Author: admin

ಬೆಂಗಳೂರು: ಗುಟ್ಟೇ ಬಸವಣ್ಣ ಸೌಹಾರ್ದ ಸಹಕಾರಿ ನಿಯಮಿತದ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಸೆ.14ರಂದು ಬೆಳಗ್ಗೆ 11 ಗಂಟೆಗೆ ದ್ವಾರಕಾನಗರದ ಚಿಕ್ಕಬಾಣಾವರ ಪುರಸಭೆ ಸಮುದಾಯ ಭವನದ ಪ್ರಾಥಮಿಕ ಆರೋಗ್ಯ ಕೇಂದ್ರ ಆವರಣದಲ್ಲಿ ನಡೆಯಲಿದೆ. https://chat.whatsapp.com/EbVKVnWB6rlHT1mWtsgbch ಸೊಸೈಟಿಯ ಅಧ್ಯಕ್ಷ ಲೋಕೇಶ್ ಇವರ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಲಾಗಿದೆ. ಈ ಸಂಬಂಧ ಈಗಾಗಲೇ ತಿಳುವಳಿಕೆ ನೀಡಲಾಗಿದ್ದು ಮಹಾಸಭೆಗೆ ಹಾಜರಾಗಲು ವಿನಂತಿಸಲಾಗಿದೆ. ಸದಸ್ಯರ ಪ್ರತಿಭಾವಂತ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ 90% ಗಿಂತ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಪ್ರೋತ್ಸಾಹಕ ಬಹುಮಾನಗಳನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ ಮೊ: 9731931923 ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com

Read More

ರಾಜ್ಯಪತ್ರದಲ್ಲಿ ಪ್ರಕಟವಾಗುವುದರೊಂದಿಗೆ ಅಧಿಕೃತ ಜಾರಿ ಬೆಂಗಳೂರು: ಕಳೆದ ವಿಧಾನ ಮಂಡಲದ ಅಧಿವೇಶನದಲ್ಲಿ ಮಂಡನೆಯಾಗಿ ಉಭಯ ಸದನಗಳಲ್ಲಿ ಅಂಗೀಕಾರಗೊಂಡು ರಾಜ್ಯಪಾಲರ ಅಂಕಿತಕ್ಕೆ ಬಂದಿದ್ದ ಸಹಕಾರಿ ಸಂಘಗಳ ತಿದ್ದುಪಡಿ ಮಸೂದೆಗೆ ಶುಕ್ರವಾರ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಸಹಿ ಹಾಕಿದ್ದು ಕಾಯ್ದೆ ರೂಪದಲ್ಲಿ ಜಾರಿಗೆ ಬಂದಿದೆ. ಈ ಕುರಿತು ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟವಾಗುವುದರೊಂದಿಗೆ ಈ ಮಸೂದೆ ಅಧಿಕೃತವಾಗಿ ಜಾರಿಗೆ ಬಂದಂತಾಗಿದೆ. https://chat.whatsapp.com/EbVKVnWB6rlHT1mWtsgbch ಸೌಹಾರ್ದ ಸಹಕಾರಿ ಸಂಘಗಳ ಪ್ರಾಥಮಿಕ, ಮಾಧ್ಯಮಿಕ ಅಥವಾ ಒಕ್ಕೂಟ ಅಥವಾ ಅಪೆಕ್ಸ್‌ ಸಹಕಾರಿಗಳ ಸಂಘದ ಆಡಳಿತ ಮಂಡಳಿಯಲ್ಲಿ ಎಸ್‌ಸಿ, ಎಸ್‌ಟಿ ತಲಾ ಒಂದು, ಒಬಿಸಿ ಮತ್ತು ಮಹಿಳೆಯರಿಗೆ ತಲಾ ಎರಡು ಸದಸ್ಯ ಸ್ಥಾನ ಮೀಸಲಿಡುವ ಕಾಯ್ದೆ ಜಾರಿಯಾಗಿದೆ. ಸೌಹಾರ್ದ ಸಹಕಾರಿ ಬ್ಯಾಂಕ್‌ ಹೊರತುಪಡಿಸಿ ಪ್ರತಿಯೊಂದು ಸಹಕಾರಿಯೂ ಸಹಕಾರಿ ವರ್ಷದ ಅಂತ್ಯಕ್ಕೆ ಹೊಂದಿರುವ ಒಟ್ಟು ಠೇವಣಿಯಲ್ಲಿ ಶೇ.೨೦ರಷ್ಟನ್ನು ಶಾಸನಬದ್ಧ ದ್ರವ್ಯತಾ ಮೀಸಲು ರೂಪದಲ್ಲಿ ನಿರ್ವಹಣೆ ಕಡ್ಡಾಯವಾಗಿದೆ. ಕರ್ನಾಟಕ ರಾಜ್ಯಪ್ರತದ ಯಥಾಪ್ರತಿಯನ್ನು ಇಲ್ಲಿ ಹಾಕಲಾಗಿದೆ.

Read More

ಮಂಗಳೂರು: ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ, ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ ನೇತೃತ್ವದಲ್ಲಿ ಸೆ.14ರಂದು ಅವಿಭಜಿತ ದ.ಕ. ಜಿಲ್ಲೆಯ ಸಮಸ್ತ ಸಹಕಾರಿ ಬಂಧುಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ‘ಧರ್ಮ ಜಾಗೃತಿ ಯಾತ್ರೆ’ ಆಯೋಜಿಸಲಾಗಿದೆ. https://chat.whatsapp.com/EbVKVnWB6rlHT1mWtsgbch ಯಾತ್ರೆಯಲ್ಲಿ 1,500ಕ್ಕೂ ಅಧಿಕ ಸಹಕಾರಿ ಸಂಘಗಳ ಪ್ರತಿನಿಧಿಗಳು, 3 ಸಾವಿರಕ್ಕೂ ಹೆಚ್ಚು ವಾಹನಗಳು ಭಾಗವಹಿಸಲಿವೆ. ಉಭಯ ಜಿಲ್ಲೆಗಳ ವಿವಿಧೆಡೆಯಿಂದ ಮಧ್ಯಾಹ್ನ 12 ಗಂಟೆಯೊಳಗೆ ಉಜಿರೆಗೆ ಆಗಮಿಸುವ ಸಹಕಾರಿ ಬಂಧುಗಳು ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಜಾಗೃತಿ ಯಾತ್ರೆ ನಡೆಸಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ತಿಳಿಸಿದರು. ಶುಕ್ರವಾರ ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ನಡೆದ ಸುದ್ದಿಗೋಷ್ಠಿ ಮಾತನಾಡಿದ ಅವರು, ಉಜಿರೆಯಿಂದ ಹೊರಟ ಸಹಕಾರಿಗಳ ಯಾತ್ರೆ ಧರ್ಮಸ್ಥಳ ಕ್ಷೇತ್ರ ತಲುಪಿದ ಬಳಿಕ ಮಧ್ಯಾಹ್ನ ಅಮೃತವರ್ಷಿಣಿ ಸಭಾಭವನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಆಶೀರ್ವಚನ ನೀಡಲಿದ್ದು, ಡಾ.ಎಂ.ಎನ್.ರಾಜೇಂದ್ರ ಕುಮಾರ್ ಸಹಕಾರಿ ಬಂಧುಗಳಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. ಸಹಬಾಳ್ವೆಯ ಪ್ರತೀಕವಾಗಿರುವ…

Read More

ಮಂಗಳೂರು: ಮಂಗಳೂರು ಶಿಕ್ಷಕರ ಸಹಕಾರಿ ಕ್ರೆಡಿಟ್ ಸಹಕಾರಿ ಸಂಘದ 2024-25ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸೆ.20ರಂದು ಶನಿವಾರ ಸಂಘದ ಅಧ್ಯಕ್ಷರಾದ ಕೆ.ಎಂ.ಕೆ ಮಂಜನಾಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. https://chat.whatsapp.com/EbVKVnWB6rlHT1mWtsgbch ಪೂರ್ವಾಹ್ನ 10ಕ್ಕೆ ಮಂಗಳೂರಿನ ಕರಂಗಲ್ಪಾಡಿ ರಸ್ತೆಯ ಸಂತ ಅಲೋಶಿಯಸ್ ಪ್ರಾಥಮಿಕ  ಶಾಲಾ ಸಭಾಂಗಣದಲ್ಲಿ ಸಭೆ ಜರುಗಲಿರುವುದೆಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರ್ಮಿಳಾ ಕೆ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com

Read More

ಸಂಪೂರ್ಣ ಡಿಜಿಟಲೀಕರಣ ಸೇರಿದಂತೆ ಹಲವು ಹೊಸತನ: ಅಧ್ಯಕ್ಷ ಕಿಶೋರ್ ಕುಮಾರ್ ಕೊಳತ್ತಾಯ ಮಾಹಿತಿ ಪುತ್ತೂರು: ಶತಮಾನ ಕಂಡಿರುವ ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಗ್ರಾಹಕರಿಗೆ ಪ್ರಯೋಜನವಾಗುವ ರೀತಿಯಲ್ಲಿ ಹಲವು ಹೊಸತನಗಳೊಂದಿಗೆ ಸಂಪೂರ್ಣವಾಗಿ ಡಿಜಿಟಲೀಕರಣಗೊಳ್ಳುತ್ತಿದ್ದು ಇದರ ಪ್ರಮುಖ ಯೋಜನೆಗಳಿಗೆ ಸೆ.14ರಂದು ನಡೆಯುವ 116ನೇ ವಾರ್ಷಿಕ ಮಹಾಸಭೆಯಲ್ಲಿ ಚಾಲನೆ ನೀಡಲಾಗುವುದು ಎಂದು ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್ ಅಧ್ಯಕ್ಷ ಕಿಶೋರ್ ಕೊಳತ್ತಾಯ ಎನ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. https://chat.whatsapp.com/EbVKVnWB6rlHT1mWtsgbch 2024-25ನೇ ಸಾಲಿನಲ್ಲಿ ನಮ್ಮ ಬ್ಯಾಂಕ್ ಇತಿಹಾಸದಲ್ಲಿ ಒಂದು ಹೊಸ ಮೈಲುಗಲ್ಲನ್ನು ಸಾಧಿಸಿದೆ. ವ್ಯವಹಾರದಲ್ಲಿ ಗಣನೀಯ ಹೆಚ್ಚಳ ಸಾಧಿಸಿದ್ದು, ಒಟ್ಟು ಠೇವಣಿ ರೂ.74.87 ಕೋಟಿ, ಒಟ್ಟು ಸಾಲ ರೂ.51.39 ಕೋಟಿಗಳಾಗಿದ್ದು, ಒಟ್ಟು ವ್ಯವಹಾರ ರೂ.126.26 ಕೋಟಿ ದಾಟಿದೆ. ಈ ವರ್ಷದ ನಿವ್ವಳ ಲಾಭ ರೂ.1.04 ಕೋಟಿ ಆಗಿದೆ. ಹಲವು ಯೋಜನೆಗಳಿಗೆ ಭಾನುವಾರದ ಮಹಾಸಭೆಯಲ್ಲಿ ಚಾಲನೆ ನೀಡಲಾಗುವುದು. ಈ ಆರ್ಥಿಕ ವರ್ಷಾಂತ್ಯದೊಳಗೆ ಬ್ಯಾಂಕನ್ನು ಸಂಪೂರ್ಣ ಡಿಜಿಟಲೀಕರಣ ಮಾಡುವತ್ತ ನಮ್ಮ ಪ್ರಯತ್ನ ಸಾಗಲಿದೆ ಎಂದು ಮಾಹಿತಿ…

Read More

ವಾರ್ಷಿಕ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಘೋಷಣೆ ಬೆಳ್ತಂಗಡಿ: ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಗುರುವಾರ ಸಂಘದ ಸಭಾಂಗಣದಲ್ಲಿ ನಡೆಯಿತು. https://chat.whatsapp.com/EbVKVnWB6rlHT1mWtsgbch ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘವು 2024-25ನೇ ಸಾಲಿನಲ್ಲಿ ವಾರ್ಷಿಕ 233.13 ಕೋಟಿ ರೂ. ವ್ಯವಹಾರ ನಡೆಸಿದ್ದು, 1.20 ಕೋಟಿ ರೂ. ಲಾಭ ಗಳಿಸಿದೆ. ಸದಸ್ಯರಿಗೆ ಶೇ.15 ಡಿವಿಡೆಂಡ್ ನೀಡಲು ತೀರ್ಮಾನಿಸಿದೆ. ಮಳೆ ವಿಪರೀತವಾದ್ದರಿಂದ ಬೆಳೆಗಳಿಗೆ ಕೊಳೆ ರೋಗ ಬಂದು ಭವಿಷ್ಯದ ಬಗ್ಗೆ ಯೋಚನೆ ಮಾಡುವ ಪರಿಸ್ಥಿತಿ ಬಂದಿದೆ. ಸರಕಾರ ಈ ಬಾರಿ ಬೆಳೆ ವಿಮೆ ಮೊತ್ತವನ್ನು ಆದಷ್ಟು ಬೇಗ ಬಿಡುಗಡೆಗೊಳಿಸಿ ರೈತರ ಹಿತ ಕಾಪಾಡಬೇಕು ಎಂದು ಸರಕಾರವನ್ನು ಒತ್ತಾಯಿಸಲಾಗುವುದು ಎಂದು ಹೇಳಿದರು. ಸಂಘದಲ್ಲಿ 36 ಕೋಟಿ ರೂ. ಅಧಿಕ ಠೇವಣಿಯಿದ್ದು, 42 ಕೋಟಿ ರೂ. ಹೊರಬಾಕಿ ಸಾಲದಲ್ಲಿ ಶೇ.99ರಷ್ಟು ವಸೂಲಾತಿ ಮಾಡಿ ಆಡಿಟ್ ವರ್ಗಿಕರಣದಲ್ಲಿ ಎ ತರಗತಿ ಪಡೆದಿದೆ. ಈ ಸಾಧನೆಗೆ ಎಸ್‌ಸಿಡಿಸಿಸಿ…

Read More

ಕಾರ್ಕಳ: ಬೆಳ್ಮಣ್‌ನ ಕುಂಭನಿಧಿ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಮೊದಲನೇ ಮಹಾಸಭೆ ಇತ್ತೀಚೆಗೆ ಮುಲ್ಲಡ್ಕ ನಾನಿಲ್ತಾರಿನ ಕುಲಾಲ ಸಭಾಭವನದಲ್ಲಿ ಸೊಸೈಟಿಯ ಅಧ್ಯಕ್ಷ ಕುಶ ಆರ್‌.ಮೂಲ್ಯ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. https://chat.whatsapp.com/EbVKVnWB6rlHT1mWtsgbch ಸೊಸೈಟಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಬ್ರಿಜೇಶ್‌ ಕುಲಾಲ್‌ ವಾರ್ಷಿಕ ವರದಿ ಮಂಡಿಸಿದರು. ಮುಂದಿನ ಸಾಲಿನ ಅಂದಾಜು ಆಯವ್ಯಯ ಮಂಡಿಸಿ ಮಂಜೂರಾತಿ ಪಡೆಯಲಾಯಿತು. ಲೆಕ್ಕಪರಿಶೋಧಕರ ನೇಮಕಾತಿ ಕುರಿತು ನಿರ್ಣಯ ಕೈಗೊಳ್ಳಲಾಯಿತು. ಸಂಘದ ಉಪಾಧ್ಯಕ್ಷ ಜಗನ್ನಾಥ ಮೂಲ್ಯ, ನಿರ್ದೇಶಕರಾದ ಜಯರಾಮ್‌ ಕುಲಾಲ್‌, ಬೊಗ್ಗು ಮೂಲ್ಯ ಬೇಲಾಡಿ, ಶಂಕರ್‌ ಮೂಲ್ಯ ಇನ್ನಾ, ಗೋಪಾಲ ಮೂಲ್ಯ, ಗಣೇಶ್‌ ಮೂಲ್ಯ, ರಾಜೇಶ್‌ ಕುಲಾಲ್‌, ದೀಪಕ್‌ ಕುಲಾಲ್‌, ಸುರೇಶ್‌ ಮೂಲ್ಯ, ನಂದಳಿಕೆ ಸುಗಂಧಿ ಮೂಲ್ಯ ಉಪಸ್ಥಿತರಿದ್ದರು. ನಿರ್ದೇಶಕ ರಮಾನಂದ ಮೂಲ್ಯ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬ್ರಿಜೇಶ್‌ ಕುಲಾಲ್‌ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕಿ ಪ್ರತಿಮಾ ಶ್ರೀಧರ್‌ ವಂದಿಸಿದರು. ಸುಶ್ಮಿತಾ ಹಾಗೂ ಆಶಾ ವರದರಾಜ್‌ ಸಹಕರಿಸಿದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com

Read More

ಕಡಬ: ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಪ್ರಸಕ್ತ ಸಾಲಿನಲ್ಲಿ ಒಟ್ಟು 882.39 ಕೋಟಿ ರೂ. ವ್ಯವಹಾರ ನಡೆಸಿದ್ದು 3.29 ಕೋಟಿ ರೂ. ಲಾಭ ಗಳಿಸಿದೆ. ಈ ಪೈಕಿ ಸದಸ್ಯರಿಗೆ ಶೇ.16 ಲಾಭಾಂಶ ವಿತರಿಸಲಾಗುವುದು ಎಂದು ಸಂಘದ ಅಧ್ಯಕ್ಷ ರಮೇಶ್ ಕಲ್ಪುರೆ ಹೇಳಿದ್ದಾರೆ. https://chat.whatsapp.com/EbVKVnWB6rlHT1mWtsgbch ಕಡಬದ ಅನುಗ್ರಹ ಸಭಾಭವನದಲ್ಲಿ ಇತ್ತೀಚೆಗೆ ಜರಗಿದ ಸಂಘದ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದರು. ಸಂಘದ ವತಿಯಿಂದ ಸುಸಜ್ಜಿತ ರೈತಭವನ ನಿರ್ಮಿಸಿದರೆ ಅನುಕೂಲ ಎನ್ನುವ ಸದಸ್ಯ ನಾರಾಯಣ ಪೂಜಾರಿ ಪಾಲಪ್ಪೆ ಅವರ ಸಲಹೆಗೆ ಪ್ರತಿಕ್ರಿಯಿಸಿದ ರಮೇಶ್‌ ಕಲ್ಪುರೆ, ಆ ನಿಟ್ಟಿನಲ್ಲಿ ಈಗಾಗಲೇ ಕಾರ್ಯೋನ್ಮುಖರಾಗಿದ್ದೇವೆ. ಸಂಘದ ಹೆಸರಿನಲ್ಲಿ ಜಮೀನು ಖರೀದಿಸಿ ಅಲ್ಲಿ ಸುಸಜ್ಜಿತ ರೈತ ಭವನ ನಿರ್ಮಿಸುವ ಉದ್ದೇಶವಿದೆ ಎಂದು ಹೇಳಿದರು. ಸರಕಾರದ ಆದೇಶದಂತೆ ರಾಜ್ಯದ ಎಲ್ಲೆಡೆ ರೈತರಿಗೆ ಶೂನ್ಯ ಬಡ್ಡಿದರದ ಸಾಲವನ್ನು 5 ಲಕ್ಷ ರೂ. ತನಕ ಏರಿಸಿದ್ದರೂ ನಮ್ಮ ಜಿಲ್ಲೆಯ ರೈತರಿಗೆ ಅದರ ಪ್ರಯೋಜನ ದೊರೆಯುತ್ತಿಲ್ಲ ಎಂದು ಸದಸ್ಯ ಗಣೇಶ್ ಕೈಕುರೆ ಹೇಳಿದರು. ಸಯ್ಯದ್‌…

Read More

ಮಂಗಳೂರು: ಜೆಪ್ಪು ವೆಲೆನ್ಸಿಯಾದ ಸೈಂಟ್‌ ಜೋಸೆಫ್‌ ಶ್ಯಾಲಮ್‌ ಶಾಪಿಂಗ್‌ ಕಾಂಪ್ಲೆಕ್ಸ್‌ ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಸೈಂಟ್‌ ಅಲ್ಫೋನ್ಸಾ ಸೌಹಾರ್ದ ಸಹಕಾರಿ ಸಂಘದ ಎರಡನೇ ವಾರ್ಷಿಕ ಮಹಾಸಭೆಯು ಸೆ.14ರಂದು ನಡೆಯಲಿದೆ. https://chat.whatsapp.com/EbVKVnWB6rlHT1mWtsgbch ಬೆಳಗ್ಗೆ 11ಕ್ಕೆ ಕಂಕನಾಡಿಯ ಸೈಂಟ್‌ ಅಲ್ಫೋನ್ಸಾ ಚರ್ಚ್‌ ಸಭಾಂಗಣದಲ್ಲಿ ಸಭೆ ಆಯೋಜಿಸಲಾಗಿದೆ. ಸಂಘದ ಅಧ್ಯಕ್ಷ ಮನೋಜ್‌ ಪಿ.ವಿ ಇವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾನಂದ ಟಿ.ಬಂಗೇರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com

Read More

ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರಾದ ವಿನಯಕುಮಾರ್ ಸೂರಿಂಜೆ ಅವರಿಗೆ ಗೌರವಾರ್ಪಣೆ ಸುರತ್ಕಲ್‌: ಪ್ರಸಕ್ತ ಆರ್ಥಿಕ ವರ್ಷದಲ್ಲಿ ಸುರತ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘವು 2.58 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಸಂಘವು ಸತತವಾಗಿ ‘ಎ’ ಆಡಿಟ್ ವರ್ಗೀಕರಣ ಹೊಂದಿದ್ದು, ಸದಸ್ಯರಿಗೆ ಶೇ.25 ಡಿವಿಡೆಂಡ್ ನೀಡಲಾಗುವುದು ಎಂದು ಸುರತ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಅಶೋಕ್ ಶೆಟ್ಟಿ ತಡಂಬೈಲ್‌ ಹೇಳಿದರು. https://chat.whatsapp.com/EbVKVnWB6rlHT1mWtsgbch ಸುರತ್ಕಲ್ ಬಂಟರ ಭವನದಲ್ಲಿ ಇತ್ತೀಚೆಗೆ ಜರಗಿದ ಸುರತ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘದ 49ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಘವು 5 ಬಾರಿ ರಾಜ್ಯ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಪಡೆದಿದ್ದು, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ 6 ಬಾರಿ ‘ಸಾಧನಾ’ ಪ್ರಶಸ್ತಿ ಪಡೆದಿದೆ. ಪ್ರಸಕ್ತ ಸಾಲಿನಲ್ಲಿ ಸಂಘವು 101 ಕೋಟಿ ರೂ. ದುಡಿಯುವ ಬಂಡವಾಳ ಹೊಂದಿದ್ದು 77 ಕೋಟಿ ರೂ. ಠೇವಣಿ ಹೊಂದಿದೆ. 0.80 ಕೋಟಿ ರೂ. ಪಾಲು ಬಂಡವಾಳ, 46 ಕೋಟಿ…

Read More