Author: admin

ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷ ಎನ್‌.ಮುತ್ತಪ್ಪ ಪೂಜಾರಿಯವರಿಂದ ಶೇ.25 ಡಿವಿಡೆಂಡ್ ಘೋಷಣೆ ಪುತ್ತೂರು: ಆಲಂಕಾರು ಮೂರ್ತೆದಾರರ ಸೇವಾ ಸಹಕಾರ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಆಲಂಕಾರಿನಲ್ಲಿರುವ ಸಂಘದ ಪ್ರಧಾನ ಕಚೇರಿಯ ಬೈದಶ್ರೀ ಸಭಾಭವನದಲ್ಲಿ ನಡೆಯಿತು. https://chat.whatsapp.com/EbVKVnWB6rlHT1mWtsgbch ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷಎನ್.ಮುತ್ತಪ್ಪ ಪೂಜಾರಿ ಮಾತನಾಡಿ, 2024-25ನೇ ಸಾಲಿನಲ್ಲಿ ಸಂಘವು 250.16 ಕೋಟಿ ರೂ. ವ್ಯವಹಾರ ನಡೆಸಿ ರೂ 1.03 ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ ಶೇ.25ರಷ್ಟು ಡಿವಿಡೆಂಡ್ ನೀಡಲಾಗುವುದು ಎಂದು ಘೋಷಿಸಿದರು. 1991ರಲ್ಲಿ ಸಂಘ ಪ್ರಾರಂಭಗೊಂಡು 2005ರಿಂದ ಬ್ಯಾಂಕಿಂಗ್ ವ್ಯವಹಾರ ನಡೆಸುತ್ತಿದೆ. ಪ್ರಾರಂಭದಲ್ಲಿ ರೂ. 2.30 ಲಕ್ಷ ಮೂಲ ಬಂಡವಾಳದೊಂದಿಗೆ ವ್ಯವಹಾರ ಆರಂಭಿಸಿದ ಸಂಘವು 2024-25ನೇ ಸಾಲಿನ ವರ್ಷಾಂತ್ಯಕ್ಕೆ ಒಟ್ಟು 1408 ಎ ತರಗತಿ ಸದಸ್ಯರನ್ನು ಹೊಂದಿದ್ದು, ರೂ.37 ಕೋಟಿ ದುಡಿಯುವ ಬಂಡವಾಳ ಹೊಂದಿದೆ. ಆಲಂಕಾರಿನಲ್ಲಿ ಸ್ವಂತ ನಿವೇಶನದಲ್ಲಿರುವ ಬೈದಶ್ರೀ ಸಹಕಾರ ಸೌಧದಲ್ಲಿ ಕೇಂದ್ರ ಕಚೇರಿ ಹೊಂದಿದ್ದು, ಕಡಬ, ನೂಜಿಬಾಳ್ತಿಲ-ಕಲ್ಲುಗುಡ್ಡೆ, ನೆಟ್ಟಣ ಮತ್ತು ಕೊಯಿಲದಲ್ಲಿ ಬ್ಯಾಂಕಿಂಗ್ ವ್ಯವಹಾರದ ಶಾಖೆಗಳಿವೆ. 2024-25ನೇ ಸಾಲಿನಲ್ಲಿ…

Read More

ಬ್ರಹ್ಮಾವರ: ಹೇರಾಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಅನನ್ಯ ಸೌಹಾರ್ದ ಸಹಕಾರಿ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಸೆಪ್ಟೆಂಬರ್‌ 21ರಂದು ಬೆಳಗ್ಗೆ 10.30ಕ್ಕೆ ಹೇರಾಡಿಯ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿಗದಿಪಡಿಸಲಾಗಿದೆ. ಸೊಸೈಟಿಯ ಅಧ್ಯಕ್ಷ ಹರೀಶ ಬಾರ್ಕೂರ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಭೆಯಲ್ಲಿ ಎಲ್ಲ ಸದಸ್ಯರೂ ಹಾಜರಿರಬೇಕಾಗಿ ಪ್ರಕಟಣೆ ತಿಳಿಸಿದೆ.

Read More

ಬಂಟ್ವಾಳ: ದ.ಕ ಜಿಲ್ಲಾ ಮೂರ್ತೆದಾರರ ಸಹಕಾರಿ ಮಹಾಮಂಡಲದ ನೂತನ ಸ್ಥಳಾಂತರಿತ ಕೇಂದ್ರ ಕಚೇರಿಯ ಉದ್ಘಾಟನಾ ಸಮಾರಂಭ ಸೆಪ್ಟೆಂಬರ್‌ 5ರಂದು ಶುಕ್ರವಾರ ಬಿ.ಸಿ.ರೋಡಿನ ಕೃಷಿಕ ಸಮಾಜದ ಕಟ್ಟಡದಲ್ಲಿ ಬೆಳಿಗ್ಗೆ 10.30ಕ್ಕೆ ನಡೆಯಲಿದೆ. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ನೂತನ ಕೇಂದ್ರ ಕಚೇರಿ ಉದ್ಘಾಟಿಸಲಿದ್ದಾರೆ. ದ.ಕ. ಜಿಲ್ಲಾ ಮೂರ್ತೆದಾರರ ಸಹಕಾರಿ ಮಹಾಮಂಡಲದ ಅಧ್ಯಕ್ಷ ಕೆ.ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರ. ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಭದ್ರತಾ ಕೋಶ’ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್‌ ಉಳಿಪ್ಪಾಡಿ, ಮಾಜಿ ಸಚಿವ ಬಿ.ರಮಾನಾಥ ರೈ, ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲೊಟ್ಟು, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ, ದ.ಕ.ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಎಚ್.ಎನ್ ರಮೇಶ್, ಬಂಟ್ವಾಳ ಪುರಸಭೆಯ ಅಧ್ಯಕ್ಷ ವಾಸು ಪೂಜಾರಿ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ…

Read More

ಮಂಗಳೂರು: ಎಸ್.ಕೆ. ಗೋಲ್ಡ್‌ಸ್ಮಿತ್‌ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್‌ ವತಿಯಿಂದ ಸೆ.5ರಂದು ವಿದ್ಯಾರ್ಥಿವೇತನ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಶ್ರೀ ಶರವು ಮಹಾಗಣಪತಿ ದೇವಸ್ಥಾನದ ಹತ್ತಿರದ ಶ್ರೀ ರಾಧಾಕೃಷ್ಣ ಹಾಲ್ (ಬಾಳಂಭಟ್ ಹಾಲ್)ನಲ್ಲಿ ನಡೆಯಲಿದೆ. https://chat.whatsapp.com/EbVKVnWB6rlHT1mWtsgbch ಬೆಳಗ್ಗೆ 11ಕ್ಕೆ ಬೆಂಗಳೂರಿನ ಕೆಂಗೇರಿಯ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರು ಡಾ.ಶ್ರೀ ನಿಶ್ಚಲಾನಂದನಾಥ ಮಹಾಸ್ವಾಮಿಗಳವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಎಸ್.ಕೆ. ಗೋಲ್ಡ್‌ಸ್ಮಿತ್‌ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ನಿಟ್ಟೆ ಎನ್.ಎಂ.ಎ.ಎಂ. ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯ ವಿಭಾಗ ಮುಖ್ಯಸ್ಥರಾದ ಡಾ.ಸುಷ್ಮಾ ಪಿ.ಎಸ್. ಶುಭಾಶಂಸನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೆನರಾ ಜ್ಯುವೆಲ್ಲರ್ಸ್ ಮಂಗಳೂರಿನ ಧನಂಜಯ ಪಾಲ್ಕೆ, ವಿಧಾನ ಪರಿಷತ್‌ ಮಾಜಿ ಸದಸ್ಯ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್‌, ಎಸ್.ಎಸ್.ಕೆ. ವಿಶ್ವಕರ್ಮ ಸೇವಾ ಟ್ರಸ್ಟ್, ಮಂಡ್ಯ ಜಿಲ್ಲೆಯ ಸ್ಥಾಪಕರಾದ ಎಂ.ಬಿ.ರಮೇಶ ಆಚಾರ್ಯ ಭಾಗವಹಿಸಲಿದ್ದಾರೆ. ಎಸ್.ಕೆ. ಗೋಲ್ಡ್‌ಸ್ಮಿತ್‌ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷ ಎ.ಆನಂದ…

Read More

ಜಮಖಂಡಿ: ಹುನ್ನೂರ ಸೌಹಾರ್ದ ಸಹಕಾರಿ ಸಂಘದ ವತಿಯಿಂದ, ರೋಟರಿ ಸಂಸ್ಥೆ ಜಮಖಂಡಿ ಮತ್ತು ಇನ್ನರ್‌ವೀಲ್ ಸಂಸ್ಥೆ ಜಮಖಂಡಿ ಇವರ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಭಾನುವಾರ ಪಿಎಂಶ್ರೀ ಸರಕಾರಿ ಮಾದರಿ ಶಾಲೆಯಲ್ಲಿ ಯಶಸ್ವಿಯಾಗಿ ಜರುಗಿತು. https://chat.whatsapp.com/EbVKVnWB6rlHT1mWtsgbch ಕಾರ್ಯಕ್ರಮದಲ್ಲಿ ಹುನ್ನೂರ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ಶಂಕರ ಜಾಲಿಗಿಡದವರು, ಉಪಾಧ್ಯಕ್ಷರಾದ ಸದಾಶಿವ ಸೊನ್ನದ, ನಿರ್ದೇಶಕರಾದ ಚನ್ನಪ್ಪಣ್ಣ ಬಿರಾದಾರ ಮತ್ತು ಶ್ರೀಶೈಲ ತೇಲಿಯವರು ಉಪಸ್ಥಿತರಿದ್ದರು. ಹುನ್ನೂರ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿ ಮತ್ತು ಸಿಬ್ಬಂದಿಗಳು, ಆನಂದ ದೇವರ ದೇವರು ಓಲೆಮಠ, ಶಿಬಿರದಲ್ಲಿ ಪಾಲ್ಗೊಂಡ ಎಲ್ಲಾ ತಜ್ಞ ವೈದ್ಯರೊಂದಿಗೆ, ರೋಟರಿ ಸಂಸ್ಥೆಯ ಅಧ್ಯಕ್ಷರು ಮತ್ತು ಸದಸ್ಯರು, ಇನ್ನರ್‌ವ್ಹೀಲ್ ಅಧ್ಯಕ್ಷರು ಮತ್ತು ಸದಸ್ಯರ ಜೊತೆಗೂಡಿ ಹುನ್ನೂರ ಸೌಹಾರ್ದ ಕಚೇರಿಯಿಂದ ಕಾಲ್ನಡಿಗೆ ಮೂಲಕ ಪಿಎಂಶ್ರೀ ಶಾಲೆಗೆ ಆಗಮಿಸಿದರು. ನಂತರ ಶ್ರೀ ಆನಂದ ದೇವರು ಓಲೆಮಠ ಉಚಿತ ಆರೋಗ್ಯ ಶಿಬಿರವನ್ನು ಉದ್ಘಾಟಿಸಿದರು. ಉಚಿತ ಆರೋಗ್ಯ ಶಿಬಿರದಲ್ಲಿ 625 ಜನ ಉಚಿತ ಆರೋಗ್ಯ ತಪಾಸಣೆ ಮಾಡಿಸಿಕೊಂಡು, ಉಚಿತ ಔಷಧ…

Read More

ಬಂಟ್ವಾಳ: ಇಲ್ಲಿನ ಸಾರ್ವಜನಿಕ ಉದ್ಯೋಗಸ್ಥರ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. https://chat.whatsapp.com/EbVKVnWB6rlHT1mWtsgbch ಮಂಗಳೂರಿನಲ್ಲಿ ಶನಿವಾರ ನಡೆದ ಎಸ್.ಸಿ.ಡಿ.ಸಿ.ಸಿ.ಬ್ಯಾಂಕಿನ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ಕೆ.ಜಯಂತ ನಾಯಕ್‌ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಶಶಿಕುಮಾರ್‌ ರೈ ಬಾಲ್ಯೊಟ್ಟು, ಸಹಕಾರ ಸಂಘಗಳ ದ.ಕ. ಜಿಲ್ಲಾ ಉಪನಿಬಂಧಕರಾದ ಎಚ್‌.ಎನ್‌ ರಮೇಶ್‌, ಉಡುಪಿ ಜಿಲ್ಲಾ ಉಪನಿಬಂಧಕರಾದ ಲಾವಣ್ಯ, ಎಸ್‌ಸಿಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷರಾದ ವಿನಯಕುಮಾರ್‌ ಸೂರಿಂಜೆ, ನಿರ್ದೇಶಕರಾದ ಟಿ.ಜಿ ರಾಜಾರಾಮ ಭಟ್‌, ಬೆಳಪು ದೇವಿಪ್ರಸಾದ್‌ ಶೆಟ್ಟಿ, ಸದಾಶಿವ ಉಳ್ಳಾಲ್‌ ಮೊದಲಾದವರು ಹಾಜರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com

Read More

ಸುಳ್ಯ: ಮಂಗಳೂರಿನಲ್ಲಿ ಶನಿವಾರ ಜರುಗಿದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2024-25ನೇ ಸಾಲಿನ ಮಹಾಸಭೆಯಲ್ಲಿ ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 2024-25ನೇ ಸಾಲಿನಲ್ಲಿ ಸಂಘ ದಾಖಲಿಸಿದ ಅಭಿವೃದ್ಧಿ ಮತ್ತು ಸದಸ್ಯರಿಗೆ ನೀಡಿದ ಸೇವೆಗಳನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. https://chat.whatsapp.com/EbVKVnWB6rlHT1mWtsgbch ಮಂಗಳೂರಿನಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ ಎನ್ ರಾಜೇಂದ್ರ ಕುಮಾರ್ ಅವರು ಸಂಘದ ಅಧ್ಯಕ್ಷರಾದ ಸಂತೋಷ್ ಕುತ್ತಮೊಟ್ಟೆ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಾಸುದೇವ ನಾಯಕ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಡಾ.ಲಕ್ಷ್ಮೀಶ ಕೆ ಎಸ್, ನಿರ್ದೇಶಕರಾದ ಪ್ರಶಾಂತ ಕಾಪಿಲ, ಪದ್ಮಯ ಅಡ್ಯಡ್ಕ, ಉದಯಕುಮಾರ್ ಉಳುವಾರು, ಶ್ರೀಲತಾ ದೇರಾಜೆ, ಲೋಚನ ಕೊಳಲುಮೂಲೆ, ಆರಂತೋಡು ಹಾಲು ಉತ್ಪಾದಕಾರ ಸಹಕಾರ ಸಂಘದ ಅಧ್ಯಕ್ಷರಾದ ಮೋಹನ್ ಕಿನಾಲ, ಕಾರ್ಯದರ್ಶಿ ವಿಮಲಾ ಪೈಕ ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ…

Read More

ಮಂಗಳೂರು: ಇಲ್ಲಿನ ಜನತಾ ಬಜಾರ್‌ ಬಿಲ್ಡಿಂಗ್‌ನಲ್ಲಿ ಕೇಂದ್ರ ಕಚೇರಿ ಹೊಂದಿರುವ ತುಳುನಾಡು ವಿವಿಧೋದ್ದೇಶ ಸಹಕಾರ ಸಂಘದ 16ನೇ ವಾರ್ಷಿಕ ಮಹಾಸಭೆ ಸೆಪ್ಟೆಂಬರ್‌ 11ರಂದು ನಿಗದಿಯಾಗಿದೆ. https://chat.whatsapp.com/EbVKVnWB6rlHT1mWtsgbch ಅಂದು ಮಧ್ಯಾಹ್ನ 3.30ಕ್ಕೆ ಸಭೆಯು ಜನತಾ ಬಜಾರ್ ಬಿಲ್ಡಿಂಗ್, 2ನೇ ಮಹಡಿ, ಜಿ.ಹೆಚ್.ಎಸ್. ರೋಡ್ ಹಂಪನಕಟ್ಟಾ, ಮಂಗಳೂರು ಇಲ್ಲಿ ನಡೆಯಲಿದೆ. ಇದೇ ಸಭೆಯಲ್ಲಿ ವಾರ್ಷಿಕ ವರದಿ ಮಂಡಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com

Read More

ಮಂಗಳೂರು: ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘ ನಿಯಮಿತ ಮಂಗಳೂರು ಇದರ 2024 -25ನೇ ಸಾಲಿನ ವಾರ್ಷಿಕ ಮಹಾಸಭೆ ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ಭಾಸ್ಕರ್ ಎಸ್.ಕೋಟ್ಯಾನ್ ಅಧ್ಯಕ್ಷತೆಯಲ್ಲಿ ಜರಗಿತು. https://chat.whatsapp.com/EbVKVnWB6rlHT1mWtsgbch ಸಂಘದಲ್ಲಿ ಒಟ್ಟು 15,245 ಸದಸ್ಯರಿದ್ದು, 2024-25ನೇ ಸಾಲಿನಲ್ಲಿ 550 ಕೋಟಿಗೂ ಮಿಕ್ಕಿ ವಾರ್ಷಿಕ ವಹಿವಾಟು ನಡೆಸಿದೆ. ಸಂಘದಲ್ಲಿ ಒಟ್ಟು ರೂ. 8472.40 ಲಕ್ಷ ಠೇವಣಿ ಇದ್ದು ಹೊರಬಾಕಿ ಸಾಲ ರೂ. 8449.93 ಲಕ್ಷ ಇದೆ. 2024- 25ನೇ ಸಾಲಿಗೆ ರೂ. 103.09 ಲಕ್ಷ ಲಾಭ ಗಳಿಸಿದ್ದು ಶೇಕಡ 9 ಡಿವಿಡೆಂಡ್ ಘೋಷಿಸಿದೆ. ಸಂಘವು ಮುಂದಿನ ದಿನಗಳಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ತಾಲೂಕು ಕೇಂದ್ರಗಳಲ್ಲಿ ಶಾಖೆಗಳನ್ನು ತೆರೆಯಲು ಉದ್ದೇಶಿಸಿದೆ. ಸಂಘದ ಸ್ಥಾಪಕ ಅಧ್ಯಕ್ಷರು ಹಾಗೂ ಹಾಲಿ ನಿರ್ದೇಶಕರಾದ ಸಹಕಾರ ರತ್ನ ಡಾ. ಎಂ ಎನ್ ರಾಜೇಂದ್ರ ಕುಮಾರ್ ಮತ್ತು ಸಂಸ್ಥೆಯ ಆಡಳಿತ ಮಂಡಳಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು. ಮುಖ್ಯ…

Read More

ಬೆಳ್ಳಾರೆ: ದ.ಕ.ಜಿಲ್ಲಾ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 2024-25ನೇ ಸಾಲಿನ ಸಂಘದ ಗಣನೀಯ ಸೇವೆಯನ್ನು ಗುರುತಿಸಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. https://chat.whatsapp.com/EbVKVnWB6rlHT1mWtsgbch ಮಂಗಳೂರಿನಲ್ಲಿ ನಡೆದ ಎಸ್.ಸಿ.ಡಿ.ಸಿ.ಸಿ.ಬ್ಯಾಂಕಿನ ಮಹಾಸಭೆಯಲ್ಲಿ ಎಸ್.ಸಿ.ಡಿ.ಸಿ.ಸಿ.ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಸಂಘದ ಅಧ್ಯಕ್ಷ ಆರ್.ಕೆ.ಭಟ್ ಕುರುಂಬುಡೇಲು ಮತ್ತು ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸುನಂದಾ ಆಳ್ವ ಅವರನ್ನು ಪ್ರಶಸ್ತಿ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ನಿರ್ದೇಶಕರಾದ ಕರುಣಾಕರ ಆಳ್ವ, ಭಾಸ್ಕರ ನೆಟ್ಟಾರು, ವಾಸುದೇವ ನಾಯಕ್, ಜನಾರ್ಧನ ಗೌಡ ಆರ್ವಾರ, ಬೀಯಾಳು ಹಾಗೂ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ವಿಜಯ ರೈ ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com

Read More