Author: admin
ರಾಷ್ಟ್ರೀಯ ಸಹಕಾರ ನೀತಿ ಪರಿಶೀಲನೆ ಸಭೆಯಲ್ಲಿ ಸಹಕಾರ ಸಚಿವಾಲಯದ ಕಾರ್ಯದರ್ಶಿ ಡಾ.ಆಶಿಶ್ ಕುಮಾರ್ ಭೂತಾನಿ ಹೇಳಿಕೆ ನವದೆಹಲಿ: ರಾಷ್ಟ್ರೀಯ ಸಹಕಾರ ನೀತಿ-2025ರ ಅಡಿಯಲ್ಲಿ ರಚಿಸಲಾದ ರಾಷ್ಟ್ರೀಯ ಮಟ್ಟದ ನೀತಿ ಅನುಷ್ಠಾನ ಮತ್ತು ಮೇಲ್ವಿಚಾರಣಾ ಸಮಿತಿಯ ಮೊದಲ ಸಭೆ ಮಂಗಳವಾರ ನವದೆಹಲಿಯಲ್ಲಿ ನಡೆಯಿತು. ಇದು ಸಹಕಾರ ವಲಯದಲ್ಲಿ ಸಂಘಟಿತ ನೀತಿ ಅನುಷ್ಠಾನ ಮತ್ತು ಸಾಂಸ್ಥಿಕ ಸುಧಾರಣೆಗಳ ಮೂಲಕ ಭಾರತದ ಸಹಕಾರ ಚಳವಳಿಯನ್ನು ಬಲಪಡಿಸುವತ್ತ ಒಂದು ಪ್ರಮುಖ ಹೆಜ್ಜೆಯನ್ನು ಗುರುತಿಸಿದೆ. https://chat.whatsapp.com/FCEnlTkAKCC0MGPhXtX4i4 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು, ಕೇಂದ್ರ ಸಚಿವಾಲಯಗಳು ಮತ್ತು ಸಹಕಾರಿ ಸಂಸ್ಥೆಗಳೊಂದಿಗೆ ಸಮನ್ವಯದಿಂದ ರಾಷ್ಟ್ರೀಯ ಸಹಕಾರ ನೀತಿ-2025ರ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಸಮಗ್ರ ಮಾರ್ಗಸೂಚಿ ಸಿದ್ಧಪಡಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಸಹಕಾರಿ ಸಂಸ್ಥೆಗಳನ್ನು ಆಧುನೀಕರಿಸಲು ಮತ್ತು ಸಹಕಾರದಿಂದ ಸಮೃದ್ಧಿ ಎಂಬ ದೃಷ್ಟಿಕೋನಕ್ಕೆ ಅನುಗುಣವಾಗಿ ಅವುಗಳನ್ನು ಹೆಚ್ಚು ಪಾರದರ್ಶಕ, ವೃತ್ತಿಪರ ಮತ್ತು ತಂತ್ರಜ್ಞಾನ ಸಕ್ರಿಯಗೊಳಿಸುವ ತಂತ್ರಗಳನ್ನು ಬಗ್ಗೆ ಚರ್ಚೆ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಸಹಕಾರ ಸಚಿವಾಲಯದ ಕಾರ್ಯದರ್ಶಿ ಡಾ.ಆಶಿಶ್ ಕುಮಾರ್ ಭೂತಾನಿ ಮಾತನಾಡಿ…
ಉಳ್ಳಾಲ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಳ್ಳಾಲ ಶಾಖೆಯ 11ನೇ ವಾರ್ಷಿಕೋತ್ಸವ ಪ್ರಯುಕ್ತ ಗ್ರಾಹಕ ಸಭೆಯು ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಜರುಗಿತು. https://chat.whatsapp.com/FCEnlTkAKCC0MGPhXtX4i4 ಸಂಘದ ಸದಸ್ಯರಾದ ವಿಜಯ್ ಕುಮಾರ್, ಪುರುಷೋತ್ತಮ ಕೆ, ಗೋಪಾಲ್ ಯು.ಕೆ ಹಾಗೂ ದೇವಕಿ ಆರ್ ಉಳ್ಳಾಲ್ ಕಾರ್ಯಕ್ರಮ ಉದ್ಘಾಟಿಸಿದರು. ಸಂಘದ ಸದಸ್ಯ ವಿಜಯ್ ಕುಮಾರ್ ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ನಿರಂತರ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿದೆ. ಇಲ್ಲಿನ ಸಿಬ್ಬಂದಿಗಳ ನಗುಮುಖದ ಸೇವೆ ಶ್ಲಾಘನೀಯ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಇತರೆ ಸಂಘ ಸಂಸ್ಥೆಗಳ ಸಹಭಾಗಿತ್ವದೊಂದಿಗೆ ಜನರ ಆರೋಗ್ಯದ ದೃಷ್ಟಿಯಿಂದ ನಿರಂತರವಾಗಿ ಆರೋಗ್ಯ ಶಿಬಿರ ಏರ್ಪಡಿಸುತ್ತಿರುವುದು ಶ್ಲಾಘನೀಯ ಎಂದರು. ಪುರುಷೋತ್ತಮ ಕೆ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಹಮ್ಮಿಕೊಳ್ಳುತ್ತಿರುವ ಸಮಾಜಮುಖಿ ಕಾರ್ಯಕ್ರಮಗಳು ಶ್ಲಾಘನೀಯ” ಎಂದರು. ದೇವಕಿ ಆರ್ ಉಳ್ಳಾಲ್ ಮಾತನಾಡಿ ರಾಷ್ಟ್ರೀಕೃತ ಬ್ಯಾಂಕ್‌ನ ಸೇವೆಗಿಂತ ಸಹಕಾರಿ ಸಂಘದ ಸೇವೆಯು ವೇಗದಿಂದ ಕೂಡಿರುತ್ತದೆ ಮತ್ತು ಸರಳವಾಗಿರುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಸಂಘದ…
ಹಳೆಯಂಗಡಿ: ಹಣ ಇದ್ದು ಸಿಕ್ಕಿದ ಪರ್ಸ್ ಅನ್ನು ಅದರ ವಾರಸುದಾರರಿಗೆ ಸುರಕ್ಷಿತವಾಗಿ ಹಸ್ತಾಂತರಿಸುವ ಮೂಲಕ ಹಳೆಯಂಗಡಿಯ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಸಿಬ್ಬಂದಿ ಪ್ರಾಮಾಣಿಕತೆ ಮೆರೆದಿದ್ದಾರೆ. https://chat.whatsapp.com/FCEnlTkAKCC0MGPhXtX4i4 ಹಳೆಯಂಗಡಿ ಕೋಸ್ಟಲ್ ಬಾರ್ ಮುಂಭಾಗದ ರಾಷ್ಟೀಯ ಹೆದ್ದಾರಿಯಲ್ಲಿ ಭಾನುವಾರ ಚೊಕ್ಕಬೆಟ್ಟು ನಿವಾಸಿ ಸಚಿನ್ ಎಂಬುವವರು 15,025 ರೂಪಾಯಿ ಇದ್ದ ತಮ್ಮ ಪರ್ಸ್ ಅನ್ನು ಕಳೆದುಕೊಂಡಿದ್ದರು. ಈ ಪರ್ಸ್ ಪ್ರಿಯದರ್ಶಿನಿ ಸಹಕಾರ ಸಂಘದ ಸಿಬ್ಬಂದಿ ಲತೇಶ್ ಸಸಿಹಿತ್ಲು ಅವರಿಗೆ ಸಿಕ್ಕಿದ್ದು, ಈ ಪರ್ಸ್ ಅನ್ನು ಜವಾಬ್ದಾರಿಯುತವಾಗಿ ಮತ್ತು ಪ್ರಾಮಾಣಿಕತೆಯಿಂದ ಸಂಬಂಧಪಟ್ಟ ವ್ಯಕ್ತಿಯನ್ನು ಸಂಪರ್ಕಿಸಿ, ಅವರಿಗೆ ಸುರಕ್ಷಿತವಾಗಿ ಹಸ್ತಾಂತರಿಸಿದ್ದಾರೆ. ಹಣ ಮರಳಿ ಪಡೆದ ಸಚಿನ್ ಅವರು ಪರ್ಸ್ ತಲುಪಿಸಿದ ಪ್ರಿಯದರ್ಶಿನಿ ಸಹಕಾರ ಸಂಘದ ಸಿಬ್ಬಂದಿಯ ಪ್ರಾಮಾಣಿಕತೆಗೆ ತುಂಬು ಹೃದಯದ ಧನ್ಯವಾದಗಳನ್ನು ಸಮರ್ಪಿಸಿದ್ದಾರೆ. ಪ್ರಾಮಾಣಿಕತೆ ಮೆರೆದ ಸಿಬ್ಬಂದಿ ಲತೇಶ್ ಅವರಿಗೆ ಪ್ರಿಯದರ್ಶಿನಿ ಸೊಸೈಟಿಯ ಅಧ್ಯಕ್ಷರು, ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694…
ಉಡುಪಿ: ನಗರದ ಪ್ರತಿಷ್ಠಿತ ಎಂಜಿಎಂ ಕಾಲೇಜು ಬಳಿ ಕಳೆದ ಮೂರು ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆಯು ಎಂಜಿಎಂ ಕಾಲೇಜು ಆವರಣದ ನೂತನ ರವೀಂದ್ರ ಮಂಟಪದಲ್ಲಿ ನಡೆಯಿತು. https://chat.whatsapp.com/FCEnlTkAKCC0MGPhXtX4i4 ಸೊಸೈಟಿಯ ಅಧ್ಯಕ್ಷೆ ಜೆಸಿಂತಾ ಡಿಸೋಜ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸೌಹಾರ್ದ ಫೆಡರಲ್ ಉಡುಪಿ ವಿಭಾಗದ ಅಭಿವೃದ್ಧಿ ಅಧಿಕಾರಿ ವಿಜಯ್ ಬಿ.ಎಸ್ ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಸೊಸೈಟಿಯ ಪ್ರಗತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸ್ಥಾಪಕರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಜೀವನ್ ಡಿಸೋಜ, ವಾರ್ಷಿಕ ವರದಿ ಮಂಡಿಸಿದರು. ಗತ ವರ್ಷದಲ್ಲಿ 19 ಕೋಟಿ ರೂ. ವ್ಯವಹಾರ ಆಗಿದ್ದು, ಸೊಸೈಟಿ ಪ್ರಸ್ತುತ 19.50 ಲಕ್ಷ ರೂ. ಲಾಭದಲ್ಲಿದೆ. ಎರಡು ವರ್ಷಗಳ ಬೆಳವಣಿಗೆಯಲ್ಲಿ ಉತ್ತಮ ರೀತಿಯಲ್ಲಿ ಸ್ಪಂದಿಸಿದ ಗ್ರಾಹಕರಿಗೆ ಕೃತಜ್ಞತೆ ಸಲ್ಲಿಸಿದರು. ಕಳೆದ ಮೂರು ವರ್ಷಗಳಲ್ಲಿ ಗ್ರಾಹಕರಿಂದ ಸೊಸೈಟಿಗೆ ಉತ್ತಮ ವ್ಯವಹಾರ ದೊರಕಿದ್ದು, ದಿನೇದಿನೆ ಉತ್ತಮ ಪ್ರಗತಿ ಹೊಂದುತ್ತಿದೆ. ಗೃಹ, ಚಿನ್ನಾಭರಣ ಮತ್ತು…
ರಾಜಾಪುರ ಸಾರಸ್ವತ ಕೋ ಆಪರೇಟಿವ್ ಸೊಸೈಟಿಯಲ್ಲಿ ಸಹಕಾರ ಭಾರತಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂಜಯ ಪಾಚ್ಪೊರೆ ಅಭಿಮತ ಕಾರ್ಕಳ: ಪ್ರತಿಷ್ಠಿತ ರಾಜಾಪುರ ಸಾರಸ್ವತ ಕೋ ಆಪರೇಟಿವ್ ಸೊಸೈಟಿಗೆ ಸೋಮವಾರ ಸಂಜೆ ಸಹಕಾರ ಭಾರತಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂಜಯ ಪಾಚ್ಪೊರೆ ಭೇಟಿ ನೀಡಿದ್ದು ಅವರನ್ನು ಸೊಸೈಟಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. https://chat.whatsapp.com/FCEnlTkAKCC0MGPhXtX4i4 30 ವರ್ಷದ ಹಿಂದೆ 300 ಚದರ ಅಡಿಯ ಬಾಡಿಗೆ ಕಟ್ಟಡದಲ್ಲಿ ಕಾರ್ಯಾರಂಭಿಸಿದ್ದ ಅಂದಿನ ಅವಿಭಜಿತ ದಕ್ಷಿಣ ಜಿಲ್ಲಾಮಟ್ಟದ ಗ್ರಾಮೀಣ ಭಾಗದ ಸಹಕಾರಿ ಸಂಸ್ಥೆ ಇಂದು ಸ್ವಂತ ನಿವೇಶನದಲ್ಲಿ ಮುಖ್ಯ ಕಚೇರಿಯ ಸಭಾಂಗಣದ ಪಕ್ಕದಲ್ಲಿ ಖರೀದಿಸಿದ ನಿವೇಶನಲ್ಲಿ ನಾಲ್ಕು ಅಂತಸ್ತಿನ 45,000 ಚದರ ಅಡಿ ವಾಣಿಜ್ಯ ಕಟ್ಟಡ ಸಂಕೀರ್ಣವನ್ನು ಸ್ಥಾಪಿಸಿ 3 ಮಲ್ಟಿಪ್ಲೆಕ್ಸ್ ಸಿನಿಮಾ ಥಿಯೇಟರ್ ( ಭಾರತ್ ಸಿನೆಮಾಸ್ ), ದೇಶದ ಪ್ರತಿಷ್ಠಿತ ವಿಶಾಲ್ ಮಾರ್ಟ್ ಮತ್ತು ಸ್ಥಳೀಯ ಉದ್ಯಮ ಸಂಸ್ಥೆಯ ಎಲೆಕ್ಟ್ರಾನಿಕ್ ಮತ್ತು ಆಹಾರ ಮಳಿಗೆಗೆ ಬಾಡಿಗೆ ನೀಡಿರುವ ಸಹಕಾರ ಸಿಂಧೂರ ಕಟ್ಟಡದ ಆಧುನಿಕ ವ್ಯವಸ್ಥೆಗಳನ್ನು ವೀಕ್ಷಿಸಿ…
ಲಕ್ನೋ ಮಹಾಸಮ್ಮೇಳನದಲ್ಲಿ ದೇಶದಲ್ಲೇ ಅತ್ಯಧಿಕ ಪ್ರಶಸ್ತಿ ಪಡೆದ ಏಕೈಕ ಬ್ಯಾಂಕ್ ಎಂಬ ಹೆಗ್ಗಳಿಕೆ: ತಂತ್ರಜ್ಞಾನ ಕ್ರಾಂತಿ ಹಾಗೂ ಆಡಳಿತಾತ್ಮಕ ಶ್ರೇಷ್ಠತೆಗೆ ಸಂದ ಜಾಗತಿಕ ಮಟ್ಟದ ಮಾನ್ಯತೆ ಪುತ್ತೂರು: ಉತ್ತರ ಪ್ರದೇಶದ ಲಕ್ನೋದಲ್ಲಿ ಇತ್ತೀಚೆಗೆ ನಡೆದ ಪಟ್ಟಣ ಸಹಕಾರಿ ಬ್ಯಾಂಕ್‌ಗಳ ಪ್ರತಿಷ್ಠಿತ ರಾಷ್ಟ್ರೀಯ ಮಹಾಸಮ್ಮೇಳನದಲ್ಲಿ (National Conference of Urban Co-operative Banks) ಕರ್ನಾಟಕದ ಹೆಮ್ಮೆಯ ಬ್ಯಾಂಕಿಂಗ್ ಸಂಸ್ಥೆಯಾದ ‘ದಿ ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್ ಲಿಮಿಟೆಡ್’ ಬರೋಬ್ಬರಿ ಐದು ರಾಷ್ಟ್ರೀಯ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಳ್ಳುವ ಮೂಲಕ ದೇಶದ ಸಹಕಾರಿ ರಂಗದಲ್ಲಿ ಸುವರ್ಣ ಅಕ್ಷರಗಳ ಹೊಸ ದಾಖಲೆ ಬರೆದಿದೆ. https://chat.whatsapp.com/FCEnlTkAKCC0MGPhXtX4i4 ದೇಶದ ಎಲ್ಲಾ ರಾಜ್ಯಗಳ ನೂರಾರು ಪಟ್ಟಣ ಸಹಕಾರಿ ಬ್ಯಾಂಕ್‌ಗಳು ಭಾಗವಹಿಸಿದ್ದ ಈ ಉನ್ನತ ಮಟ್ಟದ ರಾಷ್ಟ್ರೀಯ ಸಮ್ಮೇಳನದಲ್ಲಿ, ಅತ್ಯಧಿಕ 5 ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡ ದೇಶದ ಏಕೈಕ ಬ್ಯಾಂಕ್ ಎಂಬ ಐತಿಹಾಸಿಕ ಹೆಗ್ಗಳಿಕೆಗೆ ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್ ಪಾತ್ರವಾಗಿದೆ. ಈ ಅಪೂರ್ವ ಸಾಧನೆಯ ಮೂಲಕ ಬ್ಯಾಂಕ್ ರಾಷ್ಟ್ರಮಟ್ಟದಲ್ಲಿ ಇಡೀ ದೇಶದ ಗಮನ ಸೆಳೆದಿದೆ.…
ಬೆಳ್ತಂಗಡಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಳದಂಗಡಿ ಶಾಖೆಯ ವತಿಯಿಂದ ಉಚಿತ ವೈದ್ಯಕೀಯ, ನೇತ್ರ ತಪಾಸಣಾ, ದಂತ ಚಿಕಿತ್ಸಾ ಮತ್ತು ರಕ್ತದಾನ ಶಿಬಿರವು ಅಳದಂಗಡಿಯ ಶ್ರೀ ಗುರು ಸಭಾಭವನದಲ್ಲಿ ಜರುಗಿತು. ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಬಳಂಜ ಇದರ ಅಧ್ಯಕ್ಷ ಸಂತೋಷ್ ಪಿ.ಕೋಟ್ಯಾನ್ ಉದ್ಘಾಟಿಸಿ ಮಾತನಾಡಿ ಸಮಾಜದಲ್ಲಿ ಶ್ರೀಮಂತ ವ್ಯಕ್ತಿ ಎಂದರೆ ಹಣ ಇರುವವನಲ್ಲ, ಒಳ್ಳೆಯ ಆರೋಗ್ಯ ಇರುವ ವ್ಯಕ್ತಿ ಶ್ರೀಮಂತ. ಈ ನಿಟ್ಟಿನಲ್ಲಿ ನಿರಂತರವಾಗಿ ಶಿಬಿರಗಳನ್ನು ಆಯೋಜಿಸಿ ಉತ್ತಮ ಆರೋಗ್ಯಪೂರ್ಣ ಸಮಾಜ ನಿರ್ಮಿಸುವಲ್ಲಿ ಆತ್ಮಶಕ್ತಿ ಸಹಕಾರ ಸಂಘದ ಪಾತ್ರ ಹೆಚ್ಚಿದೆ. ಸಂಘದ ಅಧ್ಯಕ್ಷರಾದಚಿತ್ತರಂಜನ್ ಬೋಳಾರ್ ಅವರ ಬದಲಾವಣೆಯ ದೃಷ್ಟಿಕೋನ ಹಾಗೂ ಮಹಿಳಾ ಸಬಲೀಕರಣದಿಂದ ಸಂಘವು ಅಭಿವೃದ್ಧಿ ಪಥದತ್ತ ಮುನ್ನುಗುತ್ತಿದೆ ಎಂದು ಶ್ಲಾಘಿಸಿದರು. https://chat.whatsapp.com/FCEnlTkAKCC0MGPhXtX4i4 ಸಂಘದ ಅಳದಂಗಡಿ ಶಾಖೆಯ ಕಟ್ಟಡದ ಮಾಲೀಕ ವಿಶ್ವನಾಥ ಕುದ್ಯಾಡಿ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಊರಿನ ಸಂಘ ಸಂಸ್ಥೆಗಳ ಜೊತೆಗೆ ಎಲ್ಲಾ ಹಿರಿಯರನ್ನು ಒಟ್ಟುಗೂಡಿಸಿ ಮಾಡುತ್ತಿರುವ ವೈದ್ಯಕೀಯ ಶಿಬಿರವು ಸಮಾಜಮುಖಿ ಚಟುವಟಿಕೆಯಾಗಿದ್ದು, ಇಂತಹ…
ಚಿಕ್ಕಮಗಳೂರು: ಸಹಕಾರ ಭಾರತಿಯ ಕರ್ನಾಟಕ ರಾಜ್ಯಮಟ್ಟದ ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳ ಪ್ರಶಿಕ್ಷಣ ವರ್ಗವು ಭಾನುವಾರ ಮತ್ತು ಸೋಮವಾರ ಶೃಂಗೇರಿಯ ಶಾರದಾ ಕಂಫರ್ಟ್ಸ್ ಸಭಾಭವನದಲ್ಲಿ ಜರುಗಿತು. https://chat.whatsapp.com/FCEnlTkAKCC0MGPhXtX4i4 ಚಿಕ್ಕಮಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಸಿ.ಟಿ .ರವಿ ಕಾರ್ಯಕ್ರಮ ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಚಿಕ್ಕಮಗಳೂರು ಸಹಕಾರ ಭಾರತಿ ಜಿಲ್ಲಾಧ್ಯಕ್ಷರಾದ ಕೆ.ಎಸ್ ನಯನ ವಹಿಸಿದ್ದರು. ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಕಾರ ಭಾರತಿ ಕರ್ನಾಟಕದ ಅಧ್ಯಕ್ಷ ಪ್ರಭುದೇವ ಆರ್ ಮಾಗನೂರ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳ ಪ್ರಶಿಕ್ಷಣ ವರ್ಗದ ಮಹತ್ವವನ್ನು ತಿಳಿಸಿದರು. ಸಹಕಾರ ಭಾರತಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂಜಯ ಪಾಚ್ಪೊರೆ ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿದ್ದರು. ಅಭ್ಯಾಸ ವರ್ಗದ ಪ್ರಥಮ ಅವಧಿಯಲ್ಲಿ ಸಹಕಾರ ಭಾರತಿ ದಕ್ಷಿಣ ಮಧ್ಯ ಕ್ಷೇತ್ರಿಯ ಪ್ರಮುಖರಾದ ಎಸ್.ಆರ್. ಸತೀಶ್ಚಂದ್ರ ಸಂಘಟನಾ ಕಾರ್ಯದರ್ಶಿಗಳ ಜವಾಬ್ದಾರಿ ಮತ್ತು ಕರ್ತವ್ಯಗಳ ಬಗ್ಗೆ ಪರಸ್ಪರ ಪರಿಚಯ ಮತ್ತು ಸಂವಾದದ ಮೂಲಕ ಅರಿವು ಮೂಡಿಸಿದರು. ಸಹಕಾರ ಭಾರತಿ…
ಕುಪ್ಪೆಪದವು: ಮಹಿಳೆಯರು ಸಾಮಾಜಿಕವಾಗಿ ಆರ್ಥಿಕವಾಗಿ ಸಬಲೀಕರಣಗೊಳ್ಳಲು ಸ್ವಸಹಾಯ ಸಂಘಗಳು ಪ್ರಮುಖವಾದ ಪಾತ್ರ ವಹಿಸಿದೆ ಎಂದು ನೇಸರ ಕೇಂದ್ರ ಸಮಿತಿ ಇದರ ಉಪಾಧ್ಯಕ್ಷರಾದ ಅನುಸೂಯ ಕಾಜವ ಕುಪ್ಪೆಪದವು ಹೇಳಿದರು. https://chat.whatsapp.com/FCEnlTkAKCC0MGPhXtX4i4 ದಕ್ಷಿಣ ಕನ್ನಡ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ನೇತೃತ್ವದಲ್ಲಿ ಕುಪ್ಪೆಪದವು ರಾಮಕೃಷ್ಣ ಭಜನಾ ಮಂದಿರದಲ್ಲಿ ನಡೆದ ಕುಪ್ಪೆಪದವು ವಲಯದ 20 ಸ್ವಸಹಾಯ ಸಂಘಗಳ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳಿಗೆ ನಡೆದ ತರಬೇತಿ ಶಿಬಿರ ಉದ್ಫಾಟಿಸಿ ಅವರು ಮಾತನಾಡಿದರು. ಸಹಕಾರಿಯ ನಿರ್ದೇಶಕರಾದ ವಸಂತಿ ಕುಪ್ಪೆಪದವು ಅಧ್ಯಕ್ಷತೆ ವಹಿಸಿದ್ದರು. ಸ್ವಂದನ ಸ್ವಸಹಾಯ ಸಂಘಗಳ ಒಕ್ಕೂಟದ ಕಾರ್ಯದರ್ಶಿ ಸಿಸಿಲಿಯ ಸಲ್ಡಾನ್ಹ ಮುಖ್ಯ ಅತಿಥಿಯಾಗಿದ್ದರು. ಸಹಕಾರಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಂಪನ್ಮೂಲ ವ್ಯಕ್ತಿಯಾಗಿ ತರಬೇತಿ ನಡೆಸಿಕೊಟ್ಟರು. ಸಹಕಾರಿಯ ಸಿಬ್ಬಂದಿ ಸುಮಂಗಳ ಕಾರ್ಯಕ್ರಮ ನಿರೂಪಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಹರಿಣಾಕ್ಷಿ ವಂದಿಸಿದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com
ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜೀ ಅಭಿಪ್ರಾಯ ಮಂಗಳೂರು: ಜಿಲ್ಲೆಯ ಪ್ರತಿಷ್ಠಿತ ಸಹಕಾರಿ ಸಂಸ್ಥೆಗಳಲ್ಲಿ ಒಂದಾದ ಶ್ರೀಶಾ ಸೌಹಾರ್ದ ಸೊಸೈಟಿಯ ವತಿಯಿಂದ ಭಾನುವಾರ ಮಂಗಳಾದೇವಿಯ ರಾಮಕೃಷ್ಣ ಮಠದ ಸಭಾಂಗಣದಲ್ಲಿ ಮಂಗಳೂರು ತಾಲೂಕಿನ 2026ನೇ ಸಾಲಿನ ಸರಕಾರಿ/ಅನುದಾನಿತ ಕನ್ನಡ ಮಾಧ್ಯಮದ ಶಾಲೆಗಳ ಎಸ್ಸೆಸ್ಸೆಲ್ಸಿ ಅಂತಿಮ ಪರೀಕ್ಷೆಯಲ್ಲಿ ಹಾಗೂ ಸರಕಾರಿ/ಅನುದಾನಿತ ಪದವಿಪೂರ್ವ ಕಾಲೇಜುಗಳ ಅಂತಿಮ ಪರೀಕ್ಷೆಯಲ್ಲಿ 90% ಹೆಚ್ಚಿನ ಅಂಕಗಳನ್ನು ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಾಯಧನ ಹಾಗೂ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.ಒಟ್ಟು 120 ವಿದ್ಯಾರ್ಥಿಗಳಿಗೆ ಸಹಾಯಧನ ನೀಡಿ ಶಾಲು ಹೊದಿಸಿ, ಹಾರ ಹಾಕಿ, ಫ್ರೇಮ್ ಹಾಕಿದ ಪ್ರಶಂಸನ ಪತ್ರಗಳನ್ನು ನೀಡಿ ಗೌರವಿಸಲಾಯಿತು. https://chat.whatsapp.com/FCEnlTkAKCC0MGPhXtX4i4 ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ ಜಿತಕಾಮಾನಂದಜೀ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇಂಗ್ಲಿಷ್ ಮಾಧ್ಯಮದ ಆರ್ಭಟದ ನಡುವೆ ಕನ್ನಡ ಮಾಧ್ಯಮವನ್ನು ಆಯ್ಕೆ ಮಾಡಿ ಸರಕಾರಿ ಶಾಲೆಗಳ ಎಸ್ಸೆಸ್ಸೆಲ್ಸಿ ಅಂತಿಮ ಪರೀಕ್ಷೆಯಲ್ಲಿ ಶೇಕಡ.90ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರುವುದು ನಿಜಕ್ಕೂ ಹೆಮ್ಮೆಯ ವಿಷಯ. ಈ ವಿದ್ಯಾರ್ಥಿಗಳ ಸಾಧನೆಯನ್ನು ಗುರುತಿಸಿ ಶ್ರೀಶಾ ಸೊಸೈಟಿಯು ಅವರಿಗೆ ಸಹಾಯಧನದ…
