Author: admin

ಮೂಲ್ಕಿ: ಮೂಲ್ಕಿ ತಾಲೂಕಿನ ಹಳೆಯಂಗಡಿಯಲ್ಲಿ ಪ್ರಧಾನ ಕಚೇರಿ ಹೊಂದಿ, ಹಳೆಯಂಗಡಿ, ಪಡುಬಿದ್ರಿ ಮತ್ತು ಕಿನ್ನಿಗೋಳಿಯಲ್ಲಿ ಶಾಖೆಯನ್ನು ಹೊಂದಿರುವ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ನಾಲ್ಕನೇ ಶಾಖೆಯು ಮೂಡುಬಿದಿರೆ ತಾಲೂಕಿನ ಪ್ರಾಂತ್ಯ ಜ್ಯೋತಿನಗರ ಮೆಸ್ಕಾಂ ಕಚೇರಿ ಮುಂಭಾಗದ ಮಹಾಲಸ ಕಟ್ಟಡದಲ್ಲಿ ಸೆಪ್ಟೆಂಬರ್‌ 8ರಂದು ಉದ್ಘಾಟನೆಗೊಳ್ಳಲಿದೆ. https://chat.whatsapp.com/EbVKVnWB6rlHT1mWtsgbch 2021ರಲ್ಲಿ ಪ್ರಾರಂಭಗೊಂಡ ಪ್ರಿಯದರ್ಶಿನಿ ಕೋ ಆಪರೇಟಿವ್‌ ಸೊಸೈಟಿಯು ಪ್ರಸ್ತುತ 32 ಕೋಟಿ ರೂ. ನಿರಖು ಠೇವಣಿ ಹೊಂದಿದೆ. 2024-25ನೇ ಸಾಲಿನಲ್ಲಿ 351.69 ಕೋಟಿ ರೂ. ವಹಿವಾಟು ನಡೆಸಿದ್ದು, ರೂ. 41.88 ಲಕ್ಷ ರೂ. ಲಾಭ ಗಳಿಸಿದೆ. 98.5 % ಸಾಲ ವಸೂಲಾತಿ ನಡೆಸಿ ಲೆಕ್ಕಪರಿಶೋಧನಾ ವರದಿಯಲ್ಲಿ “ಎ” ಶ್ರೇಣಿಯಲ್ಲಿದೆ ಎಂದು ಸೊಸೈಟಿಯ ಅಧ್ಯಕ್ಷರಾದ ಎಚ್.ವಸಂತ್ ಬೆರ್ನಾರ್ಡ್ ಮೂಡುಬಿದಿರೆಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಪ್ರಿಯದರ್ಶಿನಿ ಕೋ ಆಪರೇಟಿವ್‌ ಸೊಸೈಟಿಯು ಮೂರು ಶಾಖೆಗಳಲ್ಲೂ ಇ-ಮುದ್ರಾಂಕ ವ್ಯವಸ್ಥೆ, ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆ, ಹವಾನಿಯಂತ್ರಿತ ಬ್ಯಾಂಕಿಂಗ್ ವಿಭಾಗವನ್ನು ಹೊಂದಿರುತ್ತದೆ. ಪ್ರಸ್ತುತ 3,843 ಸದಸ್ಯರನ್ನು ಹೊಂದಿದ್ದು, 21 ಸಿಬ್ಬಂದಿಗಳು, 17…

Read More

ಶಿಕ್ಷಕರು ರಾಷ್ಟ್ರದ ನಿರ್ಮಾಣಕಾರರು: ಸಹಕಾರ ರತ್ನ ಅನಿಲ್ ಲೋಬೊ ಅಭಿಪ್ರಾಯ ಬೈಂದೂರು: ಎಂಸಿಸಿ ಬ್ಯಾಂಕ್ ಇದರ ಬೈಂದೂರು ಶಾಖೆಯಲ್ಲಿ ಶುಕ್ರವಾರ ಶಿಕ್ಷಕರ ದಿನ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಮಾತನಾಡಿ, ಬೈಂದೂರು ಶಾಖೆಯಲ್ಲಿ ಶಿಕ್ಷಕರ ದಿನ ಆಚರಿಸಲು ಸಂತೋಷವಾಗುತ್ತಿದೆ. ಬೈಂದೂರು ಪ್ರದೇಶದ ಜನರ ಬೆಂಬಲದಿಂದ ಇದು ಸಾಧ್ಯವಾಗಿದೆ. ವಿದ್ಯಾರ್ಥಿಗಳ ವೃತ್ತಿಜೀವನವನ್ನು ರೂಪಿಸುವಲ್ಲಿ ಶಿಕ್ಷಕರದ್ದು ಪ್ರಮುಖ ಪಾತ್ರವಿದೆ. ಶಿಕ್ಷಕರು ರಾಷ್ಟ್ರದ ನಿರ್ಮಾಣಕಾರರು ಎಂದು ಹೇಳಿದರು. https://chat.whatsapp.com/EbVKVnWB6rlHT1mWtsgbch ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಹೊಸಾಡು ರಾಮ ಶೇರಿಗಾರ್ ಮತ್ತು 2025ರ ಐಐಬಿಎಸ್ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಆಶಾ ವೀಣಾ ಡಯಾಸ್ ಗೌರವಾನ್ವಿತ ಅತಿಥಿಗಳಾಗಿದ್ದರು. ಎಂಸಿಸಿ ಬ್ಯಾಂಕಿನ ನಿರ್ದೇಶಕರಾದ ಎಲ್ರಾಯ್ ಕೆ.ಕ್ರಾಸ್ಟೊ ಮತ್ತು ಶಾಖೆಯ ಹಿರಿಯ ವ್ಯವಸ್ಥಾಪಕ ಸಂದೀಪ್ ಕ್ವಾಡ್ರಾಸ್ ಉಪಸ್ಥಿತರಿದ್ದರು. ಡಾ| ಸರ್ವೆಪಲ್ಲಿ ರಾಧಾಕೃಷ್ಣನ್ ಅವರಿಗೆ ಪುಷ್ಪ ನಮನ ಸಲ್ಲಿಸಲಾಯಿತು. ಹೊಸಾಡು ರಾಮ ಶೇರಿಗಾರ್ ಮಾತನಾಡಿ ಬೈಂದೂರಿನಲ್ಲಿ ಮೊದಲ ಬಾರಿ…

Read More

ಬಂಟ್ವಾಳ: ಇಲ್ಲಿನ ಸಾರ್ವಜನಿಕ ಉದ್ಯೋಗಸ್ಥರ ಸಹಕಾರ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ 21 ರಂದು ಭಾನುವಾರ 10.30ಕ್ಕೆ ಬಿಸಿರೋಡ್ ಜೋಡುಮಾರ್ಗ ಉದ್ಯಾನವನದ ಬಳಿ ಇರುವ ಸ್ಪರ್ಶ ಕಲಾಮಂದಿರದಲ್ಲಿ ಸಂಘದ ಅಧ್ಯಕ್ಷರಾದ ಕೆ.ಜಯಂತ ನಾಯಕ್ ಇವರ ಅಧ್ಯಕ್ಷತೆಯಲ್ಲಿ ಜರಗಲಿರುವುದೆಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೀತಾ ವಿ.ಹೊಳ್ಳ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://chat.whatsapp.com/EbVKVnWB6rlHT1mWtsgbch ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com

Read More

ಉಳ್ಳಾಲ: ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್‌ ಆಶ್ರಯದಲ್ಲಿ ಸೆ.7ರ ಭಾನುವಾರ ಬ್ಯಾಂಕಿನ ಸಭಾಂಗಣದಲ್ಲಿ ಬೆಳಗ್ಗೆ 9.30ಕ್ಕೆ ಭತ್ತ ಕೃಷಿಗೆ ಪ್ರೋತ್ಸಾಹ ಧನ ವಿತರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ. https://chat.whatsapp.com/EbVKVnWB6rlHT1mWtsgbch ಕಾರ್ಯಕ್ರಮವನ್ನು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್ ಉದ್ಘಾಟಿಸಲಿದ್ದಾರೆ. ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್‌ ಅಧ್ಯಕ್ಷರಾದ ಕೃಷ್ಣ ಶೆಟ್ಟಿ, ಕೆಳಗಿನ ಕೋಟೆಕಾರುಗುತ್ತು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅಖಿಲ ಭಾರತ ಕ್ರೈಸ್ತ ಒಕ್ಕೂಟದ ರಾಜ್ಯಾಧ್ಯಕ್ಷರಾದ ಆಲ್ವಿನ್ ಡಿಸೋಜ, ಸೋಮೇಶ್ವರ ಪುರಸಭೆಯ ಅಧ್ಯಕ್ಷರಾದ ಕಮಲ, ಸಿಐಟಿಯು ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಹಮೀದ್ ಹಸನ್ ಮಾಡೂರು, ಕೋಟೆಕಾರು ಪಟ್ಟಣ ಪಂಚಾಯತ್ ಸದಸ್ಯರಾದ ರಾಘವ ಗಟ್ಟಿ ಕೋಟೆಕಾರು ಭಾಗವಹಿಸಲಿದ್ದಾರೆ. ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್‌ ಉಪಾಧ್ಯಕ್ಷರಾದ ಕೆ.ಬಿ. ಅಬುಸಾಲಿ ಕಿನ್ಯಾ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರ್ಷವರ್ಧನ ಉಳ್ಳಾಲ್, ನಿರ್ದೇಶಕರಾದ ಗಂಗಾಧರ್ ಯು, ಕೆ.ಕೃಷ್ಣಪ್ಪ ಸಾಲಿಯಾನ್, ಉದಯಕುಮಾರ್…

Read More

ಕುಶಾಲನಗರ: ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 2024-25ನೇ ಸಾಲಿನಲ್ಲಿ 259.30 ಕೋಟಿ ರೂ. ವಾರ್ಷಿಕ ವಹಿವಾಟು ನಡೆಸಿದ್ದು 1.26 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಟಿ.ಆ‌ರ್.ಶರವಣಕುಮಾ‌ರ್ ತಿಳಿಸಿದ್ದಾರೆ. https://chat.whatsapp.com/EbVKVnWB6rlHT1mWtsgbch ಸಂಘವು 104ನೇ ವರ್ಷದಲ್ಲಿ ಮುನ್ನಡೆಯುತ್ತಿದ್ದು ಸತತವಾಗಿ ಎಂಟು ವರ್ಷಗಳಿಂದ ಕೋಟಿಗೂ ಮೀರಿ ಲಾಭ ಗಳಿಸುತ್ತಿದೆ. 105.06 ಲಕ್ಷ ರೂ. ಸಾಲ ಪಾವತಿಸಿದ್ದು. ಇನ್ನೂ ಕೆಲವು ಸದಸ್ಯರಿಗೆ ಸಾಲ ವಿತರಿಸಲು ಕ್ರಮ ತೆಗೆದುಕೊಳ್ಳಲಾಗಿದೆ. ಈ ಸಾಲಿನಲ್ಲಿ ವಿವಿಧ ಸಾಲಗಳ ರೂಪದಲ್ಲಿ 50 ಕೋಟಿ ರೂ. ವಿತರಿಸಲಾಗಿದೆ. ಸಂಘದ ಸ್ವಂತ ಬಂಡವಾಳದಿಂದ 40 ಲಕ್ಷ ರೂ.ಗಳನ್ನು ಸ್ವಸಹಾಯ ಗುಂಪುಗಳಿಗೆ ಸಾಲ ಕೊಡಲಾಗಿದೆ ಎಂದು ಗುರುವಾರ ಸಂಘದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. ಸಂಘದ ಸದಸ್ಯರಿಗೆ ಕಳೆದ 13 ವರ್ಷಗಳಿಂದ ಶೇ.16ರಿಂದ ಶೇ.25 ಡಿವಿಡೆಂಡ್ ನೀಡಲಾಗುತ್ತಿದ್ದು, ಸಂಘವು ಸದಸ್ಯರ ಅನುಕೂಲಕ್ಕಾಗಿ ತ್ಯಾಗರಾಜ ರಸ್ತೆಯಲ್ಲಿರುವ 8.60 ಸೆಂಟ್ಸ್ ನಿವೇಶನದಲ್ಲಿ ನಿರ್ಮಿಸಿದ ಕಟ್ಟಡದಲ್ಲಿ ಸುಲಲಿತವಾಗಿ ಸದಸ್ಯರ ಸೇವೆಗೆ…

Read More

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 2024-25ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸೆ.21ರಂದು ಭಾನುವಾರ 10.30ಕ್ಕೆ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಸಂಘದ ಆಡಳಿತ ಕಛೇರಿ “ಆತ್ಮಶಕ್ತಿ ಸೌಧ” ಸಭಾಂಗಣ, ಬೈರಾಡಿಕೆರೆ ಹತ್ತಿರ, ಪಡೀಲ್, ಮಂಗಳೂರು ಇಲ್ಲಿ ಜರುಗಲಿರುವುದೆಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://chat.whatsapp.com/EbVKVnWB6rlHT1mWtsgbch ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com

Read More

ತುಮಕೂರು ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ಪ್ರಾಬಲ್ಯ ಮುಂದುವರಿಕೆ ತುಮಕೂರು: ತುಮಕೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷರಾಗಿ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದು, ತನ್ಮೂಲಕ ಏಳನೇ ಬಾರಿ ಡಿಸಿಸಿ ಬ್ಯಾಂಕ್​ ಅಧ್ಯಕ್ಷರಾಗಿ ಆಯ್ಕೆಯಾದಂತಾಗಿದೆ. ಈ ಚುನಾವಣೆಯ ಫಲಿತಾಂಶವು ರಾಜಣ್ಣ ಅವರು, ತುಮಕೂರು ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ದೀರ್ಘ ಪ್ರಾಬಲ್ಯವನ್ನು ದೃಢಪಡಿಸಿದೆ. https://chat.whatsapp.com/EbVKVnWB6rlHT1mWtsgbch ಗುರುವಾರ ನಡೆದ ಚುನಾವಣೆಯಲ್ಲಿ, 14 ಜನ ನಿರ್ದೇಶಕರ ಆಡಳಿತ ಮಂಡಳಿಯು ಕೆ.ಎನ್‌ ರಾಜಣ್ಣ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದು, ಬ್ಯಾಂಕ್‌ನ ಮುಂಭಾಗದಲ್ಲಿ ಅವರ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದರು. ಅಧ್ಯಕ್ಷ ಹುದ್ದೆಗೆ ರಾಜಣ್ಣ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವರ ಆಯ್ಕೆ ಅವಿರೋಧವಾಗಿ ನಡೆಯಿತು. ಕೆ.ಎನ್.ರಾಜಣ್ಣ ಕರ್ನಾಟಕದ ಸಹಕಾರಿ ಕ್ಷೇತ್ರದಲ್ಲಿ 1972ರಿಂದ ಪ್ರಭಾವವನ್ನು ಹೊಂದಿದ್ದಾರೆ. ರಾಷ್ಟ್ರೀಯ ಕೃಷಿ ಸಹಕಾರ ಮಾರ್ಕೆಟಿಂಗ್ ಫೆಡರೇಶನ್ ಆಫ್ ಇಂಡಿಯಾದ ನಿರ್ದೇಶಕರಾಗಿ ಮತ್ತು ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ನ ಅಧ್ಯಕ್ಷರಾಗಿ (2001-2005 ಮತ್ತು 2015-2020) ಎರಡು ಅವಧಿಗಳಲ್ಲಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.…

Read More

ಜನರಿಗೆ ದಸರಾ ಹಬ್ಬದ ಕೊಡುಗೆ, ದಿನಬಳಕೆ ವಸ್ತುಗಳ ಬೆಲೆ ಅಗ್ಗ, ಸೆ.22ರಿಂದಲೇ ಜಾರಿ ನವದೆಹಲಿ: ಜೀವರಕ್ಷಕ ಔಷಧಗಳು, ದಿನಬಳಕೆಯ ವಸ್ತುಗಳು ಸೇರಿದಂತೆ ತೆರಿಗೆ ಭಾರದ ಹೊರೆಯ ಆಪಾದನೆಯಲ್ಲಿದ್ದ ಕೆಲವು ವಸ್ತುಗಳ ಜಿಎಸ್‌ಟಿ ತೆರಿಗೆ ಕಡಿಮೆ ಮಾಡಿರುವ ಕೇಂದ್ರ ಸರಕಾರ ಜಿಎಸ್‌ಟಿ ತೆರಿಗೆಯಲ್ಲಿ ಭಾರೀ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಿದೆ. ಸರಕು ಮತ್ತು ಸೇವಾ ತೆರಿಗೆ ಪದ್ಧತಿಯಲ್ಲಿ ಸಂಪೂರ್ಣ ಪರಿಷ್ಕರಣೆ ಮಾಡಲಾಗಿದ್ದು, ಕೇಂದ್ರ ಸರ್ಕಾರವು ದೇಶದ ಜನರಿಗೆ ನವರಾತ್ರಿ ಹಬ್ಬದ ಕೊಡುಗೆ ನೀಡಿದೆ. ಜನಸಾಮಾನ್ಯರು ಬಳಸುವ ಹಲವಾರು ದಿನಬಳಕೆಯ ವಸ್ತುಗಳ ಮೇಲೆ ಕೇವಲ ಶೇ.5ರ ತೆರಿಗೆ ಮಾತ್ರ ಉಳಿಸಿಕೊಳ್ಳಲಾಗುತ್ತಿದೆ. ಇದರಿಂದ ಕೆಲವು ಔಷಧಗಳು, ಜೀವ ವಿಮಾ ಪಾಲಿಸಿಗಳು ಬಹುತೇಕ ವಸ್ತುಗಳ ಮೇಲಿನ ಜಿಎಸ್‌ಟಿ ತೆರಿಗೆ ದರಗಳನ್ನು ಸಂಪೂರ್ಣ ಕಡಿತಗೊಳಿಸಲಾಗಿದೆ.‌ https://chat.whatsapp.com/EbVKVnWB6rlHT1mWtsgbch ಜಿಎಸ್‌ಟಿಯಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲು ಬುಧವಾರ ಕರೆಯಲಾಗಿದ್ದ ಸಭೆಯ ಬಳಿಕ ಹಲವು ಮಹತ್ವದ ಕ್ರಮಗಳನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಪ್ರಕಟಿಸಿದರು. ದೇಶೀಯ ವೆಚ್ಚವನ್ನು ಹೆಚ್ಚಿಸಲು ಮತ್ತು ಅಮೆರಿಕದ ಭಾರೀ ಸುಂಕದ…

Read More

ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್‌ ಬ್ಯಾಂಕ್‌ 2024-25ನೇ ಸಾಲಿನಲ್ಲಿ 1,063 ಕೋಟಿ ರೂ. ವ್ಯವಹಾರ ನಡೆಸಿದ್ದು, 21.40 ಕೋಟಿ ರೂ. ಲಾಭ ದಾಖಲಿಸಿದೆ ಎಂದು ಬ್ಯಾಂಕ್‌ನ ಅಧ್ಯಕ್ಷ, ಶಾಸಕ ಯಶಪಾಲ್‌ ಎ.ಸುವರ್ಣ ತಿಳಿಸಿದ್ದಾರೆ. https://chat.whatsapp.com/EbVKVnWB6rlHT1mWtsgbch ಮಹಾಲಕ್ಷ್ಮೀ ಸಹಕಾರಿ ಬ್ಯಾಂಕ್, ಸಹಕಾರಿ ಇಲಾಖೆ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್‌ನ ಪರಿವೀಕ್ಷಣೆಗೆ ಒಳಪಟ್ಟು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಟು ಶಾಖೆಗಳನ್ನು ಹೊಂದಿ 50 ಸಾವಿರ ಗ್ರಾಹಕರ ಮೂಲಕ ವ್ಯವಹಾರ ನಡೆಸುತ್ತಿದೆ. 2024-25ನೇ ಸಾಲಿನಲ್ಲಿ 11,457 ಕೋಟಿ ರೂ., ಒಟ್ಟು ವಹಿವಾಟು ನಡೆಸಿ, 604 ಕೋಟಿ ರೂ. ಠೇವಣಿ, 459 ಕೋಟಿ ರೂ. ಸಾಲ, ಮತ್ತು ಮುಂಗಡದೊಂದಿಗೆ 39.93 ಕೋಟಿ ರೂ. ಪಾಲು ಬಂಡವಾಳದೊಂದಿಗೆ 9.15 ಕೋಟಿ ರೂ. ನಿವ್ವಳ ಲಾಭ ಗಳಿಸಿ ಶೂನ್ಯ ನಿವ್ವಳ ಅನುತ್ಪಾದಕ ಸಾಲದ ಪ್ರಮಾಣದೊಂದಿಗೆ ಉತ್ತಮ ಪ್ರಗತಿ ಸಾಧಿಸಿದೆ. ಕಳೆದ 15 ವರ್ಷಗಳಿಂದ ನಿರಂತರವಾಗಿ ಸದಸ್ಯ ಗ್ರಾಹಕರಿಗೆ ಅತಿ ಹೆಚ್ಚು ಡಿವಿಡೆಂಡ್‌ ನೀಡುವ ಕರಾವಳಿ ಭಾಗದ ಪಟ್ಟಣ ಸಹಕಾರಿ…

Read More

ಮಂಗಳೂರು: ದೇಶದ ಪವಿತ್ರ ಪುಣ್ಯಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ನಡೆಯುತ್ತಿರುವ ಹಲವು ರೀತಿಯ ಅಪಪ್ರಚಾರಗಳ ವಿರುದ್ಧ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಸಹಕಾರಿಗಳಿಂದ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿಮಿಟೆಡ್ ವತಿಯಿಂದ ಧರ್ಮಸ್ಥಳದಲ್ಲಿ ಆಯೋಜಿಸಲಾಗುವ ‘ಧರ್ಮಜಾಗೃತಿ ಯಾತ್ರೆ’ಯ ಪೂರ್ವಭಾವಿ ಸಭೆಯು ಸೆಪ್ಟೆಂಬರ್‌ 8ರಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ಮಧ್ಯಾಹ್ನ 2.30ಕ್ಕೆ ನಡೆಯಲಿದೆ. https://chat.whatsapp.com/EbVKVnWB6rlHT1mWtsgbch ಈ ಪೂರ್ವಭಾವಿ ಸಭೆಯು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ‘ಸಹಕಾರ ರತ್ನ’ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವಿಧದ ಸಹಕಾರಿ ಸಂಘಗಳ ಅಧ್ಯಕ್ಷರು ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಭಾಗವಹಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟು ಮನವಿ ಮಾಡಿದ್ದಾರೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694…

Read More