Author: admin
ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಬೆಳ್ತಂಗಡಿ ಶಾಖೆ ನ.26ರಂದು ಉದ್ಘಾಟನೆ
ಉಜಿರೆ: ಇಲ್ಲಿನ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ನೂತನ ಬೆಳ್ತಂಗಡಿ ಶಾಖೆಯ ಉದ್ಘಾಟನಾ ಸಮಾರಂಭ ನವೆಂಬರ್ 26ರ ಬುಧವಾರ ಪೂರ್ವಾಹ್ನ ಗಂಟೆ 10.30ಕ್ಕೆ ನಡೆಯಲಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಕಾವೂರು ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವರಾದ, ಬೆಳ್ತಂಗಡಿ ಪ್ರಸನ್ನ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಕೆ.ಗಂಗಾಧರ ಗೌಡ ಮತ್ತು ಬೆಳ್ತಂಗಡಿ ತಾಲೂಕು ಒಕ್ಕಲಿಗ ಸೌಡರ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಕೇರಿಮಾರು ಗೌರವ ಉಪಸ್ಥಿತಿ ಇರಲಿದ್ದಾರೆ. ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷರಾದ ರಂಜನ್ ಜಿ.ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ನಗರ ಪಂಚಾಯತ್ ಅಧ್ಯಕ್ಷರಾದ ಜಯಾನಂದ ಗೌಡ, ದ.ಕ. ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘ ಅಧ್ಯಕ್ಷರಾದ ಡಿ.ಬಿ ಬಾಲಕೃಷ್ಣ ಗೌಡ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಧ್ಯಕ್ಷರಾದ ಮೋಹನ್ ಗೌಡ ಕಲ್ಮಂಜ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ…
ಹಾವೇರಿ: ಹಾವೇರಿಯಲ್ಲಿ ಮಂಗಳವಾರ ನಡೆದ ರಾಜ್ಯಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಹೆಡಿಯಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಸಹಕಾರ ಸಂಘವೆಂದು ಗುರುತಿಸಿ ಸನ್ಮಾನಿಸಲಾಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ರಾಣೆಬೆನ್ನೂರು ತಾಲೂಕಿನ ಹೆಡಿಯಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪ್ರಗತಿಯನ್ನು ಗುರುತಿಸಿ ಗೌರವಿಸಿದ ಕೆಸಿಸಿ ಬ್ಯಾಂಕಿನ ಅಧ್ಯಕ್ಷರಾದ ಶಿವಕುಮಾರಗೌಡ ಎಸ್.ಪಾಟೀಲ, ನಿರ್ದೇಶಕರಾದ ಮಳ್ಳಪ್ಪ ಗೂ. ನಿಂಗಜ್ಜನವರ, ತಿರುಪತಿ ಅಜ್ಜನವರ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶಿವಾನಂದ ಹ ಸಂಗಾಪುರ, ಕೆಸಿಸಿ ಬ್ಯಾಂಕ್ ನೌಕರ ವರ್ಗದವರು ಹಾಗೂ ಹಾವೇರಿ ಜಿಲ್ಲೆಯ ಸಹಕಾರ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು. ಹೆಡಿಯಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ರುದ್ರಪ್ಪ ಬರಮಪ್ಪ ತೋಟಿಗೇರ, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರುದ್ರಪ್ಪ ಮಾರೇರ ಪ್ರಶಸ್ತಿ ಸ್ವೀಕರಿಸಿದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com
ಮಂಗಳೂರು: ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಉತ್ತಮ ಪತ್ತಿನ ಸಹಕಾರಿ ಸಂಘ ಪ್ರಶಸ್ತಿ ಪ್ರದಾನ ಮಾಡಲಾಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ| ಎಂ. ಎನ್. ರಾಜೇಂದ್ರ ಕುಮಾರ್, ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ. ದೇವೇಗೌಡ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಕಿಶೋರ್ ಕುಮಾರ್ ಬೊಟ್ಯಾಡಿ, ಐವನ್ ಡಿಸೋಜ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಉಡುಪಿ ಶಾಸಕ, ಮೀನು ಮಾರಾಟ ಮಹಾಮಂಡಲ ಅಧ್ಯಕ್ಷ ಯಶ್‌ಪಾಲ್ ಸುವರ್ಣ, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ, ನಬಾರ್ಡ್ ಮುಖ್ಯ ಮಹಾಪ್ರಬಂಧಕ ಡಾ| ಸುರೇಂದ್ರ ಬಾಬು, ಸಹಕಾರ ಸಂಘಗಳ ನಿಬಂಧಕ ಟಿ.ಎಚ್.ಎಂ ಕುಮಾರ್, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು,…
ಮಂಗಳೂರು: ವಿಶ್ವಕರ್ಮ ಸಹಕಾರ ಬ್ಯಾಂಕ್ ಲಿ. ಇದರ ಸ್ಥಾಪಕ ಸದಸ್ಯರು ಹಾಗೂ ಮಾಜಿ ಅಧ್ಯಕ್ಷರಾದ ಕೀರ್ತಿಶೇಷ ಪಯ್ಯಾಲ್ ಭಾಸ್ಕರ್ ಆಚಾರ್ಯ ಇವರ ಶ್ರದ್ಧಾಂಜಲಿ ಸಭೆಯು ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಮಂಗಳವಾರ ನಡೆಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ, ದಿವಂಗತರ ಪುತ್ರ ಪಯ್ಯಾಲ್ ಶಾಂತರಾಮ ಆಚಾರ್ಯ, ಉಪಾಧ್ಯಕ್ಷರಾದ ಜಗದೀಶ್ ಆಚಾರ್ಯ ಪಡುಪಣಂಬೂರು, ನಿರ್ದೇಶಕರಾದ ಡಿ.ಭಾಸ್ಕರ್ ಆಚಾರ್, ವ್ಯವಸ್ಥಾಪಕ ನಿರ್ದೇಶಕರಾದ ವಸಂತ್ ಅಡ್ಯಂತಾಯ ಹಾಗೂ ಪ್ರಭಾರ ಶಾಖಾ ವ್ಯವಸ್ಥಾಪಕ ಬಿ.ಉದಯ್ ಕುಮಾರ್ ನುಡಿನಮನ ಸಲ್ಲಿಸಿದರು. ಈ ಸಂದರ್ಭ ಬ್ಯಾಂಕಿನ ಆಡಳಿತ ನಿರ್ದೇಶಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com
ಡಾ| ಆರ್.ಎಂ. ಮಂಜುನಾಥ ಗೌಡ, ಎಂ.ಎಂ. ಪರಮೇಶ್, ಕೆ.ಎನ್ ರಾಮಕೃಷ್ಣ, ಎಸ್.ಕೆ. ಮರಿಯಪ್ಪ, ವಾಟಗೋಡು ಸುರೇಶ್ ಅವರಿಗೆ ಸನ್ಮಾನ ಶಿವಮೊಗ್ಗ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್, ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಶಿವಮೊಗ್ಗ ಸಹಕಾರ ಹಾಲು ಒಕ್ಕೂಟ ಸಹಕಾರ ಇಲಾಖೆ ಶಿವಮೊಗ್ಗ ಹಾಗೂ ಹೊಸನಗರ ತಾಲೂಕಿನ ಎಲ್ಲಾ ರೀತಿಯ ಸಹಕಾರ ಸಂಘ ಮತ್ತು ಬ್ಯಾಂಕುಗಳ ಸಂಯುಕ್ತ ಆಶ್ರಯದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ ನವೆಂಬರ್ 20ರಂದು ಬೆಳಗ್ಗೆ 10ಕ್ಕೆ ರಿಪ್ಪನ್‌ಪೇಟೆಯ ಸಾಗರ ರಸ್ತೆ, ವಿಶ್ವಮಾನವ ಒಕ್ಕಲಿಗರ ಸಭಾಭವನದಲ್ಲಿ ನಡೆಯಲಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷರೂ, ಮಲೆನಾಡು ಅಭಿವೃದ್ಧಿ ಮಂಡಳಿಯ ಅಧ್ಯಕ್ಷರೂ ಆಗಿರುವ ಸಹಕಾರ ರತ್ನ ಡಾ।। ಆರ್.ಎಂ. ಮಂಜುನಾಥ ಗೌಡ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಾಗರ ಶಾಸಕ, ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷ, ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ನಿರ್ದೇಶಕರಾದ ಗೋಪಾಲಕೃಷ್ಣ ಬೇಳೂರು…
ಮೂಡುಬಿದಿರೆ: 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಪ್ರಯುಕ್ತ ಭಾನುವಾರ ಮೂಡುಬಿದಿರೆಯ ವಂದೇಮಾತರಂ ಸೌಹಾರ್ದ ಸಹಕಾರಿ ಸಂಘದಲ್ಲಿ ಗ್ರಾಹಕರ ಸಮಾವೇಶ ಹಮ್ಮಿಕೊಳ್ಳಲಾಯಿತು. https://chat.whatsapp.com/JVAtKKe2M19AFO3W5629ZS?mode=ems_copy_t ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹಕಾರಿಯ ಅಧ್ಯಕ್ಷರಾದ ಪ್ರೊ. ಎಂ.ವಾಸುದೇವ ಭಟ್ ರವಹಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ವಿಶ್ವಕರ್ಮ ಸಹಕಾರ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕರಾದ ವಸಂತ ಅಡ್ಯಂತಾಯರು,ಬ್ಯಾಂಕರ್ ಮತ್ತು ಗ್ರಾಹಕ ಸಂಬಂಧದ ಬಗ್ಗೆ ವಿಷಯ ಮಂಡಿಸಿದರು. ಮುಖ್ಯ ಅತಿಥಿಗಳಾದ ಉಮೇಶ್ ರಾವ್ ಎಂ. ಲೆಕ್ಕಪರಿಶೋಧಕರು ಮೂಡುಬಿದರೆ ಇವರು ಕಾನೂನಿನ ಬಗ್ಗೆ ಸಲಹೆ ನೀಡಿದರು. ಸಹಕಾರಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಸುಕೇಶ್ ಉಪಸ್ಥಿತರಿದ್ದರು. ಸಹಕಾರಿಯ ನಿರ್ದೇಶಕರು, ಸಿಬ್ಬಂದಿಗಳು, ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಹಾಗೂ ಸಹಕಾರಿಯ ಸದಸ್ಯರು ಭಾಗವಹಿಸಿದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಚಿತ್ತರಂಜನ್ ಬೋಳಾರ್ಗೆ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿ
ಮಂಗಳೂರು: ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸಾಧಕರಿಗೆ ತುಳುನಾಡ ರಕ್ಷಣಾ ವೇದಿಕೆ ಹಾಗೂ ತುಳುನಾಡ ಸೂರ್ಯ ಪತ್ರಿಕೆ ವತಿಯಿಂದ ಸಹಕಾರ ಸಪ್ತಾಹ-೨೦೨೫ರ ಅಂಗವಾಗಿ ಪ್ರಶಸ್ತಿ ಪ್ರದಾನ ಸಮಾರಂಭತುಳುನಾಡ ರಕ್ಷಣಾ ವೇದಿಕೆ ಸ್ಥಾಪಕಾಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ಅಧ್ಯಕ್ಷತೆಯಲ್ಲಿ ಮಂಗಳೂರಿನ ಉರ್ವಸ್ಟೋರ್‌ನ ತುಳುಭವನದ ಸಿರಿ ಚಾವಡಿಯಲ್ಲಿ ಭಾನುವಾರ ಜರುಗಿತು. https://chat.whatsapp.com/JVAtKKe2M19AFO3W5629ZS?mode=ems_copy_t ಸಮಾರಂಭದಲ್ಲಿ ಮೂಡುಬಿದಿರೆ ಜೈನ ಮಠದ ಜಗದ್ಗುರು ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ದಿವ್ಯ ಸಾನ್ನಿದ್ಯ ವಹಿಸಿದ್ದರು. ಮಾಡೂರಿನ ಶಿವ ದುರ್ಗಾಂಭ ಮಠದ ಶ್ರೀ ಶಿವಯೋಗಿ ದುರ್ಗಾನಂದ ಸ್ವಾಮೀಜಿ ಶುಭ ಹಾರೈಸಿದರು. ಮಾಜಿ ಸಚಿವರಾದ ಕೃಷ್ಣ ಪಾಲೆಮಾರ್ ಹಾಗೂ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ವೇದವ್ಯಾಸ್ ಕಾಮತ್ ಸಹಕಾರ ಕ್ಷೇತ್ರದಲ್ಲಿ ಅನನ್ಯ ಸಾಧನೆಗೈದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ ಇವರಿಗೆ “ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿ” ನೀಡಿ ಗೌರವಿಸಿದರು. ಅದಾನಿ ಗ್ರೂಪ್‌ನ ಅಧ್ಯಕ್ಷರು ಮತ್ತು ಕಾರ್ಯನಿರ್ವಾಹಕ ನಿರ್ದೇಶಕರಾದ ಕಿಶೋರ್ ಆಳ್ವ, ಅಖಿಲ ಭಾರತ ತುಳು…
ಮಂಗಳೂರು: ಅಖಿಲ ಭಾರತ ಸಹಕಾರ ಸಪ್ತಾಹ 2025ರ ಪ್ರಯುಕ್ತ ಭಾನುವಾರ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಬೆಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಮಂಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು, ಸೌಹಾರ್ದ ಸಹಕಾರ ಸಂಘಗಳು, ಎಲ್ಲಾ ವಿಧದ ಸಹಕಾರ ಸಂಘಗಳು ಹಾಗೂ ಸಹಕಾರ ಇಲಾಖೆಯ ಸಹಯೋಗದೊಂದಿಗೆ ಮಂಗಳೂರಿನಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಸಹಕಾರಿ ಸಪ್ತಾಹದ ಅಂಗವಾಗಿ ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಜರುಗಿತು. https://chat.whatsapp.com/JVAtKKe2M19AFO3W5629ZS?mode=ems_copy_t ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷರಾದ ಜಿ.ಟಿ.ದೇವೇಗೌಡ ಅವರು, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ…
ಗಂಗೊಳ್ಳಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ದ.ಕ. ಜಿಲ್ಲಾ ಸಹಕಾರಿ ಯೂನಿಯನ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಸಹಕಾರ ಇಲಾಖೆಗಳ ಆಶ್ರಯದಲ್ಲಿ ಭಾನುವಾರ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಆಯೋಜಿಸಿದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಉತ್ತಮ ಸಹಕಾರಿ ಸಂಘಗಳನ್ನು ಗುರುತಿಸುವ ಕಾರ್ಯಕ್ರಮ ನಡೆದಿದ್ದು, ಇದರಲ್ಲಿ ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ಸಂಘಕ್ಕೆ ಉತ್ತಮ ಸಹಕಾರಿ ಸಂಘ ಪ್ರಶಸ್ತಿ ಲಭಿಸಿದೆ. https://chat.whatsapp.com/JVAtKKe2M19AFO3W5629ZS?mode=ems_copy_t ಎಸ್‌ಸಿಡಿಸಿಸಿ ಬ್ಯಾಂಕ್‌ನ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾದ ಶಾಸಕ ಜಿ.ಟಿ ದೇವೇಗೌಡ ಹಾಗೂ ಮಂಗಳೂರು ದಕ್ಷಿಣ ಶಾಸಕ ಶ್ರೀ ಡಿ. ವೇದವ್ಯಾಸ್ ಕಾಮತ್ ಅವರು ಗಂಗೊಳ್ಳಿ ಟೌನ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಜಿ.ವೆಂಕಟೇಶ್ ಭಾಸ್ಕರ್ ಶೆಣೈಯವರನ್ನು ಸನ್ಮಾನಿಸಿ ಪ್ರಶಸ್ತಿ ಪ್ರದಾನ ಮಾಡಿದರು. ಸಂಘದ ಮುಖ್ಯ ಕಾರ್ಯನಿರ್ವಾಹಕ ಗಣೇಶ್ ನಾಯಕ್, ನಿರ್ದೇಶಕರಾದ ಕೆ.ಗೋಪಾಲಕೃಷ್ಣ ನಾಯಕ್, ಬಿ.ರಾಘವೇಂದ್ರ ಪೈ…
ಸಹಕಾರ ಸಪ್ತಾಹ ಆಚರಣೆ ಕಾರ್ಯಕ್ರಮದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಆಶಯ ಮಂಗಳೂರು: ಸರಕಾರಿ ಇಲಾಖೆಗಳಿಂದ ಸಹಕಾರ ರಂಗವನ್ನು ಮುಕ್ತಗೊಳಿಸಬೇಕೆಂಬ ಉದ್ದೇಶದಿಂದ ಎಸ್.ಎನ್ ಪಾಟೀಲ್ ಎಂಬುವವರು ಸುಮಾರು ವರ್ಷಗಳ ಹಿಂದೆ ಸೌಹಾರ್ದ ಸಹಕಾರಿ ಸಂಘಗಳ ಸ್ಥಾಪನೆಗೆ ಮುಂದಡಿಯಿಟ್ಟರು. ಎಸ್.ಎನ್ ಪಾಟೀಲ್ ಅವರ ಪರಿಶ್ರಮದಿಂದ ಇಂದು ಸೌಹಾರ್ದ ಸಹಕಾರಿ ರಂಗವು ಬೆಳೆದು ನಿಂತಿದೆ. ಸಹಕಾರ ಕ್ಷೇತ್ರವು ಸ್ವಯಂಪ್ರೇರಿತವಾಗಿ ಮುನ್ನಡೆಯಬೇಕು ಎಂದು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಆಶಯ ವ್ಯಕ್ತಪಡಿಸಿದರು. https://chat.whatsapp.com/JVAtKKe2M19AFO3W5629ZS?mode=ems_copy_t ಮಂಗಳೂರಿನ ಉರ್ವಸ್ಟೋರ್ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಸೋಮವಾರ ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿ ಮಂಗಳೂರು ಹಾಗೂ ದ.ಕ. ಜಿಲ್ಲೆಯ ಎಲ್ಲಾ ಸೌಹಾರ್ದ ಸಹಕಾರಿಗಳ ಸಂಯುಕ್ತ ಆಶ್ರಯದಲ್ಲಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಸಹಯೋಗದಲ್ಲಿಆಯೋಜಿಸಿದ 72ನೇ ಸಹಕಾರ ಸಪ್ತಾಹ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸೌಹಾರ್ದ ಸಹಕಾರಿ ಸಂಘಗಳು…
