Author: admin
ಮೂಲ್ಕಿ: ಹಳೆಯಂಗಡಿಯ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಪಡುಬಿದ್ರಿ ಶಾಖೆಯ ಮೂರನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಅಶಕ್ತ ನಿರುದ್ಯೋಗಿ ಯುವತಿಯರಿಗೆ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮ ಶುಕ್ರವಾರ ಪಡುಬಿದ್ರೆ ಶಾಖೆಯ ಆವರಣದಲ್ಲಿ ನಡೆಯಿತು. https://chat.whatsapp.com/EbVKVnWB6rlHT1mWtsgbch ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಪಡುಬಿದ್ರೆ ತುಳುನಾಡು ಕಲಾವಿದರು ಸಂಸ್ಥೆಯ ಅಧ್ಯಕ್ಷ ಸಂತೋಷ್ ಪಡುಬಿದ್ರೆ ಮಾತನಾಡಿ ಅಶಕ್ತರಿಗೆ ಸಹಾಯಹಸ್ತ ನೀಡುವ ಪ್ರಿಯದರ್ಶಿನಿ ಸೊಸೈಟಿಯ ಕಾರ್ಯ ಅಭಿನಂದನೀಯವಾಗಿದ್ದು ಸೇವಾ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿ ಎಂದು ಶುಭ ಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಹಳೆಯಂಗಡಿಯ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಎಚ್ ವಸಂತ್ ಬೆರ್ನಾಡ್ ವಹಿಸಿ ಮಾತನಾಡಿ ಸಂಘದ ಅಭಿವೃದ್ಧಿಗೆ ಗ್ರಾಹಕರು, ಸದಸ್ಯರ ಹಾಗೂ ನಿರ್ದೇಶಕರ ಸಹಕಾರ ಕಾರಣವಾಗಿದ್ದು ಮುಂದಿನ ದಿನಗಳಲ್ಲಿ ಶಾಖೆಯ ಅಭಿವೃದ್ಧಿಗೆ ಮತ್ತಷ್ಟು ಸಹಕಾರ ಅಗತ್ಯ ಎಂದರು. ವೇದಿಕೆಯಲ್ಲಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಪಡುಬಿದ್ರೆ ವಲಯದ ಅಧ್ಯಕ್ಷೆ ಪುಷ್ಪಲತಾ ಗಂಗಾಧರ್, ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷೆ ಪ್ರತಿಭಾ ಕುಳಾಯಿ, ಕಾರ್ಯನಿರ್ವಹಣಾಧಿಕಾರಿ ಸುದರ್ಶನ್, ಪಡುಬಿದಿ,…
ನಾಳೆ ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘ ಆಶ್ರಯದಲ್ಲಿ ಕೃಷಿಯೆಡೆಗೆ ವಿದ್ಯಾರ್ಥಿ ಸಮೂಹ ಹಾಗೂ ಯುವಜನರ ನಡೆ ಕಾರ್ಯಕ್ರಮ
ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘ, ಮಾಧ್ಯಮ ಕೇಂದ್ರ ತೊಕ್ಕೊಟ್ಟು, ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ದ.ಕ. ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಇವರ ನೇತೃತ್ವದಲ್ಲಿ ಕೃಷಿ ಇಲಾಖೆ ಮಂಗಳೂರು, ಶ್ರೀ ಬಾಲಾಂಜನೇಯ ವ್ಯಾಯಾಮ ಶಾಲೆ ಪಿಲಾರು ಸಹಯೋಗದೊಂದಿಗೆ ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ಇವರ ತಾಂತ್ರಿಕ ಮಾರ್ಗದರ್ಶನದೊಂದಿಗೆ ಗ್ರಾಮ ಸಂಪರ್ಕ ಅಭಿಯಾನದ ಅಂಗವಾಗಿ ಕೃಷಿಯೆಡೆಗೆ ವಿದ್ಯಾರ್ಥಿ ಸಮೂಹ ಹಾಗೂ ಯುವಜನತೆಯ ನಡೆ – ಕೃಷಿ ಅಧ್ಯಯನ ಹಾಗೂ ಚಟುವಟಿಕೆಗಳಿಗೆ ಚಾಲನೆ ಕಾರ್ಯಕ್ರಮ ಆ.30ರಂದು ಬೆಳಗ್ಗೆ 9ರಿಂದ ಸೋಮೇಶ್ವರ ಗ್ರಾಮದ ಪಿಲಾರು ಬೈಲು ಗದ್ದೆಯಲ್ಲಿ ನಡೆಯಲಿದೆ. https://chat.whatsapp.com/EbVKVnWB6rlHT1mWtsgbch ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರುಗುತ್ತು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾಧಿಕಾರಿ ದರ್ಶನ್ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯಾಧಿಕಾರಿ ನರ್ವಾಡೆ ವಿನಾಯಕ, ಜಂಟಿ ಕೃಷಿ ನಿರ್ದೇಶಕ ಡಾ| ಹೊನ್ನಪ್ಪ ಗೋವಿಂದ…
ಮಂಗಳೂರು: ಕಿರಣ್ ಗೇಮ್ಸ್ ಟೀಮ್ ಮಾರ್ನಮಿಕಟ್ಟೆ ಮತ್ತು ರಾಮಕೃಷ್ಣ ಮಿಶನ್ ಜಂಟಿ ಆಶ್ರಯದಲ್ಲಿ, ವಿಶ್ವಕರ್ಮ ಸಹಕಾರ ಬ್ಯಾಂಕ್ ಮತ್ತು ಮಹಾರಾಣಾ ಪ್ರತಾಪ್ ಸ್ಪೋರ್ಟ್ ಕ್ಲಬ್ ಮಂಗಳೂರು ಸಹಯೋಗದಲ್ಲಿ ಆ.31ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 1.30ರ ತನಕ ಮಂಗಳಾದೇವಿ ಬಳಿಯ ಶ್ರೀ ರಾಮಕೃಷ್ಣ ಮಿಶನ್ ಆಶ್ರಮದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರ ಏರ್ಪಡಿಸಲಾಗಿದೆ. https://chat.whatsapp.com/EbVKVnWB6rlHT1mWtsgbch ಮಂಗಳೂರಿನ ಪ್ರಸಿದ್ಧ ಕೆಎಂಸಿ ಹಾಗೂ ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರು ಆರೋಗ್ಯ ತಪಾಸಣೆಯಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 9ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಮಂಗಳೂರಿನ ರಾಮಕೃಷ್ಣ ಮಿಶನ್ ಮುಖ್ಯಸ್ಥರಾದ ಸ್ವಾಮಿ ಜಿತಕಾಮಾನಂದಜಿ ದೀಪ ಪ್ರಜ್ವಲನ ಮಾಡಲಿದ್ಧಾರೆ. ಆಳ್ವಾಸ್ ಎಜುಕೇಶನ್ ಫೌಂಡೇಶನ್ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕೆಎಂಸಿ ಮಂಗಳೂರಿನ ಮೆಡಿಕಲ್ ಸೂಪರಿಂಟೆಂಡೆಂಟ್ ಡಾ.ಚಕ್ರಪಾಣಿ ಎಂ ಅಧ್ಯಕ್ಷತೆ ವಹಿಸಲಿದ್ದಾರೆ. ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಡಿ.ವೇದವ್ಯಾಸ ಕಾಮತ್, ನಿಕಟಪೂರ್ವ ಕಾರ್ಪೊರೇಟರ್ ಪ್ರೇಮಾನಂದ ಶೆಟ್ಟಿ, ಶ್ರೀ ಮಂಗಳಾದೇವಿ ದೇವಸ್ಥಾನದ…
ಮಂಗಳೂರು: ಮಂಗಳೂರು ಸೌಹಾರ್ದ ಸಹಕಾರಿ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷರಾದ ಕೆ.ಭಾಸ್ಕರ ರಾವ್ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ 31ರಂದು ಮಧ್ಯಾಹ್ನ 12 ಗಂಟೆಗೆ ಜೆಪ್ಪು ಶಾಂತಿನಗರದ ಮಂಗಳೂರು ಸ್ಟೋರ್ ಸಭಾಂಗಣದಲ್ಲಿ ನಡೆಯಲಿದೆ. https://chat.whatsapp.com/EbVKVnWB6rlHT1mWtsgbch ಇದೇ ವೇಳೆ ಬೆಳಗ್ಗೆ 10ರಿಂದ 12ರ ತನಕ ಜಪ್ಪು ಆರೋಗ್ಯ ಕೇಂದ್ರದವರಿಂದ ಬಿ.ಪಿ, ಮಧುಮೇಹ ತಪಾಸಣೆ, ಹೃದಯ ತಪಾಸಣೆಯ ಮಾಹಿತಿ ಶಿಬಿರ ನಡೆಯಲಿಎ. ಸಂಘದ ಸದಸ್ಯರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಸಂಘದ ಪ್ರಕಟಣೆ ತಿಳಿಸಿದೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com
ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಬೆಂಗಳೂರು: ಸಾಲ ವಸೂಲಾತಿ ಸರಿಯಾದ ಆಗದ ಕಾರಣ ಹಲವಾರು ಸಹಕಾರ ಸಂಘಗಳು ನಷ್ಟದಲ್ಲಿವೆ. ನಷ್ಟದಲ್ಲಿರುವ ಸಹಕಾರ ಸಂಘಗಳು ಸಾಲ ವಸೂಲಾತಿ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಸಾಲ ವಸೂಲಾತಿ ಮತ್ತು ವೆಚ್ಚದ ಬಗ್ಗೆ ಹೆಚ್ಚಿನ ನಿಗಾ ಇಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. https://chat.whatsapp.com/EbVKVnWB6rlHT1mWtsgbch ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ 43 ಸಾವಿರಕ್ಕೂ ಹೆಚ್ಚಿನ ಸಹಕಾರ ಸಂಘಗಳಿವೆ. ಇದರಲ್ಲಿ 28,516 ಸಹಕಾರ ಸಂಘಗಳು ಲಾಭದಲ್ಲಿವೆ. 14,670 ಸಂಘಗಳು ನಷ್ಟದಲ್ಲಿವೆ. ನಷ್ಟದಲ್ಲಿರುವ ಸಂಘಗಳ ಪೈಕಿ 2,200 ಹಾಲು ಉತ್ಪಾದಕ ಸಂಘಗಳೂ ಸೇರಿವೆ. ಇಷ್ಟು ದೊಡ್ಡ ಪ್ರಮಾಣದ ಸಹಕಾರ ಸಂಘಗಳು ನಷ್ಟದಲ್ಲಿರುವುದು ಸಹನೀಯವಲ್ಲ. ಸಾಲ ವಸೂಲಾತಿ ಸರಿಯಾಗಿ ಆಗದ ಕಾರಣ ಬಹುತೇಕ ಸಂಘಗಳು ನಷ್ಟದಲ್ಲಿವೆ. ಅಂತಹ ಸಂಘಗಳ ಸಾಲ ವಸೂಲಾತಿಗೆ ಕೈಗೊಂಡ ಕ್ರಮಗಳ ಕುರಿತು ಪರಿಶೀಲಿಸಬೇಕು. ಹಾಲು ಉತ್ಪಾದಕ…
ಮಂಗಳೂರು: ಮಂಗಳೂರಿನ ಬೆಂದೂರ್‌ವೆಲ್‌ನಲ್ಲಿ ಕೇಂದ್ರ ಕಚೇರಿ ಹೊಂದಿರುವ ಕಚ್ಚೂರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಇದರ ಬೆಳ್ತಂಗಡಿ ಶಾಖೆಯು ಶೀಘ್ರದಲ್ಲಿ ಮುಂದಿನ ನವರಾತ್ರಿ ದಸರಾ ಸಂದರ್ಭದಲ್ಲಿ ಶುಭಾರಂಭಗೊಳ್ಳಲಿದೆ ಎಂದು ಸೊಸೈಟಿಯ ಪ್ರಕಟಣೆ ತಿಳಿಸಿದೆ. https://chat.whatsapp.com/EbVKVnWB6rlHT1mWtsgbch ಪ್ರಸ್ತುತ ಸೊಸೈಟಿಯ ಶಾಖೆಯು ಮಂಗಳೂರು, ಸುರತ್ಕಲ್, ಉಡುಪಿ ಹಾಗೂ ಬಂಟ್ವಾಳದಲ್ಲಿದ್ದು, ನೂತನ ಶಾಖೆಯನ್ನು ಬೆಳ್ತಂಗಡಿಯ ನೊರೊನ ಕಾಂಪ್ಲೆಕ್ಸ್ ಚರ್ಚ್ ರೋಡ್ ಹತ್ತಿರ ಬೆಳ್ತಂಗಡಿ ಇಲ್ಲಿ ತೆರೆಯಲು ಸಜ್ಜಾಗಿದೆ. 30 ವರ್ಷಗಳ ವಿಶ್ವಾಸಾರ್ಹ ಸೇವೆ ಮಾಡುತ್ತಾ ಬಂದಿರುವ ಸೊಸೈಟಿಯು ಸತತ ಲಾಭ ಗಳಿಕೆಯೊಂದಿಗೆ, ಸದಸ್ಯರಿಗೆ ಸತತ 20% ಡಿವಿಡೆಂಡ್ ನೀಡುತ್ತಾ ಬರುತ್ತಿದೆ. ಸರ್ಕಾರದ ಆಡಿಟ್ ವರ್ಗೀಕರಣದಲ್ಲಿ ಸತತ ‘ಎ’ ವರ್ಗ ಪಡೆಯುವುದರೊಂದಿಗೆ ಉತ್ತಮ ಅಭಿವೃದ್ಧಿಗೆ ಎಸ್‌ಡಿಸಿಸಿ ಬ್ಯಾಂಕ್ ಸಾಧನಾ ಪ್ರಶಸ್ತಿಯನ್ನು ಸತತ ಪಡೆಯುತ್ತಾ ಬರುತ್ತಿದೆ. ಎಲ್ಲಾ ಶಾಖೆಗಳು ಕಂಪ್ಯೂಟರೀಕೃತ ಲೆಕ್ಕಪತ್ರ ವ್ಯವಸ್ಥೆ ಎಲ್ಲಾ ಭದ್ರತಾ ವ್ಯವಸ್ಥೆಗಳೊಂದಿಗೆ ಗ್ರಾಹಕರಿಗೆ ಉತ್ತಮ ಬ್ಯಾಂಕಿಂಗ್ ಸೇವೆ ನೀಡುತ್ತಾ ಬರುತ್ತಿದೆ. ಬೆಳ್ತಂಗಡಿ ಶಾಖೆಯು ಆರಂಭದ ಕೊಡುಗೆಯಾಗಿ ಸಾಮಾನ್ಯ ಠೇವಣಿ 1 ವರ್ಷಕ್ಕೆ 8.50%, 2…
40 ಲಕ್ಷ ರೂ. ನಿವ್ವಳ ಲಾಭ: ಅಧ್ಯಕ್ಷ ಲಿಂಗದೇವರು ಹೇಳಿಕೆ ತುಮಕೂರು: ತಿಪಟೂರಿನ ಶ್ರೀ ಕಲ್ಪತರು ವೀರಶೈವ ಲಿಂಗಾಯಿತ ಸೌಹಾರ್ದ ಪತ್ತಿನ ಸಹಕಾರಿ ಸಂಘದ 6ನೇ ವಾರ್ಷಿಕ ಮಹಾಸಭೆ ಶನಿವಾರ ನಡೆಯಿತು. ರಾಜ್ಯ ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾದ ಶಾಸಕ, ಸಹಕಾರಿ ರತ್ನ ಪುರಸ್ಕೃತ ಕೆ.ಷಡಾಕ್ಷರಿ ಸಭೆ ಉದ್ಘಾಟಿಸಿ ಮಾತನಾಡಿ, ಶ್ರೀ ಕಲ್ಪತರು ವೀರಶೈವ ಲಿಂಗಾಯಿತ ಸೌಹಾರ್ದ ಪತ್ತಿನ ಸಹಕಾರಿ ಸಂಘವು ಪ್ರಾರಂಭದಿಂದಲೂ ಉತ್ತಮ ಸೇವೆ ಸಲ್ಲಿಸುತ್ತ ಬಂದಿದೆ. ಮುಂದೆಯೂ ಸಂಘವು ಚೆನ್ನಾಗಿ ಕಾರ್ಯನಿರ್ವಹಿಸಿ, ಸಹಕಾರಿಯ ಸದಸ್ಯರಿಗೆ ಉತ್ತಮ ಸೇವೆ ಒದಗಿಸಲಿ ಎಂದು ಹಾರೈಸಿದರು. https://chat.whatsapp.com/EbVKVnWB6rlHT1mWtsgbch ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಲಿಂಗದೇವರು ವಹಿಸಿದ್ದರು. ನಗರ ಸಭೆ ಅಧ್ಯಕ್ಷರಾದ ಯಮುನಾ ಧರಣೇಶ್ ಉಪಸ್ಥಿತರಿದ್ದರು. ಮುಖ್ಯಅತಿಥಿ ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿಯ ನಿರ್ದೇಶಕ ಸಿ.ಪಿ.ವಿಜಯ್ ಮಾತನಾಡಿ ಸಂಘದ, ರಾಜ್ಯಮಟ್ಟದ ಮತ್ತು ರಾಷ್ಟ್ರಮಟ್ಟದ ವಿಚಾರಗಳನ್ನು ಮಂಡಿಸಿದರು. ಎಸ್ಸೆಸ್ಸೆಲ್ಸಿ, ಪಿ.ಯು.ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಉಪಾಧ್ಯಕ್ಷರಾದ ಜಗದೀಶಪ್ಪ, ನಿರ್ದೇಶಕರಾದ ತೇಜಮೂರ್ತಿ,…
ಸಹಕಾರಿಯ ಅಧ್ಯಕ್ಷ ವೆಂಕೋಬ ಜಿಬಾಳಿ ಮಾಹಿತಿ ಸಿಂಧನೂರು: ಇಲ್ಲಿನ ಶ್ರೀ ಗಂಗೋತ್ರಿ ಪಟ್ಟಣ ಸೌಹಾರ್ದ ಸಹಕಾರಿ ಸಂಘವು 46.40 ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ ಎಂದು ಸಹಕಾರಿಯ ಅಧ್ಯಕ್ಷ ವೆಂಕೋಬ ಜಿಬಾಳಿ ತಿಳಿಸಿದ್ದಾರೆ. https://chat.whatsapp.com/EbVKVnWB6rlHT1mWtsgbch ಸಹಕಾರಿಯ ಕಚೇರಿಯಲ್ಲಿ ಇತ್ತೀಚೆಗೆ ನಡೆದ 9ನೇ ಸರ್ವ ಸದಸ್ಯರ ವಾರ್ಷಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶ್ರೀ ಗಂಗೋತ್ರಿ ಪಟ್ಟಣ ಸೌಹಾರ್ದ ಸಹಕಾರಿಯು ಪ್ರಸಕ್ತ ವರ್ಷ 10 ಕೋಟಿ ರೂ.ಗಳ ವಹಿವಾಟು ನಡೆಸಿದೆ. ಸದಸ್ಯರಿಗೆ ಶೇ.12ರಷ್ಟು ಲಾಭಾಂಶ ಘೋಷಣೆ ಮಾಡಲಾಗುತ್ತಿದೆ. ಸದಸ್ಯರು ನಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ಚ್ಯುತಿ ಬರದಂತೆ ನಡೆದುಕೊಂಡಿದ್ದೇವೆ. ಆಡಳಿತ ಮಂಡಳಿ ಪರಿಶ್ರಮ, ಸದಸ್ಯರ ಸಹಕಾರ ಹಾಗೂ ಸಿಬ್ಬಂದಿಯ ಕಾರ್ಯಕ್ಷಮತೆಯಿಂದ ಕಡಿಮೆ ಅವಧಿಯಲ್ಲಿ ನಮ್ಮ ಸಹಕಾರಿಯು ವೇಗವಾಗಿ ಬೆಳೆಯುತ್ತಿದೆ. ಮುಂದಿನ ದಿನಗಳಲ್ಲಿ ಸದಸ್ಯರಿಗಾಗಿ ವಿನೂತನ ಯೋಜನೆಗಳನ್ನು ಜಾರಿ ಮಾಡುವ ಉದ್ದೇಶವಿದೆ ಎಂದರು. ಸಂಘದ ಉಪಾಧ್ಯಕ್ಷ ಅಮರೇಶ ಹುಡಾ, ಕಾನೂನು ಸಲಹೆಗಾರ ಜೆ.ರಾಯಪ್ಪ ವಕೀಲ, ಸಹಕಾರಿ ಇಲಾಖೆಯ ಮಲ್ಲಿಕಾರ್ಜುನ ಕಮತಗಿ, ಚೈತನ್ಯ…
ಷೇರುದಾರರಿಗೆ ಶೇ. 14 ಡಿವಿಡೆಂಡ್: ಅಧ್ಯಕ್ಷ ನಾಗೇಶ್ ಕಲ್ಲಡ್ಕ ಮಾಹಿತಿ ಬಂಟ್ವಾಳ: ಪಾಣೆಮಂಗಳೂರಿನ ಸುಮಂಗಲಾ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು 2024-25ನೇ ಸಾಲಿನಲ್ಲಿ 446.68 ಕೋಟಿ ರೂ. ವ್ಯವಹಾರ ನಡೆಸಿ 1.65 ಕೋಟಿ ರೂ. ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ನಾಗೇಶ್ ಕಲ್ಲಡ್ಕ ತಿಳಿಸಿದರು. https://chat.whatsapp.com/EbVKVnWB6rlHT1mWtsgbch ಭಾನುವಾರ ಪಾಣೆಮಂಗಳೂರಿನ ಸುಮಂಗಲಾ ಸಭಾಂಗಣದಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 2025ರ ಮಾರ್ಚ್ ಅಂತ್ಯಕ್ಕೆ 2843 ಎ ತರಗತಿ ಸದಸ್ಯರಿದ್ದು, 5.55 ಕೋಟಿ ರೂ. ಪಾಲು ಬಂಡವಾಳ ಹೊಂದಿದೆ. 2025ರ ಮಾರ್ಚ್ ಅಂತ್ಯಕ್ಕೆ 70.51 ಕೋಟಿ ರೂ. ಠೇವಣಾತಿ, 5.95 ಕೋಟಿ ರೂ. ವಿವಿಧ ನಿಧಿಗಳಲ್ಲಿ ಇದ್ದು 68.32 ಕೋಟಿ ರೂ. ಸಾಲ ಹೊರಬಾಕಿ ಇರುತ್ತದೆ. 2024-25ನೇ ಸಾಲಿನಲ್ಲಿ 104.71 ಕೋಟಿ ರೂ. ಸಾಲ ವಿತರಿಸಿದ್ದು, 91.01 ಕೋ.ಟಿ ರೂ. ಸಾಲವನ್ನುವಸೂಲಿ ಮಾಡಲಾಗಿದೆ. ವರದಿ ವರ್ಷದಲ್ಲಿ ಷೇರುದಾರರಿಗೆ ಶೇ.14 ಡಿವಿಡೆಂಡ್ ಘೋಷಿಸಲಾಗಿದೆ. ಸಂಸ್ಥೆಯು ಸಾಧಿಸಿದ ಸರ್ವತೋಮುಖ ಅಭಿವೃದ್ಧಿಗಾಗಿ ದಕ್ಷಿಣ ಕನ್ನಡ…
ನಿವ್ವಳ ಲಾಭಾಂಶ ಗಳಿಕೆಯಲ್ಲಿ ಉನ್ನತ ಸಾಧನೆ, ಸದಸ್ಯರಿಗೆ ಶೇ.11 ಡಿವಿಡೆಂಡ್ : ಅಧ್ಯಕ್ಷ ಜನಾರ್ದನ ಭಟ್ ಅಮೈ ಘೋಷಣೆ ಬಂಟ್ವಾಳ: ಪುಣಚ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘವು 327,05,95,558.63 ರೂ. ವ್ಯವಹಾರ ನಡೆಸಿದ್ದು 2024-25ನೇ ವಾರ್ಷಿಕ ಸಾಲಿನಲ್ಲಿ 3,27,40,185.70 ರೂ. ಲಾಭ ಗಳಿಸಿದೆ. ಸದಸ್ಯರಿಗೆ ಶೇ.11 ಡಿವಿಡೆಂಡ್ ನೀಡಲಾಗುವುದು. ನಿವ್ವಳ ಲಾಭಾಂಶ ಗಳಿಕೆಯಲ್ಲಿ ಪುಣಚ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘವು ತಾಲೂಕಿನಲ್ಲೇ ಪ್ರಥಮ ಸ್ಥಾನ ಪಡೆದಿದೆ ಎಂದು ಸಂಘದ ಅಧ್ಯಕ್ಷ ಜನಾರ್ದನ ಭಟ್ ಅಮೈ ಹೇಳಿದ್ದಾರೆ. https://chat.whatsapp.com/EbVKVnWB6rlHT1mWtsgbch ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬಳಿಯ ಶ್ರೀದೇವಿ ಭವನದಲ್ಲಿ ಭಾನುವಾರ ನಡೆದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತ ಅವರು ಈ ವಿಷಯ ತಿಳಿಸಿದರು. ವರದಿ ವರ್ಷಾಂತ್ಯಕ್ಕೆ ಸಂಘವು 5,672 ಸದಸ್ಯರಿಂದ ರೂ.5,62,55,500 ಪಾಲು ಬಂಡವಾಳ, ರೂ.62,93,49,978.21 ವಿವಿಧ ರೂಪದ ಠೇವಣಾತಿಗಳನ್ನು ಹೊಂದಿದೆ. ಸದಸ್ಯರಿಗೆ ವಿವಿಧ ರೀತಿಯ 61,02,59,130 ರೂ. ಸಾಲ ನೀಡಲಾಗಿದೆ. ಸಾಲ ವಸೂಲಾತಿಯಲ್ಲಿ ಶೇ.98.51ರಷ್ಟು ಪ್ರಗತಿ…
