Author: admin

ಕರ್ನಾಟಕದಲ್ಲಿ ಮೊದಲ ಪ್ರಯೋಗ ಯಶಸ್ವಿ ನವದೆಹಲಿ: ಆಧುನಿಕ ಕಾಲಕ್ಕೆ ತಕ್ಕಂತೆ ಹೊಸ ಹೊಸ ಸೇವೆಗಳ ಮೂಲಕ ಗ್ರಾಹಕಸ್ನೇಹಿಯಾಗಿ ಹೊರಹೊಮ್ಮುತ್ತಿರುವ ಅಂಚೆ ಕಚೇರಿಗಳು ಈಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಡಿಜಿಟಲ್‌ ಸ್ಪರ್ಶ ಕಂಡುಕೊಳ್ಳುತ್ತಿವೆ. ಅಂಚೆ ಕಚೇರಿಗಳಲ್ಲೂ ಮುಂದಿನ ದಿನಗಳಲ್ಲಿ ಯುಪಿಐ ಪಾವತಿ ವ್ಯವಸ್ಥೆ ಜಾರಿಗೆ ಬರಲಿದೆ. https://chat.whatsapp.com/EbVKVnWB6rlHT1mWtsgbch ಸದ್ಯ ಅಂಚೆ ಕಚೇರಿಗಳಲ್ಲಿ ಯುಪಿಐ ಪಾವತಿ ವ್ಯವಸ್ಥೆ ಜಾರಿಯಲ್ಲಿಲ್ಲ. ನಗದು ವಹಿವಾಟು ಮಾತ್ರವೇ ನಡೆಯುತ್ತಿರುವುದರಿಂದ ಬಹುತೇಕ ಅಂಚೆ ಕಚೇರಿಗಳಲ್ಲಿ ಕೌಂಟರ್‌ಗಳು ಗ್ರಾಹಕರಿಂದ ತುಂಬಿ ತುಳುಕುತ್ತಿವೆ. ಪ್ರತಿನಿತ್ಯ ಚಿಲ್ಲರೆ ಸಮಸ್ಯೆಯೂ ಸಾಮಾನ್ಯವಾಗಿದೆ. ಇವುಗಳಿಂದ ಹೊರಬರಲು ಅಂಚೆ ಇಲಾಖೆ ಮಾಹಿತಿ ತಂತ್ರಜ್ಞಾನಕ್ಕೆ ತೆರೆದುಕೊಳ್ಳುತ್ತಿವೆ. ನಿತ್ಯ ಲಕ್ಷಾಂತರ ಜನ ಅಂಚೆ ಕಚೇರಿಗಳಿಗೆ ಭೇಟಿ ನೀಡುತ್ತಿದ್ದು ಗ್ರಾಮೀಣ ಭಾಗಗಳಲ್ಲಿ ವಿಶೇಷವಾಗಿ ಮಹಿಳೆಯರು ಉಳಿತಾಯ ಖಾತೆಗಳಿಗಾಗಿ ಅಂಚೆ ಕಚೇರಿಗಳನ್ನೇ ಅವಲಂಬಿಸಿದ್ದಾರೆ. ಅಂಚೆ ಕಚೇರಿಗಳಲ್ಲಿ ವರ್ಷದ ಹಿಂದೆ ಪ್ರಾಯೋಗಿಕವಾಗಿ ಡಿಜಿಟಲ್‌ ಪಾವತಿ ವ್ಯವಸ್ಥೆ ಆರಂಭಿಸಲಾಗಿತ್ತಾದರೂ, ನೆಟ್‌ವರ್ಕ್ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವೈಫಲ್ಯ ಕಂಡಿದ್ದರಿಂದ ಆ ಸೇವೆಯನ್ನು ಹಿಂದೆ ಪಡೆಯಲಾಗಿತ್ತು.…

Read More

ಹಳೆಯಂಗಡಿ: ಪ್ರಿಯದರ್ಶಿನಿ ಕೋ ಆಪರೇಟಿವ್‌ ಸೊಸೈಟಿ ಹಳೆಯಂಗಡಿ ಮತ್ತು ಫೇಮಸ್ ಯೂಥ್ ಕ್ಲಬ್ ತೋಕೂರು ಆಶ್ರಯದಲ್ಲಿ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ ಭಾರತ್‌ ದಕ್ಷಿಣ ಕನ್ನಡ, ರೋಟರಿ ಕ್ಲಬ್‌ ಬೈಕಂಪಾಡಿ, ಪೂಜಾ ಎರೇಂಜರ್ಸ್‌ ಮತ್ತು ಕೇಟರರ್ಸ್‌, ಪೂಜಾ ಫ್ರೆಂಡ್ಸ್‌ ಹಳೆಯಂಗಡಿ, ತೋಕೂರು ಎಸ್‌ಎಸ್‌ ಮ್ಯೂಸಿಕ್, ಸಾರ್ವಜನಿಕ ದಂತ ಆರೋಗ್ಯ ವಿಭಾಗ ಎ.ಬಿ ಶೆಟ್ಟಿ ಸ್ಮಾರಕ ದಂತ ಮಹಾವಿದ್ಯಾಲಯ ನಿಟ್ಟೆ ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಫೇಮಸ್‌ ಯೂತ್‌ ಕ್ಲಬ್‌ ಮತ್ತು ಮಹಿಳಾ ಮಂಡಳ ಹತ್ತನೇ ತೋಕೂರು ಹಳೆಯಂಗಡಿ ಇಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಪ್ರಯುಕ್ತ ಉಚಿತ ದಂತ ಚಿಕಿತ್ಸಾ ಶಿಬಿರ ಭಾನುವಾರ ನಡೆಯಿತು. https://chat.whatsapp.com/EbVKVnWB6rlHT1mWtsgbch ಸಂಸ್ಥೆಯ ಗೌರವಾಧ್ಯಕ್ಷ ಗುರುರಾಜ್ ಎಸ್ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದರು. ಹಳೆಯಂಗಡಿ ಪ್ರಿಯದರ್ಶಿನಿ ಕೋ- ಆಪರೇಟಿವ್ ಸೊಸೈಟಿ ನಿರ್ದೇಶಕ ನವೀನ್ ಸಾಲ್ಯಾನ್ ಪಂಜ ಶಿಬಿರದ ಉದ್ಘಾಟನೆ ನೆರವೇರಿಸಿದರು. ಮುಖ್ಯ ಅತಿಥಿ ಎಬಿ ಶೆಟ್ಟಿ ಕಾಲೇಜಿನ ಉಪನ್ಯಾಸಕಿ ಡಾ.ಶಿಲ್ಪಾ ಎಂ ರಾವ್ ಮಾತನಾಡಿ ಯುವ…

Read More

ಬಂಟ್ವಾಳ: ಸ್ವಾತಂತ್ರ್ಯ ಯೋಧ ಡಾ|ಅಮ್ಮೆಂಬಳ ಬಾಳಪ್ಪ ಸ್ಮಾರಕ ಸೇವಾ ಪ್ರತಿಷ್ಠಾನ ಬಂಟ್ವಾಳ ಆಶ್ರಯದಲ್ಲಿ ಬಂಟ್ವಾಳದ ಸಮಾಜ ಸೇವಾ ಸಹಕಾರಿ ಸಂಘ ಪ್ರಾಯೋಜಕತ್ವದಲ್ಲಿ ಮುದ್ರಣಗೊಂಡ “ಬಾಳಪಥ” ಡಾ| ಅಮ್ಮೆಂಬಳ ಬಾಳಪ್ಪ ಜನ್ಮಶತಾಬ್ದಿ ಸಂಚಿಕೆ ಬಿಡುಗಡೆ ಹಾಗೂ ಅಮೂಲ್ಯ ಸ್ವಸಹಾಯ ಸಂಘದ ಸದಸ್ಯರ ಸಮ್ಮಿಲನ ಸಮಾರಂಭ ಬಂಟ್ವಾಳ ಬೈಪಾಸ್‌ನಲ್ಲಿರುವ ಸಮಾಜ ಸೇವಾ ಸಹಕಾರಿ ಭವನದಲ್ಲಿ ನಡೆಯಿತು. https://chat.whatsapp.com/EbVKVnWB6rlHT1mWtsgbch ಬೆಂಗಳೂರಿನ ಸಾಮಾಜಿಕ ಧುರೀಣ ಮೋಹನದೇವ ಆಳ್ವ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿ, ದಿ.ಅಮ್ಮೆಂಬಳ ಬಾಳಪ್ಪರು ಬಾಲ್ಯದಿಂದಿಂದಲೇ ಸತ್ಯ, ನಿಷ್ಠರಾಗಿದ್ದರಲ್ಲದೆ ಎಲ್ಲಾ ವರ್ಗದ ಜನರನ್ನು ಪ್ರೀತಿಸಿ ಜನಸ್ನೇಹಿಯಾಗಿದ್ದರು. ಅಮ್ಮೆಂಬಳ ಬಾಳಪ್ಪರು ಸ್ಥಾಪಿಸಿದ ಸಮಾಜ ಸೇವಾ ಸಹಕಾರಿ ಸಂಘವು ಹಲವರ ಬದುಕಿಗೆ ಬೆಳಕಾಗಿದ್ದು, ಸಂಘವು ರಾಜ್ಯವ್ಯಾಪಿಯಾಗಿ ಬೆಳೆಯಲಿ ಎಂದು ಹಾರೈಸಿದರು. ತುಳು ನಮ್ಮ ಮಾತೃಭಾಷೆಯಾದರೆ, ಕನ್ನಡ ಭಾಷೆ ರಾಜ್ಯಕ್ಕೆ ಸಾರ್ವಭೌಮವಾಗಿದ್ದು, ದೇಶದ ಎಲ್ಲಾ ಭಾಷೆಯನ್ನು ಗೌರವಿಸಬೇಕು ಎಂದರು. ಡಾ।ಅಮ್ಮೆಂಬಳ ಬಾಳಪ್ಪ ಸ್ಮಾರಕ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಅಮ್ಮೆಂಬಳ ಆನಂದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಬಿ.ರಮಾನಾಥ ರೈ, ರಾಣಿ ಅಬ್ಬಕ್ಕ…

Read More

ಬಂಟ್ವಾಳ: ಬಂಟ್ವಾಳ ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ -ಸೌಮ್ಯ ದಂಪತಿಗಳ ಐದು ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಯ ಆರೋಗ್ಯ ಚಿಕಿತ್ಸೆಯ ವೆಚ್ಚಕ್ಕಾಗಿ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 50 ಸಾವಿರ ರೂ. ಮೊತ್ತದ ನೆರವು ನೀಡಲಾಯಿತು. https://chat.whatsapp.com/EbVKVnWB6rlHT1mWtsgbch ರಕ್ತದ ಕ್ಯಾನ್ಸರ್‌ಗೆ ಸಿಲುಕಿ ಆಸ್ಪತ್ರೆಗೆ ದಾಖಲಾಗಿರುವ ಮನಸ್ವಿಯ ಚಿಕಿತ್ಸೆಗೆ ನೆರವು ನೀಡುವಂತೆ ಸಾಮಾಜಿಕ ಜಾಲತಾಣದಲ್ಲಿ ಮನವಿಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಸಭೆಯಲ್ಲಿ ಮಗುವಿಗೆ ಸಹಾಯ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿತ್ತು. ಈ ಬಗ್ಗೆ ಸಂಘದ ನಿರ್ದೇಶಕರು ಹಾಗೂ ಸಿಬ್ಬಂದಿಗಳ ಸಹಕಾರದ ಜೊತೆಯಲ್ಲಿ ಸಂಘದ ವತಿಯಿಂದ ಒಟ್ಟು 50 ಸಾವಿರ ರೂ. ಮೊತ್ತದ ಚೆಕ್ ಅನ್ನು ಸಂಘದ ಅಧ್ಯಕ್ಷರಾದ ಪ್ರಭಾಕರ ಪ್ರಭು ಹಾಗೂ ಉಪಾಧ್ಯಕ್ಷರಾದ ಸಂದೇಶ ಶೆಟ್ಟಿ ಪೊಡುಂಬ ಮಗುವಿನ ಕುಟುಂಬಕ್ಕೆ ಸಂಘದ ಕಚೇರಿಯಲ್ಲಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಸತೀಶ್…

Read More

ಹೊಸ ನಿಯಮದ ಪ್ರಕಾರ ಶೇ.200ರವರೆಗೆ ದಂಡ, ಜೈಲು ಶಿಕ್ಷೆ!! ನವದೆಹಲಿ: ಆದಾಯ ತೆರಿಗೆ ರಿಟರ್ನ್ ಸಲ್ಲಿಕೆಯಲ್ಲಿ ತಪ್ಪು ಮಾಹಿತಿ ನೀಡಿದರೆ ಅಥವಾ ಆದಾಯ ಮುಚ್ಚಿಟ್ಟರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಆದಾಯ ತೆರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ಹೊಸ ಆದಾಯ ತೆರಿಗೆ ನಿಯಮಗಳು ಜಾರಿಯಾಗಿದ್ದು, ತೆರಿಗೆದಾರರು ಸುಳ್ಳು ಕಡಿತಗಳನ್ನು ತೋರಿಸಿದರೆ ಅಥವಾ ಆದಾಯ ಮರೆಮಾಚಿದರೆ ಶೇ.200ರವರೆಗೆ ದಂಡ ಮತ್ತು ಜೈಲು ಶಿಕ್ಷೆ ವಿಧಿಸುವ ಸಾಧ್ಯತೆ ಇದೆ. ಹೊಸ ಮತ್ತು ಕಠಿಣ ನಿಯಮಗಳನ್ನು ಇಲಾಖೆ ಜಾರಿಗೆ ತಂದಿದ್ದು, ಇದರಿಂದ ಇನ್ಮುಂದೆ, ಸಣ್ಣ ತಪ್ಪುಗಳಿಗೂ ತೆರಿಗೆ ಪಾವತಿದಾರರು ದೊಡ್ಡ ಬೆಲೆ ತೆರಬೇಕಾಗುತ್ತದೆ. https://chat.whatsapp.com/EbVKVnWB6rlHT1mWtsgbch ತೆರಿಗೆದಾರರು ಸುಳ್ಳು ಕಡಿತಗಳನ್ನು (ಡಿಡಕ್ಷನ್‌ಗಳ) ತೋರಿಸಿದರೆ ಅಥವಾ ತಮ್ಮ ಆದಾಯ ಮರೆಮಾಚಿದರೆ ಪಾವತಿಸಬೇಕಾದ ತೆರಿಗೆಯ ಮೇಲೆ ಶೇ.200ರವರೆಗೆ ದಂಡ, ವಾರ್ಷಿಕ ಶೇ.24ರವರೆಗೆ ಬಡ್ಡಿ ವಿಧಿಸಲಾಗುತ್ತದೆ. ಅಲ್ಲದೆ ಸೆಕ್ಷನ್ 276 ಸಿ ಅಡಿಯಲ್ಲಿ ಜೈಲು ಶಿಕ್ಷೆ ವಿಧಿಸುವ ಸಾಧ್ಯತೆಯೂ ಇದೆ. ಒಂದು ವೇಳೆ ನಿಮ್ಮ ಲೆಕ್ಕಪರಿಶೋಧಕರು (ಸಿಎ) ಅಥವಾ ತೆರಿಗೆ ಸಲಹೆಗಾರರು ತಪ್ಪು…

Read More

ತರಬೇತಿ ಶಿಬಿರ ಉದ್ಘಾಟಿಸಿ ದ.ಕ. ಸಹಕಾರಿ ಹಾಲು ಒಕ್ಕೂಟದ ಉಪಾಧ್ಯಕ್ಷ ಉದಯ ಕೋಟ್ಯಾನ್‌ ಹೇಳಿಕೆ ಬೆಳ್ತಂಗಡಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು, ದ.ಕ ಜಿಲ್ಲಾ ಸಹಕಾರಿ ಯೂನಿಯನ್, ದ.ಕ. ಹಾಲು ಒಕ್ಕೂಟ ನಿಯಮಿತ ಮಂಗಳೂರು ಹಾಗೂ ದ.ಕ ಜಿಲ್ಲಾ ಸಹಕಾರ ಯೂನಿಯನ್ ಲಿ. ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ‘ಉತ್ತಮ ಆಡಳಿತ ನಿರ್ವಹಣೆ ಬಗ್ಗೆ ವಿಶೇಷ ತರಬೇತಿ ಶಿಬಿರ’ ಗುರುವಾರ ಬೆಳ್ತಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್‌ ಸಭಾಂಗಣದಲ್ಲಿ ನಡೆಯಿತು. https://chat.whatsapp.com/EbVKVnWB6rlHT1mWtsgbch ತರಬೇತಿ ಉದ್ಘಾಟಿಸಿ ಮಾತನಾಡಿದ ದ.ಕ. ಸಹಕಾರಿ ಹಾಲು ಒಕ್ಕೂಟದ ಉಪಾಧ್ಯಕ್ಷ ಉದಯ ಕೋಟ್ಯಾನ್, ಜಿಲ್ಲೆಯಲ್ಲಿ ಪ್ರತಿದಿನ 4 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದ್ದು ಗುಣಮಟ್ಟದ ಹಾಲು ಉತ್ಪಾದನೆಯಲ್ಲಿ ರಾಜಿ ಮಾಡಿಕೊಳ್ಳದೆ ಸಾಧನೆ ಮಾಡಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಹೆಚ್ವು ಹಾಲು ಉತ್ಪಾದನೆ ಆಗುತ್ತಿದೆ. ಒಕ್ಕೂಟವು ಹೆಸರುವಾಸಿಯಾಗಲು ಕಾರ್ಯನಿರ್ವಾಹಕಾರ ಉತ್ತಮ ಕಾರ್ಯವೈಖರಿ ಕಾರಣ ಎಂದು ಶ್ಲಾಘಿಸಿದರು. ಅಧ್ಯಕ್ಷತೆ ವಹಿಸಿದ್ದ ದ.ಕ. ಜಿಲ್ಲಾ…

Read More

ವಿದ್ಯಾರ್ಥಿಗಳು ಬೆಳೆದು ಸಾಮಾಜಿಕ ಸ್ಥಾನಮಾನ ಸಾಧಿಸಿದಾಗ ಸಾಮಾಜಿಕವಾಗಿ ಹಿಂದುಳಿದವರ ಬಗ್ಗೆ ಸಹಾನುಭೂತಿ ಹೊಂದಬೇಕು: ಅನಿಲ್‌ ಲೋಬೊ ಮಂಗಳೂರು: ಸಾಮಾಜಿಕ ಜವಾಬ್ದಾರಿ ಮತ್ತು ಸಮುದಾಯ ಅಭಿವೃದ್ಧಿಯತ್ತ ತನ್ನ ಅಚಲ ಬದ್ಧತೆಯ ಭಾಗವಾಗಿ, ಎಂಸಿಸಿ ಬ್ಯಾಂಕ್ ಮಂಗಳೂರು, ಉಡುಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಾದ್ಯಂತ ವಿವಿಧ ಶಾಲೆಗಳು, ಅನಾಥಾಶ್ರಮಗಳು ಮತ್ತು ಸಂಸ್ಥೆಗಳಿಗೆ ನೋಟ್ ಪುಸ್ತಕ, ಕೊಡೆ ಮತು ಸ್ಕೂಲ್ ಬ್ಯಾಗ್‌ಗಳನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಂಡಿತು. https://chat.whatsapp.com/EbVKVnWB6rlHT1mWtsgbch ಬ್ಯಾಂಕಿನ ಈ ಉದಾತ್ತ ಕಾರ್ಯಕ್ಕೆ ಸಂಸ್ಥೆಗಳ ಮುಖ್ಯಸ್ಥರು, ವಿದ್ಯಾಸಂಸ್ಥೆಗಳಲ್ಲಿ ಓದುತ್ತಿರುವ ಬಡ ಮಕ್ಕಳು ಮತ್ತು ಆಶ್ರಮದ ನಿವಾಸಿಗಳ ಬಗ್ಗೆ ಔದಾರ್ಯ ಮತ್ತು ಕಾಳಜಿಯನ್ನು ತೋರಿಸಿದ್ದಕ್ಕಾಗಿ ಬ್ಯಾಂಕಿನ ಅಧ್ಯಕ್ಷರು ಮತ್ತು ನಿರ್ದೇಶಕರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಈ ಹೃದಯಸ್ಪರ್ಶಿ ಕೊಡುಗೆಗಳ ಮೂಲಕ, ಎಂಸಿಸಿ ಬ್ಯಾಂಕ್ ತನ್ನ ಸಹಾನುಭೂತಿ ಮತ್ತು ಸೇವೆಯ ಮೂಲ ಮೌಲ್ಯಗಳನ್ನು ಪ್ರದರ್ಶಿಸಿದೆ. ಸುಮಾರು ಹತ್ತು ಲಕ್ಷಕ್ಕಿಂತ ಹೆಚ್ಚಿನ ವೆಚ್ಚದ ಕೊಡೆಗಳು, ಶಾಲಾ ಬ್ಯಾಗ್, ಮತ್ತು ನೋಟ್‌ಬುಕ್‌ಗಳ ವಿತರಣೆ ಅನೇಕ ವಿದ್ಯಾಸಂಸ್ಥೆಗಳಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಅಗತ್ಯ ಬೆಂಬಲವನ್ನು ನೀಡುವುದಲ್ಲದೆ, ಕೃತಜ್ಞತೆ…

Read More

ಮಂಗಳೂರು: ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯು, ಪದ್ಮಶಾಲಿ ಸಮಾಜ ಸೇವಾ ಸಂಘ, ಉಲ್ಲಾಳ ಮತ್ತು ಶ್ರೀ ವೀರಭದ್ರ ದುರ್ಗಾಪರಮೇಶ್ವರಿ ಸೇವಾ ಯುವ ವೇದಿಕೆ, ಉಲ್ಲಾಳ ಹಾಗೂ ಶ್ರೀ ಸತ್ಯಸಾಯಿ ಬಾಲ ವಿಕಾಸ ಕೇಂದ್ರ, ಮಂಗಳಾದೇವಿ, ಇವುಗಳ ಸಹಕಾರದೊಂದಿಗೆ ಜುಲೈ 6ರಂದು ಉಳ್ಳಾಲದ ಪದ್ಮಶಾಲಿ ಸಮಾಜ ಭವನದಲ್ಲಿ ಬೆಳಗ್ಗೆ 9.30ರಿಂದ 31ನೇ ಬೃಹತ್ ಉಚಿತ ವೈದ್ಯಕೀಯ/ದಂತ/ಕಣ್ಣು/ಹೃದಯ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರವನ್ನು ಏರ್ಪಡಿಸಿದೆ. https://chat.whatsapp.com/EbVKVnWB6rlHT1mWtsgbch ಕೆಎಂಸಿ ಅತ್ತಾವರ ಆಸ್ಪತ್ರೆ ಹಾಗೂ ಯೆನೆಪೋಯ ಆಸ್ಪತ್ರೆಯ ಹಿರಿಯ ತಜ್ಞ ಅನುಭವೀ ವೈದ್ಯರುಗಳು ಈ ಶಿಬಿರದಲ್ಲಿ ಭಾಗವಹಿಸಲಿದ್ದಾರೆ. ಶಿಬಿರದಲ್ಲಿ ಅವಶ್ಯಕತೆ ಪಾಲ್ಗೊಂಡು ಸದುಪಯೋಗ ಪಡೆದುಕೊಳ್ಳಿ ಎಂದು ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಂ. ಎಸ್ ಗುರುರಾಜ್ ತಿಳಿಸಿದ್ದಾರೆ. ಶಿಬಿರದಲ್ಲಿ ಚರ್ಮ, ಎಲುಬು, ಕಣ್ಣು, ಮೂಗು, ಗಂಟಲು, ಸ್ತ್ರೀರೋಗ ಚಿಕಿತ್ಸೆ ಇತ್ಯಾದಿ ಚಿಕಿತ್ಸೆಗಳನ್ನು ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Read More

ಉತ್ತಮ ಆಡಳಿತ ನಿರ್ವಹಣೆ ಬಗ್ಗೆ ವಿಶೇಷ ತರಬೇತಿ ಶಿಬಿರದಲ್ಲಿ ಕೆ.ರವಿರಾಜ್ ಹೆಗ್ಡೆ ಹೇಳಿಕೆ ಪುತ್ತೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು, ದ.ಕ ಜಿಲ್ಲಾ ಸಹಕಾರಿ ಯೂನಿಯನ್, ದ.ಕ. ಹಾಲು ಉತ್ಪಾದಕರ ಒಕ್ಕೂಟ ನಿಯಮಿತ, ಮಂಗಳೂರು ಹಾಗೂ ದ.ಕ ಜಿಲ್ಲಾ ಸಹಕಾರ ಯೂನಿಯನ್ ಸಂಯುಕ್ತ ಆಶ್ರಯದಲ್ಲಿ ಪುತ್ತೂರು ಉಪವಿಭಾಗದ ಪುತ್ತೂರು, ಸುಳ್ಯ, ಕಡಬ ತಾಲೂಕಿನ ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ‘ಉತ್ತಮ ಆಡಳಿತ ನಿರ್ವಹಣೆ ಬಗ್ಗೆ ವಿಶೇಷ ತರಬೇತಿ ಶಿಬಿರ’ ಮಂಗಳವಾರ ಪುತ್ತೂರು ಕೋಆಪರೇಟಿವ್ ಟೌನ್ ಬ್ಯಾಂಕ್‌ನ ಸಭಾಂಗಣದಲ್ಲಿ ನಡೆಯಿತು. https://chat.whatsapp.com/EbVKVnWB6rlHT1mWtsgbch ತರಬೇತಿ ಉದ್ಘಾಟಿಸಿದ ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ರವಿರಾಜ್ ಹೆಗ್ಡೆ ಮಾತನಾಡಿ, ತರಬೇತಿ ಆಯೋಜನೆಯ ಬಗ್ಗೆ ಜಿಜ್ಞಾಸೆಯಿತ್ತು. ಆದರೆ ತರಬೇತಿಯ ಅವಶ್ಯಕತೆ ಕಳೆದ ಆಡಳಿತ ಮಂಡಳಿಯ ಚುನಾವಣೆಯ ಸಂದರ್ಭದಲ್ಲಿ ನಮಗೆ ಅರಿವಾಗಿದೆ. ಹೀಗಾಗಿ ತರಬೇತಿ ಬಹಳ ಮುಖ್ಯ. ಇಂತಹ ತರಬೇತಿಯಲ್ಲಿ ಭಾಗವಹಿಸಿದಾಗ ಕಾಯ್ದೆಗಳ ತಿದ್ದುಪಡಿಗಳ ಬಗ್ಗೆ ಮಾಹಿತಿ ಪಡೆದು ಕಾರ್ಯದಲ್ಲಿ…

Read More

ವಿಟ್ಲ: ಇಲ್ಲಿನ ಆರಕ್ಷಕ ಠಾಣೆಗೆ ಅಗತ್ಯವಿದ್ದ ಹೆಚ್.ಪಿ ಲ್ಯಾಪ್‌ಟ್ಯಾಪ್‌ ಅನ್ನು ಠಾಣಾಧಿಕಾರಿಯವರಿಗೆ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ ವತಿಯಿಂದ ಮಂಗಳವಾರ ಪ್ರಧಾನ ಕಛೇರಿಯಲ್ಲಿ ವಿತರಿಸಲಾಯಿತು. https://chat.whatsapp.com/EbVKVnWB6rlHT1mWtsgbch ಲ್ಯಾಪ್‌ಟಾಪ್‌ ವಿತರಣಾ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಜಗನ್ನಾಥ ಸಾಲಿಯಾನ್ ಹೆಚ್, ನಿರ್ದೆಶಕರಾದ ದಯಾನಂದ ಆಳ್ವ ಕೆ, ರಾಮದಾಸ ಶೆಣೈ ವಿ, ಕೇಶವ ಎ, ಜಯಂತಿ ಹೆಚ್.ರಾವ್, ಶುಭಲಕ್ಷ್ಮಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣ ಮುರಳಿ ಶ್ಯಾಮ್ ಕೆ ಉಪಸ್ಥಿತರಿದ್ದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com

Read More