Author: admin
ನಾಳೆ ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯಿಂದ ಮಂಗಳೂರಿನ ಅಂಬೇಡ್ಕರ್ ಭವನದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿ ಮಂಗಳೂರು ಹಾಗೂ ದ.ಕ. ಜಿಲ್ಲೆಯ ಎಲ್ಲಾ ಸೌಹಾರ್ದ ಸಹಕಾರಿಗಳ ಸಂಯುಕ್ತ ಆಶ್ರಯದಲ್ಲಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಸಹಯೋಗದಲ್ಲಿ ನ.17ರಂದು ಮಂಗಳೂರಿನ ಉರ್ವಸ್ಟೋರ್ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಆಚರಣೆ ನಡೆಯಲಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಬೆಳಗ್ಗೆ 10ಕ್ಕೆ ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ಸಹಕಾರ ಧ್ವಜಾರೋಹಣ ಮಾಡಲಿದ್ದಾರೆ. 10.15ಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ದ.ಕ. ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯ ಅಧ್ಯಕ್ಷರಾದ ಭಾಸ್ಕರ ದೇವಸ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕರಾದ ಡಿ.ವೇದವ್ಯಾಸ ಕಾಮತ್, ಮಂಗಳೂರು ವಿದ್ಯುತ್ ಸರಬರಾಜು ಮಂಡಳಿಯ ಅಧ್ಯಕ್ಷರಾದ ಕೆ.ಹರೀಶ್ ಕುಮಾರ್, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕರಾದ ಮಂಜುನಾಥ ಎಸ್.ಕೆ, ಭಾರತಿ…
ಪುತ್ತೂರು: ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್ ವತಿಯಿಂದ ಶುಕ್ರವಾರ ಬ್ಯಾಂಕಿನ ನೂತನ ವೆಬ್‌ಸೈಟ್ ಮತ್ತು ಸ್ಟೇಷನರಿ ಹಾಗೂ ರೆಕಾರ್ಡ್ ರೂಮ್ ಅನ್ನು ಅಧಿಕೃತವಾಗಿ ಉದ್ಘಾಟಿಸಲಾಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಬ್ಯಾಂಕಿನ ಅಧ್ಯಕ್ಷ ಎನ್. ಕಿಶೋರ್ ಕೊಳತ್ತಾಯ ಅವರು ಬ್ಯಾಂಕಿನ ನೂತನ ವೆಬ್‌ಸೈಟ್ ಅನ್ನು ಅಂತರ್ಜಾಲದಲ್ಲಿ ಅನಾವರಣಗೊಳಿಸಿ ಗ್ರಾಹಕರು ಮತ್ತು ಸದಸ್ಯರಿಗೆ ಇದು ಬಹು ಉಪಯುಕ್ತವಾಗಲಿದೆ ಎಂದು ತಿಳಿಸಿದರು. ಸಂಪೂರ್ಣ ಮಾಹಿತಿಯನ್ನು ಒಳಗೊಂಡಿರುವ ಈ ವೆಬ್‌ಸೈಟ್ ಮುಖಾಂತರ ಬ್ಯಾಂಕಿನ ವಿವಿಧ ಸೇವೆಗಳು, ಯೋಜನೆಗಳು ಮತ್ತು ಮಾಹಿತಿ ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗಲಿದೆ. ಅವರು ಬ್ಯಾಂಕಿನ ನೂತನ ಸುಸಜ್ಜಿತ ಸ್ಟೇಷನರಿ ಮತ್ತು ರೆಕಾರ್ಡ್ ರೂಮ್ ಕೂಡ ಉದ್ಘಾಟಿಸಿದರು. ಕಾರ್ಯಕ್ರಮವನ್ನು ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಿ.ಶೇಖರ ಶೆಟ್ಟಿ ಅವರು ನಿರ್ವಹಿಸಿ ಮಾತನಾಡಿ, ನೂತನ ವೆಬ್‌ಸೈಟ್ ಗೆ ಭೇಟಿ ನೀಡುವ ಮೂಲಕ ಬ್ಯಾಂಕಿನ ಸೌಲಭ್ಯಗಳು ಮತ್ತು ಪ್ರಯೋಜನಗಳ ಬಗ್ಗೆ ಜನಸಾಮಾನ್ಯರು ಸಂಪೂರ್ಣ ಮಾಹಿತಿ ಪಡೆಯಬಹುದು ಎಂದು ತಿಳಿಸಿದರು. ಬ್ಯಾಂಕಿನ ಉಪಾಧ್ಯಕ್ಷ ಶ್ರೀಧರ ಗೌಡ, ನಿರ್ದೇಶಕರಾದ ಬಪ್ಪಳಿಗೆ ಚಂದ್ರಶೇಖರ ರಾವ್, ಕಿರಣ್…
ಗಂಗೊಳ್ಳಿ: ಇಲ್ಲಿನ ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ಸಂಘವು ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ನೀಡಲಾಗುವ ಉತ್ತಮ ಸೌಹಾರ್ದ ಸಹಕಾರಿ ಸಂಘ ಪುರಸ್ಕಾರಕ್ಕೆ ಆಯ್ಕೆಯಾಗಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ನಾಳೆ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯುವ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ಸಂಘಕ್ಕೆ ಸಂಘಕ್ಕೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com
ಐದು ಗ್ರಾಂ ಚಿನ್ನದ ಪದಕ, 10,000 ರೂ. ನಗದು, ಪಾರಿತೋಷಕ ನಾಳೆ ಮಂಗಳೂರಿನಲ್ಲಿ ಪ್ರದಾನ ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಉತ್ತಮ ಸಹಕಾರಿ ಸಂಘಗಳನ್ನು ಗುರುತಿಸುವ ಉದ್ದೇಶದಿಂದ ನೀಡಲಾಗುವ ಸಹಕಾರ ಮಾಣಿಕ್ಯ ಪುರಸ್ಕಾರಕ್ಕೆ ಮಂಗಳೂರಿನ ಬಜ್ಪೆ ವ್ಯವಸಾಯ ಸೇವಾ ಸಹಕಾರಿ ಸಂಘ, ಉಡುಪಿ ಜಿಲ್ಲೆಯ ಕೋಟ ಸಹಕಾರಿ ವ್ಯವಸಾಯಿಕ ಸಂಘ ಹಾಗೂ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವಲಯದಿಂದ ಉಡುಪಿ ಜಿಲ್ಲೆಯ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗಳು ಆಯ್ಕೆಯಾಗಿವೆ. https://chat.whatsapp.com/JVAtKKe2M19AFO3W5629ZS?mode=ems_copy_t ನಾಳೆ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿರುವ 2025ನೇ ಸಾಲಿನ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಈ ಪುರಸ್ಕಾರಗಳನ್ನು ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ಎಸ್ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ‘ಸಹಕಾರ ಮಾಣಿಕ್ಯ ಪ್ರಶಸ್ತಿ’ಯು 5 ಗ್ರಾಂ ಚಿನ್ನದ ಪದಕ, 10,000 ರೂ. ನಗದು ಹಾಗೂ ಪಾರಿತೋಷಕವನ್ನು ಒಳಗೊಂಡಿದೆ. ಉತ್ತಮ ಸಹಕಾರ…
ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯಲ್ಲಿ ಸಹಕಾರಿ ಸಪ್ತಾಹದ ಧ್ವಜಾರೋಹಣ ನೆರವೇರಿಸಿ ಗೋಪಿನಾಥ್ ಪಡoಗ ಅಭಿಪ್ರಾಯ ಮೂಲ್ಕಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರವು ಉತ್ತುಂಗಕ್ಕೆ ಏರಲು ಸಹಕಾರಿಗಳು ಇತರೆ ಸಹಕಾರಿ ಸಂಸ್ಥೆಗಳಿಗೆ ನೀಡುತ್ತಿರುವ ಸಹಕಾರವೇ ಕಾರಣ ಎಂದು ಮೂಲ್ಕಿ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ (ಕ್ಷೀರ ಸಾಗರ) ಇದರ ಅಧ್ಯಕ್ಷರಾದ ಗೋಪಿನಾಥ್ ಪಡಂಗ ಹೇಳಿದರು. ಅವರು ಶುಕ್ರವಾರ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯಲ್ಲಿ ಸಹಕಾರಿ ಸಪ್ತಾಹದ ಧ್ವಜಾರೋಹಣದ ನೆರವೇರಿಸಿ ಮಾತನಾಡಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಎಚ್ ವಸಂತ್ ಬೆರ್ನಾಡ್, ಸುಮಾರು 80 ವರ್ಷಗಳ ಇತಿಹಾಸ ಇರುವ ಮೂಲ್ಕಿ ಕ್ಷೀರ ಸಾಗರದ ಅಧ್ಯಕ್ಷತೆಯನ್ನು ವಹಿಸಿದ್ದ ಗೋಪಿನಾಥ್ ಪಡಂಗರವರ ನಾಯಕತ್ವದಲ್ಲಿ ಈ ಸಂಸ್ಥೆ ಇನ್ನಷ್ಟು ಬೆಳೆಯಲಿ, ಸಹಕಾರಿಗಳೆಲ್ಲರೂ ನಿಮ್ಮೊಂದಿಗೆ ಇದ್ದೇವೆಂದು ಹೇಳಿದರು. ಹಿರಿಯ ಸಹಕಾರಿ, ಪಿಸಿಎ ಬ್ಯಾಂಕಿನ ಮಾಜಿ ಅಧ್ಯಕ್ಷರಾದ ಮಾಧವ ತಿಂಗಳಾಯ, ಹಳೆಯಂಗಡಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸ್ಥಾಪಕ…
ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯಲ್ಲಿ ಸಹಕಾರಿ ಸಪ್ತಾಹದ ಧ್ವಜಾರೋಹಣ ನೆರವೇರಿಸಿ ಗೋಪಿನಾಥ್ ಪಡoಗ ಅಭಿಪ್ರಾಯ ಮೂಲ್ಕಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರವು ಉತ್ತುಂಗಕ್ಕೆ ಏರಲು ಸಹಕಾರಿಗಳು ಇತರೆ ಸಹಕಾರಿ ಸಂಸ್ಥೆಗಳಿಗೆ ನೀಡುತ್ತಿರುವ ಸಹಕಾರವೇ ಕಾರಣ ಎಂದು ಮೂಲ್ಕಿ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ (ಕ್ಷೀರ ಸಾಗರ) ಇದರ ಅಧ್ಯಕ್ಷರಾದ ಗೋಪಿನಾಥ್ ಪಡಂಗ ಹೇಳಿದರು. ಅವರು ಶುಕ್ರವಾರ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯಲ್ಲಿ ಸಹಕಾರಿ ಸಪ್ತಾಹದ ಧ್ವಜಾರೋಹಣದ ನೆರವೇರಿಸಿ ಮಾತನಾಡಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಎಚ್ ವಸಂತ್ ಬೆರ್ನಾಡ್, ಸುಮಾರು 80 ವರ್ಷಗಳ ಇತಿಹಾಸ ಇರುವ ಮೂಲ್ಕಿ ಕ್ಷೀರ ಸಾಗರದ ಅಧ್ಯಕ್ಷತೆಯನ್ನು ವಹಿಸಿದ್ದ ಗೋಪಿನಾಥ್ ಪಡಂಗರವರ ನಾಯಕತ್ವದಲ್ಲಿ ಈ ಸಂಸ್ಥೆ ಇನ್ನಷ್ಟು ಬೆಳೆಯಲಿ, ಸಹಕಾರಿಗಳೆಲ್ಲರೂ ನಿಮ್ಮೊಂದಿಗೆ ಇದ್ದೇವೆಂದು ಹೇಳಿದರು. ಹಿರಿಯ ಸಹಕಾರಿ, ಪಿಸಿಎ ಬ್ಯಾಂಕಿನ ಮಾಜಿ ಅಧ್ಯಕ್ಷರಾದ ಮಾಧವ ತಿಂಗಳಾಯ, ಹಳೆಯಂಗಡಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸ್ಥಾಪಕ…
ಮಡಂತ್ಯಾರಿನಲ್ಲಿ ಜಿಲ್ಲಾಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟಿಸಿ ದ.ಕ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟು ಹೇಳಿಕೆ ಬೆಳ್ತಂಗಡಿ: ಕರಾವಳಿ ಭಾಗದ ಸಹಕಾರಿ ಪಿತಾಮಹ ಎನಿಸಿಕೊಂಡ ಮೊಳಹಳ್ಳಿ ಶಿವರಾಯರಿಂದ ಬೆಳೆದುಬಂದ ಸಹಕಾರ ಕ್ಷೇತ್ರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ರಾದ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ಅನೇಕ ಕೊಡುಗೆಗಳನ್ನು ನೀಡಿದ್ದು ಈ ಕ್ಷೇತ್ರಕ್ಕೆ ಮೆರುಗನ್ನು ನೀಡುತ್ತಿದ್ದಾರೆ. ಒಂದು ಕಾಲದಲ್ಲಿ ಸೂರಿಲ್ಲದೆ ಸಮಸ್ಯೆ ಅನುಭವಿಸುತ್ತಿದ್ದ ಅನೇಕ ಸಹಕಾರಿ ಸಂಘಗಳ ಸಹಿತ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ 170ರಷ್ಟು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಇಂದು ಸುಸಜ್ಜಿತ ವ್ಯವಸ್ಥೆಗಳೊಂದಿಗೆ ಕಾರ್ಯ ನಿರ್ವಹಿಸುವಂತಾಗಲು ಡಾ.ರಾಜೇಂದ್ರ ಕುಮಾರ್ ಅವರ ಕೊಡುಗೆ ಸಾಕಷ್ಟಿದೆ ಎಂದು ದ.ಕ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಅಭಿಪ್ರಾಯಪಟ್ಟರು. https://chat.whatsapp.com/JVAtKKe2M19AFO3W5629ZS?mode=ems_copy_t ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೇತೃತ್ವದಲ್ಲಿ ಶುಕ್ರವಾರ ಜಿಲ್ಲಾಮಟ್ಟದ…
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪ್ರಧಾನ ಕಚೇರಿ ಪಡೀಲಿನ ಆತ್ಮಶಕ್ತಿ ಸೌಧದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಪ್ರಯುಕ್ತ ಶುಕ್ರವಾರ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು. https://chat.whatsapp.com/JVAtKKe2M19AFO3W5629ZS?mode=ems_copy_t ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಬಂಟ್ವಾಳ: ಇಲ್ಲಿನ ಸಮಾಜ ಸೇವಾ ಸಹಕಾರಿ ಸಂಘವು ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ನೀಡಲಾಗುವ ಉತ್ತಮ ಪತ್ತಿನ ಸಹಕಾರಿ ಸಂಘ ಪ್ರಶಸಿಗೆ ಆಯ್ಕೆಯಾಗಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಭಾನುವಾರ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯುವ ೭೨ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಸಮಾಜ ಸೇವಾ ಸಹಕಾರಿ ಸಂಘಕ್ಕೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com
ದ.ಕ. ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿ ನಿ. ಮಂಗಳೂರು, ದ.ಕ. ಹಾಗೂ ಜಿಲ್ಲೆಯ ಎಲ್ಲಾ ಸೌಹಾರ್ದ ಸಹಕಾರಿಗಳ ಸಂಯುಕ್ತ ಆಶ್ರಯದಲ್ಲಿ ಆಯೋಜನೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿ ಮಂಗಳೂರು, ದ.ಕ. ಜಿಲ್ಲೆಯ ಎಲ್ಲಾ ಸೌಹಾರ್ದ ಸಹಕಾರಿಗಳ ಸಂಯುಕ್ತ ಆಶ್ರಯದಲ್ಲಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಸಹಯೋಗದಲ್ಲಿ ನ.17ರಂದು 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಆಚರಣೆಯು “ಆತ್ಮನಿರ್ಭರ ಭಾರತ ಸಾಧನೆಗೆ ವಾಹಕಗಳಾಗಿ ಸಹಕಾರ ಸಂಸ್ಥೆಗಳು” ಎಂಬ ಧ್ಯೇಯವಾಕ್ಯದಡಿ ಮಂಗಳೂರಿನ ಉರ್ವಸ್ಟೋರ್ ಅಂಬೇಡ್ಕರ್ ಭವನದಲ್ಲಿ ಬೆಳಗ್ಗೆ 10ರಿಂದ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯ ಅಧ್ಯಕ್ಷರಾದ ಭಾಸ್ಕರ್ ದೇವಸ್ಯ ಶುಕ್ರವಾರ ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಬೆಳಗ್ಗೆ 10ಕ್ಕೆ ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ಸಹಕಾರ ಧ್ವಜಾರೋಹಣ…
