Author: admin
ಉಪ್ಪಿನಂಗಡಿ: ಇಲ್ಲಿನ ಪೃಥ್ವಿ ಶಾಪಿಂಗ್ ಮಹಲ್ 1ನೇ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅನುಗ್ರಹ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 2024-25ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯು ಉಪ್ಪಿನಂಗಡಿ ದೀನರ ಕನ್ಯಾಮಾತ ದೇವಾಲಯದ ಮಿನಿ ಹಾಲ್ ನಲ್ಲಿ ಭಾನುವಾರ ಅಧ್ಯಕ್ಷ ರಾಬರ್ಟ್ ಡಿಸೋಜ ಇವರ ಅಧ್ಯಕ್ಷತೆಯಲ್ಲಿ ಜರಗಿತು. https://chat.whatsapp.com/JVAtKKe2M19AFO3W5629ZS?mode=ems_copy_t ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ರಾಬರ್ಟ್ ಡಿಸೋಜ ಅವರು ಸಂಘದಲ್ಲಿ ವರದಿ ವರ್ಷಾಂತ್ಯಕ್ಕೆ 483 ಸದಸ್ಯರಿದ್ದು ರೂ. 43.21 ಲಕ್ಷ ಪಾಲು ಬಂಡವಾಳ ಸಂಗ್ರಹವಾಗಿದ್ದು ವಿವಿಧ ಠೇವಣಿ ಮೊತ್ತವು ರೂ.9.33 ಕೋಟಿ ಆಗಿದ್ದು ವಿವಿಧ ರೂಪದಲ್ಲಿ ಸಂಘದ ಸದಸ್ಯರಿಗೆ ರೂ.3,07,48,461.00 ಸಾಲ ನೀಡಿ 31.03.2025 ಕ್ಕೆ ರೂ. 3,12,06,860.00 ಮರುಪಾವತಿ ಆಗಿ ರೂ. 8,38,47,381.00 ಹೊರ ಬಾಕಿ ಇರುತ್ತದೆ. ವರದಿ ವರ್ಷದಲ್ಲಿ ರೂ. 30,06,89,399.98 ವ್ಯವಹಾರ ನಡೆಸಿದ್ದು, 31.03.2025ಕ್ಕೆ ರೂ. 2,04,873.38 ಲಾಭ ಗಳಿಸಿದೆ. ಶೇರು ಬಂಡವಾಳ ಹೊಂದಿದ ಸದಸ್ಯರಿಗೆ 4% ಡಿವಿಡೆಂಡ್ ವಿಂಗಡಿಸಲಾಗುವುದು ಎಂದು ಘೋಷಣೆ ಮಾಡಿದರು. ಹಿಂದಿನ ಸಭೆಯ…
ಬೆಳ್ತಂಗಡಿ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಕೆ.ಹರೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಸಂಘದ ಅಧ್ಯಕ್ಷ ಕೆ.ಹರೀಶ್ ಕುಮಾರ್ ಮಾತನಾಡಿ ಸಂಘವು ಕಳೆದ ಆರು ವರ್ಷಗಳಿಂದ ಉತ್ತಮ ವ್ಯವಹಾರ ಮಾಡುತ್ತ ಸಹಕಾರಿಗಳಿಗೆ ಸಾಲ ಸೌಲಭ್ಯಗಳನ್ನು ವಿತರಿಸುತ್ತಾ ಬರುತ್ತಿದೆ. ಪುಸಕ್ತ ಸಾಲಿನಲ್ಲಿ ಸಂಘವು ರೂ. 151 ಕೋಟಿ ವ್ಯವಹಾರ ನಡೆಸಿದ್ದು, 54.50 ಲಕ್ಷ ರೂ. ಲಾಭ ಗಳಿಸಿದೆ. ಸದಸ್ಯರಿಗೆ ಶೇ.12 ಡಿವಿಡೆಂಡ್ ನೀಡಲಾಗುವುದು. ಜೊತೆಗೆ ಈ ಬಾರಿ ವಿಶೇಷವಾಗಿ ಪ್ರಿಯದರ್ಶಿನಿ ಗೃಹಲಕ್ಷ್ಮಿ ಸಾಲ ಹೊಸ ಯೋಜನೆ ಅನುಷ್ಠಾನಕ್ಕೆ ತರಲಾಗುವುದು ಎಂದರು. ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಗಂಗಾಧರ ಮಿತ್ತಮಾರ್, ನಿರ್ದೇಶಕರಾದ ಉಮೇಶ್ ಎ.ಬಿ, ಬಿ.ಎಂ ಅಬ್ದುಲ್ ಹಮೀದ್, ಜಗದೀಶ್ ಹೆಗ್ಡೆ, ಕೆ.ಎಸ್ ಯೋಗೀಶ್ ಕುಮಾರ್, ಕೆ.ರಾಮಚಂದ್ರ ಗೌಡ, ಶೈಲೇಶ್ ಕುಮಾರ್, ವಿ.ರಮೇಶ್ ಪೂಜಾರಿ, ಮೋಹನ್ ಶೆಟ್ಟಿಗಾರ್, ರಾಮಚಂದ್ರ ಭಟ್ ಅರೆಕ್ಕಲ್, ಉಷಾ ಶರತ್, ರಾಗ್ನೇಶ್, ಅಭಿನಂದನ್ ಹರೀಶ್ ಕುಮಾರ್,…
ಭಟ್ಕಳ: ಕೆನರಾ ದೈವಜ್ಞ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತ, ಸೋನಾರಕೇರಿ ಭಟ್ಕಳ ಇದರ ಏಳನೇ ವರ್ಷದ 2024-25ನೇ ಸಾಲಿನ ವಾಷಿ೯ಕ ಸಾಮಾನ್ಯ ಸಭೆ ದೈವಜ್ಞ ಸಭಾಭವನ ಭಟ್ಕಳದಲ್ಲಿ ನಡೆಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಸಹಕಾರಿಯ ಅಧ್ಯಕ್ಷರಾದ ಬಾಲಕೃಷ್ಣ ಎಂ.ಶೇಟ್ ಸಭೆಯ ಅಧ್ಯಕ್ಷತೆ ವಹಿಸಿ, ಉದ್ಘಾಟಿಸಿದರು. ಸಹಕಾರಿ ಸಂಘವು ವರದಿ ವರ್ಷದಲ್ಲಿ 35 ಕೋಟಿಗೂ ಮಿಕ್ಕಿ ವ್ಯವಹಾರ ನಡೆಸಿದ್ದು, ರೂ.14.09 ಲಕ್ಷ ಲಾಭ ಗಳಿಸಿದ್ದು, ಸದಸ್ಯರಿಗೆ 4% ಡಿವಿಡೆಂಡ್ ನೀಡಲಾಗುವುದು ಎಂದು ಹೇಳಿ, ಸಹಕಾರಿಯ ಅಭಿವೃದ್ಧಿ ಹಾಗೂ ಮುಂದಿನ ಗುರಿಗಳ ಬಗ್ಗೆ ಮಾತನಾಡಿದರು. ಸಂಸ್ಥೆಯ ನಿರ್ದೇಶಕರಾದ ಸುನೀಲ್ ಆರ್.ಶೇಟ್ ಹಾಗೂ ಸುನೀತಾ ಪಿ.ಶೇಟ್ ಪ್ರಾಸ್ತಾವಿಕ ಮಾತನಾಡಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಚಿನ್ ಡಿ.ಶೇಟ್ ಕಾರ್ಯಕ್ರಮ ನಿರೂಪಿಸಿ, ವಾರ್ಷಿಕ ವರದಿ ಮಂಡಿಸಿದರು. ಸಹಕಾರಿಯ ಉಪಾಧ್ಯಕ್ಷರಾದ ಸಂದೀಪ್ ಎಸ್.ಕೊಲ್ಲೆ ಹಾಗೂ ನಿರ್ದೇಶಕರಾದ ಸಾಯಿನಾಥ್ ಕೆ.ಶೇಟ್, ದಿನೇಶ್ ಕೆ.ಶೇಟ್, ಸುಬ್ರಮಣ್ಯ ಆರ್.ಶೇಟ್, ಬಬಿತಾ ಎಂ.ಶೇಟ್ ಉಪಸ್ಥಿತರಿದ್ದರು. ಸಹಕಾರಿಯ ಸಿಬ್ಬಂದಿ ಅಭಿಷೇಕ್ ಶೇಟ್ ವಂದಿಸಿದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ…
ಏಳನೇ ಸಾಮಾನ್ಯ ಸಭೆಯಲ್ಲಿ ಕರಿಂಜೆ ಶ್ರೀ ಮುಕ್ತಾನಂದ ಸ್ವಾಮೀಜಿ ಆಶೀರ್ವಚನ ವೇಣೂರು: ‘ಸೌಹಾರ್ದ ಸಹಕಾರಿಗಳ ನಡೆ – ಸುಸ್ಥಿರ ಅಭಿವೃದ್ಧಿಯ ಕಡೆʼ ಎಂಬ ಸಹಕಾರ ತತ್ವದ ಉದಾತ್ತ ಮನೋಭಾವನೆಯ ಸ್ವಾಯತ್ತತೆ, ಸ್ವಯಂ ಆಡಳಿತ, ಸ್ವಯಂ ನಿಯಂತ್ರಣ ನಮ್ಮ ಧ್ಯೇಯ. ಇದನ್ನು ರೂಢಿಸಿಕೊಂಡು, ಎಲ್ಲರೊಟ್ಟಿಗೆ ಕೂಡಿ ಬಾಳುವ, ಬೆಳೆಯುವ, ಮತ್ತೊಬ್ಬರನ್ನು ಬೆಳೆಸುವ, ಚಿಂತನೆಯಿಂದ ಬೆಳೆದಂತಹ ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿಯು, ಇನ್ನೂ ಸಮಾಜಮುಖಿ ಕೆಲಸಗಳನ್ನು ಮಾಡಿ ಯಶಸ್ವಿಯಾಗಿ ಬೆಳೆಯುವಂತಾಗಲಿ ಎಂದು ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಸ್ಥೆಯ ಸ್ಥಾಪಕರಾದ ಕರಿಂಜೆ ಶ್ರೀ ಮುಕ್ತಾನಂದ ಸ್ವಾಮೀಜಿ ಹೇಳಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಕರಿಂಜೆ ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘದ ಏಳನೇ ಸಾಮಾನ್ಯ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು. ಸಂಘದ ಅಧ್ಯಕ್ಷರಾದ ಸುಧಾಕರ ನೂಯಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘವು 2024-25ನೇ ಸಾಲಿನಲ್ಲಿ ರೂ.4,74,00,000 ಠೇವಣಿ ಹೊಂದಿದ್ದು, ವರದಿ ಸಾಲಿನಲ್ಲಿ ರೂ. 3,97,00,000 ಸಾಲ ನೀಡಿದ್ದು, ಸಹಕಾರಿಯ ಒಟ್ಟು ದುಡಿಯುವ ಬಂಡವಾಳ ರೂ. 5,38,00,000 ಹೊಂದಿದ್ದು, ವರದಿ…
ಕರ್ನಾಟಕ ಸೌಹಾರ್ದ ಸಹಕಾರಿ ಕಾಯ್ದೆ ಜಾರಿಯಾಗಿ 25 ವರ್ಷವಾದ ಹಿನ್ನೆಲೆಯಲ್ಲಿ 25 ಜನರಿಗೆ ವೀಲ್‌ಚೇರ್, 25 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ ಮಂಗಳೂರು: ಕರ್ನಾಟಕ ಸೌಹಾರ್ದ ಸಹಕಾರಿ ಕಾಯ್ದೆ ಜಾರಿಯಾಗಿ 25 ವರ್ಷವಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಸೆ.28ರ ಭಾನುವಾರ ವಿಭಿನ್ನ, ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಮಂಗಳೂರಿನ ಶ್ರೀ ಮಂಗಳಾದೇವಿ ದೇವಸ್ಥಾನ ಬಳಿಯ ರಾಮಕೃಷ್ಣ ಮಠದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಸೆ.28ರಂದು ಬೆಳಗ್ಗೆ 10ಕ್ಕೆ ರಾಮಕೃಷ್ಣ ಆಶ್ರಮದ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ವಿಶೇಷ ಕಾರ್ಯಕ್ರಮವಾಗಿ ಜಮ್ಮು ಕಾಶ್ಮೀರದ ರಜೌರಿಯಲ್ಲಿ ಎರಡು ವರ್ಷದ ಹಿಂದೆ ನಡೆದ ಗುಂಡಿನ ಚಕಮಕಿಯಲ್ಲಿ ವೀರಮರಣವನ್ನಪ್ಪಿದ ಮಂಗಳೂರಿನ ಯುವಕ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಅವರಿಗೆ ಸ್ಮರಣಾಂಜಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಕ್ಯಾಪ್ಟನ್ ಎಂ.ವಿ ಪ್ರಾಂಜಲ್ (Captain MV Pranjal) 63 ರಾಷ್ಟ್ರೀಯ ರೈಫಲ್ಸ್ ನ ಕ್ಯಾಪ್ಟನ್ ಆಗಿದ್ದರು. ಮಂಗಳೂರಿನಲ್ಲಿ ಎಂಆರ್‌ಪಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಂ.ವೆಂಕಟೇಶ್-ಅನುರಾಧಾ ದಂಪತಿಯ ಏಕೈಕ ಪುತ್ರರಾಗಿದ್ದ ಪ್ರಾಂಜಲ್, ಎಂಆರ್‌ಪಿಎಲ್ ಡೆಲ್ಲಿ ಸ್ಕೂಲ್‌ನಲ್ಲಿ…
ಬ್ರಹ್ಮಾವರ: ಅನನ್ಯ ಸೌಹಾರ್ದ ಸಹಕಾರಿ ಸಂಘ ಹೇರಾಡಿ, ಇದರ ಆರನೇ ವರ್ಷದ ವಾರ್ಷಿಕ ಮಹಾಸಭೆಯು ಭಾನುವಾರ ಶ್ರೀ ರುಕ್ಮಿಣಿ ಶೆಡ್ತಿ ಸ್ಮಾರಕ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹೇರಾಡಿ ಇಲ್ಲಿ ಸಂಸ್ಥೆಯ ಅಧ್ಯಕ್ಷ ಹರೀಶ್ ಕುಮಾರ್ ಇವರ ನೇತೃತ್ವದಲ್ಲಿ ಜರುಗಿತು. https://chat.whatsapp.com/JVAtKKe2M19AFO3W5629ZS?mode=ems_copy_t ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ ವರದಿ ವರ್ಷದಲ್ಲಿ ಸಂಘವು 37.68 ಕೋಟಿ ರೂ. ವಹಿವಾಟು ನಡೆಸಿದ್ದು, 13.27 ಲಕ್ಷ ರೂ. ಪಾಲು ಬಂಡವಾಳ ಹೊಂದಿದೆ. 6.14 ಕೋಟಿ ರೂಪಾಯಿ ಸಂಗ್ರಹಿಸಿ 5.86 ಕೋಟಿ ರೂ. ಸಾಲ ನೀಡಲಾಗಿದ್ದು 2024-25ನೇ ಸಾಲಿನ ಆರ್ಥಿಕ ವರ್ಷದಲ್ಲಿ 17.01 ಲಕ್ಷ ರೂ. ಲಾಭ ಗಳಿಸಿದೆ. 30.18 ಲಕ್ಷ ನಿಧಿಗಳನ್ನು ಹೊಂದಿದೆ ಎಂದರು. ಸದಸ್ಯರ ಹಾಗೂ ಸಾರ್ವಜನಿಕ ಹಿತಾಸಕ್ತಿಗಾಗಿ ಸಂಘದಲ್ಲಿ ಇ -ಸ್ಟ್ಯಾಂಪ್, ಆರ್‌ಟಿಸಿ ನೀಡುವ ಸೌಲಭ್ಯವಿದ್ದು ಸಂಘದ ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಣಿ ಮಾಡಲಾಗಿದೆ. ಸಭೆಯಲ್ಲಿ ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ವಿದ್ಯಾರ್ಥಿವೇತನವನ್ನು ಸಂಸ್ಥೆಯ ಹಿರಿಯ ಸದಸ್ಯರಾದ ರಾಜೀವ ಶೇರ್ವೆಗಾರ್ ಇವರು ನೀಡಿದರು. ಸಹಕಾರಿಯ…
ಕೋಡಿ ಕನ್ಯಾಣ: ಶ್ರೀ ರಾಮಾಂಜನೇಯ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಕೋಡಿ ಕನ್ಯಾಣದ ಸರಕಾರಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಶನಿವಾರ ಜರುಗಿತು. ಸಂಸ್ಥೆಯ ಅಧ್ಯಕ್ಷರಾದ ಶಂಭು ಪೂಜಾರಿ ಸ್ವಾಗತಿಸಿ, ಸಂಸ್ಥೆಯು ಗ್ರಾಮೀಣ ಪ್ರದೇಶದಲ್ಲಿ ಒಟ್ಟು 100 ಕೋಟಿಗೂ ಅಧಿಕ ವ್ಯವಹಾರ ನಡೆಸಿದ್ದು 16 ಲಕ್ಷ ರೂ.ಗೂ ಅಧಿಕ ಲಾಭ ಗಳಿಸಿದೆ. ಸದಸ್ಯರಿಗೆ ಶೇಕಡಾ 15ರಷ್ಟು ಡಿವಿಡೆಂಡ್ ವಿತರಿಸಲಾಗುತ್ತಿದೆ. ಇದಕ್ಕೆ ಸಂಸ್ಥೆಯ ಆಡಳಿತ ಮಂಡಳಿ, ಸದಸ್ಯರು, ಸಿಬ್ಬಂದಿ ವರ್ಗ ಕಾರಣರಾಗಿದ್ದು ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು. https://chat.whatsapp.com/JVAtKKe2M19AFO3W5629ZS?mode=ems_copy_t ವಾರ್ಷಿಕ ಮಹಾಸಭೆಯ ಆಡಳಿತ ವರದಿಯನ್ನು ಸಂಸ್ಥೆಯ ವ್ಯವಸ್ಥಾಪಕಿ ಪ್ರತಿಮಾ ವಾಚಿಸಿದರು. ಲೆಕ್ಕಪರಿಶೋಧನಾ ವರದಿಯನ್ನು ವ್ಯವಸ್ಥಾಪಕ ಸಂದೀಪ್ ಕರ್ಕೇರ ವಾಚಿಸಿದರು. ಸಂಸ್ಥೆಯ ಮುಂದಿನ ಕಾರ್ಯಯೋಜನೆಯ ಬಗ್ಗೆ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕರಾದ ರಾಘವೇಂದ್ರ ಕರ್ಕೇರ ಮಂಡಿಸಿದರು. ವಾರ್ಷಿಕ ಮಹಾಸಭೆಯನ್ನುದ್ದೇಶಿಸಿ ಮಾತನಾಡಿದ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಬೆಂಗಳೂರು ಇದರ ಉಡುಪಿ ಜಿಲ್ಲಾ ಅಭಿವೃದ್ಧಿ ಅಧಿಕಾರಿ ವಿಜಯ್ ಬಿ.ಎಸ್ ಸಂಸ್ಥೆಯ ಬೆಳವಣಿಗೆ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ…
2024-25ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಸಂಪನ್ನ: ರೂ. 306.32 ಲಕ್ಷ ನಿವ್ವಳ ಲಾಭ ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 2024-25ನೇ ಸಾಲಿನ 14ನೇ ವಾರ್ಷಿಕ ಸಾಮಾನ್ಯ ಸಭೆ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಭಾನುವಾರ ಪಡೀಲಿನ ಬೈರಾಡಿಕೆರೆ ಹತ್ತಿರದ ಸಂಘದ ಪ್ರಧಾನ ಕಚೇರಿ ಆತ್ಮಶಕ್ತಿ ಸೌಧದಲ್ಲಿ ಜರುಗಿತು. ಆತ್ಮಶಕ್ತಿ ಸಹಕಾರಿಯು ಅತ್ಯಲ್ಪ ಅವಧಿಯಲ್ಲಿ ಸಾಧಿಸಿದ ಉನ್ನತ ಪ್ರಗತಿಯನ್ನು ಸದಸ್ಯರು ಸಾಮಾನ್ಯ ಸಭೆಯಲ್ಲಿ ಪ್ರಶಂಸಿಸಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಸಂಘದ 2024-25ನೇ ಸಾಲಿನ ವಾರ್ಷಿಕ ವರದಿ ಲೆಕ್ಕಪತ್ರವನ್ನು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಮಂಡಿಸಿದರು. ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ, ಸಂಘವು ಪ್ರಸ್ತುತ ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ಒಟ್ಟು 33 ಶಾಖೆಗಳನ್ನು ಹೊಂದಿದ್ದು, 2025-26ನೇ ಸಾಲಿನಲ್ಲಿ ಸಂಘದ ಕಾರ್ಯವ್ಯಾಪ್ತಿಯಲ್ಲಿ ಇನ್ನೂ ಹೆಚ್ಚಿನ ಶಾಖೆಗಳನ್ನು ತೆರೆದು, ಹೆಚ್ಚಿನ ಸದಸ್ಯರನ್ನು ಸೇರ್ಪಡೆಗೊಳಿಸಿ ಪಾಲು ಬಂಡವಾಳವನ್ನು ರೂ. 2.5 ಕೋಟಿಗೆ ಹೆಚ್ಚಿಸಿ, ವಿವಿಧ ಯೋಜನೆಗಳ…
ಮಂಗಳೂರು: ಮಂಗಳೂರಿನಲ್ಲಿ ಶನಿವಾರ ನಡೆದ ಮಂಗಳೂರು ಪ್ರೊಡಕ್ಟಿವಿಟಿ ಕೌನ್ಸಿಲ್ -ರೋಟರಿ ಕೋಸ್ಟಲ್ ಎಂಎಸ್‌ಎಂಇ ಕಾಂಕ್ಲೇವ್ -2025 ಕಾರ್ಯಕ್ರಮದಲ್ಲಿ ವಿಶ್ವಕರ್ಮ ಕಲಾ ಪರಿಷತ್‌ನ ಖಜಾಂಚಿ, ಎ.ಜಿ ಜ್ಯುವೆಲ್ಲರಿ ವರ್ಕ್ಸ್ ಇದರ ಮಾಲೀಕರಾದ ಎ.ಜಿ ಸದಾಶಿವ ಮಂಗಳಾದೇವಿ ಇವರಿಗೆ ಪ್ರತಿಷ್ಠಿತ ಆರ್ಟಿಸನ್ ಆಫ್ ದ ಇಯರ್(ವರ್ಷದ ಅತ್ಯುತ್ತಮ ಕುಶಲಕರ್ಮಿ) ಪ್ರಶಸ್ತಿ ನೀಡಿ ಗೌರವಿಸಲಾಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಇವರು ವಿಶ್ವಕರ್ಮ ಸಹಕಾರ ಬ್ಯಾಂಕಿನ ಉತ್ತಮ ಗ್ರಾಹಕರಾಗಿದ್ದು ಇವರಿಗೆ 2024-25ನೇ ಸಾಲಿನಲ್ಲಿ ವಿಶ್ವಕರ್ಮ ಬ್ಯಾಂಕ್ ದಿವಂಗತ ಹರಿಶ್ಚಂದ್ರ ಆಚಾರ್ಯ ಪುರಸ್ಕಾರ ನೀಡಿ ಗೌರವಿಸಿದೆ. ವರ್ಷದ ಅತ್ಯುತ್ತಮ ಕುಶಲಕರ್ಮಿ ಪುರಸ್ಕಾರಕ್ಕೆ ಭಾಜನರಾದ ಎ.ಜಿ ಸದಾಶಿವ ಅವರಿಗೆ ವಿಶ್ವಕರ್ಮ ಸಹಕಾರ ಬ್ಯಾಂಕ್ ಅಧ್ಯಕ್ಷರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ ಮತ್ತು ಬ್ಯಾಂಕಿನ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದ್ದಾರೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com
ಬೆಳ್ತಂಗಡಿ: ಸಹಕಾರ ರಂಗದಲ್ಲಿ ಅದ್ವಿತೀಯ ಸಾಧನೆಯೊಂದಿಗೆ ಪ್ರಸಕ್ತ ಸಾಲಿನಲ್ಲಿ ವಿಜಯ ಕ್ರೆಡಿಟ್ ಸಹಕಾರಿ ಸಂಘವು ರೂ.1100 ಕೋಟಿ ವಾರ್ಷಿಕವ್ಯವಹಾರ ನಡೆಸಿದ್ದು, ರೂ.3.00 ಕೋಟಿ ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ ಶೇ.18 ಡಿವಿಡೆಂಡ್ ನೀಡಲಾಗುತ್ತಿದೆ ಎಂದು ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಅಜಿತ್ ಜಿ.ಶೆಟ್ಟಿ ಹೇಳಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಗುರುವಾಯನಕೆರೆ ಬಂಟರ ಸಂಘದಲ್ಲಿ ನಡೆದ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. 33,245 ಸದಸ್ಯರನ್ನು ಹೊಂದಿರುವ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು 4 ಕೋಟಿ ರೂ. ಗಿಂತಲೂ ಅಧಿಕ ಪಾಲು ಬಂಡವಾಳ ಸಂಗ್ರಹಿಸಿದ್ದು, 247 ಕೋಟಿ ರೂ. ಠೇವಣಿ ಹೊಂದಿದೆ. 216 ಕೋಟಿ ರೂ.ಗಿಂತ ಅಧಿಕ ಸಾಲ ನೀಡಲಾಗಿದೆ. ಸಾಲ ವಿತರಣೆಯಲ್ಲಿ ಕಳೆದ ವರ್ಷಕ್ಕಿಂತ ಶೇ.39.71 ಹಾಗೂ ಠೇವಣಿ ಸಂಗ್ರಹದಲ್ಲಿ ಶೇ. 36.04 ಪ್ರಗತಿ ಸಾಧಿಸಲಾಗಿದೆ ಎಂದು ಹೇಳಿದರು. ಸಂಸ್ಥೆಯ ಮಾರ್ಗದರ್ಶಕ, ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಅವರು ಸಂಘದ ಸ್ಥಾಪಕಾಧ್ಯಕ್ಷ ಜಯರಾಮ ಶೆಟ್ಟಿ ಅವರ…
