Author: admin

ಮಂಗಳೂರು: ಬಂಟ್ವಾಳದ ಸಮಾಜ ಸೇವಾ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ (ಎಸ್‌ಸಿಡಿಸಿಸಿ ಬ್ಯಾಂಕ್) ವತಿಯಿಂದ ಸಾಧನಾ ಪುರಸ್ಕಾರ ಲಭಿಸಿದೆ. https://chat.whatsapp.com/FCEnlTkAKCC0MGPhXtX4i4 ಶನಿವಾರ ನಡೆದ ಎಸ್‌ಸಿಡಿಸಿಸಿ ಬ್ಯಾಂಕ್ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷರಾದ ಸುರೇಶ್ ಕುಲಾಲ್ ಹಾಗೂ ಪ್ರಧಾನ ವ್ಯವಸ್ಥಾಪಕರಾದ ಮೋಹನ್ ಎಂ.ಕೆ. ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಜನಾರ್ದನ ಕುಲಾಲ್, ನಿರ್ದೇಶಕರಾದ ಬಿ. ರಮೇಶ್ ಸಾಲ್ಯಾನ್, ಪ್ರೇಮನಾಥ್ ಬಂಟ್ವಾಳ್, ಅರುಣ್ ಕುಮಾರ್, ಕಿರಣ್ ಕುಮಾರ್ ಹಾಗೂ ಸುರೇಶ್ ಎನ್. ಉಪಸ್ಥಿತರಿದ್ದರು. ಸಂಘದ ಸಾಧನೆಗೆ ದೊರೆತ ಈ ಪುರಸ್ಕಾರವು ಆಡಳಿತ ಮಂಡಳಿ, ಸಿಬ್ಬಂದಿ ಹಾಗೂ ಸದಸ್ಯರ ಸಹಕಾರ ಮತ್ತು ಪರಿಶ್ರಮಕ್ಕೆ ಸಂದ ಗೌರವವಾಗಿದೆ.

Read More

ಉಡುಪಿ: ಉಡುಪಿ ಕ್ಯಾಥೊಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ (ಎಸ್‌ಸಿಡಿಸಿಸಿ ಬ್ಯಾಂಕ್) ವತಿಯಿಂದ ನೀಡಲಾಗುವ ಪ್ರತಿಷ್ಠಿತ ಸಾಧನಾ ಪ್ರಶಸ್ತಿಯು 4ನೇ ಬಾರಿಗೆ ಲಭಿಸಿದೆ. https://chat.whatsapp.com/FCEnlTkAKCC0MGPhXtX4i4 ಸಹಕಾರಿ ಕ್ಷೇತ್ರದಲ್ಲಿ ಸೊಸೈಟಿ ಸಲ್ಲಿಸುತ್ತಿರುವ ಗಮನಾರ್ಹ ಸೇವೆ, ಉತ್ತಮ ಕಾರ್ಯನಿರ್ವಹಣೆ ಹಾಗೂ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. ಸೊಸೈಟಿಯ ಪರವಾಗಿ ಅಧ್ಯಕ್ಷರಾದ ಲೂವಿಸ್ ಲೋಬೊ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂದೀಪ್ ಫೆರ್ನಾಂಡೀಸ್ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸೊಸೈಟಿಯ ಉಪಾಧ್ಯಕ್ಷರಾದ ಜೇಮ್ಸ್ ಡಿ’ಸೋಜ ಹಾಗೂ ನಿರ್ದೇಶಕರಾದ ಡಾ.ನೇರಿ ಕರ್ನೆಲಿಯೋ, ಮ್ಯಾಕ್ಸಿಮ್ ಡಿ’ಸೋಜ, ಓನಿಲ್ ಡಿ’ಸೋಜ ಮತ್ತು ಫ್ರಾಂಕ್ ಪೀಟರ್ ಕಾರ್ಡೋಜ ಉಪಸ್ಥಿತರಿದ್ದರು. ಸತತ ನಾಲ್ಕನೇ ಬಾರಿಗೆ ಎಸ್‌ಸಿಡಿಸಿಸಿ ಬ್ಯಾಂಕ್ ಸಾಧನಾ ಪ್ರಶಸ್ತಿ ಲಭಿಸಿರುವುದು ಉಡುಪಿ ಕ್ಯಾಥೊಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಸಹಕಾರಿ ಸೇವಾ ಬದ್ಧತೆಗೆ ಸಂದ ಗೌರವವಾಗಿದೆ.

Read More

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 2025-26ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ “ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ 2025-26” ಪ್ರಶಸ್ತಿಯನ್ನು ದಿನಾಂಕ 22.08.2026 ರಂದು ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2025-26ನೇ ಸಾಲಿನ ವಾರ್ಷಿಕ ಸಭೆಯಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ| ಎಂ. ಎನ್. ರಾಜೇಂದ್ರ ಕುಮಾರ್ ರವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಇವರಿಗೆ ನೀಡಿ ಗೌರವಿಸಿದರು. https://chat.whatsapp.com/FCEnlTkAKCC0MGPhXtX4i4 ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು 2012ರಲ್ಲಿ ಪ್ರಾರಂಭವಾಗಿ ದಶಮಾನೋತ್ಸವಕ್ಕೆ ನಗರದ ಪಡೀಲ್‌ನಲ್ಲಿ ಸ್ವಂತ ಪ್ರಧಾನ ಕಛೇರಿಯನ್ನು ಹೊಂದಿರುತ್ತದೆ. ಪ್ರಸ್ತುತ ದ.ಕ ಹಾಗೂ ಉಡುಪಿ ಜಿಲ್ಲೆಯಾದ್ಯಂತ 35 ಶಾಖೆಗಳನ್ನು ಹೊಂದಿರುವ ಸಂಘವು 2025-26 ನೇ ಸಾಲಿನಲ್ಲಿ ಸದಸ್ಯರಿಂದ ಒಟ್ಟು ರೂ. 179.28 ಲಕ್ಷ ಷೇರು ಬಂಡವಾಳ, ರೂ.…

Read More

ಪುತ್ತೂರು: ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) ವತಿಯಿಂದ 15ನೇ ಬಾರಿ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ ಲಭಿಸಿದೆ. https://chat.whatsapp.com/FCEnlTkAKCC0MGPhXtX4i4 ಶನಿವಾರ ಮಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್ ರಾಜೇಂದ್ರ ಕುಮಾರ್ ಅವರು ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಎನ್. ಮನ್ಮಥ, ಎಸ್.ಬಿ. ಜಯರಾಮ ರೈ, ಕುಶಾಲಪ್ಪ ಗೌಡ ಪೂವಾಜೆ, ಸಹಕಾರ ಸಂಘಗಳ ಉಪನಿಬಂಧಕ ರಮೇಶ್, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಚೇತನ್ ಕುಮಾರ್ ಕೋಡಿಬೈಲು, ನಿರ್ದೇಶಕರಾದ ಉದಯ ರೈ ಮಾದೋಡಿ ಹಾಗೂ ಪ್ರಕಾಶ್ ರೈ ಸಾರಕರೆ ಉಪಸ್ಥಿತರಿದ್ದರು. ಸಂಘದ ನಿರಂತರ ಸಾಧನೆ, ಉತ್ತಮ ಆಡಳಿತ ಹಾಗೂ ಸದಸ್ಯರು ಮತ್ತು…

Read More

ಬಂಟ್ವಾಳ: ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಲ್ಲಿ ಶನಿವಾರ ನಡೆದ ಬ್ಯಾಂಕಿನ ಮಹಾಸಭೆಯಲ್ಲಿ ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಸಾಧನಾ ಪುರಸ್ಕಾರ ನೀಡಿ ಗೌರವಿಸಲಾಯಿತು. https://chat.whatsapp.com/FCEnlTkAKCC0MGPhXtX4i4 ಎಸ್ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ ಎನ್ ರಾಜೇಂದ್ರ ಕುಮಾರ್ ಅವರು ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಸೊಸೈಟಿ ಅಧ್ಯಕ್ಷರಾದ ಜೀವನ್ ಲಾಯ್ಡ್ ಪಿಂಟೋ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೆಲಿನ್ ಗ್ರೇಸಿ ಡಿಸೋಜ ಅವರಿಗೆ ಪುರಸ್ಕಾರ ನೀಡಿ ಗೌರವಿಸಿದರು.

Read More

ಮಂಗಳೂರು: ದೈವಜ್ಞ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್, ಮಂಗಳೂರು ಸಂಸ್ಥೆಯ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಅಭಿವೃದ್ಧಿಯನ್ನು ಗುರುತಿಸಿ 2025-26ನೇ ಸಾಲಿನ ಸಾಧನಾ ಪ್ರಶಸ್ತಿಯನ್ನು ನೀಡಲಾಗಿದೆ. https://chat.whatsapp.com/FCEnlTkAKCC0MGPhXtX4i4 ಎಸ್ಸಿಡಿಸಿಸಿ ಬ್ಯಾಂಕ್ ಲಿಮಿಟೆಡ್, ಮಂಗಳೂರು ವತಿಯಿಂದ ನೀಡಲಾಗುವ ಈ ಸಾಧನಾ ಪ್ರಶಸ್ತಿಯನ್ನು ದೈವಜ್ಞ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಸತತ ನಾಲ್ಕನೇ ಬಾರಿಗೆ ಪಡೆದುಕೊಂಡಿದೆ. ಸಂಸ್ಥೆಯ ಉತ್ತಮ ಕಾರ್ಯನಿರ್ವಹಣೆ, ವ್ಯವಹಾರದಲ್ಲಿ ಸಾಧಿಸಿದ ಪ್ರಗತಿ ಹಾಗೂ ಸರ್ವತೋಮುಖ ಅಭಿವೃದ್ಧಿಗೆ ದೊರೆತ ಈ ಪ್ರಶಸ್ತಿ, ಸಂಸ್ಥೆಯ ಆಡಳಿತ ಮಂಡಳಿ, ಸಿಬ್ಬಂದಿ ಹಾಗೂ ಸದಸ್ಯರ ನಿರಂತರ ಪ್ರಯತ್ನಕ್ಕೆ ಸಂದ ಗೌರವವಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಂಸ್ಥೆಯ ಪ್ರತಿನಿಧಿಗಳು ಪ್ರಶಸ್ತಿ ಹಾಗೂ ಪ್ರಮಾಣಪತ್ರವನ್ನು ಸ್ವೀಕರಿಸಿದರು.

Read More

ಮಂಗಳೂರು: ಹಳೆಯಂಗಡಿಯ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಗೆ ಶನಿವಾರ ನಡೆದ ಎಸ್‌ಸಿಡಿಸಿಸಿ ಬ್ಯಾಂಕ್‌ ಮಹಾಸಭೆಯಲ್ಲಿ ಸಾಧನಾ ಪುರಸ್ಕಾರ ನೀಡಿ ಗೌರವಿಸಲಾಯಿತು. https://chat.whatsapp.com/FCEnlTkAKCC0MGPhXtX4i4 ಸಂಘವು ಮಾಡಿರುವ ಸಾಧನೆಯನ್ನು ಪುರಸ್ಕರಿಸಿ ಸತತ ಮೂರನೇ ಬಾರಿ ಈ ಪ್ರಶಸ್ತಿ ನೀಡಲಾಯಿತು. ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ನಡೆದ ಸಮಾರಂಭದಲ್ಲಿ ಸಹಕಾರ ರತ್ನ ಡಾ.ಎಂ ಎನ್‌ ರಾಜೇಂದ್ರ ಕುಮಾರ್‌ ಅವರು, ಪ್ರಿಯದರ್ಶಿನಿ ಸೊಸೈಟಿಯ ಅಧ್ಯಕ್ಷರಾದ ವಸಂತ ಬೆರ್ನಾಡ್‌, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ ಪಂಜ ಅವರಿಗೆ ಪುರಸ್ಕಾರ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಸಹಕಾರ ಸಂಘಗಳ ದ.ಕ. ಜಿಲ್ಲಾ ಉಪನಿಬಂಧಕರಾದ ಎಚ್‌.ಎನ್‌ ರಮೇಶ್‌, ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷರಾದ ಶಶಿಕುಮಾರ್‌ ರೈ ಬಾಲ್ಯೊಟ್ಟು, ಎಸ್‌ಸಿಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷರಾದ ವಿನಯ ಕುಮಾರ್‌ ಸೂರಿಂಜೆ, ನಿರ್ದೇಶಕರಾದ ದೇವಿಪ್ರಸಾದ್‌ ಶೆಟ್ಟಿ ಬೆಳಪು, ಮೋನಪ್ಪ ಶೆಟ್ಟಿ ಎಕ್ಕಾರು, ಸದಾಶಿವ ಉಳ್ಳಾಲ್‌ ಮೊದಲಾದವರು ಹಾಜರಿದ್ದರು.

Read More

ಮಂಗಳೂರು: ಇಲ್ಲಿನ ದ.ಕ. ಕೇಂದ್ರ ಸಹಕಾರ ಸಗಟು ಮಾರಾಟ ಸಂಘಕ್ಕೆ (ಜನತಾ ಬಜಾರ್‌) ಎಸ್‌ಸಿಡಿಸಿಸಿ ಬ್ಯಾಂಕ್‌ ಮಹಾಸಭೆಯಲ್ಲಿ ಸಾಧನಾ ಪುರಸ್ಕಾರ ನೀಡಿ ಗೌರವಿಸಲಾಯಿತು. https://chat.whatsapp.com/FCEnlTkAKCC0MGPhXtX4i4 ಸಂಘವು ಮಾಡಿರುವ ಸಾಧನೆಯನ್ನು ಪುರಸ್ಕರಿಸಿ ಈ ಪ್ರಶಸ್ತಿ ನೀಡಲಾಯಿತು. ಶನಿವಾರ ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ನಡೆದ ಸಮಾರಂಭದಲ್ಲಿ ಸಹಕಾರ ರತ್ನ ಡಾ.ಎಂ ಎನ್‌ ರಾಜೇಂದ್ರ ಕುಮಾರ್‌ ಅವರು, ಜನತಾ ಬಜಾರ್‌ ಅಧ್ಯಕ್ಷರಾದ ಪ್ರಸನ್ನ ಕೆ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ನಳಿನಿ ಅವರಿಗೆ ಪುರಸ್ಕಾರ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಜನತಾ ಬಜಾರ್‌ ಉಪಾಧ್ಯಕ್ಷರಾದ ಮದಲಾಕ್ಷಿ ರೈ, ನಿರ್ದೇಶಕರಾದ ಪಕೀರಪ್ಪ, ಜನಾರ್ದನ ಬಿ, ಸುಜಯ ಅಶೋಕ್‌, ಸಹಕಾರ ಸಂಘಗಳ ದ.ಕ. ಜಿಲ್ಲಾ ಉಪನಿಬಂಧಕರಾದ ಎಚ್‌.ಎನ್‌ ರಮೇಶ್‌, ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷರಾದ ಶಶಿಕುಮಾರ್‌ ರೈ ಬಾಲ್ಯೊಟ್ಟು, ಎಸ್‌ಸಿಡಿಸಿಸಿ ಬ್ಯಾಂಕ್‌ ನಿರ್ದೇಶಕರಾದ ದೇವಿಪ್ರಸಾದ್‌ ಶೆಟ್ಟಿ ಬೆಳಪು ಮೊದಲಾದವರು ಹಾಜರಿದ್ದರು.

Read More

ವಿಟ್ಲ: ಎಸ್‌ಸಿಡಿಸಿಸಿ ಬ್ಯಾಂಕಿನಲ್ಲಿ ಶನಿವಾರ ನಡೆದ ವಾರ್ಷಿಕ ಮಹಾಸಭೆಯಲ್ಲಿ ವಿಟ್ಲ ಗ್ರಾಮೀಣ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ ಲಭಿಸಿದೆ. ಸಂಘಕ್ಕೆ ಸತತ ಐದನೇ ಬಾರಿ ಎಸ್‌ಸಿಡಿಸಿಸಿ ಬ್ಯಾಂಕ್‌ ಸಾಧನಾ ಪುರಸ್ಕಾರ ಲಭಿಸಿದೆ. https://chat.whatsapp.com/FCEnlTkAKCC0MGPhXtX4i4 2025-26ನೇ ಆರ್ಥಿಕ ಸಾಲಿನಲ್ಲಿ ವಿಟ್ಲ ಗ್ರಾಮೀಣ ಸಹಕಾರಿ ಸಂಘವು ರೂ.1088 ಕೋಟಿ ವ್ಯವಹಾರ, ರೂ.149. 84 ಕೋಟಿ ಠೇವಣಿ, ರೂ.125.63 ಕೋಟಿ ಸಾಲ ಹಾಗೂ ರೂ. 4.04 ಕೋಟಿ ಲಾಭ ಗಳಿಸಿ, ಅಭೂತಪೂರ್ವ ಸಾಧನೆ ಮಾಡಿ ಈ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ.ಎನ್ ರಾಜೇಂದ್ರ ಕುಮಾರ್ ಅವರು ವಿಟ್ಲ ಗ್ರಾಮೀಣ ಸಹಕಾರಿ ಸಂಘದ ಅಧ್ಯಕ್ಷರಾದ ಎಚ್ ಜಗನ್ನಾಥ ಸಾಲಿಯಾನ್ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೃಷ್ಣ ಮುರಳಿ ಶಾಮ್ ಕೆ ಅವರನ್ನು ಪ್ರಶಸ್ತಿ ನೀಡಿ ಸಭೆಯಲ್ಲಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಸಹಕಾರ ಸಂಘಗಳ ಉಪನಿಬಂಧಕರಾದ ಎಚ್ ಎನ್ ರಮೇಶ್, ಸಂಘದ ನಿರ್ದೇಶಕರಾದ ವಿಶ್ವನಾಥ ಎಂ, ದಯಾನಂದ ಆಳ್ವ ಮತ್ತಿತರರು ಉಪಸ್ಥಿತರಿದ್ದರು.

Read More

ಮಹಾರಾಷ್ಟ್ರದಲ್ಲಿ ನಾಮಪತ್ರ ಹಂತದಲ್ಲೇ ನಿರಾಕರಿಸುವ ಅಧಿಕಾರ ರಿಟರ್ನಿಂಗ್‌ ಅಧಿಕಾರಿಗೆ ಇಲ್ಲ: ಕಾನೂನು ಅಭಿಪ್ರಾಯ ಮುಂಬೈ: ಸಹಕಾರಿ ಬ್ಯಾಂಕ್‌ಗಳ ನಿರ್ದೇಶಕರಿಗೆ ಅನ್ವಯವಾಗುತ್ತಿರುವ 10 ವರ್ಷಗಳ ಅಧಿಕಾರಾವಧಿ ನಿರ್ಬಂಧದ ಹಿನ್ನೆಲೆಯಲ್ಲಿ ಚುನಾವಣೆಗೆ ಸ್ಪರ್ಧಿಸಲು ಎದುರಾಗಿರುವ ಅಡ್ಡಿ ಮಹಾರಾಷ್ಟ್ರದಲ್ಲಿ ಸಡಿಲವಾಗುವ ಸಾಧ್ಯತೆ ಕಂಡುಬಂದಿದೆ. ನಾಮಪತ್ರ ಪರಿಶೀಲನೆಯ ಹಂತದಲ್ಲೇ ಕೇವಲ ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆಯ ಆಧಾರದ ಮೇಲೆ ಅಭ್ಯರ್ಥಿಯ ನಾಮಪತ್ರವನ್ನು ತಿರಸ್ಕರಿಸುವ ಅಧಿಕಾರ ರಿಟರ್ನಿಂಗ್‌ ಅಧಿಕಾರಿಗೆ ಇದೆಯೇ ಎಂಬುದರ ಕುರಿತು ಮಹಾರಾಷ್ಟ್ರ ಸಹಕಾರ ಇಲಾಖೆ ಕಾನೂನು ಅಭಿಪ್ರಾಯವನ್ನು ಪರಿಶೀಲಿಸುತ್ತಿದೆ. https://chat.whatsapp.com/FCEnlTkAKCC0MGPhXtX4i4 ಮಹಾರಾಷ್ಟ್ರ ಸ್ಟೇಟ್ ಕೋ-ಆಪರೇಟಿವ್ ಬ್ಯಾಂಕ್‌ನ ಆಡಳಿತಾಧಿಕಾರಿ ವಿದ್ಯಾಧರ ಅನಾಸ್ಕರ್ ಅವರು ನೀಡಿರುವ ಕಾನೂನು ಅಭಿಪ್ರಾಯದಲ್ಲಿ, ಬ್ಯಾಂಕಿಂಗ್ ರೆಗ್ಯುಲೇಷನ್ ಆಕ್ಟ್, 1949ರ ಅಡಿಯಲ್ಲಿ 10 ವರ್ಷಗಳ ಅಧಿಕಾರಾವಧಿ ಮಿತಿ ಒಂದು ಶಾಸನಬದ್ಧ ಅನರ್ಹತೆ ಆಗಿರಬಹುದು. ಆದರೆ, ಮಹಾರಾಷ್ಟ್ರ ಸಹಕಾರಿ ಸಂಘಗಳ ಕಾಯ್ದೆ ಹಾಗೂ 2014ರ ಸಹಕಾರಿ ಚುನಾವಣಾ ನಿಯಮಗಳು ಇಂತಹ ಅನರ್ಹತೆಯ ಆಧಾರದ ಮೇಲೆ ನಾಮಪತ್ರವನ್ನು ತಿರಸ್ಕರಿಸುವ ಅಧಿಕಾರವನ್ನು ರಿಟರ್ನಿಂಗ್‌ ಅಧಿಕಾರಿಗೆ ಸ್ಪಷ್ಟವಾಗಿ ನೀಡಿಲ್ಲ ಎಂಬ ಅಭಿಪ್ರಾಯವನ್ನು…

Read More