಟದಲ್ಲಿ ಗುರುತಿಸಿದ ಹಾಗೂ ಆರೋಗ್ಯ ವಿಮಾ ಯೋಜನೆಯ ಗುರಿ ಮೀರಿದ ಸಾಧನೆಗೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರಿಗೆ ಮಣಿಪಾಲ್ ಸಿಗ್ನ ಹೆಲ್ತ್ ಇನ್ಶೂರೆನ್ಸ್ ಕಂಪನಿ ಇಂಡಿಯಾ ಕಂಪನಿಯ ಮುಖ್ಯಸ್ಥರಾದ ಶಶಾಂಕ್ ಚಾಪೆಕರ್ ಹಾಗೂ ಏಜನ್ಸಿ ವಿಸ್ತರಣಾ ಮುಖ್ಯಸ್ಥರಾದ ಪ್ರಸಾದ್ ಶೆಟ್ಟಿ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಮಾರಂಭದಲ್ಲಿ ದಕ್ಷಿಣ ವಲಯ ಮುಖ್ಯಸ್ಥರಾದ ದರ್ವೇಶ್ ಮೊಹಮ್ಮದ್, ಸೌತ್ ಇಂಡಿಯಾ ಎಜನ್ಸಿ ಮುಖ್ಯಸ್ಥರಾದ ವಿಶಾಲ್ ಸುರಾನ ಮತ್ತಿತರರು ಉಪಸ್ಥಿತರಿದ್ದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿಂಗ್ ಸೇವೆಯ ಜೊತೆಗೆ ಆರೋಗ್ಯ ಪೂರ್ಣ…
ಉಳ್ಳಾಲ: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಗುರುವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಅಜ್ಜಿನಡ್ಕ ಇಲ್ಲಿಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕ, ಲೇಖನ ಸಾಮಗ್ರಿಗಳನ್ನು ಕೊಡುಗೆ ನೀಡಲಾಯಿತು. ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕರಾದ ಸುರೇಖಾ ಚಂದ್ರಹಾಸ್ ಮಾತನಾಡಿ, ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಮುತುವರ್ಜಿ ವಹಿಸಿ ಆರು ವರ್ಷಗಳಿಂದ ಸರಕಾರಿ ಶಾಲೆಯಲ್ಲಿ ಕಲಿಯುವ ಮಕ್ಕಳನ್ನು ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದ್ದಾರೆ. ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ಸೊಸೈಟಿಯ ವತಿಯಿಂದ ವಿದ್ಯಾರ್ಥಿಗಳಿಗೆ ಕಲಿಯುವ ಸಾಮಗ್ರಿಗಳ ವಿತರಣೆ ಮಾಡಲಾಗಿದೆ. ಅಂಗ್ಲಮಾಧ್ಯಮ ಶಿಕ್ಷಣಕ್ಕೆ ಮಾರು ಹೋಗುತ್ತಿರುವ ಈಗಿನ ಸಂದರ್ಭದಲ್ಲಿ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸುವ ಉದ್ದೇಶದಿಂದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘ ಸೇವೆ ಒದಗಿಸುತ್ತಿದೆ. ಹೆತ್ತವರು ಮಕ್ಕಳಿಗೆ ಆಸ್ತಿ ಮಾಡದಿದ್ದರೂ ಪರವಾಗಿಲ್ಲ, ಮೌಲ್ಯಾಧಾರಿತ ಶಿಕ್ಷಣ ನೀಡುವ ಮೂಲಕ ಮಕ್ಕಳನ್ನೇ ಆಸ್ತಿಯನ್ನಾಗಿಸಿ ಎಂದು ಆಶಯ ವ್ಯಕ್ತಪಡಿಸಿದರು. ಸಂಘದ ನಿರ್ದೇಶಕರಾದ ರಾಘವ ಆರ್…
