Author: admin

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ಕಲ್ಲಡ್ಕದಲ್ಲಿ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತದ 24ನೇ ಶಾಖೆ ಉದ್ಘಾಟನೆ ಕಲ್ಲಡ್ಕ: ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 24ನೇ ನೂತನ ಶಾಖೆ ಶುಕ್ರವಾರ ಕಲ್ಲಡ್ಕದ ಲಲಿತ ಎಸ್.ರಾವ್ ವಾಣಿಜ್ಯ ಸಂಕೀರ್ಣದಲ್ಲಿಉದ್ಘಾಟನೆಗೊಂಡಿತು. ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ನೂತನ ಶಾಖೆ ಉದ್ಘಾಟಿಸಿ ಆಶೀರ್ವಚನ ನೀಡಿ, ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಸಂಸ್ಕಾರದ ವಿಕಾಸವಾಗಬೇಕಾಗಿದೆ. ಸಂಸ್ಕಾರವಂತ ಜನರಿಂದ ಸಮಾಜಕ್ಕೆ ಉನ್ನತ ಕೊಡುಗೆ ಸಿಗುತ್ತದೆ. ಪ್ರಜ್ಞಾವಂತ ಪ್ರಜೆಗಳಿಂದ ರಾಷ್ಟ್ರದ ಉನ್ನತಿಯಾಗುತ್ತದೆ. ಉತ್ತಮ ಗ್ರಾಹಕರೇ ಸಹಕಾರಿಯ ಜೀವಾಳ. ಸೌಹಾರ್ದ ಸಹಕಾರಿ ಹಾಗೂ ಗ್ರಾಮವಿಕಾಸ ಪರಿಕಲ್ಪನೆಗಳು ಏಕದೃಷ್ಟಿಯಿಂದ ಮುನ್ನಡೆಯಬೇಕು ಎಂದು ಹೇಳಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಶ್ರೀರಾಮನ ಆದರ್ಶವನ್ನು ನಮ್ಮ ಬದುಕಿನಲ್ಲಿ ಅಳವಡಿಸಬೇಕು. ರಾಷ್ಟ್ರದ ಉನ್ನತಿಯ ಉದ್ದೇಶದಿಂದ ಸಾಗಿದಾಗ ಸುಂದರ ಬದುಕು ಸಿಗುತ್ತದೆ. ರಾಷ್ಟ್ರೋನ್ನತಿಯ ಕಾರ್ಯದಲ್ಲಿ ಯುವಶಕ್ತಿಯ ಜಾಗೃತಿಯಾಗಬೇಕಾಗಿದೆ. ಸಹಕಾರಿ ಸಂಘಗಳ ಶಾಖೆಗಳು ಬೆಳೆಯಲು ಸಿಬ್ಬಂದಿಯ ನಗುಮುಖದ ಸೇವೆಯ ಜೊತೆಗೆ…

Read More

ಮಂಗಳೂರು: ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 24ನೇ ಶಾಖೆಯು ಕಲ್ಲಡ್ಕದಲ್ಲಿ ಅಕ್ಟೋಬರ್ 24ರಂದು ಬೆಳಗ್ಗೆ 11 ಗಂಟೆಗೆ ಉದ್ಘಾಟನೆಗೊಳ್ಳಲಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಕಲ್ಲಡ್ಕದ ಲಲಿತ ಎಸ್. ರಾವ್ ವಾಣಿಜ್ಯ ಸಂಕೀರ್ಣದಲ್ಲಿ ಉದ್ಘಾಟನೆ ನಡೆಯಲಿದ್ದು ಸಭಾ ಕಾರ್ಯಕ್ರಮವು ಶ್ರೀ ರಾಮ ಭಜನಾ ಮಂದಿರದ ಮಾಧವ ಸಭಾಭವನದಲ್ಲಿ ನಡೆಯಲಿದೆ. ಒಡಿಯೂರು ಮಹಾಸಂಸ್ಥಾನದ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಶಾಖೆ ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ. ಸಾಧ್ವಿ ಶ್ರೀ ಮಾತಾನಂದಮಯೀ ದಿವ್ಯ ಉಪಸ್ಥಿತಿ ಇರಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ರುಕ್ಮಯ ಪೂಜಾರಿ, ಬಂಟ್ವಾಳ ತಾಲೂಕು ಬಂಟವಾಳದ ಬಂಟರ ಸಂಘದ ಅಧ್ಯಕ್ಷರಾದ ಜಗನ್ನಾಥ ಚೌಟ ಬದಿಗುಡ್ಡೆ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕಿ ಭಾರತಿ ಜಿ.ಭಟ್, ಗೇರುಕಟ್ಟೆ ಕಲ್ಲಡ್ಕದ ಉಮಾಶಿವ ಕ್ಷೇತ್ರದ ಅಧ್ಯಕ್ಷ ಈಶ್ವರ್ ಭಟ್, ದ.ಕ ಜಿಲ್ಲಾ ಸೌಹಾರ್ದ ಅಭಿವೃದ್ಧಿ ಅಧಿಕಾರಿ ನಂದನ್ ಬಿ.ಎನ್., ಗೋಳ್ತಮಜಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರೇಮ, ಕಲ್ಲಡ್ಕ ಲಲಿತಾ ರಾವ್ ವಾಣಿಜ್ಯ ಸಂಕೀರ್ಣದ ಮಾಲೀಕರಾದ…

Read More

ಮಂಗಳೂರು: ಗಂಜಿಮಠ ಗ್ರಾಮ ಪಂಚಾಯತ್ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಶಾಖೆಯು ಗಂಜಿಮಠ ಮುಖ್ಯ ರಸ್ತೆಯಲ್ಲಿರುವ ವೈಕುಂಠ ಪ್ರಭು ಕಾಂಪ್ಲೆಕ್ಸ್ ನ ಸುಸಜ್ಜಿತ ಹವಾನಿಯಂತ್ರಿತ ಶಾಖೆಗೆ ಸ್ಥಳಾಂತರಗೊಳ್ಳಲಿದೆ. ಅಕ್ಟೋಬರ್ 24ರಂದು ಶುಕ್ರವಾರ ಬೆಳಗ್ಗೆ 11.30ಕ್ಕೆ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರಗಲಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಸಹಕಾರ ತತ್ವದ ಮೂಲಕ ಸಾರ್ವಜನಿಕ ಸೇವೆಯ ಸದುದ್ದೇಶದ ಧ್ಯೇಯದೊಂದಿಗೆ ಮಂಗಳೂರು ತಾಲೂಕಿನ ಬೆಂದೂರ್‌ವೆಲ್‌ನಲ್ಲಿ 30.01.2012ರಲ್ಲಿ ಕೇಂದ್ರದ ಮಾಜಿ ವಿತ್ತ ಸಚಿವರಾದ ಬಿ.ಜನಾರ್ದನ ಪೂಜಾರಿಯವರಿಂದ ಉದ್ಘಾಟನೆಗೊಂಡು, ದಶಮಾನೋತ್ಸವ ಸಂದರ್ಭದಲ್ಲಿ ಸ್ವಂತ ಆಡಳಿತ ಹಾಗೂ ಪ್ರಧಾನ ಕಚೇರಿಯನ್ನು ಪಡೀಲ್‌ನಲ್ಲಿ ಹೊಂದಿ, ಕಾರ್ಯನಿರ್ವಹಿಸುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಉನ್ನತ ಸಾಧನೆಯ ಹಾದಿಯಲ್ಲಿದೆ. ಅಲ್ಪಾವಧಿಯಲ್ಲಿಯೇ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 33 ಶಾಖೆಗಳನ್ನು ಹೊಂದಿ ನುರಿತ ಸಿಬ್ಬಂದಿ ವರ್ಗದ ಅತ್ಯುತ್ತಮ ಗುಣಮಟ್ಟದ ಸೇವೆಗಾಗಿ ಈಗಾಗಲೇ ರಾಜ್ಯ ಹಾಗೂ ರಾಷ್ಟ್ರಮಟ್ಟದ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಆತ್ಮಶಕ್ತಿ ಸಹಕಾರಿ ಸಂಘವು ಮಹಿಳಾ ಸಬಲೀಕರಣದೊಂದಿಗೆ ಶೇ.95…

Read More

ಮಂಗಳೂರು: ಗಂಜಿಮಠ ಗ್ರಾಮ ಪಂಚಾಯತ್ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಶಾಖೆಯು ಗಂಜಿಮಠ ಮುಖ್ಯ ರಸ್ತೆಯಲ್ಲಿರುವ ವೈಕುಂಠ ಪ್ರಭು ಕಾಂಪ್ಲೆಕ್ಸ್ ನ ಸುಸಜ್ಜಿತ ಹವಾನಿಯಂತ್ರಿತ ಶಾಖೆಗೆ ಸ್ಥಳಾಂತರಗೊಳ್ಳಲಿದೆ. ಅಕ್ಟೋಬರ್ 24ರಂದು ಶುಕ್ರವಾರ ಬೆಳಗ್ಗೆ 11.30ಕ್ಕೆ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರಗಲಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಸಹಕಾರ ತತ್ವದ ಮೂಲಕ ಸಾರ್ವಜನಿಕ ಸೇವೆಯ ಸದುದ್ದೇಶದ ಧ್ಯೇಯದೊಂದಿಗೆ ಮಂಗಳೂರು ತಾಲೂಕಿನ ಬೆಂದೂರ್‌ವೆಲ್‌ನಲ್ಲಿ 30.01.2012ರಲ್ಲಿ ಕೇಂದ್ರದ ಮಾಜಿ ವಿತ್ತ ಸಚಿವರಾದ ಬಿ.ಜನಾರ್ದನ ಪೂಜಾರಿಯವರಿಂದ ಉದ್ಘಾಟನೆಗೊಂಡು, ದಶಮಾನೋತ್ಸವ ಸಂದರ್ಭದಲ್ಲಿ ಸ್ವಂತ ಆಡಳಿತ ಹಾಗೂ ಪ್ರಧಾನ ಕಚೇರಿಯನ್ನು ಪಡೀಲ್‌ನಲ್ಲಿ ಹೊಂದಿ, ಕಾರ್ಯನಿರ್ವಹಿಸುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಉನ್ನತ ಸಾಧನೆಯ ಹಾದಿಯಲ್ಲಿದೆ. ಅಲ್ಪಾವಧಿಯಲ್ಲಿಯೇ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 33 ಶಾಖೆಗಳನ್ನು ಹೊಂದಿ ನುರಿತ ಸಿಬ್ಬಂದಿ ವರ್ಗದ ಅತ್ಯುತ್ತಮ ಗುಣಮಟ್ಟದ ಸೇವೆಗಾಗಿ ಈಗಾಗಲೇ ರಾಜ್ಯ ಹಾಗೂ ರಾಷ್ಟ್ರಮಟ್ಟದ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಆತ್ಮಶಕ್ತಿ ಸಹಕಾರಿ ಸಂಘವು ಮಹಿಳಾ ಸಬಲೀಕರಣದೊಂದಿಗೆ ಶೇ.95…

Read More

ಮಂಗಳೂರು: ರಾಜ್ಯೋತ್ಸವ, ರಾಜ್ಯ ಪ್ರಶಸ್ತಿ ಹಾಗೂ ರಾಷ್ಟ್ರೀಯ ಪುರಸ್ಕಾರ ಪಡೆದಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಗಂಜಿಮಠ ಶಾಖೆಯ ಸ್ಥಳಾಂತರ ಕಾರ್ಯಕ್ರಮ ಅಕ್ಟೋಬರ್ 24ರಂದು ಶುಕ್ರವಾರ ಬೆಳಗ್ಗೆ 11.30ಕ್ಕೆ ನಡೆಯಲಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಗಂಜಿಮಠ ಮುಖ್ಯ ರಸ್ತೆಯ ವೈಕುಂಠ ಪ್ರಭು ಕಾಂಪ್ಲೆಕ್ಸ್ ನಲ್ಲಿ ಕಾರ್ಯಕ್ರಮ ನಡೆಯಲಿದೆ. ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಬ್ಯಾಂಕಿನ ಉಪಾಧ್ಯಕ್ಷರಾದ ನೇಮಿರಾಜ್ ಪಿ., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಆಡಳಿತ ಮಂಡಳಿ ನಿರ್ದೇಶಕರಾದ ಜಿ.ಪರಮೇಶ್ವರ ಪೂಜಾರಿ, ಆನಂದ ಎಸ್. ಕೊಂಡಾಣ, ಸೀತಾರಾಮ್ ಎನ್., ರಮಾನಾಥ್ ಸನಿಲ್, ಮುದ್ದು ಮೂಡುಬೆಳ್ಳೆ, ದಿವಾಕರ್ ಬಿ. ಪಿ., ಗೋಪಾಲ್ ಎಂ, ಚಂದ್ರಾವತಿ, ಉಮಾವತಿ, ಸಲಹಾ ಸಮಿತಿ ಸದಸ್ಯರು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com

Read More

ದೀಪಾವಳಿ ಆಚರಣೆಯಲ್ಲಿ ಎಂಸಿಸಿ ಬ್ಯಾಂಕ್‌ ಅಧ್ಯಕ್ಷ ಅನಿಲ್‌ ಲೋಬೋ ಅಭಿಪ್ರಾಯ ಮಂಗಳೂರು: ಎಂಸಿಸಿ ಬ್ಯಾಂಕಿನ ಆಡಳಿತ ಕಚೇರಿಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಅನಿಲ್‌ ಲೋಬೋ ಅಧ್ಯಕ್ಷತೆಯಲ್ಲಿ ಮಂಗಳವಾರ ಸಂಭ್ರಮದಿಂದ ದೀಪಾವಳಿ ಹಬ್ಬ ಆಚರಿಸಲಾಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಮುಖ್ಯ ಅತಿಥಿಗಳಾದ ಮಂಗಳೂರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಪ್ರತಾಪ್ ಸಿಂಗ್ ಥೋರಟ್ ಮತ್ತು ಮಂಗಳೂರು ನಗರ ಸಂಚಾರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ನಜ್ಮಾ ಫಾರೂಕ್ ಭಾಗವಹಿಸಿದ್ದರು. ನಜ್ಮಾ ಫಾರೂಕ್ ಮತ್ತು ಅನಿಲ್ ಲೋಬೊ ಅವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೋ ಅಧ್ಯಕ್ಷೀಯ ಸಂದೇಶ ನೀಡಿ, ದೀಪಾವಳಿ ಕೇವಲ ಬೆಳಕಿನ ಹಬ್ಬವಲ್ಲ, ಏಕತೆ, ಕೃತಜ್ಞತೆ ಮತ್ತು ನವೀಕರಣದ ಆಚರಣೆಯಾಗಿದೆ. ಎಂಸಿಸಿ ಬ್ಯಾಂಕ್, ಸಮುದಾಯ ಬ್ಯಾಂಕ್ ಎಂದು ಗುರುತಿಸಲ್ಪಟ್ಟಿದ್ದರೂ, ಎಲ್ಲಾ ಸಮುದಾಯಗಳ ಜನರಿಗೆ ಸೇವೆ ಒದಗಿಸುತ್ತಿದೆ. ಎಂಸಿಸಿ ಬ್ಯಾಂಕ್ ಮಂಗಳೂರು ಶಾಖೆಯಲ್ಲಿ ಮಾತ್ರವಲ್ಲದೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿರುವ ಎಲ್ಲಾ 21…

Read More

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸ್ಟೇಟ್‌ಬ್ಯಾಂಕ್ ಶಾಖೆಯ ದಶಮಾನೋತ್ಸವ ಪ್ರಯುಕ್ತ ಗ್ರಾಹಕರ ಸಭೆ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಸ್ಟೇಟ್‌ಬ್ಯಾಂಕ್ ಶಾಖೆಯಲ್ಲಿ ಜರುಗಿತು. https://chat.whatsapp.com/JVAtKKe2M19AFO3W5629ZS?mode=ems_copy_t ಸಂಘದ ಸದಸ್ಯರಾದ ರೊನಾಲ್ಡ್ ಜೋಸೆಫ್ ಸಲ್ದಾನ್ಹ, ರಂಜಿತ್ ಎಂ. ಹಾಗೂ ಜವಹಾರ್ ಲಾಲ್ ವಿಠಲ್‌ಜೀ ದೀಪ ಪ್ರಜ್ವಲನೆ ಮಾಡಿ ಸಭೆಯನ್ನು ಉದ್ಘಾಟಿಸಿದರು. ರೊನಾಲ್ಡ್ ಜೋಸೆಫ್ ಸಲ್ದಾನ್ಹ ಮಾತನಾಡಿ ಆತ್ಮಶಕ್ತಿ ಸಹಕಾರಿ ಸಂಘವು ಒಂದು ನಾಣ್ಯದ ಎರಡು ಮುಖ ಇದ್ದ ಹಾಗೆ. ಒಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ, ಇನ್ನೊಂದು ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್. ಸಂಘವು ನೀಡುತ್ತಿರುವ ಗ್ರಾಹಕ ಸ್ನೇಹಿ ಸೇವೆಯೇ ಸಂಘವು ಇವತ್ತು ಈ ಮಟ್ಟಕ್ಕೆ ಬೆಳೆಯಲು ಮುಖ್ಯ ಕಾರಣ ಎಂದು ಹೇಳಿದರು. ಸಂಘದ ಸದಸ್ಯ ಕೃಷ್ಣಪ್ಪ ಪೂಜಾರಿ ಎಂ ಮಾತನಾಡಿ ಆತ್ಮಶಕ್ತಿ ಸಹಕಾರ ಸಂಘವು ನೀಡುತ್ತಿರುವ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿ ಮುಂದಿನ ದಿನಗಳಲ್ಲಿ ಬೋಳಾರದಲ್ಲಿ ನೂತನ ಶಾಖೆ ತೆರೆಯುವಂತೆ ವಿನಂತಿಸಿದರು. ಸದಸ್ಯ ರಂಜಿತ್ ಮಾತನಾಡಿ ಆತ್ಮಶಕ್ತಿ…

Read More

ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ ಪುತ್ತೂರು ಇದರ 18ನೇ ನೂತನ ಶಾಖೆ ಅಕ್ಟೋಬರ್ 22ರಂದು ಕಡಬದ ಸಂತೆಕಟ್ಟೆ ಮುಖ್ಯರಸ್ತೆಯ ಚಾಚಾ ಕಾಂಪ್ಲೆಕ್ಸ್‌ನಲ್ಲಿ ಬೆಳಗ್ಗೆ 10.30ಕ್ಕೆ ನಡೆಯಲಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಮುಂಬೈ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕರಾದ ಡಾ.ತಾಳ್ತಜೆ ವಸಂತ ಕುಮಾರ್‌ ಶಾಖೆಯನ್ನು ಉದ್ಘಾಟಿಸಲಿದ್ದಾರೆ. ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಅಧ್ಯಕ್ಷರಾದ ಭಾಸ್ಕರ ಎಂ.ಪೆರುವಾಯಿ ಅಧ್ಯಕ್ಷತೆ ವಹಿಸಲಿದ್ದಾರೆ. ಕಡಬ ಪಟ್ಟಣ ಪಂಚಾಯತ್‌ ಸದಸ್ಯರಾದ ಗುಣವತಿ ರಘುರಾಮ ಭದ್ರತಾ ಕೊಠಡಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಡಬ ಪಟ್ಟಣ ಪಂಚಾಯತ್‌ ಅಧ್ಯಕ್ಷರಾದ ತಮನ್ನ ಜಬೀನ್‌, ಕಡಬ ಪಟ್ಟಣ ಪಂಚಾಯತ್‌ ಸದಸ್ಯ ಕೆ.ಎಂ ಹನೀಫ್‌, ಕಟ್ಟಡದ ಮಾಲೀಕರೂ,ಕಡಬ ಪಟ್ಟಣ ಪಂಚಾಯತ್‌ ಸದಸ್ಯರೂ ಆದ ಸೈಮಾನ್‌, ಕಡಬದ ರತ್ನಶ್ರೀ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ರಾಧಾಕೃಷ್ಣ ಕೆ.ಎಸ್‌, ಪುತ್ತೂರು ತಾಲೂಕು ಪಂಚಾಯತ್‌ ಮಾಜಿ ಅಧ್ಯಕ್ಷರಾದ ಪುಲಸ್ತ್ಯಾ ರೈ, ದ.ಕ. ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯ ಪಿ.ಪಿ ವರ್ಗೀಸ್‌, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ವೆಂಕಟರಮಣ…

Read More

ಸ್ವಚ್ಛತಾ ಕಾರ್ಯಕ್ರಮದಲ್ಲಿ ವಿಶ್ವಕರ್ಮ ಸಹಕಾರ ಬ್ಯಾಂಕ್ ಅಧ್ಯಕ್ಷ ಡಾ. ಎಸ್ ಆರ್ ಹರೀಶ್ ಆಚಾರ್ಯ ಅಭಿಪ್ರಾಯ ಕಾರ್ಕಳ: ಯಾವುದೇ ಆರ್ಥಿಕ ಸಂಸ್ಥೆಗೆ ವ್ಯಾವಹಾರಿಕ ಬದ್ಧತೆಯ ಜೊತೆಗೆ ಸಾಮಾಜಿಕ ಜವಾಬ್ದಾರಿ ಕೂಡ ಇರುತ್ತದೆ. ಈ ಸಾಮಾಜಿಕ ಜವಾಬ್ದಾರಿಯನ್ನು ನಿರ್ವಹಿಸಿಕೊಂಡು ಸಮಾಜದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಸ್ವಚ್ಛ ಭಾರತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವಕರ್ಮ ಸಹಕಾರ ಬ್ಯಾಂಕ್ ಅಧ್ಯಕ್ಷರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ ಹೇಳಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಅವರು ವಿಶ್ವಕರ್ಮ ಬ್ಯಾಂಕಿನ ಕಾರ್ಕಳ ಶಾಖೆಯ ವತಿಯಿಂದ ಭಾನುವಾರ “ಸ್ವಚ್ಛತಾ ಹೀ ಸೇವಾ” ಎಂಬ ಆಶಯದಂತೆ ನಡೆದ ಸ್ವಚ್ಛ ಭಾರತ ಶ್ರಮದಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿಶ್ವಕರ್ಮ ಸಹಕಾರ ಬ್ಯಾಂಕ್ ಇದರ ಸ್ವರ್ಣ ಮಹೋತ್ಸವ ಪ್ರಯುಕ್ತ ಸ್ವಚ್ಛ ಪರಿಸರ ರೂಪಿಸಲು ಪ್ರತಿಯೊಬ್ಬರೂ ಭಾಗಿದಾರಿಕೆ ವಹಿಸುವ ಅಗತ್ಯವಿದೆ. ಆದುದರಿಂದ ಸ್ವಚ್ಛತೆಯ ಮೂಲಭೂತ ಕರ್ತವ್ಯಗಳಲ್ಲಿ ನಾವೆಲ್ಲರೂ ಒಂದಾಗಬೇಕಾಗಿದೆ. ನಮ್ಮ ಕಸ, ನಮ್ಮ ಜವಾಬ್ದಾರಿ ಎಂಬ ಮೂಲಮಂತ್ರವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು. ಕಾರ್ಕಳ ಪುರಸಭೆಯ ಮಾಜಿ ಅಧ್ಯಕ್ಷ…

Read More

ಮಂಗಳೂರು: ಮಂಗಳೂರು ಸೌಹಾರ್ದ ಸಹಕಾರಿ ಸಂಘ ನಿ ಇದರ 2025-29ನೇ ಸಾಲಿನ ಅಧ್ಯಕ್ಷರಾಗಿ ಕೆ.ಭಾಸ್ಕರ ರಾವ್ ಹಾಗೂ ಉಪಾಧ್ಯಕ್ಷರಾಗಿ ಎ.ಕೃಷ್ಣ ಭಟ್‌ ಇವರು ಸತತ ಮೂರನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. https://chat.whatsapp.com/JVAtKKe2M19AFO3W5629ZS?mode=ems_copy_t ಸಂಘದ ನಿರ್ದೇಶಕರಾಗಿ ಜಯಪ್ರಕಾಶ್, ಸುಪ್ರೀತ್ ಜೆ.ಕೆ., ಸದಾಶಿವ ಅಮೀನ್, ಸುಂದರ ಸಾಲ್ಯಾನ್, ಪೂರ್ಣಿಮ ಬಿ ರಾವ್, ವಿಜೇತಾ ಎಸ್ ರಾವ್, ಲತಾ ಎನ್ ಆಳ್ವ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಪ್ರಕ್ರಿಯೆಯನ್ನು ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆಯ ಚುನಾವಣಾ ರಿಟರ್ನಿಂಗ್ ಅಧಿಕಾರಿ ನವೀನ್ ಕುಮಾರ್ ಎಂ.ಎಸ್ ನಡೆಸಿಕೊಟ್ಟರು. ಈ ಸಂದರ್ಭ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com

Read More