Author: admin
ವಿಟ್ಲ: ವಿಟ್ಲ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ವಿಟ್ಲ ಶಿವಗಿರಿ ಪೊನ್ನೊಟ್ಟು ಶ್ರೀ ನಾರಾಯಣಗುರು ಸಭಾಭವನದಲ್ಲಿ ಇತ್ತೀಚೆಗೆ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ನಿಡ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. https://chat.whatsapp.com/EbVKVnWB6rlHT1mWtsgbch ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂಘವು ವಿಟ್ಲದಲ್ಲಿ ಪ್ರಧಾನ ಕಚೇರಿ ಹೊಂದಿದ್ದು, ಪುಣಚ ಮತ್ತು ಮಂಚಿಯಲ್ಲಿ ಶಾಖೆಗಳನ್ನು ಹೊಂದಿದೆ. 2024-25ನೇ ಆರ್ಥಿಕ ಸಾಲಿನಲ್ಲಿ ಸಂಘವು 98,74,22,869 ರೂ. ವ್ಯವಹಾರ ನಡೆಸಿದ್ದು, 44,41,355 ರೂ. ನಿವ್ವಳ ಲಾಭ ಗಳಿಸಿದೆ. ಸಂಘದ ಸದಸ್ಯರಿಗೆ ಈ ಬಾರಿ ಶೇ.11 ಡಿವಿಡೆಂಡ್ ವಿತರಿಸಲು ಆಡಳಿತ ಮಂಡಳಿ ತೀರ್ಮಾನಿಸಿದೆ. ಸಂಘವು ಕಳೆದ ಹತ್ತು ವರ್ಷಗಳಿಂದ ಆಡಿಟ್ ವರ್ಗೀಕರಣದಲ್ಲಿ ‘ಎ’ತರಗತಿ ಪಡೆದಿರುತ್ತದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಭಾರತೀಯ ಸೈನಿಕರಾಗಿ ಸೇವೆಗೈದ ಯೋಧರಾದ ಕ್ಯಾಪ್ಟನ್ ದಾಸಪ್ಪ ಪೂಜಾರಿ, ಬಾಲಕೃಷ್ಣ ಶೆಟ್ಟಿ, ಧನಂಜಯ ಗೌಡ ನಾಯೊಟ್ಟು, ಥೋಮಸ್ ಲೋಬೊ, ಉದಯಕುಮಾರ್ ರಾವ್, ಹರೀಶ್ ಶೆಟ್ಟಿ, ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವ ನರ್ತಕ ಶೇಖರ ಪರವ,…
ಅಕ್ಟೋಬರ್‌ನಲ್ಲಿ ಸಂತೆಕಟ್ಟೆಯಲ್ಲಿ 21ನೇ ಶಾಖೆ ಕಾರ್ಯಾರಂಭ: ಎಂಸಿಸಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಮಾಹಿತಿ ಮಂಗಳೂರು: ಕರ್ನಾಟಕದ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ 113 ವರ್ಷಗಳ ಇತಿಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಎಂಸಿಸಿ ಬ್ಯಾಂಕ್‌ನ ನೂತನ 20ನೇ ಶಾಖೆ ಬೈಂದೂರಿನಲ್ಲಿ ಆಗಸ್ಟ್ 3ರಂದು ಉದ್ಘಾಟನೆಗೊಳ್ಳಲಿದೆ. ನೂತನ ಶಾಖೆಯ ಉದ್ಘಾಟನೆ ಬಗ್ಗೆ ಬುಧವಾರ ಮಂಗಳೂರಿನ ಎಂಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ, ಎಂಸಿಸಿ ಬ್ಯಾಂಕ್ ಕರ್ನಾಟಕ ರಾಜ್ಯಾದ್ಯಂತ ಕಾರ್ಯವ್ಯಾಪ್ತಿ ಹೊಂದಿದ್ದು, ಮಂಗಳೂರಿನಲ್ಲಿ ನವೀಕೃತಗೊಂಡ ಸುಸಜ್ಜಿತ ಆಡಳಿತ ಕಚೇರಿಯೊಂದಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 19 ಶಾಖೆಗಳನ್ನು ಹೊಂದಿದೆ. 20ನೇ ಶಾಖೆ ಬೈಂದೂರಿನಲ್ಲಿ ಮುಂದಿನ ವಾರ ಉದ್ಘಾಟನೆಗೊಳ್ಳಲಿದ್ದು, 21ನೇ ಶಾಖೆ ಅಕ್ಟೋಬರ್ 5ರಂದು ಕಾರ್ಯಾರಂಭಗೊಳ್ಳಲಿದೆ ಎಂದು ತಿಳಿಸಿದರು. https://chat.whatsapp.com/EbVKVnWB6rlHT1mWtsgbch ಪ್ರಸಕ್ತ ವಿತ್ತೀಯ ವರ್ಷದಲ್ಲಿ ಎಂಸಿಸಿ ಬ್ಯಾಂಕ್ ಎಲ್ಲಾ ವ್ಯವಹಾರ ಮಾಪನಗಳಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದೆ. ಕರಾವಳಿಯ ದಕ್ಷಿಣ ಕನ್ನಡ…
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷ ಜಿ.ನಂಜನ ಗೌಡ ಅಭಿಪ್ರಾಯ ಮಂಗಳೂರು: ಸೌಹಾರ್ದ ಸಹಕಾರಿ ಸಂಘಗಳು ರಾಜ್ಯಾದ್ಯಂತ ಉತ್ತಮವಾಗಿ ಕೆಲಸ ಮಾಡುತ್ತಿದ್ದು ಪ್ರಗತಿಪಥದಲ್ಲಿ ಮುನೆನಡೆಯುತ್ತಿವೆ. ದೇಶದ ಪ್ರಗತಿಗೆ ಸಹಕಾರಿ ಸಂಘಗಳಿಂದ ಅಪಾರವಾದ ಕೊಡುಗೆ ಇದೆ ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷ ಜಿ.ನಂಜನ ಗೌಡ ಅಭಿಪ್ರಾಯಪಟ್ಟರು. https://chat.whatsapp.com/EbVKVnWB6rlHT1mWtsgbch ಮಂಗಳೂರಿನ ಶ್ರೀನಿವಾಸ ಹೋಟೆಲ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ. ಇದರ ವತಿಯಿಂದ ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯ ಸೌಹಾರ್ದ ಸಹಕಾರಿಗಳ ಸಂಪರ್ಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಪ್ರತಿವರ್ಷದಂತೆ ಈ ಬಾರಿಯೂ ಸೌಹಾರ್ದ ಸಂಯುಕ್ತ ಸಹಕಾರಿಯ ಸಾಮಾನ್ಯ ಸಭೆ ನಡೆಸುವ ಮೊದಲು ರಾಜ್ಯಾದ್ಯಂತ ಎಲ್ಲ ವಿಭಾಗಗಳಲ್ಲಿ ಸಹಕಾರ ಕ್ಷೇತ್ರದ ಜ್ವಲಂತ ಸಮಸ್ಯೆಗಳು, ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗುತ್ತದೆ. ಸೌಹಾರ್ದ ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಈ ಸಭೆ ಮಹತ್ವದ್ದಾಗಿದೆ ಎಂದು ಹೇಳಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಹಕಾರ ರತ್ನ ಎಸ್ ಆರ್ ಸತೀಶ್ಚಂದ್ರ ಮಾತನಾಡಿ, ಕೇಂದ್ರ…
ಬೈಂದೂರು: ಇಲ್ಲಿನ ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಕಳೆದ ಸಾಲಿನಲ್ಲಿ 225 ಕೋಟಿ ರೂ. ಅಧಿಕ ವ್ಯವಹಾರ ನಡೆಸಿ, 79,17,693.40 ರೂ. ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಎಸ್.ರಾಜು ಪೂಜಾರಿ ಹೇಳಿದರು. https://chat.whatsapp.com/EbVKVnWB6rlHT1mWtsgbch ಸಂಘದ ಪ್ರಧಾನ ಕಚೇರಿ ಆವರಣದಲ್ಲಿ ಭಾನುವಾರ ನಡೆದ 2024-25ನೇ ಸಾಲಿನ ಸಂಘದ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಾನಮನಸ್ಕರು ಸೇರಿ ಸ್ಥಾಪಿಸಿದ ಈ ಸಂಸ್ಥೆ ಜನಸಾಮಾನ್ಯರ ಸಂಸ್ಥೆಯಾಗಿ ಜಿಲ್ಲೆಯಲ್ಲೇ ಹೆಸರು ಗಳಿಸಿದೆ. ಸಮಾಜದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿ, ಮಹಿಳಾ ಸಬಲೀಕರಣಕ್ಕೆ ಸಹಕಾರಿಯಾಗಿದೆ. ಬೈಂದೂರಿನಲ್ಲಿ 16 ವರ್ಷಗಳ ಹಿಂದೆ ಹುಟ್ಟಿಕೊಂಡ ನಮ್ಮ ಸಂಘವು ಬೈಂದೂರಿನ ಕೇಂದ್ರಸ್ಥಾನದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದ್ದು, ನಾಗೂರು, ಗೋಳಿಹೊಳೆ, ನಾವುಂದ, ಕಂಬದಕೋಣೆಗಳಲ್ಲಿ ಶಾಖೆಯನ್ನು ತೆರೆಯಲಾಗಿದೆ. ವರ್ಷಾಂತ್ಯಕ್ಕೆ 43 ಕೋಟಿ ರೂಪಾಯಿ ಠೇವಣೆ ಹೊಂದಿದ್ದು ಒಟ್ಟು 225 ಕೋಟಿಗೂ ಅಧಿಕ ವಾರ್ಷಿಕ ವ್ಯವಹಾರ ಹೊಂದಿದ್ದು ಸಂಘದ ಸದಸ್ಯರಿಗೆ ಶೇ.13 ಡಿವಿಡೆಂಡ್ ಘೋಷಿಸಲಾಗಿದೆ ಎಂದು ತಿಳಿಸಿದರು. ಸಂಘದ…
ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಭಗೀರಥ ಜಿ., ಉಪಾಧ್ಯಕ್ಷರಾಗಿ ಜಗದೀಶ್ಚಂದ್ರ ಡಿ.ಕೆ. ಅವಿರೋಧ ಆಯ್ಕೆ
ಬೆಳ್ತಂಗಡಿ: ಬೆಳ್ತಂಗಡಿಯ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಭಗೀರಥ ಜಿ. ಮತ್ತು ಉಪಾಧ್ಯಕ್ಷರಾಗಿ ಜಗದೀಶ್ಚಂದ್ರ ಡಿ.ಕೆ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಭಗೀರಥ ಜಿ. ಅವರು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ, ಗುರುವಾಯನಕೆರೆ ಪ್ರಾಥಮಿಕ ಸಹಕಾರ ಸಂಘದ ಅಧ್ಯಕ್ಷರಾಗಿ, ಪ್ರಸ್ತುತ ನಿರ್ದೇಶಕರಾಗಿ, ಮೇಲಂತಬೆಟ್ಟು ನಾಗಬ್ರಹ್ಮ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ, ಕೃಷಿಕ ಸಮಾಜದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಜಗದೀಶ್ಚಂದ್ರ ಡಿ.ಕೆ. ಲಯನ್ಸ್ ಪ್ರಾಂತೀಯ ಅಧ್ಯಕ್ಷರಾಗಿ, ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕೇತ್ರ ಅಭಿವೃದ್ಧಿ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. https://chat.whatsapp.com/EbVKVnWB6rlHT1mWtsgbch ಸಂಘದ ಅಧ್ಯಕ್ಷರಾಗಿದ್ದ ಪದ್ಮನಾಭ ಮಾಣಿಂಜ ಇತ್ತೀಚೆಗೆ ನಿಧನ ಹೊಂದಿದ್ದು, ಅವರಿಂದ ತೆರವುಗೊಂಡಿರುವ ಅಧ್ಯಕ್ಷ ಸ್ಥಾನಕ್ಕೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಭಾನುವಾರ ಚುನಾ ವಣೆ ನಡೆಯಿತು. ಬೆಳ್ತಂಗಡಿ ತಾಲೂಕು ಸಹಕಾರ ಸಂಘಗಳ ಸಹಕಾರ ಅಭಿವೃದ್ಧಿ ಅಧಿಕಾರಿ ಬಿ.ವಿ.ಪ್ರತಿಮಾ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಸಂಘದ ನಿರ್ದೇಶಕರಾದ ಸಂಜೀವ ಪೂಜಾರಿ, ತನುಜಾ ಶೇಖರ, ಕೆ.ಪಿ.ದಿವಾಕರ, ಧರ್ಣಪ್ಪ…
ಮುಂದಿನ ಹತ್ತು ವರ್ಷಗಳ ಗುರಿ, ಆಶಾವಾದ, ಪ್ರಗತಿಯತ್ತ ದೃಢ ನಿಶ್ಚಯ ಇರಲಿ: ಬಿಷಪ್ ಜೆರಾಲ್ಡ್ ಐಸಾಕ್ ಲೋಬೋ ಸಲಹೆ ಮಂಗಳೂರು: ಬ್ಯಾಂಕಿಂಗ್‌ನಲ್ಲಿ ಹೊಸ ದಿಗಂತಗಳನ್ನು ಅನ್ವೇಷಿಸಲು ಮತ್ತು ಮುಂದಿನ ಹಂತದ ಬೆಳವಣಿಗೆಗೆ ವಿಚಾರ, ಅಭಿಪ್ರಾಯ ಮತ್ತು ಸಲಹೆಗಳನ್ನು ಸಂಗ್ರಹಿಸಲು, ಎಂಸಿಸಿ ಬ್ಯಾಂಕ್ ಮಂಗಳೂರಿನಲ್ಲಿ “ಐಡಿಯಾ ಸಮ್ಮಿತ್ 2025” (IDEA SUMMIT -2025) ಅನ್ನು ಆಯೋಜಿಸಿತ್ತು. ಎಂಸಿಸಿ ಬ್ಯಾಂಕ್‌ನ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೋ ಅಧ್ಯಕ್ಷತೆ ವಹಿಸಿದ್ದರು. ಹೆಸರಾಂತ ಎನ್‌ಆರ್‌ಐ ಉದ್ಯಮಿ, ದಾನಿ ಮೈಕಲ್ ಡಿಸೋಜ, ಎನ್‌ಐಟಿಕೆ ಸುರತ್ಕಲ್‌ನ ನಿವೃತ್ತ ಪ್ರಾಧ್ಯಾಪಕರು (HAG) ಪ್ರೊ.ಡಾ|ಅಲೋಶಿಯಸ್ ಸಿಕ್ವೇರ, ಆರ್‌ಎಂಸಿಆರ್ & ಕಂ. ಪಾಲುದಾರರಾದ ಸಿಎ ಮ್ಯಾಕ್ಸಿಮ್ ಎಂ.ಫೆರ್ನಾಂಡಿಸ್, ಚಾರ್ಟರ್ಡ್ ಅಕೌಂಟೆಂಟ್, ಆರ್ಬಿಟ್ರೇಟರ್, ಅತಿಥಿ ಪ್ರಾಧ್ಯಾಪಕ ಪ್ರೊ. ಸಿಎ ಲಾಯ್ನಲ್ ಅರಾನ್ಹಾ ಮತ್ತು ಅನುಭವಿ ಬ್ಯಾಂಕರ್ ಹಾಗೂ ಬ್ಯಾಂಕ್ ಆಫ್ ಮಹಾರಾಷ್ಟ್ರದ ಮಾಜಿ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಶ್ರೀ ಅಲೆನ್ ಸಿ.ಪಿರೇರ ಉಪಸ್ಥಿತರಿದ್ದರು. https://chat.whatsapp.com/EbVKVnWB6rlHT1mWtsgbch ಕಳೆದ ಏಳು ವರ್ಷಗಳಲ್ಲಿ ಎಂಸಿಸಿ ಬ್ಯಾಂಕ್‌ನ ಗಮನಾರ್ಹ…
ಶ್ರೀ ಪೂರ್ಣಾನಂದ ಸಹಕಾರಿಯ ಬಿಜೈ ಶಾಖೆ ಸ್ಥಳಾಂತರ ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ ಕಾಮತ್ ಭರವಸೆ ಮಂಗಳೂರು: ಸಹಕಾರಿ ಕಾಯಿದೆ ನಿಯಮಾವಳಿ ಪ್ರಕಾರ ಸಹಕಾರಿ ಸಂಸ್ಥೆಗಳಿಗೆ ನಾಮನಿರ್ದೇಶನ ಸದಸ್ಯತ್ವ ತಪ್ಪು. ಈ ತರದ ನಾಮನಿರ್ದೇಶಿತ ಸದಸ್ಯರಾದವರಿಗೆ ಮತದಾನ ಹಕ್ಕು ಕೂಡ ಇಲ್ಲ. ಹಾಗಾಗಿ ಈ ಕ್ರಮವನ್ನು ಕೈಬಿಡುವಂತೆ ವಿಧಾನಸಭೆಯಲ್ಲಿ ಸರಕಾರವನ್ನು ಆಗ್ರಹಿಸುವುದಾಗಿ ಶಾಸಕ ವೇದವ್ಯಾಸ ಕಾಮತ್ ಭರವಸೆ ನೀಡಿದ್ದಾರೆ. https://chat.whatsapp.com/EbVKVnWB6rlHT1mWtsgbch ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತದ ಬಿಜೈ ಶಾಖಾ ಸ್ಥಳಾಂತರ ಸಮಾರಂಭವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಬೆಂಗಳೂರು ಇದರ ನಿರ್ದೇಶಕಿ ಭಾರತಿ ಭಟ್ ಮುಂದಿಟ್ಟ ಮನವಿಗೆ ಪ್ರತಿಯಾಗಿ ಮೇಲಿನ ಆಶ್ವಾಸನೆ ನೀಡಿದರು. ಪ್ರತಿಯೊಂದು ಹಳ್ಳಿಗೂ ಒಂದು ಸೊಸೈಟಿ ಬೇಕೆಂಬ ಕೇಂದ್ರ ಸರಕಾರದ ಆಶಯದ ಹಿಂದೆ ಅರ್ಥವಿದೆ. ಜನರಲ್ಲಿ ಉಳಿತಾಯ ಪ್ರವೃತ್ತಿ ಗಟ್ಟಿ ಮಾಡುವ ಸಹಕಾರಿ ಸಂಸ್ಥೆಗಳ ಆರಂಭದ ಹಿಂದೆ ತಾಯಂದಿರ ಉಳಿತಾಯ ಪ್ರವೃತ್ತಿಯ ಸೊಗಡಿದೆ, ಸ್ಫೂರ್ತಿಯಿದೆ ಎಂದರು. ಆರ್ಥಿಕ ಸುರಕ್ಷೆ…
ದೇಶದ ಜಿಡಿಪಿ ಪಾಲು ಮೂರು ಪಟ್ಟು ಹೆಚ್ಚಳ, 50 ಕೋಟಿ ಸಕ್ರಿಯ ಸದಸ್ಯರ ಸಂಯೋಜನೆ ಸಹಕಾರಿ ವಲಯದ ಪುನರುಜ್ಜೀವನದ ಗುರಿ ಸಹಕಾರಕ್ಕೆ ಭವಿಷ್ಯವಿಲ್ಲ ಎಂಬ ಕಾಲವೊಂದಿತ್ತು; ಆದರೆ ಈಗ ಸಹಕಾರವೇ ಭವಿಷ್ಯ ಎಂಬಂತಾಗಿದೆ: ಅಮಿತ್ ಷಾ ಮಾರ್ಮಿಕ ನುಡಿ ನವದೆಹಲಿ: ಮಹತ್ವಾಕಾಂಕ್ಷೆಯ ರಾಷ್ಟ್ರೀಯ ಸಹಕಾರಿ ನೀತಿ -2025ನ್ನು ಗುರುವಾರ ಸಂಜೆ ದೆಹಲಿಯ ಉರ್ಜಾ ಭವನದಲ್ಲಿ ಕೇಂದ್ರ ಸಹಕಾರ ಸಚಿವ ಅಮಿತ್ ಷಾ ಅನಾವರಣ ಮಾಡಿದ್ದು ಸಹಕಾರಿ ವಲಯದ ಪುನರುಜ್ಜೀವನದ ಗುರಿ ಹೊಂದಲಾಗಿದೆ. 2034ರ ವೇಳೆಗೆ ದೇಶದ ಜಿಡಿಪಿಗೆ ಸಹಕಾರ ವಲಯದ ಪಾಲನ್ನು ಮೂರು ಪಟ್ಟು ಹೆಚ್ಚಿಸುವ ಗುರಿ ಹೊಂದಿರುವ ದೂರದೃಷ್ಟಿಯ ಸಹಕಾರ ನೀತಿಯನ್ನು ಅನಾವರಣ ಮಾಡಿದ ಬಳಿಕ ಮಾತನಾಡಿದ ಸಚಿವರು ಹಲವಾರು ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಪ್ರಕಟಿಸಿದ್ದಾರೆ. https://chat.whatsapp.com/EbVKVnWB6rlHT1mWtsgbch 2025ರ ವೇಳೆಗೆ ದೇಶದ ಜಿಡಿಪಿಗೆ ಸಹಕಾರ ವಲಯದ ಕೊಡುಗೆಯನ್ನು ಮೂರು ಪಟ್ಟು ಹೆಚ್ಚಿಸುವುದು ಮತ್ತು ೫೦ ಕೋಟಿ ಸಕ್ರಿಯ ಸದಸ್ಯರನ್ನು ಸಹಕಾರ ಕ್ಷೇತ್ರದಲ್ಲಿ ಸಂಯೋಜಿಸುವ ಎಂಬ ಮಹತ್ವಾಕಾಂಕ್ಷೆಯ ಗುರಿ ಹೊಂದಲಾಗಿದೆ. ಸಹಕಾರಿ ಸಂಸ್ಥೆಗಳಿಗೆ…
ವಿದ್ಯಾರ್ಥಿಗಳಿಗೆ 15 ಲಕ್ಷ ರೂ. ಮೌಲ್ಯದ ನೋಟ್ ಪುಸ್ತಕ, ಶೈಕ್ಷಣಿಕ ಪರಿಕರಗಳ ವಿತರಣೆ ಉಡುಪಿ: ಇಲ್ಲಿನ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ಉಡುಪಿ ಜಿಲ್ಲೆಯ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ, ಶೈಕ್ಷಣಿಕ ಪರಿಕರ, ಪ್ರತಿಭಾ ಪುರಸ್ಕಾರ, ಸಸಿ ವಿತರಣಾ ಸಮಾರಂಭ ಉಡುಪಿ ಅಜ್ಜರಕಾಡು ಪುರಭವನದಲ್ಲಿ ಇತ್ತೀಚೆಗೆ ಜರಗಿತು. https://chat.whatsapp.com/EbVKVnWB6rlHT1mWtsgbch ಉಡುಪಿ ತಹಸೀಲ್ದಾರ್ ಪಿ.ಗುರುರಾಜ್ ಕಾರ್ಯಕ್ರಮ ಉದ್ಘಾಟಿಸಿದರು. ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಲಾವಣ್ಯ ಕೆ.ಆರ್ ಮಾತನಾಡಿದರು. ಉಡುಪಿ ನಗರ ಸಭೆ ಪರಿಸರ ಅಭಿಯಂತರ ರವಿಪ್ರಕಾಶ್, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನುಷಾ ಕೋಟ್ಯಾನ್, ಸೊಸೈಟಿಯ ಉಪಾಧ್ಯಕ್ಷರಾದ ಜಾರ್ಜ್ ಸ್ಯಾಮ್ಯುಯೆಲ್, ನಿರ್ದೇಶಕರಾದ ಪುರುಷೋತ್ತಮ ಪಿ.ಶೆಟ್ಟಿ, ಜಯಾ ಶೆಟ್ಟಿ, ಸದಾಶಿವ ನಾಯ್ಕ್, ಎಲ್.ಉಮಾನಾಥ, ವಿನಯ ಕುಮಾರ್ ಟಿ.ಎ, ಅಬ್ದುಲ್ ರಜಾಕ್ ಉಪಸ್ಥಿತರಿದ್ದರು. ಅಂತಾರಾಷ್ಟ್ರೀಯ ಸಹಕಾರ ವರ್ಷ 2025 ಅಂಗವಾಗಿ “ಏಕ್ ಪೇಡ್ ಮಾ ಕೆ ನಾಮ್” ಧ್ಯೇಯವಾಕ್ಯದಡಿ ಗಿಡ ನೆಡುವ ಸಂಕಲ್ಪ, ಹಸಿರು ಪರಿಸರ…
ಕಾರವಾರ: ದಿವಾಳಿ ಸ್ಥಿತಿಯಲ್ಲಿರುವ ಕಾರವಾರ ಅರ್ಬನ್ ಸಹಕಾರ ಬ್ಯಾಂಕಿನ ಪರವಾನಗಿಯನ್ನು ರದ್ದುಗೊಳಿಸಿರುವುದಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಗುರುವಾರ ಹೇಳಿದೆ. ಆರ್‌ಬಿಐನ ಈ ಕ್ರಮದಿಂದ ಇಂದಿನಿಂದ ಜಾರಿಗೆ ಬರುವಂತೆ ಬ್ಯಾಂಕಿಂಗ್ ವ್ಯವಹಾರವನ್ನು ಮುಕ್ತಾಯಗೊಳಿಸಲಾಗಿದೆ. https://chat.whatsapp.com/EbVKVnWB6rlHT1mWtsgbch ಕಾರವಾರ ಅರ್ಬನ್ ಸಹಕಾರ ಬ್ಯಾಂಕ್ ಅನ್ನು ಬಂದ್ ಮಾಡಲು ಮತ್ತು ಬ್ಯಾಂಕ್‌ಗೆ ಲಿಕ್ವಿಡೇಟರ್ (ಒಂದು ಕಂಪನಿಯ ದಿವಾಳಿತನ ಅಥವಾ ಮುಚ್ಚುವಿಕೆ ಪ್ರಕ್ರಿಯೆಯಲ್ಲಿ ತೊಡಗಿರುವ ವ್ಯಕ್ತಿ ಅಥವಾ ಸಂಸ್ಥೆ) ನೇಮಿಸಲು ಆದೇಶ ನೀಡುವಂತೆ ಕರ್ನಾಟಕ ಸಹಕಾರ ಸಂಘಗಳ ರಿಜಿಸ್ಟ್ರಾರ್‌ಗೆ ಕೋರಲಾಗಿದೆ ಎಂದು ಆರ್‌ಬಿಐ ಪ್ರಕಟಣೆಯಲ್ಲಿ ತಿಳಿಸಿದೆ. ದಿವಾಳಿಯಾದ ಮೇಲೆ ಪ್ರತಿಯೊಬ್ಬ ಠೇವಣಿದಾರರು, ಠೇವಣಿ ವಿಮೆ ಮತ್ತು ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಶನ್‌ನಿಂದ ರೂ. 5 ಲಕ್ಷದವರೆಗೆ ಠೇವಣಿ ವಿಮೆ ಹಣ ಪಡೆಯಲು ಅರ್ಹರಾಗಿರುತ್ತಾರೆ. ಬ್ಯಾಂಕ್ ಸಲ್ಲಿಸಿದ ಮಾಹಿತಿಯ ಪ್ರಕಾರ ಶೇ.92.9ರಷ್ಟು ಠೇವಣಿದಾರರು ಡಿಐಸಿಜಿಸಿಯಿಂದ ಸಂಪೂರ್ಣ ಠೇವಣಿ ಹಣ ಪಡೆಯಲು ಅರ್ಹರಾಗಿದ್ದಾರೆ ಎಂದು ಆರ್‌ಬಿಐ ತಿಳಿಸಿದೆ. ಡಿಐಸಿಜಿಸಿ ಈಗಾಗಲೇ ಒಟ್ಟು ವಿಮೆ ಠೇವಣಿಗಳಲ್ಲಿ ರೂ. 37.79 ಕೋಟಿ ಪಾವತಿಸಿರುವ ವಿವರ ನೀಡಿರುವ…
