Author: admin
ಸಂಘದ ಅಧ್ಯಕ್ಷ ಜಿ.ವೆಂಕಟೇಶ್ ಭಾಸ್ಕರ್ ಶೆಣೈ ಮಾಹಿತಿ ಗಂಗೊಳ್ಳಿ: ಗಂಗೊಳ್ಳಿ ಟೌನ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ 2024-25ನೇ ಸಾಲಿನಲ್ಲಿ 677 ಕೋಟಿ ರೂ. ವ್ಯವಹಾರ ನಡೆಸಿದ್ದು 1.14 ಕೋಟಿ ರೂ. ಲಾಭ ಗಳಿಸಿದೆ. ತನ್ಮೂಲಕ ನಿರಂತರ 4ನೇ ವರ್ಷ 1 ಕೋಟಿ ರೂ.ಗೂ ಅಧಿಕ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಜಿ.ವೆಂಕಟೇಶ್ ಭಾಸ್ಕರ್ ಶೆಣೈ ತಿಳಿಸಿದ್ದಾರೆ. https://chat.whatsapp.com/EbVKVnWB6rlHT1mWtsgbch ಸಂಘದ ವಾರ್ಷಿಕ ಅವಲೋಕನ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಸಾಲಿನ ಒಟ್ಟು ವ್ಯವಹಾರಕ್ಕಿಂತ ಈ ಬಾರಿ ಶೇ.17 ಏರಿಕೆ ಕಂಡಿದೆ. ಮೂರು ಶಾಖೆಗಳನ್ನು ಹೊಂದಿರುವ ಸಂಘವು ವರ್ಷಾಂತ್ಯಕ್ಕೆ 85.56 ಕೋಟಿ ರೂ. ಠೇವಣಿ, 82 ಕೋಟಿ ರೂ. ಸದಸ್ಯರ ಸಾಲ, 2.66 ಕೋಟಿ ರೂ. ಪಾಲು ಬಂಡವಾಳ, ರೂ.5.96 ಕೋಟಿ ಲಾಭದಿಂದ ವಿಂಗಡಿಸಿದ ನಿಧಿಗಳು ರೂ.24.53 ಕೋಟಿ ಸಹಕಾರಿ ಬ್ಯಾಂಕ್‌ಗಳಲ್ಲಿ ಹೂಡಿಕೆ ಹೊಂದಿದ್ದು, ವರ್ಷಾಂತ್ಯಕ್ಕೆ 100 ಕೋಟಿ ದುಡಿಯುವ ಬಂಡವಾಳ ಹೊಂದಿರುವ ಉಡುಪಿ ಜಿಲ್ಲೆಯ ಪ್ರಥಮ ಸೌಹಾರ್ದ ಸಹಕಾರಿ…
ಸಹಕಾರ ವಲಯದ ಅಭಿವೃದ್ಧಿಗೆ ಇದೊಂದು ಐತಿಹಾಸಿಕ ಹೆಜ್ಜೆ: ಸಹಕಾರ ಸಚಿವ ಅಮಿತ್ ಷಾ ನವದೆಹಲಿ: ಲೋಕಸಭೆಯಲ್ಲಿ ಮಾರ್ಚ್ 26ರಂದು ಅನುಮೋದನೆಗೊಂಡಿದ್ದ ತ್ರಿಭುವನ್ ಸಹಕಾರಿ ವಿಶ್ವವಿದ್ಯಾಲಯ ಮಸೂದೆ -2025ನ್ನು ರಾಜ್ಯಸಭೆಯಲ್ಲೂ ಅಂಗೀಕರಿಸಲಾಗಿದೆ. ಬುಧವಾರ ರಾಜ್ಯಸಭೆಯಲ್ಲಿ ಈ ಮಸೂದೆ ಅಂಗೀಕಾರಗೊಂಡಿದ್ದು ಇದು ಸಹಕಾರಿ ವಲಯದ ಅಭಿವೃದ್ಧಿಗೆ ಐತಿಹಾಸಿಕ ಹೆಜ್ಜೆಯಾಗಿದೆ ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಷಾ ಬಣ್ಣಿಸಿದ್ದಾರೆ. https://chat.whatsapp.com/EbVKVnWB6rlHT1mWtsgbch ರಾಜ್ಯಸಭೆಯಲ್ಲಿ ಈ ಮಸೂದೆಯ ಕುರಿತ ಚರ್ಚೆಗೆ ಪ್ರತಿಕ್ರಿಯಿಸಿದ ರಾಜ್ಯ ಸಚಿವ ಮುರಳೀಧರ್ ಮೊಹೋಲ್, 2027ರ ವೇಳೆಗೆ ಭಾರತವನ್ನು ಪ್ರಪಂಚದ ಮೂರನೇ ಅತಿದೊಡ್ಡ ಆರ್ಥಿಕತೆಯನ್ನಾಗಿ ಮಾಡುವ ಪ್ರಧಾನಿ ನರೇಂದ್ರ ಮೋದಿಯವರ ದೃಷ್ಟಿಕೋನವನ್ನು ಬಿಚ್ಚಿಟ್ಟರು. ಸಹಕಾರ ವಿಶ್ವವಿದ್ಯಾಲಯ ಸ್ಥಾಪನೆಯ ಉದ್ದೇಶದಲ್ಲಿ ಬಲವಾದ ಗ್ರಾಮೀಣ ಆರ್ಥಿಕತೆಯು ಪ್ರಮುಖ ಪಾತ್ರ ವಹಿಸುತ್ತದೆ. ಜನಸಂಖ್ಯೆಯ 50%ಕ್ಕಿಂತ ಹೆಚ್ಚು ಜನ ಕೃಷಿಯಲ್ಲಿ ತೊಡಗಿಸಿಕೊಂಡಿದ್ದು, ದೇಶವು 30 ಕೋಟಿಗೂ ಹೆಚ್ಚು ಸದಸ್ಯರನ್ನು ಹೊಂದಿರುವ ಸುಮಾರು ಎಂಟು ಲಕ್ಷ ಸಹಕಾರಿ ಸಂಘಗಳನ್ನು ಹೊಂದಿವೆ. ಪ್ರತಿಯೊಂದು ಕೃಷಿ ಕುಟುಂಬವು ಸಹಕಾರಿ ವಲಯದಲ್ಲಿ ಕನಿಷ್ಠ ಒಬ್ಬ ಸದಸ್ಯರನ್ನು…
ವರದಿ ವರ್ಷ ರೂ.17366.68 ಕೋಟಿ ರೂ. ಒಟ್ಟು ವ್ಯವಹಾರ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಮಾಹಿತಿ ಮಂಗಳೂರು: ಬ್ಯಾಂಕಿಂಗ್ ಸೇವೆಯಲ್ಲಿ ದೇಶಕ್ಕೆ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) ಅಭಿವೃದ್ಧಿಯ ವಿಷಯದಲ್ಲಿ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಆರ್ಥಿಕ ವರ್ಷದಲ್ಲಿ 110.40 ಕೋಟಿ ರೂ. ಲಾಭ ಗಳಿಸಿದೆ. ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ 111 ವರ್ಷಗಳ ಸಾರ್ಥಕ ಸೇವೆ ನೀಡುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವರದಿ ವರ್ಷದಲ್ಲಿ ಅಮೋಘ ಸಾಧನೆ ಮಾಡಿದ್ದು, 31-03-2025ಕ್ಕೆ ಅಂತ್ಯವಾದ ಆರ್ಥಿಕ ವರ್ಷದಲ್ಲಿ ರೂ. 110.40 ಕೋಟಿ ಲಾಭ ಗಳಿಸುವ ಮೂಲಕ ಕಳೆದ ವರ್ಷದ ಲಾಭ (ರೂ.79.09 ಕೋಟಿ) ಕ್ಕಿಂತ ಶೇಕಡಾ 39.59 ಏರಿಕೆ ಕಂಡಿದೆ. ಇದು ಎಸ್‌ಸಿಡಿಸಿಸಿ ಬ್ಯಾಂಕ್‌ನ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆಯಾಗಿದೆ ಎಂದು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಹೇಳಿದರು. https://chat.whatsapp.com/EbVKVnWB6rlHT1mWtsgbch ಮಂಗಳೂರಿನ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು…
ಮಂಗಳೂರು: ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ 2024-25ನೇ ಸಾಲಿನಲ್ಲಿ 673.52 ಕೋಟಿ. ರೂ. ವ್ಯವಹಾರ ನಡೆಸಿದ್ದು, 5.50 ಕೋಟಿ ರೂ. ಲಾಭ ಗಳಿಸಿದೆ. ವಾರ್ಷಿಕ ವರ್ಷದಲ್ಲಿ ಶೇ.21ರಷ್ಟು ವೃದ್ಧಿಯಾಗಿದೆ ಎಂದು ಸಂಘದ ಅಧ್ಯಕ್ಷ ಎ.ಸುರೇಶ ರೈ ತಿಳಿಸಿದ್ದಾರೆ. ಸಂಘದ ಅವಲೋಕನ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಸಾಲಿನ ಒಟ್ಟು ವ್ಯವಹಾರಕ್ಕಿಂತ ಈ ಬಾರಿ ಶೇ.22 ಏರಿಕೆ ಕಂಡಿದೆ. 23 ಶಾಖೆಗಳ ಮೂಲಕ 366.55 ಕೋಟಿ ರೂ. ಠೇವಣಿ ಸಂಗ್ರಹಿಸಿ, 306.97 ಕೋಟಿ ರೂ. ಸಾಲ ಮತ್ತು ಮುಂಗಡಗಳೊಂದಿಗೆ, ಪಾಲು ಬಂಡವಾಳ 2.29 ಕೋಟಿ ರೂ, ನಿಧಿಗಳು 15.64 ಕೋಟಿ ರೂ. ಮತ್ತು ದುಡಿಯುವ ಬಂಡವಾಳ 384.50 ಕೋಟಿ ರೂ. ಹೊಂದಿದೆ ಎಂದು ತಿಳಿಸಿದರು. https://chat.whatsapp.com/EbVKVnWB6rlHT1mWtsgbch ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರ ಆಶೀರ್ವಾದ, ಸಾಧ್ವಿ ಮಾತಾನಂದಮಯಿ ಅವರ ಮಾರ್ಗದರ್ಶನದೊಂದಿಗೆ 2011ರಲ್ಲಿ ಸಂಘವು ಕಾರ್ಯಾರಂಭ ಮಾಡಿದ್ದು, ಪ್ರಸಕ್ತ ಎಲ್ಲಾ ಶಾಖೆಗಳನ್ನು ಗಣಕೀಕರಣ ಮಾಡಿದ್ದು, ಕೋರ್ ಸಿಸ್ಟಂ ಸಾಫ್ಟ್‌ವೇರ್ ಅಳವಡಿಸಿದೆ. ಪ್ರತಿವರ್ಷವೂ ಶಾಸನಬದ್ಧ…
ಭೋಪಾಲ್: ಸಹಕಾರಿ ಸಂಘಗಳ ನೋಂದಣಿ ಪ್ರಕ್ರಿಯೆಯನ್ನು ಸರಳ ಮತ್ತು ತ್ವರಿತಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನಿಟ್ಟಿರುವ ಮಧ್ಯಪ್ರದೇಶ ಸರ್ಕಾರವು ಸಹಕಾರಿ ಸಂಸ್ಥೆಗಳ ನೋಂದಣಿ ಅವಧಿಯನ್ನು 90 ದಿನಗಳಿಂದ 30 ದಿನಗಳಿಗೆ ಇಳಿಸಿದೆ. https://chat.whatsapp.com/EbVKVnWB6rlHT1mWtsgbch ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ.ಮೋಹನ್ ಯಾದವ್ ಸಹಕಾರಿ ಕಾಯ್ದೆಯಲ್ಲಿ ಈ ಮಹತ್ವದ ಬದಲಾವಣೆಯನ್ನು ಘೋಷಿಸಿದ್ದು, ಇದರಿಂದ ಹೊಸ ಸಹಕಾರಿ ಸಂಘಗಳ ಸ್ಥಾಪನೆಗೆ ಸಾಕಷ್ಟು ಬಲ ಬರಲಿದೆ. ನೋಂದಣಿ ಪ್ರಕ್ರಿಯೆಯನ್ನು ತ್ವರಿತಗೊಳಿಸುವ ಗುರಿಯನ್ನು ಈ ತಿದ್ದುಪಡಿ ಹೊಂದಿದ್ದು, ಇದು ಹೊಸ ಮತ್ತು ಅಸ್ತಿತ್ವದಲ್ಲಿರುವ ಗುಂಪುಗಳಿಗೆ ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡಲು ಕಾರಣವಾಗಲಿದೆ. ನೋಂದಣಿ ಪ್ರಕ್ರಿಯೆಯ ಕಾರ್ಯವಿಧಾನವನ್ನು ಸುವ್ಯವಸ್ಥಿತಗೊಳಿಸುವ ಮೂಲಕ, ಗ್ರಾಮೀಣ ಅಭಿವೃದ್ಧಿ ಮತ್ತು ಆರ್ಥಿಕ ಸಬಲೀಕರಣಕ್ಕೆ ನಿರ್ಣಾಯಕವಾದ ಸಹಕಾರಿ ಸಂಸ್ಥೆಗಳ ಬೆಳವಣಿಗೆಯನ್ನು ಉತ್ತೇಜಿಸಲು ರಾಜ್ಯ ಸರ್ಕಾರ ಮುಂದಾಗಿದೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com
ಹಳೆಯಂಗಡಿ: ಸದಸ್ಯರ ಪ್ರೋತ್ಸಾಹ, ಗ್ರಾಹಕರ ಸಹಕಾರ, ಆಡಳಿತ ವರ್ಗದವರ ಮಾರ್ಗದರ್ಶನ ಹಾಗೂ ಸಿಬ್ಬಂದಿಗಳ ಕಾರ್ಯಶ್ರಮತೆಯಿಂದಾಗಿ 2024-25ನೇ ಸಾಲಿನಲ್ಲಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಲಿ. ಹಳೆಯಂಗಡಿ 349.77 ಕೋಟಿ ರೂ. ವ್ಯವಹಾರ ನಡೆಸಿದೆ ಎಂದು ಸೊಸೈಟಿ ಅಧ್ಯಕ್ಷ ಎಚ್.ವಸಂತ ಬೆರ್ನಾಡ್ ಹೇಳಿದ್ದಾರೆ. https://chat.whatsapp.com/EbVKVnWB6rlHT1mWtsgbch ಸಂಸ್ಥೆಯ ಅವಲೋಕನ ಸಭೆಯಲ್ಲಿ ಮಾಹಿತಿ ನೀಡಿದ ಅವರು, 2021 ರಲ್ಲಿ ಪ್ರಾರಂಭವಾದ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯು ಈಗಾಗಲೇ ಮೂರು ಶಾಖೆಯನ್ನು ಹೊಂದಿದ್ದು, ವರದಿ ಸಾಲಿನಲ್ಲಿ 349.77 ಕೋಟಿ ರೂ. ವ್ಯವಹಾರ ದಾಖಲಿಸಿದೆ. ಕಳೆದ ಸಾಲಿನ ವ್ಯವಹಾರವನ್ನು ತುಲನೆ ಮಾಡಿದರೆ ಶೇ.70.45 ಏರಿಕೆ ದಾಖಲಿಸಿದೆ. ಪ್ರಸ್ತುತ 29.36 ಕೋಟಿ ರೂ. ಠೇವಣಿ, 24.74 ಕೋಟಿ ರೂ. ಸಾಲ ಮತ್ತು ಮುಂಗಡಗಳೊಂದಿಗೆ, ರೂ. 96.44 ಲಕ್ಷ ಪಾಲು ಬಂಡವಾಳ, 57.05 ಲಕ್ಷ ನಿಧಿಗಳು, 30.90 ಕೋಟಿ ದುಡಿಯುವ ಬಂಡವಾಳ ಹೊಂದಿದೆ. 2024-25ನೇ ಸಾಲಿನಲ್ಲಿ ಉತ್ತಮ ಲಾಭಾಂಶ ಗಳಿಸಿದ್ದು, ಸದಸ್ಯರಿಗೆ ಉತ್ತಮ ರೀತಿಯ ಪಾಲು ಮುನಾಫೆಯನ್ನು ಹಂಚುವ ಗುರಿ ಹೊಂದಿದೆ…
ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ 43ನೇ ಘಟಿಕೋತ್ಸವ ಮಾರ್ಚ್ 29ರಂದು ಮಂಗಳೂರು ವಿಶ್ವವಿದ್ಯಾಲಯದ ಮಂಗಳಾ ಸಭಾಂಗಣದಲ್ಲಿ ನಡೆಯಲಿದ್ದು ಈ ವೇಳೆ ಸಹಕಾರ ರತ್ನ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುವುದು. https://chat.whatsapp.com/EbVKVnWB6rlHT1mWtsgbch ಕೊಣಾಜೆಯ ಮಂಗಳೂರು ವಿವಿ ಆಡಳಿತ ಸೌಧದಲ್ಲಿ ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ವಿವಿ ಕುಲಪತಿ ಪ್ರೊ.ಧರ್ಮ ಈ ಬಗ್ಗೆ ಮಾಹಿತಿ ನೀಡಿ, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್, ಉದ್ಯಮಿಗಳಾದ ರೋಹನ್ ಮೊಂತೇರೊ ಹಾಗೂ ಕನ್ಯಾನ ಸದಾಶಿವ ಶೆಟ್ಟಿ ಮಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್ ಪದವಿ ಪಡೆಯಲಿದ್ದಾರೆ ಎಂದು ಪ್ರಕಟಿಸಿದರು. ಘಟಿಕೋತ್ಸವದಲ್ಲಿ ಭಾರತೀಯ ವಿಶ್ವವಿದ್ಯಾಲಯಗಳ ಸಂಘದ ಉಪಾಧ್ಯಕ್ಷ ಹಾಗೂ ಸೋಮಿಯಾ ವಿದ್ಯಾವಿಹಾರ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವಿ.ಎನ್.ರಾಜಶೇಖರನ್ ಪಿಳ್ಳೆ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ರಾಜ್ಯಪಾಲ ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿ ಥಾವರಚಂದ್ ಗೆಹ್ಲೋಟ್ ಅಧ್ಯಕ್ಷತೆ ವಹಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಿದ್ದಾರೆ ಎಂದು ಹೇಳಿದರು. ಸಹಕಾರ ಕ್ಷೇತ್ರದಲ್ಲಿ ಸುಮಾರು 40…
ಸಹಕಾರಿ ಸಚಿವ ಅಮಿತ್ ಷಾ ಸುಳಿವು ನವದೆಹಲಿ: ಕೇಂದ್ರ ಸರ್ಕಾರವು ಶೀಘ್ರದಲ್ಲೇ ಓಲಾ, ಊಬರ್‌ನಂತೆ ಕೋ ಆಪರೇಟಿವ್ ಮಾದರಿಯಲ್ಲಿ ದೇಶಾದ್ಯಂತ ಟ್ಯಾಕ್ಸಿ ಸೇವೆ ಪ್ರಾರಂಭಿಸಲಿದೆ ಎಂದು ಕೇಂದ್ರ ಸಹಜಕಾರ ಸಚಿವ ಅಮಿತ್ ಷಾ ಗುರುವಾರ ಸಂಸತ್‌ನಲ್ಲಿ ಘೋಷಿಸಿದ್ದಾರೆ. ಉಬರ್ ಮತ್ತು ಓಲಾಗೆ ಪರ್ಯಾಯವಾಗಿ ಸಹಕಾರಿ ಆಧಾರಿತ ವ್ಯವಸ್ತೆಯನ್ನು ಸರ್ಕಾರ ಪ್ರಾರಂಭಿಸಲಿದೆ. ಪ್ರಧಾನಿ ನರೇಂದ್ರ ಮೋದಿಯವರ ‘ಸಹಕಾರ ಸೇ ಸಮೃದ್ಧಿ’ (ಸಹಕಾರದ ಮೂಲಕ ಸಮೃದ್ಧಿ) ಎಂಬ ದೃಷ್ಟಿಕೋನ ಕೇವಲ ಘೋಷಣೆಯಾಗಿ ಉಳಿದಿಲ್ಲ. ಅದನ್ನು ಒಂದೊಂದಾಗಿ ಅನುಷ್ಠಾನಕ್ಕೆ ತರಲಾಗುತ್ತಿದೆ. ಕಳೆದ ಮೂರುವರೆ ವರ್ಷಗಳಲ್ಲಿ, ಸಹಕಾರ ಸಚಿವಾಲಯವು ಅದನ್ನು ಸಹಕಾರದಿಂದ ಸಮೃದ್ಧಿ ಎಂಬ ಧ್ಯೇಯವಾಕ್ಯವನ್ನು ನನಸಾಗಿಸಲು ಅವಿಶ್ರಾಂತವಾಗಿ ಶ್ರಮಿಸಿದೆ ಎಂದು ಹೇಳಿದರು. https://chat.whatsapp.com/EbVKVnWB6rlHT1mWtsgbch ಮುಂಬರುವ ದಿನಗಳಲ್ಲಿ, ದ್ವಿಚಕ್ರ ವಾಹನ ಟ್ಯಾಕ್ಸಿಗಳು, ಆಟೋರಿಕ್ಷಾಗಳು ಮತ್ತು ನಾಲ್ಕು ಚಕ್ರಗಳ ವಾಹನಗಳನ್ನು ಒಳಗೊಂಡಂತೆ ದೊಡ್ಡ ಪ್ರಮಾಣದ ಸಹಕಾರಿ ಟ್ಯಾಕ್ಸಿ ಸೇವೆಯನ್ನು ಪರಿಚಯಿಸಲಾಗುವುದು ಎಂದು ಹೇಳಿದ ಅಮಿತ್ ಷಾ, ಖಾಸಗಿ ರೈಡ್-ಹೇಲಿಂಗ್ ಕಂಪನಿಗಳಿಗಿಂತ ಭಿನ್ನವಾಗಿ, ಲಾಭವು ಮಾಲೀಕರಿಗೆ ಹೋಗುತ್ತದೆ, ಈ ಮಾದರಿಯ…
ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಸಹಕಾರಿ ಧುರೀಣ, ಜಾನಪದ ಕಲಾವಿದ, ಶಿಕಾರಿಪುರ ಹೊಸಮೇದಾರಕೇರಿ ಶ್ರೀ ಕನಕ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸಿ.ಆರ್ ಪರಶುರಾಮ್ ಚೌಟಗಿ ಅವರಿಗೆ ಕೆಂಗಲ್ ಹನುಮಂತಯ್ಯ ಸದ್ಭಾವನಾ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. https://chat.whatsapp.com/EbVKVnWB6rlHT1mWtsgbch ಇತ್ತೀಚೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸರ್ವೇಜನ ಆರ್ಟ್ ಮತ್ತು ಕಲ್ಚರಲ್ ಟ್ರಸ್ಟ್ ವತಿಯಿಂದ ನಡೆದ ಸಮಾರಂಭದಲ್ಲಿ ಪರಶುರಾಮ್ ಚೌಟಗಿ ಅವರ ಸಾಮಾಜಿಕ ಸೇವೆಯನ್ನು ಗುರುತಿಸಿ ಈ ಪುರಸ್ಕಾರ ನೀಡಲಾಯಿತು. ಶಿವಮೊಗ್ಗ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಸೂಗೂರು, ಪತಂಜಲಿ ಯೋಗ ಮತ್ತು ಪ್ರಕೃತಿ ಸಂಸ್ಥೆ ಶಿವಮೊಗ್ಗ, ಪತಂಜಲಿ ಕರ್ನಾಟಕ ಜಾನಪದ ಕಲಾಕೇಂದ್ರ ಶ್ರೀ ಬಸವೇಶ್ವರ ವಿದ್ಯಾಸಂಸ್ಥೆ ಸೂಗೂರು, ಸಂಜೀವಿನಿ ಸ್ವಸಹಾಯ ಸಂಘಗಳ ಒಕ್ಕೂಟ ಶ್ರೀ ಕ್ಷೇತ್ರ ಧರ್ಮಸ್ಥಳ ಸ್ವಸಹಾಯ ಸಂಘಗಳ ಒಕ್ಕೂಟ, ಪತಂಜಲಿ ಸೂಗೂರು ಶಾಖೆ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳು ಸಮಸ್ತ ಗ್ರಾಮಸ್ಥರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಾನಪದ ಕಲಾಮೇಳದಲ್ಲಿ ಜಾನಪದ…
ಬೆಂಗಳೂರು: ನಂದಿನಿ ಪ್ಯಾಕೆಟ್ ಹಾಲಿನ ದರವನ್ನು ರಾಜ್ಯ ಸರ್ಕಾರ ಪ್ರತಿ ಲೀಟರ್‌ಗೆ 4 ರೂಪಾಯಿ ಹೆಚ್ಚಳ ಮಾಡಿದ್ದು, ರಾಜ್ಯ ಸಚಿವ ಸಂಪುಟ ಇದಕ್ಕೆ ಅನುಮೋದನೆ ನೀಡಿದೆ. ನಂದಿನಿ ಹಾಲಿನ ದರ ಹೆಚ್ಚಿಸಿ ಇನ್ನೂ ವರ್ಷವಾಗಿಲ್ಲ. ಆಗಲೇ ದರ ಏರಿಕೆಗೆ ಪ್ರಸ್ತಾಪ ಬಂದಿತ್ತು. ಕೆಎಂಎಫ್ ಅಧಿಕಾರಿಗಳ ಜೊತೆ ಮೂರು ದಿನಗಳ ಹಿಂದೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಹಾಲಿನ ದರ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿರಲಿಲ್ಲ. ಆದರೆ ಇದೀಗ ನಂದಿನ ಹಾಲಿನ ದರ ಏರಿಕೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. https://chat.whatsapp.com/EbVKVnWB6rlHT1mWtsgbch ಬೆಲೆ ಹೆಚ್ಚಳದ ಬಳಿಕ ನೀಲಿ ಪ್ಯಾಕೆಟ್ ಹಾಲು – 44 ರೂ. ನಿಂದ 48 ರೂ., ಆರೆಂಜ್ ಪ್ಯಾಕೆಟ್ ಹಾಲು – 54 ರೂ. ನಿಂದ 58 ರೂ., ಸಮೃದ್ಧಿ ಹಾಲಿನ ಪ್ಯಾಕೆಟ್ 56 ರೂ. ನಿಂದ 60 ರೂ., ಗ್ರೀನ್ ಸ್ಪೇಷಲ್ 54 ರೂ. ನಿಂದ 58 ರೂ., ನಾರ್ಮಲ್ ಗ್ರೀನ್ 52 ರೂ. ನಿಂದ 56 ರೂ. ಆಗಲಿದೆ.…
