Author: admin
ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಹೇಳಿಕೆ ಉಡುಪಿ: ಜಿಲ್ಲೆಯಲ್ಲಿನ 750ಕ್ಕೂ ಅಧಿಕ ಸಹಕಾರ ಸಂಘಗಳು ಜಿಲ್ಲಾ ಸಹಕಾರಿ ಯೂನಿಯನ್‌ನಲ್ಲಿ ನೋಂದಣಿಯಾಗಿದ್ದು, ಈ ಪೈಕಿ 21 ಸಹಕಾರಿ ಸಂಘಗಳನ್ನು ಮಹಿಳೆಯರೇ ಮುನ್ನಡೆಸುತ್ತಿದ್ದಾರೆ. ಸಹಕಾರ ಸಂಘಗಳಲ್ಲಿ ಜನ 4,500 ಕೋಟಿ ರೂ. ಠೇವಣಿ ಇರಿಸಿರುವುದು ಸಹಕಾರ ಸಂಘಗಳ ಬಗ್ಗೆ ಜನ ಇಟ್ಟಿರುವ ವಿಶ್ವಾಸಾರ್ಹತೆಗೆ ಸಾಕ್ಷಿ ಎಂದು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು. https://chat.whatsapp.com/EbVKVnWB6rlHT1mWtsgbch ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಸಹಕಾರ ಇಲಾಖೆಗಳ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಆಡಳಿತ ನಿರ್ವಹಣೆ ಕುರಿತ ಜಿಲ್ಲಾಮಟ್ಟದ ವಿಶೇಷ ತರಬೇತಿ ಕಾರ್ಯಾಗಾರದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಜಕೀಯ ರಹಿತವಾದ ಸಹಕಾರಿ ಕ್ಷೇತ್ರದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ದೇಶದಲ್ಲಿ ಶೇ.40ರಷ್ಟು ಜನ ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ.…
ನವದೆಹಲಿ: ಬಹುರಾಜ್ಯ ಸಹಕಾರ ಸಂಘಗಳ ಮಂಡಳಿಗಳಲ್ಲಿ ಮಹಿಳೆಯರಿಗೆ ಎರಡು ಸ್ಥಾನಗಳು ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಒಂದು ಸ್ಥಾನ ಮೀಸಲಿಡಲಾಗಿದೆ ಎಂದು ಸಹಕಾರ ಸಚಿವ ಅಮಿತ್ ಷಾ ತಿಳಿಸಿದ್ದಾರೆ. https://chat.whatsapp.com/EbVKVnWB6rlHT1mWtsgbch ಸಹಕಾರಿ ವಲಯದಲ್ಲಿ ಎಸ್‌ಸಿ-ಎಸ್‌ಟಿ ಸದಸ್ಯರ ಭಾಗವಹಿಸುವಿಕೆ ಹೆಚ್ಚಿಸುವ ಕುರಿತು ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಹಕಾರ ಸಚಿವ ಅಮಿತ್ ಷಾ, ಎಲ್ಲ ರಾಜ್ಯಗಳಿಗೆ ವಿತರಿಸಲಾದ ಪ್ರಾಥಮಿಕ ಕೃಷಿ ಸಾಲ ಸಂಘ (ಪ್ಯಾಕ್ಸ್)ಗಳ ಮಾದರಿಯ ಉಪ ಕಾನೂನಿನಲ್ಲಿ ಸರ್ಕಾರ ಇದೇ ರೀತಿಯ ನಿಬಂಧನೆಗಳನ್ನು ಸೇರಿಸಲಾಗಿದೆ ಎಂದು ಹೇಳಿದರು. ಪ್ರಾಥಮಿಕ ಕೃಷಿ ಸಾಲ ಸಂಘಗಳನ್ನು ಗಣಕೀಕರಣಗೊಳಿಸಲು, ಸಹಕಾರಿ ಸಕ್ಕರೆ ಕಾರ್ಖಾನೆಗಳನ್ನು ಬಲಪಡಿಸಲು ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮಕ್ಕೆ ಅನುದಾನ ಮತ್ತು ಸಹಕಾರಿ ಸಂಸ್ಥೆಗಳಿಗೆ ಐಟಿ ಮಧ್ಯಸ್ಥಿಕೆಗಳು ಸೇರಿ ಹಲವು ಯೋಜನೆಗಳನ್ನು ಸಚಿವಾಲಯ ಜಾರಿಗೊಳಿಸುತ್ತಿದೆ. ಈ ಯೋಜನೆಗಳೂ ಸಹಕಾರಿ ಸಂಘಗಳ ರೈತ ಸದಸ್ಯರಿಗೆ ಪ್ರಯೋಜನ ನೀಡುತ್ತಿವೆ. ಇದರಲ್ಲಿ ಎಸ್‌ಸಿ-ಎಸ್‌ಟಿ ರೈತರೂ ಸೇರಿದ್ದಾರೆ ಎಂದು ಷಾ ಮಾಹಿತಿ…
ವಾರ್ಷಿಕ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ಹರೀಶ್ ಕೆ ಘೋಷಣೆ ಮಂಗಳೂರು: ದಿವ್ಯಜ್ಯೋತಿ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಇತ್ತೀಚೆಗೆ ಗೋಲ್ಡ್ ಪ್ಯಾಲೆಸ್ ಒನೆಕ್ಸ್ ಕಟ್ಟಡದಲ್ಲಿರುವ ದಕ್ಷಿಣ ಕನ್ನಡ ಕ್ಯಾಟರಿಂಗ್ ಮಾಲಕರ ಸಂಘದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯಿತು. ಸಂಘವು ಒಟ್ಟು ರೂ. 20.86 ಕೋಟಿ ವ್ಯವಹಾರ ನಡೆಸಿದ್ದು, 48,17,569.57 ರೂ. ನಿವ್ವಳ ಲಾಭ ಗಳಿಸಿದೆ. https://chat.whatsapp.com/EbVKVnWB6rlHT1mWtsgbch ಸಂಘದ ಅಧ್ಯಕ್ಷ ಹರೀಶ್ ಕೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘದ ಬೆಳವಣಿಗೆಗೆ ಎಸ್.ಪ್ರಸಾದ್ ಗುರೂಜಿಯವರ ಮಾರ್ಗದರ್ಶನ, ಆಶೀರ್ವಾದ, ಸದಸ್ಯರ ಪ್ರೋತ್ಸಾಹ ಮತ್ತು ಸಲಹೆ, ಆಡಳಿತ ಮಂಡಳಿಯ ನಿರ್ದೇಶನ ಮತ್ತು ಸಿಬ್ಬಂದಿಗಳ ಕರ್ತವ್ಯ ನಿಷ್ಠೆ ಪ್ರಮುಖ ಕಾರಣ. ಸಂಘವು ಸಮಾಜಮುಖಿ ಕಾರ್ಯದ ಉದ್ದೇಶದಿಂದ ಇತ್ತೀಚೆಗೆ ಮೂಡುಶೆಡ್ಡೆ ಮತ್ತು ಜೆಪ್ಪಿನಮೊಗರುವಿನಲ್ಲಿ ಉಚಿತ ವೈದ್ಯಕೀಯ ಶಿಬಿರವನ್ನು ಏರ್ಪಡಿಸಿದ್ದು ಪರಿಸರದ ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಂಡಿದ್ದಾರೆ. ಸಂಘವು 48.17 ಲಕ್ಷ ರೂ. ನಿವ್ವಳ ಲಾಭ ಗಳಿಸಿದ್ದು, ಶೇ.15 ಡಿವಿಡೆಂಡ್ ಘೋಷಿಸಲಾಗಿದೆ ಎಂದು ಹೇಳಿದರು. ಸಂಘದ ಮಾರ್ಗದರ್ಶಕ ಎಸ್.ಪ್ರಸಾದ್ ಗುರೂಜಿಯವರು ಮಾತನಾಡಿ,…
ಪುತ್ತೂರು: ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸುಳ್ಯಪದವು ಶಾಖೆಯ ನೂತನ ಕಚೇರಿ ಪ್ರಕೃತಿ ಸಹಕಾರ ಸೌಧ ಕಟ್ಟಡದ ಉದ್ಘಾಟನಾ ಸಮಾರಂಭ ಆಗಸ್ಟ್ 21ರಂದು ನಡೆಯಲಿದೆ. https://chat.whatsapp.com/EbVKVnWB6rlHT1mWtsgbch ಬೆಳಗ್ಗೆ 10 ಗಂಟೆಗೆ ಪ್ರಕೃತಿ ಸಹಕಾರ ಸೌಧ ಕಟ್ಟಡವನ್ನು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಉದ್ಘಾಟಿಸಲಿದ್ದಾರೆ. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಆಡಳಿತ ಕಚೇರಿ ಉದ್ಘಾಟಿಸಲಿದ್ದಾರೆ. ಭದ್ರತಾ ಕೊಠಡಿಯನ್ನು ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ನ್ಯಾಯಬೆಲೆ ಅಂಗಡಿಯನ್ನು ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ರಸಗೊಬ್ಬರ ಗೋದಾಮನ್ನು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಸಭಾ ಕಾರ್ಯಕ್ರಮವನ್ನು ಮಾಜಿ ಶಾಸಕ ಸಂಜೀವ ಮಠಂದೂರು ಉದ್ಘಾಟಿಸಲಿದ್ದಾರೆ. ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ಅಧ್ಯಕ್ಷತೆ ವಹಿಸಲಿದ್ದು ಅತಿಥಿಗಳಾಗಿ ದ.ಕ. ಜಿಲ್ಲಾಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಎಸ್.ಬಿ ಜಯರಾಮ ರೈ, ಸಹಕಾರಿ ಸಂಘಗಳ ಸಹಾಯಕ ನಿಬಂಧಕ ರಘು ಎಸ್.ಎಂ.,…
ಅಪೆಕ್ಸ್ ಬ್ಯಾಂಕ್, ಡಿಸಿಸಿ ಬ್ಯಾಂಕ್ ಗಳಲ್ಲಿ ಇಡಲು ಅವಕಾಶ ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ಮಸೂದೆ ಅಂಗೀಕಾರ ಬೆಂಗಳೂರು: ಸೌಹಾರ್ದ ಸಹಕಾರ ಸಂಘಗಳ ಒಟ್ಟು ಠೇವಣಿಯ ಶೇ.20ರಷ್ಟು ಮೊತ್ತವನ್ನು ರಾಜ್ಯ ಶಾಸನಬದ್ಧ ಮೀಸಲು ದ್ರವ್ಯ (ಎಸ್‌ಎಲ್‌ಆರ್) ಪ್ರಮಾಣ ರೂಪದಲ್ಲಿ ಕಾಯ್ದಿರಿಸುವ ‘ಕರ್ನಾಟಕ ಸೌಹಾರ್ದ ಸಹಕಾರಿ(ತಿದ್ದುಪಡಿ) ಮಸೂದೆ 2025 ಅನ್ನು ಮಂಗಳವಾರ ವಿಧಾನಸಭೆ ಅಂಗೀಕರಿಸಿದೆ. https://chat.whatsapp.com/EbVKVnWB6rlHT1mWtsgbch ಸೌಹಾರ್ದ ಸಹಕಾರ ಸಂಘಗಳಲ್ಲಿ ಹೆಚ್ಚಿನ ಆರ್ಥಿಕ ಶಿಸ್ತು ಮತ್ತು ಹೊಣೆಗಾರಿಕೆಯ ಮೂಲಕ ಸೌಹಾರ್ದ ಸಹಕಾರ ಸಂಘಗಳನ್ನು ಹೆಚ್ಚುವರಿ ಬಲವರ್ಧನೆಗೊಳಿಸುವ ಉದ್ದೇಶದಿಂದ ಈ ತಿದ್ದುಪಡಿ ತರಲಾಗಿದೆ. ಪ್ರಸ್ತುತ ಸೌಹಾರ್ದ ಸಹಕಾರಿ ಸಂಘಗಳು ತಮ್ಮಲ್ಲಿನ ಠೇವಣಿಯ ಎಲ್ಲ ಮೊತ್ತವನ್ನೂ ಸಾಲದ ರೂಪದಲ್ಲಿ ನೀಡಬಹುದಾಗಿದೆ. ಈಗ ತಿದ್ದುಪಡಿ ಮಸೂದೆಯಡಿ ಸೌಹಾರ್ದ ಸಹಕಾರಿಗಳಲ್ಲಿ ಬರುವ ಠೇವಣಿಯಲ್ಲಿ ಶೇ.20ರಷ್ಟನ್ನು ಅಪೆಕ್ಸ್ ಅಥವಾ ಡಿಸಿಸಿ ಬ್ಯಾಂಕ್‌ಗಳಲ್ಲಿ ಠೇವಣಿ ಇಡಲು ಅವಕಾಶ ಕಲ್ಪಿಸಲಾಗುತ್ತಿದೆ. ಇದರಿಂದ ಸಂಘಗಳಲ್ಲಿ ಅಕ್ರಮ, ವಂಚನೆ ಮತ್ತು ದುರ್ವಿನಿಯೋಗ ಮಾಡುವುದು ತಡೆಯಾಗಲಿದೆ. ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆ ಮಂಡಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ…
ಸಾಸ್ತಾನ: ಶ್ರೀ ರಾಮಾಂಜನೇಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ನೂತನ ಸಾಸ್ತಾನ ಶಾಖೆಯ ಉದ್ಘಾಟನಾ ಸಮಾರಂಭ ಸಾಸ್ತಾನ ಗೋಳಿಗರಡಿ ರಸ್ತೆಯ ದಿವ್ಯ ಕಾಂಪ್ಲೆಕ್ಸ್‌ನಲ್ಲಿ ಆ.20ರಂದು ಬುಧವಾರ ಬೆಳಗ್ಗೆ 10.30ಕ್ಕೆ ನಡೆಯಲಿದೆ. https://chat.whatsapp.com/EbVKVnWB6rlHT1mWtsgbch ನಾಡೋಜ ಡಾ.ಜಿ.ಶಂಕರ್ ಅವರು ಶಾಖೆಯ ಉದ್ಘಾಟನೆ ನೆರವೇರಿಸಲಿದ್ದಾರೆ. ಮಾಜಿ ಶಾಸಕ ಹಾಲಾಡಿ ಶೀನಿವಾಸ ಶೆಟ್ಟಿಯವರು ದೀಪ ಪ್ರಜ್ವಲನೆ ಮಾಡಲಿದ್ದಾರೆ. ಶ್ರೀ ರಾಮಾಂಜನೇಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಶಂಭು ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ಮಣೂರು ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ್ ಸಿ.ಕುಂದರ್ ಭದ್ರತಾ ಕೋಶ ಉದ್ಘಾಟನೆ ಮಾಡಲಿದ್ದಾರೆ. ಪಾಂಡೇಶ್ವರದ ವಿದ್ವಾನ್ ಶ್ರೀ ವಿಜಯ ಮಂಜರ್ ಆಶೀರ್ವಚನ ನೀಡಲಿದ್ದಾರೆ. ಶಾಸಕ ಕಿರಣ್ ಕುಮಾರ್ ಕೊಡ್ಗಿ ಗಣಕೀಕೃತ ಬ್ಯಾಂಕಿಂಗ್‌ಗೆ ಚಾಲನೆ ನೀಡಲಿದ್ದಾರೆ. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕ ಮಂಜುನಾಥ್ ಎಸ್.ಕೆ ನಿರಖು ಠೇವಣಿ ಪತ್ರ ಬಿಡುಗಡೆ ಮಾಡಲಿದ್ದಾರೆ. ಗೋಳಿಗರಡಿ ದೇವಸ್ಥಾನದ ಆಡಳಿತ ಧರ್ಮದರ್ಶಿ ವಿಠ್ಠಲ ಪೂಜಾರಿ ಗೋಳಿಗರಡಿ ಆವರ್ತನ ಠೇವಣಿಗೆ ಚಾಲನೆ ನೀಡಲಿದ್ದಾರೆ. ಕೋಟ ವ್ಯವಸಾಯಕ ಸೇವಾ…
ಬೆಂಗಳೂರು: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ.. ಬೆಂಗಳೂರು ಇದರ 24ನೇ ವಾರ್ಷಿಕ ಸಾಮಾನ್ಯ ಸಭೆ ಆಗಸ್ಟ್ 22ರ ಶುಕ್ರವಾರ ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರ (ಗಾಯತ್ರಿ ಗ್ರಾಂಡ್), ಗೇಟ್ ನಂ.-04ನಲ್ಲಿ ಬೆಳಗ್ಗೆ 10 ಗಂಟೆಯಿಂದ ನಡೆಯಲಿದೆ. https://chat.whatsapp.com/EbVKVnWB6rlHT1mWtsgbch ಸಭೆಯ ನೋಟೀಸ್, ಅಜೆಂಡಾ ಮತ್ತು ವಿವರ ಟಿಪ್ಪಣಿಗಳೊಂದಿಗೆ ಎಲ್ಲಾ ಅರ್ಹ ಸದಸ್ಯರಿಗೆ ಬಹು ಪ್ರಮಾಣದ ಅಂಚೆ ಮೂಲಕ ಕಳುಹಿಸಲಾಗಿದೆ ಮತ್ತು ಸಂಯುಕ್ತ ಸಹಕಾರಿಗೆ ಸಹಕಾರಿಗಳು ಒದಗಿಸಿರುವ ಸಹಕಾರಿಯ ಇ-ಮೇಲ್ ವಿಳಾಸಕ್ಕೆ ಕಳುಹಿಸಲಾಗಿದೆ. ಸಭೆಯ ಅಜೆಂಡಾ, ಟಿಪ್ಪಣಿಗಳು ಮತ್ತು ಅರ್ಹ ಸದಸ್ಯರ ಪಟ್ಟಿಯು ಸಂಯುಕ್ತ ಸಹಕಾರಿಯ ವೆಬ್ ಸೈಟ್ www.souharda.coop ನಲ್ಲಿ ಲಭ್ಯವಿದೆ. ಸಂಯುಕ್ತ ಸಹಕಾರಿಯ ವಾರ್ಷಿಕ ಸಾಮಾನ್ಯ ಸಭೆಗೆ ತಮ್ಮ ಸಹಕಾರಿಯ ಆಡಳಿತ ಮಂಡಳಿ ಸಭೆಯಲ್ಲಿ ನಿರ್ಣಯಿಸುವ ಮೂಲಕ ಓರ್ವ ಚುನಾಯಿತ ನಿರ್ದೇಶಕರನ್ನು ಡೆಲಿಗೇಟ್ ಆಗಿ ಭಾಗವಹಿಸಲು ನಿಯೋಜಿಸಬಹುದು. ಅಂತಹ ನಿರ್ದೇಶಕರು ಸಂಯುಕ್ತ ಸಹಕಾರಿಯ ವಾರ್ಷಿಕ ಸಾಮಾನ್ಯ ಸಭೆಗೆ ತನ್ನ ಸಹಕಾರಿಯ ಆಡಳಿತ ಮಂಡಳಿ ಸಭೆಯ ನಿರ್ಣಯ ಹಾಗೂ…
ಬಂಟ್ವಾಳ: ಕಾವಳಪಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ವಗ್ಗ ಪ್ರಸಕ್ತ ಸಾಲಿನಲ್ಲಿ ಒಟ್ಟು 349.18 ಕೋಟಿ ರೂ. ವ್ಯವಹಾರ ನಡೆಸಿದ್ದು, 1.63 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಕೆ.ಪ್ರಮೋದ್‌ಕುಮಾರ್ ರೈ ತಿಳಿಸಿದ್ದಾರೆ. https://chat.whatsapp.com/EbVKVnWB6rlHT1mWtsgbch ಸೋಮವಾರ ಸಂಘದ ನೂತನ ಸಭಾಂಗಣದಲ್ಲಿ2024-2025ನೇ ಸಾಲಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸದಸ್ಯರಿಗೆ ಶೇ.25 ಡಿವಿಡೆಂಡ್ ಘೋಷಿಸಿದರು. ರೈತರ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿರುವ ಕಾವಳಪಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2.15 ಕೋಟಿ ರೂ. ಪಾಲು ಬಂಡವಾಳ, 61.18 ಕೋಟಿ ರೂ. ಠೇವಣಿ ಹೊಂದಿದೆ. 58.35 ಕೋಟಿ ರೂ. ಸದಸ್ಯರ ಸಾಲ ಹೊರಬಾಕಿ ಇದ್ದು, ಬ್ಯಾಂಕ್ ಮತ್ತು ಇತರೆ ಸಹಕಾರಿ ಸಂಸ್ಥೆಯಲ್ಲಿ 27.03 ಕೋಟಿ ರೂ. ಹೂಡಿಕೆ ಮಾಡಲಾಗಿದ್ದು, ದುಡಿಯುವ ಬಂಡವಾಳ 93.51 ಕೋಟಿ ರೂ.ಇದೆ ಎಂದು ಮಾಹಿತಿ ನೀಡಿದರು. ಸಂಘದ ನೂತನ ಕಟ್ಟಡ ‘ಸಮೃದ್ಧಿ ಸಹಕಾರ ಸೌಧ’ ಕಳೆದ ಜನವರಿ ತಿಂಗಳಲ್ಲಿ ಲೋಕಾರ್ಪಣೆಗೊಂಡಿದ್ದು,…
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಮೈಸೂರು ಪ್ರಾಂತೀಯ ಕಚೇರಿಯ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ
ಮೈಸೂರು: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ., ಇದರ ಮೈಸೂರು ಪ್ರಾಂತೀಯ ಕಚೇರಿಯ ನೂತನ ಕಟ್ಟಡ ನಿರ್ಮಾಣಕ್ಕೆ ಸೋಮವಾರ ನಿವೇಶನದ ಭೂಮಿ ಪೂಜೆ ನೆರವೇರಿಸಲಾಯಿತು. https://chat.whatsapp.com/EbVKVnWB6rlHT1mWtsgbch ಸಂಯುಕ್ತ ಸಹಕಾರಿಯ ಅಧ್ಯಕ್ಷರಾದ ಜಿ.ನಂಜನಗೌಡ ಅಧ್ಯಕ್ಷತೆಯಲ್ಲಿ ಭೂಮಿಪೂಜೆ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಉಪಾಧ್ಯಕ್ಷರಾದ ಪ್ರಸನ್ನಕುಮಾರ್ ಎ.ಆರ್., ನಿರ್ದೇಶಕರಾದ ಕೃಷ್ಣಾರೆಡ್ಡಿ ಬಿ.ಹೆಚ್., ಮಂಜುನಾಥ್ ಎಸ್.ಕೆ., ಭಾರತಿ ಜಿ.ಭಟ್ ಹಾಗೂ ಶಿಕ್ಷಣ, ಸಲಹಾ ಸಮಿತಿ ಸದಸ್ಯರಾದ ಹೆಚ್.ವಿ.ರಾಜೀವ್, ನಿವೃತ್ತ ಸಹಕಾರ ಸಂಘಗಳ ಅಪರ ನಿಬಂಧಕರಾದ ಸಿ.ಎನ್. ಪರಶಿವಮೂರ್ತಿ ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಶರಣಗೌಡ ಜಿ.ಪಾಟೀಲ್, ಉಪನಿಬಂಧಕರಾದ ವಿಜಯಕುಮಾರ್ , ಮೈಸೂರು ಜಿಲ್ಲೆಯ ಒಕ್ಕೂಟದ ಆಡಳಿತ ಮಂಡಳಿ ಸದಸ್ಯರು, ಮಂಡ್ಯ ಜಿಲ್ಲೆಯ ಒಕ್ಕೂಟದ ಆಡಳಿತ ಮಂಡಳಿ ಸದಸ್ಯರು ಹಾಗೂ ಮೈಸೂರು ಜಿಲ್ಲೆಯ ಸೌಹಾರ್ದ ಸಹಕಾರಿಗಳ ಪ್ರತಿನಿಧಿಗಳು, ಸಂಯುಕ್ತ ಸಹಕಾರಿಯ ತರಬೇತಿ ಅಧಿಕಾರಿ ವಿ.ಜೆ. ಕಾರಕೂನ್, ಪ್ರಾಂತೀಯ ಅಧಿಕಾರಿ ಗುರುಪ್ರಸಾದ್ ಬಂಗೇರ ಹಾಗೂ ಇತರೆ ಪ್ರಾಂತದ ಸಿಬ್ಬಂದಿಗಳು ಭಾಗವಹಿಸಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ…
ರಾಜ್ಯ ವಿಧಾನಸಭೆಯಲ್ಲಿ 2025ನೇ ಸಾಲಿನ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕ ಮಂಡನೆ ಸಹಕಾರ ಸಂಘಗಳ ನಿರ್ದೇಶಕರು ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸಬೇಕೆಂಬ ವಿಧೇಯಕದ ಅಂಶಕ್ಕೆ ಹಲವು ಶಾಸಕರ ವಿರೋಧ ಬೆಂಗಳೂರು: ಸಹಕಾರಿ ಸಂಘಗಳಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಎಸ್‌ಸಿ/ಎಸ್‌ಟಿ/ಒಬಿಸಿಗಳಿಗೆ ಮೀಸಲಾತಿ ಕಲ್ಪಿಸುವ ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆ 2025ಕ್ಕೆ ರಾಜ್ಯ ವಿಧಾನಸಭೆಯಲ್ಲಿ ಸೋಮವಾರ ಅಂಗೀಕಾರ ದೊರಕಿದೆ. ರಾಜ್ಯದ ಸಹಕಾರಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಮುಂದಾಗಿರುವ ಸರ್ಕಾರ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಕಲ್ಪಿಸುವುದು ಹಾಗೂ ನಾಮನಿರ್ದೇಶನ ಮಾಡುವಂತಹ ಅವಕಾಶ ಹೊಂದಿರುವ ಕಾನೂನನ್ನು ರೂಪಿಸಿದೆ. 2025ನೇ ಸಾಲಿನ ಕರ್ನಾಟಕ ಸಹಕಾರ ಸಂಘಗಳ(ತಿದ್ದುಪಡಿ) ವಿಧೇಯಕಕ್ಕೆ ಸೋಮವಾರ ವಿಧಾನಸಭೆಯಲ್ಲಿ ಅಂಗೀಕಾರ ಲಭಿಸಿದೆ. ಪ್ರತಿಪಕ್ಷ ಸದಸ್ಯರ ಆಕ್ಷೇಪ, ಆಗ್ರಹಗಳ ನಡುವೆಯೂ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಧ್ವನಿಮತದಿಂದ ಈ ವಿಧೇಯಕಕ್ಕೆ ಒಪ್ಪಿಗೆ ಪಡೆದುಕೊಂಡಿದೆ. https://chat.whatsapp.com/EbVKVnWB6rlHT1mWtsgbch 2024ರಲ್ಲಿ ತಿರಸ್ಕೃತಗೊಂಡಿದ್ದ ವಿಧೇಯಕಕ್ಕೆ ತಿದ್ದುಪಡಿ ತಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಮಂಡಿಸಿ…
