Author: admin

ಅಭಿವಂದನೆ ಸ್ವೀಕರಿಸಿ, ಸವಲತ್ತು ವಿತರಿಸಿ ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಹೇಳಿಕೆ ಮಂಗಳೂರು: ಮೊಳಹಳ್ಳಿ ಶಿವರಾಯರಿಂದ ಮೊದಲ್ಗೊಂಡು ಹಲವಾರು ಸಹಕಾರಿ ಧುರೀಣರಿಂದ ಸಹಕಾರಿ ಕ್ಷೇತ್ರ ಇಂದು ಹೆಮ್ಮರವಾಗಿ ಬೆಳೆದು ನಿಂತಿದೆ. ಅವರ ಹಾದಿಯಲ್ಲಿ ಸಾಗಿ ಈ ಕ್ಷೇತ್ರವನ್ನು ಮತ್ತಷ್ಟು ಬಲಿಷ್ಠಗೊಳಿಸುವ ಪ್ರಾಮಾಣಿಕ ಪ್ರಯತ್ನ ಮಾಡಿರುವ ತೃಪ್ತಿಯಿದೆ ಎಂದು ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ, ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್‌ ಹೇಳಿದರು. https://chat.whatsapp.com/EbVKVnWB6rlHT1mWtsgbch ಮಂಗಳೂರಿನ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಸೋಮವಾರ ‘ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅಭಿವಂದನಾ ಸಮಿತಿ’ ವತಿಯಿಂದ ತಮ್ಮ 76ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ ಪ್ರಯುಕ್ತ ಏರ್ಪಡಿಸಿದ್ದ ಅಭಿವಂದನಾ ಸಮಾರಂಭ ಹಾಗೂ ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಸಾವಿರಾರು ಕೃಷಿಕರಿಗೆ ಆರ್ಥಿಕ ಶಕ್ತಿಯಾಗಿ ನಿಂತಿರುವ ಸಹಕಾರಿ ಕ್ಷೇತ್ರ ಇಂದು ಲಕ್ಷಾಂತರ ಮಹಿಳೆಯರು ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಲು ಕೂಡ ನೆರವಾಗಿದೆ. ಹಂತಹಂತವಾಗಿ ಬೆಳೆದ ಸಹಕಾರಿ ರಂಗ ಇಂದು ಹೆಮ್ಮರವಾಗಿ ಬೆಳೆದು ನಿಂತಿದೆ. ಅತ್ಯಂತ ಪವಿತ್ರವಾಗಿರುವ…

Read More

ಮಂಗಳೂರು: ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಹಿಂದೂ ಯುವಸೇನೆ, ಕಾವು ಶ್ರೀ ಪಂಚಲಿಂಗೇಶ್ವರ ಶಾಖೆ ಕಂಕನಾಡಿ ಮತ್ತು ಶ್ರೀ ಸತ್ಯಸಾಯಿ ಬಾಲವಿಕಾಸ ಕೇಂದ್ರ ಮಂಗಳಾದೇವಿ ಇವುಗಳ ಸಹಕಾರದೊಂದಿಗೆ ಮಾರ್ಚ್ 02ರಂದು ಭಾನುವಾರದ ಬಜಾಲಿನ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಬೃಹತ್ ಉಚಿತ ವೈದ್ಯಕೀಯ/ದಂತ/ಕಣ್ಣು/ಹೃದಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ. https://chat.whatsapp.com/EbVKVnWB6rlHT1mWtsgbch ಬೆಳಗ್ಗೆ 9.30ರಿಂದ ಶಿಬಿರ ಆರಂಭವಾಗಲಿದ್ದು ಕೆಎಂಸಿ ಅತ್ತಾವರ ಹಾಗೂ ಯೆನೆಪೋಯ ಆಸ್ಪತ್ರೆಯ ತಜ್ಞ, ಹಿರಿಯ ಅನುಭವಿ ವೈದ್ಯರು ಶಿಬಿರದಲ್ಲಿ ಭಾಗವಹಿಸಲಿದ್ದಾರೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಂ.ಎಸ್‌ ಗುರುರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com

Read More

ಉಡುಪಿ: ಉಡುಪಿ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಮುಂದಿನ 5 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಲೂವಿಸ್ ಲೋಬೊ, ಉಪಾಧ್ಯಕ್ಷರಾಗಿ ಜೇಮ್ಸ್ ಡಿಸೋಜ ಆಯ್ಕೆಯಾಗಿದ್ದಾರೆ. https://chat.whatsapp.com/EbVKVnWB6rlHT1mWtsgbch ಗುರುವಾರ ಉಡುಪಿ ಕ್ರಿಸ್ತಜೋತಿ ಕಾಂಪ್ಲೆಕ್ಸ್‌ನಲ್ಲಿರುವ ಸಂಘದ ಆಡಳಿತ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷ ಲೂವಿಸ್ ಲೋಬೊ ಆದಿ ಉಡುಪಿ ಹಾಗೂ ಉಪಾಧ್ಯಕ್ಷ ಜೇಮ್ಸ್ ಡಿಸೋಜ ಕಾಪು ಅವರನ್ನು ಆರಿಸಲಾಯಿತು. ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯ ಸಹಕಾರ ಅಭಿವೃಧಿ ಅಧಿಕಾರಿ ಜಯಂತಿ ಎಸ್‌ ಚುನಾವಣಾಧಿಕಾರಿಯಾಗಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂದೀಪ್ ಎ.ಫೆರ್ನಾಂಡಿಸ್ ಚುನಾವಣಾ ಪ್ರಕ್ರಿಯೆ ನೆರವೇರಿಸಿದರು. ಆಡಳಿತ ಮಂಡಳಿಗೆ ನೂತನವಾಗಿ ಚುನಾಯಿತರಾದ ನಿರ್ದೇಶಕರಾದ ಇಗ್ನೇಷಿಯಸ್ ಮೋನಿಸ್ ಮೂಡುಬೆಳ್ಳೆ, ಪರ್ಸಿ ಜಿ.ಡಿಸೋಜ ಕಲ್ಯಾಣಪುರ, ಆರ್ಚಿಬಾಲ್ಡ್ ಎಸ್. ಡಿಸೋಜ ತೊಟ್ಟಂ, ಡಾ॥ ನೇರಿ ಕರ್ನೇಲಿಯೋ ಕಕ್ಕುಂಜೆ-ಅಂಬಾಗಿಲು, ಶ್ರೀಮತಿ ಲಾಯ್ಸೆಟ್‌ ಜೆ.ಕರ್ನೇಲಿಯೋ ಕನ್ನರ್ಪಾಡಿ-ಕಡೇಕಾರು, ರಿಚರ್ಡ್ ಡಾಯಸ್ ಸಂತೆಕಟ್ಟೆ, ರಾಬರ್ಟ್ ಮ್ಯಾಕ್ಸಿಂ ಡಿಸೋಜ ಉಡುಪಿ, ಡಾಲ್ಫಿ ವಿಕ್ಟರ್‌ ಲೂವಿಸ್‌ ಉಡುಪಿ, ವಿಲಿಯಂ ಬಿ.ಮಚಾದೋ ಶಿರ್ವ, ಓನಿಲ್ ಜಾನ್ಸನ್…

Read More

ಪುತ್ತೂರು: ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ದರ್ಬೆ ಪುತ್ತೂರು ಇದರ ಪೂರಕ ಸಂಸ್ಥೆ ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬುಧವಾರ “ವೃತ್ತಿ ಬದುಕು ಹೇಗಿರಬೇಕು? ಉದ್ಯೋಗಸ್ಥರಿಗೊಂದು ಮಾರ್ಗದರ್ಶಿʼʼ ಕೃತಿ ಲೋಕಾರ್ಪಣೆಗೊಂಡಿತು. https://chat.whatsapp.com/EbVKVnWB6rlHT1mWtsgbch ಕೃತಿ ಬಿಡುಗಡೆ ಮಾಡಿ ಮಾತನಾಡಿದ ಪುತ್ತೂರು ವಿವೇಕಾನಂದ ಕಾಲೇಜು(ಸ್ವಾಯತ್ತ) ಆಡಳಿತ ಮಂಡಳಿ ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ, ಸರಸ್ವತಿ ಸಹಕಾರಿಯ ಸೇವಾಕಾರ್ಯಗಳು ಶ್ಲಾಘನೀಯ ಎಂದು ಹೇಳಿದರು. ಲೋಕಾರ್ಪಣೆಗೊಂಡ ಕೃತಿಯ ಕುರಿತು ಮಾತನಾಡಿದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಆಶಾ ಬೆಳ್ಳಾರೆ ಕೃತಿಯು ಅತ್ಯಂತ ಪರಿಣಾಮಕಾರಿಯಾಗಿ ಮೂಡಿಬಂದಿದ್ದು ಲೇಖಕರು ವೃತ್ತಿ ಬದುಕಿನ ಪ್ರತಿಯೊಂದು ವಿಷಯಗಳ ಮೇಲೆ ಬೆಳಕು ಚೆಲ್ಲುತ್ತಾ ಮಾರ್ಗದರ್ಶನ ನೀಡಿದ್ದಾರೆ ಎಂದು ಹೇಳಿದರು. ಕೃತಿಯ ಲೇಖಕ, ರಾಜ್ಯ-ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ನಾರಾಯಣ ಭಟ್‌ ಟಿ.ರಾಮಕುಂಜ ಮಾತನಾಡಿ ಓದುಗರು ಕೃತಿ ಓದಿ ಅದನ್ನು ಅನುಷ್ಠಾನಗೊಳಿಸಿಕೊಂಡರೆ ಸಾರ್ಥಕ್ಯ ನೀಡುತ್ತದೆ ಎಂದು ಹೇಳಿದರು. ಇದೇ ಸಂದರ್ಭ ಶ್ರೀ ಸರಸ್ವತಿ ಸಹಕಾರಿಯ ಪ್ರಥಮ ಶಾಖೆ ದರ್ಬೆಯು…

Read More

ಸತತ ಐದನೇ ಬಾರಿ ಅಧಿಕಾರದ ಚುಕ್ಕಾಣಿ ಹಿಡಿದ ಡಾ.ವಾಣಿಶ್ರೀ ವಿಶ್ವನಾಥ್ ನೇತೃತ್ವದ ಬಳಗ ಬೆಂಗಳೂರು: ಸಿಂಗನಾಯಕನಹಳ್ಳಿ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಮುಂದಿನ ಐದು ವರ್ಷಗಳ ಅವಧಿಗೆ ಡಾ.ವಾಣಿಶ್ರೀ ವಿಶ್ವನಾಥ್‌ ಸತತ ಐದನೇ ಬಾರಿ ಆಯ್ಕೆಯಾಗಿದ್ದಾರೆ. 2025-30ರ ಅವಧಿಗೆ ಸಹಕಾರ ಸಂಘದ ನಿರ್ದೇಶಕರ ಆಯ್ಕೆಗಾಗಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಡಾ.ವಾಣಿಶ್ರೀ ವಿಶ್ವನಾಥ್ ನೇತೃತ್ವದ 12 ಹಾಲಿ ನಿರ್ದೇಶಕರ ತಂಡ ಅವಿರೋಧವಾಗಿ ಆಯ್ಕೆಯಾಗಿತ್ತು. ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಸಲಹೆ ಮತ್ತು ಮಾರ್ಗದರ್ಶನದಲ್ಲಿ ಸಹಕಾರ ಸಂಘದ ನಿರ್ದೇಶಕರ ಆಯ್ಕೆ ಮತ್ತು ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಇದರಲ್ಲಿ ಡಾ.ವಾಣಿಶ್ರೀ ವಿಶ್ವನಾಥ್ ಅವರ ನೇತೃತ್ವದ 12 ಜನ ಹಾಲಿ ನಿರ್ದೇಶಕರ ತಂಡ ಅವಿರೋಧವಾಗಿ ಆಯ್ಕೆಯಾಗಿದ್ದು, ಬುಧವಾರ ನಡೆದ ಅಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಡಾ.ವಾಣಿಶ್ರೀ ವಿಶ್ವನಾಥ್ ಅಧ್ಯಕ್ಷರಾಗಿ 5ನೇ ಬಾರಿ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಹೊಸ ಮೈಲಿಗಲ್ಲು ನೆಟ್ಟಿದ್ದಾರೆ. https://chat.whatsapp.com/EbVKVnWB6rlHT1mWtsgbch ನೂತನ ಅಧ್ಯಕ್ಷೆ ಡಾ.ವಾಣಿಶ್ರೀ ವಿಶ್ವನಾಥ್ ಮಾತನಾಡಿ ‘ಸತತ ಐದನೇ ಬಾರಿ ಸಿಂಗನಾಯಕನಹಳ್ಳಿ ರೈತರ…

Read More

ಬಂಟ್ವಾಳ: ಸಮಾಜ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸುರೇಶ್ ಕುಲಾಲ್ ಪುನರಾಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಜನಾರ್ದನ ಬೊಂಡಾಲ ಅವರನ್ನು ಆರಿಸಲಾಗಿದೆ. https://chat.whatsapp.com/EbVKVnWB6rlHT1mWtsgbch ಬಂಟ್ವಾಳದ ಬೈಪಾಸ್ ಜಂಕ್ಷನ್‌ನಲ್ಲಿರುವ ಸಂಘದ ಪ್ರಧಾನ ಕಚೇರಿಯಲ್ಲಿ ಗುರುವಾರ ಆಯ್ಕೆ ಪ್ರಕ್ರಿಯೆ ನಡೆಯಿತು. ಬಳಿಕ ನಡೆದ ಸಭೆಯಲ್ಲಿ ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ ನೂತನ ಅಧ್ಯಕ್ಷ ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿ ಸಮಾಜ ಸೇವಾ ಸಹಕಾರಿ ಸಂಘದ ಸ್ಥಾಪಕಾಧ್ಯಕ್ಷ ಡಾ.ಅಮ್ಮೆಂಬಳ ಬಾಳಪ್ಪ ಅವರ ಕನಸು ನನಸಾಗಿದೆ. ಅಧ್ಯಕ್ಷ ಸುರೇಶ್ ಕುಲಾಲ್ ಮತ್ತವರ ತಂಡದ ಪ್ರಾಮಾಣಿಕ ಕೆಲಸದಿಂದಾಗಿ ಇಂದು ಸಂಘ ಜಿಲ್ಲಾಮಟ್ಟದಲ್ಲಿ ಎದ್ದು ಕಾಣುತ್ತಿದೆ ಎಂದರು. ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕರುಣೇಂದ್ರ ಪೂಜಾರಿ ಕೊಂಬರಬೈಲು ಮಾತನಾಡಿ ಅಪಪ್ರಚಾರವನ್ನು ಮೆಟ್ಟಿ ನಿಂತು ಚುನಾವಣೆಯಲ್ಲಿ ಎಲ್ಲಾ ಸ್ಥಾನ ಗೆಲ್ಲುವ ಮೂಲಕ ಸುರೇಶ್ ಕುಲಾಲ್ ಅವರ ತಂಡ ಉತ್ತಮ ಕಾರ್ಯ ಮಾಡಿದೆ ಎಂದರು. ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು, ಶಂಭೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪುರುಷೋತ್ತಮ…

Read More

ರಾಜ್ಯಮಟ್ಟದ ತರಬೇತಿ ಕಾರ್ಯಕ್ರಮದಲ್ಲಿ ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌ ಸಲಹೆ ಮಂಗಳೂರು: ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರತಿದಿನ ೩ ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತಿದ್ದು, ಆದರೆ ಮಾರುಕಟ್ಟೆಯಲ್ಲಿ ೫ ಲಕ್ಷ ಲೀಟರ್ ಹಾಲು ಬೇಡಿಕೆ ಇದೆ. ಆದ್ದರಿಂದ ಹೆಚ್ಚುವರಿ ಹಾಲನ್ನು ಬೇರೆ ಜಿಲ್ಲೆಯಿಂದ ಖರೀದಿಸಿ ಮಾರಾಟ ಮಾಡಲಾಗುತ್ತಿದೆ. ದ.ಕ. ಸಹಕಾರಿ ಹಾಲು ಒಕ್ಕೂಟದ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರು ಇನ್ನೂ ಹೆಚ್ಚಿನ ಶ್ರಮ ವಹಿಸಿ, ಹೈನುಗಾರರನ್ನು ಉತ್ತೇಜಿಸಿ ಹೆಚ್ಚು ಹಾಲು ಸಂಗ್ರಹವಾಗುವಂತೆ ಮಾಡಿಕೊಳ್ಳಬೇಕು ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ ಅಧ್ಯಕ್ಷ ಡಾ.ಎಂ. ಎನ್.ರಾಜೇಂದ್ರ ಕುಮಾರ್ ಸಲಹೆ ನೀಡಿದರು. https://chat.whatsapp.com/EbVKVnWB6rlHT1mWtsgbch ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ದ. ಕ. ಜಿಲ್ಲಾ ಸಹಕಾರ ಯೂನಿಯನ್, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಸಹಕಾರ ಇಲಾಖೆ ಸಂಯುಕ್ತ ಆಶ್ರಯದಲ್ಲಿ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಇದರ ಅಧಿಕಾರಿಗಳಿಗೆ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ದ.ಕ. ಸಹಕಾರಿ…

Read More

ಗುರುಪುರ: ಗುರುಪುರ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ವಿನೋದಾ ಡಿ.ಅಂಚನ್‌ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. https://chat.whatsapp.com/EbVKVnWB6rlHT1mWtsgbch ಇತ್ತೀಚೆಗೆ ಕಾವ್ಯಾ ಪಿ.ಕೆ ಅವರ ಸಮ್ಮುಖದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ವಿನೋದಾ ಡಿ.ಅಂಚನ್‌ ಅವರನ್ನು ಸಂಘದ ಅಧ್ಯಕ್ಷರನ್ನಾಗಿ ಮೂರನೇ ಬಾರಿ ಪುನರಾಯ್ಕೆ ಮಾಡಲಾಯಿತು. ಉಪಾಧ್ಯಕ್ಷೆಯಾಗಿ ಸುನಂದಾ ಕೆ.ರೈ ಅವಿರೋಧವಾಗಿ ಆಯ್ಕೆಯಾದರು. ಮುಂದಿನ ಐದು ವರ್ಷ(2025-2030) ತನಕ ಆಡಳಿತ ಮಂಡಳಿ ಕಾರ್ಯನಿರ್ವಹಿಸಲಿದೆ. ನಿರ್ದೇಶಕರಾಗಿ ರತಿ ಶೆಟ್ಟಿ, ಮೋಹಿನಿ ಗೌಡ, ವೀಣಾ ಶೆಟ್ಟಿ,ಕಮಲಾ ಗೌಡ, ಜಯಲಕ್ಷ್ಮಿ, ಪ್ರೇಮಾ ಎಂ.ಶೆಟ್ಟಿ, ಜಯಂತಿ, ಪ್ರಮಿಳಾ ಶೆಟ್ಟಿ, ಪುಷ್ಪಾ, ವಿದ್ಯಾಲತ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ ವಸಂತಿ ಚುನಾವಣಾ ಪ್ರಕ್ರಿಯೆಯಲ್ಲಿ ಸಹಕರಿಸಿದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com

Read More

ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌ ಜನ್ಮದಿನ ಪ್ರಯುಕ್ತ ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಣೆ  ಮಂಗಳೂರು: ಸಹಕಾರಿ ಕ್ಷೇತ್ರದ ಬಲವರ್ಧನೆಗೆ ತನ್ನದೇ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ 75ನೇ ಹುಟ್ಟುಹಬ್ಬದ ಸಂಭ್ರಮಾಚರಣೆ ನಡೆಸಲು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಮಸ್ತ ಸಹಕಾರಿಗಳು ತೀರ್ಮಾನಿಸಿದ್ದು ಆ ಪ್ರಯುಕ್ತ ಮಂಗಳೂರಿನಲ್ಲಿ ಫೆ.24ರಂದು ಅಭಿವಂದನಾ ಸಮಾರಂಭ ನಡೆಯಲಿದೆ. https://chat.whatsapp.com/EbVKVnWB6rlHT1mWtsgbch ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್‌ ಗುರುತಿಸಿಕೊಂಡಿದ್ದು, ಬ್ಯಾಂಕಿನ ಬೆಳವಣಿಗೆಯಲ್ಲಿ ಪ್ರಾಮಾಣಿಕ ಸಾರ್ಥಕತೆ ಕಂಡ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಎಲ್ಲರ ಪ್ರೀತಿ ವಿಶ್ವಾಸ ಗಳಿಸಿದ್ದಾರೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮಾದರಿ ಸಹಕಾರಿ ನಾಯಕರಾಗಿ ರಾಜ್ಯ, ರಾಷ್ಟ್ರ ಮಟ್ಟದಲ್ಲೂ ಗುರುತಿಸಿಕೊಂಡಿರುವ ‘ಸಹಕಾರ ರತ್ನ’ ರಾಜೇಂದ್ರ ಕುಮಾರ್ ಅವರ 75ನೇ ಹುಟ್ಟುಹಬ್ಬದ ಸಂಭ್ರಮಾಚರಣೆ ಅಂಗವಾಗಿ ಫೆ.24ರಂದು ಬೆಳಗ್ಗೆ 10.30ಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್‌ ಸಭಾಂಗಣದಲ್ಲಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ 75ನೇ ಹುಟ್ಟುಹಬ್ಬದ ಸಂಭ್ರಮದ…

Read More

ಸಹಕಾರ ಕ್ಷೇತ್ರದ ಚಟುವಟಿಕೆಗಳಿಗೆ ಬಲ ತುಂಬುವುದು, ಸರ್ಕಾರ ಮತ್ತು ಸಹಕಾರಿ ಸಂಸ್ಥೆಗಳ ಮಧ್ಯೆ ಕೊಂಡಿಯಾಗಿ ಕೆಲಸ ಮಾಡುವ ಇರಾದೆ ಶಿವಮೊಗ್ಗ: ರಾಜ್ಯದಲ್ಲಿ ಸಹಕಾರಿ ಕ್ಷೇತ್ರದ ಚಟುವಟಿಕೆಗಳನ್ನು ಬಲಪಡಿಸಲು ಮತ್ತು ಸರ್ಕಾರ ಮತ್ತು ಸಹಕಾರಿ ಸಂಸ್ಥೆಗಳ ಮಧ್ಯೆ ಕೊಂಡಿಯಾಗಿ ಕೆಲಸ ಮಾಡಲು “ಸಹಕಾರಿಗಳ ವೇಗವರ್ಧಕ ಸಮಿತಿ” ಎಂಬ ನೂತನ ಸಂಘಟನೆಯೊಂದನ್ನು ಸ್ಥಾಪಿಸಲಾಗಿದೆ. https://chat.whatsapp.com/EbVKVnWB6rlHT1mWtsgbch ಭದ್ರಾವತಿ ತಾಲೂಕಿನ ಬರಂದೂರು ಬಳಿಯ ಪಂಚಮವೇದ ಸಾವಯವ ಕೃಷಿ ಕೇಂದ್ರದಲ್ಲಿ ಭಾನುವಾರ ಈ ಸಮಿತಿಯ ಮೊದಲ ಸಭೆ ನಡೆದಿದ್ದು ಇದೇ ವೇಳೆ ಸಹಕಾರಿಗಳ ವೇಗವರ್ಧಕ ಸಮಿತಿ ರಚಿಸಲಾಗಿದೆ. ರಾಜ್ಯದ ಹಲವಾರು ಹಿರಿಯ ಸಹಕಾರಿ ಮುಖಂಡರು, ಸಹಕಾರಿ ವಲಯದಲ್ಲಿ ಕೆಲಸ ಮಾಡಿದ್ದ ಅಧಿಕಾರಿಗಳು ಮತ್ತು ರಾಜ್ಯದ ಪ್ರತಿಷ್ಠಿತ ಸಹಕಾರಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಹಿರಿಯರು ಸಭೆಯಲ್ಲಿ ಭಾಗವಹಿಸಿದ್ದರು. ವಿಧಾನ ಪರಿಷತ್‌ ಮಾಜಿ ಸದಸ್ಯ ಮನೋಹರ ಮಸ್ಕಿ, ಸಭೆಯಲ್ಲಿ ಮಾತನಾಡಿ, ಈ ಸಮಿತಿಯು ಸಹಕಾರಿ ವಲಯದಲ್ಲಿ ನಡೆಯುತ್ತಿರುವ ಚಟುವಟಿಕೆಗಳು ಮತ್ತು ಪ್ರಸ್ತುತ ಘಟನೆಗಳಿಗೆ ಪ್ರತಿಕ್ರಿಯಿಸಬೇಕು. ಸಹಕಾರಿ ಕ್ಷೇತ್ರದ ಬೆಳವಣಿಗೆಗೆ ಸರ್ಕಾರದಿಂದ ಸಿಗಬೇಕಾದ…

Read More