Author: admin
ದೇಶಾದ್ಯಂತ ಬೃಹತ್ ಪ್ರಮಾಣದಲ್ಲಿ ಸಹಕಾರಿ ಪುನರುಜ್ಜೀವನ ಪ್ರಕ್ರಿಯೆ: ಲೋಕಸಭೆಯಲ್ಲಿ ಸಚಿವ ಅಮಿತ್ ಷಾ ಮಾಹಿತಿ ನವದೆಹಲಿ: ದೇಶಾದ್ಯಂತ ಬೃಹತ್ ಮಟ್ಟದಲ್ಲಿ ಸಹಕಾರಿ ಪುನರುಜ್ಜೀವನ ಪ್ರಕ್ರಿಯೆ ನಡೆಯುತ್ತಿದ್ದು, ಇದರ ಭಾಗವಾಗಿ ಮುಂದಿನ ಐದು ವರ್ಷಗಳ ಅವಧಿಯಲ್ಲಿ ದೇಶದ ಎಲ್ಲ ಗ್ರಾಮ ಮತ್ತು ಪಂಚಾಯಿತಿ ವ್ಯಾಪ್ತಿಗಳಲ್ಲಿ ಸಹಕಾರಿ ಸಂಘಗಳ ರಚನೆಯಾಗಲಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಷಾ ತಿಳಿಸಿದ್ದಾರೆ. https://chat.whatsapp.com/EbVKVnWB6rlHT1mWtsgbch ಲೋಕಸಭೆಯಲ್ಲಿ ಬುಧವಾರ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದ ಅವರು, ಸಹಕಾರಿ ಚಳವಳಿಯನ್ನು ಬಲಪಡಿಸಲು ಮತ್ತು ಅದರ ವ್ಯಾಪ್ತಿಯನ್ನು ಇನ್ನೂ ತಳಮಟ್ಟಕ್ಕೆ ವಿಸ್ತರಿಸಲು ಸರ್ಕಾರ ಸಮಗ್ರ ಯೋಜನೆಯೊಂದನ್ನು ಅನುಮೋದಿಸಿದೆ. ಮುಂದಿನ ಐದು ವರ್ಷಗಳ ಅವಧಿಯಲ್ಲಿ ಪ್ರತಿಯೊಂದು ಪಂಚಾಯಿತಿ ಮತ್ತು ಗ್ರಾಮವನ್ನು ಒಳಗೊಂಡು ಡೈರಿ ಮತ್ತು ಮೀನುಗಾರಿಕಾ ಸಹಕಾರಿ ಸಂಘಗಳೊಂದಿಗೆ ಎರಡು ಲಕ್ಷ ಹೊಸ ಬಹೂಪಯೋಗಿ ಪ್ರಾಥಮಿಕ ಕೃಷಿ ಸಾಲ ಸಂಘಗಳನ್ನು (PACS) ರಚಿಸುವುದು ಈ ದೃಷ್ಟಿಕೋನದ ಉದ್ದೇಶವಾಗಿದೆ ಎಂದು ಮಾಹಿತಿ ನೀಡಿದರು. ಈ ಮಹತ್ವಾಕಾಂಕ್ಷೆಯ ವಿಸ್ತರಣೆಯನ್ನು ನಬಾರ್ಡ್, ಎನ್‌ಡಿಡಿಬಿ, ಎನ್‌ಎಫ್‌ಡಿಬಿ ಮತ್ತು…
ನಕಲಿ ಚಿನ್ನ ಅಡವಿಟ್ಟು ಹಣ ಹೊಡೆಯಲು ವಂಚಕರ ಕುತಂತ್ರ ಮಂಗಳೂರು: ಮಂಗಳೂರಿನಲ್ಲಿ ಮತ್ತೆ ನಕಲಿ ಚಿನ್ನ ಅಡವಿಟ್ಟು ಹಣ ಲಪಟಾಯಿಸಲು ಕುತಂತ್ರ ನಡೆಸಿರುವ ವಂಚಕರು ಸಹಕಾರಿ ಸಂಘವೊಂದರಲ್ಲಿ ಸಿಕ್ಕಿ ಬಿದ್ದಿದ್ದಾರೆ. https://chat.whatsapp.com/EbVKVnWB6rlHT1mWtsgbch ಪ್ರತಿಷ್ಠಿತ ಸಹಕಾರಿ ಸಂಘವೊಂದಕ್ಕೆ ಆಗಮಿಸಿದ್ದವರು ನಕಲಿ ಬಂಗಾರ ಅಡವಿಡಲು ತಂತ್ರ ಹೂಡಿದ್ದರು. ಸೊಸೈಟಿಯ ಸಿಬ್ಬಂದಿಗಳು ಬಂಗಾರ ಪರಿಶೀಲಿಸಿದಾಗ ಅದು ನಕಲಿ ಎಂದು ತಿಳಿದಿದೆ. ಕೆಲವರು ನಕಲಿ ಚಿನ್ನ ಅಡವಿಟ್ಟು ಎಲ್ಲಾ ಕಡೆ ಹೋಗಿ ಸಾಲ ಕೇಳುತಿದ್ದಾರೆ. ಈ ಹಿಂದೆಯೂ ಇದೇ ರೀತಿ ಅಡವಿಡಲು ಬಂದಿದ್ದರು ಎಂದು ತಿಳಿದುಬಂದಿದೆ. ನಕಲಿ ಚಿನ್ನ ಅಡವಿಟ್ಟು ಮೋಸ ಮಾಡುವ ಗ್ಯಾಂಗ್ ಸಕ್ರಿಯವಾಗಿದ್ದು ಅವರ ಬಗ್ಗೆ ಬಳಿಕ ಪೊಲೀಸ್ ಕಮಿಷನರ್ ಅವರ ಕಚೇರಿಗೆ ಮಾಹಿತಿ ನೀಡಲಾಗಿದ್ದು ತಕ್ಷಣ ಪೊಲೀಸರು ಕಾರ್ಯಾಚರಣೆಗೆ ಇಳಿದು ಆರೋಪಿಗಳ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ. ನಕಲಿ ಚಿನ್ನ ಅಡವಿಟ್ಟು ಮೋಸ ಮಾಡುವ ಗ್ಯಾಂಗ್ ಬಗ್ಗೆ ಸೊಸೈಟಿಗಳ ಸಿಬ್ಬಂದಿಗಳು ಪರಸ್ಪರ ಮಾಹಿತಿ ಹಂಚಿಕೊಂಡು ಸಹಕಾರ ನೀಡುವಂತೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಚಿತ್ತರಂಜನ್…
ಮುಂದಿನ ಎರಡು ದಶಕಗಳವರೆಗೆ ಭಾರತದಲ್ಲಿ ಸಹಕಾರಿ ಚಳವಳಿಯ ದಿಕ್ಕು ರೂಪಿಸುವ ನಿರೀಕ್ಷೆ ನವದೆಹಲಿ: ಜುಲೈ 24ರಂದು ನವದೆಹಲಿಯ ಅಟಲ್ ಅಕ್ಷಯ್ ಉರ್ಜಾ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಷಾ ಅವರು, ಬಹುನಿರೀಕ್ಷಿತ ರಾಷ್ಟ್ರೀಯ ಸಹಕಾರ ನೀತಿ -2025 ಅನ್ನು ಅನಾವರಣಗೊಳಿಸಲಿದ್ದಾರೆ. ಹಲವಾರು ತಿಂಗಳುಗಳಿಂದ ರಚನಾ ಪ್ರಕ್ರಿಯೆಯಲ್ಲಿದ್ದ ಈ ನೀತಿಯು 2025ರಿಂದ 2045ರವರೆಗೆ ಮುಂದಿನ ಎರಡು ದಶಕಗಳವರೆಗೆ ಭಾರತದಲ್ಲಿ ಸಹಕಾರಿ ಚಳವಳಿಯ ದಿಕ್ಕನ್ನು ರೂಪಿಸಲಿದೆ. https://chat.whatsapp.com/EbVKVnWB6rlHT1mWtsgbch ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ರಾಷ್ಟ್ರೀಯ ಸಹಕಾರಿ ಈ ನೀತಿಯನ್ನು ಅಭಿವೃದ್ಧಿಪಡಿಸಲಾಗಿದ್ದು, ಭಾರತದ ವಿಶಾಲ ಸಹಕಾರ ವ್ಯವಸ್ಥೆಯನ್ನು ಆಧುನೀಕರಿಸುವ ಮತ್ತು ಚೈತನ್ಯಗೊಳಿಸುವ ಗುರಿಯನ್ನು ಇದು ಹೊಂದಿದೆ. 2047ರ ವಿಕಸಿತ ಭಾರತ್‌ನ ವಿಶಾಲ ರಾಷ್ಟ್ರೀಯ ಗುರಿಯೊಂದಿಗೆ ಹೊಂದಿಕೆಯಾಗುವ “ಸಹಕಾರದಿಂದ ಸಮೃದ್ಧಿ” (ಸಹಕಾರದ ಮೂಲಕ ಸಮೃದ್ಧಿ) ಎಂಬ ಸರ್ಕಾರದ ದೃಷ್ಟಿಕೋನವು ಇದರ ಮೂಲತತ್ವವಾಗಿದೆ. ಹೊಸ ನೀತಿಯು ಸಹಕಾರಿ ವಲಯದಲ್ಲಿ, ವಿಶೇಷವಾಗಿ ತಳಮಟ್ಟದಲ್ಲಿ ಸಾಂಸ್ಥಿಕ ಸುಧಾರಣೆ ಮತ್ತು ಸಾಮರ್ಥ್ಯ ವೃದ್ಧಿಗೆ ನೀಲಿನಕ್ಷೆಯಾಗಿ ಕಾರ್ಯನಿರ್ವಹಿಸುವ…
ಮಂಗಳೂರು: ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಬಿಜೈ ಶಾಖೆಯು ಬಿಜೈ ಚರ್ಚ್ ಮುಂಭಾಗದ ಮಂಗಳೂರು ಮಹಾನಗರ ಪಾಲಿಕೆ ಸಂಕೀರ್ಣದ ಒಂದನೇ ಮಹಡಿಗೆ ಸ್ಥಳಾಂತರಗೊಳ್ಳುತ್ತಿದ್ದು ಸ್ಥಳಾಂತರ ಸಮಾರಂಭ ಜುಲೈ 27ರ ಭಾನುವಾರ ಬೆಳಗ್ಗೆ 10ಕ್ಕೆ ನಡೆಯಲಿದೆ. https://chat.whatsapp.com/EbVKVnWB6rlHT1mWtsgbch ಶಾಸಕ ಡಿ.ವೇದವ್ಯಾಸ ಕಾಮತ್ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದು, ಕರ್ನಾಟಕ ರಾಜ್ಯ ಕುಡಾಳ್ ದೇಶಸ್ಥ ಆದ್ಯಗೌಡ್ ಬ್ರಾಹ್ಮಣ ಮಹಾಮಂಡಲದ ಅಧ್ಯಕ್ಷ ಮಹೇಶ್ ಠಾಕೂರ್ ದೀಪ ಪ್ವಜ್ವಲನೆ ಮಾಡಲಿದ್ದಾರೆ. ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಗಣೇಶ್ ಶೆಣೈ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕರಾದ ಭಾರತಿ ಭಟ್, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ, ದ.ಕ. ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷ ಭಾಸ್ಕರ್ ದೇವಸ್ಯ, ಉದ್ಯಮಿ ಪ್ರವೀಣ್ ಎಸ್.ದರ್ಬೆ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿವೃತ್ತ ಸಹಾಯಕ ಮಹಾಪ್ರಬಂಧಕರಾದ ಜೆಸಿಂತಾ ಮಾರ್ಟಿಸ್,…
ಮಂಗಳೂರು: ಆಟಿ ತಿಂಗಳಲ್ಲಿ ತುಳು ಜನರು ಆಚರಣೆ ಮಾಡುವ ಆಟಿಡೊಂಜಿ ದಿನವನ್ನು “ಆಟಿದ ಪೊಲಬು” ಎಂಬ ಹೆಸರಿನಿಂದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಮಂಗಳೂರಿನ ಪ್ರಧಾನ ಕಛೇರಿ ಪಡೀಲ್‌ನ “ಆತ್ಮಶಕ್ತಿ ಸೌಧ”ದಲ್ಲಿ ಆಚರಿಸಲಾಯಿತು. https://chat.whatsapp.com/EbVKVnWB6rlHT1mWtsgbch ದೈವಾರಾಧಕ ಪೂವಪ್ಪ ಪೂಜಾರಿಯವರು ಹಿಂಗಾರ ಅರಳಿಸಿ ಸಾಂಪ್ರದಾಯಿಕ ಶೈಲಿಯಲ್ಲಿ ಈ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಪೂವಪ್ಪ ಪೂಜಾರಿ, ನಾಟಿ ವೈದ್ಯ ತಿಲಕ್‌ರಾಜ್ ಹಾಗೂ ಕಾಸರಗೋಡಿನ ಪೆರಿಯದ ಕೇರಳ ಕೇಂದ್ರ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಚೇತನ್ ಮುಂಡಾಜೆ ಅವರನ್ನು ಸಂಘದ ವತಿಯಿಂದ ಗೌರವಿಸಲಾಯಿತು. ಪ್ರಾಧ್ಯಾಪಕ ಚೇತನ್ ಮುಂಡಾಜೆ ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘವು ದೈವಾರಾಧಕರು ಹಾಗೂ ನಾಟಿ ವೈದ್ಯರನ್ನು ಸನ್ಮಾನಿಸುವ ಮೂಲಕ ತುಳುನಾಡಿನ ಸಂಸ್ಕೃತಿ ಹಾಗೂ ಭಾಷೆಯನ್ನು ಬೆಳೆಸುವ ಕೆಲಸ ಮಾಡುತ್ತಿದೆ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ರವರ ನೇತೃತ್ವದಲ್ಲಿ “ಆಟಿದ ಪೊಲಬು” ವಿಶಿಷ್ಟ ಕಾರ್ಯಕ್ರಮ ಆಯೋಜಿಸಿ, ತುಳುನಾಡಿನ ಸಾಂಪ್ರದಾಯಿಕ ಶೈಲಿಯಲ್ಲಿ ವೇದಿಕೆ ನಿರ್ಮಾಣ ಮಾಡಿರುವುದು ಕಾರ್ಯಕ್ರಮದ ಮೆರಗನ್ನು ಹೆಚ್ಚಿಸಿದೆ” ಎಂದರು. ನಾಟಿ ವೈದ್ಯರಾದ ತಿಲಕ್‌ರಾಜ್…
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೆ.ಸಿ.ರೋಡ್ ಶಾಖೆಯ ದ್ವಿತೀಯ ವಾರ್ಷಿಕೋತ್ಸವ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಸಂಘದ ಕೆ.ಸಿ.ರೋಡ್ ಶಾಖೆಯಲ್ಲಿ ಜರುಗಿತು. https://chat.whatsapp.com/EbVKVnWB6rlHT1mWtsgbch ಸಂಘದ ಗ್ರಾಹಕರಾದ ಸಿಸ್ಟರ್ ಐಲಿನ್ ಮಥಾಯಿಸ್, ಕೆ.ಶಿವಪ್ರಸಾದ್ ಆಚಾರ್ಯ ಹಾಗೂ ಅಬ್ಬಾಸ್ ಉಚ್ಚಿಲ ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು. ಐಲಿನ್ ಮಥಾಯೀಸ್ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಗ್ರಾಹಕ ಸ್ನೇಹಿ ಸೇವೆಯೊಂದಿಗೆ ಉತ್ತಮ ಬೆಳವಣಿಗೆ ಸಾಧಿಸಿದೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜನೆ ಮಾಡುತ್ತಿರುವುದು ಶ್ಲಾಘನೀಯ. ಈ ಭಾಗದಲ್ಲಿ ಉಚಿತ ಆರೋಗ್ಯ ಶಿಬಿರ ಆಯೋಜನೆ ಮಾಡಿದಲ್ಲಿ ಸ್ಥಳಾವಕಾಶ ಮಾಡಿಕೊಡುವುದಾಗಿ ತಿಳಿಸಿದರು. ಕೆ.ಶಿವಪ್ರಸಾದ್ ಆಚಾರ್ಯ ಮಾತನಾಡಿ “ಕೆ.ಸಿ.ರೋಡ್ ಶಾಖೆಯಲ್ಲಿ ಸಿಬ್ಬಂದಿಯ ಗ್ರಾಹಕ ಸ್ನೇಹಿ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಅಬ್ಬಾಸ್ ಉಚ್ಚಿಲ ಮಾತನಾಡಿ “ಕೆ.ಸಿ. ರೋಡ್ ಶಾಖೆಯು ಎರಡು ವರುಷದಲ್ಲಿ ಈ ಭಾಗದ ಜನರಿಗೆ…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಮಂಗಳೂರು ಎಂದು ಮರುನಾಮಕರಣ ಮಾಡುವ ವಿಷಯದಲ್ಲಿ ಚರ್ಚೆಗಳಾಗುತ್ತಿದ್ದು ಈ ವಿಷಯಕ್ಕೆ ಸಂಬಂಧಿಸಿ ಮಂಗಳೂರು ಸೌಹಾರ್ದ ಸಹಕಾರಿ ಸಂಘವು ಮಂಗಳೂರು ಜಿಲ್ಲೆ ನಾಮಕರಣಕ್ಕೆ ಬೆಂಬಲ ಸೂಚಿಸಿದೆ. https://chat.whatsapp.com/EbVKVnWB6rlHT1mWtsgbch ಕರ್ನಾಟಕದಲ್ಲಿ ಬೆಂಗಳೂರು ನಂತರ ಹೆಚ್ಚು ಪ್ರಸಿದ್ಧವಾಗಿರುವುದು ಮಂಗಳೂರು. ಇದು ಎಲ್ಲರಿಗೂ ತಿಳಿದ ವಿಷಯ. ಮಂಗಳೂರಿನ ಮಂಗಳಾದೇವಿ ದೇವಸ್ಥಾನ-ಮಂಗಳೂರಿನ ಕದ್ರಿ ದೇವಸ್ಥಾನ -ಮಂಗಳೂರು ‘ಏರ್‌ಪೋರ್ಟ್-ಮಂಗಳೂರು ರೈಲ್ವೆ ನಿಲ್ದಾಣ-ಮಂಗಳೂರು ಪುರಭವನ-ಮಂಗಳೂರು ನೆಹರೂ ಮೈದಾನ-ಮಂಗಳೂರು ಹಂಚಿನ ಕಾರ್ಖಾನೆ-ಮಂಗಳೂರು ಗೇರುಬೀಜ ಕಾರ್ಖಾನೆ-ಮಂಗಳೂರು ಸರಕಾರಿ ಕಾಲೇಜು-ಮಂಗಳೂರು ಆಗ್ನೆಸ್ ಕಾಲೇಜು-ಮಂಗಳೂರು ಅಲೋಶಿಯಸ್ ಕಾಲೇಜ್-ಮಂಗಳೂರು ಕೆನರಾ ಕಾಲೇಜ್-ಮಂಗಳೂರು ಕೆನರಾ ಬ್ಯಾಂಕ್-ಮಂಗಳೂರು ಕಾರ್ಪೋರೇಶನ್ ಬ್ಯಾಂಕ್-ಮಂಗಳೂರು ವಿಜಯ ಬ್ಯಾಂಕ್ (ಬ್ಯಾಂಕ್ ಆಫ್ ಬರೋಡ)-ಮಂಗಳೂರು ಸಿಂಡಿಕೇಟ್ ಬ್ಯಾಂಕ್ ಮಂಗಳೂರು ಕರ್ಣಾಟಕ ಬ್ಯಾಂಕ್ -ಎಂಸಿಸಿ ಬ್ಯಾಂಕ್ ಮಂಗಳೂರು – ಎಸ್‌ಸಿಡಿಸಿಸಿ ಬ್ಯಾಂಕ್-ಮಂಗಳೂರು ಸೊಸೈಟಿ – ಮಂಗಳೂರು ಆಟೋರಿಕ್ಷಾ ಕಾರು ಚಾಲಕರ ಸೌಹಾರ್ದ ಸಹಕಾರಿ ಸಂಘ ಜಪ್ಪು ಮಂಗಳೂರು ಸ್ಟೋರ್ ಜಪ್ಪು-ಮಂಗಳೂರು ದಸರಾ-ಮಂಗಳೂರು ಪ್ರಕಾಶ್ ಬೀಡಿ-ಮಂಗಳೂರು ಪಿವಿಎಸ್ ಬೀಡಿ-ಮಂಗಳೂರು ಗಣೇಶ್ ಬೀಡಿ-ಮಂಗಳೂರು ಸಾಧು ಬೀಡಿ…
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕರಂಗಲ್ಪಾಡಿ, ಕೃಷ್ಣಾಪುರ ಶಾಖೆಯ ಗ್ರಾಹಕರ ಸಭೆಯು ಇತ್ತೀಚೆಗೆ ಆಯಾ ಶಾಖೆಗಳಲ್ಲಿ ನಡೆಯಿತು. https://chat.whatsapp.com/EbVKVnWB6rlHT1mWtsgbch ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕರಂಗಲ್ಪಾಡಿ ಶಾಖೆಯ ದಶಮಾನೋತ್ಸವ ಪ್ರಯುಕ್ತ ಗ್ರಾಹಕರ ಸಭೆ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಜರುಗಿತು. ಸಂಘದ ಸದಸ್ಯರಾದ ಪುಟ್ಟಸ್ವಾಮಿ ಹೆಚ್, ರಮೇಶ್ ಯು, ಶ್ರೀಧರ್ ಹಾಗೂ ಅಶೋಕ್ ಎಂ.ಕೆ ಉದ್ಘಾಟಿಸಿದರು. ಸಂಘದ ಸದಸ್ಯರಾದ ಸುಮ ಪ್ರಸಾದ್ ಮಾತನಾಡಿ ಶಾಖೆಯು ಗ್ರಾಹಕರಿಗೆ ಉತ್ತಮ ಬ್ಯಾಂಕಿಂಗ್ ಸೇವೆ ನೀಡುತ್ತಿದ್ದು, ಶಾಖೆಯ ಸಿಬ್ಬಂದಿಗಳ ನಗುಮೊಗದ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಂಘದ ಸದಸ್ಯರಾದ ರಾಜಾರಾಮನ್ ತಾಳಿಪಾಡಿ ಮಾತನಾಡಿ ಶಾಖೆಯಲ್ಲಿ ಇ-ಸ್ಟಾಂಪಿಂಗ್ ಸೇವೆ ಶೀಘ್ರವಾಗಿ ನೀಡುತ್ತಿರುವ ಹಾಗೂ ಆಯ್ದ ರಜಾ ದಿನಗಳಲ್ಲಿ ಬ್ಯಾಂಕಿಂಗ್ ಹಾಗೂ ಇ-ಸ್ಟಾಂಪಿಂಗ್ ಸೇವೆ ನೀಡುತ್ತಿರುವದರಿಂದ ಗ್ರಾಹಕರಿಗೆ ತುಂಬಾ ಅನುಕೂಲವಾಗುತ್ತಿದೆ ಎಂದರು. ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ, ನಿರ್ದೇಶಕರಾದ ಜಿ.ಪರಮೇಶ್ವರ ಪೂಜಾರಿ, ಮುದ್ದು ಮೂಡುಬೆಳ್ಳೆ, ಗೋಪಾಲ್ ಎಮ್, ಉಮಾವತಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ…
ಬೆಂಗಳೂರು, ಬೀದರ್, ಬೆಳಗಾವಿಯಂತೆ ಸಹಕಾರ ಕ್ಷೇತ್ರದಲ್ಲಿ ಕಲಬುರಗಿಯೂ ಪ್ರಗತಿ ಸಾಧಿಸಲಿ: ನಂಜನ ಗೌಡ ಅಭಿಪ್ರಾಯ ಸೌಹಾರ್ದ ಸಹಕಾರಿ ಕಾಯಿದೆಯ ರಜತ ಮಹೋತ್ಸವ ನಿಮಿತ್ತ ಸಂವಾದ ಕಾರ್ಯಕ್ರಮ ಕಲಬುರಗಿ: ನೂರು ವರ್ಷಗಳ ಇತಿಹಾಸ ಹೊಂದಿರುವ ಸಹಕಾರಿ ಕ್ಷೇತ್ರ ಇಂದು ಬಹಳ ವಿಶಾಲವಾಗಿ ಬೆಳೆದಿದೆ. ನಮ್ಮ ದೇಶಕ್ಕೆ ಸಹಕಾರ ಕ್ಷೇತ್ರದ ಪರಿಕಲ್ಪನೆಯನ್ನು ನೀಡಿದ್ದು ಕರ್ನಾಟಕ ರಾಜ್ಯ. ಬೆಳಗಾವಿ, ಬೆಂಗಳೂರು ಹಾಗೂ ಬೀದರ್ ಜಿಲ್ಲೆಗಳಿಗೆ ಹೋಲಿಸಿದರೆ, ಸಹಕಾರ ಕ್ಷೇತ್ರದಲ್ಲಿ ಕಲಬುರಗಿ ಜಿಲ್ಲೆ ಹಿಂದುಳಿದಿದೆ. ಸಹಕಾರ ಕ್ಷೇತ್ರದಲ್ಲಿ ಕಲಬುರಗಿ ಜಿಲ್ಲೆಯೂ ಪ್ರಗತಿ ಸಾಧಿಸಬೇಕು ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದ ಅಧ್ಯಕ್ಷ ಜಿ.ನಂಜನಗೌಡ ಅಭಿಪ್ರಾಯಪಟ್ಟರು. https://chat.whatsapp.com/EbVKVnWB6rlHT1mWtsgbch ಸೌಹಾರ್ದ ಸಹಕಾರಿ ಕಾಯಿದೆಯ ರಜತ ಮಹೋತ್ಸವದ ಪ್ರಯುಕ್ತ ಶುಕ್ರವಾರ ಕಲಬುರಗಿಯಲ್ಲಿ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ಹಾಗೂ ಸಂಶೋಧನಾ ವಿಭಾಗ ಸಹಯೋಗದೊಂದಿಗೆ ನಡೆದ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.…
ಜೈಗಣೇಶ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಸೌಹಾರ್ದ ಸಿರಿ ನೂತನ ಕಟ್ಟಡ ನಾಳೆ ಸಾಹೇಬರಕಟ್ಟೆಯಲ್ಲಿ ಉದ್ಘಾಟನೆ
ಕೋಟ: ಜೈಗಣೇಶ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ಸಾಹೇಬರಕಟ್ಟೆ-ಶಿರಿಯಾರ ಇದರ ನೂತನ ಕಟ್ಟಡ “ಸೌಹಾರ್ದ ಸಿರಿ’ʼ ಇದರ ಉದ್ಘಾಟನೆ ಜು13ರಂದುಬೆಳಗ್ಗೆ9.30ಕ್ಕೆ ಜರಗಲಿದೆ. https://chat.whatsapp.com/EbVKVnWB6rlHT1mWtsgbch ಜೈಗಣೇಶ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘವು 17 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ಜನಸ್ನೇಹಿ ಸೇವೆ ನೀಡುತ್ತಿದ್ದು ಜನಮಾನಸದಲ್ಲಿ ತನ್ನದೇ ಛಾಪು ಮೂಡಿಸಿದೆ. ಸಂಸ್ಥೆಯು ಸಾಹೇಬರಕಟ್ಟೆಯ ಹೃದಯಭಾಗದಲ್ಲಿ ಸ್ವಂತ ಜಾಗ ಖರೀದಿಸಿ ಇದೀಗ ಕೋಟ್ಯಂತರ ರೂ. ವೆಚ್ಚದಲ್ಲಿ ಆಧುನೀಕೃತ ಹವಾನಿಯಂತ್ರಿತ ಕಟ್ಟಡ ನಿರ್ಮಿಸಿ ಲೋಕಾರ್ಪಣೆಗೊಳಿಸುತ್ತಿದೆ. ಸಂಸ್ಥೆಯ ಅಧ್ಯಕ್ಷ ಅಶೋಕ ಪ್ರಭು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಶಿರಾಲಿಯ ಮಹಾಗಣಪತಿ ಮಹಾಮಾಯ ದೇಗುಲದ ಆಡಳಿತ ಮೊಕ್ತಸರ ಗೋಪಿನಾಥ ಕಾಮತ್ ನೂತನ ಕಟ್ಟಡ ಉದ್ಘಾಟಿಸಲಿದ್ದಾರೆ. ಸಂಸದ ಕೋಟ ಶ್ರೀನಿವಾಸ ಪೂಜಾರಿ ಪ್ರಧಾನ ಕಚೇರಿ ಉದ್ಘಾಟಿಸಲಿದ್ದಾರೆ. ಭದ್ರತಾ ಕೊಠಡಿಯನ್ನು ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ಉದ್ಘಾಟಿಸಲಿದ್ದು, ಆಡಳಿತ ಕಚೇರಿಯ ಸಭಾಂಗಣ ಉದ್ಘಾಟನೆಯನ್ನು ಶಿರಿಯಾರ ಗ್ರಾ.ಪಂ. ಅಧ್ಯಕ್ಷ ಸುಧೀಂದ್ರ ಶೆಟ್ಟಿ ನೆರವೇರಿಸಲಿದ್ದಾರೆ. ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಭದ್ರತಾ ಕೋಶ…
