Author: admin
ಪುತ್ತೂರು: ಅತೀ ಹೆಚ್ಚು ಅಡಕೆ ಖರೀದಿ ಮಾಡಿದ ಸಾಧನೆಗಾಗಿ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಮಂಗಳೂರಿನ ಬೈಕಂಪಾಡಿಯಲ್ಲಿ ಕೆ.ಸೀತಾರಾಮ ರೈ ಸವಣೂರು ಇವರ ಅಧ್ಯಕ್ಷತೆಯಲ್ಲಿ ಜರುಗಿದ ಮಾಸ್ ಲಿಮಿಟೆಡ್ ಸಂಸ್ಥೆಯ ವಾರ್ಷಿಕ ಮಹಾಸಭೆಯಲ್ಲಿ ಗೌರವಾರ್ಪಣೆ ಮಾಡಲಾಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಸವಣೂರು ಮಾಸ್ ಅಡಕೆ ಖರೀದಿ ಕೇಂದ್ರಕ್ಕೆ ಅಡಕೆ ಮಾರಾಟ ಮಾಡಿ ಈ ಸಾಧನೆಗೆ ಕಾರಣಕರ್ತರಾಗಿರುವ ಅಡಕೆ ಬೆಳೆಗಾರರ ಪರವಾಗಿ ಸಂಘದ ಅಧ್ಯಕ್ಷರಾದ ತಾರಾನಾಥ ಕಾಯರ್ಗ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಗೌರವಾರ್ಪಣೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ಚೇತನ್ ಕೋಡಿಬೈಲು, ನಿರ್ದೇಶಕ ಅಶ್ವಿನ್ ಎಲ್ ಶೆಟ್ಟಿ, ಸವಣೂರು ಮಾಸ್ ಶಾಖೆ ಅಡಕೆ ಖರೀದಿ ಕೇಂದ್ರದ ಶಾಖಾಧಿಕಾರಿ ಯತೀಶ್ ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com
ಮಂಗಳೂರು: ನಗರದ ಶ್ರೀ ಗೋಕರ್ಣನಾಥ ಕೋ-ಆಪರೇಟಿವ್ ಬ್ಯಾಂಕಿನ 101ನೇ ವಾರ್ಷಿಕ ಸಾಮಾನ್ಯ ಸಭೆಯು ಬ್ಯಾಂಕಿನ ಅಧ್ಯಕ್ಷರಾದ ಚಂದ್ರಶೇಖರ್ ಕುಮಾರ್ ಇವರ ಅಧ್ಯಕ್ಷತೆಯಲ್ಲಿ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಶ್ರೀ ಕೊರಗಪ್ಪ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆಯಿತು. ಬ್ಯಾಂಕಿನ ಸ್ಥಿರಾಸ್ತಿ ಮೌಲ್ಯಮಾಪಕ ಅಶೋಕ್ ಕುಮಾರ್, ಆತ್ಮಶಕ್ತಿ ಪತ್ರಿಕೆಯ ಸಂಪಾದಕ ವಾಮನ್ ಕುದ್ರೋಳಿ, ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನ ಮಾಜಿ ಸಿಬ್ಬಂದಿ ಅಶೋಕ್, ಕರ್ಣಾಟಕ ಬ್ಯಾಂಕಿನ ಮಾಜಿ ಸಿಬ್ಬಂದಿ ದಿನೇಶ್ ಅಂಚನ್ ಹಾಗೂ ಬ್ಯಾಂಕಿನ ಸದಸ್ಯರಾದ ಸಂಧ್ಯಾಲತಾ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಬ್ಯಾಂಕ್ 2024-25ನೇ ಸಾಲಿನಲ್ಲಿ 211.55 ಲಕ್ಷ ರೂ. ನಿರ್ವಹಣಾ ಲಾಭ ಹಾಗೂ 95.50 ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ. ಬ್ಯಾಂಕಿನಲ್ಲಿ ಒಟ್ಟು 23,498 ಮಂದಿ ಪಾಲುದಾರ ಸದಸ್ಯರಿದ್ದು, 900.92 ಲಕ್ಷ ರೂ. ಪಾಲು ಬಂಡವಾಳ ಮತ್ತು 18,508.78 ಲಕ್ಷ ರೂ. ಠೇವಣಿಯಿದ್ದು ದುಡಿಯುವ ಬಂಡವಾಳ 21,394.06 ಲಕ್ಷ ರೂ. ಇರುತ್ತದೆ. ಈ ಕುರಿತ ಸಂಪೂರ್ಣ ವರದಿಯನ್ನು ಬ್ಯಾಂಕಿನ ಪ್ರಭಾರ ಜನರಲ್ ಮ್ಯಾನೇಜರ್…
ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿ ಮಹಾಸಭೆಯಲ್ಲಿ ಅಧ್ಯಕ್ಷ ಭಾಸ್ಕರ ದೇವಸ್ಯ ಹೇಳಿಕೆ ಮಂಗಳೂರು: ರಾಜ್ಯ ಸರ್ಕಾರದ ಕೆಲವು ಹೊಸ ನೀತಿಗಳಿಂದಾಗಿ ಸೌಹಾರ್ದ ಸಹಕಾರಿ ಸಂಘಗಳಿಗೂ ಸಮಸ್ಯೆ ಉಂಟಾಗಿದೆ. ಇವುಗಳ ವಿರುದ್ಧ ಹೋರಾಟ ಮಾಡುವಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯು ಸದಾಕಾಲ ಸೌಹಾರ್ದ ಸಹಕಾರಿ ಸಂಘಗಳ ಜೊತೆ ಇರಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯ ಅಧ್ಯಕ್ಷರಾದ ಭಾಸ್ಕರ ದೇವಸ್ಯ ಹೇಳಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಮಂಗಳೂರಿನ ಶ್ರೀನಿವಾಸ ಹೋಟೆಲ್ ಸಭಾಂಗಣದಲ್ಲಿ ಶುಕ್ರವಾರ ನಡೆದ ವಾರ್ಷಿಕ ಮಹಾಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಳೆದ ವರ್ಷದಿಂದ ಹೊಸ ಆಡಳಿತ ಸಮಿತಿ ರಚನೆಯಾದ ಬಳಿಕ ಒಕ್ಕೂಟಕ್ಕೆ ಸದಸ್ಯತ್ವ ಹೆಚ್ಚಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗಿದೆ. ಆದರೆ ನಿರೀಕ್ಷಿತ ಮಟ್ಟದಲ್ಲಿ ಅದು ನಡೆಯಲಿಲ್ಲ. ಈ ವರ್ಷ ಶೇ.೧೦೦ ಸದಸ್ಯತ್ವ ಮಾಡುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುವುದು. ಎಲ್ಲ ಸೌಹಾರ್ದ ಸಂಘಗಳೂ ಜಿಲ್ಲಾ ಒಕ್ಕೂಟದಲ್ಲಿ ಸದಸ್ಯತ್ವ ಪಡೆದು ಬಲಶಾಲಿಯಾಗಿ ರೂಪುಗೊಳ್ಳಬೇಕು ಎಂದು ಅವರು ಹೇಳಿದರು.…
ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 14ನೇ ಸಾಮಾನ್ಯ ಸಭೆಯಲ್ಲಿ ಆಶೀರ್ವಚನ ವಿಟ್ಲ: ಸಹಕಾರ ತತ್ವದಲ್ಲಿ ಜೀವನದ ಸತ್ವ ಅಡಗಿದೆ. ವ್ಯವಹಾರದಲ್ಲಿ ಪ್ರಾಮಾಣಿಕತೆ ಮತ್ತು ಪಾರದರ್ಶಕತೆ ಇದ್ದಾಗ ಬೆಳವಣಿಗೆ ಸಾಧ್ಯವಾಗುತ್ತದೆ. ಸಹಕಾರಿ ಸಂಘಗಳು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ನೆರವಾಗುತ್ತದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ರಾಜಾಂಗಣದಲ್ಲಿ ಶುಕ್ರವಾರ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 14ನೇ ಸಾಮಾನ್ಯ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು. ದಕ್ಷತೆಯಿಂದ ಕಾರ್ಯನಿರ್ವಹಿಸುವ ಸಹಕಾರಿಗಳು ಇದ್ದಾಗ ಸಹಕಾರಿ ಸಂಘಗಳು ಯಶಸ್ವಿಯಾಗಿ ಬೆಳೆಯುತ್ತವೆ. ಸಮಾಜಮುಖಿಯಾಗಿ ಕಾರ್ಯನಿರ್ವಹಿಸಿದ್ದರಿಂದ ಒಡಿಯೂರು ಶ್ರೀ ಸೌಹಾರ್ದ ಸಹಕಾರಿ ಸಂಘವು ಉನ್ನತ ಸ್ಥಾನಕ್ಕೇರಿದೆ ಎಂದು ಹೇಳಿದರು. ಸಂಘದ ಅಧ್ಯಕ್ಷ ಸಹಕಾರ ರತ್ನ ಎ.ಸುರೇಶ್ ರೈ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘವು 2024-25ನೇ ಸಾಲಿನಲ್ಲಿ 2,227 ಕೋಟಿ ರೂ. ವ್ಯವಹಾರ ನಡೆಸಿದ್ದು, 5.50 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ…
ಲೆಕ್ಕಪರಿಶೋಧನಾ ವರ್ಗೀಕರಣದಲ್ಲಿ ‘ಎ’ ಸ್ಥಾನ: ಸಂಘದ ಅಧ್ಯಕ್ಷ ಭಾಸ್ಕರ ಎಸ್.ಕೋಟ್ಯಾನ್ ಮಾಹಿತಿ ಮೂಡುಬಿದಿರೆ: ಬೆಳುವಾಯಿ ಸಹಕಾರಿ ವ್ಯವಸಾಯಿಕ ಸಂಘವು 2024-25ನೇ ಸಾಲಿನಲ್ಲಿ 474 ಕೋಟಿ ರೂ. ವ್ಯವಹಾರ ದಾಖಲಿಸಿದ್ದು, 3.26 ಕೋಟಿ ರೂ. ಲಾಭ ಗಳಿಸಿದ್ದು ಸತತ ಏಳನೇ ವರ್ಷವೂ ಶೇ.25 ಲಾಭಾಂಶ ಘೋಷಿಸಲಾಗುತ್ತಿದೆ. ಲೆಕ್ಕಪರಿಶೋಧನಾ ವರ್ಗೀಕರಣದಲ್ಲಿ ‘ಎ’ ಸ್ಥಾನ ಕಾಯ್ದುಕೊಂಡಿದೆ ಎಂದು ಸಂಘದ ಅಧ್ಯಕ್ಷ ಭಾಸ್ಕರ ಎಸ್.ಕೋಟ್ಯಾನ್ ತಿಳಿಸಿದ್ದಾರೆ. https://chat.whatsapp.com/JVAtKKe2M19AFO3W5629ZS?mode=ems_copy_t ಬೆಳುವಾಯಿ ಖಂಡಿಗ ಗ್ರೀನ್ಸ್ ಮಲ್ಟಿಪರ್ಪಸ್ ಹಾಲ್‌ನಲ್ಲಿ ಇತ್ತೀಚೆಗೆ ಬೆಳುವಾಯಿ ಸಹಕಾರಿ ವ್ಯವಸಾಯಿಕ ಸಂಘದ 2024-25ರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬೆಳುವಾಯಿಯಲ್ಲಿ ಪ್ರಧಾನ ಕಚೇರಿ, ಕೆಸರುಗದ್ದೆ, ಮೂಡುಮಾರ್ನಾಡು, ದರೆಗುಡ್ಡೆ, ಪಡುಮಾರ್ನಾಡುಗಳಲ್ಲಿ ಶಾಖೆಗಳನ್ನು ಹೊಂದಿದೆ. 7,505 ಸದಸ್ಯ ಬಲ ಇದ್ದು, 108.29 ಕೋಟಿ ರೂ. ಠೇವಣಿ ಸಂಗ್ರಹ, 100.19 ಕೋಟಿ ರೂ. ಸಾಲ ವಿತರಣೆ ಮಾಡಲಾಗಿದೆ. ಶೇ.98.65 ಸಾಲ ಮರುಪಾವತಿಯಾಗಿದೆ ಎಂದು ಭಾಸ್ಕರ ಎಸ್.ಕೋಟ್ಯಾನ್ ತಿಳಿಸಿದರು. ಮುಂದಿನ ಸಾಲಿನಲ್ಲಿ 120 ಕೋಟಿ ರೂ. ಠೇವಣಿ ಸಂಗ್ರಹ, 110 ಕೋಟಿ…
ಸಪ್ತರ್ಷಿ ಸೌಹಾರ್ದ ಸಹಕಾರಿ ಸಂಘಕ್ಕೆ ಮೈಸೂರು ಚಾಮರಾಜನಗರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಮಹಾಸಭೆಯಲ್ಲಿ ಗೌರವಾರ್ಪಣೆ
ಮೈಸೂರು: ಇತ್ತೀಚೆಗೆ ನಡೆದ ಮೈಸೂರು ಚಾಮರಾಜನಗರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ 71ನೇ ವಾರ್ಷಿಕ ಮಹಾಸಭೆಯಲ್ಲಿ ಮೈಸೂರು ಜಯನಗರದ ಸಪ್ತರ್ಷಿ ಸೌಹಾರ್ದ ಸಹಕಾರಿ ಸಂಘಕ್ಕೆ ಉತ್ತಮ ಸೌಹಾರ್ದ ಸಹಕಾರಿ ಸಂಘ ಎಂದು ಗುರುತಿಸಿ ಗೌರವಿಸಲಾಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಸಪ್ತರ್ಷಿ ಸೌಹಾರ್ದ ಸಹಕಾರಿಯ ಪರವಾಗಿ ಉಪಾಧ್ಯಕ್ಷರಾದ ಎಸ್.ಶ್ಯಾಮಲಾ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಹೆಚ್.ಎ.ಪುರುಷೋತ್ತಮ ಇವರಿಗೆ ಮೈಸೂರು ಚಾಮರಾಜನಗರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ವತಿಯಿಂದ ಗೌರವಾರ್ಪಣೆ ಮಾಡಲಾಯಿತು. ಸಂಘದ ಅಧ್ಯಕ್ಷರಾದ ಎಂ.ಎಸ್.ಚಂದ್ರಶೇಖರ್, ಗೌರವ ಖಜಾಂಚಿ ಕೃಷ್ಣವೇಣಿ ಎಂ.ಜಿ, ನಿರ್ದೇಶಕರಾದ ಎನ್.ನಾಗಚಂದ್ರ, ಹೆಚ್.ವಿ.ಸುಬ್ಬಣ್ಣ, ಬಸವಣ್ಣ, ಲಕ್ಷ್ಮಿದೇವಿ, ಮುತ್ತುರಾಜ್, ಜಿ.ಕೀರ್ತಿಪ್ರಕಾಶ್ ಹಾಗೂ ಎಂ.ಹನುಮಂತಯ್ಯ ಹಾಜರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com
ಬೆಂಗಳೂರು: ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಯ ಸೌಹಾರ್ದ ಸಹಕಾರಿಗಳಿಗಾಗಿ ಚುನಾವಣಾ ಪೂರ್ವ ತಯಾರಿ ಕಾರ್ಯಕ್ರಮ ಗುರುವಾರ ಬೆಂಗಳೂರಿನ ಸಂಯುಕ್ತ ಸಹಕಾರಿಯ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ನಡೆಸಲಾಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಬೆಂಗಳೂರು ನಾಲ್ಕನೇ ವಲಯದ ಸಹಕಾರ ಸಂಘಗಳ ಉಪನಿಬಂಧಕ ಪಿ.ಶಶಿಧರ್ ತರಬೇತಿ ಉದ್ಘಾಟಿಸಿದರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷರಾದ ಜಿ.ನಂಜನಗೌಡ ಅಧ್ಯಕ್ಷತೆ ವಹಿಸಿದ್ದರು. ಸಂಯುಕ್ತ ಸಹಕಾರಿಯ ನಿರ್ದೇಶಕರಾದ ಬಿ.ಎಸ್.ಗುಂಡೂರಾವ್ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ನಿರ್ದೇಶಕರಾದ ಬಿ.ಹೆಚ್.ಕೃಷ್ಣರೆಡ್ಡಿ, ಮಂಜುನಾಥ್ ಭಾಗವಹಿಸಿದರು. ಸಂಯುಕ್ತ ಸಹಕಾರಿಯ ವ್ಯವಸ್ಥಾಪಕ ನಿರ್ದೇಶಕರಾದ ಶರಣಗೌಡ ಜಿ.ಪಾಟೀಲ್ ಪ್ರಾಸ್ತಾವಿಕ ಮಾತನಾಡಿದರು. ಬೆಂಗಳೂರು ಪ್ರಾಂತೀಯ ಅಧಿಕಾರಿ ಶ್ರೀಧರ್ ಸ್ವಾಗತಿಸಿದರು. ಸಂಯುಕ್ತ ಸಹಕಾರಿಯ ಸೌಹಾರ್ದ ಅಭಿವೃದ್ಧಿ ಅಧಿಕಾರಿ ರವಿಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಸೌಹಾರ್ದ ಅಭಿವೃದ್ಧಿ ಅಧಿಕಾರಿ ಅನಿಲ್ ಕುಮಾರ್ ವಂದಿಸಿದರು. ಸಹಕಾರಿಗಳ ಚುನಾವಣಾ ಪೂರ್ವ ತಯಾರಿ ಕುರಿತು ಸಹಕಾರ ಇಲಾಖೆಯ ಅಪರ ನಿಬಂಧಕ ಹೆಚ್.ಎಸ್. ನಾಗರಾಜಯ್ಯ ತರಬೇತಿ ನಡೆಸಿಕೊಟ್ಟರು. 58 ಸೌಹಾರ್ದ ಸಹಕಾರಿಗಳಿಂದ 77 ಜನರು…
ನಿರಂತರ ಅಭಿವೃದ್ಧಿ ಪಥದಲ್ಲಿ ಮುನ್ನಡೆ: ಸಂಘದ ಅಧ್ಯಕ್ಷ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರುಗುತ್ತು ಹೇಳಿಕೆ ಉಳ್ಳಾಲ: ದ.ಕ. ಜಿಲ್ಲೆಯ ಪ್ರತಿಷ್ಠಿತ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘವು 2024-25ನೇ ಸಾಲಿನಲ್ಲಿ 952 ಕೋಟಿ ರೂ.ಗಳ ವ್ಯವಹಾರ ನಡೆಸಿದ್ದು 1.24 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ವರ್ಷದಿಂದ ವರ್ಷಕ್ಕೆ ಸಂಘವು ನಿರಂತರ ನಿರಂತರ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ಎಂದು ಸಂಘದ ಅಧ್ಯಕ್ಷ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರುಗುತ್ತು ಹೇಳಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಪ್ರಧಾನ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘದ ಸದಸ್ಯರು, ಗ್ರಾಹಕರು, ಹಿತೈಷಿಗಳು ಹಾಗೂ ಸಿಬ್ಬಂದಿಗಳ ಅವಿರತ ಸೇವೆಯಿಂದಾಗಿ ಸಂಘವು ನಿರಂತರವಾಗಿ ಪ್ರಗತಿ ಸಾಧಿಸಲು ಸಾಧ್ಯವಾಗಿದೆ ಎಂದು ಹೇಳಿದರು. ವರದಿ ಸಾಲಿನ ಅಂತ್ಯಕ್ಕೆ ಸಂಘವು ‘ಎ’ ತರಗತಿಯ 6,665 ಸದಸ್ಯರನ್ನು ಹೊಂದಿದ್ದು 2.63 ಕೋಟಿ ರೂ. ಗಳ ಪಾಲು ಬಂಡವಾಳವನ್ನು ಹೊಂದಿದೆ. 444 ಕೋಟಿ ರೂ. ಠೇವಣಿ ಸಂಗ್ರಹಿಸಿ 424 ಕೋಟಿ ರೂ.…
ಮಂಗಳೂರು: ಮಂಗಳೂರಿನ ಬಿಜೈನಲ್ಲಿ ಕೇಂದ್ರ ಕಚೇರಿ ಹೊಂದಿರುವ ಶ್ರೀ ಮಂಗಳಾಜ್ಯೋತಿ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತದ 30ನೇ ವಾರ್ಷಿಕ ಮಹಾಸಭೆ ಇತ್ತೀಚೆಗೆ ಸಂಘದ ಅಧ್ಯಕ್ಷರಾದ ರಾಜೇಂದ್ರ ಕುಮಾರ್ ಅಧ್ಯಕ್ಷತೆಯಲ್ಲಿ ಪೊಲೀಸ್ ಲೇನ್ ನಾಸಿಕ್ ಬಿ.ಹೆಚ್. ಬಂಗೇರ ಸಭಾಭವನದಲ್ಲಿ ನಡೆಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಅಧ್ಯಕ್ಷೀಯ ಭಾಷಣ ಮಾಡಿದ ಸಂಘದ ಅಧ್ಯಕ್ಷ ರಾಜೇಂದ್ರ ಕುಮಾರ್ ಅವರು, 2024-25ರಲ್ಲಿ ಠೇವಣಿ ಸಂಗ್ರಹಣೆಯಲ್ಲಿ ಶೇಖಡಾ 17 ಮತ್ತು ಸಾಲ ನೀಡುವಿಕೆಯಲ್ಲಿ ಶೇಖಡಾ 28 ಹೆಚ್ಚುವರಿ ದಾಖಲಾಗಿದ್ದು, ಒಟ್ಟು 1.20 ಕೋಟಿ ರೂ. ಷೇರು ಬಂಡವಾಳವನ್ನು ಹೊಂದಿದೆ. 129 ಕೋಟಿ ರೂಪಾಯಿಗಳ ವ್ಯವಹಾರ ಮಾಡಿದ್ದು, ರೂ. 42,81,085.96 ನಿವ್ವಳ ಲಾಭ ಗಳಿಸಿದೆ. ಲೆಕ್ಕ ಪರಿಶೋಧನೆಯಲ್ಲಿ ‘ಎ’ ಶ್ರೇಣಿಯಲ್ಲಿದೆ ಎಂದು ತಿಳಿಸಿದರು. ಕಾರ್ಯದರ್ಶಿ ಉದಯ ಆರ್ ಸಂಘದ ವಾರ್ಷಿಕ ವರದಿ, ಲೆಕ್ಕಪತ್ರಗಳು ಮತ್ತು ಅನುಪಾಲನಾ ವರದಿಯನ್ನು ಸಭೆಗೆ ಮಂಡಿಸಿದರು. ವಿಶೇಷ ಅಭಿನಂದನಾ ಕಾರ್ಯಕ್ರಮ ಮಂಗಳೂರು ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಆಗಿ ಕೆಲಸ ನಿರ್ವಹಿಸಿದ್ದ ಹಾಗೂ ತನ್ನ ವಿಶೇಷ ಸಮಾಜಸೇವೆಯ ಮೂಲಕ ಸಾವಿರಾರು…
ಬೆಂಗಳೂರು: ಬನವಾಸಿ ಸೌಹಾರ್ದ ಸಹಕಾರಿ ಸಂಘ ನಿಯಮಿತ ಬೆಂಗಳೂರು ಇದರ ಆರನೇ ವಾರ್ಷಿಕ ಮಹಾಸಭೆ ಇತ್ತೀಚೆಗೆ ಬೆಂಗಳೂರಿನ ರಾಜಾಜಿನಗರದ ಮಹಾಗಣಪತಿನಗರದ ಬನವಾಸಿ ಸಭಾಂಗಣದಲ್ಲಿ ನಡೆಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಚಂದ್ರಶೇಖರ ಅಕ್ಕಿಯವರು ಮಾತನಾಡಿ ಸಹಕಾರಿಯು ಒಟ್ಟು 1733 ಸದಸ್ಯರನ್ನು ಹೊಂದಿದ್ದು, ಪ್ರಸಕ್ತ ಸಾಲಿನಲ್ಲಿ ರೂ.24,83,260.11 ನಿವ್ವಳ ಲಾಭ ದಾಖಲಿಸಿದೆ. ಪ್ರಸಕ್ತ ಸಾಲಿನಲ್ಲಿ 14% ಡಿವಿಡೆಂಡ್ ಹಂಚಿಕೆ ಮಾಡಲಾಗುತ್ತಿದೆ. ಬನವಾಸಿ ಸೌಹಾರ್ದ ಸಹಕಾರಿ ಸಂಘವು 2020ರಲ್ಲಿ ಆರಂಭಗೊಂಡು ಪಾರದರ್ಶಕ ಆಡಳಿತ ನಡೆಸುತ್ತ ಪ್ರಗತಿಪಥದಲ್ಲಿ ಮುನ್ನಡೆಯುತ್ತಿದೆ ಎಂದು ತಿಳಿಸಿದರು. ವಾರ್ಷಿಕ ಮಹಾಸಭೆಯಲ್ಲಿ ಬನವಾಸಿ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕರಾದ ಮಂಜುನಾಥ.ಎನ್, ಸಂಜೀವ ಕುಮಾರ್, ನಾರಾಯಣ ಸ್ವಾಮಿ ಹೆಚ್, ಬಾಬು ಎಸ್ ಕುಂಬಾರ್, ಅನಿಲ್ ಕುಮಾರ್ ಬಿ.ಉಲ್ಲಾಳ, ಡಿ.ಎಂ.ಭತ್ತದ್, ಭೀಮಪ್ಪ, ಮೇಘ ವರುಣ್, ರೂಪಶ್ರೀ, ತುಳಸಿರಾಮ್ ಮೌರ್ಯ, ಶೋಭರಾಣಿ ಎಂ, ಜಮುನ ಕುಲಕರ್ಣಿ, ದ್ಯಾಮಪ್ಪ ಎಚ್.ಎಂ ಮತ್ತು ಆಡಳಿತಾಧಿಕಾರಿಗಳಾದ ಶಂಬಯ್ಯ.ಕೆ.ಎಲ್ ಹಾಗೂ ಸಹಕಾರಿಯ ಸಿಬ್ಬಂದಿ ವರ್ಗದವರು, ಸದಸ್ಯರುಗಳು ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ…
