Author: admin
ಮುಡಿಪು ಶಾಖೆಯ ಗ್ರಾಹಕರ ಸಭೆಯಲ್ಲಿ ನವೀನ್‌ಚಂದ್ರ ಶ್ಲಾಘನೆ ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಬ್ಬಂದಿ ವರ್ಗದವರು ಉತ್ತಮ ರೀತಿಯಲ್ಲಿ ಗ್ರಾಹಕರಿಗೆ ಸೇವೆ ನೀಡುತ್ತಿರುವುದು ಸಂಘದ ಉನ್ನತಿಗೆ ಕಾರಣವಾಗಿದೆ. ಸಂಘವು ಬ್ಯಾಂಕಿಂಗ್ ಸೇವೆಯ ಜೊತೆಗೆ ಸಂಘದ ಸದಸ್ಯರ ಆರೋಗ್ಯದ ಕಾಳಜಿಯಿಂದ ಉಚಿತ ವೈದ್ಯಕೀಯ ಶಿಬಿರಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ ಎಂದು ಸಂಘದ ಸದಸ್ಯರಾದ ನವೀನ್‌ಚಂದ್ರ ಶ್ಲಾಘಿಸಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮುಡಿಪು ಶಾಖೆಯ ಒಂಬತ್ತನೇ ವಾರ್ಷಿಕೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ಗ್ರಾಹಕರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಹಕರ ಸಭೆಯನ್ನು ಸಂಘದ ಸದಸ್ಯರಾದ ನವೀನ್‌ಚಂದ್ರ, ಕಾಶೀಮ್ ಕೆ, ಕ್ಯಾತರಿನ್ ಡಿಸೋಜ ಹಾಗೂ ದುಶ್ಯಂತ ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು. ಕಾಸಿಮ್ ಕೆ ಮಾತನಾಡಿ ಸಂಘವು ಅತೀ ಕಡಿಮೆ ಅವಧಿಯಲ್ಲಿ ಸಾಧಿಸಿರುವ ಬೆಳವಣಿಗೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಇನ್ನೂ ಹೆಚ್ಚಿನ ಶಾಖೆಯನ್ನು ತೆರೆಯುವಂತಾಗಲಿ” ಎಂದು ಶುಭ ಹಾರೈಸಿದರು. ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ, ಸಂಘದ ಮುಡಿಪು ಶಾಖೆಯು ಒಂಬತ್ತನೇ…
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಅಡಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ಸಭೆಯಲ್ಲಿ ನಿರ್ಣಯ ಬೆಳ್ತಂಗಡಿ: ವಿಶ್ವ ಆರೋಗ್ಯ ಸಂಸ್ಥೆಯ ಸಭೆಗೆ ತೆರಳುವ ಭಾರತದ ಪ್ರತಿನಿಧಿಗಳಿಗೆ ಅಡಕೆಯ ಔಷಧೀಯ ಮೌಲ್ಯಗಳ ಮಾಹಿತಿ ನೀಡುವ ಜತೆಗೆ, ಅಡಕೆಯ ಅಧ್ಯಯನದ ಮಾಹಿತಿ ಹಾಗೂ ಕೃಷಿಕರ ಬದುಕಿನ ಮಾಹಿತಿ ನೀಡಲು ವ್ಯವಸ್ಥೆಯಾಗಬೇಕು ಎಂದು ಅಡಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ (ಎಆರ್‌ಡಿಎಫ್) ಸಭೆಯಲ್ಲಿ ನಿರ್ಧರಿಸಲಾಗಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಅಡಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಡಾ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆಯಲ್ಲಿ ಮಂಗಳವಾರ ಧರ್ಮಸ್ಥಳದಲ್ಲಿ ಈ ಕುರಿತು ನಡೆದ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆದು ಅಡಕೆ ಹಾನಿಕಾರಕ ಅಲ್ಲ ಎಂಬ ಅಂಶ ಈಗಾಗಲೇ ಅಧ್ಯಯನದಿಂದ ಹೊರಬಂದಿದ್ದು, ಎಆರ್‌ಡಿಎಫ್ ಹಾಗೂ ಜೆಡ್ಡು ಆಯುರ್ವೇದ ಸಂಸ್ಥೆ ಈ ಬಗ್ಗೆ ಮಾಡಿರುವ ಅಧ್ಯಯನ ಅಂತಾರಾಷ್ಟ್ರೀಯ ಜರ್ನಲ್‌ನಲ್ಲೂ ಪ್ರಕಟವಾಗಿದೆ ಎಂಬ ಅಂಶವನ್ನು ಸಭೆಯ ಗಮನಕ್ಕೆ ತರಲಾಯಿತು. ವಿದೇಶಿ ಅಡಕೆ ಆಮದು ತಡೆಗೆ, ಅಡಕೆ ಗುಣಮಟ್ಟದ ಮಾಹಿತಿ ಅಗತ್ಯ. ಈಗಾಗಲೇ 63ಕ್ಕೂ ಹೆಚ್ಚು ವಿದೇಶಿ ಅಡಕೆಯ ಸ್ಯಾಂಪಲ್…
ಕೊಟ್ಟಾಯಂ: ಹೆಚ್ಚುವರಿ ಹಣವನ್ನು ಹೊಂದಿರುವ ಸಹಕಾರ ಸಂಘಗಳ ಮೂಲಕ ಸ್ಥಳೀಯ ಸ್ವ-ಸರ್ಕಾರಿ ಸಂಸ್ಥೆಗಳ ಅಭಿವೃದ್ಧಿ ಯೋಜನೆಗಳಿಗೆ ಸಾಲ ಒದಗಿಸಲು ಶೀಘ್ರದಲ್ಲೇ ಹೊಸ ಯೋಜನೆ ಜಾರಿಗೆ ತರಲಾಗುವುದು ಎಂದು ಕೇರಳದ ಸಹಕಾರ ಸಚಿವ ವಿ.ಎನ್. ವಾಸವನ್ ತಿಳಿಸಿದ್ದಾರೆ. https://chat.whatsapp.com/JVAtKKe2M19AFO3W5629ZS?mode=ems_copy_t ಸಹಕಾರಿ ಕ್ಷೇತ್ರದ ಭವಿಷ್ಯದ ಅಭಿವೃದ್ಧಿಯ ಕುರಿತು ಚರ್ಚಿಸಲು ಕೇರಳ ಸರ್ಕಾರ ಆಯೋಜಿಸಿದ್ದ ‘ವಿಷನ್ 2031’ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಸ್ಥಳೀಯ ಸ್ವ-ಸರ್ಕಾರಿ ಸಂಸ್ಥೆಗಳು ಮತ್ತು ಸಹಕಾರಿ ಬ್ಯಾಂಕುಗಳ ನಡುವಿನ ಸಂಘಟಿತ ಪ್ರಯತ್ನಗಳ ಮೂಲಕ ಸ್ಥಳೀಯ ಅಭಿವೃದ್ಧಿಯಲ್ಲಿ ಗಮನಾರ್ಹ ಪ್ರಗತಿ ಸಾಧಿಸಬಹುದು. ಸ್ಥಳೀಯ ಸಂಸ್ಥೆಗಳ ಹಣವನ್ನು ಸಹಕಾರಿ ಬ್ಯಾಂಕುಗಳಲ್ಲಿ ಠೇವಣಿ ಇಡುವುದರಿಂದ ಮತ್ತು ಪರಸ್ಪರ ಸಹಕಾರ ವಾತಾವರಣ ಬೆಳೆಸಿ ರಾಜ್ಯದ ಒಟ್ಟಾರೆ ಬೆಳವಣಿಗೆಯನ್ನು ಖಚಿತಪಡಿಸಿಕೊಳ್ಳುವುದರಿಂದ ಸಾಲಗಳನ್ನು ಪಡೆಯಲು ಸ್ಥಳೀಯ ಸಂಸ್ಥೆಗಳಿಗೆ ಸಹಕಾರಿ ಬ್ಯಾಂಕುಗಳಲ್ಲಿ ಸದಸ್ಯತ್ವ ನೀಡಬೇಕು ಎಂದು ಅವರು ಹೇಳಿದರು. ಸಹಕಾರ ಇಲಾಖೆಯು ಶೀಘ್ರದಲ್ಲೇ ಸ್ಥಳೀಯ ಸ್ವ-ಸರ್ಕಾರಿ ಸಚಿವರೊಂದಿಗೆ ಈ ನಿಟ್ಟಿನಲ್ಲಿ ಚರ್ಚೆ ನಡೆಸಲಿದೆ. ಈ ಉಪಕ್ರಮದ ಭಾಗವಾಗಿ ಸಂಬಂಧಿತ ಕಾನೂನುಗಳಿಗೆ…
ಕಠಿಣ ಪರಿಶ್ರಮದಿಂದ ಕೆಲಸ ಮಾಡುವ ಬಡವರೇ ಲಾಭದ ಮಾಲೀಕರು ಸಹಕಾರದ ಯಶಸ್ವಿಗೆ ಇದುವೇ ಮಾದರಿ – ಕೇಂದ್ರ ಸಹಕಾರ ಸಚಿವ ಅಮಿತ್ ಷಾ ಘೋಷಣೆ ಮುಂಬೈ: ಮೀನುಗಾರರು ಉದ್ಯೋಗಿಗಳಲ್ಲ, ಬದಲಾಗಿ ಮಾಲೀಕರಾಗುವ ಮೂಲಕ ಆತ್ಮನಿರ್ಭರ ಭಾರತದ ದೃಷ್ಟಿಕೋನಕ್ಕೆ ಸಹಕಾರಿಗಳಾಗಬೇಕು. ನರೇಂದ್ರ ಮೋದಿ ಸರ್ಕಾರದ ಬದ್ಧತೆಯನ್ನು ಕೇಂದ್ರ ಸರ್ಕಾರದ ಆತ್ಮನಿರ್ಭರ ಭಾರತದ ಪರಿಕಲ್ಪನೆಯು ಪ್ರತಿಬಿಂಬಿಸುತ್ತದೆ. ಕಠಿಣ ಪರಿಶ್ರಮದಿಂದ ಕೆಲಸ ಮಾಡುವ ಬಡವರು ಲಾಭದ ಮಾಲೀಕರಾಗಿರಬೇಕು – ಇದು ಸಹಕಾರದ ಯಶಸ್ವಿಗೆ ಮಾದರಿ ಎಂದು ಕೇಂದ್ರದ ಸಹಕಾರ ಸಚಿವರಾದ ಅಮಿತ್ ಷಾ ಹೇಳಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಅವರು ಮುಂಬೈನ ಮಜಗಾಂವ್ ಡಾಕ್‌ನಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ದೇಶದ ಮೊದಲ ಆಳಸಮುದ್ರ ಮೀನುಗಾರಿಕಾ ಹಡಗುಗಳನ್ನು ಮಂಗಳವಾರ ಲೋಕಾರ್ಪಣೆಗೊಳಿಸಿ ಮಾತನಾಡಿ, ಈ ಉಪಕ್ರಮವು ಸಹಕಾರಿ ನೇತೃತ್ವದ ನೀಲಿ ಆರ್ಥಿಕತೆಯನ್ನು (ಬ್ಲೂ ರೆವಲ್ಯೂಶನ್) ನಿರ್ಮಿಸುವತ್ತ ಒಂದು ಪ್ರಮುಖ ಹೆಜ್ಜೆಯಾಗಿದೆ ಎಂದು ಬಣ್ಣಿಸಿದರು. ಪ್ರಸ್ತುತ, ಹೆಚ್ಚಿನ ಮೀನುಗಾರಿಕಾ ಸಿಬ್ಬಂದಿಗಳು ವೇತನದ ಆಧಾರದ ಮೇಲೆ ಕೆಲಸ ಮಾಡುತ್ತಾರೆ. ಇದು ಬದಲಾಗಬೇಕು. ಹೊಸ…
ಮಂಗಳೂರು: ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತ ಮಂಗಳೂರು ಮಂಗಳವಾರ 24ನೇ ವರ್ಷಕ್ಕೆ ಪದಾರ್ಪಣೆ ಮಾಡಿದ್ದು ಇದರ ಅಂಗವಾಗಿ ಸಂಸ್ಥೆಯಲ್ಲಿ ಗಣಹೋಮ ನಡೆಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ವೇದಮೂರ್ತಿ ಪ್ರಶಾಂತ್ ಭಟ್ ಪೂಜಾ ಕಾರ್ಯ ನೆರವೇರಿಸಿಕೊಟ್ಟರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕಿ ಭಾರತಿ ಭಟ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಪಜೀರಿನ ಗೋವನಿತಾಶ್ರಯ ಟ್ರಸ್ಟ್‌ಗೆ ದೇಣಿಗೆಯನ್ನು ಹಸ್ತಾಂತರಿಸಲಾಯಿತು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಾಟೆಕಲ್ ಶಾಖೆಯ ಆರನೇ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ನಾಟೆಕಲ್ ಶಾಖೆಯಲ್ಲಿ ಜರುಗಿತು. https://chat.whatsapp.com/JVAtKKe2M19AFO3W5629ZS?mode=ems_copy_t ಸಂಘದ ಸದಸ್ಯರಾದ ಆನಂದ್ ಕೆ, ಎಸ್.ಜಯಪ್ರಸಾದ್, ಅಬ್ಬಾಸ್ ಎಂ., ಮಹಮ್ಮದ್ ಎ.ಎಸ್ ಹಾಗೂ ಮಾಲತಿ ಕೆ ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು. ಸಂಘದ ಸದಸ್ಯರಾದ ಆನಂದ್ ಕೆ ಮಾತನಾಡಿ ಯಾವುದೇ ಒಂದು ಸಂಘ ಬೆಳೆಯಬೇಕಾದರೆ ಎರಡು ಅಂಶಗಳು ಮುಖ್ಯವಾಗಿರುತ್ತದೆ. ಒಂದು ಸಂಸ್ಥೆಯನ್ನು ಮುನ್ನಡೆಸುವ ವ್ಯಕ್ತಿಯ ಆತ್ಮಸ್ಥೈರ್ಯ, ಇನ್ನೊಂದು ಅವರಿಗಿರುವ ವ್ಯಕ್ತಿತ್ವ. ಇವೆರಡು ನಮ್ಮ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರಲ್ಲಿ ಕಾಣಸಿಗುತ್ತದೆ. ಮುಖ್ಯವಾಗಿ ಇವರು ಸಂಘದಲ್ಲಿ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡಿದ್ದಾರೆ. ಹೀಗಾಗಿ ಸಂಘವು ನೀಡುತ್ತಿರುವ ಗುಣಮಟ್ಟದ ಸೇವೆಯೇ ಸಂಘವು ಈ ಮಟ್ಟಕ್ಕೆ ಬೆಳೆಯಲು ಕಾರಣ ಎಂದು ಶ್ಲಾಘಿಸಿದರು. ಅಬ್ಬಾಸ್ ಎಂ ಮಾತನಾಡಿ ಮಂಜನಾಡಿ ಗ್ರಾಮ ಪಂಚಾಯತ್ ಕಟ್ಟಡದಲ್ಲಿ ಪ್ರಾರಂಭಿಸಿದ ಈ ಶಾಖೆ ಉತ್ತಮ ರೀತಿಯಲ್ಲಿ…
ವಿಶ್ವಕರ್ಮ ಬ್ಯಾಂಕ್ ಆಶ್ರಯದಲ್ಲಿ ಸ್ವಚ್ಛತಾ ಶ್ರಮದಾನಕ್ಕೆ ಚಾಲನೆ ನೀಡಿ ಲಯನ್ ಸುಧಾಕರ ಆಚಾರ್ಯ ಅಭಿಪ್ರಾಯ ಮಂಗಳೂರು: ವಿಶ್ವಕರ್ಮ ಸಹಕಾರ ಬ್ಯಾಂಕ್ ತನ್ನ ಸುವರ್ಣ ಸಂಭ್ರಮದ ಸಂದರ್ಭದಲ್ಲಿ ನೂರಾರು ಕೋಟಿ ವ್ಯವಹಾರ ಮಾಡುವುದರೊಂದಿಗೆ ಸಮಾಜಕ್ಕಾಗಿ ನಿರಂತರ ಅನೇಕ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಬ್ಯಾಂಕಿಂಗ್ ಸೇವೆಯೊಂದಿಗೆ ಸಾಮಾಜಿಕ ಸೇವೆಯನ್ನು ಮಾಡುತ್ತಿರುವುದು ಅದರಲ್ಲಿಯೂ ಮೆಲ್ಕಾರ್‌ನಂತಹ ಸಾಮಾನ್ಯ ಪರಿಸರದಲ್ಲಿ ನಿರಂತರ ಮುಂದಿನ 10 ತಿಂಗಳ ಕಾಲ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಜನರಿಗೆ ತುಂಬ ಸಂತಸ ಉಂಟುಮಾಡಿದೆ ಎಂದು ಬಜಾರ್ ಬೀಡಿ ಮಾಲೀಕರಾದ ಲಯನ್ ಸುಧಾಕರ್ ಆಚಾರ್ಯ ಹೇಳಿದರು. https://chat.whatsapp.com/JVAtKKe2M19AFO3W5629ZS?mode=ems_copy_t ವಿಶ್ವಕರ್ಮ ಸಹಕಾರ ಬ್ಯಾಂಕಿನ ಸುವರ್ಣ ವರ್ಷಾಚರಣೆ ಪ್ರಯುಕ್ತ ಬ್ಯಾಂಕಿನ ಮೆಲ್ಕಾರ್ ಶಾಖೆಯ ವತಿಯಿಂದ ಭಾನುವಾರ ಪಾಣೆಮಂಗಳೂರು ಪರಿಸರದ ಶ್ರೀ ಸತ್ಯದೇವತೆ ಕಲ್ಲುರ್ಟಿ ದೈವಸ್ಥಾನ ಪರಿಸರದಿಂದ ನರಿಕೊಂಬು ಪರಿಸರದ ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಛ ಪರಿಸರದ ನಿರ್ಮಾಣದ ನಿಟ್ಟಿನಲ್ಲಿ ಸ್ವಚ್ಛತೆಯ ಶ್ರಮದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಯುವ ಸಂಗಮ ಮೆಲ್ಕಾರ್ ಇದರ ಗೌರವಾಧ್ಯಕ್ಷರಾದ ಎಂ.ಎನ್ ಕುಮಾರ್…
ಮಂಗಳೂರು: ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಪ್ರಾಯೋಜಕತ್ವದಲ್ಲಿ ದಾಸಸಾಹಿತ್ಯ ಸೇವಾ ಪ್ರತಿಷ್ಠಾನವು ಶನಿವಾರ ಸಂಜೆ ಮಂಗಳೂರಿನ ರಾಮಕೃಷ್ಣ ಆಶ್ರಮದ ಸಭಾಂಗಣದಲ್ಲಿ ಆಯೋಜಿಸಿದ, ನಾಡಿನ ಹೆಸರಾಂತ ಕಂಚಿನ ಕಂಠದ ಗಾಯಕ ಪಂಡಿತ್ ಅನಂತ ಕುಲಕರ್ಣಿಯವರ ದಾಸವಾಣಿ [ಹರಿದಾಸರ ಕೃತಿ ಕೀರ್ತನೆಗಳ ಗಾಯನ] ಕಾರ್ಯಕ್ರಮ ಅದ್ಬುತವಾಗಿ ಮೂಡಿಬಂದು ಪ್ರೇಕ್ಷಕರ -ಶ್ರೋತೃಗಳ ಮನಸೂರೆಗೊಂಡಿತು. ಪುರಂದರದಾಸರು, ಕನಕದಾಸರು, ವಿಜಯದಾಸರು, ಪ್ರಸನ್ನ ವೆಂಕಟದಾಸರು ಮುಂತಾದ ಹರಿದಾಸರ ಕೃತಿಗಳನ್ನು ಸುಶ್ರಾವ್ಯವಾಗಿ, ಅದ್ಭುತವಾಗಿ ಹಾಡಿ, ಅವುಗಳ ರಚನೆಯ ಹಿನ್ನೆಲೆ ಹಾಗೂ ಅರ್ಥವನ್ನು ನೀಡಿದ್ದು ಕಾರ್ಯಕ್ರಮದ ವಿಶೇಷವಾಗಿತ್ತು. https://chat.whatsapp.com/JVAtKKe2M19AFO3W5629ZS?mode=ems_copy_t ದಾಸಸಾಹಿತ್ಯ ಸೇವಾ ಪ್ರತಿಷ್ಠಾನ ಹಾಗೂ ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಎಂ.ಎಸ್.ಗುರುರಾಜ್ ಅವರು ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿ, ದಾಸಸಾಹಿತ್ಯ ನಮ್ಮೆಲ್ಲರ ಬಹುದೊಡ್ಡ ಆಸ್ತಿ. ಭಕ್ತಿ ಮಾರ್ಗದ ಮೂಲಕ ಮೋಕ್ಷ ಪ್ರಾಪ್ತಿಯ ಜೊತೆಗೆ ಸಮಾಜದ ಅಂಕುಡೊಂಕುಗಳನ್ನು ತಿದ್ದಿ ತೀಡುವ ದಾಸಸಾಹಿತ್ಯದ ತಿರುಳನ್ನು ಮನೆ -ಮನಗಳಿಗೆ ತಲುಪಿಸುವ ಉದ್ದೇಶದಿಂದ ದಾಸಸಾಹಿತ್ಯ ಸೇವಾ ಪ್ರತಿಷ್ಠಾನ ಹಾಗೂ ಇಂತಹ ಕಾರ್ಯಗಳೂ ಒಳಗೊಂಡಂತೆ ಅನೇಕ ಸೇವಾಕಾರ್ಯಗಳನ್ನು…
ಗಂಜಿಮಠ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಾಲತಿ ಎಂ ಶ್ಲಾಘನೆ ಗುರುಪುರ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಗಂಜಿಮಠ ಶಾಖೆಯ ಸ್ಥಳಾಂತರ ಕಾರ್ಯಕ್ರಮವು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಗಂಜಿಮಠ ಗ್ರಾಮ ಪಂಚಾಯತ್ ಕಟ್ಟಡದಲ್ಲಿ 2022ರಿಂದ ಕಾರ್ಯಾಚರಿಸುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಶಾಖೆಯು ಗಂಜಿಮಠ ಮುಖ್ಯ ರಸ್ತೆಯಲ್ಲಿರುವ ವೈಕುಂಠ ಪ್ರಭು ಕಾಂಪ್ಲೆಕ್ಸ್ನನ ಸುಸಜ್ಜಿತವಾದ ಹವಾನಿಯಂತ್ರಿತ ಶಾಖೆಗೆ ಸ್ಥಳಾಂತರಗೊಳಿಸಲಾಯಿತು. ಗಂಜಿಮಠ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಲತಿ ಎಂ ಅವರು ಸ್ಥಳಾಂತರಗೊ0ಡ ಶಾಖೆಯನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಆತ್ಮಶಕ್ತಿ ಸಂಘದ ಶಾಖೆಯು ಕಳೆದ 3 ವರ್ಷದಿಂದ ಗಂಜಿಮಠ ಗ್ರಾಮ ಪಂಚಾಯತ್ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸಂಘವು ಮಹಿಳೆಯರಿಗೆ ಹೆಚ್ಚು ಉದ್ಯೋಗಾವಕಾಶ ಕಲ್ಪಿಸಿಕೊಟ್ಟಿದೆ. ಗಂಜಿಮಠ ಶಾಖೆಯ ಸಿಬ್ಬಂದಿಗಳು ಪ್ರೀತಿ ವಿಶ್ವಾಸದಿಂದ ಕಾರ್ಯನಿರ್ವಹಿಸಿ ಗ್ರಾಹಕರ ಪ್ರೀತಿಗೆ ಪಾತ್ರರಾಗಿದ್ದಾರೆ. ಈ ಬ್ಯಾಂಕಿನಿ0ದ ಜನರಿಗೆ ಇನ್ನಷ್ಟು ಪ್ರಯೋಜನ ದೊರೆಯಲಿ ಎಂದು ಹೇಳಿದರು. ಗಂಜಿಮಠ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸಾರಮ್ಮ ಅವರು…
ಉಜಿರೆ: ಆರ್ಥಿಕ ಸಂಸ್ಥೆಗಳು ವ್ಯಾವಹಾರಿಕ ಬದ್ಧತೆಯ ಜೊತೆಗೆ ಸಾಮಾಜಿಕ ಜವಾಬ್ದಾರಿ ನಿರ್ವಹಿಸಿಕೊಂಡು ಜಾಗೃತಿ ಮೂಡಿಸುವ ಉದ್ದೇಶದಿಂದ ಸ್ವಚ್ಛತೆಯು ಪ್ರತಿಯೊಬ್ಬ ನಾಗರಿಕನ ಮೂಲಭೂತವಾದ ಕರ್ತವ್ಯವಾಗಿರಬೇಕು. ಆದುದರಿಂದ ಸ್ವಚ್ಛ ಪರಿಸರ ನಮ್ಮ ವೈಯಕ್ತಿಕ ಜವಾಬ್ದಾರಿ ಎಂದು ವಿಶ್ವಕರ್ಮ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಸ್. ಆರ್. ಹರೀಶ್ ಆಚಾರ್ಯ ಹೇಳಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಅವರು ವಿಶ್ವಕರ್ಮ ಸಹಕಾರ ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ ‘ಸ್ವಚ್ಛತಾ ಹೀ ಸೇವಾ’ ಎಂಬ ಆಶಯದಂತೆ ಭಾನುವಾರ ನಡೆದ ಸ್ವಚ್ಚ ಭಾರತ ಶ್ರಮದಾನ ಕಾರ್ಯಕ್ರಮದಲ್ಲಿ ಮಾತನಾಡುತಿದ್ದರು. ಸ್ವಚ್ಛ ಪರಿಸರ ರೂಪಿಸುವುದು ವೈಯಕ್ತಿಕ ಜವಾಬ್ದಾರಿಯಿಂದ ಮಾತ್ರವಲ್ಲದೇ ಪ್ರತಿಯೊಬ್ಬ ನಾಗರಿಕನ ಸಾಮೂಹಿಕ ಭಾಗಿದಾರಿಕೆಯೂ ಆಗತ್ಯವಿದೆ. ನಮ್ಮ ಕಸ, ನಮ್ಮ ಪರಿಸರ, ಅದು ನಮ್ಮ ಜವಾಬ್ದಾರಿ ಎಂಬ ಧ್ಯೇಯವಾದಾಗ ಮಾತ್ರ ಸ್ವಚ್ಛ ಭಾರತ ಸಾಧ್ಯ ಎಂಬುದಾಗಿ ಅವರು ಹೇಳಿದರು. ಗೌಡರ ಯಾನೆ ಒಕ್ಕಲಿಗರ ಸಂಘದ ಗೌರವಾಧ್ಯಕ್ಷರಾದ ಗೋಪಾಲ ಕೃಷ್ಣ ಜಿ.ಕೆ ಮಾತನಾಡಿ ವಿಶ್ವಕರ್ಮ ಸಹಕಾರ ಬ್ಯಾಂಕ್ ತನ್ನ ಬ್ಯಾಂಕಿಂಗ್ ಚಟುವಟಿಕೆಗಳ ಜೊತೆಜೊತೆಗೆ ಸ್ವಚ್ಛತೆಯಂತಹ ಪ್ರಮುಖ ಸಾಮಾಜಿಕ…
