Author: admin

2025ರ ಆಗಸ್ಟ್ 1ರಿಂದಲೇ ಅನ್ವಯ ನವದೆಹಲಿ: 1949ರ ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆಯ ತಿದ್ದುಪಡಿ ನಿಯಮದ ಪ್ರಕಾರ ಇನ್ಮುಂದೆ ಪಟ್ಟಣ ಸಹಕಾರಿ ಬ್ಯಾಂಕುಗಳ ನಿರ್ದೇಶಕರ ಗರಿಷ್ಠ ಅವಧಿಯನ್ನು 10 ವರ್ಷಕ್ಕೆ ನಿಗದಿಪಡಿಸಿ ಭಾರತ ಸರ್ಕಾರ ಪ್ರಕಟಣೆ ಹೊರಡಿಸಿದೆ. https://chat.whatsapp.com/EbVKVnWB6rlHT1mWtsgbch ಕಾಯ್ದೆಯ ಸೆಕ್ಷನ್ 10A ಅನ್ನು ಪಟ್ಟಣ ಸಹಕಾರಿ ಬ್ಯಾಂಕುಗಳಿಗೆ ಅನ್ವಯಿಸಲಾಗಿದ್ದು, ಅದರ ಪ್ರಕಾರ ಯುಸಿಬಿಯ ನಿರ್ದೇಶಕರು ಹತ್ತು ವರ್ಷಗಳನ್ನು ಮೀರಿದ ಅವಧಿಗೆ ನಿರಂತರವಾಗಿ ಅಧಿಕಾರ ವಹಿಸಿಕೊಳ್ಳುವಂತಿಲ್ಲ. ಸರ್ಕಾರವು ಹೊರಡಿಸಿದ ಪ್ರಕಟಣೆಯ ಪ್ರಕಾರ ಈ ತಿದ್ದುಪಡಿ 2025 ಆಗಸ್ಟ್ 1ರಿಂದಲೇ ಜಾರಿಗೆ ಬರಲಿದೆ ಎಂದು ಸ್ಪಷ್ಟಪಡಿಸಿದೆ. ನಿರ್ದೇಶಕರಾಗಿ ನಿರಂತರ 10 ವರ್ಷಗಳ ಅಧಿಕಾರಾವಧಿ ಪೂರ್ಣಗೊಳಿಸಿದ ನಂತರ ಮತ್ತೆ ಸ್ಪರ್ಧಿಸಲು ಅವಕಾಶವಾಗುವಂತೆ ಕುರಿತು ಹೆಚ್ಚಿನ ಸ್ಪಷ್ಟೀಕರಣದ ಅಗತ್ಯವಿದೆ. ಈ ಬಗ್ಗೆ ಪಟ್ಟಣ ಸಹಕಾರಿ ಬ್ಯಾಂಕುಗಳು ತಮ್ಮ ಉಪ-ಕಾನೂನುಗಳನ್ನು ತಿದ್ದುಪಡಿ ಮಾಡಲು ಅನುವು ಮಾಡಿಕೊಡಲು ಆರ್‌ಬಿಐ ವಿವರವಾದ ಮಾರ್ಗಸೂಚಿಗಳನ್ನು ಹೊರತರಬೇಕಿದೆ. ಕಾನೂನು ತಜ್ಞರ ಪ್ರಕಾರ ಆಗಸ್ಟ್ 1, 2025ರ ಮೊದಲು ಹತ್ತು ವರ್ಷಗಳನ್ನು ಪೂರ್ಣಗೊಳಿಸಿದ ಯಾವುದೇ ನಿರ್ದೇಶಕರಿಗೆ…

Read More

ಕೃಷ್ಣಾಪುರದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಉದ್ಘಾಟಿಸಿ ನಿಕಟಪೂರ್ವ ಕಾರ್ಪೊರೇಟರ್‌ ಲಕ್ಷ್ಮೀ ಶೇಖರ್‌ ದೇವಾಡಿಗ ಶ್ಲಾಘನೆ ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿಂಗ್ ವ್ಯವಹಾರದ ಜೊತೆಗೆ ನಿರಂತರವಾಗಿ ವೈದ್ಯಕೀಯ, ಶೈಕ್ಷಣಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿಕೊಂಡು ಬರುತ್ತಿದೆ. ಆತ್ಮಶಕ್ತಿ ಸಹಕಾರಿ ಸಂಘದಲ್ಲಿ ಮಹಿಳೆಯರಿಗೆ ಹೆಚ್ಚಿನ ಉದ್ಯೋಗಾವಕಾಶ ನೀಡಿರುವುದು ಶ್ಲಾಘನೀಯ. ಹೆಣ್ಣುಮಕ್ಕಳು ಕುಟುಂಬ ಸಾಗಿಸಲು ಆರ್ಥಿಕ ಶಕ್ತಿಯಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬೆನ್ನೆಲುಬಾಗಿ ನಿಂತಿದೆ ಎಂದು ನಿಕಟಪೂರ್ವ ಕಾರ್ಪೊರೇಟರ್‌ ಲಕ್ಷ್ಮೀ ಶೇಖರ್‌ ದೇವಾಡಿಗ ಹೇಳಿದರು. https://chat.whatsapp.com/EbVKVnWB6rlHT1mWtsgbch ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೃಷ್ಣಾಪುರ ಶಾಖೆಯ ಪ್ರಥಮ ವಾರ್ಷಿಕೋತ್ಸವ ಪ್ರಯುಕ್ತ ಕೃಷ್ಣಾಫುರ ಯುವಕ ಮಂಡಲ, ಯುವತಿ ಮಂಡಲ, ವನಿತಾ ಸೇವಾ ಸಮಾಜ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೃಷ್ಣಾಪುರ-ಕಾಟಿಪಳ್ಳ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಉಚಿತ ವೈದ್ಯಕೀಯ ಮತ್ತು ನೇತ್ರ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿ ಕೃಷ್ಣಾಪುರ ಯುವಕ ಮಂಡಲದ ಗೌರವಾಧ್ಯಕ್ಷ ಪ್ರಶಾಂತ್ ಮುಡಾಯಿಕೋಡಿ ಮಾತನಾಡಿ ಮನುಷ್ಯರಾಗಿ…

Read More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್‌ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಸಹಕಾರಿ ಪಿತಾಮಹ ದಿ.ಮೊಳಹಳ್ಳಿ ಶಿವರಾವ್‌ ಅವರ 145ನೇ ಜನ್ಮದಿನ ಆಚರಣೆ ಕಾರ್ಯಕ್ರಮ ಆಗಸ್ಟ್‌ 4ರಂದು ಸೋಮವಾರ ಬೆಳಗ್ಗೆ 10.30ಕ್ಕೆ ಮಂಗಳೂರು ಕೊಡಿಯಾಲ್‌ಬೈಲ್‌ನಲ್ಲಿರುವ ಎಸ್‌ಸಿಡಿಸಿಸಿ ಬ್ಯಾಂಕ್‌ ಸಭಾಂಗಣದಲ್ಲಿ ಆಯೋಜಿಸಲಾಗಿದೆ. https://chat.whatsapp.com/EbVKVnWB6rlHT1mWtsgbch ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಡಾ.ಉದಯ ಕುಮಾರ್‌ ಇರ್ವತ್ತೂರು ಉಪನ್ಯಾಸ ನೀಡಲಿದ್ದಾರೆ. ಇದೇ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್‌ ವತಿಯಿಂದ ಹೊರತರಲಿರುವ ಕರಾವಳಿ ಸಹಕಾರಿ ಮಾಸಪತ್ರಿಕೆಯನ್ನು ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಅವರು ಬಿಡುಗಡೆ ಮಾಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಶಶಿಕುಮಾರ್‌ ರೈ ಬಾಲ್ಯೊಟ್ಟು, ಎಸ್‌ಸಿಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ವಿನಯ ಕುಮಾರ್‌ ಸೂರಿಂಜೆ, ಎಸ್‌ಸಿಡಿಸಿಸಿ ಬ್ಯಾಂಕ್‌…

Read More

ನಾಲ್ಕು ದಶಕಗಳ ಅಪಾರ ಅನುಭವದ ಡಾ.ಉದಯಶಂಕರ್‌ ಅವಸ್ಥಿ ಸ್ಥಾನದಲ್ಲಿ ಜವಾಬ್ದಾರಿ ನವದೆಹಲಿ: ಇಫ್ಕೋ (ಭಾರತೀಯ ರೈತರ ರಸಗೊಬ್ಬರ ಸಹಕಾರಿ ಸಂಸ್ಥೆ)ಯ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಕೆ.ಜೆ ಪಟೇಲ್‌ ಅವರನ್ನು ನೇಮಿಸಲಾಗಿದೆ. ಇವರು ಇಫ್ಕೋದಲ್ಲಿ ನಾಲ್ಕು ದಶಕಗಳ ಕಾಲ ವ್ಯವಸ್ಥಾಪಕ ನಿರ್ದೇಶಕರಾಗಿ ಅಪಾರ ಅನುಭವ ಹೊಂದಿದ್ದ ಡಾ.ಉದಯಶಂಕರ್‌ ಅವಸ್ಥಿ ಅವರ ಸ್ಥಾನವನ್ನು ತುಂಬಲಿದ್ದಾರೆ. https://chat.whatsapp.com/EbVKVnWB6rlHT1mWtsgbch ವಿಶ್ವದ ಪ್ರಮುಖ ರಸಗೊಬ್ಬರ ಸಹಕಾರಿ ಸಂಸ್ಥೆ ಎನಿಸಿರುವ ಇಂಡಿಯನ್ ಫಾರ್ಮರ್ಸ್‌ ಫರ್ಟಿಲೈಸರ್ ಕೋಆಪರೇಟಿವ್ ಲಿಮಿಟೆಡ್ (ಇಫ್ಕೋ) ನಲ್ಲಿ ಸುಮಾರು ನಾಲ್ಕು ದಶಕಗಳ ವೃತ್ತಿಜೀವನದ ಅನುಭವ ಹೊಂದಿದ್ದ ಡಾ.ಅವಸ್ಥಿ ಜುಲೈ 31ರಂದು ನಿವೃತ್ತರಾಗಿದ್ದು ಅವರ ಜಾಗಕ್ಕೆ ಕೆ.ಜೆ ಪಟೇಲ್ ಹೊಸ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕವಾಗಿದೆ. ಇಫ್ಕೋ ಅಧ್ಯಕ್ಷ ದಿಲೀಪ್‌ಭಾಯ್ ಸಂಘಾನಿ ಅವರು ಗುರುವಾರ ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಇಫ್ಕೋದ ನೂತನ ಎಂ.ಡಿ ಅವರ ಆಯ್ಕೆಯನ್ನು ಘೋಷಿಸಿದರು. ಕೆ.ಜೆ ಪಟೇಲ್ ರಸಗೊಬ್ಬರ ಮತ್ತು ಸಹಕಾರಿ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಇದರಿಂದ ಅವರು ಇಫ್ಕೋದ ನಾವೀನ್ಯತೆ, ರೈತ…

Read More

ಬಜ್ಪೆ: ಇಲ್ಲಿನ ಪರಿವರ್ತನಾ ಕೋ ಆಪರೇಟಿವ್‌ ಸೊಸೈಟಿಯ ಮಂಗಳೂರು ಶಾಖೆಯಲ್ಲಿ ಇ ಸ್ಟ್ಯಾಂಪ್‌ ಸೌಲಭ್ಯದ ಉದ್ಘಾಟನಾ ಸಮಾರಂಭವು ಆಗಸ್ಟ್‌ 2ರಂದು ಶನಿವಾರ ಬೆಳಗ್ಗೆ 10.30ಕ್ಕೆ ಸ್ಟೇಟ್‌ಬ್ಯಾಂಕ್‌ನ ಪಯೋನಿಯರ್‌ ಕಾಂಪ್ಲೆಕ್ಸ್‌ನಲ್ಲಿ ನಡೆಯಲಿದೆ. https://chat.whatsapp.com/EbVKVnWB6rlHT1mWtsgbch ಪರಿವರ್ತನಾ ಕೋ ಆಪರೇಟಿವ್‌ ಸೊಸೈಟಿಯ ಅಧ್ಯಕ್ಷ ಕೃಷ್ಣಾನಂದ ಡಿ ಅಧ್ಯಕ್ಷತೆ ವಹಿಸಲಿದ್ದಾರೆ. ವಕೀಲ ಮೋಹನ್‌ದಾಸ್‌ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನೋಟರಿ ವಕೀಲ ಇಸ್ಮಾಯಿಲ್‌, ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ಬಿ.ಕೃಷ್ಣಪ್ಪ) ದ.ಕ. ಜಿಲ್ಲಾ ಸಂಚಾಲಕ ಸದಾಶಿವ ಪಡುಬಿದ್ರಿ, ಪರಿವರ್ತನಾ ಕೋ ಆಪರೇಟಿವ್‌ ಸೊಸೈಟಿಯ ಮಾಜಿ ಅಧ್ಯಕ್ಷ ವಿಲಿಯಂ ಇ ಲೋಬೊ, ಸಾಮಾಜಿಕ ಕಾರ್ಯಕರ್ತ ಮುನೀರ್‌ ಕಾಟಿಪಳ್ಳ, ಸಾಮರಸ್ಯ ಮಂಗಳೂರು ಇದರ ಅಧ್ಯಕ್ಷೆ ಮಂಜುಳಾ ನಾಯಕ್‌, ಪರಿವರ್ತನಾ ಕೋ ಆಪರೇಟಿವ್‌ ಸೊಸೈಟಿಯ ಕಾನೂನು ಸಲಹೆಗಾರ ಸುಕೇಶ್‌ ಕುಮಾರ್‌, ಭುವಿ ಭೂಮಾಪನ ಭೂ ದಾಖಲೆಗಳ ಸೇವಾ ಕೇಂದ್ರದ ಜಯಕುಮಾರ್‌, ವಕೀಲ ಸರ್ಫರಾಜ್‌, ದ.ಕ. ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ(ಸಿಐಟಿಯು)ದ ಅಧ್ಯಕ್ಷ ಮುಜಾಫರ್‌ ಅಹಮ್ಮದ್‌, ದ.ಕ. ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಹಕಾರ ಸಂಘದ…

Read More

ವಿಟ್ಲ: ವಿಟ್ಲ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ವಿಟ್ಲ ಶಿವಗಿರಿ ಪೊನ್ನೊಟ್ಟು ಶ್ರೀ ನಾರಾಯಣಗುರು ಸಭಾಭವನದಲ್ಲಿ ಇತ್ತೀಚೆಗೆ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ನಿಡ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. https://chat.whatsapp.com/EbVKVnWB6rlHT1mWtsgbch ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂಘವು ವಿಟ್ಲದಲ್ಲಿ ಪ್ರಧಾನ ಕಚೇರಿ ಹೊಂದಿದ್ದು, ಪುಣಚ ಮತ್ತು ಮಂಚಿಯಲ್ಲಿ ಶಾಖೆಗಳನ್ನು ಹೊಂದಿದೆ. 2024-25ನೇ ಆರ್ಥಿಕ ಸಾಲಿನಲ್ಲಿ ಸಂಘವು 98,74,22,869 ರೂ. ವ್ಯವಹಾರ ನಡೆಸಿದ್ದು, 44,41,355 ರೂ. ನಿವ್ವಳ ಲಾಭ ಗಳಿಸಿದೆ. ಸಂಘದ ಸದಸ್ಯರಿಗೆ ಈ ಬಾರಿ ಶೇ.11 ಡಿವಿಡೆಂಡ್ ವಿತರಿಸಲು ಆಡಳಿತ ಮಂಡಳಿ ತೀರ್ಮಾನಿಸಿದೆ. ಸಂಘವು ಕಳೆದ ಹತ್ತು ವರ್ಷಗಳಿಂದ ಆಡಿಟ್ ವರ್ಗೀಕರಣದಲ್ಲಿ ‘ಎ’ತರಗತಿ ಪಡೆದಿರುತ್ತದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಭಾರತೀಯ ಸೈನಿಕರಾಗಿ ಸೇವೆಗೈದ ಯೋಧರಾದ ಕ್ಯಾಪ್ಟನ್ ದಾಸಪ್ಪ ಪೂಜಾರಿ, ಬಾಲಕೃಷ್ಣ ಶೆಟ್ಟಿ, ಧನಂಜಯ ಗೌಡ ನಾಯೊಟ್ಟು, ಥೋಮಸ್ ಲೋಬೊ, ಉದಯಕುಮಾರ್ ರಾವ್, ಹರೀಶ್ ಶೆಟ್ಟಿ, ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವ ನರ್ತಕ ಶೇಖರ ಪರವ,…

Read More

ಅಕ್ಟೋಬರ್‌ನಲ್ಲಿ ಸಂತೆಕಟ್ಟೆಯಲ್ಲಿ 21ನೇ ಶಾಖೆ ಕಾರ್ಯಾರಂಭ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷ ಸಹಕಾರ ರತ್ನ ಅನಿಲ್‌ ಲೋಬೊ ಮಾಹಿತಿ ಮಂಗಳೂರು: ಕರ್ನಾಟಕದ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ 113 ವರ್ಷಗಳ ಇತಿಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಎಂಸಿಸಿ ಬ್ಯಾಂಕ್‌ನ ನೂತನ 20ನೇ ಶಾಖೆ ಬೈಂದೂರಿನಲ್ಲಿ ಆಗಸ್ಟ್‌ 3ರಂದು ಉದ್ಘಾಟನೆಗೊಳ್ಳಲಿದೆ. ನೂತನ ಶಾಖೆಯ ಉದ್ಘಾಟನೆ ಬಗ್ಗೆ ಬುಧವಾರ ಮಂಗಳೂರಿನ ಎಂಸಿಸಿ ಬ್ಯಾಂಕ್‌ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್‌ ಲೋಬೊ, ಎಂಸಿಸಿ ಬ್ಯಾಂಕ್‌ ಕರ್ನಾಟಕ ರಾಜ್ಯಾದ್ಯಂತ ಕಾರ್ಯವ್ಯಾಪ್ತಿ ಹೊಂದಿದ್ದು, ಮಂಗಳೂರಿನಲ್ಲಿ ನವೀಕೃತಗೊಂಡ ಸುಸಜ್ಜಿತ ಆಡಳಿತ ಕಚೇರಿಯೊಂದಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 19 ಶಾಖೆಗಳನ್ನು ಹೊಂದಿದೆ. 20ನೇ ಶಾಖೆ ಬೈಂದೂರಿನಲ್ಲಿ ಮುಂದಿನ ವಾರ ಉದ್ಘಾಟನೆಗೊಳ್ಳಲಿದ್ದು, 21ನೇ ಶಾಖೆ ಅಕ್ಟೋಬರ್‌ 5ರಂದು ಕಾರ್ಯಾರಂಭಗೊಳ್ಳಲಿದೆ ಎಂದು ತಿಳಿಸಿದರು. https://chat.whatsapp.com/EbVKVnWB6rlHT1mWtsgbch ಪ್ರಸಕ್ತ ವಿತ್ತೀಯ ವರ್ಷದಲ್ಲಿ ಎಂಸಿಸಿ ಬ್ಯಾಂಕ್‌ ಎಲ್ಲಾ ವ್ಯವಹಾರ ಮಾಪನಗಳಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದೆ. ಕರಾವಳಿಯ ದಕ್ಷಿಣ ಕನ್ನಡ…

Read More

ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷ ಜಿ.ನಂಜನ ಗೌಡ ಅಭಿಪ್ರಾಯ ಮಂಗಳೂರು: ಸೌಹಾರ್ದ ಸಹಕಾರಿ ಸಂಘಗಳು ರಾಜ್ಯಾದ್ಯಂತ ಉತ್ತಮವಾಗಿ ಕೆಲಸ ಮಾಡುತ್ತಿದ್ದು ಪ್ರಗತಿಪಥದಲ್ಲಿ ಮುನೆನಡೆಯುತ್ತಿವೆ. ದೇಶದ ಪ್ರಗತಿಗೆ ಸಹಕಾರಿ ಸಂಘಗಳಿಂದ ಅಪಾರವಾದ ಕೊಡುಗೆ ಇದೆ ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷ ಜಿ.ನಂಜನ ಗೌಡ ಅಭಿಪ್ರಾಯಪಟ್ಟರು. https://chat.whatsapp.com/EbVKVnWB6rlHT1mWtsgbch ಮಂಗಳೂರಿನ ಶ್ರೀನಿವಾಸ ಹೋಟೆಲ್‌ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ. ಇದರ ವತಿಯಿಂದ ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯ ಸೌಹಾರ್ದ ಸಹಕಾರಿಗಳ ಸಂಪರ್ಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಪ್ರತಿವರ್ಷದಂತೆ ಈ ಬಾರಿಯೂ ಸೌಹಾರ್ದ ಸಂಯುಕ್ತ ಸಹಕಾರಿಯ ಸಾಮಾನ್ಯ ಸಭೆ ನಡೆಸುವ ಮೊದಲು ರಾಜ್ಯಾದ್ಯಂತ ಎಲ್ಲ ವಿಭಾಗಗಳಲ್ಲಿ ಸಹಕಾರ ಕ್ಷೇತ್ರದ ಜ್ವಲಂತ ಸಮಸ್ಯೆಗಳು, ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗುತ್ತದೆ. ಸೌಹಾರ್ದ ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಈ ಸಭೆ ಮಹತ್ವದ್ದಾಗಿದೆ ಎಂದು ಹೇಳಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಹಕಾರ ರತ್ನ ಎಸ್ ಆರ್ ಸತೀಶ್ಚಂದ್ರ ಮಾತನಾಡಿ, ಕೇಂದ್ರ…

Read More

ಬೈಂದೂರು: ಇಲ್ಲಿನ ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಕಳೆದ ಸಾಲಿನಲ್ಲಿ 225 ಕೋಟಿ ರೂ. ಅಧಿಕ ವ್ಯವಹಾರ ನಡೆಸಿ, 79,17,693.40 ರೂ. ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಎಸ್.ರಾಜು ಪೂಜಾರಿ ಹೇಳಿದರು. https://chat.whatsapp.com/EbVKVnWB6rlHT1mWtsgbch ಸಂಘದ ಪ್ರಧಾನ ಕಚೇರಿ ಆವರಣದಲ್ಲಿ ಭಾನುವಾರ ನಡೆದ 2024-25ನೇ ಸಾಲಿನ ಸಂಘದ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಾನಮನಸ್ಕರು ಸೇರಿ ಸ್ಥಾಪಿಸಿದ ಈ ಸಂಸ್ಥೆ ಜನಸಾಮಾನ್ಯರ ಸಂಸ್ಥೆಯಾಗಿ ಜಿಲ್ಲೆಯಲ್ಲೇ ಹೆಸರು ಗಳಿಸಿದೆ. ಸಮಾಜದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿ, ಮಹಿಳಾ ಸಬಲೀಕರಣಕ್ಕೆ ಸಹಕಾರಿಯಾಗಿದೆ. ಬೈಂದೂರಿನಲ್ಲಿ 16 ವರ್ಷಗಳ ಹಿಂದೆ ಹುಟ್ಟಿಕೊಂಡ ನಮ್ಮ ಸಂಘವು ಬೈಂದೂರಿನ ಕೇಂದ್ರಸ್ಥಾನದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದ್ದು, ನಾಗೂರು, ಗೋಳಿಹೊಳೆ, ನಾವುಂದ, ಕಂಬದಕೋಣೆಗಳಲ್ಲಿ ಶಾಖೆಯನ್ನು ತೆರೆಯಲಾಗಿದೆ. ವರ್ಷಾಂತ್ಯಕ್ಕೆ 43 ಕೋಟಿ ರೂಪಾಯಿ ಠೇವಣೆ ಹೊಂದಿದ್ದು ಒಟ್ಟು 225 ಕೋಟಿಗೂ ಅಧಿಕ ವಾರ್ಷಿಕ ವ್ಯವಹಾರ ಹೊಂದಿದ್ದು ಸಂಘದ ಸದಸ್ಯರಿಗೆ ಶೇ.13 ಡಿವಿಡೆಂಡ್ ಘೋಷಿಸಲಾಗಿದೆ ಎಂದು ತಿಳಿಸಿದರು. ಸಂಘದ…

Read More

ಬೆಳ್ತಂಗಡಿ: ಬೆಳ್ತಂಗಡಿಯ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಭಗೀರಥ ಜಿ. ಮತ್ತು ಉಪಾಧ್ಯಕ್ಷರಾಗಿ ಜಗದೀಶ್ಚಂದ್ರ ಡಿ.ಕೆ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಭಗೀರಥ ಜಿ. ಅವರು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ, ಗುರುವಾಯನಕೆರೆ ಪ್ರಾಥಮಿಕ ಸಹಕಾರ ಸಂಘದ ಅಧ್ಯಕ್ಷರಾಗಿ, ಪ್ರಸ್ತುತ ನಿರ್ದೇಶಕರಾಗಿ, ಮೇಲಂತಬೆಟ್ಟು ನಾಗಬ್ರಹ್ಮ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ, ಕೃಷಿಕ ಸಮಾಜದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಜಗದೀಶ್ಚಂದ್ರ ಡಿ.ಕೆ. ಲಯನ್ಸ್ ಪ್ರಾಂತೀಯ ಅಧ್ಯಕ್ಷರಾಗಿ, ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕೇತ್ರ ಅಭಿವೃದ್ಧಿ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. https://chat.whatsapp.com/EbVKVnWB6rlHT1mWtsgbch ಸಂಘದ ಅಧ್ಯಕ್ಷರಾಗಿದ್ದ ಪದ್ಮನಾಭ ಮಾಣಿಂಜ ಇತ್ತೀಚೆಗೆ ನಿಧನ ಹೊಂದಿದ್ದು, ಅವರಿಂದ ತೆರವುಗೊಂಡಿರುವ ಅಧ್ಯಕ್ಷ ಸ್ಥಾನಕ್ಕೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಭಾನುವಾರ ಚುನಾ ವಣೆ ನಡೆಯಿತು. ಬೆಳ್ತಂಗಡಿ ತಾಲೂಕು ಸಹಕಾರ ಸಂಘಗಳ ಸಹಕಾರ ಅಭಿವೃದ್ಧಿ ಅಧಿಕಾರಿ ಬಿ.ವಿ.ಪ್ರತಿಮಾ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಸಂಘದ ನಿರ್ದೇಶಕರಾದ ಸಂಜೀವ ಪೂಜಾರಿ, ತನುಜಾ ಶೇಖರ, ಕೆ.ಪಿ.ದಿವಾಕರ, ಧರ್ಣಪ್ಪ…

Read More