Author: admin
ಮಂಗಳೂರು: ಸಹಕಾರ ಕ್ಷೇತ್ರದಲ್ಲಿ ನೀಡಿದ ಅತ್ಯುತ್ತಮ ಕೊಡುಗೆಯನ್ನು ಗುರುತಿಸಿ ಮಂಗಳೂರಿನ ಉರ್ವಸ್ಟೋರ್‌ನ ತುಳುಭವನಲ್ಲಿ ನಡೆದ 72ನೇ ಸಹಕಾರ ಸಪ್ತಾಹ ಆಚರಣೆಯ ಕಾರ್ಯಕ್ರಮದಲ್ಲಿ ಎಂಸಿಸಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೋ ಅವರಿಗೆ 2025ರ ಪ್ರತಿಷ್ಠಿತ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ತುಳುನಾಡು ರಕ್ಷಣಾ ವೇದಿಕೆ ಮತ್ತು ತುಳುನಾಡು ಸೂರ್ಯ ಪತ್ರಿಕೆ ಜಂಟಿಯಾಗಿ ಆಯೋಜಿಸಿದ 72ನೇ ಸಹಕಾರ ಸಪ್ತಾಹ ಆಚರಣೆಯ ಅಂಗವಾಗಿ ಪ್ರಶಸ್ತಿ ಪ್ರದಾನ ಮಾಡಲಾಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ತುಳುನಾಡು ರಕ್ಷಣಾ ವೇದಿಕೆಯ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಶಿವ ದುರ್ಗಾಂಬಾ ಮಠದ ಶ್ರೀ ಶಿವಯೋಗಿ ದುರ್ಗಾನಂದ ಸ್ವಾಮೀಜಿ, ಮಾಜಿ ಸಚಿವ ಕೃಷ್ಣ ಪಾಲೆಮಾರ್, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್, ಅದಾನಿ ಗ್ರೂಪ್‌ನ ಅಧ್ಯಕ್ಷರು ಮತ್ತು ಕಾರ್ಯನಿರ್ವಾಹಕ ನಿರ್ದೇಶಕರಾದ ಕಿಶೋರ್ ಆಳ್ವ, ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷರಾದ ಎ.ಸಿ. ಭಂಡಾರಿ, ಧರ್ಮವಲೋಕನದ ಗಡಿಕಾರರು ಮತ್ತು ಅಧ್ಯಕ್ಷರಾದ ದೋಣಿಂಜೆಗುತ್ತು…
13 ನಿರ್ದೇಶಕರು ಅವಿರೋಧ ಆಯ್ಕೆ, 6 ಸ್ಥಾನಗಳಿಗೆ ಸ್ಪರ್ಧೆ ಮಂಗಳೂರು: ಕೇಂದ್ರ ಅಡಕೆ ಮತ್ತು ಕೋಕೋ ಮಾರ್ಕೆಟಿಂಗ್ ಮತ್ತು ಸಂಸ್ಕರಣಾ ಸಹಕಾರಿ (ಕ್ಯಾಂಪ್ಕೋ) ನಿರ್ದೇಶಕ ಮಂಡಳಿಗೆ ಚುನಾವಣೆ ನವೆಂಬರ್ 23ರಂದು ಭಾನುವಾರ ನಿಗದಿಯಾಗಿದೆ. ಮಂಗಳೂರಿನ ಕೊಡಿಯಾಲ್‌ಬೈಲ್‌ನ ಶಾರದಾ ವಿದ್ಯಾಲಯದಲ್ಲಿ ಮತದಾನ ನಡೆಯಲಿದ್ದು ಆರು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಕ್ಯಾಂಪ್ಕೋದ ನಿರ್ದೇಶಕ ಮಂಡಳಿಯ 19 ಸ್ಥಾನಗಳಲ್ಲಿ, 13 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಆರು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಒಟ್ಟು ಎಂಟು ಮಂದಿ ಕಣದಲ್ಲಿದ್ದಾರೆ. https://chat.whatsapp.com/JVAtKKe2M19AFO3W5629ZS?mode=ems_copy_t ಸಹಕಾರ ಭಾರತಿ ಬೆಂಬಲಿತ 13 ಮಂದಿ ನಿರ್ದೇಶಕ ಮಂಡಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದರೆ ಎಂಟು ಸ್ಥಾನಗಳಿಗೆ ಸ್ಪರ್ಧಿಸಿರುವವರಲ್ಲಿ ಆರು ಮಂದಿ ಸಹಕಾರ ಭಾರತಿ ಬೆಂಬಲಿತರು. ಇತರ ಇಬ್ಬರು ಸ್ವತಂತ್ರ ಅಭ್ಯರ್ಥಿಗಳು. 19 ಮಂದಿಯ ನಿರ್ದೇಶಕ ಮಂಡಳಿಗೆ ಒಂಬತ್ತು ಮಂದಿ ಕೇರಳದಿಂದ ಹತ್ತು ಮಂದಿ ಕರ್ನಾಟಕದಿಂದ ಆಯ್ಕೆಯಾಗಬೇಕಿದೆ. ಈ ಪೈಕಿ ಕೇರಳದಿಂದ ಒಂಬತ್ತು ಮಂದಿಯೂ ಅವಿರೋಧ ಆಯ್ಕೆಯಾಗಿದ್ದಾರೆ. ಕರ್ನಾಟಕದಿಂದ ಮಹಿಳಾ ಸ್ಥಾನಕ್ಕೆ ಸುಳ್ಯದ ಕಳಂಜ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ…
ಚಿಕ್ಕಮಗಳೂರು: ರಾಯಚೂರಿನಲ್ಲಿ ನಡೆದ 72ನೇ ಅಖಿಲ ಭಾರತ ಸರಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರಿನ ಸಮಾನ ಪತ್ತಿನ ಸೌಹಾರ್ದ ಸಹಕಾರಿಗೆ ಮೈಸೂರು ವಿಭಾಗದ ಉತ್ತಮ ಸಹಕಾರಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ರಾಯಚೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಾನ ಪತ್ತಿನ ಸೌಹಾರ್ದ ಸಹಕಾರಿ ಸಂಘದ ಅದ್ಯಕ್ಷರಾದ ದೇವರಾಜ್ ಮತ್ತು ಮುಖ್ಯ ಕಾರ್ಯನಿರ್ವಾಹಕ ಬಿ.ವೈ ವೆಂಕಟೇಶ್ ಇವರು ಪ್ರಶಸ್ತಿ ಸ್ವೀಕರಿಸಿದರು. ಕರ್ನಾಟಕ ಸರ್ಕಾರದ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್ ಬೋಸರಾಜು ಪ್ರಶಸ್ತಿ ಪ್ರದಾನ ಮಾಡಿದರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷರಾದ ಜಿ.ನಂಜನ ಗೌಡ ಮೊದಲಾದವರು ಹಾಜರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com
ಮಂಗಳೂರಿನ ಯಶಸ್ವಿನಿ ಶ್ರೀ ಮಹಿಳಾ ಸೌಹಾರ್ದ ಸಹಕಾರಿಯಅಧ್ಯಕ್ಷರಾದ ಚಂಚಲಾ ತೇಜೋಮಯರಿಗೆ ಶ್ರೇಷ್ಠ ಸಹಕಾರಿ ಪ್ರಶಸ್ತಿ
ಮಂಗಳೂರು: ಇಲ್ಲಿನ ಬಲ್ಮಠ ಯಶಸ್ವಿನಿ ಶ್ರೀ ಮಹಿಳಾ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷರಾದ ಚಂಚಲಾ ತೇಜೋಮಯ ಅವರಿಗೆ ರಾಯಚೂರಿನಲ್ಲಿ ನಡೆದ 72ನೇ ಅಖಿಲ ಭಾರತ ಸರಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ಶ್ರೇಷ್ಠ ಸಹಕಾರಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಮೈಸೂರು ಪ್ರಾಂತ್ಯದಲ್ಲಿ ಈ ಪುರಸ್ಕಾರವು ಮಹಿಳೆಯೊಬ್ಬರಿಗೆ ಲಭಿಸಿದ ಪ್ರಥಮ ಗೌರವವಾಗಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಚಂಚಲಾ ತೇಜೋಮಯ ಅವರು ಸುಮಾರು 25 ವರ್ಷಗಳ ಹಿಂದೆ ಬಲ್ಮಠದ ಸರಕಾರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡಲು ತಮ್ಮ ಆತ್ಮೀಯ ಗೆಳತಿಯರೊಡನೆ ಸೇರಿಕೊಂಡು ಸುಮಾರು ಏಳು ವರ್ಷ ಕಾಲ ಮಕ್ಕಳಿಗೆ ಉಚಿತ ಬಿಸಿಯೂಟ ನೀಡುವ ಮೂಲಕ ವೃತ್ತಿ ಜೀವನ ಪ್ರಾರಂಭಿಸಿ ತದನಂತರ ಮಹಿಳೆಯರನ್ನು ಒಗ್ಗೂಡಿಸಿ 2002ರಲ್ಲಿ ಯಶಸ್ವಿನಿ ಮಹಿಳಾ ಮಂಡಳಿ ಸ್ಥಾಪನೆ ಮಾಡಿ ನಂತರ 2012ರಲ್ಲಿ ಯಶಸ್ವಿನಿ ಚಾರಿಟೇಬಲ್ ಟ್ರಸ್ಟ್ ರಚಿಸಿ ಸುಮಾರು 30 ಸ್ವಸಹಾಯ ಗುಂಪುಗಳನ್ನು ರಚನೆ ಮಾಡಿ ಮಹಿಳೆಯರು ಸ್ವಂತ ಉದ್ಯೋಗ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ. ಪ್ರಸ್ತುತ ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷರಾಗಿದ್ದು,…
ರಾಯಚೂರಿನಲ್ಲಿ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಸಂದೇಶ ರಾಯಚೂರು: ಆರ್ಥಿಕ ಅಭಿವೃದ್ಧಿ ಹಾಗೂ ಹೊಸ ಜೀವನೋಪಾಯಗಳನ್ನು ಸೃಷ್ಟಿಸಲು ಸಹಕಾರಿ ಸಂಘಗಳು ಗ್ರಾಮೀಣ ಪ್ರದೇಶಗಳಲ್ಲಿ ಆಳವಾಗಿ ವಿಸ್ತರಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಆರ್ಥಿಕತೆಯನ್ನು ಬಲಪಡಿಸಲು ಕೃಷಿ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ನಿಗದಿ ಮಾಡುವುದು ಅತ್ಯಗತ್ಯ ಎಂದು ಸಣ್ಣ ನೀರಾವರಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಪ್ರತಿಪಾದಿಸಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಕರ್ನಾಟಕ ರಾಜ್ಯ ಸಹಕಾರಿ ಒಕ್ಕೂಟ, ಕರ್ನಾಟಕ ರಾಜ್ಯ ಬಸವೇಶ್ವರ ಮಾಧ್ಯಮ ಒಕ್ಕೂಟ ಮತ್ತು ಜಿಲ್ಲಾಮಟ್ಟದ ಸಹಕಾರಿ ಸಂಸ್ಥೆಗಳ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಸೌಹಾರ್ದ ಫೆಡರಲ್ ಸಹಕಾರಿ ಲಿಮಿಟೆಡ್ ರಾಯಚೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ 72ನೇ ಅಖಿಲ ಭಾರತ ಸಹಕಾರಿ ಸಪ್ತಾಹ ಆಚರಣೆ ಕಾರ್ಯಕ್ರಮದಲ್ಲಿ ಅವರು ಪ್ರಧಾನ ಸಂದೇಶ ನೀಡಿದರು. ಗ್ರಾಮೀಣ ಭಾರತದಲ್ಲಿ ಸಹಕಾರಿ ಚಳವಳಿಯನ್ನು ಬಲಪಡಿಸುವ ಕುರಿತಂತೆ ನಡೆದ ಕಾರ್ಯಕ್ರಮದಲ್ಲಿ ತ್ರಿಭುವನ್ ಸಹಕಾರಿ ವಿಶ್ವವಿದ್ಯಾಲಯ ಸಂಶೋಧನೆ ಮತ್ತು ತರಬೇತಿ ಸಹಕಾರಿ ಶಿಕ್ಷಣವನ್ನು ಪರಿವರ್ತಿಸುವುದು” ಎಂಬ ವಿಷಯದ…
ರಾಯಚೂರು: ರಾಯಚೂರು ತಾಲೂಕು ಕಾರ್ಯನಿರತ ಸೌಹಾರ್ದ ಸಹಕಾರಿಗಳ ನೌಕರರ ಸಂಘ, ರಾಯಚೂರು, ಮಾನ್ವಿ, ಸಿರವಾರ ಮತ್ತು ದೇವದುರ್ಗ ತಾಲೂಕು ಸೌಹಾರ್ದ ಸಹಕಾರಿಗಳ ಸಮೂಹ ಹಾಗೂ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ.ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಸೌಹಾರ್ದ ಕಾಯ್ದೆಯ ರಜತ ಮಹೋತ್ಸವ ಹಾಗೂ ಅಂತಾರಾಷ್ಟ್ರೀಯ ಸಹಕಾರ ವರ್ಷಾಚರಣೆಯ ಅಂಗವಾಗಿ ರಾಯಚೂರು, ಮಾನ್ವಿ, ಸಿರವಾರ ಮತ್ತು ದೇವದುರ್ಗ ತಾಲೂಕು ಸೌಹಾರ್ದ ಸಹಕಾರಿಗಳ ಕ್ರೀಡಾಕೂಟದ ಬಹುಮಾನ ವಿತರಣೆ ಹಾಗೂ ಸಮಾರೋಪ ಸಮಾರಂಭ ಕಾರ್ಯಕ್ರಮ ನವೆಂಬರ್ 23ರಂದು ಭಾನುವಾರ ಬೆಳಗ್ಗೆ 10ರಿಂದ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಬಸವೇಶ್ವರ ಆಡಿಟೋರಿಯಂನಲ್ಲಿ ಆಯೋಜಿಸಲಾಗಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷರಾದ ಜಿ.ನಂಜನ ಗೌಡ ಹಾಗೂ ಕರ್ನಾಟಕ ರಾಜ್ಯ ಬಸವೇಶ್ವರ ಸುದ್ದಿ ಮಾಧ್ಯಮ ಸಹಕಾರ ಮಹಾಮಂಡಳದ ಅಧ್ಯಕ್ಷರಾದ ಗುರುನಾಥ ಜಾಂತೀಕರ್ ಉದ್ಘಾಟಿಸಲಿದ್ದಾರೆ. ಮಾನ್ವಿ ಪಟ್ಟಣ ಸೌಹಾರ್ದ ಸಹಕಾರಿ ಬ್ಯಾಂಕ್ ಅಧ್ಯಕ್ಷ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕರಾದ ಆರ್.ತಿಮ್ಮಯ್ಯ ಶೆಟ್ಟಿ ಅಧ್ಯಕ್ಷತೆ…
ಬಳ್ಳಾರಿ: ಸುಕೋ ಬ್ಯಾಂಕ್ ವತಿಯಿಂದ ಬ್ಯಾಂಕಿನ ಎಲ್ಲಾ 29 ಶಾಖೆಗಳಲ್ಲಿ ಮಹಿಳಾ ಅಧಿಕಾರಿಗಳಿಗಾಗಿ ಸಮಗ್ರ ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮವನ್ನು ಬುಧವಾರ ಆಯೋಜಿಸಲಾಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಬಳ್ಳಾರಿಯ ಸ್ಕುರುತ ನರ್ಸಿಂಗ್ ಹೋಂನ ಸ್ತ್ರೀರೋಗ ತಜ್ಞೆ ಡಾ.ರೇಣುಕಾ ಮಂಜುನಾಥ್ ಜಾಗೃತಿ ಅಧಿವೇಶನ ನಡೆಸಿದರು. ಸ್ವಯಂ ಪರೀಕ್ಷೆಯ ವಿಧಾನಗಳು, ಆರಂಭಿಕ ಪತ್ತೆ, ಸಾಮಾನ್ಯ ಲಕ್ಷಣಗಳು, ತಡೆಗಟ್ಟುವ ಲಸಿಕೆಗಳ ಕುರಿತು ಅವರು ವಿಸ್ತೃತ ಮಾಹಿತಿ ನೀಡಿ, ಕರ್ನಾಟಕದಲ್ಲಿ ಹೆಚ್ಚುತ್ತಿರುವ ಕ್ಯಾನ್ಸರ್ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಕ್ಯಾನ್ಸರ್ ಪತ್ತೆಗೆ ಸಕಾಲಿಕ ತಪಾಸಣೆ ಮತ್ತು ಪೂರ್ವಭಾವಿ ಆರೋಗ್ಯ ಮೇಲ್ವಿಚಾರಣೆಯ ಅಗತ್ಯದ ಕುರಿತು ಅವರು ಮಂಡಿಸಿದ ಒಳನೋಟಗಳು ಜಾಗೃತಿ ಮೂಡಿಸಿತು. ಮುಖ್ಯ ಭಾಷಣ ಮಾಡಿದ ಸುಕೋ ಬ್ಯಾಂಕ್ ನಿರ್ದೇಶಕಿ ಸಾವಿತ್ರಿ ಎಂ, ಮಹಿಳಾ ಅಧಿಕಾರಿಗಳು ವೃತ್ತಿಪರ ಕರ್ತವ್ಯಗಳು ಮತ್ತು ವೈಯಕ್ತಿಕ ಜವಾಬ್ದಾರಿಗಳನ್ನು ನಿರ್ವಹಿಸುವಾಗ ತಮ್ಮ ಸ್ವಂತ ಆರೋಗ್ಯವನ್ನು ಹೆಚ್ಚಾಗಿ ಕಡೆಗಣಿಸುತ್ತಾರೆ, ಇದು ಗಂಭೀರ ಪರಿಸ್ಥಿತಿಗಳ ರೋಗ ನಿರ್ಣಯವನ್ನು ವಿಳಂಬಗೊಳಿಸಲು ಕಾರಣವಾಗಬಹುದು. ಈ ಬಗ್ಗೆ ಎಚ್ಚರಿಕೆ ಅಗತ್ಯ. ಮಹಿಳಾ ಉದ್ಯೋಗಿಗಳು…
ಮೂಡುಬಿದಿರೆ: ಎಲ್ಲರ ಸಹಕಾರದೊಂದಿಗೆ ನಡೆಯುತ್ತಿರುವ ಆರೋಗ್ಯ ಶಿಬಿರ ಯಶಸ್ವಿಯಾಗಿ ನಡೆಯಲಿ ಎಂದು ಪಿ.ಕೆ.ಥೋಮಸ್ ಮೂಡುಬಿದಿರೆ ಹೇಳಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಇವರು ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಮೂಡುಬಿದಿರೆ ಶಾಖೆ, ಮೌಂಟ್ ರೋಜರಿ ಆಸ್ಪತ್ರೆ ಅಲಂಗಾರು ಮತ್ತು ಲಯನ್ಸ್ ಕ್ಲಬ್ ಅಲಂಗಾರು ಇವರ ಜಂಟಿ ಆಶ್ರಯದಲ್ಲಿ ಸಹಕಾರ ಸಪ್ತಾಹ ಅಂಗವಾಗಿ ಆಯೋಜಿಸಿದ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಿಯದರ್ಶಿನಿ ಸೊಸೈಟಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಮಾತನಾಡಿ, ನಮ್ಮ ಗ್ರಾಹಕರ ಸಹಕಾರದಿಂದ ಸಂಸ್ಥೆಯು ಉತ್ತಮವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಇದರ ಪರಿಣಾಮವಾಗಿ ಸಂಸ್ಥೆಯ ಸರ್ವಾಂಗೀಣ ಸಾಧನೆಯನ್ನು ಪರಿಗಣಿಸಿ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಸಂಸ್ಥೆಯು ದ.ಕ ಜಿಲ್ಲೆಯ “ಉತ್ತಮ ಪತ್ತಿನ ಸಹಕಾರ ಸಂಘ” ಪ್ರಶಸ್ತಿಯನ್ನು ಪಡೆದುಕೊಂಡಿದೆ. ಗ್ರಾಹಕರ ಹಾಗೂ ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದವರ ಪರವಾಗಿ ಸದಾ ಸಮಾಜಮುಖಿ ಸೇವೆಯಲ್ಲಿ ವಿವಿಧ ಸಂಸ್ಥೆಗಳೊಂದಿಗೆ ಸದಾ ಕೈಜೋಡಿಸಲು ನಮ್ಮ ಸಂಸ್ಥೆ ಸಿದ್ದವಾಗಿರುತ್ತದೆ ಎಂದು ಹೇಳಿದರು. ಶಿಬಿರದಲ್ಲಿ ಮೌಂಟ್ ರೋಜರಿ ಆಸ್ಪತ್ರೆಯ ನಿರ್ದೇಶಕರಾದ ಸಿಸ್ಟರ್ ಪ್ರೆಸಿಲ್ಲಾ ಡಿಮೆಲ್ಲೊ, ಲಯನ್ಸ್ ಕ್ಲಬ್…
ಪುತ್ತೂರು: ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕಿನ 2026ನೇ ವರ್ಷದ ಕ್ಯಾಲೆಂಡರ್ ಅನ್ನು ಮಂಗಳವಾರ ಬ್ಯಾಂಕ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಾಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಬ್ಯಾಂಕಿನ ಅಧ್ಯಕ್ಷರಾದ ಎನ್. ಕಿಶೋರ್ ಕೊಳತ್ತಾಯ ಅವರು 2026ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿ, ನೂತನ ಕ್ಯಾಲೆಂಡರ್ ವರ್ಷದಲ್ಲಿ ಬ್ಯಾಂಕ್ ಹಲವು ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದು, ಬ್ಯಾಂಕ್ ಡಿಜಿಟಲೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತದೆ ಎಂದು ಹೇಳಿದರು. ಕ್ಯಾಲೆಂಡರ್ ವರ್ಷದ ಅಂತ್ಯದೊಳಗೆ ಬ್ಯಾಂಕಿನ ಸಂಪೂರ್ಣ ಡಿಜಿಟಲೀಕರಣ ಕಾರ್ಯ ಪೂರ್ಣಗೊಳ್ಳುವ ವಿಶ್ವಾಸ ವ್ಯಕ್ತಪಡಿಸಿದರು. ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಶೇಖರ ಶೆಟ್ಟಿ ಅವರು ನೂತನ ಕ್ಯಾಲೆಂಡರ್ ವರ್ಷದ ಕಾರ್ಯಕ್ರಮಗಳ ರೂಪುರೇಷೆಗಳನ್ನು ಸಭೆಗೆ ವಿವರಿಸಿದರು. ಬ್ಯಾಂಕಿನ ಉಪಾಧ್ಯಕ್ಷ ಶ್ರೀಧರ ಗೌಡ, ನಿರ್ದೇಶಕರಾದ ಬಪ್ಪಳಿಗೆ ಚಂದ್ರಶೇಖರ ರಾವ್, ಕಿರಣ್ ಕುಮಾರ್ ರೈ, ರಾಜು ಶೆಟ್ಟಿ, ರಾಮಚಂದ್ರ ಕಾಮತ್, ಮಲ್ಲೇಶ್ ಕುಮಾರ್, ಸುಜೀಂದ್ರ ಪ್ರಭು, ಶ್ರೀಧರ ಪಟ್ಲ, ಸಿ.ಎ. ಅರವಿಂದ ಕೃಷ್ಣ, ಗಣೇಶ ಕೌಕ್ರಾಡಿ, ಹರೀಶ ಭಿಜತ್ರೆ, ಶ್ರೀಮತಿ ಸೀಮಾ ಎ.ಎ., ಶ್ರೀಮತಿ ವೀಣಾ ಹಾಗೂ…
ಮೈಸೂರು: ಮೈಸೂರು ನಗರದ ರಾಮಕೃಷ್ಣನಗರದಲ್ಲಿರುವ ರಮಾಗೋವಿಂದ ರಂಗಮಂದಿರದಲ್ಲಿ ಇತ್ತೀಚೆಗೆ ಸಪ್ತರ್ಷಿ ಸೌಹಾರ್ದ ಸಹಕಾರಿ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ, ಸಹಕಾರಿ ಸಪ್ತಾಹ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. https://chat.whatsapp.com/JVAtKKe2M19AFO3W5629ZS?mode=ems_copy_t ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ ಉದ್ಘಾಟನೆ ನೆರವೇರಿಸಿದರು. ಸಹಕಾರಿಯ ಅಧ್ಯಕ್ಷರಾದ ಎಂ.ಎಸ್.ಚಂದ್ರಶೇಖರ್ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥರಾದ ಪ್ರೊ. ಶೆಲ್ವಪಿಳ್ಳೈ ಅಯ್ಯಂಗಾರ್ ಸಮಾರೋಪ ಭಾಷಣ ಮಾಡಿದರು. ಸಹಕಾರಿಯ ಹಿರಿಯ ಸದಸ್ಯರಿಗೆ, ಸದಸ್ಯತ್ವದ ಹಿರಿಯ ಸದಸ್ಯರಿಗೆ ಸನ್ಮಾನ ಹಾಗೂ ಸಹಕಾರಿಯ ಸದಸ್ಯರು ಮತ್ತು ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಹಾಸ್ಯೋತ್ಸವ ಕಾರ್ಯಕ್ರಮವನ್ನು ಜನಪ್ರಿಯ ಹಾಸ್ಯ ಕಲಾವಿದರಾದ ಮೈಸೂರು ಆನಂದ್ ಮತ್ತು ರೂಪಶ್ರೀ ಆನಂದ್ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಸಹಕಾರಿಯ ಸದಸ್ಯರು, ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com
