Author: admin
ವಾರ್ಷಿಕ ಮಹಾಸಭೆಯಲ್ಲಿ ಸಹಕಾರ ರತ್ನ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಬಣ್ಣನೆ ಮಂಗಳೂರು: ಸಹಕಾರಿ ತತ್ವ ಮತ್ತು ಧ್ಯೇಯಗಳನ್ನು ಜಿಲ್ಲಾದ್ಯಂತ ಪ್ರಸಾರ ಮಾಡುವ ಮೂಲಕ ಸಹಕಾರಿ ಚಳವಳಿಯನ್ನು ಕಾಲಕಾಲಕ್ಕೆ ಮುನ್ನಡೆಸುವ ಮಹತ್ವದ ಜವಾಬ್ದಾರಿ ನಿರ್ವಹಿಸುತ್ತಿರುವ ಸಂಸ್ಥೆ ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟು ಅವರ ಕ್ರಿಯಾಶೀಲ ನಾಯಕತ್ವದಡಿಯಲ್ಲಿ ರಾಜ್ಯದಲ್ಲೇ ಮಾದರಿ ಯೂನಿಯನ್ ಆಗಿ ರೂಪುಗೊಂಡಿದೆ ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರೂ ಆಗಿರುವ ಸಹಕಾರ ರತ್ನ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಬಣ್ಣಿಸಿದರು. https://chat.whatsapp.com/FCEnlTkAKCC0MGPhXtX4i4 ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ದ.ಕ. ಜಿಲ್ಲಾ ಸಹಕಾರ ಯೂನಿಯನ್‌ನ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯ ಸಹಕಾರ ಸಂಘಗಳಿಗೆ ಕಾಲಕಾಲಕ್ಕೆ ಬೇಕಾದ ಮಾರ್ಗದರ್ಶನಗಳು, ಸರ್ಕಾರದಿಂದ ಆಗುತ್ತಿರುವ ತಿದ್ದುಪಡಿಗಳು, ಹೊಸ ಹೊಸ ಸುತ್ತೋಲೆಗಳ ಮಾಹಿತಿಗಳನ್ನು ನೀಡುತ್ತ ದ.ಕ ಜಿಲ್ಲಾ ಸಹಕಾರ ಯೂನಿಯನ್ ಸಹಕಾರಿ ಆಂದೋಲನವನ್ನು ಸಮರ್ಥವಾಗಿ ಮುನ್ನಡೆಸುತ್ತಿದೆ ಎಂದು ಶ್ಲಾಘಿಸಿದರು. ಅಧ್ಯಕ್ಷತೆ ವಹಿಸಿ…
ಐದು ಶಾಖೆಗಳೂ ಲಾಭದಲ್ಲಿ; ಆರೋಗ್ಯ, ಶಿಕ್ಷಣ, ಸಾಹಿತ್ಯ ಹಾಗೂ ಸೈನಿಕರ ಕಲ್ಯಾಣಕ್ಕೆ ಆದ್ಯತೆ ಮಂಗಳೂರು: ಹಂಪನಕಟ್ಟೆಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಮಂಗಳೂರಿನ ಪ್ರತಿಷ್ಠಿತ ಸೌಹಾರ್ದ ಸಹಕಾರಿ ಸಂಸ್ಥೆ ಶ್ರೀಶಾ ಸೌಹಾರ್ದ ಸೊಸೈಟಿಯು ಸೆಪ್ಟೆಂಬರ್ 6ರಂದು ಪದವಿನಂಗಡಿಯಲ್ಲಿ ತನ್ನ 6ನೇ ಶಾಖೆಯನ್ನು ಆರಂಭಿಸಲಿದೆ. ಶ್ರೀಶಾ ಸೌಹಾರ್ದ ಸೊಸೈಟಿಯು ಪ್ರಸ್ತುತ ಐದು ಶಾಖೆಗಳ ಮೂಲಕ ಗ್ರಾಹಕರಿಗೆ ಸೇವೆ ಸಲ್ಲಿಸುತ್ತಿದ್ದು, ಶಿಸ್ತುಬದ್ಧ ಹಾಗೂ ಪಾರದರ್ಶಕ ವ್ಯವಹಾರದ ಮೂಲಕ ಗ್ರಾಹಕರ ವಿಶ್ವಾಸ ಮತ್ತು ಮೆಚ್ಚುಗೆಗೆ ಪಾತ್ರವಾಗಿದೆ. https://chat.whatsapp.com/FCEnlTkAKCC0MGPhXtX4i4 ಪದವಿನಂಗಡಿ ಹಾಗೂ ಕಾವೂರು ಭಾಗದ ಸದಸ್ಯರ ಬಹುದಿನಗಳ ಬೇಡಿಕೆ ಹಾಗೂ ಒತ್ತಾಸೆಯ ಹಿನ್ನೆಲೆಯಲ್ಲಿ ಇದೀಗ ಆರನೇ ಶಾಖೆ ಆರಂಭಿಸಲಾಗುತ್ತಿದೆ. ಪದವಿನಂಗಡಿಯ ಏರ್‌ಪೋರ್ಟ್ ರಸ್ತೆಯಲ್ಲಿರುವ ‘ಸನ್ನಿಧಿ ಎನ್‌ಕ್ಲೇವ್’ನ ಮೊದಲನೇ ಮಹಡಿಯಲ್ಲಿ, ಇತ್ತೀಚೆಗೆ ಖರೀದಿಸಿರುವ ಸುಮಾರು 1,500 ಚದರ ಅಡಿ ವಿಸ್ತೀರ್ಣದ ಸ್ಥಳದಲ್ಲಿ ನೂತನ ಶಾಖೆ ಕಾರ್ಯಾರಂಭ ಮಾಡಲಿದೆ. ಶ್ರೀಶಾ ಸೌಹಾರ್ದ ಸೊಸೈಟಿ ಆರಂಭವಾಗಿ ಏಳು ವರ್ಷಗಳು ಪೂರ್ಣಗೊಳ್ಳುತ್ತಿರುವ ಸಂದರ್ಭದಲ್ಲಿ 6ನೇ ಶಾಖೆಯ ಉದ್ಘಾಟನೆ ನಡೆಯುತ್ತಿರುವುದು ಸಂಸ್ಥೆಗೆ ಮತ್ತೊಂದು ಮಹತ್ವದ ಮೈಲಿಗಲ್ಲಾಗಿದೆ.…
₹484.78 ಕೋಟಿ ವಹಿವಾಟು, ₹54.25 ಲಕ್ಷ ಲಾಭ; ಶೇ.97.5ರಷ್ಟು ಸಾಲ ವಸೂಲಿ ಹಳೆಯಂಗಡಿ: ಹಳೆಯಂಗಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಹಳೆಯಂಗಡಿಯ ಹರಿ ಓಂ ಸಭಾಭವನದಲ್ಲಿ ನಡೆಯಿತು. ಸಭೆಯಲ್ಲಿ ಸದಸ್ಯರಿಗೆ ಶೇ.9.5ರಷ್ಟು ಡಿವಿಡೆಂಡ್ ನೀಡಲು ಘೋಷಿಸಲಾಯಿತು. https://chat.whatsapp.com/FCEnlTkAKCC0MGPhXtX4i4 ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಎಚ್.ವಸಂತ್ ಬೆರ್ನಾರ್ಡ್ ಮಾತನಾಡಿ, 2025-26ನೇ ಸಾಲಿನಲ್ಲಿ ಸೊಸೈಟಿ ₹484.78 ಕೋಟಿ ವಹಿವಾಟು ನಡೆಸಿದ್ದು, ₹54.25 ಲಕ್ಷ ಲಾಭ ಗಳಿಸಿದೆ. ಪ್ರಸ್ತುತ ₹70 ಲಕ್ಷ ಪಾಲು ಬಂಡವಾಳ ಹೊಂದಿದ್ದು, 3,184 ಸದಸ್ಯರನ್ನು ಹೊಂದಿದೆ. ಒಟ್ಟು ₹44.93 ಕೋಟಿ ಠೇವಣಿ ಸಂಗ್ರಹವಾಗಿದ್ದು, ₹37 ಕೋಟಿ ಸಾಲ ವಿತರಿಸಲಾಗಿದೆ. ಸಾಲ ವಸೂಲಾತಿ ಪ್ರಮಾಣ ಶೇ.97.5ರಷ್ಟಿದ್ದು, ಈ ಸಾಲಿನಲ್ಲಿಯೂ ಸೊಸೈಟಿಗೆ ಆಡಿಟ್ ವರ್ಗೀಕರಣದಲ್ಲಿ ‘ಎ’ ದರ್ಜೆ ದೊರೆತಿದೆ ಎಂದು ಹೇಳಿದರು. ಎಚ್.ನಾರಾಯಣ ಸನಿಲ್ ಮರಣೋತ್ತರ ನಿಧಿ ಸೊಸೈಟಿಯ ಸದಸ್ಯರು ಮೃತಪಟ್ಟ ಸಂದರ್ಭದಲ್ಲಿ ಅವರ ಅಂತ್ಯಕ್ರಿಯೆಗೆ ನೆರವಾಗುವ ಉದ್ದೇಶದಿಂದ ‘ಎಚ್.ನಾರಾಯಣ ಸನಿಲ್ ಮರಣೋತ್ತರ…
ವಾರ್ಷಿಕ ಮಹಾಸಭೆಯಲ್ಲಿ ಸದಸ್ಯರಿಗೆ ಶೇ.14 ಡಿವಿಡೆಂಡ್ ಘೋಷಣೆ: ಗ್ರಾಮದ ಎಂಟು ಸಾಧಕರಿಗೆ ಸನ್ಮಾನ ಪುತ್ತೂರು: ಇರ್ದೆ-ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2025-26ನೇ ಸಾಲಿನಲ್ಲಿ ಉತ್ತಮ ಆರ್ಥಿಕ ಸಾಧನೆ ದಾಖಲಿಸಿದ್ದು, ₹1,32,30,718.91 ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ ಶೇ.14ರಷ್ಟು ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ ಎಂದು ಸಂಘದ ಅಧ್ಯಕ್ಷ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟು ತಿಳಿಸಿದರು. https://chat.whatsapp.com/FCEnlTkAKCC0MGPhXtX4i4 ಇರ್ದೆ-ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಭಾನುವಾರ ನಡೆದ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವರದಿ ವರ್ಷದ ಅಂತ್ಯಕ್ಕೆ ಸಂಘದಲ್ಲಿ 3,398 ಸದಸ್ಯರು ಇದ್ದು, ₹3,61,18,065 ಪಾಲು ಬಂಡವಾಳವಿದೆ. ವರ್ಷಾಂತ್ಯಕ್ಕೆ ₹39,70,38,276.94 ಠೇವಣಿ ಇದ್ದು, ಸದಸ್ಯರಿಗೆ ವಿವಿಧ ರೀತಿಯಲ್ಲಿ ನೀಡಿರುವ ಸಾಲದ ಮೊತ್ತ ₹46,73,23,720 ಆಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗೆ…
ಚುನಾವಣಾ ತರಬೇತಿ ಕಾರ್ಯಾಗಾರದಲ್ಲಿ ದ.ಕ. ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಸಲಹೆ ಪುತ್ತೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿ., ಮಂಗಳೂರು, ಸಹಕಾರ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆಇವರ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ಉಪವಿಭಾಗದಲ್ಲಿ ಚುನಾವಣೆ ಇರುವ ಸಹಕಾರ ಸಂಘಗಳ ಮುಖ್ಯಕಾರ್ಯನಿರ್ವಹಣಾಧಿಕಾರಿಯವರಿಗೆ ಚುನಾವಣಾ ತರಬೇತಿ ಕಾರ್ಯಾಗಾರ ಸೋಮವಾರ ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಪುತ್ತೂರು ಶಾಖೆಯ ಸಭಾಭವನದಲ್ಲಿ ನಡೆಯಿತು. https://chat.whatsapp.com/FCEnlTkAKCC0MGPhXtX4i4 ದ.ಕ. ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಹಕಾರ ಸಂಘಗಳ ಸುಲಭವಾದ ಕಾರ್ಯನಿರ್ವಹಣೆಗೆ ಸಂಬಂಧಿಸಿ ಸಹಕಾರ ಯೂನಿಯನ್ ಕಾಲಕಾಲಕ್ಕೆ ನಡೆಸುವ ತರಬೇತಿ ಶಿಬಿರಗಳಲ್ಲಿ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಭಾಗವಹಿಸಿದರೆ ಹೆಚ್ಚಿನ ಉಪಯೋಗವಾಗುತ್ತದೆ. ಕಾಲಕಾಲಕ್ಕೆ ಸಹಕಾರಿ ನಿಯಮಗಳು, ಆರ್‌ಬಿಐನ ಸುತ್ತೋಲೆಗಳು, ಸರ್ಕಾರದ ನೀತಿ ನಿರೂಪಣೆಗಳು ಬದಲಾಗುತ್ತಲೇ ಇದ್ದು, ಈ ಬಗ್ಗೆ ಸಹಕಾರ ಸಂಘಗಳ ಸಿಇಒಗಳಿಗೆ ಅರಿವು ಅಗತ್ಯವಾಗಿ…
ಯುಸಿಬಿಗಳಿಗೆ ಎಲ್‌ಬಿಎಸ್ ವ್ಯಾಪ್ತಿಯಿಂದ ವಿನಾಯಿತಿ; ಆದರೆ ಆದ್ಯತಾ ವಲಯಕ್ಕೆ ಸಾಲ ನೀಡಿಕೆ (ಪಿಎಸ್‌ಎಲ್) ಗುರಿ ಕಡ್ಡಾಯ: ಆರ್‌ಬಿಐ ಸ್ಪಷ್ಟನೆ ನವದೆಹಲಿ: ಪಟ್ಟಣ ಸಹಕಾರಿ ಬ್ಯಾಂಕ್‌ಗಳಿಗೆ (ಯುಸಿಬಿ) ಲೀಡ್ ಬ್ಯಾಂಕ್ ಯೋಜನೆಗಳು (ಎಲ್‌ಬಿಎಸ್) ಅನ್ವಯಿಸುವುದಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಮಹತ್ವದ ಸ್ಪಷ್ಟನೆ ನೀಡಿದೆ. ಎಲ್‌ಬಿಎಸ್ ವ್ಯಾಪ್ತಿಯಿಂದ ಹೊರಗಿದ್ದರೂ, ಪಟ್ಟಣ ಸಹಕಾರಿ ಬ್ಯಾಂಕ್‌ಗಳು ಆದ್ಯತಾ ವಲಯಕ್ಕೆ ಸಾಲ ನೀಡಿಕೆಯ (ಪಿಎಸ್‌ಎಲ್) ಗುರಿಗಳನ್ನು ಕಡ್ಡಾಯವಾಗಿ ಪೂರೈಸಬೇಕು ಎಂದು ಆರ್‌ಬಿಐ ತಾಕೀತು ಮಾಡಿದೆ. https://chat.whatsapp.com/FCEnlTkAKCC0MGPhXtX4i4 ಈ ಕುರಿತು ಅರವಿಂದ್ ಕುಮಾರ್ ಶ್ರೀವಾಸ್ತವ ಎಂಬುವವರು ಸಲ್ಲಿಸಿದ್ದ ಮಾಹಿತಿ ಹಕ್ಕು ಅರ್ಜಿಗೆ ಆರ್‌ಬಿಐ ನೀಡಿರುವ ಉತ್ತರವು ಪಟ್ಟಣ ಸಹಕಾರಿ ಬ್ಯಾಂಕ್‌ಗಳ ನಿಯಂತ್ರಣಾತ್ಮಕ ಜವಾಬ್ದಾರಿಗಳ ಕುರಿತು ಮಹತ್ವದ ಸ್ಪಷ್ಟತೆ ನೀಡಿದೆ. ಜೂನ್ 19, 2026ರಂದು ಆರ್‌ಬಿಐ ಪರಿಷ್ಕರಿಸಿದ್ದ ಲೀಡ್ ಬ್ಯಾಂಕ್ ಯೋಜನೆಗಳ ಮಾರ್ಗಸೂಚಿಗಳಲ್ಲಿ ಪಟ್ಟಣ ಸಹಕಾರಿ ಬ್ಯಾಂಕ್‌ಗಳನ್ನು ಬ್ಲಾಕ್ ಮಟ್ಟದ ಬ್ಯಾಂಕರ್‌ಗಳ ಸಮಿತಿಯು (ಬಿಎಲ್‌ಬಿಸಿ), ಜಿಲ್ಲಾ ಸಮಾಲೋಚನಾ ಸಮಿತಿ (ಡಿಸಿಸಿ), ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ಹಾಗೂ ರಾಜ್ಯಮಟ್ಟದ ಬ್ಯಾಂಕರ್ಸ್…
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಇದರ ನೀರುಮಾರ್ಗ ಶಾಖೆಯ ನಾಲ್ಕನೇ ವಾರ್ಷಿಕೋತ್ಸವದ ಪ್ರಯುಕ್ತ ಲಯನ್ಸ್ ಕ್ಲಬ್ ಮಂಗಳೂರು ಆದಿತ್ಯ, ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿ ನೀರುಮಾರ್ಗ, ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘ ಸುಬ್ರಹ್ಮಣ್ಯ ನಗರ ನೀರುಮಾರ್ಗ ಇವರ ಜಂಟಿ ಆಶ್ರಯದೊಂದಿಗೆ ಮಂಗಳ ಕಾಲೇಜು, ಮಂಗಳ ಆಸ್ಪತ್ರೆ, ಮಂಗಳ ಕಿಡ್ನಿ ಫೌಂಡೇಶನ್ ಕದ್ರಿ ಮಂಗಳೂರು ಇದರ ವೈದ್ಯರಿಂದ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಹಾಗೂ ದಂತ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿತ್ತು. https://chat.whatsapp.com/FCEnlTkAKCC0MGPhXtX4i4 ಸುಬ್ರಹ್ಮಣ್ಯ ಭಜನಾ ಮಂಡಳಿ ಸಭಾಭವನದಲ್ಲಿ ನಡೆದ ಕಾರ್ಯಕ್ರಮವನ್ನು ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘ ಸುಬ್ರಹ್ಮಣ್ಯ ನಗರ ನೀರುಮಾರ್ಗ ಇದರ ಗೌರವ ಅಧ್ಯಕ್ಷ ಲಕ್ಷ್ಮಣ ಪೂಜಾರಿ ಉದ್ಘಾಟಿಸಿ ಮಾತನಾಡಿ, ಈ ವೈದ್ಯಕೀಯ ಶಿಬಿರವು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 113ನೇ ಉಚಿತ ಶಿಬಿರವಾಗಿದೆ. ಸಾರ್ವಜನಿಕರ ಆರೋಗ್ಯದ ಕಾಳಜಿಯಿಂದ ಸಂಘವು ಮಾಡುತ್ತಿರುವ ಇಂತಹ ಕೆಲಸಗಳು ಶ್ಲಾಘನೀಯ. ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.…
ಎಸ್.ಕೆ. ಗೋಲ್ಡ್‌ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯ ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ಮಂಗಳೂರು: ಯುವಜನತೆ ಸಮಾಜಕ್ಕೆ ಸದಾ ಒಳಿತಾಗುವ ಕೆಲಸಗಳನ್ನು ಮಾಡುತ್ತ ಸಾಗಬೇಕು. ಪಾಶ್ಚಿಮಾತ್ಯ ಸಂಸ್ಕೃತಿಯ ಬಿರುಗಾಳಿಯಲ್ಲಿ ಸನಾತನದ ದೀಪ ನಂದಿ ಹೋಗುತ್ತಿದೆ. ಇಂತಹ ಸ್ಥಿತಿ ಬಾರದಂತೆ ಸಂಕಲ್ಪ ಮಾಡುವ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂನ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. https://chat.whatsapp.com/FCEnlTkAKCC0MGPhXtX4i4 ಎಸ್.ಕೆ. ಗೋಲ್ಡ್‌ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಮಂಗಳೂರಿನ ಬಾಳಂ ಭಟ್ ಸಭಾಂಗಣದಲ್ಲಿ ಭಾನುವಾರ ನಡೆದ ವಿದ್ಯಾರ್ಥಿವೇತನ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು. ವಿದ್ಯೆಯಿಂದ ಜ್ಞಾನ ಹೆಚ್ಚಾಗಬೇಕೇ ಹೊರತು ಅಹಂಕಾರ ಹೆಚ್ಚಾಗಬಾರದು. ಇದು ಮುಂದೆ ವಿಷಕ್ಕೆ ಸಮಾನವಾಗಿ ಬಿಡುತ್ತದೆ. ಜ್ಞಾನದಿಂದ ಅಹಂಕಾರ ಮೂಡಿದರೆ ಸಮಾಜಕ್ಕೆ ಒಳಿತಾಗದು. ವಿದ್ಯೆಯಿಂದ ಗಳಿಸಿದ ಜ್ಞಾನದಿಂದ ವಿನಯ ಹೆಚ್ಚಿದಂತೆ ಸಮಾಜಕ್ಕೆ ಒಳಿತು ಉಂಟಾಗುತ್ತದೆ ಎಂದರು. ಕಾರ್ಕಳ ಜ್ಞಾನಸುಧಾ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ…
ಬಂಟ್ವಾಳ: ರಾಜ್ಯದ ರೈತರ ಬೇಡಿಕೆಗಳಿಗೆ ಸ್ಪಂದಿಸಿ ಕೇಂದ್ರ ಕೃಷಿ ಇಲಾಖೆಯ ಆದೇಶದಂತೆ 2026 -27ನೇ ಸಾಲಿನ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಅಡಿಕೆ ಮತ್ತು ಕಾಳುಮೆಣಸು, ಬೆಳೆಗಳಿಗೆ ಬೆಳೆ ವಿಮೆಯ ಪ್ರೀಮಿಯಂ ಪಾವತಿಸುವ ದಿನಾಂಕವನ್ನು ಆಗಸ್ಟ್ 14ರ ತನಕ ವಿಸ್ತರಣೆ ಮಾಡಿ ತೋಟಗಾರಿಕಾ ಇಲಾಖೆ ಆದೇಶ ಹೊರಡಿಸಿದೆ. https://chat.whatsapp.com/FCEnlTkAKCC0MGPhXtX4i4 ಇದರಿಂದ ಬೆಳೆ ವಿಮೆ ಪ್ರೀಮಿಯಂ ಪಾವತಿ ಮಾಡದ ರೈತರಿಗೆ ಮತ್ತೊಂದು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಳೆ ವಿಮೆ ಪ್ರೀಮಿಯಂ ಪಾವತಿಸಲು ಬಾಕಿ ಉಳಿದಿರುವ ರೈತ ರು ವಿಮೆ ಪ್ರೀಮಿಯಂ ಕಂತನ್ನು ಇದೇ ತಿಂಗಳ 14ರ ಒಳಗೆ ಸಂಬಂಧಪಟ್ಟ ತಮ್ಮ ಕಾರ್ಯವ್ಯಾಪ್ತಿಯ ಪ್ರಾಥಮಿಕ ಕೃಇ ಪತ್ತಿನ ಸಹಕಾರ ಸಂಘಗಳಲ್ಲಿ ಪಾವತಿಸಿ ಯೋಜನೆಯ ಪ್ರಯೋಜನ ಪಡೆಯಲು ವಿನಂತಿಸಿದ್ದಾರೆ.
ಪುತ್ತೂರು: ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ ವ್ಯಾಪ್ತಿಗೊಳಪಟ್ಟ ಸವಣೂರು, ಪುಣ್ಚಪ್ಪಾಡಿ, ಕುದ್ಮಾರು, ಬೆಳಂದೂರು ಮತ್ತು ಕ್ಯಾಮಣ ಗ್ರಾಮದ ಸದಸ್ಯರ ಮನೆಯ ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಮತ್ತು ಪದವಿಯಲ್ಲಿ ಶೇ.80ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. https://chat.whatsapp.com/FCEnlTkAKCC0MGPhXtX4i4 ಅರ್ಹ ವಿದ್ಯಾರ್ಥಿಗಳನ್ನು ಆ.16ರಂದು ನಡೆಯುವ ಸಂಘದ ಮಹಾಸಭೆಯಲ್ಲಿ ಗೌರವಧನದೊಂದಿಗೆ ಪುರಸ್ಕರಿಸಲಾಗುವುದು. ಆ.10ರೊಳಗೆ ಅರ್ಹ ವಿದ್ಯಾರ್ಥಿಗಳು ತಮ್ಮ ಆಧಾರ್ ಕಾರ್ಡ್, ಭಾವಚಿತ್ರ ಮತ್ತು ಅಂಕಪಟ್ಟಿ ಪ್ರತಿಗಳನ್ನು ಸಂಘದ ಸವಣೂರಿನ ಪ್ರಧಾನ ಕಚೇರಿಗೆ ಸಲ್ಲಿಸಬೇಕು ಎಂದು ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ, ಉಪಾಧ್ಯಕ್ಷ ಚೇತನ್ ಕುಮಾರ್ ಕೋಡಿಬೈಲು ಹಾಗೂ ನಿರ್ದೆಶಕರುಗಳು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಪಿ. ತಿಳಿಸಿದ್ದಾರೆ.
