Author: admin

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ (RBI) ನ ಆರು ಸದಸ್ಯರ ಹಣಕಾಸು ನೀತಿ ಸಮಿತಿ (MPC), ವಾಣಿಜ್ಯ ಬ್ಯಾಂಕುಗಳಿಗೆ ಆರ್ ಬಿಐ ನೀಡುವ ಸಾಲದ ದರವಾದ ರೆಪೋ ದರವನ್ನು 25 ಬೇಸಿಸ್ ಪಾಯಿಂಟ್‌ನಷ್ಟು ಕಡಿತ ಮಾಡಿದ್ದು, ಇದರಿಂದ ರೆಪೋ ದರ ಶೇಕಡಾ 6.25ಕ್ಕೆ ಇಳಿದಿದೆ. ಈ ಹಿಂದಿನ ಐದು ವರ್ಷಗಳಲ್ಲಿ ಮೊದಲ ಬಾರಿ ಆರ್‌ಬಿಐ ರೆಪೋ ದರ ಕಡಿತ ಮಾಡಿದೆ. ಎರಡು ವರ್ಷಗಳ ಕಾಲ ರೆಪೋ ದರವನ್ನು ಸ್ಥಿರವಾಗಿ ಕಾಯ್ದಿರಿಸಲಾಗಿತ್ತು. ಈ ಹಿಂದೆ ಆರ್‌ಬಿಐ ರೆಪೋ ದರವನ್ನು ಕಡಿತಗೊಳಿಸಿದ್ದು 2020ರ ಮೇ ತಿಂಗಳಲ್ಲಿ. ರೆಪೋ ದರ ಶೇಕಡಾ 6.5ರಷ್ಟಿತ್ತು. ಕೋವಿಡ್ ಸಾಂಕ್ರಾಮಿಕ ರೋಗದಿಂದ ದೇಶದ ಆರ್ಥಿಕತೆ ಕನಿಷ್ಠ ಮಟ್ಟಕ್ಕೆ ಇಳಿದ ನಂತರ ಬಳಕೆಯನ್ನು ಹೆಚ್ಚಿಸಲು ಮಧ್ಯಮ ವರ್ಗಕ್ಕೆ ಇದುವರೆಗಿನ ಅತಿದೊಡ್ಡ ತೆರಿಗೆ ವಿನಾಯಿತಿಯನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಬಾರಿಯ ಬಜೆಟ್‌ನಲ್ಲಿ ಘೋಷಿಸಿದ್ದು ಅದಾದ ಒಂದೇ ವಾರದಲ್ಲಿ ಆರ್‌ಬಿಐ ರೆಪೋ ದರ ಕಡಿತದ ಕ್ರಮ ಕೈಗೊಂಡಿದೆ. ಹಣಕಾಸು ನೀತಿ ಚೌಕಟ್ಟನ್ನು…

Read More

ಕೊಲ್ಕತಾ: ಪಶ್ಚಿಮ ಬಂಗಾಳದಲ್ಲಿ ವಿಶ್ವದ ಅತಿದೊಡ್ಡ ಮೊಸರು ಉತ್ಪಾದನಾ ಘಟಕವನ್ನು ಅಮುಲ್ ನಿರ್ಮಿಸಲಿದೆ. ಅಮುಲ್ ಡೈರಿ ಉತ್ಪನ್ನಗಳ ತಯಾರಕ ಸಂಸ್ಥೆ ಜಿಸಿಎಂಎಂಎಫ್, ಕೊಲ್ಕತ್ತಾದ ಸಂಯೋಜಿತ ಘಟಕದಲ್ಲಿ ರೂ 600 ಕೋಟಿ ಹೂಡಿಕೆ ಮಾಡಲಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. https://chat.whatsapp.com/EbVKVnWB6rlHT1mWtsgbch ಇಲ್ಲಿ ವಿಶ್ವದ ಅತಿದೊಡ್ಡ ಮೊಸರು ಉತ್ಪಾದನಾ ಘಟಕ ತೆರೆಯಲಿದ್ದು, ಪ್ರತಿದಿನ 15 ಲಕ್ಷ ಲೀಟರ್ ಹಾಲು ಮತ್ತು 10 ಲಕ್ಷ ಕೆಜಿ ಮೊಸರನ್ನು ಸಂಸ್ಕರಿಸಲಾಗುತ್ತದೆ. ಹೆಚ್ಚುತ್ತಿರುವ ಪ್ರಾದೇಶಿಕ ಬೇಡಿಕೆಯ ಕಾರಣದಿಂದ ಕೊಲ್ಕತಾದಲ್ಲಿ ಈ ಘಟಕ ಸ್ಥಾಪನೆಯಾಗಲಿದೆ ಎಂದು ಅಮುಲ್‌ನ ವ್ಯವಸ್ಥಾಪಕ ನಿರ್ದೇಶಕ ಜಯೆನ್ ಮೆಹ್ತಾ ತಿಳಿಸಿದ್ದಾರೆ. 2023-24 ರಲ್ಲಿ ರೂ 59,445 ಕೋಟಿ ವಹಿವಾಟು ಮತ್ತು 36 ಲಕ್ಷ ರೈತರಿಗೆ ಕೊಡುಗೆ ನೀಡಿರುವ ಜಿಸಿಎಂಎಂಎಫ್, ಡಬಲ್‌ ಡಿಜಿಟ್‌ ಬೆಳವಣಿಗೆಯನ್ನು ಎದುರು ನೋಡುತ್ತಿದೆ. ಈಗಾಗಲೇ 50 ದೇಶಗಳಿಗೆ ಅಮುಲ್‌ನ ಉತ್ಪನ್ನಗಳನ್ನು ರಫ್ತು ಮಾಡಲಾಗುತ್ತಿದ್ದು, ಇತ್ತೀಚೆಗೆ ಯುಎಸ್ ಮಾರುಕಟ್ಟೆಯನ್ನೂ ಪ್ರವೇಶಿಸಿದೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್:…

Read More

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬೆಂದೂರ್‌ವೆಲ್ ಶಾಖೆಯ 13ನೇ ವಾರ್ಷಿಕೋತ್ಸವ ಪ್ರಯುಕ್ತ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಜಪ್ಪಿನಮೊಗರು ಹಾಗೂ ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು, ಇವರ ಜಂಟಿ ಸಹಯೋಗದೊಂದಿಗೆ ಮಾತಾ ಅಮೃತಾನಂದಮಯಿ ಮಠ ಬೋಳೂರು, ಸಮುದಾಯ ದಂತ ಆರೋಗ್ಯ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ , ದೇರಳಕಟ್ಟೆ ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ , ಉಜ್ಜೋಡಿ, ಇಲ್ಲಿನ ನುರಿತ ವೈದ್ಯರ ತಂಡದೊಂದಿಗೆ ಉಚಿತ ಬೃಹತ್ ವೈದ್ಯಕೀಯ, ನೇತ್ರ ತಪಾಸಣೆ ಮತ್ತು ದಂತ ಚಿಕಿತ್ಸಾ ಶಿಬಿರ ಫೆಬ್ರವರಿ 9ರಂದು ಭಾನುವಾರ ಬೆಳಗ್ಗೆ ಸಮಯ 9ರಿಂದ ಮಧ್ಯಾಹ್ನ 12.30ರವರೆಗೆ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ, ಜಪ್ಪಿನಮೊಗರು, ಕಂರ್ಭಿಬೈದೇದಿ ಚಾವಡಿ ಇಲ್ಲಿ ಆಯೋಜಿಸಲಾಗಿದೆ. https://chat.whatsapp.com/EbVKVnWB6rlHT1mWtsgbch ಈ ಶಿಬಿರದಲ್ಲಿ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ, ಉಚಿತ ಕನ್ನಡಕ ವಿತರಣೆ , ಮಧುಮೇಹ ತಪಾಸಣೆ , ಬಿ.ಪಿ ತಪಾಸಣೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ,…

Read More

ಉಡುಪಿ: ಸಹಕಾರ ಭಾರತಿ ರಾಜ್ಯ ಕಾರ್ಯಕಾರಣಿ ಮತ್ತು ಪ್ರಾಂತ ಅಭ್ಯಾಸ ವರ್ಗ ಫೆಬ್ರವರಿ 8 ಮತ್ತು 9ರಂದು ಮಣಿಪಾಲದಲ್ಲಿರುವ ಆರ್‌ಎಸ್‌ಬಿ ಸಭಾಭವನದ ಪ್ರಥಮ ಮಹಡಿಯಲ್ಲಿ ಜರುಗಲಿದೆ. https://chat.whatsapp.com/EbVKVnWB6rlHT1mWtsgbch ಫೆಬ್ರವರಿ 8ರ ಬೆಳಿಗ್ಗೆ 11ಕ್ಕೆ ಸಹಕಾರ ಭಾರತಿ ಕರ್ನಾಟಕದ ರಾಜ್ಯಾಧ್ಯಕ್ಷ ಪ್ರಭುದೇವ ಆರ್.ಮಾಗನೂರು ಅಧ್ಯಕ್ಷತೆಯಲ್ಲಿ ರಾಜ್ಯ ಕಾರ್ಯಕಾರಣಿ ಸಭೆ ಜರುಗಲಿದೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದೀಪಕ್ ಚೌರಾಸಿಯಾ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ಉಪಸ್ಥಿತರಿರುವರು. ರಾಜ್ಯದ ನಾಲ್ಕು ವಿಭಾಗಗಳಿಂದ 32 ಸಂಘಟನಾ ಜಿಲ್ಲೆಗಳ ಜಿಲ್ಲಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಸಂಘಟನಾ ಕಾರ್ಯದರ್ಶಿ, ಮಹಿಳಾ ಪ್ರಮುಖ್ ಹಾಗೂ ಸಹ ಪ್ರಮುಖ್ ಜೊತೆಗೆ ರಾಜ್ಯ ಸಮಿತಿಯ ವಿವಿಧ ಜವಾಬ್ದಾರಿಗಳನ್ನು ಹೊಂದಿರುವ ಪ್ರಮುಖರು, ರಾಜ್ಯ ಮತ್ತು ಕರ್ನಾಟಕ ರಾಜ್ಯದಿಂದ ಆಯ್ಕೆಗೊಂಡಿರುವ ರಾಷ್ಟ್ರೀಯ ಕಾರ್ಯಕಾರಿಣಿಯ ಸದಸ್ಯರು ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 1ರ ತನಕ ಸಹಕಾರ ಭಾರತಿಯ ಸಂಘಟನಾತ್ಮಕ ವಿಚಾರಗಳು ಹಾಗೂ ಕಾರ್ಯ ವಿಸ್ತರಣೆಯ ಬಗ್ಗೆ ವಿಸ್ತೃತ ಚರ್ಚೆ ನಡೆಯಲಿದೆ ಎಂದು ಸಹಕಾರ ಭಾರತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಣೂರು…

Read More

ಅಭಿನಂದನಾ ಸಮಿತಿ ಅಧ್ಯಕ್ಷರಾಗಿ ಎಸ್.ಬಿ ಜಯರಾಮ ರೈ, ಕಾರ್ಯದರ್ಶಿಯಾಗಿ ಜಯಪ್ರಕಾಶ್ ರೈ, ಕೋಶಾಧಿಕಾರಿಯಾಗಿ ಹರೀಶ್ ಪಿ ಆಯ್ಕೆ ಪುತ್ತೂರು: ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಪುತ್ತೂರು, ಸುಳ್ಯ, ಬೆಳ್ತಂಗಡಿ ಮತ್ತು ಕಡಬ ತಾಲೂಕಿನ ಸಹಕಾರ ಸಂಘ ಸಂಸ್ಥೆಗಳ ವತಿಯಿಂದ ಮಾ.1ರಂದು ಪುತ್ತೂರಿನಲ್ಲಿ ಬೃಹತ್ ಅಭಿನಂದನಾ ಕಾರ್ಯಕ್ರಮ ನಡೆಯಲಿದ್ದು ಅದರ ಪೂರ್ವಭಾವಿ ಸಭೆ ಬುಧವಾರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪುತ್ತೂರು ಪ್ರಧಾನ ಕಚೇರಿಯಲ್ಲಿ ನಡೆಯಿತು. https://chat.whatsapp.com/EbVKVnWB6rlHT1mWtsgbch ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಎಸ್.ಬಿ ಜಯರಾಮ ರೈ ಅಧ್ಯಕ್ಷತೆ ವಹಿಸಿದ್ದರು. ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲು ಸಮಿತಿ ರಚನೆ ಮಾಡಲಾಯಿತು. ಅಧ್ಯಕ್ಷರಾಗಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಎಸ್.ಬಿ ಜಯರಾಮ ರೈ, ಕಾರ್ಯದರ್ಶಿಯಾಗಿ ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ರೈ ಹಾಗೂ ಕೋಶಾಧಿಕಾರಿಯಾಗಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪುತ್ತೂರು…

Read More

ಉಡುಪಿ: ಟೀಚರ್ಸ್ ಕೋ ಆಪರೇಟಿವ್‌ ಬ್ಯಾಂಕಿನ ಆಡಳಿತ ಮಂಡಳಿಯ ಪ್ರೌಢಶಾಲೆ, ಪ್ದವಿಪೂರ್ವ ವಿಭಾಗ, ಕಾಲೇಜು ವಿಭಾಗ, ವೃತ್ತಿಪರ ಹಾಗೂ ತಾಂತ್ರಿಕ ವಿದ್ಯಾಸಂಸ್ಥೆಗಳ ವಿಭಾಗ ಹಾಗೂ ಠೇವಣಾತಿ ಸದಸ್ಯ ವಿಭಾಗದ ಸ್ಥಾನಕ್ಕೆ ಭಾನುವಾರ ಚುನಾವಣೆ ನಡೆದಿದ್ದು ನಿರ್ದೇಶಕರ ಆಯ್ಕೆ ನಡೆದಿದೆ. https://chat.whatsapp.com/Ge11n7QCiMj5QyPvCc0H19 ಆಡಳಿತ ಮಂಡಳಿಯ 19 ಸದಸ್ಯರ ಸ್ಥಾನಗಳ ಪೈಕಿ ಪ್ರೌಢಶಾಲೆ ಹಾಗೂ ಪದವಿಪೂರ್ವ ವಿದ್ಯಾಲಯಗಳ ವಿಭಾಗದಿಂದ ಧರಣೇಂದ್ರ ಕೆ., ರಾಜೀವ ಶೆಟ್ಟಿ, ಮನೋಹರ, ಮಹಿಳಾ ಮೀಸಲು ಸ್ಥಾನದಿಂದ ಕಸ್ತೂರಿ ಎಚ್. ಆರ್, ಕಾಲೇಜು ವಿಭಾಗದಿಂದ ವಿದ್ಯಾಧರ ಹೆಗ್ಡೆ ಎಸ್., ಶೇಷಪ್ಪಕೆ, ಇದೇ ಕ್ಷೇತ್ರದ ಹಿಂದುಳಿದ ವರ್ಗ ಮೀಸಲು ಸ್ಥಾನದಿಂದ ರಾಜೇಂದ್ರ ಕೆ., ವೃತ್ತಿಪರ ಹಾಗೂ ತಾಂತ್ರಿಕ ವಿದ್ಯಾಸಂಸ್ಥೆಗಳ ವಿಭಾಗದಿಂದ ಅವಿನ್‌ ಬಿ.ಆರ್. ಅಳ್ವ ಹಾಗೂ ಕುಮಾರ್ ನಾಯ್ಕ ಎ.ಎಸ್. ಮತ್ತು ಠೇವಣಾತಿ ಸದಸ್ಯ ವಿಭಾಗದಿಂದ ನಿತ್ಯಾನಂದ ಶೆಟ್ಟಿ ಆಯ್ಕೆಯಾಗಿದ್ದಾರೆ. ಪ್ರಾಥಮಿಕ ಹಿರಿಯ ಪ್ರಾಥಮಿಕ ಶಾಲೆಗಳ ಸಾಮಾನ್ಯ ವಿಭಾಗದಿಂದ ಮಂಜುನಾಥ, ಸೀತಾರಾಮ ಹೆಗಡೆ, ಕಿಶನ್‌ರಾಜ್ ಶೆಟ್ಟಿ, ಗಣೇಶ್ ಕುಮಾರ್ ಶೆಟ್ಟಿ, ಎಂ.ದಿನಕರ ಶೆಟ್ಟಿ…

Read More

ಉಡುಪಿ: ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾಗಿ ಬಿ.ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಅಶೋಕ್ ಕುಮಾ‌ರ್ ಬಲ್ಲಾಳ್ ಆಯ್ಕೆಯಾಗಿದ್ದಾರೆ. https://chat.whatsapp.com/Ge11n7QCiMj5QyPvCc0H19 ಯೂನಿಯನ್ ನಿರ್ದೇಶಕ, ಶಾಸಕ ಯಶ್‌ಪಾಲ್ ಎ.ಸುವರ್ಣ, ನಿರ್ದೇಶಕರಾದ ಎಚ್.ಗಂಗಾಧರ ಶೆಟ್ಟಿ, ಎನ್.ಮಂಜಯ್ಯ ಶೆಟ್ಟಿ, ಬಿ.ಕರುಣಾಕರ ಶೆಟ್ಟಿ, ಪ್ರಸಾದ್ ಎಸ್.ಶೆಟ್ಟಿ, ಸುಧೀರ್ ವೈ, ಬಿ.ಪ್ರದೀಪ್ ಯಡಿಯಾಳ್, ಅನಿಲ್ ಎಸ್.ಪೂಜಾರಿ, ಅಲೆವೂರು ಹರೀಶ್ ಕಿಣಿ, ಬಿ.ಅರುಣ್ ಕುಮಾರ್ ಹೆಗ್ಡೆ, ಶ್ರೀಧರ್ ಪಿ.ಎಸ್., ಸಹಕಾರ ಸಂಘಗಳ ಉಪನಿಬಂಧಕಿ ಕೆ.ಆರ್. ಲಾವಣ್ಯ, ಜಿಲ್ಲಾ ಸಹಕಾರ ಯೂನಿಯನ್ ಸಿಇಒ ಅನುಷಾ ಕೋಟ್ಯಾನ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಸುಕನ್ಯಾ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ನೂತನ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಹಾಗೂ ಉಪಾಧ್ಯಕ್ಷ ಅಶೋಕ್ ಕುಮಾ‌ರ್ ಬಲ್ಲಾಳ್ ಅವರನ್ನು ಯೂನಿಯನ್ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳ ಪರವಾಗಿ ಅಭಿನಂದಿಸಲಾಯಿತು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com

Read More

ಪುತ್ತೂರು: ಪುತ್ತೂರಿನಲ್ಲಿ ಕೇಂದ್ರ ಕಚೇರಿ ಹೊಂದಿ ಶ್ರೀ ಸರಸ್ವತಿ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸಂಘದ 20ನೇ ಶಾಖೆ ಫೆಬ್ರವರಿ 7ರಂದು ಕಲ್ಲಡ್ಕ ಮುಖ್ಯ ರಸ್ತೆಯ ಚೈತನ್ಯ ವ್ಯವಹಾರ ಸಂಕೀರ್ಣದ ಮೊದಲನೇ ಮಹಡಿಯಲ್ಲಿ ಶುಭಾರಂಭಗೊಳ್ಳಲಿದೆ. https://chat.whatsapp.com/Ge11n7QCiMj5QyPvCc0H19 ನೂತನ ಶಾಖೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್‌ ಕಲ್ಲಡ್ಕ ಉದ್ಘಾಟಿಸಲಿದ್ದಾರೆ. ಶಾಸಕ ರಾಜೇಶ್‌ ನಾಯ್ಕ್‌, ಮಾಜಿ ಶಾಸಕ ರುಕ್ಮಯ ಪೂಜಾರಿ, ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಕೊಟ್ಟಾರಿ, ಗೋಳ್ತಮಜಲು ಗ್ರಾಮ ಪಂಚಾಯತ್‌ ಅಧ್ಯಕ್ಷೆ ಪ್ರೇಮ, ಕರ್ನಾಟಕ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕಿ ಭಾರತಿ ಜಿ.ಭಟ್‌, ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪಾಂಡುರಂಗ ನಾಯಕ್‌, ಉದ್ಯಮಿ ವರದರಾಯ ಪ್ರಭು, ಚೈತನ್ಯ ವ್ಯವಹಾರ ಸಂಕೀರ್ಣದ ಮಾಲಕ ತಿರುಮಲೇಶ್ವರ ಭಟ್‌ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶಾಖಾ ಶುಭಾರಂಭದ ಪ್ರಯುಕ್ತ ಹೆಚ್ಚುವರಿ ಬಡ್ಡಿ ಸಹಕಾರಿ ಸಂಘದಲ್ಲಿ ಆಕರ್ಷಕ ಬಡ್ಡಿದರದಲ್ಲಿ ಠೇವಣಿ ಸ್ವೀಕಾರ, ವಿವಿಧ ಉದ್ದೇಶದ ಸಾಲಗಳು, ಜೀವವಿಮೆ ಹಾಗೂ ಸಾಮಾನ್ಯ…

Read More

ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಡಾ.ಎಸ್‌ ಆರ್‌ ಹರೀಶ್‌ ಆಚಾರ್ಯ ಅಭಿಪ್ರಾಯ ಮಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿರುವ ಬಜೆಟ್‌ನಲ್ಲಿ ಆದಾಯ ತೆರಿಗೆಯಲ್ಲಿ ಹಲವು ಬದಲಾವಣೆಗಳನ್ನು ಘೋಷಿಸಿದ್ದು, 12 ಲಕ್ಷ ರೂ.ವರೆಗೆ ಯಾವುದೇ ತೆರಿಗೆ ಇಲ್ಲ ಘೋಷಿಸಿದ್ದಾರೆ. ಇದರಿಂದ ಮಧ್ಯಮ ವರ್ಗದ ಜನರಿಗೆ ಮತ್ತು ವೇತನದಾರರಿಗೆ ನೆರವಾಗಲಿದೆ ಎಂದು ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಡಾ.ಎಸ್‌ ಆರ್‌ ಹರೀಶ್‌ ಆಚಾರ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಧ್ಯಮ ವರ್ಗದ ಜನರನ್ನು ವಿಶೇಷವಾಗಿ ಗಮನದಲ್ಲಿರಿಸಿ ಆದಾಯ ತೆರಿಗೆ ಸುಧಾರಣೆಗಳನ್ನು ಜಾರಿಗೆ ತರಲಾಗಿದೆ. ಮಧ್ಯಮ ವರ್ಗದವರ ತೆರಿಗೆ ಪಾವತಿಯ ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡಲು ಮತ್ತು ಅವರಿಗೆ ಸಿಗುವ ವೇತನದ ಹೆಚ್ಚಿನ ಹಣ ಅವರದೇ ಕೈಸೇರುವಂತೆ ಮಾಡುವುದಕ್ಕೆ ಒತ್ತು ಕೊಟ್ಟಿರುವುದು ನಿರ್ಮಲಾ ಸೀತಾರಾಮನ್‌ ಅವರ ಬಜೆಟ್‌ನಲ್ಲಿ ಕಂಡುಬರುತ್ತದೆ. ಈ ಕ್ರಮ ಉಳಿತಾಯ ಮತ್ತು ಹೂಡಿಕೆಯ ಪ್ರಮಾಣವನ್ನೂ ಹೆಚ್ಚಿಸಲಿದೆ. ಈ ಹಿಂದೆ 7 ಲಕ್ಷ ರೂ.ವರೆಗಿನ ಒಟ್ಟು ಆದಾಯ ಹೊಂದಿರುವ…

Read More

ನವದೆಹಲಿ: ಸಂಸತ್‌ನಲ್ಲಿ ಶನಿವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ ಮಧ್ಯಮ ವರ್ಗದ ಜನರಿಗೆ ಬಂಪರ್‌ ಕೊಡುಗೆ ಘೋಷಿಸಿದೆ. ಮಧ್ಯಮ ವರ್ಗದ ಜನರ ನಿರೀಕ್ಷೆ ಪೂರೈಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. https://chat.whatsapp.com/Ge11n7QCiMj5QyPvCc0H19 ಹೊಸ ತೆರಿಗೆ ಪದ್ಧತಿಯಲ್ಲಿ 12 ಲಕ್ಷದವರೆಗಿನ ಆದಾಯ ತೆರಿಗೆ ಇಲ್ಲ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಹೊಸ ಆದಾಯ ತೆರಿಗೆ ಮಸೂದೆಯನ್ನು ಮುಂದಿನ ವಾರ ಪರಿಚಯಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಪ್ರಸ್ತುತ ದ್ವಿ ತೆರಿಗೆ ಪದ್ಧತಿ -ಹಳೆಯ ತೆರಿಗೆ ಪದ್ಧತಿ (OTR) ಮತ್ತು ಹೊಸ ತೆರಿಗೆ ಪದ್ಧತಿ (NTR) ಒಂದೇ ರೀತಿಯಾಗಿಲ್ಲ. ಹೊಸ ಪದ್ಧತಿಯು ಕಡಿಮೆ ದರ ಮತ್ತು ಸರಳ ರಚನೆಯನ್ನು ಹೊಂದಿದ್ದರೂ, ತೆರಿಗೆ ವಿಧಿಸಬಹುದಾದ ಆದಾಯ ಕಡಿಮೆ ಮಾಡಲು ಅನೇಕರು ಅವಲಂಬಿಸಿರುವ ಕಡಿತಗಳನ್ನು ಇದು ಹೊಂದಿಲ್ಲ ಎಂದು ಹೇಳಲಾಗುತ್ತಿದೆ. ಹೊಸ ಆದಾಯ ತೆರಿಗೆ ಪದ್ಧತಿಯಡಿಯಲ್ಲಿ, ಶೂನ್ಯ ತೆರಿಗೆ ಸ್ಲ್ಯಾಬ್ ಅನ್ನು ₹7 ಲಕ್ಷ ರೂಪಾಯಿಗಳಿಂದ ₹12…

Read More