Author: admin
ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ದಿಢೀರ್ ನಿರ್ಧಾರ? ಬೆಂಗಳೂರು: ರಾಜ್ಯದ ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರು ತಮ್ಮ ಸಚಿವ ಸ್ಥಾನಕ್ಕೆ ದಿಢೀರ್ ರಾಜೀನಾಮೆ ಘೋಷಣೆ ಮಾಡಿದ್ದು, ಆಡಳಿತ ಪಕ್ಷ ಕಾಂಗ್ರೆಸ್‌ಗೆ ಶಾಕ್ ನೀಡಿದ್ದಾರೆ. ಆದರೆ ಕಾಂಗ್ರೆಸ್ ಹೈಕಮಾಂಡ್‌ನಿಂದ ಆದೇಶ ಬಂದ ಹಿನ್ನೆಲೆಯಲ್ಲಿ ರಾಜಣ್ಣ ಈ ನಿರ್ಧಾರ ಮಾಡಿದ್ಧಾರೆ ಎನ್ನಲಾಗಿದೆ. https://chat.whatsapp.com/EbVKVnWB6rlHT1mWtsgbch ಕೆಲವು ದಿನಗಳಿಂದ ಪಕ್ಷ, ಹೈಕಮಾಂಡ್ ಹಾಗೂ ರಾಜಕೀಯ ವಿಷಯಗಳಿಂದ ದೂರವಿದ್ದ ಕೆ.ಎನ್ ರಾಜಣ್ಣ ಅವರು ಇತ್ತೀಚೆಗೆ ಪಕ್ಷ ಹಾಗೂ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾತನಾಡಿದ್ದರು. ಜತೆಗೆ ಡಿ.ಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಜತೆಗೂ ಒಳಮುನಿಸು ಇತ್ತು. ಇದು ಕೂಡ ರಾಜೀನಾಮೆ ನೀಡಲು ಕಾರಣ ಎನ್ನಲಾಗುತ್ತಿದೆ. ರಾಜಣ್ಣ ಅವರ ದಿಢೀರ್ ರಾಜೀನಾಮೆ ರಾಜ್ಯ ರಾಜಕೀಯದಲ್ಲಿ ಬಹುದೊಡ್ಡ ಸಂಚಲನ ಮೂಡಿಸಿದ್ದು, ಕಾಂಗ್ರೆಸ್ ಹಿರಿಯ ನಾಯಕ, ಗೃಹಸಚಿವರ ಆಪ್ತರ ವಿರುದ್ಧವೇ ಹೈಕಮಾಂಡ್ ಈ ರೀತಿ ಕ್ರಮ ಕೈಗೊಂಡಿರುವುದು ಆತಂಕ ಮೂಡಿಸಿದೆ.ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬೆಂಬಲಿಗರು ಮುಖ್ಯಮಂತ್ರಿ…
ಬೈಂದೂರು: ಶ್ರೀ ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಉಪ್ಪುಂದ ಇದರ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಶನಿವಾರ ಉಪ್ಪುಂದ ಪರಿಚಯ ದೇವಕಿ ಜಿ.ಆರ್ ಸಭಾಂಗಣದಲ್ಲಿ ನಡೆಯಿತು. https://chat.whatsapp.com/EbVKVnWB6rlHT1mWtsgbch ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಅಧ್ಯಕ್ಷ ಗೋವಿಂದ ಬಾಬು ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಘವು 83.19 ಲಕ್ಷ ರೂ. ವ್ಯವಹಾರ ನಡೆಸಿದ್ದು 26.74 ಲಕ್ಷ ರೂ. ಲಾಭ ಗಳಿಸಿದೆ. ಸಂಘದ ಸದಸ್ಯರಿಗೆ ಶೇ.10.05 ಡಿವಿಡೆಂಡ್ ಘೋಷಣೆ ಮಾಡಲಾಗಿದೆ. ಜನರಿಗೆ ಉತ್ತಮ ಆರ್ಥಿಕ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಆರಂಭಿಸಿದ ಸಂಸ್ಥೆಗೆ ಜನರ ಉತ್ತಮ ಸಹಕಾರದಿಂದ ವರ್ಷದಿಂದ ವರ್ಷಕ್ಕೆ ಪ್ರಗತಿ ಸಾಧಿಸಿದೆ. ಇದಕ್ಕೆ ಸಿಬ್ಬಂದಿಗಳ ಪರಿಶ್ರಮ ಶ್ಲಾಘನೀಯವಾಗಿದ್ದು ಮುಂದಿನ ದಿನಗಳಲ್ಲಿ ವ್ಯವಹಾರವನ್ನು ಇನ್ನಷ್ಟು ಹೆಚ್ಚಿಸುವುದು ಹಾಗೂ ಶಾಖೆಗಳು ಸ್ವಂತ ಕಟ್ಟಡವನ್ನು ಹೊಂದುವಂತೆ ಮಾಡುವ ಗುರಿಯನ್ನು ಹೊಂದಲಾಗಿದೆ ಎಂದರು. ಸೊಸೈಟಿಯ ನಿರ್ದೇಶಕರಾದ ರಾಘವೇಂದ್ರ ಪೂಜಾರಿ ನಾರಂಬಳ್ಳಿ, ದೇವನ್ ಕೆ .ಪೂಜಾರಿ, ಮಾಲತಿ ಪೂಜಾರಿ, ಪಾರ್ವತಿ ಪೂಜಾರಿ, ಮಾಚಯ್ಯ ಬಿಲ್ಲವ, ಗಿರೀಶ್ ಹೊಳ್ಳ,…
ಉಡುಪಿ: ಕರ್ನಾಟಕ ಪ್ರಗತಿಪರ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ ಇತ್ತೀಚೆಗೆ ನಡೆಯಿತು. ಸದಸ್ಯರಿಗೆ ಲಾಭಾಂಶದಲ್ಲಿ ಶೇ.9 ಡಿವಿಡೆಂಡ್ ಘೋಷಿಲಾಯಿತು. https://chat.whatsapp.com/EbVKVnWB6rlHT1mWtsgbch ಸಹಕಾರಿ ಸಂಘಗಳ ನಿವೃತ್ತ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ವಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಅರುಣ್ ಕುಮಾರ್ ಅವರನ್ನು ಸಂಸ್ಥೆಯ ವತಿಯಿಂದ ಅಭಿನಂದಿಸಲಾಯಿತು. ಅರುಣ್ ಕುಮಾರ್ ಮಾತನಾಡಿ, ಸಂಸ್ಥೆಯ ಸಮಾಜಮುಖಿ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಸಂಸ್ಥೆ ಇನ್ನೂ ಎತ್ತರಕ್ಕೆ ಬೆಳೆಯಲಿ ಎಂದು ಆಶಿಸಿದರು. ಸಂಸ್ಥೆಯ ಉಪಾಧ್ಯಕ್ಷ ಪ್ರಕಾಶ್ ಕೆ ಸಂಸ್ಥೆ ಬೆಳೆದು ಬಂದ ಹಾದಿಯ ಬಗ್ಗೆ ಪ್ರಾಸ್ತಾವಿಕ ಮಾತನಾಡಿದರು. ಸಂಸ್ಥೆಯ ಅಧ್ಯಕ್ಷರಾದ ರಾಮಚಂದ್ರ ಪೂಜಾರಿ ಸ್ವಾಗತಿಸಿದರು. ನಿರ್ದೇಶಕರಾದ ಗೋಪಾಲ್ ವಿ, ಸುರೇಶ್ ಪೂಜಾರಿ, ಲೋಕೇಶ್ ಪೂಜಾರಿ, ರಮೇಶ್ ಪ್ರಭು, ಉಮೇಶ್ ಪೂಜಾರಿ, ರಾಘವೇಂದ್ರ ಪೂಜಾರಿ, ಗುರುರಾಜ್, ಮಂಜುನಾಥ್ ಪೂಜಾರಿ, ಗಂಗಾಧರ್ ಪೂಜಾರಿ ಭಾಗವಹಿಸಿದ್ದರು. ಸಂಸ್ಥೆಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶೋಕ್ ಪೂಜಾರಿ ವಂದಿಸಿದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com
ಎಂಸಿಸಿ ಬ್ಯಾಂಕ್ ಸುರತ್ಕಲ್ ಶಾಖೆಯಲ್ಲಿ 10ನೇ ಎಟಿಎಂ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಹಕಾರ ರತ್ನ ಅನಿಲ್ ಲೋಬೊ ಅಭಿಪ್ರಾಯ ಮಂಗಳೂರು: ಎಂಸಿಸಿ ಬ್ಯಾಂಕ್ ಜನರ ಬ್ಯಾಂಕ್ ಆಗಿದ್ದು, ಇದು ಕೇವಲ ಸಿಬ್ಬಂದಿ ಅಥವಾ ನಿರ್ದೇಶಕರಿಗೆ ಮಾತ್ರ ಸೇರದೆ ಗ್ರಾಹಕರು ಮತ್ತು ಎಲ್ಲಾ ಸಮುದಾಯಗಳಿಗೆ ಸೇರಿರುವಂಥದ್ದು. ನಮ್ಮ ಗ್ರಾಹಕರೇ ನಮ್ಮ ಬ್ರಾಂಡ್ ರಾಯಭಾರಿಗಳು ಎಂದು ಎಂಸಿಸಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಹೇಳಿದರು. https://chat.whatsapp.com/EbVKVnWB6rlHT1mWtsgbch ಎಂಸಿಸಿ ಬ್ಯಾಂಕ್‌ನ ಸುರತ್ಕಲ್ ಶಾಖೆಯಲ್ಲಿ ಭಾನುವಾರ ಬ್ಯಾಂಕಿನ 10ನೇ ಎಟಿಎಂ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಂಸಿಸಿ ಬ್ಯಾಂಕ್ ಪ್ರಸ್ತುತ ಹಣಕಾಸು ವರ್ಷದ ಅಂತ್ಯದ ವೇಳೆಗೆ 25 ಶಾಖೆಗಳಿಗೆ ವಿಸ್ತರಿಸುವ ಗುರಿ ಹೊಂದಿದೆ. ಇದರ ಜೊತೆಗೆ, ಹೊಸ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳನ್ನು ಅಳವಡಿಸಿಕೊಳ್ಳಲು ಸಿದ್ಧವಾಗಿದೆ. ಮುಂದಿನ ದಿನಗಳಲ್ಲಿ ಯುಪಿಐ ಸೇವೆಗಳನ್ನು ಪರಿಚಯಿಸುವ ಯೋಜನೆಗಳಿವೆ. ಆಡಳಿತ ಮಂಡಳಿ, ಸಿಬ್ಬಂದಿ, ಗ್ರಾಹಕರು ಮತ್ತು ಸಮುದಾಯದ ಸದಸ್ಯರು ಎಂಸಿಸಿ ಬ್ಯಾಂಕ್‌ಗೆ ನಿರಂತರ ಬೆಂಬಲ ನೀಡಿದ್ದಾರೆ. ಸೇವೆಯಲ್ಲಿ ರಾಜಿ ಮಾಡಿಕೊಳ್ಳದೆ ಉತ್ತಮ…
ಶೇ.50 ಸುಂಕ ವಿಧಿಸುವ ಅಮೆರಿಕದ ಆದೇಶಕ್ಕೆ ಸೆಡ್ಡು ಹೊಡೆಯಲು ದಿಲೀಪ್ ಸಂಘಾನಿ ಕರೆ ಅಮೆರಿಕನ್ ಉತ್ಪನ್ನಗಳನ್ನು ಬಹಿಷ್ಕರಿಸಿ ಆತ್ಮನಿರ್ಭರ ಭಾರತ ಪರಿಕಲ್ಪನೆ ಬೆಂಬಲಿಸಲು ಮನವಿ ನವದೆಹಲಿ: ಭಾರತದ ಮೇಲೆ ಆರ್ಥಿಕವಾಗಿ ಒತ್ತಡ ಹೇರಲು ಅಮೆರಿಕವು ಮಾಡುತ್ತಿರುವ ಪ್ರಯತ್ನಗಳನ್ನು ಖಂಡಿಸಿರುವ ಹಿರಿಯ ಸಹಕಾರಿ ಮುಖಂಡ ದಿಲೀಪ್‌ಸಂಘಾನಿ, ಭಾರತೀಯ ನಾಗರಿಕರು ಅಮೆರಿಕನ್ ಉತ್ಪನ್ನಗಳನ್ನು ಬಹಿಷ್ಕರಿಸುವ ಮೂಲಕ ತಮ್ಮ ದೇಶಭಕ್ತಿ ಮತ್ತು ರಾಷ್ಟ್ರೀಯ ಶಕ್ತಿಯನ್ನು ಪ್ರದರ್ಶಿಸುವ ಜೊತೆಗೆ ಭಾರತೀಯರು ಆತ್ಮನಿರ್ಭರ ಪರಿಕಲ್ಪನೆಯ ಮೂಲಕ ಸ್ವಾವಲಂಬಿಯಾಗಲು ಇದು ಸುಸಮಯ ಎಂದು ಹೇಳಿದ್ದಾರೆ. https://chat.whatsapp.com/EbVKVnWB6rlHT1mWtsgbch ಭಾರತೀಯ ಜನ ಪರಿಷತ್ತಿನ ಸಭೆಯಲ್ಲಿ ಮಾತನಾಡಿದ ಸಂಘಾನಿ, ಜಾಗತಿಕ ಶಕ್ತಿಕೇಂದ್ರವಾಗಿ ಬೆಳೆಯುತ್ತಿರುವ ಭಾರತದ ಪ್ರಮುಖ ವಲಯಗಳ ಮೇಲೆ ಪ್ರಭಾವ ಬೀರಲು ಅಮೆರಿಕ ನಿರಂತರ ಪ್ರಯತ್ನಗಳನ್ನು ಮಾಡುತ್ತಿದೆ. ಭಾರತೀಯರು ಅಮೆರಿಕದ ಸರಕುಗಳನ್ನು ಸಂಪೂರ್ಣವಾಗಿ ತಿರಸ್ಕರಿಸುವ ಮೂಲಕ ಡೊನಾಲ್ಡ್‌ಟ್ರಂಪ್‌ಹೇರಲು ಹೊರಟಿರುವ ಶೇ.50ರ ಸುಂಕ ನೀತಿಗೆ ಬಲವಾದ ತಿರುಗೇಟು ನೀಡಬೇಕು. ಇದು ಕೇವಲ ಪ್ರತಿಭಟನೆಯಲ್ಲ, ಆದರೆ ಭಾರತದ ಸಾರ್ವಭೌಮತ್ವ ಮತ್ತು ಆರ್ಥಿಕ ಸ್ವಾತಂತ್ರ್ಯವನ್ನು ಬಲಪಡಿಸುವ ಕಾರ್ಯತಂತ್ರದ ಕ್ರಮವಾಗಿ…
ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಘೋಷಣೆ, ಸಾಧಕರಿಗೆ ಸನ್ಮಾನ ಮೂಲ್ಕಿ: ಪ್ರತಿಷ್ಠಿತ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಹಳೆಯಂಗಡಿ ಇದರ 2024 -25ನೇ ಸಾಲಿನ ಸರ್ವ ಸದಸ್ಯರ ಸಾಮಾನ್ಯ ಸಭೆಯು ಶನಿವಾರ ನಡೆಯಿತು. https://chat.whatsapp.com/EbVKVnWB6rlHT1mWtsgbch ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಎಚ್.ವಸಂತ್ ಬೆರ್ನಾಡ್ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಘದ ಅಭಿವೃದ್ಧಿಗೆ ಗ್ರಾಹಕರು, ಸದಸ್ಯರು ಹಾಗೂ ನಿರ್ದೇಶಕರ ಸಹಕಾರ ಕಾರಣವಾಗಿದ್ದು, ಲಾಭಾಂಶದಲ್ಲಿ ಶೇ.8 ಡಿವಿಡೆಂಡ್ ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ಶಾಖೆಯ ಅಭಿವೃದ್ಧಿಗೆ ಮತ್ತಷ್ಟು ಸಹಕಾರ ಅಗತ್ಯ ಎಂದರು. ಮುಖ್ಯ ಅತಿಥಿಗಳಾಗಿ ಸೊಸೈಟಿಯ ಉಪಾಧ್ಯಕ್ಷೆ ಪ್ರತಿಭಾ ಕುಳಾಯಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಪಂಜ, ನಿರ್ದೇಶಕರಾದ ಡಾ|ಗಣೇಶ್ ಅಮೀನ್ ಸಂಕಮಾರ್, ಧನಂಜಯ ಮಟ್ಟು, ಗೌತಮ್ ಜೈನ್, ಶರತ್ ಶೆಟ್ಟಿ ಪಂಚವಟಿ, ಉಮಾನಾಥ್ ಜೆ.ಶೆಟ್ಟಿಗಾರ್, ಜೈ ಕೃಷ್ಣ ಕೋಟ್ಯಾನ್, ಗಣೇಶ್ ಪ್ರಸಾದ್ ದೇವಾಡಿಗ, ಧನರಾಜ್ ಕೋಟ್ಯಾನ್, ಮಿರ್ಜಾ ಅಹ್ಮದ್, ಶೆರಿಲ್ ಆಯೋನ ಐಮನ್, ಹರೀಶ್ ಎನ್.ಪುತ್ರನ್, ನವೀನ್ ಸಾಲ್ಯಾನ್ ಪಂಜ, ಸಂದೀಪ್, ವಿಜಯಕುಮಾರ್ ಸನಿಲ್, ತನುಜಾ ಶೆಟ್ಟಿ…
ಬೆಳ್ಮಣ್: ಎಂಸಿಸಿ ಬ್ಯಾಂಕ್ ಲಿಮಿಟೆಡ್ ನ ಗ್ರಾಹಕ ಸೇವೆ ಮತ್ತು ಬ್ಯಾಂಕಿಂಗ್ ಶ್ರೇಷ್ಟತೆಯ ಪ್ರಯಾಣದಲ್ಲಿ ಮತ್ತೊಂದು ಮೈಲಿಗಲ್ಲಾಗಿ ಶನಿವಾರ ಬೆಳ್ಮಣ್ ಶಾಖೆಯಲ್ಲಿ ತನ್ನ 9ನೇ ಎಟಿಎಂ ಅನಾವರಣಗೊಳಿಸಿತು. https://chat.whatsapp.com/EbVKVnWB6rlHT1mWtsgbch ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ವಹಿಸಿದ್ದರು. ಎಟಿಎಂ ಅನ್ನು ಬೆಳ್ಮಣ್ ನ ಮಾನ್ಯ ಡೆವಲಪರ್ಸ್ ಮತ್ತು ಹೋಟೆಲ್ ಸೂರಜ್ ಇನ್‌ನ ಮಾಲೀಕ ಶೋಧನ್ ಕುಮಾರ್ ಶೆಟ್ಟಿ ಉದ್ಘಾಟಿಸಿದರು. ಬೆಳ್ಮಣ್ ಸೇಂಟ್ ಜೋಸೆಫ್ ಚರ್ಚ್ ಧರ್ಮಗುರು ರೆವೆರೆಂಡ್ ಫಾದರ್ ಫ್ರೆಡ್ರಿಕ್ ಮಸ್ಕರೇನ್ಹಸ್ ಎಟಿಎಂ ಅನ್ನು ಆಶೀರ್ವಚಿಸಿ ಶಾಖೆ ಮತ್ತು ಅದರ ಗ್ರಾಹಕರಿಗೆ ಅನುಗ್ರಹ ಮತ್ತು ಸಮೃದ್ಧಿ ಬಯಸಿದರು. ಫ್ರೆಡ್ರಿಕ್ ವಿನ್ಸೆಂಟ್ ಅಂದ್ರಾದೆಯವರು ಎಟಿಎಂನಿoದ ಮೊದಲ ನಗದು ಹಿಂಪಡೆಯುವಿಕೆ ಪಡೆದರು. ಮುಖ್ಯ ಅತಿಥಿಗಳಾಗಿ ಫ್ರಾನ್ಸಿಸ್ ಡಿಸೋಜ, ಸೇಂಟ್ ಜೋಸೆಫ್ ಅರ್ಥ್ ಮೂವರ್ಸ್ ಮತ್ತು ಸೇಂಟ್ ಜೋಸೆಫ್ ಫುಯೆಲ್ಸ್ ಮಾಲೀಕ ಡೊಮಿನಿಕ್ ಆಂದ್ರಾದೆ, ಸೇಂಟ್ ಜೋಸೆಫ್ ಇಂಗ್ಲಿಷ್ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರು ಉಪಸ್ಥಿತರಿದ್ದರು. ಎಂಸಿಸಿ ಬ್ಯಾಂಕ್ ಬೆಳ್ಮಣ್ ಶಾಖೆಯ…
ಮಂಗಳೂರು: ದಿವ್ಯಜ್ಯೋತಿ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ., ಪಂಪ್‌ವೆಲ್ ಮಂಗಳೂರು ಇವರ ಆಶ್ರಯದಲ್ಲಿ ಲಯನ್ಸ್ ಕ್ಲಬ್ ಮಂಗಳೂರು, ಮಂಗಳಾದೇವಿ ಮತ್ತು ಜಪ್ಪಿನಮೊಗರು ಗ್ರಾಮ ಯುವಕ ಮಂಡಲ ಇವರ ಜಂಟಿ ಸಹಯೋಗದೊಂದಿಗೆ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ಹಾಗೂ ಸಮುದಾಯ ದಂತ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ , ದೇರಳಕಟ್ಟೆ ಇವರ ನುರಿತ ತಜ್ಞ ವೈದ್ಯ ತಂಡದವರಿಂದ ಉಚಿತ ನೇತ್ರ ತಪಾಸಣೆ, ದಂತ ಚಿಕಿತ್ಸೆ ಮತ್ತು ಸಾಮಾನ್ಯ ವೈದ್ಯಕೀಯ ತಪಾಸಣೆ ದಿನಾಂಕ ಆಗಸ್ಟ್ 10ರಂದು ಪೂರ್ವಾಹ್ನ 9.30 ರಿಂದ ಅಪರಾಹ್ನ 12.30ರ ವರೆಗೆ ಲಯನ್ಸ್ ಚೈಲ್ಡ್ ಕೇರ್ ಸೆಂಟರ್ ಜಪ್ಪಿನಮೊಗರು ಇಲ್ಲಿ ಆಯೋಜಿಸಲಾಗಿದೆ. https://chat.whatsapp.com/EbVKVnWB6rlHT1mWtsgbch ಈ ಶಿಬಿರದಲ್ಲಿ ಕಣ್ಣಿನ ತಪಾಸಣೆ , ಅಗತ್ಯವುಳ್ಳವರಿಗೆ ಉಚಿತ ಕನ್ನಡಕ ವಿತರಣೆ, ಮಧುಮೇಹ ತಪಾಸಣೆ, ರಕ್ತದೊತ್ತಡ ಪರೀಕ್ಷೆ, ಸಾಮಾನ್ಯ ವೈದ್ಯಕೀಯ ತಪಾಸಣೆ, ಹಲ್ಲುಗಳ ಶುಚಿಗೊಳಿಸುವಿಕೆ , ರೋಗಗ್ರಸ್ಥ ಹಲ್ಲುಗಳನ್ನು ಕೀಳುವುದು, ಉಚಿತ ಔಷಧ ವಿತರಣೆಯ ಸೇವೆಗಳು ಲಭ್ಯವಿದ್ದು…
ಸಮಾಜ ಸೇವಾ ಸಹಕಾರಿ ಸಂಘ ಬಂಟ್ವಾಳ ಪ್ರಾಯೋಜಕತ್ವದಲ್ಲಿ ನಾಳೆ ‘ಡಾ.ಅಮ್ಮೆಂಬಳ ಬಾಳಪ್ಪ ರಸ್ತೆʼ ನಾಮಕರಣದ ಫಲಕ ಅನಾವರಣ
ಮಂಗಳೂರು: ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಪ್ರಾಯೋಜಕತ್ವದಲ್ಲಿ ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃಸಂಘ ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಸಹಭಾಗಿತ್ವದಲ್ಲಿ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದ ಮುಂಭಾಗದ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ತೆರಳುವ ರಸ್ತೆಗೆ ಸ್ವಾತಂತ್ರ್ಯ ಹೋರಾಟಗಾರ ಡಾ.ಅಮ್ಮೆಂಬಳ ಬಾಳಪ್ಪ ರಸ್ತೆ ನಾಮಕರಣದ ಫಲಕ ಅನಾವರಣ ಮತ್ತು ಅಭಿನಂದನಾ ಸಮಾರಂಭ ಆ.10ರಂದು ನಡೆಯಲಿದೆ. https://chat.whatsapp.com/EbVKVnWB6rlHT1mWtsgbch ಬೆಳಗ್ಗೆ 9.30ಕ್ಕೆ ಸ್ಪೀಕರ್ ಯು.ಟಿ. ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್ ನಾಮಫಲಕ ಅನಾವರಣ ಮಾಡುವರು. ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃಸಂಘದ ಕೋರಿಕೆಯಂತೆ ರಾಜ್ಯ ಸರಕಾರ ಮಂಗಳೂರು ಪುರಭವನದ ಮುಂಭಾಗದ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ತೆರಳುವ ರಸ್ತೆಗೆ ಸ್ವಾತಂತ್ರ್ಯ ಹೋರಾಟಗಾರ ಡಾ.ಅಮ್ಮೆಂಬಳ ಬಾಳಪ್ಪ ರಸ್ತೆ ಎಂದು ನಾಮಕರಣ ಮಾಡಿ ಆದೇಶಿಸಿದೆ ಎಂದು ಮಾತೃಸಂಘದ ಪ್ರಕಟಣೆ ತಿಳಿಸಿದೆ. ಬೆಳಗ್ಗೆ 10.30ಕ್ಕೆ ಪೊಲೀಸ್ ಲೇನ್ ನಾಸಿಕ್ ಬಿ.ಎಚ್.…
ಆಗಸ್ಟ್ 24ರಂದು ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ ದಿ.ಕೆ.ಬಿ ಜಯಪಾಲ ಶೆಟ್ಟಿ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ ಸಮಾರಂಭ
ಮಂಗಳೂರು: ಸಹಕಾರ ಮಾಣಿಕ್ಯ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಆಗಸ್ಟ್ 24ರಂದು ಬೆಳಗ್ಗೆ 11ಕ್ಕೆ ಸಂಘದ ಸ್ಥಾಪಕಾಧ್ಯಕ್ಷ ದಿ.ಕೆ.ಬಿ ಜಯಪಾಲ ಶೆಟ್ಟಿ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. https://chat.whatsapp.com/EbVKVnWB6rlHT1mWtsgbch ಮಂಗಳೂರಿನ ಬಂಟ್ಸ್‌ಹಾಸ್ಟೆಲ್‌ನಲ್ಲಿರುವ ಶ್ರೀ ರಾಮಕೃಷ್ಣ ವಿದ್ಯಾಸಂಸ್ಥೆಗಳ ಆವರಣದಲ್ಲಿರುವ ಶ್ರೀಮತಿ ಗೀತಾ ಎಸ್.ಎಂ ಶೆಟ್ಟಿ ಸಭಾಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು 2024-25ನೇ ಸಾಲಿನಲ್ಲಿ ಅತ್ಯುತ್ತಮ ಶೈಕ್ಷಣಿಕ ಸಾಧನೆ ಮಾಡಿರುವ ಸಂಘದ ಸಿಬ್ಬಂದಿಗಳ ಹಾಗೂ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ನಿಟ್ಟೆ ಡೀಮ್ಡ್ ಯೂನಿವರ್ಸಿಟಿಯ ವೈಸ್ ಚಾನ್ಸಲರ್ ಪ್ರೊ.ಡಾ.ಎಂ.ಎಸ್ ಮೂಡಿತ್ತಾಯ ಕಾರ್ಯಕ್ರಮ ಉದ್ಘಾಟಿಸುವರು. ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಕೆ.ಜೈರಾಜ್ ಬಿ.ರೈ ಅಧ್ಯಕ್ಷತೆ ವಹಿಸುವರು. ಸಹಕಾರ ಸಂಘಗಳ ದ.ಕ. ಜಿಲ್ಲಾ ಉಪನಿಬಂಧಕ ಎಚ್.ಎನ್ ರಮೇಶ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಸಂಘದ ಉಪಾಧ್ಯಕ್ಷರಾದ ಲಕ್ಷ್ಮೀ ಜಯಪಾಲ ಶೆಟ್ಟಿ, ಆಡಳಿತ ಮಂಡಳಿ ನಿರ್ದೇಶಕರಾದ ಎ.ರತ್ನಕಾಂತಿ ಶೆಟ್ಟಿ, ಕೆ.ಸೀತಾರಾಮ ರೈ ಸವಣೂರು, ಡಾ.ಕೆ.ಸುಭಾಶ್ಚಂದ್ರ ಶೆಟ್ಟಿ, ಪಿ.ಶಿವರಾಮ ಅಡ್ಯಂತಾಯ, ಸಿಎ…
