Author: admin

ಮಂಗಳೂರು: ಕರ್ನಾಟಕ ರಾಜ್ಯ ಹಾಲು ಉತ್ಪಾದಕರ ಮಹಾಮಂಡಳದ ನಿರ್ದೇಶಕರಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಆಯ್ಕೆಯಾಗಿದ್ದಾರೆ. https://chat.whatsapp.com/EbVKVnWB6rlHT1mWtsgbch ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾಗಿರುವ ದೇವಿಪ್ರಸಾದ್ ಶೆಟ್ಟಿ ಅವರನ್ನು ಕಳೆದ ಮಂಗಳವಾರ ನಡೆದ ಒಕ್ಕೂಟದ ಆಡಳಿತ ಮಂಡಳಿ ಸಭೆಯಲ್ಲಿ ಕೆಎಂಎಫ್ ನಿರ್ದೇಶಕರಾಗಿ ಆಯ್ಕೆ ಮಾಡಲಾಯಿತು. ಸಹಕಾರ ರತ್ನ ಡಾ| ಎಂ.ಎನ್.ರಾಜೇಂದ್ರ ಕುಮಾರ್ ಅವರ ಶಿಫಾರಸಿನ ಮೇರೆಗೆ ಈ ಆಯ್ಕೆ ನಡೆದಿದೆ. ಬೆಳಪು ದೇವಿಪ್ರಸಾದ್ ಶೆಟ್ಟಿಯವರು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕ್‌ನ ನಿರ್ದೇಶಕರಾಗಿದ್ದಾರೆ. ಬೆಳಪು ವ್ಯವಸಾಯ ಸೇವಾ ಸಹಕಾರ ಸಂಘ, ಬೆಳಪು ಹಾಲು ಉತ್ಪಾದಕರ ಸಹಕಾರ ಸಂಘ ಹಾಗೂ ಬೆಳವು ಗ್ರಾಪಂ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಇವರನ್ನು ದ.ಕ. ಸಹಕಾರ ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ಆಡಳಿತ ಮಂಡಳಿ ಸಭೆಯಲ್ಲಿ ಅಭಿನಂದಿಸಿದರು. ಒಕ್ಕೂಟದ ಉಪಾಧ್ಯಕ್ಷ ಉದಯ ಎಸ್.ಕೋಟ್ಯಾನ್, ನಿರ್ದೇಶಕರಾದ ಎಸ್.ಪ್ರಕಾಶ್ಚಂದ್ರ ಶೆಟ್ಟಿ ಸುಧಾಕರ್…

Read More

ಬೆಂಗಳೂರು: ವಸತಿ ಫ್ಲ್ಯಾಟ್‌ಗಳಿರುವ ಅಪಾರ್ಟ್‌ಮೆಂಟ್‌ನ ಮಾಲೀಕರ ಸಂಘವನ್ನು ಕರ್ನಾಟಕ ಅಪಾರ್ಟ್‌ಮೆಂಟ್‌ ಓನರ್‌ಶಿಪ್‌ ಕಾಯ್ದೆ(ಕೆಒಎ)ಯಡಿಯೇ ನೋಂದಾಯಿಸಬೇಕೆಂದು ಪುನರುಚ್ಚರಿಸಿದ ಕರ್ನಾಟಕ ಹೈಕೋರ್ಟ್‌, ಕರ್ನಾಟಕ ಸಹಕಾರ ಸೊಸೈಟಿಗಳ ಕಾಯ್ದೆಯಡಿ ಮಾಡಿದ್ದ ನೋಂದಣಿಯನ್ನು ರದ್ದು ಮಾಡಿದೆ. https://chat.whatsapp.com/EbVKVnWB6rlHT1mWtsgbch ಯಲಹಂಕ ವ್ಯಾಪ್ತಿಯ ಅವಲಹಳ್ಳಿಯ ರಾಮ್‌ಕಿ ಒನ್‌ ನಾರ್ತ್‌ ಅಪಾರ್ಟ್‌ಮೆಂಟ್‌ನ ಮಾಲೀಕರ ಸಂಘದ ರೇಖಾ ಕಣ್ಣನ್‌ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಿದ ನ್ಯಾ.ಕೆ.ಎಸ್‌.ಹೇಮಲೇಖಾ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಕರ್ನಾಟಕ ಸಹಕಾರ ಸೊಸೈಟಿಗಳ ಕಾಯ್ದೆಯಡಿ 2023ರ ಅ.19ರಂದು ಸೊಸೈಟಿಯನ್ನು ನೋಂದಣಿ ಮಾಡಿಕೊಂಡು ಡೆಪ್ಯುಟಿ ರಿಜಿಸ್ಟ್ರಾರ್‌ ಹೊರಡಿಸಿದ್ದ ಆದೇಶವನ್ನು ರದ್ದು ಮಾಡಿದೆ. ಜೊತೆಗೆ ರಾಮ್‌ಕಿ ನಾರ್ತ್‌ ಹೆಸರಿನಲ್ಲಿ ಸಂಘವನ್ನು ಕರ್ನಾಟಕ ಅಪಾರ್ಟ್‌ಮೆಂಟ್‌ ಓನರ್‌ಶಿಪ್‌ ಕಾಯ್ದೆ (ಕೆಎಒ)ಯಡಿ ನೋಂದಣಿ ಮಾಡಿಸುವಂತೆ ಆದೇಶ ನೀಡಿದೆ. ದಾಖಲೆಗಳನ್ನು ಪರಿಶೀಲಿಸಿದ ಬಳಿಕ ನ್ಯಾಯಪೀಠ, ಸೇಲ್‌ ಡೀಡ್‌ ಜಾರಿಯಾಗುವ ಮುನ್ನ ಅಪಾರ್ಟ್‌ಮೆಂಟ್‌ ಮಾಲೀಕರು ಐದನೇ ಪ್ರತಿವಾದಿ ಬಿಲ್ಡರ್‌ ಪರ ಡೀಡ್‌ ಆಫ್‌ ಡಿಕ್ಲರೇಷನ್‌ ಕಮ್‌ ಅಂಡರ್‌ಟೇಕಿಂಗ್‌ ಮಾಡಿಕೊಂಡಿದ್ದರು. ಅದರಂತೆ ಡೀಡ್‌ ಆಫ್‌ ಡಿಕ್ಲರೇಷನ್‌ಗೆ ಸಹಿ ಮಾಡಿ…

Read More

ಬೆಂಗಳೂರು: ಸಹಕಾರ ವಲಯದಲ್ಲಿ ಮಹತ್ವದ ಬದಲಾವಣೆ ತರಲು ರಾಜ್ಯ ಸರ್ಕಾರ ರೂಪಿಸಿದ್ದ ಎರಡು ವಿಧೇಯಕಗಳಿಗೆ ಅಂಕಿತ ಹಾಕಲು ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಇನ್ನೂ ಒಪ್ಪಿಗೆ ಸೂಚಿಸಿಲ್ಲ. ಆ ಎರಡೂ ವಿಧೇಯಕಗಳನ್ನು ಅವರು ರಾಷ್ಟ್ರಪತಿಗಳ ಪರಿಶೀಲನೆಗೆ ಕಳುಹಿಸಿದ್ದು ಪರಾಮರ್ಶೆ ನಡೆಸುವಂತೆ ಶಿಫಾರಸು ಮಾಡಿದ್ದಾರೆ. https://chat.whatsapp.com/EbVKVnWB6rlHT1mWtsgbch ರಾಜ್ಯ ಸರ್ಕಾರವು ಸಹಕಾರಿ ವಲಯದಲ್ಲಿ ಬದಲಾವಣೆ ತರಲು ರೂಪಿಸಿದ್ದ ವಿಧೇಯಕಗಳಿಗೆ ಸಹಿ ಹಾಕಲು ನಿರಾಕರಿಸಿರುವ ರಾಜ್ಯಪಾಲರು, ಸಹಕಾರ ಚುನಾವಣಾ ಪ್ರಾಧಿಕಾರ ರದ್ದುಪಡಿಸಿ, ಸರ್ಕಾರದ ನಾಮನಿರ್ದೇಶನ ಹೆಚ್ಚಿಸುವ ಅಂಶಗಳಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕ್ರಮಗಳು ಸಹಕಾರಿ ತತ್ವಗಳಿಗೆ ವಿರುದ್ಧವಾಗಿದ್ದು, ಸ್ವಾಯತ್ತತೆಗೆ ಧಕ್ಕೆ ತರುತ್ತವೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕಳೆದ ಮಳೆಗಾಲದ ಅಧಿವೇಶನದಲ್ಲಿ ವಿಧಾನ ಮಂಡಲದಲ್ಲಿ ಅಂಗೀಕರಿಸಲಾಗಿದ್ದ ‘ಕರ್ನಾಟಕ ಸಹಕಾರ ಸೊಸೈಟಿಗಳ (ತಿದ್ದುಪಡಿ) ವಿಧೇಯಕ -2024’ ಹಾಗೂ ‘ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕ -2024’ ಅನ್ನು ರಾಷ್ಟ್ರಪತಿಗಳ ಪರಾಮರ್ಶೆಗೆ ಶಿಫಾರಸು ಮಾಡಿ ರಾಜ್ಯಪಾಲರು ಕೇಂದ್ರಕ್ಕೆ ರವಾನಿಸಿದ್ದಾರೆ. ಸಹಕಾರ ಸಂಘಗಳ ಚುನಾವಣೆ ನಡೆಸುವ ಜವಾಬ್ದಾರಿ ಹೊತ್ತ ‘ಸಹಕಾರ ಚುನಾವಣಾ ಪ್ರಾಧಿಕಾರ’ವನ್ನು…

Read More

ಬೆಂಗಳೂರು: ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ, ಕನ್ನಡಾಂಬೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘ ಬೆಂಗಳೂರು ವತಿಯಿಂದ ನೀಡಲಾಗುವ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನದ ನೊಬೆಲ್‌ ಕನ್ನಡಿಗ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಸಹಕಾರಿ ಧುರೀಣ ಡಾ.ಬಿ.ಡಿ.ಭೂಕಾಂತ್‌ ಅವರು ಆಯ್ಕೆಯಾಗಿದ್ದಾರೆ. https://chat.whatsapp.com/EbVKVnWB6rlHT1mWtsgbch ಡಾ.ಬಿ.ಡಿ ಭೂಕಾಂತ್‌ ಅವರು ಕರ್ನಾಟಕ ರಾಜ್ಯ ಸಹಕಾರ ತೋಟಗಾರಿಕೆ ಮತ್ತು ಮಾರಾಟ ಮಹಾಮಂಡಲದ ಅಧ್ಯಕ್ಷರಾಗಿ, ನವದೆಹಲಿಯ ನ್ಯಾಶನಲ್‌ ಫಿಲ್ಮ್‌ ಆಂಡ್‌ ಫೈನ್‌ ಆರ್ಟ್ಸ್‌ ಕೋ ಆಪರೇಟಿವ್‌ ಲಿಮಿಟೆಡ್‌(ನ್ಯಾಕ್‌ ಕ್ಯಾಬ್‌)ನ ನಿರ್ದೇಶಕರಾಗಿದ್ದಾರೆ. ಜೂನ್‌ ೭ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದ ನಯನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com

Read More

ಅಡಕೆ ಉತ್ಪನ್ನದ ರಫ್ತು ಉದ್ಯಮದ ಮೇಲೆ ಕರಿಛಾಯೆ ಮಂಗಳೂರು: ಕೃಷಿ ಪ್ರಧಾನ ಅದರಲ್ಲೂ ದಕಿಷಣ ಕನ್ನಡ, ಉಡುಪಿ, ಮಲೆನಾಡು ಭಾಗದ ಪ್ರಮುಖ ಕೃಷಿ ಬೆಳೆಯಾಗಿರುವ ಅಡಕೆಯ ಬೆಲೆ ಏರುಗತಿಯಲ್ಲಿದೆ. 450-500 ರೂ. ಆಸುಪಾಸಿನಲ್ಲಿರುವ ಅಡಕೆಯ ಉಪ ಉತ್ಪನ್ನಗಳಿಗೂ ಉತ್ತಮ ದಾರಣೆ ಇದೆ. ಅಡಕೆ ಹಾಳೆ ತಟ್ಟೆಯಂತ ಉತ್ಪನ್ನಗಳು ವಿದೇಶಕ್ಕೂ ರಫ್ತಾಗುತ್ತಿತ್ತು. ಆದರೆ ಈಗ ಅಮೆರಿಕಾದಲ್ಲಿ ಅಡಕೆ ಹಾಳೆ ತಟ್ಟೆಯ ಬಳಕೆಗೆ ನಿಷೇಧ ಹೇರಲಾಗುತ್ತಿದೆ ಎನ್ನಲಾಗುತ್ತಿದೆ. https://chat.whatsapp.com/EbVKVnWB6rlHT1mWtsgbch ಮೂಲಗಳ ಪ್ರಕಾರ ಅಮೆರಿಕಾದ ಆಹಾರ ಮತ್ತು ಔಷಧ ಆಡಳಿತ ಸಮಿತಿ (ಎಫ್‌ಡಿಎ) ಭಾರತದಿಂದ ರಫ್ತಾಗುತ್ತಿರುವ ಅಡಕೆ ಹಾಳೆಗಳ ಬಳಕೆಯ ಮೇಲೆ ನಿಷೇಧ ಹೇರುತ್ತಿದೆ. ಇದರಿಂದ ಅಡಕೆ ಹಾಳೆ ತಟ್ಟೆಯ ರಫ್ತು ವಿನಿಮಯದ ಮೇಲೆ ಪೆಟ್ಟು ಬೀಳುತ್ತಿದೆ. ಅಡಕೆ ಹಾಳೆ ತಟ್ಟೆಯನ್ನು ಅಡಕೆಯಂತೆ ಯಾರೂ ತಿನ್ನುವುದಿಲ್ಲ. ಅದರ ಬಳಕೆ ಊಟ, ತಿಂಡಿ ತೆಗೆದುಕೊಳ್ಳಲು ಮಾತ್ರ. ಪ್ಲಾಸ್ಟಿಕ್‌ನಂತೆ ಪರಿಸರಕ್ಕೆ ಯಾವುದೇ ಹಾನಿ ಮಾಡದೆ ಪರಿಸರ ಪೂರಕವಾಗಿ ಬಳಕೆಯಾಗುತ್ತಿದ್ದರೂ ಅಡಕೆ ಹಾನಿಕಾರಕ ಎಂಬ ಅಪವಾದ ಹೊರಿಸಿ ಅಮೆರಿಕಾದಂಥ ಮುಂದುವರಿದ…

Read More

ಸದಸ್ಯರ ಕಲ್ಯಾಣಕ್ಕೆ ಸಾಂತ್ವನ, ಚೇತನಾ, ಸುಭದ್ರಾ ಯೋಜನೆಗಳ ಬಿಡುಗಡೆ ವರ್ಷಪೂರ್ತಿ ನಡೆಯಲಿದೆ ಸ್ವಚ್ಛ ಭಾರತ್‌ (ಅವೇಕ್‌ ಕುಡ್ಲ) ಕಾರ್ಯಕ್ರಮ ಮಂಗಳೂರು: ವಿಶ್ವಕರ್ಮ ಸಹಕಾರ ಬ್ಯಾಂಕ್‌ ಪ್ರಸಕ್ತ ವರ್ಷ ಸ್ವರ್ಣ ಜಯಂತಿ ವರ್ಷದ ಸ್ವರ್ಣ ಸಂಭ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವ ಯೋಜನೆ ಹಾಕಿಕೊಂಡಿದ್ದು, ಮೇ 11, 2025ರಿಂದ ಮುಂದಿನ ಮೇ 11, 2026ವರೆಗೆ ಇಡೀ ವರ್ಷ ಸದಸ್ಯರ ಕಲ್ಯಾಣ ಕಾರ್ಯಕ್ರಮಗಳು, ಮೌಲ್ಯವರ್ಧಿತ ಗ್ರಾಹಕ ಸೇವೆಗಳು ಹಾಗೂ ರಚನಾತ್ಮಕ ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. https://chat.whatsapp.com/EbVKVnWB6rlHT1mWtsgbch ಭಾನುವಾರ ಮಂಗಳೂರಿನ ಕುದ್ಮುಲ್‌ ರಂಗರಾವ್‌ ಪುರಭವನದಲ್ಲಿ ನಡೆದ ೪೯ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಸ್ವರ್ಣ ಜಯಂತಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವ ಸಂದರ್ಭ ನಾಲ್ಕು ಯೋಜನಗೆಳನ್ನು ಅನಾವರಣಗೊಳಿಸಲಾಗಿದೆ. ಈ ಸಂದರ್ಭದಲ್ಲಿ ವಿಶ್ವಕರ್ಮ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಸ್‌ ಆರ್‌ ಹರೀಶ್‌ ಆಚಾರ್ಯ, ಎಸ್‌ಸಿಡಿಸಿಸಿ  ಬ್ಯಾಂಕ್‌ ಅಧ್ಯಕ್ಷರಾದ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌, ಮಂಗಳೂರು ದಕ್ಷಿಣ ಶಾಸಕರಾದ ಡಿ.ವೇದವ್ಯಾಸ ಕಾಮತ್‌,  ಬ್ಯಾಂಕಿನ ಸ್ಥಾಪಕ ಸದಸ್ಯರಾಗಿದ್ದ ಮುನಿಯಾಲು ದಾಮೋದರ ಆಚಾರ್ಯ, ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌…

Read More

ಮಂಗಳೂರು: ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ ಆಪರೇಟಿವ್ ಸೊಸೈಟಿ ವತಿಯಿಂದ 2024-25ರ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.75ಕ್ಕಿಂತ ಹೆಚ್ಚು ಅಂಕ ಗಳಿಸಿದ “ ಎ“ ವರ್ಗ ಮತ್ತು “ ಸಿ“ ವರ್ಗದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳ ಪೋಷಕರು  31.05.2024ರೊಳಗೆ ನಮ್ಮ ಸಂಘದ ಸದಸ್ಯರಾಗಿದ್ದಲ್ಲಿ ಮಾತ್ರ ತಮ್ಮ ಹತ್ತಿರದ ಶಾಖೆಯಿಂದ ಅರ್ಜಿ ಪಡೆದುಕೊಂಡು 30-06-2025ರೊಳಗೆ ತಲುಪಿಸಬೇಕಾಗಿ ಕೋರಲಾಗಿದೆ. https://chat.whatsapp.com/EbVKVnWB6rlHT1mWtsgbch ಹೆಚ್ಚಿನ ಮಾಹಿತಿಗೆ: ಪ್ರಧಾನ ವ್ಯವಸ್ಥಾಪಕರು, ಎಸ್. ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್‌ ಕೋ ಆಪರೇಟಿವ್ ಸೊಸೈಟಿ ಲಿ., “ವಿಶ್ವಸೌಧ”, ರಾಷ್ಟ್ರೀಯ ಹೆದ್ದಾರಿ -66, ಕೊಟ್ಟಾರಚೌಕಿ, ಅಂಚೆ: ಅಶೋಕ ನಗರ, ಮಂಗಳೂರು -575006(ದ.ಕ.) ದೂರವಾಣಿ: 0824-2451320 ಸಂಪರ್ಕಿಸಬಹುದು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com

Read More

ಅನಾಥಾಶ್ರಮ, ಟ್ರಸ್ಟ್‌ಗೆ ದೇಣಿಗೆ ಹಸ್ತಾಂತರ, ಸಿಎ ತೇರ್ಗಡೆಯಾದವರಿಗೆ ಸನ್ಮಾನ ಮಂಗಳೂರು: ಎಂಸಿ.ಸಿ.ಬ್ಯಾಂಕಿನ 113ನೇ ಸಂಸ್ಥಾಪಕರ ದಿನಾಚರಣೆಯನ್ನು ಶನಿವಾರ ಎಂ.ಸಿ.ಸಿ. ಬ್ಯಾಂಕಿನ ಆಡಳಿತ ಕಛೇರಿಯ ಅವರಣದಲ್ಲಿ ಆಚರಿಸಲಾಯಿತು.ಬ್ಯಾಂಕಿನ ಇತಿಹಾಸ ಮತ್ತು ಪ್ರಗತಿಯ ಕುರಿತ ಸಾಕ್ಷಚಿತ್ರವನ್ನು ಈ ಸಂದರ್ಭ ಪ್ರಸ್ತುತಪಡಿಸಲಾಯಿತು. ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಡುಪಿ ಧರ್ಮಪ್ರಾಂತ್ಯದ ಪಿಆರ್‌ಒ ಫಾ|ಡೆನಿಸ್ ಡೇಸಾ, ಅತಿಥಿಗಳಾಗಿ ಮಂಗಳೂರು ಧರ್ಮಪ್ರಾಂತ್ಯದ ಪ್ರಾಂತೀಯ ಸುಪೀರಿಯರ್‌ ಸಿ|ಕ್ಲಾರಾ ಮಿನೇಜಸ್, ಯುಎಫ್‌ಸಿ, ಪ್ರಜ್ಞಾ ಕೌನ್ಸೆಲಿಂಗ್ ಸೆಂಟರ್‌ನ ನಿರ್ದೇಶಕಿ ಪ್ರೊ.ಹಿಲ್ಡಾ ರಾಯಪ್ಪನ್, ಮಂಗಳೂರು ಕೊಂಕಣ್ಸ್ ದುಬಾಯ್, ಅಧ್ಯಕ್ಷ ಸ್ಟೀಫನ್ ಮಿನೇಜಸ್ ಮತ್ತು ಬ್ಯಾಂಕಿನ ಮಹಾಪ್ರಬಂಧಕ ಸುನೀಲ್ ಮಿನೇಜಸ್ ಹಾಜರಿದ್ದರು. https://chat.whatsapp.com/EbVKVnWB6rlHT1mWtsgbch ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ಪ್ರಾಸ್ತಾವಿಕ ಮಾತನಾಡಿ, ಎಂ.ಸಿ.ಸಿ. ಬ್ಯಾಂಕಿನ ರೂಪಾಂತರ, ಸೇವೆ ಮತ್ತು ಕಾರ್ಯಕ್ಷಮತೆಯಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳೊಂದಿಗೆ ಎಂಸಿಸಿ ಬ್ಯಾಂಕ್‌ ಸಮಾನವಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ವಿವರಿಸಿದರು. ಬ್ಯಾಂಕಿನ ಪ್ರಗತಿ, ಸಾಧನೆಯನ್ನು ವಿವರಿಸಿ ಸಂಸ್ಥಾಪಕರ ದಿನಾಚರಣೆಯ ಮಹತ್ವವನ್ನು ವಿವರಿಸಿದರು. ಬ್ಯಾಂಕಿನ ಸಂಸ್ಥಾಪಕರ ದಿನಾಚರಣೆಯ ಪ್ರಯುಕ್ತ…

Read More

ಅನಾಥಾಶ್ರಮ, ಟ್ರಸ್ಟ್‌ಗೆ ದೇಣಿಗೆ ಹಸ್ತಾಂತರ ಸಿಎ ತೇರ್ಗಡೆಯಾದವರಿಗೆ ಸನ್ಮಾನ ಮಂಗಳೂರು: ಎಂಸಿ.ಸಿ.ಬ್ಯಾಂಕಿನ 113ನೇ ಸಂಸ್ಥಾಪಕರ ದಿನಾಚರಣೆಯನ್ನು ಶನಿವಾರ ಎಂ.ಸಿ.ಸಿ. ಬ್ಯಾಂಕಿನ ಆಡಳಿತ ಕಛೇರಿಯ ಅವರಣದಲ್ಲಿ ಆಚರಿಸಲಾಯಿತು.ಬ್ಯಾಂಕಿನ ಇತಿಹಾಸ ಮತ್ತು ಪ್ರಗತಿಯ ಕುರಿತ ಸಾಕ್ಷಚಿತ್ರವನ್ನು ಈ ಸಂದರ್ಭ ಪ್ರಸ್ತುತಪಡಿಸಲಾಯಿತು. ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಡುಪಿ ಧರ್ಮಪ್ರಾಂತ್ಯದ ಪಿಆರ್‌ಒ ಫಾ|ಡೆನಿಸ್ ಡೇಸಾ, ಅತಿಥಿಗಳಾಗಿ ಮಂಗಳೂರು ಧರ್ಮಪ್ರಾಂತ್ಯದ ಪ್ರಾಂತೀಯ ಸುಪೀರಿಯರ್‌ ಸಿ|ಕ್ಲಾರಾ ಮಿನೇಜಸ್, ಯುಎಫ್‌ಸಿ, ಪ್ರಜ್ಞಾ ಕೌನ್ಸೆಲಿಂಗ್ ಸೆಂಟರ್‌ನ ನಿರ್ದೇಶಕಿ ಪ್ರೊ.ಹಿಲ್ಡಾ ರಾಯಪ್ಪನ್, ಮಂಗಳೂರು ಕೊಂಕಣ್ಸ್ ದುಬಾಯ್, ಅಧ್ಯಕ್ಷ ಸ್ಟೀಫನ್ ಮಿನೇಜಸ್ ಮತ್ತು ಬ್ಯಾಂಕಿನ ಮಹಾಪ್ರಬಂಧಕ ಸುನೀಲ್ ಮಿನೇಜಸ್ ಹಾಜರಿದ್ದರು. https://chat.whatsapp.com/EbVKVnWB6rlHT1mWtsgbch ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ಪ್ರಾಸ್ತಾವಿಕ ಮಾತನಾಡಿ, ಎಂ.ಸಿ.ಸಿ. ಬ್ಯಾಂಕಿನ ರೂಪಾಂತರ, ಸೇವೆ ಮತ್ತು ಕಾರ್ಯಕ್ಷಮತೆಯಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳೊಂದಿಗೆ ಎಂಸಿಸಿ ಬ್ಯಾಂಕ್‌ ಸಮಾನವಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ವಿವರಿಸಿದರು. ಬ್ಯಾಂಕಿನ ಪ್ರಗತಿ, ಸಾಧನೆಯನ್ನು ವಿವರಿಸಿ ಸಂಸ್ಥಾಪಕರ ದಿನಾಚರಣೆಯ ಮಹತ್ವವನ್ನು ವಿವರಿಸಿದರು. ಬ್ಯಾಂಕಿನ ಸಂಸ್ಥಾಪಕರ ದಿನಾಚರಣೆಯ ಪ್ರಯುಕ್ತ…

Read More

ವಿಶ್ವಕರ್ಮ ಸಹಕಾರ ಬ್ಯಾಂಕ್‌ ಸ್ವರ್ಣ ಸಂಭ್ರಮ ಕಾರ್ಯಕ್ರಮ ಉದ್ಘಾಟನಾ ಸಮಾರಂಭದಲ್ಲಿ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಹೇಳಿಕೆ ಮಂಗಳೂರು: ವಿಶ್ವಕರ್ಮ ಸಹಕಾರ ಬ್ಯಾಂಕಿನ ಸ್ವರ್ಣ ಸಂಭ್ರಮದಲ್ಲಿ ಬಿಡುಗಡೆ ಮಾಡಿದ ಯೋಜನೆಗಳು ಸಮಾಜಮುಖಿಯಾಗಿದೆ. ಇದರಿಂದ ಸಾಕಷ್ಟು ಕುಶಲಕರ್ಮಿ ಸಮಾದಾಯದ ಜನರಿಗೆ ಪ್ರಯೋಜನವಾಗುತ್ತದೆ. ಈ ಸ್ವರ್ಣ ಜಯಂತಿ ವರ್ಷದ ಸ್ವರ್ಣ ಸಂಭ್ರಮ ಕಾರ್ಯಕ್ರಮಗಳ ಅಂಗವಾಗಿ ರೂಪಿಸಿರುವ ಹಲವಾರು ಯೋಜನೆಗಳು ಯಶಸ್ವಿಯಾಗಲಿ ಎಂದು ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಶುಭ ಹಾರೈಸಿದರು. ಮಂಗಳೂರಿನ ಕುದ್ಮುಲ್‌ ರಂಗರಾವ್‌ ಪುರಭವನದಲ್ಲಿ ಭಾನುವಾರ ವಿಶ್ವಕರ್ಮ ಸಹಕಾರ ಬ್ಯಾಂಕ್‌ನ 49ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಸ್ವರ್ಣ ಜಯಂತಿ ವರ್ಷದ “ಸ್ವರ್ಣ ಸಂಭ್ರಮ” ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. https://chat.whatsapp.com/EbVKVnWB6rlHT1mWtsgbch ವಿಶ್ವಕರ್ಮ ಸಹಕಾರ ಬ್ಯಾಂಕ್‌ ಹಮ್ಮಿಕೊಂಡಿರುವ ಒಂದು ವರ್ಷದ ಕಾರ್ಯಕ್ರಮಗಳು ಯಶಸ್ವಿಯಾಗಿ ಬ್ಯಾಂಕ್‌ನ ವಹಿವಾಟು ದ್ವಿಗುಣಗೊಳ್ಳಲಿ. ಸಾಲ ತೆಗೆದುಕೊಂಡವರು ಅವರು ಯಾವ ಕಾರ್ಯಕ್ಕೆ ತೆಗೆದುಕೊಂಡಿರುತ್ತಾರೋ ಅದೇ ಕಾರ್ಯಕ್ಕೆ ವಿನಿಯೋಗಿಸಿದಾಗ ಅದರ ಮರು ಪಾವತಿ…

Read More