Author: admin
ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯಲ್ಲಿ ಸಹಕಾರಿ ಸಪ್ತಾಹದ ಧ್ವಜಾರೋಹಣ ನೆರವೇರಿಸಿ ಗೋಪಿನಾಥ್ ಪಡoಗ ಅಭಿಪ್ರಾಯ ಮೂಲ್ಕಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರವು ಉತ್ತುಂಗಕ್ಕೆ ಏರಲು ಸಹಕಾರಿಗಳು ಇತರೆ ಸಹಕಾರಿ ಸಂಸ್ಥೆಗಳಿಗೆ ನೀಡುತ್ತಿರುವ ಸಹಕಾರವೇ ಕಾರಣ ಎಂದು ಮೂಲ್ಕಿ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ (ಕ್ಷೀರ ಸಾಗರ) ಇದರ ಅಧ್ಯಕ್ಷರಾದ ಗೋಪಿನಾಥ್ ಪಡಂಗ ಹೇಳಿದರು. ಅವರು ಶುಕ್ರವಾರ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯಲ್ಲಿ ಸಹಕಾರಿ ಸಪ್ತಾಹದ ಧ್ವಜಾರೋಹಣದ ನೆರವೇರಿಸಿ ಮಾತನಾಡಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಎಚ್ ವಸಂತ್ ಬೆರ್ನಾಡ್, ಸುಮಾರು 80 ವರ್ಷಗಳ ಇತಿಹಾಸ ಇರುವ ಮೂಲ್ಕಿ ಕ್ಷೀರ ಸಾಗರದ ಅಧ್ಯಕ್ಷತೆಯನ್ನು ವಹಿಸಿದ್ದ ಗೋಪಿನಾಥ್ ಪಡಂಗರವರ ನಾಯಕತ್ವದಲ್ಲಿ ಈ ಸಂಸ್ಥೆ ಇನ್ನಷ್ಟು ಬೆಳೆಯಲಿ, ಸಹಕಾರಿಗಳೆಲ್ಲರೂ ನಿಮ್ಮೊಂದಿಗೆ ಇದ್ದೇವೆಂದು ಹೇಳಿದರು. ಹಿರಿಯ ಸಹಕಾರಿ, ಪಿಸಿಎ ಬ್ಯಾಂಕಿನ ಮಾಜಿ ಅಧ್ಯಕ್ಷರಾದ ಮಾಧವ ತಿಂಗಳಾಯ, ಹಳೆಯಂಗಡಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸ್ಥಾಪಕ…
ಮಡಂತ್ಯಾರಿನಲ್ಲಿ ಜಿಲ್ಲಾಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟಿಸಿ ದ.ಕ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟು ಹೇಳಿಕೆ ಬೆಳ್ತಂಗಡಿ: ಕರಾವಳಿ ಭಾಗದ ಸಹಕಾರಿ ಪಿತಾಮಹ ಎನಿಸಿಕೊಂಡ ಮೊಳಹಳ್ಳಿ ಶಿವರಾಯರಿಂದ ಬೆಳೆದುಬಂದ ಸಹಕಾರ ಕ್ಷೇತ್ರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ರಾದ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ಅನೇಕ ಕೊಡುಗೆಗಳನ್ನು ನೀಡಿದ್ದು ಈ ಕ್ಷೇತ್ರಕ್ಕೆ ಮೆರುಗನ್ನು ನೀಡುತ್ತಿದ್ದಾರೆ. ಒಂದು ಕಾಲದಲ್ಲಿ ಸೂರಿಲ್ಲದೆ ಸಮಸ್ಯೆ ಅನುಭವಿಸುತ್ತಿದ್ದ ಅನೇಕ ಸಹಕಾರಿ ಸಂಘಗಳ ಸಹಿತ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ 170ರಷ್ಟು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಇಂದು ಸುಸಜ್ಜಿತ ವ್ಯವಸ್ಥೆಗಳೊಂದಿಗೆ ಕಾರ್ಯ ನಿರ್ವಹಿಸುವಂತಾಗಲು ಡಾ.ರಾಜೇಂದ್ರ ಕುಮಾರ್ ಅವರ ಕೊಡುಗೆ ಸಾಕಷ್ಟಿದೆ ಎಂದು ದ.ಕ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಅಭಿಪ್ರಾಯಪಟ್ಟರು. https://chat.whatsapp.com/JVAtKKe2M19AFO3W5629ZS?mode=ems_copy_t ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೇತೃತ್ವದಲ್ಲಿ ಶುಕ್ರವಾರ ಜಿಲ್ಲಾಮಟ್ಟದ…
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪ್ರಧಾನ ಕಚೇರಿ ಪಡೀಲಿನ ಆತ್ಮಶಕ್ತಿ ಸೌಧದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಪ್ರಯುಕ್ತ ಶುಕ್ರವಾರ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು. https://chat.whatsapp.com/JVAtKKe2M19AFO3W5629ZS?mode=ems_copy_t ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಬಂಟ್ವಾಳ: ಇಲ್ಲಿನ ಸಮಾಜ ಸೇವಾ ಸಹಕಾರಿ ಸಂಘವು ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ನೀಡಲಾಗುವ ಉತ್ತಮ ಪತ್ತಿನ ಸಹಕಾರಿ ಸಂಘ ಪ್ರಶಸಿಗೆ ಆಯ್ಕೆಯಾಗಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಭಾನುವಾರ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯುವ ೭೨ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಸಮಾಜ ಸೇವಾ ಸಹಕಾರಿ ಸಂಘಕ್ಕೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com
ದ.ಕ. ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿ ನಿ. ಮಂಗಳೂರು, ದ.ಕ. ಹಾಗೂ ಜಿಲ್ಲೆಯ ಎಲ್ಲಾ ಸೌಹಾರ್ದ ಸಹಕಾರಿಗಳ ಸಂಯುಕ್ತ ಆಶ್ರಯದಲ್ಲಿ ಆಯೋಜನೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿ ಮಂಗಳೂರು, ದ.ಕ. ಜಿಲ್ಲೆಯ ಎಲ್ಲಾ ಸೌಹಾರ್ದ ಸಹಕಾರಿಗಳ ಸಂಯುಕ್ತ ಆಶ್ರಯದಲ್ಲಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಸಹಯೋಗದಲ್ಲಿ ನ.17ರಂದು 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಆಚರಣೆಯು “ಆತ್ಮನಿರ್ಭರ ಭಾರತ ಸಾಧನೆಗೆ ವಾಹಕಗಳಾಗಿ ಸಹಕಾರ ಸಂಸ್ಥೆಗಳು” ಎಂಬ ಧ್ಯೇಯವಾಕ್ಯದಡಿ ಮಂಗಳೂರಿನ ಉರ್ವಸ್ಟೋರ್ ಅಂಬೇಡ್ಕರ್ ಭವನದಲ್ಲಿ ಬೆಳಗ್ಗೆ 10ರಿಂದ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯ ಅಧ್ಯಕ್ಷರಾದ ಭಾಸ್ಕರ್ ದೇವಸ್ಯ ಶುಕ್ರವಾರ ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಬೆಳಗ್ಗೆ 10ಕ್ಕೆ ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ಸಹಕಾರ ಧ್ವಜಾರೋಹಣ…
ಮೈಸೂರು: ಮೈಸೂರಿನ ಗಾಂಧಿ ಚೌಕದಲ್ಲಿರುವ ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್‌ನಲ್ಲಿ ಬ್ಯಾಂಕಿನ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರ ಸಮ್ಮುಖದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಹಾಗೂ ಕನಕದಾಸರ ಜಯಂತಿ ಆಚರಿಸಲಾಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಕನ್ನಡ ತಾಯಿ ಭುವನೇಶ್ವರಿ ಹಾಗೂ ಕನಕದಾಸರ ಭಾವಚಿತ್ರಗಳನ್ನು ಇಟ್ಟು ಪುಷ್ಪನಮನ ಸಲ್ಲಿಸುವ ಮೂಲಕ ಬ್ಯಾಂಕ್ ವತಿಯಿಂದ ಸರಳವಾಗಿ ಈ ಎರಡು ಕಾರ್ಯಕ್ರಮಗಳನ್ನು ಆಚರಿಸಲಾಯಿತು. ಅಧ್ಯಕ್ಷರಾದ ಯೋಗೇಶ್ ಮಾತನಾಡಿ, ನಮ್ಮ ಬ್ಯಾಂಕ್‌ನಲ್ಲಿ ಮಹನೀಯರ ಜಯಂತಿಯನ್ನು ಪ್ರತಿವರ್ಷವೂ ಆಚರಿಸುತ್ತ ಬರುತ್ತಿದ್ದು, ಅದರಂತೆ ಈ ಬಾರಿ ಕನ್ನಡ ರಾಜ್ಯೋತ್ಸವ ಹಾಗೂ ಕನಕದಾಸ ಜಯಂತಿ ಈ ಎರಡು ಕಾರ್ಯಕ್ರಮಗಳನ್ನು ಒಟ್ಟುಗೂಡಿಸಿ ನಿರ್ದೇಶಕರು ಪದಾಧಿಕಾರಿಗಳ ಸಮ್ಮುಖದಲ್ಲಿ ಸರಳವಾಗಿ ಆಚರಿಸಿದ್ದೇವೆ ಎಂದು ಹೇಳಿದರು. ನಿರ್ದೇಶಕರಾದ ಎಂ.ರಾಮಕೃಷ್ಣ ಅವರು ನಮ್ಮ ಬ್ಯಾಂಕಿನಲ್ಲಿ ಪ್ರತಿವರ್ಷವೂ ಎಲ್ಲರ ಜಯಂತಿಯನ್ನು ಆಚರಿಸುವುದು ವಾಡಿಕೆ. ಅದರಂತೆ ದಾಸ ಶ್ರೇಷ್ಠ ಕನಕದಾಸರ ಜಯಂತಿ ಹಾಗೂ ಕನ್ನಡ ರಾಜ್ಯೋತ್ಸವ ಆಚರಿಸುತ್ತಿದ್ದೇವೆ ಎಂದು ಹೇಳಿದರು. ನಿರ್ದೇಶಕರಾದ ಎಸ್.ಬಿ.ಎಂ ಮಂಜು ಅವರು ಕುಲಕುಲವೆಂದು ಹೊಡೆದಾಡದಿರಿ ಎಂದು ಆಗಿನ ಕಾಲದಲ್ಲಿ ಜನಸಾಮಾನ್ಯರ…
ಕುಂದಾಪುರ : ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯು ಕೇವಲ ಆರ್ಥಿಕ ಚಟುವಟಿಕೆಗಳಿಗೆ ಸೀಮಿತವಾಗಿರದೆ, ಆ ಪ್ರದೇಶದ ಜನರ ಅಗತ್ಯಗಳಿಗೆ ಸ್ಪಂದಿಸುವ ಸಾಮಾಜಿಕ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಸ್ತುತ್ಯರ್ಹ. ಸೇವೆಗೆ ಹೆಸರುವಾಸಿಯಾದ ಈ ಸಂಸ್ಥೆಯು ಇಂತಹ ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸುತ್ತಿರುವುದರಿಂದ ಸಹಕಾರಿಯ ಹೆಸರು ಜನಮಾನಸದಲ್ಲಿ ಉಳಿಯುವಂತಾಗಿದೆ ಎಂದು ಪ್ರಸಿದ್ದ ವ್ಯಂಗ್ಯಚಿತ್ರಗಾರ, ಚುಟುಕು ಸಾಹಿತಿ ಜಿ.ಭಾಸ್ಕರ ಕಲೈಕಾರ್ ಹೇಳಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಗಂಗೊಳ್ಳಿ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿ. ಗಂಗೊಳ್ಳಿ, ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಗಂಗೊಳ್ಳಿ ಹಾಗೂ ಭಾರತೀಯ ಅಂಚೆ ಇಲಾಖೆ ಉಡುಪಿ ವಿಭಾಗದ ಜಂಟಿ ಆಶ್ರಯದಲ್ಲಿ ಗಂಗೊಳ್ಳಿ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಬೈಲೂರು ಮಂಜುನಾಥ ಶೆಣೈ ಸಭಾಭವನದಲ್ಲಿ ಜರಗಿದ ಆಧಾರ್ ನೊಂದಣಿ ಮತ್ತು ತಿದ್ದುಪಡಿ ಶಿಬಿರ ಹಾಗೂ ಅಂಚೆ ಜನಸಂಪರ್ಕ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗಂಗೊಳ್ಳಿ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಜಿ.ವೆಂಕಟೇಶ ಶೆಣೈ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ,…
ಬಂಟ್ವಾಳ: 2024-25ನೇ ಸಾಲಿನಲ್ಲಿ ಹವಾಮಾನ ವೈಪರೀತ್ಯದಿಂದ ಕರಾವಳಿ ಜಿಲ್ಲೆಗಳಲ್ಲಿನ ಅಡಕೆ ಮತ್ತು ಕರಿಮೆಣಸು ಬೆಳೆಗಳಿಗೆ ಸಂಬಂಧಿಸಿ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿಯಲ್ಲಿ ಬೆಳೆಗಾರರಿಗೆ ಸಿಗಬೇಕಾದ ಹಣಕಾಸಿನ ಮೊತ್ತವನ್ನು ಶೀಘ್ರ ಬಿಡುಗಡೆ ಮಾಡುವಂತೆ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಪ್ರಭಾಕರ ಪ್ರಭು ಒತ್ತಾಯಿಸಿದ್ದಾರೆ. https://chat.whatsapp.com/JVAtKKe2M19AFO3W5629ZS?mode=ems_copy_t ಅಡಕೆ ಬೆಳೆಗಾರರು ತಮ್ಮ ಜಮೀನಿನಲ್ಲಿರುವ ಅಡಕೆ ಮತ್ತು ಕರಿಮೆಣಸು ಬೆಳೆಗಳಿಗೆ ಅನುಗುಣವಾಗಿ ಬೆಳೆ ಸಾಲ ಹೊಂದಿರುವ ರೈತರು ಬೆಳೆವಿಮೆ ಕುರಿತು ಪ್ರೀಮಿಯಂ ಪಾವತಿಸಿದ್ದಾರೆ. ಅದರಂತೆ ಈ ವರ್ಷ ಬೆಳೆ ವಿಮೆ ಪರಿಹಾರ ಮೊತ್ತ ದೊರಕುವ ನಿರೀಕ್ಷೆಯಲ್ಲಿದ್ದು ಈ ಹಣದಿಂದಾಗಿ ತೋಟಗಾರಿಕೆಗೆ ಸಂಬಂಧಿಸಿದ ಕೆಲಸ ಕಾರ್ಯಗಳಿಗೆ ವಿನಿಯೋಗಿಸುವ ನಿಟ್ಟಿನಲ್ಲಿದ್ದಾರೆ. ಪ್ರತಿ ವರ್ಷದಂತೆ ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರ ಮೊತ್ತವು ಆಕ್ಟೋಬರ್ ತಿಂಗಳ ಕೊನೆಯಲ್ಲಿ ಅಥವಾ ನವೆಂಬರ್ ತಿಂಗಳ ಮೊದಲ ವಾರದಲ್ಲಿ ರೈತರ ಬ್ಯಾಂಕ್ ಖಾತೆಗಳಿಗೆ ಜಮೆಯಾಗುತ್ತಿದ್ದು ಈ ವರ್ಷ ನವೆಂಬರ್ ಮೂರನೇ ವಾರ ಕಳೆದರೂ ರೈತರಿಗೆ ಪರಿಹಾರ ಮೊತ್ತ ಬಿಡುಗಡೆಯಾಗಿರುವುದಿಲ್ಲ ಎಂದು…
ಮಂಗಳೂರು: ಸಹಕಾರಿ ಕ್ಷೇತ್ರದ ಪ್ರತಿಷ್ಠಿತ ಸಹಕಾರ ರತ್ನ ಪ್ರಶಸ್ತಿ ಬುಧವಾರ ಪ್ರಕಟವಾಗಿದ್ದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಿಂದ ಹಿರಿಯ ಸಹಕಾರಿ ಭಾಸ್ಕರ ಕೋಟ್ಯಾನ್ ಇರ್ವತ್ತೂರು ಸೇರಿದಂತೆ ಏಳು ಮಂದಿ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಸಹಕಾರಿ, ಬೆಳುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ, ಕಂಬಳದ ಸಂಘಟಕರಾದ ಭಾಸ್ಕರ ಕೋಟ್ಯಾನ್ ಕೊಳಕೆ ಇರ್ವತ್ತೂರು, ಸುಳ್ಯದ ಹಿರಿಯ ಸಹಕಾರಿ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮಾಜಿ ಅಧ್ಯಕ್ಷರಾದ ಪಿ.ಸಿ ಜಯರಾಮ, ಪೆರಾಡಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಸತೀಶ್ ಕೆ. ಪೆರಾಡಿ, ಅಮ್ಮೆಂಬಳ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಟಿ.ಜಿ ರಾಜಾರಾಮ ಭಟ್, ಮಂಗಳೂರು ಟ್ರಾಲ್ ಬೋಟ್ ಮಾಲೀಕರ ಸಂಘದ ಅಧ್ಯಕ್ಷ ಚೇತನ್ ಬೆಂಗ್ರೆ ಇವರುಗಳನ್ನು ರಾಜ್ಯಮಟ್ಟದ ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಉಡುಪಿ ಜಿಲ್ಲೆಯಿಂದ ಕಾರ್ಕಳದ ರಾಜಾಪುರ ಸಾರಸ್ವತ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಕಡಾರಿ ರವೀಂದ್ರ ಪ್ರಭು, ಉಪ್ಪೂರು ವ್ಯವಸಾಯ…
ಒಂದು ವಾರ ವಿಶೇಷ ಕಾರ್ಯಕ್ರಮಗಳ ಆಯೋಜನೆ ಮೂಲ್ಕಿ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ “ವಿಶಿಷ್ಟ ಸಾಧನಾ ಪ್ರಶಸ್ತಿ”ಯನ್ನು ಸತತ ಎರಡು ಬಾರಿ ಪಡೆದಿರುವ ಹಳೆಯಂಗಡಿಯ ಪ್ರಿಯದಶಿನಿ ಕೋ ಆಪರೇಟಿವ್ ಸೊಸೈಟಿ ಆಶ್ರಯದಲ್ಲಿ ಸಹಕಾರ ಸಪ್ತಾಹ 2025ರ ಅಂಗವಾಗಿ ಒಂದು ವಾರದ ಕಾರ್ಯಕ್ರಮ ಆಯೋಜಿಸಲಾಗಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ನ.14ರಂದು ಸೊಸೈಟಿಯ ಹಳೆಯಂಗಡಿಯ ಪ್ರಧಾನ ಕಚೇರಿಯಲ್ಲಿ ಸಹಕಾರ ಸಪ್ತಾಹ ಧ್ವಜಾರೋಹಣವನ್ನು ಮುಲ್ಕಿ ವಿವಿಧೋದ್ದೇಶ ಸಹಕಾರ ಸಂಘ ( ಕ್ಷೀರಸಾಗರ) ಇದರ ಅಧ್ಯಕ್ಷರಾದ ಗೋಪಿನಾಥ ಪಡಂಗ ನೆರವೇರಿಸಲಿರುವರು. ಹಿರಿಯ ಸಹಕಾರಿಗಳಾದ ಹಳೆಯಂಗಡಿ ಪಿ.ಸಿ.ಎ ಬ್ಯಾಂಕ್ ಮಾಜಿ ಅಧ್ಯಕ್ಷರಾದ ಮಾಧವ ತಿಂಗಳಾಯ, ಹಳೆಯಂಗಡಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸ್ಥಾಪಕಾಧ್ಯಕ್ಷರಾದ ಶರ್ಲಿ ಬಂಗೇರ ಮತ್ತು ಈ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಜೈಕೃಷ್ಣ ಕೋಟ್ಯಾನ್ ಅವರನ್ನು ಗೌರವಿಸಲಾಗುವುದು. ನ.15ರಂದು ಹಳೆಯಂಗಡಿ ಇಂದಿರಾನಗರದ ಇಂದಿರಾ ಗಾಂಧಿ ಸಭಾಭವನದಲ್ಲಿ ಸಂಗಮ ಮಹಿಳಾ ಮಂಡಲ ಇಂದಿರಾನಗರ ಸಹಯೋಗದೊಂದಿಗೆ ದುರ್ಗಾ ಸಂಜೀವಿನಿ ಮಣಿಪಾಲ ಆಸ್ಪತ್ರೆ ಕಟೀಲು…
