Author: admin
ಮಂಡ್ಯ: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನಲ್ಲಿ ಜಿಲ್ಲೆಯ ಎಲ್ಲಾ ಸೌಹಾರ್ದ ಸಹಕಾರಿ ಸಂಘಗಳಿಗೆ ಸದಸ್ಯತ್ವ ನೀಡಲು ಒತ್ತಾಯಿಸಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಜೋಗಿಗೌಡ ಅವರಿಗೆ ಪದಾಧಿಕಾರಿಗಳು ಮನವಿ ಪತ್ರ ಸಲ್ಲಿಸಿದರು. https://chat.whatsapp.com/EbVKVnWB6rlHT1mWtsgbch ಬಳಿಕ ಮಾತನಾಡಿದ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟ ಅಧ್ಯಕ್ಷ ಬಿ.ಟಿ.ಗುರುರಾಜ್, ಜಿಲ್ಲೆಯ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ ಜಿಲ್ಲೆಯಾದ್ಯಂತ 35 ಸೌಹಾರ್ದ ಸಹಕಾರಿ ಸಂಘಗಳು ಸಕ್ರಿಯವಾಗಿದ್ದು, ವಾರ್ಷಿಕ 100 ಕೋಟಿಗೂ ಅಧಿಕ ವಹಿವಾಟು ನಡೆಸುತ್ತಿದ್ದು, ಸರಿಸುಮಾರು 3,000 ಸದಸ್ಯರನ್ನು ಒಳಗೊಂಡಿದೆ. ಈ ಮೂಲಕ ಜಿಲ್ಲಾ ಸಹಕಾರ ಕ್ಷೇತ್ರದಲ್ಲಿ ತನ್ನದೇ ಆದ ಮಹತ್ವದ ಪಾತ್ರವನ್ನು ನಿರ್ವಹಿಸುತ್ತಿವೆ, ಸೌಹಾರ್ದ ಸಹಕಾರಿ ಸಂಘಗಳ ಬೆಳವಣಿಗೆಯು ದೃಷ್ಟಿಕೋನದಿಂದ ಹಾಗೂ ಜಿಲ್ಲಾ ಸೌಹಾರ್ದ ಸಹಕಾರಿಗಳ ಚಳುವಳಿ ಬಲಿಷ್ಟವಾಗಲು (ಪ್ರಬಲವಾಗಲು) ಜಿಲ್ಲಾ ಕೇಂದ್ರ ಸಹಕಾರ. ಬ್ಯಾಂಕಿನ ಸದಸ್ಯತ್ವ ಅನಿರ್ವಾವಾಗಿದೆ ಎಂದು ಒತ್ತಾಯಿಸಿದರು. ಈಗಾಗಲೇ ಸಹಕಾರ ಸಂಘಗಳ ನಿಬಂಧಕರು ಕರ್ನಾಟಕ ರಾಜ್ಯ ದಿನಾಂಕ 6-12-2003ರಲ್ಲಿ ಪತ್ರದ ಸಂಖ್ಯೆ ಆರ್ ಎಸ್ ಆರ್/ಸೌಕ/೧೬೪/ ಎಕ್ಸ್ ಎಂಸಿ/೨೦೦೩-೦೪ ಸುತ್ತೋಲೆಯಲ್ಲಿ ಕರ್ನಾಟಕ ರಾಜ್ಯದ…
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೀರುಮಾರ್ಗ ಶಾಖೆಯ ತೃತೀಯ ವಾರ್ಷಿಕೋತ್ಸವ ಪ್ರಯುಕ್ತ ಉಚಿತ ವೈದ್ಯಕೀಯ, ನೇತ್ರ ಮತ್ತು ದಂತ ತಪಾಸಣಾ ಶಿಬಿರವು ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು, ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿ ನೀರುಮಾರ್ಗ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘ ಸುಬ್ರಹ್ಮಣ್ಯ ನಗರ ನೀರುಮಾರ್ಗ ಇವರುಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿ ಸಭಾಭವನ ನೀರುಮಾರ್ಗದಲ್ಲಿ ಜರುಗಿತು. https://chat.whatsapp.com/EbVKVnWB6rlHT1mWtsgbch ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು ಇದರ ಅಧ್ಯಕ್ಷರಾದ ರಾಜೇಶ್ ಕಾಮತ್ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಇಂತಹ ಜನಪರ ಸೇವಾ ಕಾರ್ಯಗಳು ಶ್ಲಾಘನೀಯ. ಈ ಸಹಕಾರಿ ಸಂಘದೊಂದಿಗೆ ಸತತವಾಗಿ ಗುಣಮಟ್ಟದ ಶಿಬಿರಗಳನ್ನು ಹೆಮ್ಮೆಯಿಂದ ಆಯೋಜಿಸುತ್ತಾ ಬರುತ್ತಿದ್ದೇವೆ ಎಂದರು. ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್ ಇದರ ಬಿ.ಡಿ.ಒ. ಜಯಚಂದ್ರ ನಾಯಕ್ ಮಾತನಾಡಿ, ಆರೋಗ್ಯ ತಪಾಸಣೆಯು ಇಂದಿನ ಆಹಾರ ಪದ್ಧತಿ ಮತ್ತು ಜೀವನ ಶೈಲಿಯಲ್ಲಿ ಅತ್ಯಗತ್ಯ. ಆತ್ಮಶಕ್ತಿ…
ವಾರ್ಷಿಕ ಮಹಾಸಭೆಯಲ್ಲಿ ಸದಸ್ಯರಿಗೆ 9% ಲಾಭಾಂಶ ಘೋಷಣೆ ರಾಯಚೂರು: ವೀರಶೈವ ವಿಕಾಸ ಸೌಹಾರ್ದ ಸಹಕಾರಿ ಸಂಘ ರಾಯಚೂರು ಇದರ ಏಳನೇ ವಾರ್ಷಿಕ ಮಹಾಸಭೆ ಭಾನುವಾರ ರಾಯಚೂರಿನ ಕೊಠಾರಿ ಫಂಕ್ಷನ್ ಹಾಲ್‌ನಲ್ಲಿ ಜರುಗಿತು. https://chat.whatsapp.com/EbVKVnWB6rlHT1mWtsgbch ಸಹಕಾರಿಯ ಅಧ್ಯಕ್ಷರಾದ ಪ್ರಭುದೇವರು ಎಚ್.ಎಂ ಅಧ್ಯಕ್ಷತೆ ವಹಿಸಿದ್ದರು. 2024-25ನೇ ಸಾಲಿನಲ್ಲಿ ವೀರಶೈವ ವಿಕಾಸ ಸೌಹಾರ್ದ ಸಹಕಾರಿ ಸಂಘವು 17 ಲಕ್ಷ ರೂ. ಲಾಭ ಗಳಿಸಿದೆ. ಸಹಕಾರಿಯ ವ್ಯವಹಾರವು 25 ಕೋಟಿ ರೂ. ದಾಟಿದ್ದು, ದುಡಿಯವ ಬಂಡವಾಳವು 15.15 ಕೋಟಿಯಷ್ಟಿದೆ. 13.68 ಲಕ್ಷ ರೂ. ಠೇವಣಿ ಸಂಗ್ರಹ, 12.36 ಲಕ್ಷ ರೂ. ಸಾಲ ವಿತರಣೆ ಮಾಡಲಾಗಿದೆ. ಸಾಲ ವಸೂಲಾತಿ ಪ್ರಮಾಣ 97 ಪ್ರತಿಶತ ಇದೆ ಎಂದು ಅಧ್ಯಕ್ಷರು ಮಾಹಿತಿ ನೀಡಿ, ಸಹಕಾರಿಯ ಎಲ್ಲಾ ಸದಸ್ಯರ ಸಹಕಾರದಿಂದ ಈ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ತಿಳಿಸಿ, ಸದಸ್ಯರಿಗೆ ಶೇ 9 ಲಾಭಾಂಶ ಘೋಷಿಸಿದರು. ಸಹಕಾರಿ ಪಿತಾಮಹರಾದ ಸಿದ್ದನಗೌಡ ಸಣ್ಣರಾಮನಗೌಡ ಕಣಗಿನಹಾಳ್ ಇವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಸಹಕಾರಿಯ ಮುಖ್ಯಕಾರ್ಯನಿರ್ವಾಹಕರಾದ ರವಿಕುಮಾರ್…
ಬಂಟ್ವಾಳ: 2024-2025ನೇ ಸಾಲಿನಲ್ಲಿ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಆರ್ಥಿಕ ವ್ಯವಹಾರದಲ್ಲಿ ಗಣನೀಯ ಸಾಧನೆ ಮಾಡಿರುವ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ನೀಡಲಾಗುವ ಸಾಧನಾ ಪುರಸ್ಕಾರವನ್ನು ನೀಡಲಾಗಿದೆ. https://chat.whatsapp.com/EbVKVnWB6rlHT1mWtsgbch ಶನಿವಾರ ನಡೆದ ಎಸ್ಸಿಡಿಸಿಸಿ ಬ್ಯಾಂಕ್ ಮಹಾಸಭೆಯಲ್ಲಿ ಸಿದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಪ್ರಭಾಕರ ಪ್ರಭು ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಆರತಿ ಶೆಟ್ಟಿಯವರನ್ನು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್. ರಾಜೇಂದ್ರಕುಮಾರ್ ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿ ಪ್ರಶಸ್ತಿ ನೀಡಿದರು. ಈ ಸಂದರ್ಭದಲ್ಲಿ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾದ ಟಿ.ಜಿ. ರಾಜಾರಾಮ್ ಭಟ್, ಬೆಳಪು ದೇವಿಪ್ರಸಾದ್ ಶೆಟ್ಟಿ ಸೇರಿದಂತೆ ಎಲ್ಲಾ ನಿರ್ದೇಶಕರು, ಸಹಕಾರ ಸಂಘಗಳ ಉಪ ನಿಬಂಧಕರಾದ ಎಚ್. ಎನ್.ರಮೇಶ್, ನಬಾರ್ಡ್ ಅಧಿಕಾರಿಗಳು ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಮಂಗಳೂರು: ಮಂಗಳೂರು ಸೌಹಾರ್ದ ಸಹಕಾರಿ ಸಂಘದ 15ನೇ ವಾರ್ಷಿಕ ಮಹಾಸಭೆ ಭಾನುವಾರ ಮಂಗಳೂರು ಸ್ಕೋರ್ ಸಭಾಂಗಣದಲ್ಲಿ ಸಹಕಾರಿಯ ಅಧ್ಯಕ್ಷರಾದ ಮಾಜಿ ಕಾರ್ಪೋರೇಟರ್ ಕೆ.ಭಾಸ್ಕರ್ ರಾವ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. https://chat.whatsapp.com/EbVKVnWB6rlHT1mWtsgbch ಕಾರ್ಯಕ್ರಮದಲ್ಲಿ ಜಪ್ಪು ಆರೋಗ್ಯ ಕೇಂದ್ರದವರಿಂದ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ಸಂಘದ ಕಾನೂನು ಸಲಹೆಗಾರ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಉದ್ಘಾಟಿಸಿದರು. ಬಿ.ಪಿ ತಪಾಸಣೆ, ಮಧುಮೇಹ ತಪಾಸಣೆ ನಡೆಸಲಾಯಿತು. ಸದಸ್ಯರ ಮನೆಗೆ ತರ್ಮಾಮೀಟರ್ ವಿತರಿಸಲಾಯಿತು. ಧನ್ವಿ ರಾವ್ ಪ್ರಾರ್ಥಿಸಿದರು. ಅಧ್ಯಕ್ಷ ಕೆ.ಭಾಸ್ಕರರಾವ್ ಸ್ವಾಗತಿಸಿದರು. ನಿರ್ದೇಶಕರಾದ ಸದಾಶಿವ ಅಮೀನ್ 2024-2025ನೇ ಸಾಲಿನ ವಾರ್ಷಿಕ ವರದಿ -ಲೆಕ್ಕ ಪರಿಶೋಧನಾ ವರದಿ ಮಂಡಿಸಿದ್ದು, ಅನುಮೋದನೆ ಪಡೆಯಲಾಯಿತು. ಸದಸ್ಯರ ಮಕ್ಕಳಿಗೆ ಪುಸ್ತಕ ವಿತರಿಸಲಾಯಿತು. ಸೌಹಾರ್ದ ಸಹಕಾರಿ ಆಡಳಿತಾಧಿಕಾರಿ ನಂದನ್ ಸಭೆ ನಡೆಸಿಕೊಟ್ಟರು. ಮಾಜಿ ನಿರ್ದೇಶಕರಾದ ಅಮರನಾಥ್, ಶೋಭಾರಾಣಿ, ರತನ್ ಕುಮಾರ್, ಹಿರಿಯ ಸದಸ್ಯರಾದ ಜೆ.ಕೊರಗಪ್ಪ, ವಾರಿಜಾ, ಮೀರಾ ರವೀಂದ್ರ, ಎ.ಜೆ. ಶರ್ಮ, ಮೀನಾ ಟೆಲ್ಲಿಸ್, ಆನಂದ ಸೋನ್ಸ್, ಸತೀಶ್ ಪೆಂಗಾಲ್, ತಿಮ್ಮಪ್ಪ ಶೆಟ್ಟಿ…
ಮಂಗಳೂರು: ವಿಶ್ವಕರ್ಮ ಸಹಕಾರ ಬ್ಯಾಂಕ್ 2024-25ನೇ ಸಾಲಿನಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ ಶನಿವಾರ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. https://chat.whatsapp.com/EbVKVnWB6rlHT1mWtsgbch ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಪ್ರಸಕ್ತ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ|ಎಂ.ಎನ್. ರಾಜೇಂದ್ರ ಕುಮಾರ್ ಇವರು, ವಿಶ್ವಕರ್ಮ ಸಹಕಾರ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಡಾ. ಎಸ್ ಆರ್ ಹರೀಶ್ ಆಚಾರ್ಯ ಮತ್ತು ಉಪಾಧ್ಯಕ್ಷರಾದ ಜಗದೀಶ್ ಪಡುಪಣಂಬೂರು ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಪ್ರಶಸ್ತಿ ವಿತರಣೆ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷರಾದ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಭಾಸ್ಕರ್ ಎಸ್.ಕೋಟ್ಯಾನ್, ಎಸ್.ಬಿ. ಜಯರಾಮ ರೈ, ಮೋನಪ್ಪ ಶೆಟ್ಟಿ ಎಕ್ಕಾರು, ಕೆ.ಜೈರಾಜ್ ಬಿ. ರೈ, ಸದಾಶಿವ ಉಳ್ಳಾಲ್, ದ.ಕ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ದ.ಕ ಜಿಲ್ಲಾ ಸಹಕಾರ ಸಂಘಗಳ…
ಮಂಗಳೂರು: ಕಿರಣ್ ಗೇಮ್ಸ್ ಟೀಮ್ ಮಾರ್ನಮಿಕಟ್ಟೆ ಇದರ 55ನೇ ವಾರ್ಷಿಕೋತ್ಸವ ಅಂಗವಾಗಿ ರಾಮಕೃಷ್ಣ ಮಿಷನ್ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ವಿಶ್ವಕರ್ಮ ಸಹಕಾರ ಬ್ಯಾಂಕ್ ರಥಬೀದಿ, ಮಂಗಳೂರು ಮತ್ತು ಮಹಾರಾಣಾ ಪ್ರತಾಪ್ ಸ್ಪೋರ್ಟ್ಸ್ ಕ್ಲಬ್ ಮಂಗಳೂರು ಇವರ ಸಹಯೋಗದಲ್ಲಿ ಮಂಗಳೂರಿನ ಪ್ರತಿಷ್ಠಿತ ಕೆ.ಎಂ.ಸಿ. ಆಸ್ಪತ್ರೆ ಮತ್ತು ಕೆ.ಎಸ್. ಹೆಗ್ಡೆ ಆಸ್ಪತ್ರೆಗಳ ಸಹಭಾಗಿತ್ವದಲ್ಲಿ ಮಂಗಳೂರಿನ ಖ್ಯಾತ ತಜ್ಞ ವೈದ್ಯರ ಉಪಸ್ಥಿತಿಯಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಭಾನುವಾರ ಮಂಗಳಾದೇವಿ ದೇವಸ್ಥಾನದ ಬಳಿಯ ರಾಮಕೃಷ್ಣ ಆಶ್ರಮದಲ್ಲಿ ನಡೆಯಿತು. https://chat.whatsapp.com/EbVKVnWB6rlHT1mWtsgbch ಉದ್ಘಾಟನಾ ಸಮಾರಂಭದಲ್ಲಿ ರಾಮಕೃಷ್ಣ ಮಿಷನ್ ಮುಖ್ಯಸ್ಥರಾದ ಸ್ವಾಮಿ ಜಿತಕಾಮಾನಂದಜೀ ದೀಪ ಪ್ರಜ್ವಲನೆಗೈದರು. ಮೂಡುಬಿದಿರೆ ಆಳ್ವಾಸ್ ಎಜುಕೇಶನ್ ಫೌಂಡೇಶನ್ ಅಧಕ್ಷರಾದ ಡಾ|ಎಂ.ಮೋಹನ್ ಆಳ್ವ ಉದ್ಘಾಟಿಸಿದರು. ಕೆ.ಎಂ.ಸಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ| ಚಕ್ರಪಾಣಿ ಎಂ. ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಂಗಳೂರಿನ ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್., ಮಂಗಳೂರು ಪ್ರೆಸ್ ಕ್ಲಬ್…
ಪುತ್ತೂರು: ಪ್ರತಿಷ್ಟಿತ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸರ್ವತೋಮುಖ ಪ್ರಗತಿಯನ್ನು ಪುರಸ್ಕರಿಸಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ವತಿಯಿಂದ ಶನಿವಾರ ಸಾಧನಾ ಪುರಸ್ಕಾರ ನೀಡಿ ಗೌರವಿಸಲಾಗಿದೆ. https://chat.whatsapp.com/EbVKVnWB6rlHT1mWtsgbch ಸಂಘದ ಅಧ್ಯಕ್ಷರಾದ ತಾರಾನಾಥ ಕಾಯರ್ಗ ಮತ್ತು ಸಿಇಒ ಚಂದ್ರಶೇಖರ ಅವರು ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಡಾ. ಎಂ. ಎನ್ ರಾಜೇಂದ್ರ ಕುಮಾರ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಸ್. ಬಿ ಜಯರಾಮ ರೈ, ಸದಾಶಿವ ಉಳ್ಳಾಲ್ ಮೊದಲಾದವರು ಉಪಸ್ಥಿತರಿದ್ದರು. ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2024-25ನೇ ಸಾಲಿನಲ್ಲಿ 412.92 ಕೋಟಿ ರೂ. ವ್ಯವಹಾರ ಮಾಡಿದ್ದು, 1.67 ಕೋಟಿ ರೂ. ಲಾಭ ಗಳಿಸಿದೆ. ಸದಸ್ಯರಿಗೆ ಶೇ.14 ಡಿವಿಡೆಂಡ್ ನೀಡಲಾಗಿದೆ. ಸಂಘವು ಸತತವಾಗಿ 23ನೇ ಬಾರಿ ಎ ತರಗತಿ ಆಡಿಟ್ ವರ್ಗೀಕರಣದೊಂದಿಗೆ ಶೇ.99.25 ಸಾಲ ವಸೂಲಾತಿ ಸಾಧನೆ ಮಾಡಿದೆ. ನಿಮ್ಮ ಸಂಸ್ಥೆಗಳ…
ಮಂಗಳೂರು: ಪ್ರಸಕ್ತ ಆರ್ಥಿಕ ವರ್ಷದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿ ಹಾಗೂ ಎಸ್ಸಿಡಿಸಿಸಿ ಬ್ಯಾಂಕ್ ಜೊತೆಗಿನ ಉತ್ತಮ ಬಾಂಧವ್ಯವನ್ನು ಪುರಸ್ಕರಿಸಿ ಮಂಗಳೂರಿನ ದೈವಜ್ಞ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಎಸ್ಸಿಡಿಸಿಸಿ ಬ್ಯಾಂಕ್ ವತಿಯಿಂದ ಶನಿವಾರ ಸಾಧನಾ ಪುರಸ್ಕಾರ ನೀಡಿ ಗೌರವಿಸಲಾಯಿತು. https://chat.whatsapp.com/EbVKVnWB6rlHT1mWtsgbch ಸತತ ಮೂರನೇ ಬಾರಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ ಮಂಗಳೂರು ಇದರ ಮಹಾಸಭೆಯಲ್ಲಿ ದೈವಜ್ಞ ಸಹಕಾರಿ ಸಂಸ್ಥೆಗೆ “ಸಾಧನಾ ಪ್ರಶಸ್ತಿ”ಯನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ರವರು ದೈವಜ್ಞ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ರಮಾನಂದ ಶೇಟ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಂತೋಷ್ ಶೇಟ್ ಅವರಿಗೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸೊಸೈಟಿಯ ನಿರ್ದೇಶಕರಾದ ಗಜೇಂದ್ರ ಶೇಟ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ನಿರ್ದೇಶಕರು ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
10% ಡಿವಿಡೆಂಡ್, ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಮಾಹಿತಿ ಮಂಗಳೂರು: ಸಹಕಾರ ಕ್ಷೇತ್ರಕ್ಕೆ ಆದರ್ಶವಾಗಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) 2024-25ನೇ ಸಾಲಿನಲ್ಲಿ ಸಾರ್ವಕಾಲಿಕ ಗರಿಷ್ಠ 110.41 ಕೋಟಿ ರೂ. ಲಾಭ ಗಳಿಸಿದೆ. ಸದಸ್ಯ ಸಂಘಗಳಿಗೆ ಶೇ.10 ಡಿವಿಡೆಂಡ್ ನೀಡಲಾಗುವುದು ಎಂದು ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ತಿಳಿಸಿದರು. ಶನಿವಾರ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ 111ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. https://chat.whatsapp.com/EbVKVnWB6rlHT1mWtsgbch ವರದಿ ವರ್ಷದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ಸಾಧಿಸಿದ ಯಶಸ್ಸು ಅಭೂತಪೂರ್ವವಾದದ್ದು. ಹೊಸತನದ ಬ್ಯಾಂಕಿಂಗ್ ವ್ಯವಸ್ಥೆಯನ್ನು ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅಳವಡಿಸಿ ಗ್ರಾಹಕರಿಗೆ ಉತ್ಕೃಷ್ಟ ಸೇವೆ ನೀಡಲಾಗುತ್ತಿದೆ. ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಇಂಟರ್‌ನೆಟ್, ಕೋರ್ ಬ್ಯಾಂಕಿಂಗ್‌ನಂತಹ ಉನ್ನತ ಸೇವೆಯು ಬ್ಯಾಂಕಿನ 113 ಶಾಖೆಗಳಲ್ಲಿ ದೊರೆಯುತ್ತಿದೆ. ಮೊಬೈಲ್ ಆ್ಯಪ್, ಟ್ಯಾಬ್ ಬ್ಯಾಂಕಿಂಗ್‌ನಂತಹ ವಿನೂತನ ವ್ಯವಸ್ಥೆಯನ್ನು ಬ್ಯಾಂಕ್ ಗ್ರಾಹಕರಿಗೆ ಪರಿಚಯಿಸಿದೆ. ಮುಂದಿನ ದಿನಗಳಲ್ಲಿ ಇಂಟರ್ ಬ್ಯಾಂಕ್ ಮೊಬೈಲ್ ಪೇಮೆಂಟ್…
