Author: admin

ಬಂಟ್ವಾಳ: ಇಲ್ಲಿನ ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಸಂಸ್ಥೆಯು 2024-25ನೇ ಸಾಲಿನಲ್ಲಿ ಸಾಧಿಸಿದ ಸರ್ವತೋಮುಖ ಅಭಿವೃದ್ಧಿಯನ್ನು ಪರಿಗಣಿಸಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇವರಿಂದ 10ನೇ ಬಾರಿ ಸಾಧನಾ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಪ್ರಶಸ್ತಿ ವಿತರಿಸಿದರು. https://chat.whatsapp.com/EbVKVnWB6rlHT1mWtsgbch ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯು 10 ಶಾಖೆಗಳನ್ನು ಒಳಗೊಂಡು ಬಿ.ಸಿ.ರೋಡ್ನಲ್ಲಿ ಪ್ರಧಾನ ಕಛೇರಿಯನ್ನು ಹೊಂದಿದೆ. ಸಂಘವು ಆಡಿಟ್ ವರ್ಗೀಕರಣದಲ್ಲಿ ಸತತವಾಗಿ ‘ಎ’ ತರಗತಿ ಪಡೆಯುತ್ತಾ ಬಂದಿದೆ. 2024-25ನೇ ಸಾಲಿನಲ್ಲಿ ₹ 930.71 ಕೋಟಿ ವ್ಯವಹಾರ ನಡೆಸಿ ₹2.75 ಕೋಟಿ ನಿವ್ವಳ ಲಾಭ ಗಳಿಸಿದೆ. 2025ರ ಮಾರ್ಚ್ ಅಂತ್ಯಕ್ಕೆ ₹. 122 ಕೋಟಿ ಠೇವಣಿ, ₹ 110 ಕೋಟಿ ಹೊರಬಾಕಿ ಸಾಲದೊಂದಿಗೆ ಎಲ್ಲಾ ಶಾಖೆಗಳು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಮುಂದಿನ ದಿನಗಳಲ್ಲಿ ಸಂಘದ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಹೊಸ ಶಾಖೆಗಳನ್ನು ತೆರೆಯುವ ಯೋಜನೆಗಳನ್ನು ರೂಪಿಸಲಾಗಿದೆ. ಸಂಘದ…

Read More

ಮಂಗಳೂರು: ಪಾಣೆಮಂಗಳೂರಿನ ಸುಮಂಗಲಾ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ಶನಿವಾರ ಮಂಗಳೂರಿನ ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ಸಾಧನಾ ಪುರಸ್ಕಾರ ನೀಡಿ ಗೌರವಿಸಲಾಗಿದೆ. https://chat.whatsapp.com/EbVKVnWB6rlHT1mWtsgbch ಎಸ್‌ಸಿಡಿಸಿಸಿ ಬ್ಯಾಂಕಿನ ವಾರ್ಷಿಕ ಮಹಾಸಭೆ ಶನಿವಾರ ಮಂಗಳೂರಿನಲ್ಲಿ ನಡೆದಿದ್ದು ಆ ಸಮಾರಂಭದಲ್ಲಿ ಐದನೇ ಬಾರಿ ಸುಮಂಗಲಾ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ಸಾಧನಾ ಪುರಸ್ಕಾರ ನೀಡಲಾಗಿದೆ. ಸಂಸ್ಥೆಯು ಸಾಧಿಸಿದ ಸರ್ವತೋಮುಖ ಅಭಿವೃದ್ಧಿಗಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಸತತ ಐದನೇ ಬಾರಿ ಸಾಧನಾ ಪ್ರಶಸ್ತಿ ಪಡೆದಿದೆ. ಸುಮಂಗಲಾ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ನಾಗೇಶ್‌ ಕಲ್ಲಡ್ಕ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಸಂತ ಪಿ. ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ಸಂಘದ ನಿರ್ದೇಶಕರಾದ ಸಚಿನ್‌ ಮೆಲ್ಕಾರ್‌, ಬಾಲಕೃಷ್ಣಸೆರ್ಕಳ, ಈಶ್ವರ ಸಪಲ್ಯ ಮೆಲ್ಕಾರ್, ನರ್ಸಪ್ಪ ಅಮೀನ್, ಸಿಬ್ಬಂದಿ ದೀಕ್ಷಿತ್‌, ಸಹಕಾರ ಸಂಘಗಳ ದ.ಕ. ಜಿಲ್ಲಾ ಉಪನಿಬಂಧಕ ಎಚ್‌.ಎನ್‌ ರಮೇಶ್‌, ಎಸ್‌ಸಿಡಿಸಿಸಿ ಬ್ಯಾಂಕ್‌ ನಿರ್ದೇಶಕರಾದ ರಾಜಾರಾಮ್‌ ಭಟ್‌, ಭಾಸ್ಕರ ಕೋಟ್ಯಾನ್‌, ಕೆ.ಜೈರಾಜ್‌ ಬಿ.ರೈ ಮೊದಲಾದವರು…

Read More

ವಿಟ್ಲ: ಪ್ರತಿಷ್ಠಿತ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ ಸಾಧಿಸಿದ ಸರ್ವತೋಮುಖ ಅಭಿವೃದ್ಧಿಗಾಗಿ ಶನಿವಾರ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ಗೆ ಸತತ ನಾಲ್ಕನೇ ಬಾರಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಸಾಧನಾ ಪ್ರಶಸ್ತಿ ಪ್ರದಾನ ಮಾಡಲಾಯಿತು. https://chat.whatsapp.com/EbVKVnWB6rlHT1mWtsgbch ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌, 2024-25 ನೇ ಆರ್ಥಿಕ ವರ್ಷದಲ್ಲಿ ತನ್ನ ಕಾರ್ಯದಕ್ಷತೆ ಮೆರೆದು ದಾಖಲೆಯ ರೂ. 864.42 ಕೋಟಿಗಳ ವ್ಯವಹಾರ ಮಾಡಿದೆ. ರೂ.134.73 ಕೋಟಿ ರೂಪಾಯಿಗಳ ಠೇವಣಿ ಹೊಂದಿದ್ದು, ಸದಸ್ಯರ ಹೊರಬಾಕಿ ಸಾಲ ರೂ. 104.13 ಕೋಟಿ, ಸಾಲ ವಸೂಲಾತಿ ಪ್ರಮಾಣ ಶೇಕಡಾ 93.20ರಷ್ಟಿದ್ದು, ವರದಿ ವರ್ಷದಲ್ಲಿ ರೂ.3.45 ಕೋಟಿ ಲಾಭ ಗಳಿಸಿದೆ. ಪ್ರಸ್ತುತ ಬ್ಯಾಂಕಿನ ದುಡಿಯುವ ಬಂಡವಾಳ 164.93 ಕೋಟಿಗಳಾಗಿದೆ. ಬ್ಯಾಂಕ್ ಹಲವಾರು ವರ್ಷಗಳಿಂದ ಆಡಿಟ್ ವರ್ಗೀಕರಣದಲ್ಲಿ ‘ಎ’ ತರಗತಿ ಹೊಂದಿದ್ದು, ಈ ಎಲ್ಲಾ ಸಾಧನೆಗಳನ್ನು ಗುರುತಿಸಿ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ ಅಧ್ಯಕ್ಷರಾದ ಹೆಚ್.ಜಗನ್ನಾಥ್ ಸಾಲಿಯಾನ್‌, ಉಪಾಧ್ಯಕ್ಷರಾದ…

Read More

ಮಂಗಳೂರು: ಕಿರಣ್ ಗೇಮ್ಸ್ ಟೀಮ್ ಮಾರ್ನಮಿಕಟ್ಟೆ ಇದರ 55ನೇ ವಾರ್ಷಿಕೋತ್ಸವದ ಅಂಗವಾಗಿ ರಾಮಕೃಷ್ಣ ಮಿಷನ್ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ವಿಶ್ವಕರ್ಮ ಸಹಕಾರ ಬ್ಯಾಂಕ್ ಲಿ., ರಥಬೀದಿ ಮಂಗಳೂರು ಮತ್ತು ಮಹಾರಾಣ ಪ್ರತಾಪ್ ಸ್ಪೋರ್ಟ್ಸ್ ಕ್ಲಬ್ ಮಂಗಳೂರು ಇವರ ಸಹಯೋಗದಲ್ಲಿ ಮಂಗಳೂರಿನ ಪ್ರತಿಷ್ಠಿತ ಕೆ.ಎಂ.ಸಿ.‌ಆಸ್ಪತ್ರೆ ಮತ್ತು ಕೆ.ಎಸ್. ಹೆಗ್ಡೆ ಆಸ್ಪತ್ರೆಗಳ ಸಹಭಾಗಿತ್ವದಲ್ಲಿ ಮಂಗಳೂರಿನ ಖ್ಯಾತ ತಜ್ಞ ವೈದ್ಯರುಗಳ ಉಪಸ್ಥಿತಿಯಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರವು ಭಾನುವಾರ ಮಂಗಳೂರಿನ ಮಂಗಳಾದೇವಿ ದೇವಸ್ಥಾನದ ಬಳಿ ಇರುವ ರಾಮಕೃಷ್ಣ ಆಶ್ರಮದಲ್ಲಿ ನಡೆಯಲಿದೆ. https://chat.whatsapp.com/EbVKVnWB6rlHT1mWtsgbch ಬೆಳಗ್ಗೆ 9ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಶಿಬಿರದಲ್ಲಿ ಮಂಗಳೂರಿನ ಖ್ಯಾತ ತಜ್ಞ ವೈದ್ಯರುಗಳು ಉಪಸ್ಥಿತರಿದ್ದು, ಶ್ವಾಸಕೋಶ, ಸಕ್ಕರೆ ಕಾಯಿಲೆ, ಲಿವರ್, ಉಬ್ಬಸ, ಜ್ವರ, ಥೈರಾಯಿಡ್ ತಜ್ಞರಾದ ಡಾ|ಚಕ್ರಪಾಣಿ ಎಂ. ಹಾಗೂ ಡಾ.ಬಿ.ದೇವದಾಸ್ ರೈ, ಹೃದಯ ಸಂಬಂಧಿತ ಖಾಯಿಲೆಗಳ ತಜ್ಞರಾದ ಡಾ|ಪದ್ಮನಾಭ ಕಾಮತ್, ಕಿವಿ, ಮೂಗು, ಗಂಟಲು ತಜ್ಞರಾದ ಡಾ|ವಿಜಯೇಂದ್ರ ಶೆಣೈ, ಮೂತ್ರಪಿಂಡ , ಕಿಡ್ನಿ ಸಮಸ್ಯೆ ತಜ್ಞರಾದ…

Read More

ಮೂಡುಬಿದಿರೆ: ಕರಿಂಜೆ ಮಠದ ಶ್ರೀ ಮುಕ್ತಾನಂದ ಸ್ವಾಮೀಜಿಯವರು ಸ್ಥಾಪಿಸಿದ ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘದ ದ್ವಿತೀಯ ಶಾಖೆ ಮೂಡುಬಿದಿರೆಯ ಜಿವಿಪೈ ಆಸ್ಪತ್ರೆ ಎದುರಿರುವ ವಿಶ್ವಾಸ್ ಪೈನಾಪಲ್ ಸಿಟಿ ವಾಣಿಜ್ಯ ಸಂಕೀರ್ಣದಲ್ಲಿ ಶುಕ್ರವಾರ ಶುಭಾರಂಭಗೊಂಡಿತು. https://chat.whatsapp.com/EbVKVnWB6rlHT1mWtsgbch ಬಳಿಕ ಎಂಸಿಎಸ್ ಬ್ಯಾಂಕ್ ಕಲ್ಪವೃಕ್ಷ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಆಶೀರ್ವಚನ ನೀಡಿದ ಕರಿಂಜೆ ಶ್ರೀ ಮುಕ್ತಾನಂದ ಸ್ವಾಮೀಜಿಯವರು, ಕರಿಂಜೆ ಗ್ರಾಮೀಣ ಪ್ರದೇಶದಲ್ಲಿ ಆರು ವರ್ಷಗಳ ಹಿಂದೆ ಸ್ಥಾಪನೆಯಾದ ಸಂಸ್ಥೆಯು ಇಂದು ಪೆರಿಂಜೆಯಲ್ಲಿ ಪ್ರಧಾನ ಕಚೇರಿ, ಕರಿಂಜೆ ಮಠದಲ್ಲಿ ಆಡಳಿತ ಕಚೇರಿ, ಬೆಳ್ತಂಗಡಿ ತಾಲೂಕಿನ ಮದ್ದಡ್ಕದಲ್ಲಿ ಪ್ರಥಮ ಶಾಖೆ, ಇದೀಗ ಮೂಡುಬಿದಿರೆಯಲ್ಲಿ ದ್ವಿತೀಯ ಶಾಖೆಯನ್ನು ಪ್ರಾರಂಭಿಸಿದೆ. ಮುಂದೆ ಮಂಗಳೂರು ನಗರದಲ್ಲಿ ಶಾಖೆ ಪ್ರಾರಂಭಿಸಲು ಉದ್ದೇಶಿಸಿದ್ದೇವೆ. ಸಹಕಾರಿ ಹಾಗೂ ಸ್ವಸಹಾಯ ಗುಂಪುಗಳು ಪಾರದರ್ಶಕವಾಗಿ ಮುನ್ನಡೆಯಲು ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳ ಪ್ರಾಮಾಣಿಕ ಶ್ರಮವೇ ಕಾರಣ. ಗ್ರಾಹಕರು ಕೂಡ ವ್ಯವಸ್ಥೆ ಸದಾ ಬೆಂಗಾವಲಾಗಿರುವುದರಿಂದ ಕಡಿಮೆ ಅವಧಿಯಲ್ಲಿ ಉತ್ತಮ ಸೇವೆ ನೀಡಲು ಸಾಧ್ಯವಾಗಿದೆ ಎಂದರು. ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿಯ…

Read More

ಮೂಲ್ಕಿ: ಹಳೆಯಂಗಡಿಯ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಪಡುಬಿದ್ರಿ ಶಾಖೆಯ ಮೂರನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಅಶಕ್ತ ನಿರುದ್ಯೋಗಿ ಯುವತಿಯರಿಗೆ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮ ಶುಕ್ರವಾರ ಪಡುಬಿದ್ರೆ ಶಾಖೆಯ ಆವರಣದಲ್ಲಿ ನಡೆಯಿತು. https://chat.whatsapp.com/EbVKVnWB6rlHT1mWtsgbch ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಪಡುಬಿದ್ರೆ ತುಳುನಾಡು ಕಲಾವಿದರು ಸಂಸ್ಥೆಯ ಅಧ್ಯಕ್ಷ ಸಂತೋಷ್ ಪಡುಬಿದ್ರೆ ಮಾತನಾಡಿ ಅಶಕ್ತರಿಗೆ ಸಹಾಯಹಸ್ತ ನೀಡುವ ಪ್ರಿಯದರ್ಶಿನಿ ಸೊಸೈಟಿಯ ಕಾರ್ಯ ಅಭಿನಂದನೀಯವಾಗಿದ್ದು ಸೇವಾ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿ ಎಂದು ಶುಭ ಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಹಳೆಯಂಗಡಿಯ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಎಚ್ ವಸಂತ್ ಬೆರ್ನಾಡ್ ವಹಿಸಿ ಮಾತನಾಡಿ ಸಂಘದ ಅಭಿವೃದ್ಧಿಗೆ ಗ್ರಾಹಕರು, ಸದಸ್ಯರ ಹಾಗೂ ನಿರ್ದೇಶಕರ ಸಹಕಾರ ಕಾರಣವಾಗಿದ್ದು ಮುಂದಿನ ದಿನಗಳಲ್ಲಿ ಶಾಖೆಯ ಅಭಿವೃದ್ಧಿಗೆ ಮತ್ತಷ್ಟು ಸಹಕಾರ ಅಗತ್ಯ ಎಂದರು. ವೇದಿಕೆಯಲ್ಲಿ ಕರ್ನಾಟಕ ಸ್ಟೇಟ್ ಟೈಲರ್ಸ್‌ ಅಸೋಸಿಯೇಷನ್‌ ಪಡುಬಿದ್ರೆ ವಲಯದ ಅಧ್ಯಕ್ಷೆ ಪುಷ್ಪಲತಾ ಗಂಗಾಧ‌ರ್, ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್‌ ಸೊಸೈಟಿಯ ಉಪಾಧ್ಯಕ್ಷೆ ಪ್ರತಿಭಾ ಕುಳಾಯಿ, ಕಾರ್ಯನಿರ್ವಹಣಾಧಿಕಾರಿ ಸುದರ್ಶನ್, ಪಡುಬಿದಿ,…

Read More

ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘ, ಮಾಧ್ಯಮ ಕೇಂದ್ರ ತೊಕ್ಕೊಟ್ಟು, ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ದ.ಕ. ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಇವರ ನೇತೃತ್ವದಲ್ಲಿ ಕೃಷಿ ಇಲಾಖೆ ಮಂಗಳೂರು, ಶ್ರೀ ಬಾಲಾಂಜನೇಯ ವ್ಯಾಯಾಮ ಶಾಲೆ ಪಿಲಾರು ಸಹಯೋಗದೊಂದಿಗೆ ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ಇವರ ತಾಂತ್ರಿಕ ಮಾರ್ಗದರ್ಶನದೊಂದಿಗೆ ಗ್ರಾಮ ಸಂಪರ್ಕ ಅಭಿಯಾನದ ಅಂಗವಾಗಿ ಕೃಷಿಯೆಡೆಗೆ ವಿದ್ಯಾರ್ಥಿ ಸಮೂಹ ಹಾಗೂ ಯುವಜನತೆಯ ನಡೆ – ಕೃಷಿ ಅಧ್ಯಯನ ಹಾಗೂ ಚಟುವಟಿಕೆಗಳಿಗೆ ಚಾಲನೆ ಕಾರ್ಯಕ್ರಮ ಆ.30ರಂದು ಬೆಳಗ್ಗೆ 9ರಿಂದ ಸೋಮೇಶ್ವರ ಗ್ರಾಮದ ಪಿಲಾರು ಬೈಲು ಗದ್ದೆಯಲ್ಲಿ ನಡೆಯಲಿದೆ. https://chat.whatsapp.com/EbVKVnWB6rlHT1mWtsgbch ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರುಗುತ್ತು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾಧಿಕಾರಿ ದರ್ಶನ್‌ ಕೆ.ವಿ., ಜಿಲ್ಲಾ ಪಂಚಾಯತ್‌ ಮುಖ್ಯಾಧಿಕಾರಿ ನರ್ವಾಡೆ ವಿನಾಯಕ, ಜಂಟಿ ಕೃಷಿ ನಿರ್ದೇಶಕ ಡಾ| ಹೊನ್ನಪ್ಪ ಗೋವಿಂದ…

Read More

ಮಂಗಳೂರು: ಕಿರಣ್‌ ಗೇಮ್ಸ್‌ ಟೀಮ್‌ ಮಾರ್ನಮಿಕಟ್ಟೆ ಮತ್ತು ರಾಮಕೃಷ್ಣ ಮಿಶನ್‌ ಜಂಟಿ ಆಶ್ರಯದಲ್ಲಿ, ವಿಶ್ವಕರ್ಮ ಸಹಕಾರ ಬ್ಯಾಂಕ್‌ ಮತ್ತು ಮಹಾರಾಣಾ ಪ್ರತಾಪ್‌ ಸ್ಪೋರ್ಟ್‌ ಕ್ಲಬ್‌ ಮಂಗಳೂರು ಸಹಯೋಗದಲ್ಲಿ ಆ.31ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 1.30ರ ತನಕ ಮಂಗಳಾದೇವಿ ಬಳಿಯ ಶ್ರೀ ರಾಮಕೃಷ್ಣ ಮಿಶನ್‌ ಆಶ್ರಮದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರ ಏರ್ಪಡಿಸಲಾಗಿದೆ. https://chat.whatsapp.com/EbVKVnWB6rlHT1mWtsgbch ಮಂಗಳೂರಿನ ಪ್ರಸಿದ್ಧ ಕೆಎಂಸಿ ಹಾಗೂ ದೇರಳಕಟ್ಟೆ ಕೆ.ಎಸ್‌ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರು ಆರೋಗ್ಯ ತಪಾಸಣೆಯಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 9ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಮಂಗಳೂರಿನ ರಾಮಕೃಷ್ಣ ಮಿಶನ್‌ ಮುಖ್ಯಸ್ಥರಾದ ಸ್ವಾಮಿ ಜಿತಕಾಮಾನಂದಜಿ ದೀಪ ಪ್ರಜ್ವಲನ ಮಾಡಲಿದ್ಧಾರೆ. ಆಳ್ವಾಸ್ ಎಜುಕೇಶನ್‌ ಫೌಂಡೇಶನ್ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕೆಎಂಸಿ ಮಂಗಳೂರಿನ ಮೆಡಿಕಲ್‌ ಸೂಪರಿಂಟೆಂಡೆಂಟ್‌ ಡಾ.ಚಕ್ರಪಾಣಿ ಎಂ ಅಧ್ಯಕ್ಷತೆ ವಹಿಸಲಿದ್ದಾರೆ. ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಡಿ.ವೇದವ್ಯಾಸ ಕಾಮತ್, ನಿಕಟಪೂರ್ವ ಕಾರ್ಪೊರೇಟರ್‌ ಪ್ರೇಮಾನಂದ ಶೆಟ್ಟಿ, ಶ್ರೀ ಮಂಗಳಾದೇವಿ ದೇವಸ್ಥಾನದ…

Read More

ಮಂಗಳೂರು: ಮಂಗಳೂರು ಸೌಹಾರ್ದ ಸಹಕಾರಿ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷರಾದ ಕೆ.ಭಾಸ್ಕರ ರಾವ್‌ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್‌ 31ರಂದು ಮಧ್ಯಾಹ್ನ 12 ಗಂಟೆಗೆ ಜೆಪ್ಪು ಶಾಂತಿನಗರದ ಮಂಗಳೂರು ಸ್ಟೋರ್‌ ಸಭಾಂಗಣದಲ್ಲಿ ನಡೆಯಲಿದೆ. https://chat.whatsapp.com/EbVKVnWB6rlHT1mWtsgbch ಇದೇ ವೇಳೆ ಬೆಳಗ್ಗೆ 10ರಿಂದ 12ರ ತನಕ ಜಪ್ಪು ಆರೋಗ್ಯ ಕೇಂದ್ರದವರಿಂದ ಬಿ.ಪಿ, ಮಧುಮೇಹ ತಪಾಸಣೆ, ಹೃದಯ ತಪಾಸಣೆಯ ಮಾಹಿತಿ ಶಿಬಿರ ನಡೆಯಲಿಎ. ಸಂಘದ ಸದಸ್ಯರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಸಂಘದ ಪ್ರಕಟಣೆ ತಿಳಿಸಿದೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 EMAIL: sahakaraspandana@gmail.com

Read More

ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಬೆಂಗಳೂರು: ಸಾಲ ವಸೂಲಾತಿ ಸರಿಯಾದ ಆಗದ ಕಾರಣ ಹಲವಾರು ಸಹಕಾರ ಸಂಘಗಳು ನಷ್ಟದಲ್ಲಿವೆ. ನಷ್ಟದಲ್ಲಿರುವ ಸಹಕಾರ ಸಂಘಗಳು ಸಾಲ ವಸೂಲಾತಿ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಸಾಲ ವಸೂಲಾತಿ ಮತ್ತು ವೆಚ್ಚದ ಬಗ್ಗೆ ಹೆಚ್ಚಿನ ನಿಗಾ ಇಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. https://chat.whatsapp.com/EbVKVnWB6rlHT1mWtsgbch ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ 43 ಸಾವಿರಕ್ಕೂ ಹೆಚ್ಚಿನ ಸಹಕಾರ ಸಂಘಗಳಿವೆ. ಇದರಲ್ಲಿ 28,516 ಸಹಕಾರ ಸಂಘಗಳು ಲಾಭದಲ್ಲಿವೆ. 14,670 ಸಂಘಗಳು ನಷ್ಟದಲ್ಲಿವೆ. ನಷ್ಟದಲ್ಲಿರುವ ಸಂಘಗಳ ಪೈಕಿ 2,200 ಹಾಲು ಉತ್ಪಾದಕ ಸಂಘಗಳೂ ಸೇರಿವೆ. ಇಷ್ಟು ದೊಡ್ಡ ಪ್ರಮಾಣದ ಸಹಕಾರ ಸಂಘಗಳು ನಷ್ಟದಲ್ಲಿರುವುದು ಸಹನೀಯವಲ್ಲ. ಸಾಲ ವಸೂಲಾತಿ ಸರಿಯಾಗಿ ಆಗದ ಕಾರಣ ಬಹುತೇಕ ಸಂಘಗಳು ನಷ್ಟದಲ್ಲಿವೆ. ಅಂತಹ ಸಂಘಗಳ ಸಾಲ ವಸೂಲಾತಿಗೆ ಕೈಗೊಂಡ ಕ್ರಮಗಳ ಕುರಿತು ಪರಿಶೀಲಿಸಬೇಕು. ಹಾಲು ಉತ್ಪಾದಕ…

Read More