Author: admin
ತಂಬಾಕು, ಅಡಕೆ ಪದಾರ್ಥಗಳಲ್ಲಿ ದೊಡ್ಡ ಪ್ರಮಾಣದಲ್ಲಿ ತೆರಿಗೆ ಸೋರಿಕೆ: ವಿಧಾನಮಂಡಲದಲ್ಲಿ ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿಕೆ ಬೆಂಗಳೂರು: ದೇಶದ ತೆರಿಗೆ ವ್ಯವಸ್ಥೆಯಲ್ಲಿ ವಂಚನೆ ಪ್ರಕರಣಗಳು ಆಗಿಂದ್ದಾಗ್ಗೆ ವರದಿಯಾಗುತ್ತಿದ್ದು, ಇದನ್ನು ತಡೆಯಲು ಕೆಲವೊಂದು ಕಠಿಣ ಕ್ರಮವನ್ನು ಜಾರಿಗೆ ತರಬೇಕಿದೆ. ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗುವುದು, ಇನ್‌ಕಮ್ ಟ್ಯಾಕ್ಸ್ ಪಾವತಿಯಲ್ಲಿ ಭಾರೀ ಮೋಸವಾಗುತ್ತಿರುವುದು ಕಂಡುಬರುತ್ತಿದ್ದು ವಂಚನೆ ಎಸಗುವ ಒಬ್ಬೊಬ್ಬರನ್ನು ಹುಡುಕಿ ಕಾನೂನು ಕ್ರಮ ಕೈಕೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಎಚ್ಚರಿಕೆ ನೀಡಿದ್ದಾರೆ. https://chat.whatsapp.com/EbVKVnWB6rlHT1mWtsgbch ವಿಧಾನ ಮಂಡಲ ಅಧಿವೇಶನದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಪ್ರತಿಯೊಂದು ರಾಜ್ಯಗಳೂ ತಮ್ಮ ಪ್ರಸ್ತಾವನೆಯನ್ನು ಜಿಎಸ್‌ಟಿ ಮಂಡಳಿಗೆ ಸಲ್ಲಿಸುತ್ತವೆ. ಆ ಆಧಾರದಲ್ಲಿ ಮಂಡಳಿಯಲ್ಲಿ ಚರ್ಚಿಸಿ ತೀರ್ಮಾನವಾದ ನಂತರ ಎಲ್ಲಾ ರಾಜ್ಯ ಆ ಪ್ರಸ್ತಾವನೆಯನ್ನು ಅಳವಡಿಕೊಳ್ಳುವುದು ವಾಡಿಕೆ. ಈ ವ್ಯವಸ್ಥೆ ಮುಂದುವರಿದರೆ ಮಾತ್ರ ದೇಶದಲ್ಲಿ ಏಕರೂಪ ತೆರಿಗೆ ವ್ಯವಸ್ಥೆ ಉಳಿಸಿಕೊಳ್ಳಲು ಸಾಧ್ಯ. ಆ ಹಿನ್ನೆಲೆಯಲ್ಲಿ ಕರ್ನಾಟಕ ಸರಕು ಸೇವೆಗಳಿಗೆ ಸಂಬಂಧಿಸಿ ಕೆಲವು ತಿದ್ದುಪಡಿಗಳನ್ನು ತರಲಾಗಿದೆ ಎಂದು ತಿಳಿಸಿದರು.…
ಸಹಕಾರಿ ಬ್ಯಾಂಕುಗಳ ಅಧ್ಯಕ್ಷರು, ನಿರ್ದೇಶಕರು ನಿಗದಿತ ಅರ್ಹತೆಗಳನ್ನು ಪಾಲಿಸಲೇಬೇಕು: ರಾಜ್ಯಸಭೆಯಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ಮಾಹಿತಿ ನವದೆಹಲಿ: ಬಹು-ರಾಜ್ಯ ಸಹಕಾರಿ ಬ್ಯಾಂಕ್‌ಗಳ ಆಡಳಿತ ಮಂಡಳಿಗೆ ನಿಗದಿಪಡಿಸಿರುವ ಅರ್ಹತಾ ಮಾನದಂಡಗಳ ವಿಷಯದಲ್ಲಿ 1949ರ ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆಯ ಸೆಕ್ಷನ್ 10A (ಉಪ-ವಿಭಾಗ 2A(i)) ರ ತಿದ್ದುಪಡಿ ಮಾಡಿದ ನಿಬಂಧನೆಯ ಅನುಷ್ಠಾನವನ್ನು ಸಹಕಾರಿ ಚುನಾವಣಾ ಪ್ರಾಧಿಕಾರವು ನೋಡಿಕೊಳ್ಳಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. https://chat.whatsapp.com/EbVKVnWB6rlHT1mWtsgbch ಆಗಸ್ಟ್ 1, 2025ರಿಂದ ಜಾರಿಗೆ ಬಂದಿರುವ ತಿದ್ದುಪಡಿಯಂತೆ ಅಧ್ಯಕ್ಷರು ಮತ್ತು ಪೂರ್ಣಾವಧಿ ನಿರ್ದೇಶಕರನ್ನು ಹೊರತುಪಡಿಸಿ ನಿರ್ದೇಶಕರ ಗರಿಷ್ಠ ನಿರಂತರ ಅಧಿಕಾರಾವಧಿಯನ್ನು ಎಂಟರಿಂದ ಹತ್ತು ವರ್ಷಗಳಿಗೆ ವಿಸ್ತರಿಸಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತ ಸ್ಪಷ್ಟಪಡಿಸಿದರು. ಸಹಕಾರಿ ಬ್ಯಾಂಕ್‌ಗಳಲ್ಲಿ ನಿರ್ದೇಶಕರ ಅಧಿಕಾರಾವಧಿಯ ಕುರಿತು ರಾಜ್ಯಸಭಾ ಸಂಸದ ಶಕ್ತಿಸಿನ್ಹಾ ಗೋಯಲ್ ಅವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ನಿರ್ಮಲಾ ಸೀತಾರಾಮನ್, ಗುಜರಾತ್‌ನಾದ್ಯಂತ 145 ಅರ್ಬನ್ ಸಹಕಾರಿ ಬ್ಯಾಂಕ್‌ಗಳಲ್ಲಿ 876 ನಿರ್ದೇಶಕರು ಎಂಟು ವರ್ಷಗಳಿಗೂ ಹೆಚ್ಚು ಕಾಲ ಸೇವೆ…
ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಶ್ರೇಷ್ಠ ಸಾಧನೆಯನ್ನು ಗುರುತಿಸಿ ಬುಧವಾರ ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ನ ವಾರ್ಷಿಕ ಮಹಾಸಭೆಯಲ್ಲಿ ಉತ್ತಮ ಡಿಸಿಸಿ ಬ್ಯಾಂಕ್ ಪುರಸ್ಕಾರ ಪ್ರದಾನ ಮಾಡಲಾಯಿತು. https://chat.whatsapp.com/EbVKVnWB6rlHT1mWtsgbch ಶಿವಮೊಗ್ಗ ಡಿಸಿಸಿ ಬ್ಯಾಂಕಿನ ಪರವಾಗಿ ಬ್ಯಾಂಕಿನ ಅಧ್ಯಕ್ಷರಾದ ಡಾ|| ಆರ್.ಎಂ. ಮಂಜುನಾಥ ಗೌಡ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ರಾಜಣ್ಣ ರೆಡ್ಡಿ ಇವರು ಪ್ರಶಸ್ತಿ ಸ್ವೀಕರಿಸಿದರು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಅಧ್ಯಕ್ಷರಾದ ಡಾ|| ಆರ್.ಎಂ. ಮಂಜುನಾಥಗೌಡರು ಬ್ಯಾಂಕಿಗೆ ಸಂದ ಈ ಗೌರವವು ಜಿಲ್ಲೆಯ ರೈತರಿಗೆ ಹಾಗೂ ಗ್ರಾಹಕರಿಗೆ ಸಂದ ಗೌರವವಾಗಿದೆ ಎಂದು ತಿಳಿಸಿ ಬ್ಯಾಂಕಿನ ಸಾಧನೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಿದ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಸಚಿವರಾದ ಶಿವಾನಂದ ಪಾಟೀಲ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್,…
ಮಂಗಳೂರು: ಸಹಕಾರಿ ಬ್ಯಾಂಕಿಂಗ್ ರಂಗದಲ್ಲಿ 111 ವರ್ಷಗಳ ಸಾರ್ಥಕ ಸೇವೆಯನ್ನು ಪೂರೈಸಿ ಜನಸಾಮಾನ್ಯರ ಆರ್ಥಿಕ ಶಕ್ತಿಯಾಗಿ ಬೆಳೆದಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್(ಎಸ್‌ಸಿಡಿಸಿಸಿ ಬ್ಯಾಂಕ್)ಗೆ ರಾಜ್ಯದ ಪ್ರತಿಷ್ಠಿತ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಯನ್ನು ಬುಧವಾರ ಬೆಂಗಳೂರಿನಲ್ಲಿ ಪ್ರದಾನ ಮಾಡಲಾಯಿತು. https://chat.whatsapp.com/EbVKVnWB6rlHT1mWtsgbch ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ನ ವಾರ್ಷಿಕ ಮಹಾಸಭೆಯಲ್ಲಿ ರಾಜ್ಯದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿಗೆ ನೀಡುತ್ತಿರುವ ರಾಜ್ಯಮಟ್ಟದ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಅಪೆಕ್ಸ್ ಬ್ಯಾಂಕಿನ ಅಧ್ಯಕ್ಷರಾದ ಬೆಳ್ಳಿ ಪ್ರಕಾಶ್ ಅವರಿಂದ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್ ರಾಜೇಂದ್ರಕುಮಾರ್ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಕೆ. ಅವರು ಸ್ವೀಕರಿಸಿದರು. 23 ಬಾರಿ ಪ್ರಶಸ್ತಿ: ನಿರಂತರ ಸಮಾಜಮುಖಿ ಸೇವೆಗಳೊಂದಿಗೆ ಗ್ರಾಹಕರಿಗೆ ಸಂತೃಪ್ತ ಸೇವೆ ನೀಡುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕ್ 2023-24ನೇ ಸಾಲಿನಲ್ಲಿ ಸರ್ವಾಂಗೀಣ ಪ್ರಗತಿಯೊಂದಿಗೆ ಗುರುತಿಸಿಕೊಂಡು, ಲೆಕ್ಕ ಪರಿಶೋಧನೆಯಲ್ಲಿ ‘ಎ’ ವರ್ಗ ಪಡೆದು ಅಪೆಕ್ಸ್ ಬ್ಯಾಂಕ್ ನೀಡುವ ಪ್ರಥಮ ಪ್ರಶಸ್ತಿಗೆ ಆಯ್ಕೆಯಾಗಿದೆ. ಮಾತ್ರವಲ್ಲ, 23 ಬಾರಿ…
ಕುಂದಾಪುರ: ಶ್ರೀ ಬ್ರಾಹ್ಮೀ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ (ನಿ) ಕುಂದಾಪುರ ಇದರ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ತಲ್ಲೂರಿನ ಪಾರ್ತಿಕಟ್ಟೆ ಶ್ರೀ ಶೇಷಕೃಷ್ಣ ಕನ್ವೆನ್ಷನ್ ಹಾಲ್‌ನಲ್ಲಿ ಸಂಘದ ಅಧ್ಯಕ್ಷ ಎಸ್.ಸಚ್ಚಿದಾನಂದ ಚಾತ್ರ ಅಧ್ಯಕ್ಷತೆಯಲ್ಲಿ ನಡೆಯಿತು. 2010ನೇ ವರ್ಷದಲ್ಲಿ ಪ್ರಾರಂಭಗೊಂಡ ಈ ಸೊಸೈಟಿಯು ತೀವ್ರಗತಿಯಲ್ಲಿ ಮುನ್ನಡೆಯುತ್ತಿದ್ದು, 2024-25ನೇ ಸಾಲಿನಲ್ಲಿ 37.81 ಲಕ್ಷ ರೂ. ಲಾಭ ಗಳಿಸಿ ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಿಸಲಾಗಿದೆ. ಸಂಘವು ತನ್ನಲ್ಲಿರುವ ಠೇವಣಾತಿಗಳನ್ನು ಸಮರ್ಪಕವಾಗಿ ಸಾಲ ವಿತರಣೆ ಹಾಗೂ ಸುಸ್ಥಿರ ಹೂಡಿಕೆ ಮಾಡಿ ಪ್ರಗತಿಯ ಹಾದಿಯಲ್ಲಿ ಮುನ್ನಡೆಯುತ್ತಿದೆ. https://chat.whatsapp.com/EbVKVnWB6rlHT1mWtsgbch ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಎಸ್.ಅಡಿಗ ಇವರು 2024-25ನೇ ಸಾಲಿನ ವಾರ್ಷಿಕ ವರದಿ ಮಂಡಿಸಿದರು. ನಿರ್ದೇಶಕರಾದ ಸುಪ್ರೀತ್ ಛಾತ್ರ, ಗಾಯತ್ರಿ ಕಾರಂತ್, ರವೀಂದ್ರ ಕನ್ನಂತ ,ಕುಷ್ಟ ನಾಯಕ್, ನಾಗೇಶ್ ರಾವ್, ಟಿ.ರಾಮ, ಪ್ರಭಾಕರ ಪೈ ಹಾಜರಿದ್ದರು. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಐವರು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಿ ಗೌರವಿಸಲಾಯಿತು. ಹಾಗೂ ಸಕಾಲದಲ್ಲಿ ಸಾಲ ಮರುಪಾವತಿಸಿದ ಇಬ್ಬರು ಸದಸ್ಯರನ್ನು ಗೌರವಿಸಲಾಯಿತು.…
22.55 ಲಕ್ಷ ರೂ. ಲಾಭ, ವಾರ್ಷಿಕ ಮಹಾಸಭೆಯಲ್ಲಿ ಘೋಷಣೆ ಉಡುಪಿ: ಇಲ್ಲಿನ ಶ್ರೀ ವೀರಭದ್ರ ಸೌಹಾರ್ದ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ನಿ. ಪರ್ಕಳ ಇದರ 13ನೇ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ ಭಾನುವಾರ ಪರ್ಕಳದ ಶ್ರೀ ಸುರಕ್ಷಾ ಸಭಾಭವನದಲ್ಲಿ ನಡೆಯಿತು. ಸೊಸೈಟಿಯು 22.55 ಲಕ್ಷ ರೂ. ಲಾಭ ಗಳಿಸಿದ್ದು ಸದಸ್ಯರಿಗೆ ಶೇ.10 ಡಿವಿಡೆಂಡ್ ಘೋಷಿಸಲಾಯಿತು. https://chat.whatsapp.com/EbVKVnWB6rlHT1mWtsgbch ಸಹಕಾರಿಯ ಅಧ್ಯಕ್ಷರಾದ ಬಿ.ಎಚ್ ಶೆಟ್ಟಿಗಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ಸಹಕಾರಿಯ ಬೆಳವಣಿಗೆಗೆ ಸದಸ್ಯರ ಸಹಕಾರ ತುಂಬಾ ಮುಖ್ಯ. ಮುಂದೆ ಕೂಡಾ ಇದೇ ರೀತಿಯಲ್ಲಿ ಸದಸ್ಯರು ಸಹಕಾರ ನೀಡಿ ಸೊಸೈಟಿಯ ಅಭಿವದ್ಧಿಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ವಿನಂತಿಸಿದರು. ಸಹಕಾರಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ ರತ್ನಾ ಎಸ್.ಶೆಟ್ಟಿಯವರು 2024-25ನೇ ಸಾಲಿನ ವಾರ್ಷಿಕ ವರದಿ ಮಂಡಿಸಿದರು. ಈ ಆರ್ಥಿಕ ವರ್ಷದಲ್ಲಿ ಶ್ರೀ ವೀರಭದ್ರ ಸೌಹಾರ್ದ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯು ರೂ.22,55,646 ಲಾಭ ಗಳಿಸಿದೆ ಮತ್ತು ಸದಸ್ಯರಿಗೆ 10% ಡಿವಿಡೆಂಡ್ ನೀಡಲು ಸಾಮಾನ್ಯ ಸಭೆಯಲ್ಲಿ ನಿರ್ಧರಿಸಲಾಗಿದೆ. ಸಹಕಾರಿಯ ಸುಸ್ತಿ ಸಾಲದ ಪ್ರಮಾಣವು…
ಉತ್ತಮ ಕೃಷಿಕ ಪ್ರಶಸ್ತಿ ಪ್ರದಾನ, ಪ್ರಗತಿಪರ ಕೃಷಿಕರಿಗೆ ಗೌರವಾರ್ಪಣೆ ಬಂಟ್ವಾಳ: ದಕ್ಷಿಣ ಕನ್ನಡ ಸೌಹಾರ್ದ ಸಹಕಾರಿ ಅಣ್ಣಳಿಕೆ ಬಂಟ್ವಾಳ ಇದರ 2024-25ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಭಾನುವಾರ ಬಿ.ಸಿ.ರೋಡ್ ರಂಗೋಲಿ ಹೋಟೆಲ್‌ನಲ್ಲಿ ಜರುಗಿತು. ಸಹಕಾರಿಯ ಅಧ್ಯಕ್ಷರಾದ ಸಿಲ್ವೆಸ್ಟರ್ ಡಿಸೋಜ ಅಧ್ಯಕ್ಷತೆ ವಹಿಸಿದ್ದರು. ಸಹಕಾರಿಯ ಸಿಬ್ಬಂದಿ ಸುಮಂಗಲಾ, ವಿನೋದಾ ಪ್ರಾರ್ಥಿಸಿದರು. ಸಹಕಾರಿಯ ಉಪಾಧ್ಯಕ್ಷ ದೇವಪ್ಪ ಕುಲಾಲ್ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ರುದೇಶ್ ಪೂಜಾರಿ ವಾರ್ಷಿಕ ವರದಿ, ಲೆಕ್ಕಪತ್ರಗಳು ಹಾಗೂ ನಿವ್ವಳ ಲಾಭದ ವಿಂಗಡನೆಯ ವಿಷಯ ಮಂಡಿಸಿದರು. ಸದಸ್ಯರಿಗೆ ಶೇ.5.13 ಡಿವಿಡೆಂಡ್ ಘೋಷಣೆ ಮಾಡಲಾಯಿತು. ಸಹಕಾರಿಯ ಅಧ್ಯಕ್ಷ ಸಿಲ್ವೆಸ್ಟರ್ ಡಿಸೋಜ ಮಾತನಾಡಿ ಸದಸ್ಯರ ನಂಬಿಕೆ, ವಿಶ್ವಾಸದಿಂದ ಸಹಕಾರಿಯ ಅಭಿವೃದ್ಧಿ ಸಾಧ್ಯ ಎಂದರು. https://chat.whatsapp.com/EbVKVnWB6rlHT1mWtsgbch ನೇತ್ರಾವತಿ ಕೃಷಿಕ ಅಭಿವೃದ್ಧಿ ಸಂಘಗಳ ಒಕ್ಕೂಟದ ವತಿಯಿಂದ 2025ರ ಸಾಲಿನ ಉತ್ತಮ ಕೃಷಿಕ ಪ್ರಶಸ್ತಿಯನ್ನು ಬಂಟ್ವಾಳ ತಾಲೂಕಿನ ಪ್ರಗತಿಪರ ಕೃಷಿಕರಾದ ಮಹಾಬಲ ಶೆಟ್ಟಿ ಕುಂದಬೆಟ್ಟು ತೆಂಕಬೆಳ್ಳೂರು, ರಂಜಿನಿ ದಿವಾಕರ್ ಮಾದಾಯಿ ಸಿದ್ದಕಟ್ಟೆ, ಜೆರಾಲ್ದ್ ಲೋಬೊ ದೆಂಬುಡೆ ಅರಳ, ಕೃಷ್ಣರಾಜ್…
ವಾರ್ಷಿಕ ಮಹಾಸಭೆಯಲ್ಲಿ ಘೋಷಣೆ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಗಳೂರು; ಶ್ರೀ ಗುರುಶಕ್ತಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಕಾವೂರು ಇದರ 2024-25ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಕೋಡಿಕಲ್ ಎಸ್‌ಎನ್‌ಡಿಪಿ ಸಂಘದ ಸಭಾಂಗಣದಲ್ಲಿ ಭಾನುವಾರ ನಡೆಯಿತು. ಸಹಕಾರಿಯ ಅಧ್ಯಕ್ಷರಾದ ಚಂದ್ರಶೇಖರ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಸಹಕಾರಿಯ ಸದಸ್ಯರಾದ ಕೋಡಿಕಲ್ ಎಸ್.ಎನ್.ಡಿ.ಪಿ. ಸಂಘದ ಅಧ್ಯಕ್ಷ ಉಮ್ಮಪ್ಪ ಪೂಜಾರಿ ಪಿ., ಪದ್ಮನಾಭ ಕಾರ್ನಾಡ್, ಪ್ರಮೀಳಾ ಈಶ್ವರ್, ಶಾಲಿನಿ, ಸೀತಾರಾಮ, ಕೃಷ್ಣ ಎನ್. ಪೂಜಾರಿ, ರಮೇಶ್ ಹಾಗೂ ಆಡಳಿತ ಮಂಡಳಿ ಸದಸ್ಯರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. https://chat.whatsapp.com/EbVKVnWB6rlHT1mWtsgbch ನಿರ್ದೇಶಕರಾದ ಪುರುಷೋತ್ತಮ್ ಎನ್ ಪೂಜಾರಿ ಸ್ವಾಗತಿಸಿದರು. ಮುಖ್ಯಕಾರ್ಯನಿರ್ವಾಹಕರಾದ ರಚನಾ 2024-25ನೇ ಸಾಲಿನ ವರದಿ, ಲೆಕ್ಕಪತ್ರಗಳು ಹಾಗೂ ನಿವ್ವಳ ಲಾಭದ ವಿಂಗಡಣೆಯ ಕುರಿತು ವಿಷಯ ಮಂಡಿಸಿದರು. ಸಹಕಾರಿಯ ಸದಸ್ಯರಿಗೆ ಶೇ.8 ಡಿವಿಡೆಂಡ್ ಘೋಷಣೆ ಮಾಡಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಸೊಸೈಟಿಯ ಅಧ್ಯಕ್ಷ ಚಂದ್ರಶೇಖರ್ ಕುಮಾರ್ ಮಾತನಾಡಿ ಶ್ರೀ ಗುರುಶಕ್ತಿ ಸೌಹಾರ್ದ…
ಉಡುಪಿ: ಶ್ರೀರಸ್ತು ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಉಡುಪಿ ಇದರ ವಾರ್ಷಿಕ ಸಾಮಾನ್ಯ ಸಭೆ ಭಾನುವಾರ ಸಹಕಾರಿಯ ಮುಖ್ಯ ಕಚೇರಿಯ ಸಭಾಂಗಣದಲ್ಲಿ ನಡೆಯಿತು. https://chat.whatsapp.com/EbVKVnWB6rlHT1mWtsgbch ಅಧ್ಯಕ್ಷರಾದ ಆರ್.ವಿ.ಕುಂದರ್ ಮಾತನಾಡಿ, ಸಂಘವು ಸತತವಾಗಿ ಲಾಭದೊಂದಿಗೆ ಮುನ್ನಡೆಯುತ್ತಿದೆ. ಇದಕ್ಕೆ ಕಾರಣರಾದವರಿಗೆ ಹಾಗೂ ಅಭಿವೃದ್ಧಿಗೆ ಸಹಕರಿಸಿದ ಠೇವಣಿದಾರರಿಗೆ, ಪಿಗ್ಮಿ ಸಂಗ್ರಹಗಾರರಿಗೆ, ಸಿಬ್ಬಂದಿ ಹಾಗೂ ನಿರ್ದೇಶಕರಿಗೆ ಕೃತಜ್ಞತೆ ಸಲ್ಲಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸರಿತಾ ಪ್ರಾಸ್ತಾವಿಕ ಮಾತನಾಡಿ, ವಾರ್ಷಿಕ ವರದಿ ಮಂಡಿಸಿದರು. ವಾರ್ಷಿಕ ವರ್ಷದಲ್ಲಿ ಅತಿಹೆಚ್ಚು ಠೇವಣಿ ಸಂಗ್ರಹಿಸಿದ ಸಿಬ್ಬಂದಿ, ನಿರ್ದೇಶಕರನ್ನು ಗೌರವಿಸಲಾಯಿತು. ಉಪಾಧ್ಯಕ್ಷರಾದ ಪ್ರಶಾಂತ್ ಎಸ್, ನಿರ್ದೇಶಕರಾದ ಅಶೋಕ್ ಸೇರಿಗಾರ್, ಜಲಜಾ ಕೆ, ಮಾಧವ, ನಯನ ದಾಸ್, ರಾಮ ಶೇರಿಗಾರ್, ನಾರಾಯಣ್, ಪ್ರಕಾಶ್ ಕುಂದರ್, ಶಿವಾನಂದ್, ಅಮಿತಾ, ಚಿತ್ರಾಕ್ಷಿ ಉಪಸ್ಥಿತರಿದ್ದರು. ಅಂತಾರಾಷ್ಟ್ರೀಯ ತರಬೇತುದಾರರಾದ ಎಸ್.ಎನ್ ಶೆಟ್ಟಿ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ದಿವ್ಯಾ ಸ್ವಾಗತಿಸಿ, ಅಶ್ಮಿತಾ ಹಾಗೂ ಚೈತ್ರ ಕಾರ್ಯಕ್ರಮ ನಿರೂಪಿಸಿದರು. ಪ್ರತೀಕ್ಷಾ ವಂದಿಸಿದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694…
ಮಂಗಳೂರು: ಸಹಕಾರಿ ರಂಗದಲ್ಲಿ ಆಧುನಿಕ ತಂತ್ರಜ್ಞಾನದ ಮೂಲಕ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್)ಗೆ ಕರ್ನಾಟಕ ರಾಜ್ಯ ಸಹಕಾರಿ ಅಪಕ್ಸ್ ಬ್ಯಾಂಕ್‌ನ ಪ್ರಥಮ ಪ್ರಶಸ್ತಿ ಲಭಿಸಿದೆ. https://chat.whatsapp.com/EbVKVnWB6rlHT1mWtsgbch ಅಪೆಕ್ಸ್ ಬ್ಯಾಂಕ್ ರಾಜ್ಯದ ಅತ್ಯುತ್ತಮ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿಗೆ ಪ್ರಶಸ್ತಿ ನೀಡುತ್ತಿದೆ. ಸಮಾಜಮುಖಿ ಸೇವೆಗಳೊಂದಿಗೆ ಗ್ರಾಹಕರಿಗೆ ಸಂತೃಪ್ತ ಸೇವೆ ನೀಡುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕ್ 2023-24ನೇ ಸಾಲಿನಲ್ಲಿ ತೋರಿದ ಸರ್ವಾಂಗೀಣ ಪ್ರಗತಿಯೊಂದಿಗೆ ಲೆಕ್ಕಪರಿಶೋಧನೆಯಲ್ಲಿ ‘ಎ’ ವರ್ಗ ಪಡೆದು ಪ್ರಥಮ ಪ್ರಶಸ್ತಿಗೆ ಆಯ್ಕೆಯಾಗಿದೆ. ಬ್ಯಾಂಕ್ ವರದಿ ವರ್ಷದಲ್ಲಿ ನೀಡಿದ ಎಲ್ಲಾ ಕೃಷಿ ಸಾಲಗಳು ಶೇಕಡಾ ೧೦೦ಯಾಗಿದ್ದು ಇಂತಹ ಸಾಧನೆಯನ್ನು ಬ್ಯಾಂಕ್ 30 ವರ್ಷಗಳಿಂದ ನಿರಂತರವಾಗಿ ಮಾಡಿರುವುದು ರಾಷ್ಟ್ರೀಯ ದಾಖಲೆ ಎಂದು ಬ್ಯಾಂಕಿನ ಪ್ರಕಟಣೆ ತಿಳಿಸಿದೆ. 23 ಬಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ 113 ಶಾಖೆಗಳ ಮೂಲಕ ಉತ್ಕೃಷ್ಟ ಬ್ಯಾಂಕಿಂಗ್ ಸೇವೆ ನೀಡುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕ್…
