Author: admin

ವಿಶ್ವಕರ್ಮ ಸಹಕಾರ ಬ್ಯಾಂಕ್‌ನಲ್ಲಿ ನಮ್ಮ ಬ್ಯಾಂಕ್‌ ದಿನಾಚರಣೆಯಲ್ಲಿ ವಿದ್ವಾನ್ ಎನ್.ದಾಮೋದರ ಶರ್ಮ ವಿಶ್ಲೇಷಣೆ ಮಂಗಳೂರು: ಪ್ರತಿಯೊಬ್ಬ ವ್ಯಕ್ತಿಯಲ್ಲಿ ಅವಗುಣಗಳು ಹೇಗೆ ಇರುತ್ತವೆಯೋ ಅದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಧನಾತ್ಮಕ ಸಂಗತಿಗಳಿಂದ ಕೂಡಿದ ಉತ್ತಮ ಗುಣಗಳು ಕೂಡ ಇರುತ್ತವೆ. ನಾವು ಅವಗುಣಗಳ ಬಗ್ಗೆ ಮಾತನಾಡದೇ ಅವರ ಒಳ್ಳೆಯ ಗುಣಗಳನ್ನು ಗುರುತಿಸಿ ಅನುಸರಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಇದರಿಂದ ನಾವು ಕೆಲಸ ನಿರ್ವಹಿಸುವ ಪರಿಸರವನ್ನು ಆರೋಗ್ಯಪೂರ್ಣವಾಗಿಸಲು ಸಾಧ್ಯ. ಆದುದರಿಂದ ಧನಾತ್ಮಕ ಚಿಂತನೆಯನ್ನು ಎಲ್ಲರೂ ಬೆಳೆಸಿಕೊಳ್ಳಬೇಕು ಎಂದು ವಾಗ್ಮಿ ಎನ್.ದಾಮೋದರ ಶರ್ಮ ಅಭಿಪ್ರಾಯಪಟ್ಟರು. https://chat.whatsapp.com/JVAtKKe2M19AFO3W5629ZS?mode=ems_copy_t ವಿಶ್ವಕರ್ಮ ಸಹಕಾರ ಬ್ಯಾಂಕಿನಲ್ಲಿ ಭಾನುವಾರ ನಮ್ಮ ಬ್ಯಾಂಕ್ ದಿನಾಚರಣೆ ಕಾರ್ಯಕ್ರಮದಲ್ಲಿ ಬ್ಯಾಂಕಿನ ಸಿಬ್ಬಂದಿಗಳನ್ನು ಉದ್ದೇಶಿಸಿ ಮಾತನಾಡಿದರು. ಯಾವುದೇ ಸಂಸ್ಥೆಯ ಬೆಳವಣಿಗೆಯಲ್ಲಿ ಸಿಬ್ಬಂದಿಗಳ ಪಾತ್ರ ಅತ್ಯಂತ ಗುರುತರವಾದುದು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನಿರಂತರ ಕಲಿಕೆ ಮತ್ತು ಅಧ್ಯಯನದ ಮೂಲಕ ನಮ್ಮ ಸಾಮರ್ಥ್ಯವನ್ನು ಸಕಾಲಿಕವಾಗಿ ಬೆಳೆಸಿಕೊಳ್ಳುವುದು ಹಾಗೂ ಅದನ್ನು ಪ್ರಸ್ತುತತೆಗೆ ಅನುಗುಣವಾಗಿ ಬಳಸಿಕೊಳ್ಳುವ ಕಾರ್ಯ ಮಾಡಬೇಕು. ಆಗ ಸಾಂಸ್ಥಿಕ ಬೆಳವಣಿಗೆ ಹೇಗೆ ಸಾಧ್ಯವಾಗತ್ತದೋ ಹಾಗೆಯೇ ಸಿಬ್ಬಂದಿಗಳ…

Read More

ಗ್ರಾಹಕರ ಸಮಾವೇಶದಲ್ಲಿ ಎಸ್‌.ಕೆ ಗೋಲ್ಡ್‌ಸ್ಮಿತ್ಸ್‌ ಸೊಸೈಟಿಯ ಅಧ್ಯಕ್ಷ ಉಪೇಂದ್ರ ಆಚಾರ್ಯ ಅಭಿಪ್ರಾಯ ಪುತ್ತೂರು: ಎಸ್.ಕೆ. ಗೋಲ್ಡ್‌ಸ್ಮಿತ್ಸ್ ಇಂಡಸ್ಟ್ರಿಯಲ್  ಕೋ-ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಪ್ರಯುಕ್ತ ಪುತ್ತೂರು ಶಾಖೆಯ ಸದಸ್ಯ ಗ್ರಾಹಕರ ಸಮಾವೇಶ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಜರಗಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಸೊಸೈಟಿ ಅಧ್ಯಕ್ಷ ಉಪೇಂದ್ರ ಆಚಾರ್ಯರು, ಸದಸ್ಯ ಗ್ರಾಹಕರಿಗೆ ಎರಡು ಲಕ್ಷ ರೂ.ನ ವಿಮೆ ಮಾಡಿಸಲಾಗಿದೆ. ಗ್ರಾಹಕರು ಹಾಗೂ ಬ್ಯಾಂಕಿನ ಬಾಂಧವ್ಯ ಹೀಗೆಯೇ ಮುಂದುವರಿಯಲಿ. ಸಂಸ್ಥೆಯ ಬೆಳವಣಿಗೆಗೆ ಗ್ರಾಹಕರು ಕಾರಣರಾಗಿದ್ದೀರಿ ಎಂದು ಹೇಳಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಮುಖ್ಯ ಅತಿಥಿಯಾಗಿದ್ದ ಚಿದಾನಂದ ಬೈಲಾಡಿ ಮಾತನಾಡಿ, ಸಹಕಾರ ಬ್ಯಾಂಕ್‌ಗಳು ಕರಾವಳಿಯ ಗ್ರಾಹಕರ ಜೀವನಾಡಿಯಾಗಿ ಕೆಲಸ ನಿರ್ವಹಿಸುತ್ತಿವೆ. ಈ ಸಂಬಂಧವನ್ನು ಕೃಷ್ಣ -ಕುಚೇಲರಿಗೆ ಹೋಲಿಸಬಹುದು. ಕೃಷ್ಣ ಹಾಗೂ ಕುಚೇಲರ ನಡುವೆ ಇದ್ದ ಸಮಾನತೆಯನ್ನು ಇಲ್ಲಿ ನಾವು ಕಾಣಬಹುದು. ಎಸ್.ಕೆ. ಗೋಲ್ಡ್‌ಸ್ಮಿತ್ಸ್‌ ಸೊಸೈಟಿಯು ಗ್ರಾಹಕರನ್ನು ದೇವರ ಹಾಗೆ ಕಾಣುತ್ತಿರುವುದರಿಂದ ಹೆಚ್ಚಿನ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಇದರ ಪರಿಣಾಮ ಸೊಸೈಟಿ 5 ಬಾರಿ ಸಾಧನಾ ಪ್ರಶಸ್ತಿ ಹಾಗೂ ರಾಜ್ಯ ಪ್ರಶಸ್ತಿಯನ್ನು…

Read More

ಸಿಬ್ಬಂದಿ, ನೌಕರರ ನೇಮಕಾತಿ, ವರ್ಗಾವಣೆಗೆ ಸಂಬಂಧಿಸಿದ ಕಾಯ್ದೆ ತಿದ್ದುಪಡಿ ಕಾನೂನುಬಾಹಿರ ಎಂದಿದ್ದ ಕೋರ್ಟ್‌, ಹೈಕೋರ್ಟ್‌ಗೆ ಮೇಲ್ಮನವಿ ಬೆಂಗಳೂರು: ಸಹಕಾರ ಸಂಘಗಳಲ್ಲಿ ಸಿಬ್ಬಂದಿ-ನೌಕರರ ನೌಕರರ ನೇಮಕಾತಿ, ವರ್ಗಾವಣೆ, ಶಿಸ್ತುಕ್ರಮದ ಅಧಿಕಾರ ಈ ವಿಷಯಗಳಲ್ಲಿ ರಾಜ್ಯ ಸರ್ಕಾರವು ಸಹಕಾರ ಸಂಘಗಳ ವಿರುದ್ಧ ಎರಡನೇ ಹಂತದ ಕಾನೂನು ಹೋರಾಟಕ್ಕೆ ಸಿದ್ಧತೆ ನಡೆಸಿದೆ. ಈ ವಿಷಯದಲ್ಲಿ ಮೊದಲ ಹಂತದ ಕಾನೂನು ಹೋರಾಟದಲ್ಲಿ ಹಿನ್ನಡೆ ಅನುಭವಿಸಿದ್ದ ರಾಜ್ಯ ಸರಕಾರ ಇದೀಗ ಸಹಕಾರ ಸಂಘಗಳ ವಿರುದ್ಧ ಎರಡನೇ ಹಂತದ ಕಾನೂನು ಹೋರಾಟಕ್ಕೆ ಮುಂದಾಗಿದ್ದು ಅದಕ್ಕಾಗಿ ಹೈಕೋರ್ಟ್ ಮೆಟ್ಟಿಲೇರಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಸಹಕಾರ ಸಂಘಗಳಲ್ಲಿ ಸಿಬ್ಬಂದಿ-ನೌಕರರ ನೇಮಕಾತಿಗೆ ಸಂಬಂಧಿಸಿದ ವೃಂದ ರಚನೆ, ನೇಮಕಾತಿ ಮಾಡಿಕೊಳ್ಳುವುದು, ನೌಕರರ ವರ್ಗಾವಣೆ, ಅವರ ವಿರುದ್ಧ ಆರೋಪಗಳು ಕೇಳಿ ಬಂದಾಗ ಶಿಸ್ತುಕ್ರಮ ಕೈಗೊಳ್ಳುವ ಅಧಿಕಾರವನ್ನು ಸರಕಾರ ಮೊಟಕುಗೊಳಿಸಿತ್ತು ಇದರ ವಿರುದ್ಧ ಸಹಕಾರ ಸಂಘಗಳು ನ್ಯಾಯಾಲಯದ ಮೊರೆ ಹೋಗಿದ್ದವು. ಸರಕಾರದ ಕ್ರಮ ಕಾನೂನುಬಾಹಿರವೆಂದು ಸಾರಿದ್ದ ನ್ಯಾಯಾಲಯ ಸಹಕಾರ ಸಂಘಗಳ ಪರವಾಗಿ ಕಳೆದ ವರ್ಷ ತೀರ್ಪು ನೀಡಿತ್ತು. ಆ ತೀರ್ಪು ರದ್ದುಪಡಿಸುವಂತೆ…

Read More

ಸರ್ಕಾರಗಳಿಂದ ನೆರವು ಪಡೆಯುವ ಸಹಕಾರಿ ಸಂಘಗಳ ನೌಕರರೂ ಲೋಕಾಯುಕ್ತ ವ್ಯಾಪ್ತಿಗೆ : ಹೈಕೋರ್ಟ್ ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹಣಕಾಸು ನೆರವು ಪಡೆದುಕೊಳ್ಳುವ ಸಹಕಾರ ಸಂಘಗಳ ಸಿಬ್ಬಂದಿಗಳೂ ಸಹ ಭ್ರಷ್ಟಾಚಾರ ನಿಯಂತ್ರಣಾ ಕಾಯ್ದೆಯ ವ್ಯಾಪ್ತಿಗೆ ಬರಲಿದ್ದಾರೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿಯೊಬ್ಬರ ವಿರುದ್ಧ ದಾಖಲಾಗಿರುವ ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿರುವ ಪ್ರಕರಣದ ಕುರಿತು ತನಿಖೆ ನಡೆಸಲು ಲೋಕಾಯುಕ್ತ ಪೊಲೀಸರಿಗೆ ಅನುಮತಿ ನೀಡುವಂತೆಯೂ ಹೈಕೋರ್ಟ್ ಸೂಚಿಸಿದೆ. ಭ್ರಷ್ಟಾಚಾರದ ಆರೋಪದಲ್ಲಿ ಸಂಘದ ಕಾರ್ಯದರ್ಶಿ ವಿರುದ್ಧ ತನಿಖೆಗೆ ಅನುಮತಿ ನಿರಾಕರಿಸಿ ನಿರ್ಣಯ ಕೈಗೊಂಡಿದ್ದ ಸಂಘದ ಕ್ರಮವನ್ನು ಪ್ರಶ್ನಿಸಿ ಲೋಕಾಯುಕ್ತ ಪೊಲೀಸರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ನಟರಾಜ್, ತಮ್ಮದು ಸರ್ಕಾರಿ ಸಂಸ್ಥೆಯಲ್ಲ ಎಂದು ಆ ಸಂಘ ತಿಳಿಸಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಹಣಕಾಸಿನ ನೆರವು ಪಡೆಯುವ ಕೃಷಿ, ಕೈಗಾರಿಕೆ, ಬ್ಯಾಂಕಿಂಗ್, ವ್ಯಾಪಾರದಲ್ಲಿ ತೊಡಗಿರುವ ಸಹಕಾರಿ ಸಂಘದ ಅಧ್ಯಕ್ಷ,…

Read More

ಉಡುಪಿ: ಇಲ್ಲಿನ ಪರ್ಕಳ ಮುಖ್ಯ ರಸ್ತೆಯ ಪಾಂಡುರಂಗ ಟವರ್ಸ್‌ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ವತಿಯಿಂದ ಪರ್ಕಳ ರಾಷ್ಟ್ರೀಯ ಹೆದ್ದಾರಿಯ ಪಾರ್ಶ್ವದಲ್ಲಿ ನಿರ್ಮಿಸಿರುವ ನೂತನ ಕಟ್ಟಡ ಶ್ರೀದುರ್ಗಾ ಸಹಕಾರ ಸೌಧದ ಉದ್ಘಾಟನಾ ಸಮಾರಂಭ ಅಕ್ಟೋಬರ್‌ 12ರಂದು ನಡೆಯಲಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಪರ್ಕಳ ಹೈಸ್ಕೂಲ್‌ ಕ್ರೀಡಾಂಗಣದಲ್ಲಿ ಬೆಳಗ್ಗೆ 11ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಅವರು ಕಟ್ಟಡ ಲೋಕಾರ್ಪಣೆ ಮಾಡಲಿದ್ದಾರೆ. ಪರ್ಕಳ ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಅಧ್ಯಕ್ಷ ಅಶೋಕ್‌ ಕಾಮತ್‌ ಕೊಡಂಗೆ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಯಶ್‌ಪಾಲ್‌ ಸುವರ್ಣ, ಸುರೇಶ್‌ ಶೆಟ್ಟಿ ಗುರ್ಮೆ, ಮಾಜಿ ಶಾಸಕ ರಘುಪತಿ ಭಟ್‌, ಉಡುಪಿ ನಗರಸಭೆಯ ಅಧ್ಯಕ್ಷ ಪ್ರಭಾಕರ ಪೂಜಾರಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಮಂಗಳೂರಿನ ಜಂಟಿ ನಿರ್ದೇಶಕ ಗೋಕುಲ್‌ದಾಸ್‌ ಕಾಮತ್‌, ಉಡುಪಿ ಜಿಲ್ಲಾ ಸಹಕಾರಿ…

Read More

ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್‌ ಮತ್ತು ಸಹಕಾರ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್‌ ೧೧ರಂದು ಶನಿವಾರ ಬೆಳಗ್ಗೆ ೧೦ರಿಂದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರಿಗೆ ರಾಜ್ಯಮಟ್ಟದ ಕಾರ್ಯದಕ್ಷತೆ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷರಾದ ಶಶಿಕುಮಾರ್‌ ರೈ ಬಾಲ್ಯೊಟ್ಟು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಸ್‌ಸಿಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷರಾದ ವಿನಯಕುಮಾರ್‌ ಸೂರಿಂಜೆ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ನಿರ್ದೇಶಕ ಡಾ.ದೇವಿಪ್ರಸಾದ್‌ ಶೆಟ್ಟಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾದ…

Read More

ಕಾರವಾರ: ಇಲ್ಲಿನ ಕಾರವಾರ ಅರ್ಬನ್ ಬ್ಯಾಂಕ್‌ಗೆ ಲಿಕ್ವಿಡೇಟರ್ (ಸಮಾಪನಾಧಿಕಾರಿ) ಅನ್ನು ನೇಮಕ ಮಾಡಲಾಗಿದ್ದು, ಅವರು ಮಂಗಳವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಮುಂದಿನ ಆದೇಶದ ತನಕ ಈ ಬ್ಯಾಂಕ್‌ನ ಕಾರ್ಯಚಟುವಟಿಕೆಗಳು ಲಿಕ್ವಿಡೇಟರ್‌ ಅವರ ನೇತೃತ್ವದಲ್ಲೇ ತೆರೆಯಲಿದ್ದು, ಸಾಲ ವಸೂಲಿ ಹಾಗೂ ಇತರ ಕಾರ್ಯಗಳೂ ಈ ಹಿಂದಿನಂತೆ ನಡೆಯಲಿದೆ ಎಂದು ಲಿಕ್ವಿಡೇಟರ್ ಮಾಹಿತಿ ನೀಡಿದ್ದಾರೆ. https://chat.whatsapp.com/JVAtKKe2M19AFO3W5629ZS?mode=ems_copy_t ಕಳೆದ ಜುಲೈ 22ರಂದು ಕಾರವಾರ ಅರ್ಬನ್ ಬ್ಯಾಂಕ್‌ನ ಲೈಸನ್ಸ್ ರದ್ದು ಮಾಡಿ ರಿಸರ್ವ್‌ ಬ್ಯಾಂಕ್‌ ಆದೇಶ ಹೊರಡಿಸಿತ್ತು. ಹಣಕಾಸಿನ ಪರಿಸ್ಥಿತಿ ಕಳವಳಕಾರಿಯಾಗಿದ್ದರಿಂದ ಬ್ಯಾಂಕಿನ ನಿರಂತರ ಕಾರ್ಯಾಚರಣೆಯು ಠೇವಣಿದಾರರ ಹಿತಾಸಕ್ತಿಗಳಿಗೆ ಹಾನಿಕಾರಕ ಎಂದು ಅಭಿಪ್ರಾಯಪಟ್ಟಿದ್ದ ಆರ್‌ಬಿಐ, ಲಿಕ್ವಿಡೇಟರ್‌ ಅನ್ನು ನೇಮಿಸುವಂತೆ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರಿಗೆ ಸೂಚಿಸಿತ್ತು. ಅದರಂತೆ ಅಂಕೋಲಾ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿಯ ಸಹಕಾರ ಅಭಿವೃದ್ಧಿ ಅಧಿಕಾರಿ ಮಮತಾ ನಾಯಕ್‌ ಅವರು ಲಿಕ್ವಿಡೇಟರ್‌ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಅಧಿಕಾರ ವಹಿಸಿದ ನಂತರ ಮಾತನಾಡಿರುವ ಮಮತಾ ನಾಯಕ್‌, ಬ್ಯಾಂಕ್‌ನಲ್ಲಿ ಠೇವಣಿ ಇಟ್ಟವರಿಗೆ ಗರಿಷ್ಠ 5 ಲಕ್ಷದವರೆಗೆ…

Read More

ಬೆಳ್ತಂಗಡಿ: ಮಂಗಳೂರಿನ ಕಚ್ಚೂರು ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಬೆಳ್ತಂಗಡಿ ಶಾಖೆಯ ಉದ್ಘಾಟನೆ ಬೆಳ್ತಂಗಡಿ ಚರ್ಚ್‌ ಬಳಿಯ ನೊರೋನಾ ಕಾಂಪ್ಲೆಕ್ಸ್‌ನಲ್ಲಿ ಇತ್ತೀಚೆಗೆ ನಡೆಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನ ಸೇವಾ ಟ್ರಸ್ಟ್‌ ಬಾರ್ಕೂರು ಇದರ ಆಡಳಿತ ಮೊಕ್ತೇಸರ ಲಕ್ಷ್ಮಣ್‌ ಕರಾವಳಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಕಚ್ಚೂರು ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯು ಕಳೆದ ಮೂವತ್ತು ವರ್ಷಗಳಿಂದ ಉತ್ತಮವಾಗಿ ಪ್ರಗತಿ ಕಂಡಿದ್ದು ಸೊಸೈಟಿಯ ಶಾಖೆಗಳ ವಿಸ್ತರಣೆಗೆ ಯೋಜನೆ ಹಮ್ಮಿಕೊಳ್ಳಬೇಕು. ಪ್ರತಿ ಎರಡು ವರ್ಷಕ್ಕೊಮ್ಮೆ ಒಂದು ಶಾಖೆಯಂತೆ ಹತ್ತರಿಂದ ಹದಿನೈದು ಶಾಖೆಗಳು ಶೀಘ್ರ ಆಗಬೇಕಿದೆ. ಬೆಳ್ತಂಗಡಿಯಲ್ಲಿ ಆರಂಭಗೊಂಡ ಶಾಖೆ ಕೋಟಿ ರೂ.ಗೂ ಹೆಚ್ಚು ವ್ಯವಹಾರ ನಡೆಸಿ ಪ್ರಗತಿಪಥದಲ್ಲಿ ಸಾಗುವಂತಾಗಲಿ ಎಂದು ಶುಭ ಹಾರೈಸಿದರು. ಕಚ್ಚೂರು ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಅಧ್ಯಕ್ಷ ಚಂದ್ರಶೇಖರ್‌ ಕೆ ಅಧ್ಯಕ್ಷತೆ ವಹಿಸಿ ಭದ್ರತಾ ಕೊಠಡಿ ಉದ್ಘಾಟಿಸಿದರು. ಭಂಡಾರಿ ಮಹಾಮಂಡಲದ ಅಧ್ಯಕ್ಷ ಶಶಿಧರ ಭಂಡಾರಿ ಕಂಪ್ಯೂಟರೀಕರಣ ವ್ಯವಸ್ಥೆಯನ್ನು ಉದ್ಘಾಟಿಸಿದರು. ಬೆಳ್ತಂಗಡಿ ಪಟ್ಟಣ ಪಂಚಾಯತ್‌ ಅಧ್ಯಕ್ಷರಾದ ಜಯಾನಂದ ಗೌಡ…

Read More

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಾಟೆಕಲ್ ಶಾಖೆಯ ಆರನೇ ವಾರ್ಷಿಕೋತ್ಸವದ ಪ್ರಯುಕ್ತ ಬ್ರಹ್ಮಶ್ರೀ ನಾರಾಯಣ ಗುರು ಯುವ ಸಂಚಲನ ಬೆಳರಿಂಗೆ ಕಿನ್ಯ ಇವರ ಸಹಯೋಗದೊಂದಿಗೆ ಸಮುದಾಯ ದಂತ ಆರೋಗ್ಯ ವಿಭಾಗ, ಯೆನಪೋಯ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಮಂಗಳಾ ಕಾಲೇಜು, ಮಂಗಳಾ ಆಸ್ಪತ್ರೆ ಮತ್ತು ಮಂಗಳಾ ಕಿಡ್ನಿ ಫೌಂಡೇಶನ್ ಕದ್ರಿ ಮಂಗಳೂರು ಇವರ ವೈದ್ಯರ ತಂಡದವರಿಂದ ಉಚಿತ ವೈದ್ಯಕೀಯ, ನೇತ್ರ ಮತ್ತು ದಂತ ತಪಾಸಣಾ ಶಿಬಿರವು ಬ್ರಹ್ಮಶ್ರೀ ನಾರಾಯಣ ಗುರು ಯುವ ಸಂಚಲನದ ಆವರಣದಲ್ಲಿ ಜರುಗಿತು. https://chat.whatsapp.com/JVAtKKe2M19AFO3W5629ZS?mode=ems_copy_t ಶ್ರೀ ಮಲರಾಯ ಧೂಮಾವತಿ ಬಂಟ ದೈವಗಳ ಭಂಡಾರಮನೆ, ಕಿನ್ಯಾ ಬೆಳರಿಂಗೆ ಇದರ ಅರ್ಚಕರಾದ ರವಿ ಪೂಜಾರಿ ಹಾಗೂ ಅರ್ಚಕ ಪಾತ್ರಿ ಕಿಶೋರ್ ಪೂಜಾರಿ ಉಚಿತ ವೈದ್ಯಕೀಯ, ನೇತ್ರ ಮತ್ತು ದಂತ ತಪಾಸಣಾ ಶಿಬಿರವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಮುದಾಯ ದಂತ ಆರೋಗ್ಯ ವಿಭಾಗ, ಯೆನಪೋಯ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇಲ್ಲಿಯ ದಂತ ವೈದ್ಯರಾದ ಡಾ|ಇಮ್ರಾನ್ ಪಾಷಾ ಮಾತನಾಡಿ ಆತ್ಮಶಕ್ತಿ…

Read More

ಸಿರಿಮುಡಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಉದ್ಘಾಟಿಸಿ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅಭಿಪ್ರಾಯ ಪಡುಬಿದ್ರಿ: ವಾಣಿಜ್ಯ ಬ್ಯಾಂಕ್‌ಗಳ ತವರೂರಾಗಿದ್ದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಸಹಕಾರ ಸಂಘಗಳು ಜನರ ಅಭಿವೃದ್ಧಿಗೆ ಇರುವ ಏಕೈಕ ಸಂಸ್ಥೆಗಳಾಗಿವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಬಂಟರ ಸಂಘ ಪಡುಬಿದ್ರಿ, ಬಂಟ್ಸ್ ವೆಲ್ಫೇರ್‌ ಟ್ರಸ್ಟ್ ಪಡುಬಿದ್ರಿ ಹಾಗೂ ಸಿರಿಮುಡಿ ದತ್ತಿನಿಧಿ ಸೋಶಿಯಲ್ ವೆಲ್ಫೇರ್‌ ಟ್ರಸ್ಟ್ ಪಡುಬಿದ್ರಿ ಸಹಭಾಗಿತ್ವದಲ್ಲಿ ಭಾನುವಾರ ಸದಾನಂದ ಕುಡ್ಡು ಶೆಟ್ಟಿ ಹವಾನಿಯಂತ್ರಿತ ಸ್ವಂತ ಕಟ್ಟಡದಲ್ಲಿ ಸ್ಥಾಪಿಸಿರುವ ಸಿರಿಮುಡಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಉದ್ಘಾಟಿಸಿ ಮಾತನಾಡಿದರು. ಸರಳವಾಗಿ, ತ್ವರಿತವಾಗಿ ಜನರಿಗೆ ಸಾಲ ನೀಡುವಂತಹ ವ್ಯವಸ್ಥೆಯಿರುವ ಸಂಸ್ಥೆಯೆಂದರೆ ಸಹಕಾರಿ ಸಂಸ್ಥೆ ಎಂದು ಹೇಳಲು ಸಂತೋಷವಾಗುತ್ತದೆ. ಇಲ್ಲಿನ ಬಂಟರ ಸಂಘ ಸಿರಿಮುಡಿ ದತ್ತಿನಿಧಿ ಮತ್ತು ಸೊಸೈಟಿ ಆರಂಭದ ಮೂಲಕ ಹೆಮ್ಮೆ ತರುವಂತಹ ಕೆಲಸ ಮಾಡಿದೆ. ಇಲ್ಲಿನ ಸೊಸೈಟಿ ಕಟ್ಟಡಕ್ಕೆ 10 ಲಕ್ಷ, ಬಂಟರ ಸಂಘಕ್ಕೆ ಲಿಫ್ಟ್‌…

Read More