Author: admin
ಉಡುಪಿ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮಹಾಸಭೆಯಲ್ಲಿ ಮಾಜಿ ಶಾಸಕ ಜೆ. ಆರ್. ಲೋಬೊ ಅಭಿಪ್ರಾಯ ಉಡುಪಿ: ಜಿಲ್ಲೆಯ ಪ್ರತಿಷ್ಠಿತ ಸಹಕಾರಿಗಳಲ್ಲಿ ಒಂದಾಗಿರುವ ಉಡುಪಿ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿ. ತನ್ನ ಉನ್ನತ ಸಾಧನೆಗಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸತತ ನಾಲ್ಕು ವರ್ಷಗಳ ಕಾಲ ಸಾಧನಾ ಪ್ರಶಸ್ತಿ ಪಡೆದುಕೊಂಡಿರುವುದು ಸಂಸ್ಥೆಯು, ಸಹಕಾರ ಕ್ಷೇತ್ರದಲ್ಲಿ ತನ್ನ ಉತ್ತಮ ಕಾರ್ಯಕ್ಷಮತೆಯನ್ನು ಸಾಬೀತುಪಡಿಸಿದೆ ಎಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಜೆ. ಆರ್. ಲೋಬೊ ಹೇಳಿದರು. https://chat.whatsapp.com/FCEnlTkAKCC0MGPhXtX4i4 ಅವರು ಬುಧವಾರ ಉಡುಪಿ ಶೋಕಮಾತಾ ಚರ್ಚಿನ ‘ಆವೇ ಮರಿಯ’ ಸಭಾಂಗಣದಲ್ಲಿ ಜರುಗಿದ ಉಡುಪಿ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಆತಿಥಿಯಾಗಿ ಮಾತನಾಡಿದರು. ಬ್ಯಾಂಕಿಂಗ್ ವ್ಯವಹಾರದೊಂದಿಗೆ ಸಾಮಾಜಿಕ ಹೊಣೆಗಾರಿಕೆಗೆ ಒತ್ತು ನೀಡುತ್ತಿರುವ ಸಂಘವು ಶಿಕ್ಷಣಕ್ಕಾಗಿ ವಿದ್ಯಾರ್ಥಿವೇತನ, ಅನಾರೋಗ್ಯ ಪೀಡಿತರು ಹಾಗೂ ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯಧನ, ಜೊತೆಗೆ ಸಮಾಜಮುಖಿ ಕಾರ್ಯನಿರ್ವಹಿಸುವ…
ಕಾರ್ಕಳ: 114 ವರ್ಷಗಳ ಸಮರ್ಪಿತ ಸೇವೆ ಪೂರೈಸಿರುವ ಎಂಸಿಸಿ ಬ್ಯಾಂಕ್‌ನ ಕಾರ್ಕಳ ಶಾಖೆ ಬುಧವಾರ ಸಾಲ್ಮರ ರಸ್ತೆಯ ಫಾರ್ಚೂನ್ ಆರ್ಕಿಡ್‌ನ ನೆಲ ಮಹಡಿಯಲ್ಲಿರುವ ನೂತನ ಸ್ವಂತ ಕಟ್ಟಡಕ್ಕೆ ಸ್ಥಳಾಂತರಗೊಂಡಿದೆ. https://chat.whatsapp.com/FCEnlTkAKCC0MGPhXtX4i4 ಎಂಸಿಸಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೊ ಅವರು ನೂತನ ಶಾಖಾ ಕಚೇರಿ ಉದ್ಘಾಟಿಸಿದರು. ಮುನಿಯಾಲು ಉದಯ ಕುಮಾರ್ ಶೆಟ್ಟಿ ಸೇಫ್ ರೂಮ್ ಉದ್ಘಾಟಿಸಿದರು. ಅತ್ತೂರು ಸಂತ ಲಾರೆನ್ಸ್ ಮೈನರ್ ಬಸಿಲಿಕಾದ ಸಹಾಯಕ ಧರ್ಮಗುರು ವಂ. ಫಾ| ರಾಬಿನ್ ಸಾಂಥುಮಾಯರ್ ಅವರು ನೂತನ ಶಾಖಾ ಕಟ್ಟಡ ಆಶೀರ್ವದಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೊ ಮಾತನಾಡಿ, 24 ವರ್ಷಗಳ ಹಿಂದೆ ಸ್ಥಾಪನೆಯಾದ ಕಾರ್ಕಳ ಶಾಖೆಯ ಸಾಧನೆಯನ್ನು ಸ್ಮರಿಸಿ, ನೂತನ ಸ್ವಂತ ಕಟ್ಟಡವು ಬ್ಯಾಂಕಿನ ಬೆಳವಣಿಗೆಯ ಮತ್ತೊಂದು ಮಹತ್ವದ ಮೈಲಿಗಲ್ಲಾಗಿದೆ. 2018ರಲ್ಲಿ ಸುಮಾರು ₹20 ಕೋಟಿ ಇದ್ದ ಶಾಖೆಯ ವ್ಯವಹಾರವು ಕೇವಲ ಏಳು ವರ್ಷಗಳಲ್ಲಿ ₹56 ಕೋಟಿಗೆ ಏರಿಕೆಯಾಗಿದೆ. ಈ ಸಾಧನೆಗೆ ಆಡಳಿತ ಮಂಡಳಿ,…
ಆರ್‌ಬಿಐ ನಿರ್ಬಂಧದಡಿ 87 ಪಟ್ಟಣ ಸಹಕಾರಿ ಬ್ಯಾಂಕ್‌ಗಳು; ಇನ್ನೂ 27 ಬ್ಯಾಂಕ್ಗಳ ಮೇಲೆ ನಿಯಂತ್ರಣ ಮುಂದುವರಿಕೆ
ಮಹಾರಾಷ್ಟ್ರದಲ್ಲಿ ಗರಿಷ್ಠ 10 ಬ್ಯಾಂಕ್‌ಗಳು ನಿರ್ಬಂಧದಡಿ; ಕರ್ನಾಟಕದ ನಾಲ್ಕು ಯುಸಿಬಿಗಳಿಗೆ ಆರ್‌ಬಿಐ ನಿರ್ದೇಶನ ನವದೆಹಲಿ: ದೇಶದ ನಗರ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ನಿಯಂತ್ರಣ ಮತ್ತು ಮೇಲ್ವಿಚಾರಣೆಯನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಮತ್ತಷ್ಟು ಬಿಗಿಗೊಳಿಸಿರುವುದು ಸಂಸತ್ತಿನಲ್ಲಿ ಮಂಡಿಸಲಾದ ಅಂಕಿ-ಅಂಶಗಳಿಂದ ಬಹಿರಂಗವಾಗಿದೆ. 2021ರಿಂದ ಒಟ್ಟು 87 ಪಟ್ಟಣ ಸಹಕಾರಿ ಬ್ಯಾಂಕ್‌ಗಳನ್ನು ಆರ್‌ಬಿಐ ವಿವಿಧ ನಿಯಂತ್ರಣ ಕ್ರಮಗಳ ಅಡಿಯಲ್ಲಿ ಇರಿಸಿದ್ದು, 2026ರ ಜುಲೈ 27ರ ವೇಳೆಗೆ 27 ಬ್ಯಾಂಕ್‌ಗಳು ಇನ್ನೂ ನಿಯಂತ್ರಣದ ವ್ಯಾಪ್ತಿಯಲ್ಲಿವೆ ಎಂದು ಕೇಂದ್ರ ಸರ್ಕಾರ ಸಂಸತ್ತಿಗೆ ತಿಳಿಸಿದೆ. https://chat.whatsapp.com/FCEnlTkAKCC0MGPhXtX4i4 ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ, ಸಮಾಜವಾದಿ ಪಕ್ಷದ ಸಂಸದ ಪುಷ್ಪೇಂದ್ರ ಸರೋಜ್ ಅವರ ಪ್ರಶ್ನೆಗೆ ನೀಡಿದ ಲಿಖಿತ ಉತ್ತರದಲ್ಲಿ ಈ ಮಾಹಿತಿ ನೀಡಿದ್ದಾರೆ. ಆರ್‌ಬಿಐನ All-Inclusive Directions (AID) ಅಡಿಯಲ್ಲಿ ಮುಂದುವರಿದಿರುವ 27 ಪಟ್ಟಣ ಸಹಕಾರಿ ಬ್ಯಾಂಕ್‌ಗಳಲ್ಲಿ ಮಹಾರಾಷ್ಟ್ರದ ಪಾಲು ಅತ್ಯಧಿಕವಾಗಿದೆ. ರಾಜ್ಯವಾರು ಅಂಕಿ-ಅಂಶಗಳ ಪ್ರಕಾರ: ಮಹಾರಾಷ್ಟ್ರ – 10 ಬ್ಯಾಂಕ್‌ಗಳು ,ಕರ್ನಾಟಕ – 4 ಬ್ಯಾಂಕ್‌ಗಳು,…
ಪುತ್ತೂರು: ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್ ಸಾಧಿಸಿರುವ ಅಭೂತಪೂರ್ವ ಹಾಗೂ ಸರ್ವತೋಮುಖ ಸಾಧನೆಯನ್ನು ಗುರುತಿಸಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ 2025-26ನೇ ಸಾಲಿನ “ವಿಶೇಷ ಸಾಧನಾ ಪ್ರಶಸ್ತಿ” ನೀಡಿ ಗೌರವಿಸಲಾಯಿತು. https://chat.whatsapp.com/FCEnlTkAKCC0MGPhXtX4i4 ಪಟ್ಟಣ ಸಹಕಾರಿ ಬ್ಯಾಂಕ್ ವಿಭಾಗದಲ್ಲಿ ಬ್ಯಾಂಕಿನ ಉತ್ತಮ ಕಾರ್ಯನಿರ್ವಹಣೆ, ಪ್ರಗತಿ ಹಾಗೂ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರಕ್ಕೆ ನೀಡುತ್ತಿರುವ ಗಮನಾರ್ಹ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕಿನ ಅಧ್ಯಕ್ಷ ಎನ್. ಕಿಶೋರ್ ಕೊಳತ್ತಾಯ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಶೇಖರ ಶೆಟ್ಟಿ ಅವರು ಪ್ರಶಸ್ತಿ ಸ್ವೀಕರಿಸಿದರು. ಪುತ್ತೂರು ಟೌನ್ ಬ್ಯಾಂಕಿನ ಉಪಾಧ್ಯಕ್ಷ ಶ್ರೀಧರ ಗೌಡ, ಹಿರಿಯ ನಿರ್ದೇಶಕರಾದ ಚಂದ್ರಶೇಖರ ರಾವ್ ಬಪ್ಪಳಿಗೆ ಮತ್ತು ಕಿರಣ್ ಕುಮಾರ್ ರೈ ಉಪಸ್ಥಿತರಿದ್ದರು.…
ಆಗಸ್ಟ್ 29ರಂದು ಆತ್ಮಶಕ್ತಿ ಸಹಕಾರ ಸಂಘದಲ್ಲಿ ಸಹಕಾರ ಸಂಘಗಳ ಕಾನೂನು, ಭದ್ರತೆ, ಸುರಕ್ಷತೆ ಬಗ್ಗೆ ಅರಿವು ಕಾರ್ಯಕ್ರಮ
ಮಂಗಳೂರು: ಸಹಕಾರ ಸಂಘಗಳ ಕಾನೂನು, ಭದ್ರತೆ ಹಾಗೂ ಸುರಕ್ಷತಾ ಕ್ರಮಗಳ ಕುರಿತು ಸಹಕಾರಿ ಸಂಘಗಳ ಆಡಳಿತ ಮಂಡಳಿ, ಅಧಿಕಾರಿಗಳು ಹಾಗೂ ಸಿಬ್ಬಂದಿಯಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಆಗಸ್ಟ್ 29ರಂದು ಮಂಗಳೂರಿನ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಪ್ರಧಾನ ಕಚೇರಿಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಹಕಾರ ಸಂಘಗಳಿಗೆ ವಿಶೇಷ ಅರಿವು ಕಾರ್ಯಕ್ರಮ ಆಯೋಜಿಸಲಾಗಿದೆ. https://chat.whatsapp.com/FCEnlTkAKCC0MGPhXtX4i4 ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಂಗ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಂಗಳೂರು ಇವರ ಸಹಯೋಗದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಪಡೀಲ್, ಮಂಗಳೂರು ಇದರ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ಆತ್ಮಶಕ್ತಿ ಸೌಧದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಹಕಾರ ಸಂಘಗಳಿಗೆ ಸಂಬAಧಿಸಿದ ಕಾನೂನು ವಿಚಾರಗಳು, ಸಂಘಗಳ ಭದ್ರತೆ ಮತ್ತು ಸುರಕ್ಷತಾ ಕ್ರಮಗಳು, ಕಾನೂನು ಸಮಸ್ಯೆಗಳಿಗೆ ಲಭ್ಯವಿರುವ ನೆರವು ಹಾಗೂ ಸಹಕಾರ ಸಂಘಗಳ ಸುಭದ್ರತೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ತಜ್ಞರಿಂದ ಮಾಹಿತಿ…
ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ಗೆ ಒಲಿದ ಮೊದಲ ಗೌರವ ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿ. ಬೆಂಗಳೂರು ಇದರ ನಿರ್ದೇಶಕರಾಗಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟು ಇವರು ಆಯ್ಕೆಯಾಗಿದ್ದಾರೆ. ಇದು ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ಗೆ ದೊರಕಿದ ಮೊದಲ ಗೌರವ ಆಗಿದೆ. https://chat.whatsapp.com/FCEnlTkAKCC0MGPhXtX4i4 ಕ್ರಿಯಾಶೀಲ ನಾಯಕರಾಗಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ಅನ್ನು ಮುನ್ನಡೆಸುತ್ತಿರುವ ಶಶಿಕುಮಾರ್ ರೈ ಅವರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ನಿರ್ದೇಶಕರಾಗಿದ್ದು, ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಲ್ಲದೆ ಪುತ್ತೂರು ಟಿಎಪಿಸಿಎಂಎಸ್ ನಿರ್ದೇಶಕರು ಕೂಡಾ ಆಗಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ನೂತನ ನಿರ್ದೇಶಕರಾಗಿ ಆಯ್ಕೆಯಾಗಿರುವ ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ ಅವರು ಅಭಿನಂದನೆ…
ಬೆಂಗಳೂರು: ಟಿ.ದಾಸರಹಳ್ಳಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್‌ನ 2025-26ನೇ ಸಾಲಿನ 18ನೇ ವಾರ್ಷಿಕ ಸರ್ವ ಸದಸ್ಯರ ಸಭೆ ಭಾನುವಾರ ಆಯೋಜಿಸಲಾಗಿತ್ತು. https://chat.whatsapp.com/FCEnlTkAKCC0MGPhXtX4i4 ಸೊಸೈಟಿಯ ಅಧ್ಯಕ್ಷರಾದ ಮೃತ್ಯುಂಜಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. 2025-26ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಸೊಸೈಟಿಯ ಆಡಳಿತಾತ್ಮಕ ಹಾಗೂ ಸದಸ್ಯರ ಹಿತಾಸಕ್ತಿಗೆ ಸಂಬಂಧಿಸಿದ ವಿಷಯಗಳು, ವಾರ್ಷಿಕ ವರದಿ, ಹಣಕಾಸು ವ್ಯವಹಾರಗಳು ಸೇರಿದಂತೆ ಅಗತ್ಯ ವಿಷಯಗಳ ಕುರಿತು ಚರ್ಚೆ ನಡೆಯಿತು.
ನೆಗೋಶಿಯೇಬಲ್ ಇನ್‌ಸ್ಟ್ರುಮೆಂಟ್ಸ್ ಆಕ್ಟ್ ಅಡಿಯಲ್ಲಿ ರಜೆ: ಬ್ಯಾಂಕುಗಳಿಗೆ ಗೊಂದಲ; ಜಿಲ್ಲಾಮಟ್ಟದ ಘೋಷಣೆಯ ಅಧಿಕಾರ ವ್ಯಾಪ್ತಿಗೆ ಪ್ರಶ್ನೆ
ಮಂಗಳೂರು: ನೆಗೋಶಿಯೇಬಲ್ ಇನ್‌ಸ್ಟ್ರುಮೆಂಟ್ಸ್ ಆಕ್ಟ್, 1881ರ ಅಡಿಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದು (ಆಗಸ್ಟ್ 25) ರಜೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಸಹಕಾರ ಬ್ಯಾಂಕುಗಳು, ಸಾರ್ವಜನಿಕ ವಲಯದ ಬ್ಯಾಂಕುಗಳು ಹಾಗೂ ಖಾಸಗಿ ಬ್ಯಾಂಕುಗಳ ಕಾರ್ಯನಿರ್ವಹಣೆಯಲ್ಲಿ ಗೊಂದಲ ಉಂಟಾಗಿದೆ. ವಿಶೇಷವಾಗಿ ಜಿಲ್ಲಾಧಿಕಾರಿ ಕಚೇರಿ ಹಾಗೂ ಲೀಡ್ ಬ್ಯಾಂಕ್ ಮಟ್ಟದಲ್ಲಿ ರಜೆ ಕುರಿತು ಹೊರಬಂದಿರುವ ಸೂಚನೆಗಳು ಬ್ಯಾಂಕಿಂಗ್ ವಲಯದಲ್ಲಿ ಕಾನೂನುಬದ್ಧ ಅಧಿಕಾರದ ವ್ಯಾಪ್ತಿಯ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕಿವೆ. https://chat.whatsapp.com/FCEnlTkAKCC0MGPhXtX4i4 ರಾಜ್ಯ ಸರ್ಕಾರವು ಈದ್ ಮಿಲಾದ್‌ಗೆ ಜಿಲ್ಲಾವಾರು ರಜೆ ಘೋಷಿಸಿದ ಹಿನ್ನೆಲೆಯಲ್ಲಿ ಸಹಕಾರ ಬ್ಯಾಂಕ್‌ಗಳು, ಸಾರ್ವಜನಿಕ ರಂಗದ ಬ್ಯಾಂಕ್‌ಗಳು ಹಾಗೂ ಖಾಸಗಿ ಬ್ಯಾಂಕ್‌ಗಳಿಗೆ ಈ ರಜೆ ಅನ್ವಯಿಸುವುದೇ ಎಂಬ ಪ್ರಶ್ನೆ ಕಾಡುತ್ತಿದೆ. ಸಹಕಾರ ಬ್ಯಾಂಕ್‌ಗಳು ಹಾಗೂ ಇತರ ಬ್ಯಾಂಕಿಂಗ್ ಸಂಸ್ಥೆಗಳು ತಮ್ಮದೇ ಆದ ನಿಯಂತ್ರಣ ವ್ಯವಸ್ಥೆ ಮತ್ತು ಸಂಬಂಧಪಟ್ಟ ಪ್ರಾಧಿಕಾರಗಳ ಮಾರ್ಗಸೂಚಿಗಳಂತೆ ಕಾರ್ಯನಿರ್ವಹಿಸುತ್ತವೆ. ಹೀಗಾಗಿ ಸಂಬಂಧಪಟ್ಟ ಸಂಸ್ಥೆಗಳ ಅಧಿಕಾರ ವ್ಯಾಪ್ತಿಗೆ ಬಾರದಿದ್ದರೂ ರಜೆ ಘೋಷಿಸಿರುವುದೇ? ಅಥವಾ ಈ ರಜೆ ಬ್ಯಾಂಕ್‌ಗಳಿಗೂ ಕಡ್ಡಾಯವಾಗಿ ಅನ್ವಯಿಸುತ್ತದೆಯೇ? ಎಂಬ…
ಮಂಗಳೂರು: ಮಂಗಳೂರಿನ ಬಿಜೈಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಶ್ರೀ ಮಂಗಳಾಜ್ಯೋತಿ ವಿವಿಧೋದ್ಧೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಲ್ಲಿ ಶನಿವಾರ ನಡೆದ ಬ್ಯಾಂಕಿನ ಮಹಾಸಭೆಯಲ್ಲಿ ಸಾಧನಾ ಪುರಸ್ಕಾರ ನೀಡಿ ಗೌರವಿಸಲಾಯಿತು. https://chat.whatsapp.com/FCEnlTkAKCC0MGPhXtX4i4 ಶ್ರೀ ಮಂಗಳಾಜ್ಯೋತಿ ವಿವಿಧೋದ್ಧೇಶ ಸಹಕಾರಿ ಸಂಘದ ಅಧ್ಯಕ್ಷರಾದ ರಾಜೇಂದ್ರ ಕುಮಾರ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯ ಆರ್ ಪ್ರಶಸ್ತಿ ಸ್ವೀಕರಿಸಿದರು. ಸಂಘದ ಉಪಾಧ್ಯಕ್ಷರಾದ ಭೋಜ ಎಸ್ ಕುಲಾಲ್, ನಿರ್ದೇಶಕರಾದ ವಿಶ್ವನಾಥ ಬಂಗೇರ, ಭೋಜ ಯು ಮೂಲ್ಯ, ಸುರೇಶ್ ಕೆ ಕುಲಾಲ್ ಮತ್ತು ಮೋಹನದಾಸ್ ಬಿ. ಇವರುಗಳು ಪ್ರಶಸ್ತಿ ಸ್ವೀಕರಿಸುವ ವೇಳೆ ಉಪಸ್ಥಿತರಿದ್ದರು.
ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ರೂ.51.13 ಲಕ್ಷ ನಿವ್ವಳ ಲಾಭ ಶೇ.25 ಡಿವಿಡೆಂಡ್ ಘೋಷಣೆ
ಕಾರ್ಕಳ: ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರಿ ಸಂಘವು ಆರ್ಥಿಕ ವರ್ಷದಲ್ಲಿ ರೂ. 218.48 ಕೋಟಿ ವ್ಯವಹಾರ ನಡೆಸಿ, ರೂ. 51.13 ಲಕ್ಷ ನಿವ್ವಳ ಲಾಭ ಗಳಿಸಿದೆ. ವಾರ್ಷಿಕ ಸಾಲಿನ ಅಂತ್ಯಕ್ಕೆ ಸಂಘವು ರೂ.36.69 ಲಕ್ಷ ಪಾಲು ಬಂಡವಾಳ ಇದ್ದು ರೂ. 48.10 ಕೋಟಿ ಠೇವಣಿ ಸಂಗ್ರಹವಾಗಿದ್ದು ರೂ. 38.48 ಕೋಟಿ ಸಾಲ ವಿತರಿಸಿದ್ದು ರೂ.54.08 ಕೋಟಿ ದುಡಿಮೆ ಬಂಡವಾಳ ಹೊಂದಿದೆ. https://chat.whatsapp.com/FCEnlTkAKCC0MGPhXtX4i4 ಭಾನುವಾರ ನಡೆದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷರಾದ ಸಂತೋಷ್ ರಾವ್ ಮಾತನಾಡಿ ಸಂಘದ 2025-26ನೇ ಸಾಲಿನಲ್ಲಿ ಸಂಘದ ಪ್ರಗತಿಯನ್ನು ಹಾಗೂ ಸಂಘವು ಆರ್ಥಿಕ ಸಾಲಿನಲ್ಲಿ ನಡೆಸಿದ ಸಾಮಾಜಿಕ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿ, ಸಂಘದ ಆಡಳಿತ ನಡೆಸಲು ಅನುವು ಮಾಡಿಕೊಟ್ಟ ಸದಸ್ಯ ಬಾಂಧವರಿಗೆ ಕೃತಜ್ಞತೆ ಸಲ್ಲಿಸುವುದರೊಂದಿಗೆ ಸಂಘವು ಆರ್ಥಿಕ ಸಾಲಿನಲ್ಲಿ 25 ಸಂವತ್ಸರಗಳನ್ನು ಪೂರೈಸಿ ಬೆಳ್ಳಿ ಹಬ್ಬದ ಸಂಭ್ರಮಾಚರಣೆಯಲ್ಲಿರುವುದು ಹರ್ಷದಾಯಕವಾಗಿರುತ್ತದೆ. ಈ ಸಸಂಧರ್ಭದಲ್ಲಿ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಈಗಾಗಲೇ ಹಮ್ಮಿಕೊಂಡು ಕಾರ್ಯಚರಿಸಿದ್ದು ಮುಂದಿನ ದಿನಗಳಲ್ಲಿಯು ಹಲವಾರು ಸಮಾಜಮುಖಿ…
