Author: admin
ಮಂಗಳೂರು: ಆಟಿ ತಿಂಗಳ ವಿಶೇಷ ಆಟಿಡೊಂಜಿ ದಿನವನ್ನು “ಆಟಿದ ಪೊಲಬು” ಎಂಬ ಹೆಸರಿನಿಂದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಪ್ರಧಾನ ಕಛೇರಿ ಪಡೀಲ್‌ನ “ಆತ್ಮಶಕ್ತಿ ಸೌಧ”ದಲ್ಲಿ ಆಚರಿಸಲಾಯಿತು. https://chat.whatsapp.com/FCEnlTkAKCC0MGPhXtX4i4 ಕೆನರಾ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ತಾರಾ ಸಾಂಪ್ರದಾಯಿಕ ಶೈಲಿಯಲ್ಲಿ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಇವತ್ತಿನ ಆಟಿದ ಪೊಲಬು ಕಾರ್ಯಕ್ರಮದಲ್ಲಿ ತುಳುನಾಡಿನ ಸಾಂಪ್ರದಾಯಿಕ ಶೈಲಿಯ ತಿನಿಸಿಗಳನ್ನು ಸಂಘದ ಎಲ್ಲಾ ಸಿಬ್ಬಂದಿಗಳು ತಮ್ಮ ಮನೆಯಲ್ಲಿ ತಯಾರಿಸಿ ತಂದಿರುತ್ತಾರೆ . ಜೊತೆಗೆ ನಾಟಿ ವೈದ್ಯರನ್ನು ಸನ್ಮಾನಿಸುವ ಮೂಲಕ ತುಳುನಾಡಿನ ಸಂಸ್ಕೃತಿ ಹಾಗೂ ಭಾಷೆಯನ್ನು ಬೆಳೆಸುವ ಕೆಲಸಗಳನ್ನು ಸಂಘವು ಮಾಡುತ್ತಿದೆ. ಸಂಘವು ಆಟಿದ ಪೊಲಬು ವಿಶಿಷ್ಟವಾದ ಕಾರ್ಯಕ್ರಮವನ್ನು ಆಯೋಜಿಸಿ, ವೇದಿಕೆಯನ್ನು ತುಳುನಾಡಿನ ಸಾಂಪ್ರದಾಯಿಕ ಶೈಲಿಯಲ್ಲಿ ನಿರ್ಮಾಣ ಮಾಡಿರುವುದು ಕಾರ್ಯಕ್ರಮದ ಮೆರಗನ್ನು ಇನ್ನೂ ಹೆಚ್ಚಿಸಿದೆ ಎಂದರು. ಆಟಿಯ ಇಡೀ ತಿಂಗಳನ್ನು ನಮ್ಮ ಹಿರಿಯರು ಧಾರ್ಮಿಕತೆಯ ಲೇಪದಲ್ಲಿ ವೈಜ್ಞಾನಿಕತೆಯನ್ನು ಪ್ರತಿಬಿಂಬಿಸಿ ಆರೋಗ್ಯ ಮಾನಸಿಕ ಗಟ್ಟಿತನವನ್ನು ಗಳಿಸಿಕೊಳ್ಳುವುದರಲ್ಲಿ ನಮಗೆ ದಾರಿದೀಪವನ್ನು ಉರಿಸಿಟ್ಟು ಹೋಗಿದ್ದಾರೆ. ಆಟಿಯ ತಿಂಡಿ ತಿನಸು ಆಹಾರ. ಇಡೀ…
ರೂ.1.13 ಕೋಟಿ ಲಾಭ; ಶೇ.13 ಡಿವಿಡೆಂಡ್ ಘೋಷಣೆ ಮಂಗಳೂರು: ಸಫಲ ಸೌಹಾರ್ದ ಸಹಕಾರಿ ಸಂಘದ 2025-26ನೇ ಸಾಲಿನ ಏಳನೇ ವಾರ್ಷಿಕ ಮಹಾಸಭೆ ಭಾನುವಾರ ಕೈಕಂಬದಲ್ಲಿ ಸಂಘದ ಅಧ್ಯಕ್ಷ ಸಂಜೀವ ಅಡ್ಯಾರ್ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡಿತು. https://chat.whatsapp.com/FCEnlTkAKCC0MGPhXtX4i4 ಸ್ಥಾಪಕ ನಾಮನಿರ್ದೇಶಿತ ನಿರ್ದೇಶಕ ಯು.ಬಿ. ವಿಜಯಕುಮಾರ್ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಮೋದ್ ವಾರ್ಷಿಕ ವರದಿ ಮಂಡಿಸಿ, ಸಂಘದಲ್ಲಿ ಪ್ರಸ್ತುತ 5,376 ಸದಸ್ಯರಿದ್ದು, ಸಂಘವು ರೂ.1.13 ಕೋಟಿ ಒಟ್ಟು ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.13ರಷ್ಟು ಡಿವಿಡೆಂಡ್ ಘೋಷಿಸಲಾಗಿದೆ ಎಂದು ತಿಳಿಸಿದರು. ಸಂಘದ ನಿರ್ದೇಶಕ ಮಾಧವ ಮಾವೆ ನಿರ್ದೇಶಕರ ಪರವಾಗಿ ಮಾತನಾಡಿದರು. ಅಧ್ಯಕ್ಷ ಸಂಜೀವ ಅಡ್ಯಾರ್ ಅವರು ಸಂಘದ ಮುಂದಿನ ಕಾರ್ಯಯೋಜನೆಗಳು ಹಾಗೂ ಭವಿಷ್ಯದ ಅಭಿವೃದ್ಧಿಯ ಕುರಿತು ವಿವರಿಸಿದರು. ಸುಕೇಶ್ ಪ್ರಾರ್ಥನೆ ನೆರವೇರಿಸಿದರು. ನಂತರ ಸಂಘದ ಸ್ಥಾಪಕ ನಿರ್ದೇಶಕರಾದ ಗೋಪಾಲಕೃಷ್ಣ ಹಾಗೂ ವರದಿ ವರ್ಷದಲ್ಲಿ ಅಗಲಿದ ನಿರ್ದೇಶಕರು ಮತ್ತು ಸದಸ್ಯರಿಗೆ ಮೌನ ಪ್ರಾರ್ಥನೆಯ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. ನಿರ್ದೇಶಕ ಮಹಾಬಲ…
ಮೈಸೂರು: ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಧ್ವಜಾರೋಹಣ ಮಾಡುವ ಮೂಲಕ ಆಚರಿಸಲಾಯಿತು. https://chat.whatsapp.com/FCEnlTkAKCC0MGPhXtX4i4 ಬ್ಯಾಂಕಿನ ಅಧ್ಯಕ್ಷರಾದ ಜೆ.ಯೋಗೇಶ್, ಉಪಾಧ್ಯಕ್ಷರಾದ ಟೆಂಟ್ ರವಿ ಹಾಗೂ ನಿರ್ದೇಶಕರುಗಳಾದ ಎನ್.ಯೋಗಾನಂದ, ಹೆಚ್.ಹರೀಶ್ ಕುಮಾರ್, ಆರ್.ರವಿಕುಮಾರ್, ಆರ್.ಸೋಮಣ್ಣ, ಕೆ.ಗಿರೀಶ್, ಎಂ.ರಾಮಕೃಷ್ಣ, ಪಿ. ರಾಜೇಶ್ವರಿ, ಎಂ.ಪ್ರಮೀಳಾ ಮತ್ತು ವೃತ್ತಿಪರ ನಿರ್ದೇಶಕರಾದ ಸಿ.ಎಸ್ ರಾಮಕೃಷ್ಣಯ್ಯ, ಮುಖ್ಯಕಾರ್ಯನಿರ್ವಾಹಕ ಹರ್ಷಿತ್ ಗೌಡ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಮಂಗಳೂರು: ಭಾರತದ 80ನೇ ಸ್ವಾತಂತ್ರ್ಯೋತ್ಸವವನ್ನು ಎಂ.ಸಿ.ಸಿ. ಬ್ಯಾಂಕ್ ವತಿಯಿಂದ ಶನಿವಾರ ಹೆಮ್ಮೆ, ದೇಶಭಕ್ತಿ ಹಾಗೂ ರಾಷ್ಟ್ರೀಯ ಭಾವನೆಯೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು. ಬ್ಯಾಂಕಿನ ಆಡಳಿತ ಮಂಡಳಿ, ನಿರ್ದೇಶಕರು, ಸಿಬ್ಬಂದಿ, ಗಣ್ಯ ಅತಿಥಿಗಳು ಹಾಗೂ ಹಿತೈಷಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. https://chat.whatsapp.com/FCEnlTkAKCC0MGPhXtX4i4 ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ವಹಿಸಿದ್ದರು. ಡಿವೈಎಫ್‌ಐ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಬಿ.ಕೆ. ಇಮ್ತಿಯಾಜ್ ಹಾಗೂ ಮಿಲಾಗ್ರಿಸ್ ಚರ್ಚ್, ಮಂಗಳೂರು ಇದರ ಧರ್ಮಗುರು ವಂದನೀಯ ಫಾ. ಐವನ್ ಮೈಕಲ್ ರೊಡ್ರಿಗಸ್ ಮುಖ್ಯ ಅತಿಥಿಗಳಾಗಿದ್ದರು. ಬ್ಯಾಂಕಿನ ಉಪಾಧ್ಯಕ್ಷ ಜೆರಾಲ್ಡ್ ಜೂಡ್ ಡಿಸಿಲ್ವ ಹಾಗೂ ಮಹಾಪ್ರಬಂಧಕ ಶ್ರೀ ಸುನಿಲ್ ಮಿನೆಜಸ್ ಉಪಸ್ಥಿತರಿದ್ದರು. ಮುಖ್ಯ ಅತಿಥಿ ಬಿ.ಕೆ. ಇಮ್ತಿಯಾಜ್ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿ, ಪ್ರತಿಯೊಬ್ಬ ನಾಗರಿಕನಿಗೂ ಶಿಕ್ಷಣ, ಉದ್ಯೋಗ ಮತ್ತು ಆರ್ಥಿಕ ಸಬಲೀಕರಣದ ಸಮಾನ ಅವಕಾಶಗಳು ದೊರೆತಾಗ ಮಾತ್ರ ಸ್ವಾತಂತ್ರ್ಯದ ನಿಜವಾದ ಅರ್ಥ ಸಾಕಾರಗೊಳ್ಳುತ್ತದೆ. ಭಾರತವು ಹೆಚ್ಚಿನ ಆರ್ಥಿಕ ಸ್ವಾತಂತ್ರ್ಯದತ್ತ ಸಾಗಬೇಕಿದ್ದು, ಅಭಿವೃದ್ಧಿಯ ಪ್ರಯೋಜನಗಳು ಸಮಾಜದ ಪ್ರತಿಯೊಂದು…
ವಿಟ್ಲ: ಇಲ್ಲಿನ ವಿಟ್ಲ ಗ್ರಾಮೀಣ ಸಹಕಾರಿ ಸಂಘದ ಪ್ರಧಾನ ಕಚೇರಿ ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. https://chat.whatsapp.com/FCEnlTkAKCC0MGPhXtX4i4 ಕಾರ್ಯಕ್ರಮದಲ್ಲಿ ನಿವೃತ್ತ ಯೋಧರಾದ ಬಾಲಕೃಷ್ಣ ಗೌಡ ಪೊನ್ನೆತಡಿ ಅವರು ಧ್ವಜಾರೋಹಣ ನೆರವೇರಿಸಿ, ದೇಶಾಭಿಮಾನದ ಕುರಿತು ಪ್ರೇರಣಾದಾಯಕವಾಗಿ ಮಾತನಾಡಿ, ನೆರೆದಿದ್ದವರಲ್ಲಿ ದೇಶಭಕ್ತಿಯ ಸ್ಫೂರ್ತಿ ತುಂಬಿದರು. ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರಾದ ಜಗನ್ನಾಥ ಸಾಲ್ಯಾನ್ ಎಚ್., ಉಪಾಧ್ಯಕ್ಷರಾದ ಮನೋಜ್ ರಂಜನ್ ಕೆ.ಆರ್. ಹಾಗೂ ಆಡಳಿತ ಮಂಡಳಿ ಸದಸ್ಯರಾದ ಜಯಂತಿ ಎಚ್. ರಾವ್, ಶುಭಲಕ್ಷ್ಮಿ, ದಯಾನಂದ ಆಳ್ವ ಕೆ., ಪೂವಪ್ಪ ಎಸ್., ದಿವಾಕರ ವಿ., ಕೇಶವ ಎ., ಭಾಸ್ಕರ್ ಶೆಟ್ಟಿ, ರಾಮದಾಸ ಶೆಣೈ, ಮೋಹನ್ ಕೆ.ಎಸ್. ಹಾಗೂ ಸತೀಶ್ ಪಿ. ಉಪಸ್ಥಿತರಿದ್ದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣ ಮುರಳಿ ಶ್ಯಾಮ್ ಕೆ. ಹಾಗೂ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ನಿವೃತ್ತ ಯೋಧ ಬಾಲಕೃಷ್ಣ ಗೌಡ ಪೊನ್ನೆತಡಿ ಅವರನ್ನು ಸಂಘದ ವತಿಯಿಂದ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ವಿಟ್ಲ ಗ್ರಾಮೀಣ ಸಹಕಾರಿ ಸಂಘದ…
ವಿಟ್ಲ: ಇಲ್ಲಿನ ವಿಟ್ಲ ಗ್ರಾಮೀಣ ಸಹಕಾರಿ ಸಂಘದ ಪ್ರಧಾನ ಕಚೇರಿ ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. https://chat.whatsapp.com/FCEnlTkAKCC0MGPhXtX4i4 ಕಾರ್ಯಕ್ರಮದಲ್ಲಿ ನಿವೃತ್ತ ಯೋಧರಾದ ಬಾಲಕೃಷ್ಣ ಗೌಡ ಪೊನ್ನೆತಡಿ ಅವರು ಧ್ವಜಾರೋಹಣ ನೆರವೇರಿಸಿ, ದೇಶಾಭಿಮಾನದ ಕುರಿತು ಪ್ರೇರಣಾದಾಯಕವಾಗಿ ಮಾತನಾಡಿ, ನೆರೆದಿದ್ದವರಲ್ಲಿ ದೇಶಭಕ್ತಿಯ ಸ್ಫೂರ್ತಿ ತುಂಬಿದರು. ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರಾದ ಜಗನ್ನಾಥ ಸಾಲ್ಯಾನ್ ಎಚ್., ಉಪಾಧ್ಯಕ್ಷರಾದ ಮನೋಜ್ ರಂಜನ್ ಕೆ.ಆರ್. ಹಾಗೂ ಆಡಳಿತ ಮಂಡಳಿ ಸದಸ್ಯರಾದ ಜಯಂತಿ ಎಚ್. ರಾವ್, ಶುಭಲಕ್ಷ್ಮಿ, ದಯಾನಂದ ಆಳ್ವ ಕೆ., ಪೂವಪ್ಪ ಎಸ್., ದಿವಾಕರ ವಿ., ಕೇಶವ ಎ., ಭಾಸ್ಕರ್ ಶೆಟ್ಟಿ, ರಾಮದಾಸ ಶೆಣೈ, ಮೋಹನ್ ಕೆ.ಎಸ್. ಹಾಗೂ ಸತೀಶ್ ಪಿ. ಉಪಸ್ಥಿತರಿದ್ದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣ ಮುರಳಿ ಶ್ಯಾಮ್ ಕೆ. ಹಾಗೂ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ನಿವೃತ್ತ ಯೋಧ ಬಾಲಕೃಷ್ಣ ಗೌಡ ಪೊನ್ನೆತಡಿ ಅವರನ್ನು ಸಂಘದ ವತಿಯಿಂದ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಹಾಸ…
ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಭಿಪ್ರಾಯ ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಪ್ರಧಾನ ಕಚೇರಿಯಲ್ಲಿ ಶನಿವಾರ ಸ್ವಾತಂತ್ಯೋತ್ಸವ ಆಚರಿಸಲಾಯಿತು. https://chat.whatsapp.com/FCEnlTkAKCC0MGPhXtX4i4 ನಿವೃತ್ತ ಯೋಧ ರಾಜೇಶ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸೇನೆಯ ಸೇವೆಯಲ್ಲಿರುವಾಗ ತಾವು ಪಾಲ್ಗೊಂಡಿದ್ದ ಕಾರ್ಯಾಚರಣೆ ಬಗ್ಗೆ ಪ್ರಸ್ತಾಪಿಸಿ, ಕರಾವಳಿಯ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ದೇಶ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಕೇವಲ 15 ವರ್ಷಗಳಲ್ಲಿ 35 ಶಾಖೆಗಳನ್ನು ಸ್ಥಾಪಿಸಿ, ಹೆಚ್ಚಿನ ಜನರಿಗೆ ಉದ್ಯೋಗಾವಕಾಶ ಕಲ್ಪಿಸಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಹೊಂದಲಿ ಎಂದು ಶುಭ ಹಾರೈಸಿದರು. ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘವು ಪ್ರತಿ ವರ್ಷ ಸ್ವಾತಂತ್ಯೋತ್ಸವ ದಿನಾಚರಣೆಯ ಸಂದರ್ಭದಲ್ಲಿ ದೇಶಕ್ಕಾಗಿ ಸೇವೆಗೈದ ಯೋಧರನ್ನು ಸನ್ಮಾನಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಆಚರಿಸುತ್ತ ಬರುತ್ತಿದೆ. ಈ ಬಾರಿಯ ಸ್ವಾತಂತ್ಯೋತ್ಸವದಲ್ಲಿ ನಮ್ಮ ಕರಾವಳಿಯ ಹೆಮ್ಮೆಯ ನಿವೃತ್ತ ಯೋಧ ರಾಜೇಶ್…
ಮಂಗಳೂರು: ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ವತಿಯಿಂದ 10 ಎಂ.ಎಲ್ ನಂದಿನಿ ತುಪ್ಪವನ್ನು ದ.ಕ.ಜಿಲ್ಲಾ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರಿ ರತ್ನ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರು ಉಡುಪಿ ಜಿಲ್ಲೆಯ ಶ್ರೀ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಗುರುವಾರ ಬಿಡುಗಡೆ ಮಾಡಿದರು. https://chat.whatsapp.com/FCEnlTkAKCC0MGPhXtX4i4 ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷರಾದ ರವಿರಾಜ ಹೆಗ್ಡೆ, ಉಪಾಧ್ಯಕ್ಷರಾದ ಉದಯ ಎಸ್.ಕೋಟ್ಯಾನ್, ನಿರ್ದೇಶಕರಾದ ಸುಚರಿತ ಶೆಟ್ಟಿ, ಮಂಜಯ್ಯ ಶೆಟ್ಟಿ, ಮಮತಾ ಆರ್. ಶೆಟ್ಟಿ, ವ್ಯವಸ್ಥಾಪಕ ನಿರ್ದೇಶಕರಾದ ರವಿರಾಜ ಉಡುಪ ಹಾಗೂ ದ.ಕ.ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕರು ಉಪಸ್ಥಿತರಿದ್ದರು. 10 ಎಂ.ಎಲ್‌ನ ನಂದಿನಿ ತುಪ್ಪ ಪ್ರತಿ ಪ್ಯಾಕೆಟ್‌ಗೆ ರೂಪಾಯಿ 10ರಂತೆ ಗ್ರಾಹಕರಿಗೆ ಲಭ್ಯವಾಗಲಿದೆ.
ಅಂಕಿತ ಕ್ರೆಡಿಟ್ ಸೌಹಾರ್ದ ಸಹಕಾರ ಸಂಸ್ಥೆಯಲ್ಲಿ ಎಚ್.ಎಸ್.ಮಂಜಪ್ಪ ಅಭಿಪ್ರಾಯ ಸಾಗರ: ಸ್ಥಳೀಯವಾಗಿ ಲಭ್ಯವಾಗುವ ಸಂಪನ್ಮೂಲಗಳನ್ನು ಬಳಸಿಕೊಂಡು ಸ್ಥಾಪನೆಯಾಗುವ ಸಹಕಾರ ಸಂಸ್ಥೆಗಳು ಆರ್ಥಿಕವಾಗಿ ಸದೃಢವಾಗಿ ರೂಪುಗೊಳ್ಳಲು ಎಲ್ಲರ ಬೆಂಬಲ ಅಗತ್ಯ ಎಂದು ಸಹಕಾರಿ ರತ್ನ ಎಚ್.ಎಸ್.ಮಂಜಪ್ಪ ಹೇಳಿದರು. https://chat.whatsapp.com/FCEnlTkAKCC0MGPhXtX4i4 ಸಾಗರದ ಅಂಕಿತ ಕ್ರೆಡಿಟ್ ಸೌಹಾರ್ದ ಸಹಕಾರ ಸಂಸ್ಥೆಯಿಂದ ಏರ್ಪಡಿಸಿದ್ದ ಷೇರುದಾರರೊಂದಿಗಿನ ಸಮಾಲೋಚನಾ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಸಹಕಾರ ಕ್ಷೇತ್ರಕ್ಕೆ ಕರ್ನಾಟಕ ನೀಡಿದ ಕೊಡುಗೆ ಅಪಾರವಾಗಿದೆ. ಅನೇಕ ವರ್ಷಗಳಿಂದ ಸಹಕಾರ ಸಂಸ್ಥೆಗಳು ಷೇರುದಾರರ ಹಿತ ಕಾಯುವ ಜತೆ ಸ್ಥಳೀಯವಾಗಿ ಸೇವಾಕಾರ್ಯಗಳಿಗೆ ಒತ್ತು ನೀಡುತ್ತಿದೆ. ಸಾಗರ ತಾಲೂಕಿನಲ್ಲಿ ಅನೇಕ ಸಹಕಾರ ಸಂಘಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದರು. ಸಂಸ್ಥೆಯ ಅಧ್ಯಕ್ಷ ಎಚ್.ಎನ್.ರಮೇಶ್ ಮಾತನಾಡಿ, ಅಂಕಿತ ಸೌಹಾರ್ದ ಸಹಕಾರ ಸಂಸ್ಥೆ ಪ್ರತಿವರ್ಷ ಷೇರುದಾರರ ಸಮಾಲೋಚನಾ ಸಭೆ ನಡೆಸುತ್ತಿದ್ದು, ಆರ್ಥಿಕ ಶಕ್ತಿ ಗಟ್ಟಿಗೊಳಿಸಿಕೊಳ್ಳುವ ಕೆಲಸ ಮಾಡುತ್ತಿದೆ. 2025-26ನೇ ಸಾಲಿನಲ್ಲಿ ಸಂಸ್ಥೆಯು 27 ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ. ಷೇರುದಾರರಿಗೆ ಶೇ.11 ಡಿವಿಡೆಂಡ್ ನೀಡುತ್ತಿದ್ದು, ಮುಂದಿನ…
ನಿರ್ದೇಶಕ ಮಂಡಳಿ ಸದಸ್ಯರು ಹೊಸ ನಿಯಮಗಳ ಬಗ್ಗೆ ಮಾಹಿತಿ ಪಡೆಯುವುದು ಅಗತ್ಯ: ಸಿಎ ಚಂದ್ರಕಾಂತ ಕಪಟಕರ ಅಭಿಪ್ರಾಯ ವಿಜಯಪುರ : ಸಹಕಾರಿ ಸಂಸ್ಥೆಯ ಪ್ರಗತಿಗೆ ಆರ್ಥಿಕ ಶಿಸ್ತು ಅತ್ಯಂತ ಮಹತ್ವದ್ದಾಗಿದೆ. ಸದಸ್ಯರು ಪಡೆದ ಸಾಲವನ್ನು ಸಮಯಕ್ಕೆ ಸರಿಯಾಗಿ ಮರುಪಾವತಿ ಮಾಡಿದಾಗ ಮಾತ್ರ ಸಂಸ್ಥೆಯ ಆರ್ಥಿಕ ಸ್ಥಿತಿ ಸದೃಢವಾಗಿ, ಸೊಸೈಟಿಯ ಸರ್ವಾಂಗೀಣ ಪ್ರಗತಿ ಸಾಧ್ಯವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬ ಸದಸ್ಯರೂ ಸಾಲ ಮರುಪಾವತಿಗೆ ಆದ್ಯತೆ ನೀಡಿ ಸಂಸ್ಥೆಯ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಸಿಎ ಚಂದ್ರಕಾಂತ ಕಪಟಕರ ಕರೆ ನೀಡಿದರು. ಭಾವಸಾರ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿಯ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. https://chat.whatsapp.com/FCEnlTkAKCC0MGPhXtX4i4 ಸಹಕಾರಿ ಸಂಸ್ಥೆಗಳ ಕಾರ್ಯನಿರ್ವಹಣೆಯಲ್ಲಿ ಇತ್ತೀಚಿನ ದಿನಗಳಲ್ಲಿ ಆಗಿರುವ ಕಾನೂನು ಮತ್ತು ಆಡಳಿತಾತ್ಮಕ ಬದಲಾವಣೆಗಳು, ನಿರ್ದೇಶಕ ಮಂಡಳಿಯ ಜವಾಬ್ದಾರಿ, ಆರ್ಥಿಕ ವ್ಯವಹಾರಗಳಲ್ಲಿ ಪಾರದರ್ಶಕತೆ ಹಾಗೂ ಸಾಲ ವಸೂಲಾತಿ ಕುರಿತು ಅವರು ಮಾರ್ಗದರ್ಶನ ನೀಡಿ, ಸಹಕಾರಿ ಸಂಸ್ಥೆಗಳ ಆಡಳಿತಕ್ಕೆ ಸಂಬಂಧಿಸಿದ ನಿಯಮಗಳಲ್ಲಿ ಕಾಲಕಾಲಕ್ಕೆ ಬದಲಾವಣೆಗಳು ಆಗುತ್ತಿರುತ್ತವೆ. ಸೆಪ್ಟೆಂಬರ್…
