Author: admin

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು, ಸಹಕಾರ ಇಲಾಖೆ ಮತ್ತು ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಸಹಕಾರ ವರ್ಷಾಚರಣೆ ಪ್ರಯುಕ್ತ ಮಂಗಳವಾರ ಏಕ್ ಪೇಡ್ ಮಾ ಕೇ ನಾಮ್ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆವರಣದಲ್ಲಿ ನಡೆಯಿತು. https://chat.whatsapp.com/EbVKVnWB6rlHT1mWtsgbch ಶಾಸಕ ಹರೀಶ್‌ ಪೂಂಜ ಕಾರ್ಯಕ್ರಮ ಉದ್ಘಾಟಿಸಿದರು. ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಅಧ್ಯಕ್ಷತೆ ವಹಿಸಿದ್ದರು. ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣಿಕ್ಕರ ಏಕ್ ಪೇಡ್ ಮಾ ಕೇ ನಾಮ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ಡಾ| ಎಸ್. ಆರ್. ಹರೀಶ್ ಆಚಾರ್ಯ ವಿಷಯ ಮಂಡಿಸಿದರು. ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್…

Read More

ಶಿಕಾರಿಪುರ: ಶಿಕಾರಿಪುರ ತಾಲೂಕು ವ್ಯವಸಾಯೋತ್ಪನ್ನಗಳ ಮಾರಾಟ ಸಹಕಾರ ಸಂಘ, ಕರ್ನಾಟಕ ರಾಜ್ಯ ಪರಿಸರ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಸಹಕಾರ ಸಂಘ, ಕರ್ನಾಟಕ ರಾಜ್ಯ ಜನಪದ ಕಲಾವಿದರ ಸಹಕಾರ ಸಂಘ ಶಿಕಾರಿಪುರ, ಬಸವೇಶ್ವರ ಸಹಕಾರಿ ಒಕ್ಕೂಟ ಶಿಕಾರಿಪುರ, ಅರಣ್ಯ ಇಲಾಖೆ ಶಿಕಾರಿಪುರ ಪ್ರಾದೇಶಿಕ ಅರಣ್ಯ ವಲಯ ಹಾಗೂ ಸಾಮಾಜಿಕ ಅರಣ್ಯ ವಲಯ ಶಿಕಾರಿಪುರ ಇವರ ಸಹಯೋಗದೊಂದಿಗೆ ಜೂನ್‌ 20ರಂದು ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಮತ್ತು ಸಸಿಗಳ ವಿತರಣೆ ಕಾರ್ಯಕ್ರಮ ಟಿಎಪಿಸಿಎಂಎಸ್‌ ಪೆಟ್ರೋಲ್‌ ಬಂಕ್‌ ಬಳಿ ನಡೆಯಲಿದೆ. https://chat.whatsapp.com/EbVKVnWB6rlHT1mWtsgbch ಬೆಳಗ್ಗೆ 10ಕ್ಕೆ ಟಿ.ಎ.ಪಿ.ಸಿ.ಎಂ.ಎಸ್ ಅಧ್ಯಕ್ಷ ಸುಧೀರ್ ಎ.ಬಿ ಅಧ್ಯಕ್ಷತೆಯಲ್ಲಿ ಸಹಕಾರ ರತ್ನ ಪುರಸ್ಕೃತ ಡಾ.ಬಿ.ಡಿ.ಭೂಕಾಂತ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಿಕಾರಿಪುರ ಪುರಸಭೆ ಅಧ್ಯಕ್ಷರಾದ ಸುನಂದಾ ಮಂಜುನಾಥ್ ಸಸಿಗಳ ವಿತರಣೆ ಮಾಡಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಶಿಕಾರಿಪುರ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ನಾಯ್ಕ ಭಾಗವಹಿಸಲಿದ್ದಾರೆ. ಶಿಕಾರಿಪುರ ಪ್ರಾದೇಶಿಕ ವಲಯದ ವಲಯ ಅರಣ್ಯಾಧಿಕಾರಿ ರೇವಣಸಿದ್ದಯ್ಯ ಮತ್ತು ಶಿಕಾರಿಪುರ ಸಾಮಾಜಿಕ ವಲಯದ ವಲಯ ಅರಣ್ಯಾಧಿಕಾರಿ ಸುನೀತಾ ಉಪನ್ಯಾಸ…

Read More

ಉಡುಪಿ: ಉಡುಪಿಯ ಡಾಕ್ಟರ್ಸ್ ಆಂಡ್ ಅಲೈಡ್ ಪ್ರೊಫೆಶನಲ್ಸ್ ಕ್ರೆಡಿಟ್ ಕೋ ಆಪರೇಟಿವ್ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಇತ್ತೀಚೆಗೆ ಸಂಘದ ಅಧ್ಯಕ್ಷರಾದ ಡಾ.ಬುಡ್ನಾರು ವಿನಯಚಂದ್ರ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಸಂಘದ ಕಚೇರಿ ಆವರಣದಲ್ಲಿ ಜರುಗಿತು. https://chat.whatsapp.com/EbVKVnWB6rlHT1mWtsgbch ಸಹಕಾರ ಸಂಘದ ಕಳೆದ ಸಾಲಿನ ಕಾರ್ಯ ಚಟುವಟಿಕೆ ಮತ್ತು ಮುಂದಿನ ದಿನದ ಕಾರ್ಯ ಯೋಜನೆಗಳ ಬಗ್ಗೆ ಅಧ್ಯಕ್ಷ ಡಾ.ಬುಡ್ನಾರು ವಿನಯಚಂದ್ರ ಶೆಟ್ಟಿಯವರು ಮಾಹಿತಿ ಹಂಚಿಕೊಂಡರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಜೋಗಿಯವರು ವಾರ್ಷಿಕ ವರದಿ ಮತ್ತು ಲೆಕ್ಕ ಪರಿಶೋಧನಾ ವರದಿ ಮಂಡಿಸಿದರು. ಸೊಸೈಟಿಯ ಎಲ್ಲಾ ನಿರ್ದೇಶಕರು ಮತ್ತು ಸಂಘದ ಸದಸ್ಯರು ಹಾಜರಿದ್ದು ಮಹಾಸಭೆ ಯಶಸ್ವಿಗೊಳಿಸಿದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com

Read More

ಗ್ರಾಹಕರಿಗಾಗಿ ಮೊಬೈಲ್ ಬ್ಯಾಂಕಿಂಗ್ ವ್ಯವಸ್ಥೆ ನೀಡುವ ನಿಟ್ಟಿನಲ್ಲಿ ಕಾರ್ಯೋನ್ಮುಖ: ಜಿ.ಆರ್‌ ಪ್ರಸಾದ್‌ ಘೋಷಣೆ ಮಂಗಳೂರು: ಯೆಯ್ಯಾಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಪ್ರಣವ ಸೌಹಾರ್ದ ಸಹಕಾರಿ ಸಂಸ್ಥೆಯ 11ನೇ ವಾರ್ಷಿಕ ಮಹಾಸಭೆ ಭಾನುವಾರ ಪದವಿನಂಗಡಿಯ ಬೆನಕ ಸಭಾಂಗಣದಲ್ಲಿ ಸಂಸ್ಥೆಯ ಅಧ್ಯಕ್ಷ ಜಿ.ಆರ್‌ ಪ್ರಸಾದ್‌ ಅಧ್ಯಕ್ಷತೆಯಲ್ಲಿ ನಡೆಯಿತು. https://chat.whatsapp.com/EbVKVnWB6rlHT1mWtsgbch ಸಭೆಯ ಮೊದಲಿಗೆ ಸದಸ್ಯರ ಮಕ್ಕಳಿಂದ ಶಾಸ್ತ್ರೀಯ ನೃತ್ಯ ಜರಗಿತು. ನಂತರ ಸಂಸ್ಥೆಯ ಅಧ್ಯಕ್ಷರಾದ ಜಿ.ಆರ್ ಪ್ರಸಾದ್ ಅವರು ಸಂಸ್ಥೆಯ ಆರ್ಥಿಕ ವರ್ಷದ ಆರ್ಥಿಕ ತಕ್ತೆಯನ್ನು ಮಂಡಿಸಿದರು. ಸಂಸ್ಥೆಗೆ ಕಳೆದ ಆರ್ಥಿಕ ವರ್ಷ ರೂ.66.64 ಲಕ್ಷ ಒಟ್ಟಾರೆ ಲಾಭ ಇದ್ದು ನಿವ್ವಳ ಲಾಭ ರೂ. 52 .75 ಲಕ್ಷವಿದೆ. ಸದಸ್ಯರ ಸಂಖ್ಯೆ 7800 ಇದ್ದು ರೂ. 165 ಲಕ್ಷ ಪಾಲು ಬಂಡವಾಳ ಇದೆ. ರೂ.160 ಲಕ್ಷ ವಿವಿಧ ನಿಧಿಗಳಿದ್ದು ಸದಸ್ಯರಿಗೆ ಈ ವರುಷವೂ ಶೇಕಡಾ 10 ಪ್ರತಿಶತ ಲಾಭಾಂಶ ಹಂಚಲು ನಿರ್ಧರಿಸಲಾಗಿದೆ. ಸಂಸ್ಥೆ ಲೆಕ್ಕಪತ್ರ ಪರಿಶೋಧನೆಯಲ್ಲಿ ಎ ದರ್ಜೆ ಮಾನ್ಯತೆ ಉಳಿಸಿಕೊಂಡಿದೆ ಹಾಗೂ ಸಾಲ ವಸೂಲಾತಿಯಲ್ಲೂ…

Read More

ನಿಮ್ಮ ಕಾರ್ಯಕ್ಷೇತ್ರದಲ್ಲಿ ನೀವು ಗೆದ್ದಾಗ ಮಾತ್ರ ಯಶಸ್ಸು: ವಲೇರಿಯನ್‌ ಡಿಸೋಜ ಮಂಗಳೂರು: ಮಂಗಳೂರು ಕೆಥೋಲಿಕ್ ಕೋ ಆಪರೇಟಿವ್ (ಎಂ.ಸಿ.ಸಿ.) ಬ್ಯಾಂಕಿನ ವಾರ್ಷಿಕ ಪ್ರಗತಿ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಶನಿವಾರ ಬ್ಯಾಂಕಿನ ಪಿ.ಎಫ್.ಎಕ್ಸ್. ಸಲ್ಡಾನ್ಹಾ ಮೆಮೊರಿಯಲ್ ಸಭಾಂಗಣದಲ್ಲಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಅಧ್ಯಕ್ಷತೆಯಲ್ಲಿ ನಡೆಯಿತು. ಮಂಗಳೂರು ಧರ್ಮಪ್ರಾಂತ್ಯದ ರೊಸಾರಿಯೊ ಕೆಥೆಡ್ರೆಲ್‌ ಚರ್ಚಿನ ರೆಕ್ಟರ್ ಹಾಗೂ ಪ್ರಧಾನ ಧರ್ಮಗುರು ವಲೇರಿಯನ್‌ ಡಿಸೋಜ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬ್ಯಾಂಕಿನ ಇತ್ತೀಚಿಗಿನ ಬೆಳವಣಿಗೆಯ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿ, ಆಡಳಿತ ಮಂಡಳಿ ಮತ್ತು ಸಿಬ್ಬಂದಿಯ ಸಮರ್ಪಣಾ ಮನೋಭಾವವನ್ನು ಶ್ಲಾಘಿಸಿ, ನೀವು ನಿಮ್ಮ ಕಾರ್ಯಕ್ಷೇತ್ರದಲ್ಲಿ ಗೆದ್ದಾಗ ಮಾತ್ರ ಯಶಸ್ಸನ್ನು ಪಡೆಯಬಹುದು” ಎಂದು ಹೇಳಿದರು. https://chat.whatsapp.com/EbVKVnWB6rlHT1mWtsgbch ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಅಧ್ಯಕ್ಷೀಯ ಭಾಷಣದಲ್ಲಿ ಬ್ಯಾಂಕನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವಲ್ಲಿ ಸಿಬ್ಬಂದಿಯ ಅಚಲ ಪ್ರಯತ್ನಗಳನ್ನು ಶ್ಲಾಘಿಸಿ, ಪ್ರಶಸ್ತಿ ಗಳಿಸಿದ ಶಾಖೆಯ ವ್ಯವಸ್ಥಾಪಕ ಮತ್ತು ಸಿಬ್ಬಂದಿಯನ್ನು ಅಭಿನಂದಿಸಿ, ಮುಂದಿನ ವರ್ಷದಲ್ಲಿ…

Read More

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಳ್ಳಾಲ ಶಾಖೆಯ ದಶಮಾನೋತ್ಸವ ಪ್ರಯುಕ್ತ ಉಚಿತ ವೈದ್ಯಕೀಯ, ದಂತ ಚಿಕಿತ್ಸಾ ಹಾಗೂ ನೇತ್ರ ತಪಾಸಣಾ ಶಿಬಿರ ಭಾನುವಾರ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ ಪಡೀಲ್, ಮಂಗಳೂರು, ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸೇವಾ ಸಂಘ ಮತ್ತು ಮಹಿಳಾ ವಿಭಾಗ, ಬಂಡಿಕೊಟ್ಯ ಉಳ್ಳಾಲ, ವಿದ್ಯಾರಣ್ಯ ಯುವಕ ವೃಂದ ಮತ್ತು ವಿದ್ಯಾರಣ್ಯ ಕಲಾವೃಂದ ಉಳ್ಳಾಲ ಹಾಗೂ ಶಿವಶಕ್ತಿ ಯುವಕ ಮಂಡಲ ಉಳ್ಳಾಲ ಇವರುಗಳ ಸಂಯುಕ್ತ ಆಶ್ರಯದಲ್ಲಿ ಉಳ್ಳಾಲ ನಗರಸಭೆ ಆವರಣದ ಸಮುದಾಯ ಭವನದಲ್ಲಿ ಜರುಗಿತು. https://chat.whatsapp.com/EbVKVnWB6rlHT1mWtsgbch ವಿದ್ಯಾರಣ್ಯ ಯುವಕ ವೃಂದದ ಗೌರವಾಧ್ಯಕ್ಷ ವಿಜಯ ಕುಮಾರ್‌ ಉದ್ಘಾಟಿಸಿದರು. ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸಾಯನ್ಸಸ್ ವಿಭಾಗದ ವೈದ್ಯರಾದ ಡಾ|| ನವ್ಯಾ ಕೆ. ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಬ್ಯಾಂಕಿಂಗ್ ಸೇವೆಯ ಜೊತೆಗೆ ಸಾಮಾಜಿಕ ಕಳಕಳಿಯಿಂದ ಉಚಿತ ವೈದ್ಯಕೀಯ ಶಿಬಿರಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ. ಈ ಶಿಬಿರದಲ್ಲಿ ಉಚಿತ ದಂತ ತಪಾಸಣೆ ಮತ್ತು ಸಲಹೆ, ಹಲ್ಲುಗಳ…

Read More

ಬಂಟ್ವಾಳ: ಸಜೀಪಮೂಡದ ಬೊಳ್ಳಾಯಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 17ನೇ ಶಾಖೆ ಅಳದಂಗಡಿಯಲ್ಲಿ ಜೂನ್‌ 15ರಂದು ಉದ್ಘಾಟನೆಗೊಳ್ಳಲಿದೆ. https://chat.whatsapp.com/EbVKVnWB6rlHT1mWtsgbch ಅಳದಂಗಡಿಯ ಗುರುದೇವ ಸಂಕೀರ್ಣದಲ್ಲಿ ಬೆಳಗ್ಗೆ 10.30ಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಲಿದ್ದಾರೆ. ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ.ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಭದ್ರತಾ ಕೋಶ ಉದ್ಘಾಟಿಸಲಿದ್ದಾರೆ. ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಕ್ಷಿತ್‌ ಶಿವರಾಮ್‌, ಅಳದಂಗಡಿ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಸರಸ್ವತಿ, ಅಳದಂಗಡಿ ಚರ್ಚ್‌ ಧರ್ಮಗುರು ಫಾದರ್‌ ಎಲಿಯಾಸ್‌ ಡಿಸೋಜ, ನೂರುಲ್‌ ಇಸ್ಲಾಂ ಜುಮಾ ಮಸೀದಿ ಖತೀಬ ಮಹಮ್ಮದ್‌ ಮುಸ್ತಫಾ ಹಿಮಮಿ, ಶ್ರೀ ಕ್ಲಿನಿಕ್‌ ಅಳದಂಗಡಿಯ ಡಾ.ಎನ್‌.ಎಂ ತುಳುಪುಳೆ, ಅಳದಂಗಡಿ ಗುರುದೇವ ಸಂಕೀರ್ಣ ಕಟ್ಟಡದ ಮಾಲೀಕ ಸಂಜೀವ ಪೂಜಾರಿ ಕೊಡಂಗೆ, ಅಳದಂಗಡಿ ಅರಮನೆಯ ಶಿವಪ್ರಸಾದ್‌ ಅಜಿಲ, ಪ್ರಗತಿಪರ ಕೃಷಿಕ ಗಂಗಾಧರ್‌ ಮಿತ್ತಮಾರ್‌, ಅಳದಂಗಡಿ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಸುಭಾಷ್‌ಚಂದ್ರ ರೈ,…

Read More

ಮಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ವಿಶೇಷ ಕಾರ್ಯಪಡೆ ಘಟಕದ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ರಾಜ್ಯದ ಗೃಹ ಸಚಿವ ಡಾ.ಜಿ.ಪರಮೇಶ್ವರ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) ಗೆ ಆಗಮಿಸಿದ್ದು , ಈ ಸಂದರ್ಭ ಎಸ್‌ಸಿಡಿಸಿಸಿ ಬ್ಯಾಂಕಿನ ಕಾರ್ಯಸಾಧನೆಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. https://chat.whatsapp.com/EbVKVnWB6rlHT1mWtsgbch ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ.ಎನ್. ರಾಜೇಂದ್ರಕುಮಾರ್ ಇಬ್ಬರು ಸಚಿವರನ್ನು ಸ್ವಾಗತಿಸಿ, ಬ್ಯಾಂಕಿನ ಪ್ರಗತಿಯ ಕುರಿತು ಮಾಹಿತಿ ನೀಡಿದರು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕ್ ಸುಸಜ್ಜಿತ ಕಟ್ಟಡವನ್ನು ಹೊಂದಿದ್ದು , ಆಧುನಿಕ ತಂತ್ರಜ್ಞಾನದ ಮೂಲಕ 113 ಶಾಖೆಗಳಲ್ಲಿ ಗ್ರಾಹಕರಿಗೆ ಉತ್ಕೃಷ್ಟ ಸೇವೆ ನೀಡುತ್ತಿದೆ. ಬ್ಯಾಂಕಿನ ಎಲ್ಲಾ ಶಾಖೆಗಳು ಕೋರ್ ಬ್ಯಾಂಕಿಂಗ್ ಸೌಲಭ್ಯದೊಂದಿಗೆ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಉತ್ತಮ ಸೇವೆ ನೀಡುತ್ತಿದೆ. ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುವ ಸ್ವಸಹಾಯ ಸಂಘಗಳ ಕಾರ್ಯನಿರ್ವಹಣೆಯಲ್ಲೂ ಬ್ಯಾಂಕ್ ಸಮರ್ಪಕವಾಗಿ ಕಾರ್ಯನಿರ್ವಹಿಸಿ…

Read More

ನಾರಾವಿ: ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ನಾರಾವಿ, ಕುತ್ಲೂರು, ಸುಲ್ಕೇರಿ, ಕೊಕ್ರಾಡಿ, ಸಾವ್ಯ ಗ್ರಾಮದ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕಗಳನ್ನು ಇತ್ತೀಚೆಗೆ ನಾರಾವಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿತರಿಸಲಾಯಿತು. https://chat.whatsapp.com/EbVKVnWB6rlHT1mWtsgbch ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 2 ಲಕ್ಷ ರೂ. ವೆಚ್ಚದ ಉಚಿತ ಬರೆಯುವ ಪುಸ್ತಕ ಕೊಡುಗೆ ನೀಡಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ವತಿಯಿಂದ 20 ಬೆಂಚ್ ಮತ್ತು ಡೆಸ್ಕ್‌ಗಳನ್ನು ಶಾಲೆಗೆ ನೀಡಲಾಯಿತು. ಸುರಿಯ ಶ್ರೀ ಫ್ರೆಂಡ್ಸ್ ವತಿಯಿಂದ ಶಾಲೆಗೆ ಟೈಲ್ಸ್ ನೀಡಲಾಯಿತು. ಶಾಲೆಯ ಅಭಿವೃದ್ಧಿಗೆ 1.25 ಲಕ್ಷ ರೂ. ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ನೀಡಿದರು. ಕಾರ್ಯಕ್ರಮದಲ್ಲಿಶಾಸಕ ಹರೀಶ್ ಪೂಂಜ, ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್, ನಾರಾವಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜವರ್ಮ ಜೈನ್, ಮರೋಡಿ ಉಮಾಮಹೇಶ್ವರ ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ಜಯಂತ್ ಕೋಟ್ಯಾನ್, ನಾರಾವಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ…

Read More

ಕೋಟ: ಒಂದು ಊರಿನ ಸರ್ಕಾರಿ ಶಾಲೆ, ಆಸ್ಪತ್ರೆಗಳಿಗೆ ಆಯಾ ಊರಿನ ಸಹಕಾರಿ ಸಂಘಗಳು, ರೋಟರಿಯಂಥ ಸಂಸ್ಥೆಗಳು ಸೇವೆ ನೀಡಿದಲ್ಲಿ ಜನರಿಗೆ ಉಪಕಾರವಾಗುತ್ತದೆ ಎಂದು ರೋಟರಿ ಕ್ಲಬ್‌ ಅಧ್ಯಕ್ಷ ಜಿ.ತಿಮ್ಮ ಪೂಜಾರಿ ಹೇಳಿದರು. ಕೋಟ ವ್ಯವಸಾಯಿಕ ಸಹಕಾರಿ ಸಂಘ ಮತ್ತು ರೋಟರಿ ಕ್ಲಬ್‌ ಕೋಟ ಸಾಲಿಗ್ರಾಮ ಜಂಟಿಯಾಗಿ ಕೋಟ ಸಮುದಾಯ ಆರೋಗ್ಯ ಕೇಂದ್ರಕ್ಕೆ ಇಸಿಜಿ ಯಂತ್ರ ಹಸ್ತಾಂತರ ಮಾಡುವ ಕಾರ್ಯಕ್ರಮದಲ್ಲಿ ಮಾತನಾಡಿದರು. https://chat.whatsapp.com/EbVKVnWB6rlHT1mWtsgbch ಕೋಟ ವ್ಯವಸಾಯಿಕ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಡಾ.ಕೃಷ್ಣ ಕಾಂಚನ್‌ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಮಾಧವ ಪೈ ಅವರಿಗೆ ಇಸಿಜಿ ಯಂತ್ರ ಹಸ್ತಾಂತರಿಸಿದರು. ಸಹಕಾರಿ ಸಂಘದ ಉಪಾಧ್ಯಕ್ಷ ನಾಗರಾಜ ಹಂದೆ, ಸಿಇಒ ಶರತ್‌ ಕುಮಾರ್‌ ಶೆಟ್ಟಿ, ವೈದ್ಯ ಡಾ.ವಿಶ್ವನಾಥ್‌, ಸದಸ್ಯರಾದ ಅಚ್ಯುತ ಪೂಜಾರಿ, ಕುಸುಮಾ, ಬಸವ ಪೂಜಾರಿ ರಾಜೇಶ್‌ ಮೊದಲಾದವರು ಉಪಸ್ಥಿತರಿದ್ದರು. ರೋಠರಿ ಕ್ಲಬ್‌ ಮಾಜಿ ಅಧ್ಯಕ್ಷ ದೇವಪ್ಪ ಪಟಗಾರ ಕಾರ್ಯಕ್ರಮ ನಿರೂಪಿಸಿದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com

Read More