Author: admin
ಬೃಹತ್ ವೈದ್ಯಕೀಯ ಶಿಬಿರ ಉದ್ಘಾಟಿಸಿ ಚಿತ್ರಾಪುರ ಶ್ರೀ ವಿದ್ಯೇಂದ್ರ ಶ್ರೀಪಾದರು ಅಭಿಪ್ರಾಯ ಮಂಗಳೂರು: ಮನುಷ್ಯನಿಗೆ ಆರೋಗ್ಯವೇ ನಿಜವಾದ ಭಾಗ್ಯ. ಪ್ರಸ್ತುತ ಕಾಲಘಟ್ಟದಲ್ಲಿ ಆರೋಗ್ಯದ ಚಿಕೆತ್ಸೆಗಳು ತುಂಬಾ ವೆಚ್ಚದಾಯಕ. ಆದ್ದರಿಂದ ಎಲ್ಲರೂ ತಮ್ಮ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಕೊಡಬೇಕು. ಶ್ರೀಶಾ ಸೊಸೈಟಿ ಆಯೋಜಿಸುತ್ತಿರುವ ಇಂತಹ ಉಚಿತ ಆರೋಗ್ಯ ತಪಾಸಣಾ -ಚಿಕಿತ್ಸಾ ಶಿಬಿರದ ಸದುಪಯೋಗ ಎಲ್ಲರೂ ಪಡೆಯಬೇಕು. ಶ್ರೀಶಾ ಸೊಸೈಟಿಯ ಸೇವಾ ಕಾರ್ಯಗಳನ್ನು ನಾವು ಹತ್ತಿರದಿಂದ ಗಮನಿಸುತ್ತಿದ್ದೇವೆ. ಇಂತಹ ನಿಷ್ಕಾಮ, ನಿಸ್ವಾರ್ಥ ಸೇವಾ ಮನೋಭಾವದ ಸಹಕಾರ ಸಂಘಗಳು ಸಮಾಜಕ್ಕೆ ಅವಶ್ಯವಾಗಿವೆ ಎಂದು ಜಗದ್ಗುರು ಚಿತ್ರಾಪುರ ಶ್ರೀ ಮಧ್ವಾಚಾರ್ಯ ಸಂಸ್ಥಾನದ ಪೀಠಾಧಿಪತಿ ಶ್ರೀ ವಿದ್ಯೇಂದ್ರ ಶ್ರೀಪಾದರು ಅಭಿಪ್ರಾಯಪಟ್ಟರು. ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಪ್ರತಿ ತಿಂಗಳ ಮೊದಲ ಭಾನುವಾರ ಆಯೋಜಿಸುವ ಬೃಹತ್ ಉಚಿತ ಆರೋಗ್ಯ-ದಂತ-ಕಣ್ಣಿನ-ತಪಾಸಣಾ-ಚಿಕಿತ್ಸಾ ಶಿಬಿರದ ಜನವರಿ ತಿಂಗಳ ಶಿಬಿರವನ್ನು ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ಚಿತ್ರಾಪುರ ಮಠ ಹಾಗೂ ಶ್ರೀ ಸತ್ಯಸಾಯಿ ಬಾಲವಿಕಾಸ ಕೇಂದ್ರ ಮಂಗಳಾದೇವಿ, ಇವುಗಳ ಸಹಯೋಗದಲ್ಲಿ ಮಂಗಳೂರಿನ…
ಮಡಂತ್ಯಾರಿನಲ್ಲಿ ಆರೋಗ್ಯ ಶಿಬಿರ ಉದ್ಘಾಟಿಸಿ ರೂಪಾ ನವೀನ್ ಶ್ಲಾಘನೆ ಬೆಳ್ತಂಗಡಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿಂಗ್ ವ್ಯವಹಾರದ ಜೊತೆಗೆ ಸಾಮಾಜಿಕ ಚಟುವಟಿಕೆಯಲ್ಲೂ ತೊಡಗಿಸಿಕೊಂಡು ಸಮಾಜದ ಎಲ್ಲಾ ವರ್ಗದ ಜನರ ಆರೋಗ್ಯದ ದೃಷ್ಟಿಯಿಂದ ಕಾಳಜಿ ವಹಿಸುತ್ತಿದೆ. ಇದು ಸಂಘದ ಉನ್ನತಿಗೆ ಮುಖ್ಯ ಕಾರಣವಾಗಿದೆ ಎಂದು ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ರೂಪಾ ನವೀನ್ ಅಭಿಪ್ರಾಯ ವ್ಯಕ್ತಪಡಿಸಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯ ಎರಡನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ ಮತ್ತು ಜೇಸಿಐ ಮಡಂತ್ಯಾರು ಇವುಗಳ ಸಹಯೋಗದಲ್ಲಿ ಎ.ಜೆ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಇದರ ನುರಿತ ವೈದ್ರ ತಂಡದವರಿಂದ ಭಾನುವಾರ ಉಚಿತ ವೈದ್ಯಕೀಯ, ನೇತ್ರ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಮಾತನಾಡಿದರು. https://chat.whatsapp.com/Ge11n7QCiMj5QyPvCc0H19 ಕಾರ್ಯಕ್ರಮದ ಮುಖ್ಯ ಅಥಿತಿ ಜೇಸಿಐ ಅಧ್ಯಕ್ಷೆ ಅಮಿತಾ ಅಶೋಕ್ ಮಾತನಾಡಿ, ಯಾವುದೇ ಸಹಕಾರಿ ಸಂಘವು ಆರೋಗ್ಯ ಶಿಬಿರವನ್ನು ಆಯೋಜಿಸುವುದಿಲ್ಲ, ಆದರೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಆರೋಗ್ಯ…
ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಕಲ್ಲಡ್ಕ ಸ್ಥಳಾಂತರಿತ ಶಾಖೆ ಉದ್ಘಾಟಿಸಿ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅಭಿಪ್ರಾಯ ಮಂಗಳೂರು: ಅವಿಭಜಿತ ಜಿಲ್ಲೆಯಲ್ಲಿ ರಾಜಕೀಯ ರಹಿತವಾಗಿ ಬೆಳೆದಿರುವ ಬ್ಯಾಂಕ್ ಇದ್ದರೆ ಅದು ಎಸ್ಸಿಡಿಸಿಸಿ ಬ್ಯಾಂಕ್ ಮಾತ್ರ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಸಹಕಾರಿ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದೆ ಎಂದು ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಕಲ್ಲಡ್ಕ ಶಾಖೆ ವಿನೂತನ ಸೌಲಭ್ಯದೊಂದಿಗೆ ಕಲ್ಲಡ್ಕದ ಮುಖ್ಯರಸ್ತೆಯಲ್ಲಿರುವ ಕಾವೇರಿ ಸಂಕೀರ್ಣದ ನೆಲ ಅಂತಸ್ತಿಗೆ ಸೋಮವಾರ ಸ್ಥಳಾಂತರಗೊಂಡಿದ್ದು ನೂತನ ಶಾಖೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. https://chat.whatsapp.com/Ge11n7QCiMj5QyPvCc0H19 ಜಿಲ್ಲೆಯಲ್ಲಿ ಕೃಷಿಕರು ಯಾರು ಕೂಡಾ ಬ್ಯಾಂಕ್ ಸಾಲ ಕೊಟ್ಟಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರ ಕೈಗೊಂಡ ಉದಾಹರಣೆಗಳಿಲ್ಲ. ಹಾಗೆಯೇ ನಮ್ಮ ಜಿಲ್ಲೆಯಲ್ಲಿ ಶೇ.100ರಷ್ಟು ಕೃಷಿ ಸಾಲ ಮರುಪಾವತಿಯಾಗುತ್ತಿದೆ. ಮಹಿಳೆಯರ ಸ್ವಾವಲಂಬನೆಗಾಗಿ ನಮ್ಮ ಬ್ಯಾಂಕ್ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದರು.2025ಕ್ಕೆ ನಮ್ಮ ಸ್ವಸಹಾಯ ಗುಂಪುಗಳಿಗೆ 25 ವರ್ಷ ತುಂಬುತ್ತಿದೆ. ಈ…
ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾಗಿ ಶಶಿಕುಮಾರ್ ರೈ ಬಾಲ್ಯೊಟ್ಟು, ಉಪಾಧ್ಯಕ್ಷರಾಗಿ ನೀಲಯ ಎಂ.ಅಗರಿ ಆಯ್ಕೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾಗಿ ಶಶಿಕುಮಾರ್ ರೈ ಬಾಲ್ಯೊಟ್ಟು, ಉಪಾಧ್ಯಕ್ಷರಾಗಿ ನೀಲಯ ಎಂ.ಅಗರಿ ಆಯ್ಕೆ ಅವರು ಅವರೋಧವಾಗಿ ಆಯ್ಕೆಯಾಗಿದ್ದಾರೆ. ಸೋಮವಾರ ಯೂನಿಯನ್‌ನ ಕಚೇರಿಯಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಉಪಸ್ಥಿತಿಯಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು(ಪುತ್ತೂರು ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರ) ಅವರನ್ನು ಅಧ್ಯಕ್ಷರನ್ನಾಗಿ ಮತ್ತು ಎಡಪದವು ವ್ಯವಸಾಯ ಸೇವಾ ಸಹಕಾರಿ ಸಂಘಗಳ ಅಧ್ಯಕ್ಷ ನೀಲಯ ಎಂ.ಅಗರಿ(ಮಂಗಳೂರು ತಾಲೂಕಿನ (ಮೂಡುಬಿದಿರೆ ಮತ್ತು ಮೂಲ್ಕಿ ಫಿರ್ಕಾ ಹೊರತುಪಡಿಸಿ) ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರ) ಅವರನ್ನು ಆರಿಸಲಾಯಿತು. https://chat.whatsapp.com/Ge11n7QCiMj5QyPvCc0H19 ವಿನಯ ಕುಮಾರ್ ಸೂರಿಂಜೆ, ಬಿ.ಪದ್ಮಶೇಖರ ಜೈನ್(ಬಂಟ್ವಾಳ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರ), ವಿಷ್ಣು ಭಟ್ ಬಿ. (ಸುಳ್ಯ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರ), ಜೋಯ್ಲಸ್ ಡಿಸೋಜ(ಮಂಗಳೂರು ತಾಲೂಕಿನ ಮೂಡುಬಿದಿರೆ ಮತ್ತು ಮೂಲ್ಕಿ ಫಿರ್ಕಾ ಪ್ರಾಥಮಿಕ…
ಮೂಡುಬಿದಿರೆ: ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘ ಕರಿಂಜೆ ಇದರ ಪ್ರಥಮ ಶಾಖೆಯ ಉದ್ಘಾಟನೆ ಭಾನುವಾರ ಮದ್ದಡ್ಕದ ವಿಶ್ರುತ್ ಕಾಂಪ್ಲೆಕ್ಸ್‌ನಲ್ಲಿ ಸಂಪನ್ನಗೊಂಡಿತು. ಶ್ರೀಧಾಮ ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಶಾಖೆ ಉದ್ಘಾಟಿಸಿ ಆಶೀರ್ವಚನ ನೀಡಿ, ಸದಸ್ಯರಲ್ಲಿ ಪ್ರೀತಿ ವಿಶ್ವಾಸ ನಂಬಿಕೆ ಗಳಿಸಿಕೊಳ್ಳಬೇಕು. ಪ್ರೀತಿ, ವಿಶ್ವಾಸವಿದ್ದರೆ ಶಾಖೆಯನ್ನು ಇನ್ನೂ ಎತ್ತರಕ್ಕೆ ಬೆಳೆಸಬಹುದು. ಜಾತಿ -ಭೇದವನ್ನು ದೂರ ಮಾಡಿ ಉತ್ತಮ ಸೇವೆ ನೀಡಿ ಈ ಶಾಖೆ ಇನ್ನು ಎತ್ತರಕ್ಕೆ ಏರಿ ಹೆಮ್ಮರವಾಗಿ ಬೆಳೆಯಲಿ ಎಂದು ಹೇಳಿದರು. https://chat.whatsapp.com/Ge11n7QCiMj5QyPvCc0H19 ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿಯ ಸಂಸ್ಥಾಪಕರಾದ ಕರಿಂಜೆ ಶ್ರೀ ಮುಕ್ತಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ಪ್ರಾಮಾಣಿಕತೆಯಿಂದ ಕೆಲಸ ಮಾಡಿದಲ್ಲಿ ಸಂಸ್ಥೆಯು ಯಶಸ್ವಿ ಹೊಂದಲು ಸಾಧ್ಯ ಎಂದು ತಿಳಿಸಿದರು. ಮುಖ್ಯ ಅತಿಥಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಮೈಸೂರು ಪ್ರಾಂತೀಯ ಅಧಿಕಾರಿ ಗುರುಪ್ರಸಾದ್ ಬಂಗೇರ ಮಾತನಾಡಿ, ಸಂಸ್ಥೆಯ ಸದಸ್ಯರು ಗ್ರಾಹಕರಿಗೆ ನಗುಮುಖದ ಸೇವೆ ನೀಡುತ್ತಿರುವುದರಿಂದ ಹೊಸ ಶಾಖೆ ತೆರೆಯಲು ಸಾಧ್ಯವಾಗಿದೆ ಎಂದು ಹೇಳಿದರು. ಸಂಸ್ಥೆಯ…
ಬಜ್ಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ ಡೆನ್ನಿಸ್ ಡಿಸೋಜ, ಉಪಾಧ್ಯಕ್ಷರಾಗಿ ಭಾಸ್ಕರ್ ಮಲ್ಲಿ ಆಯ್ಕೆ
ಮಂಗಳೂರು: ಸಹಕಾರ ರಂಗದ ಪ್ರತಿಷ್ಠಿತ ಬ್ಯಾಂಕ್‌ಗಳಲ್ಲೊಂದಾದ ಬಜ್ಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಇದರ ನೂತನ ಅಧ್ಯಕ್ಷರಾಗಿ ಡೆನ್ನಿಸ್ ಡಿಸೋಜ, ಉಪಾಧ್ಯಕ್ಷರಾಗಿ ಭಾಸ್ಕರ್ ಮಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. https://chat.whatsapp.com/Ge11n7QCiMj5QyPvCc0H19 ಶನಿವಾರ ಬ್ಯಾಂಕಿನಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಡೆನ್ನಿಸ್ ಡಿಸೋಜ ಅವರನ್ನು ಅಧ್ಯಕ್ಷರನ್ನಾಗಿ, ಭಾಸ್ಕರ ಮಲ್ಲಿ ಅವರನ್ನು ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಬ್ಯಾಂಕಿನ ನಿರ್ದೇಶಕರಾದ ಡಾ. ಎಂ.ಎನ್.ರಾಜೇಂದ್ರಕುಮಾರ್, ಮೋನಪ್ಪ ಶೆಟ್ಟಿ ಎಕ್ಕಾರು, ರಿತೇಶ್ ಶೆಟ್ಟಿ, ರತ್ನಾಕರ ಶೆಟ್ಟಿ ಸ್ಪೇನಿ ಡಿಸೋಜ, ವಸಂತ, ಮಹಮ್ಮದ್ ಶರೀಫ್, ಗೀತಾ ಅಮೀನ್, ಸವಿತಾ, ಮೀರಾ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಪ್ರತಿನಿಧಿ ಕಿರಣ್ ಕುಮಾರ್ ಶೆಟ್ಟಿ ಹಾಜರಿದ್ದರು. ಚುನಾವಣಾಧಿಕಾರಿ ಎನ್.ಜೆ. ಗೋಪಾಲ್ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com
ಹೊನ್ನಾವರ: ಇಲ್ಲಿನ ಅರ್ಬನ್ ಬ್ಯಾಂಕ್‌ನ ಆಡಳಿತ ಮಂಡಳಿ ಅಧ್ಯಕ್ಷರಾಗಿ ರಾಘವ ವಿಷ್ಣು ಬಾಳೇರಿ ಪುನರಾಯ್ಕೆಯಾಗಿದ್ದಾರೆ. ಇದರೊಂದಿಗೆ ಈ ಸೊಸೈಟಿಯ ಅಧ್ಯಕ್ಷರಾಗಿ ಸತತ ಆರನೇ ಬಾರಿ ಅವರು ಅಧ್ಯಕ್ಷ ಪದವಿ ಅಲಂಕರಿಸಿದಂತಾಗಿದೆ. ಸತತ 25 ವರ್ಷಗಳಿಂದ ಅವರು ಅಧ್ಯಕ್ಷರಾಗಿ ಬ್ಯಾಂಕ್ ಚಟುವಟಿಕೆಗಳನ್ನು ಮುನ್ನಡೆಸುತ್ತಿದ್ದಾರೆ. ರಾಘವ ಬಾಳೇರಿ ಅವರು ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಆಡಳಿತ ಮಂಡಳಿಯ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. https://chat.whatsapp.com/Ge11n7QCiMj5QyPvCc0H19 ಇತ್ತೀಚೆಗೆ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದ ಎಲ್ಲ 12 ಜನರೂ ಅವಿರೋಧವಾಗಿ ಆಯ್ಕೆಯಾಗಿದ್ದರು. ಡಾ.ಗೌತಮ ಕಿರಣ ಬಳ್ಕೂರ, ತಿಮ್ಮಪ್ಪ ಅನಂತ ಪೈ, ನಾರಾಯಣ ವೈಕುಂಠ ಭಂಡಾರಕರ, ರಘುನಾಥ ಗೋವಿಂದರಾಯ ಪೈ, ರಾಘವ ವಿಷ್ಣು ಬಾಳೇರಿ, ರಾಮದಾಸ ವೆಂಕಟೇಶ ಪ್ರಭು, ವಸಂತ ವೆಂಕಟೇಶ ಪ್ರಭು, ಅಣ್ಣಪ್ಪ ಹನುಮಂತ ನಾಯ್ಕ, ವಸಂತ ದೀಪಣ್ಣ ಶೆಟ್ಟಿ ಜೈನ್, ಅಂಕಿತಾ ನಾಗರಾಜ ಕಾಮತ, ತಾರಾ ನಾಯ್ಕ ಹಾಗೂ ರತ್ನಾಕರ ದೇವಪ್ಪ ಪಾವಸ್ಕರ ಮುಂದಿನ ಐದು ವರ್ಷಗಳ ಅವಧಿಗೆ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ ಎಂದು…
ಸೌಹಾರ್ದ ಕಾಯ್ದೆಯ ರಜತ ಮಹೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ವಿ.ಕಿಶನ್ ರಾವ್ ಕುಲಕರ್ಣಿ ಅಭಿಪ್ರಾಯ ರಾಯಚೂರು: ರಾಯಚೂರು ತಾಲೂಕು ಸೌಹಾರ್ದ ಸಹಕಾರಿಗಳ ಕಾರ್ಯನಿರತ ನೌಕರರ ಸಂಘದ ವತಿಯಿಂದ ಸೌಹಾರ್ದ ಕಾಯ್ದೆಯ ರಜತ ಮಹೋತ್ಸವ ಕಾರ್ಯಕ್ರಮವನ್ನು ಶುಕ್ರವಾರ ಸ್ಟೇಶನ್ ರಸ್ತೆಯಲ್ಲಿರುವ ಕೊಠಾರಿ ಫಂಕ್ಷನ್ ಹಾಲ್‌ನಲ್ಲಿ ಆಚರಿಸಲಾಯಿತು.https://chat.whatsapp.com/Ge11n7QCiMj5QyPvCc0H19 ಸೌಹಾರ್ದ ಕಾಯ್ದೆ ಜಾರಿಗೆ ಬಂದು 25 ವರ್ಷ ಪೂರೈಸಿದ ನಿಮಿತ್ತ ರಜತ ಮಹೋತ್ಸವ ಕಾರ್ಯಕ್ರಮವನ್ನು ರಾಯಚೂರು ತಾಲೂಕು ಸೌಹಾರ್ದ ಸಹಕಾರಿಗಳ ಕಾರ್ಯನಿರತ ನೌಕರರ ಸಂಘದ ವತಿಯಿಂದ ಆಚರಿಸಲಾಯಿತು. ವಿಶ್ವರಾಜ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ವಿ.ಕಿಶನ್ ರಾವ್ ಕುಲಕರ್ಣಿ, ಯುವಶಕ್ತಿ ಪತ್ತಿನ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಎಂ.ಇಲಿಯಾಸ್ ಪಾಶಾ ಮತ್ತು ನೌಕರರ ಸಂಘದ ಅಧ್ಯಕ್ಷ ರವಿಕುಮಾರ ಸಹಕಾರಿಯ ಧ್ವಜಾರೋಹಣ ನೆರವೇರಿಸಿದರು. ವಿ.ಕಿಶನ್ ರಾವ್ ಕುಲಕರ್ಣಿ ಮಾತನಾಡಿ, ಸೌಹಾರ್ದ ಸಹಕಾರಿಗಳನ್ನು ಗುಣಮಟ್ಟದಲ್ಲಿ ಬೆಳೆಸಬೇಕಾದರೆ ಸಿಬ್ಬಂದಿಗಳ ಶ್ರಮ ಪ್ರಮುಖ ಪಾತ್ರ ನಿರ್ವಹಿಸುತ್ತದೆ ಎಂದು ತಿಳಿಸಿದರು. ರಾಯಚೂರು ಜಿಲ್ಲಾ ಸೌಹಾರ್ದ ಒಕ್ಕೂಟದ ನಿರ್ದೇಶಕ ಮತ್ತು ಅಕ್ಷಯ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ…
ರಾಯಚೂರು: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ. ಕಲಬುರಗಿ ಪ್ರಾಂತದ ವತಿಯಿಂದ ಗುರುವಾರ ಸಿಂಧನೂರಿನಲ್ಲಿ ರಾಯಚೂರು ಜಿಲ್ಲೆಯ ಸೌಹಾರ್ದ ಸಹಕಾರಿಗಳ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಮುಖ್ಯಕಾರ್ಯನಿರ್ವಾಹಕರ ವಾರ್ಷಿಕ ಸಭೆ ಆಯೋಜಿಸಲಾಯಿತು. https://chat.whatsapp.com/Ge11n7QCiMj5QyPvCc0H19 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಯಚೂರು ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟದ ಅಧ್ಯಕ್ಷ ಎಂ.ದೊಡ್ಡ ಬಸವರಾಜ ಅವರು ಉದ್ಘಾಟನೆ ನೆರವೇರಿಸಿದರು. ಸಂಯುಕ್ತ ಸಹಕಾರಿಯ ಮಾಜಿ ನಿರ್ದೇಶಕ ರಾಜಶೇಖರ್ ಬಿ, ಆರ್.ಕೆ.ಡಿ.ಸಿ.ಸಿ ಬ್ಯಾಂಕ್ ರಾಯಚೂರು ಇದರ ನಿರ್ದೇಶಕ ಸೋಮನಗೌಡ ಬಾದರ್ಲಿ ಮುಖ್ಯ ಅತಿಥಿಗಳಾಗಿದ್ದರು. ಸಾಮಾನ್ಯ ಸೇವಾ ಕೇಂದ್ರದ (ಸಿ.ಎಸ್.ಸಿ) ಬಗ್ಗೆ ರಾಯಚೂರು ಜಿಲ್ಲಾ ವ್ಯವಸ್ಥಾಪಕ ಮಹಮ್ಮದ್ ನಜೀಮುದ್ದೀನ್ ಮಾಹಿತಿ ನೀಡಿದರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಕಲಬುರಗಿ ಪ್ರಾಂತೀಯ ಅಧಿಕಾರಿ ಸೂರ್ಯಕಾಂತ್ ರ್ಯಾಕಲೆ ಮುಖ್ಯಕಾರ್ಯನಿರ್ವಾಹಕರ ಶಾಸನಬದ್ಧ ಕಾರ್ಯಗಳು ಮತ್ತು ಜವಾಬ್ದಾರಿಗಳ ಕುರಿತು ಮಾಹಿತಿ ನೀಡಿದರು. ಸೌಹಾರ್ದ ಸಹಕಾರಿ ದಿನಾಚರಣೆಯ ರಜತ ಮಹೋತ್ಸವ ಅಂಗವಾಗಿ ರಸಪ್ರಶ್ನೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಒಟ್ಟು 13 ತಂಡಗಳು ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪ್ರಥಮ ಸ್ಥಾನ ಪುಲಕೇಶಿ…
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯಲ್ಲಿ ಜನವರಿ 5ರಂದು ಉಚಿತ ವೈದ್ಯಕೀಯ, ನೇತ್ರ, ದಂತ ತಪಾಸಣೆ ಶಿಬಿರ
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯ ಎರಡನೇ ವಾರ್ಷಿಕೋತ್ಸವದ ಪ್ರಯುಕ್ತ ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ ಮಡವು ಮತ್ತು ಜೆಸಿಐ ಮಡಂತ್ಯಾರು ಇವರ ಜಂಟಿ ಸಹಯೋಗದೊಂದಿಗೆ ಎ.ಜೆ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್, ಮಂಗಳೂರು ಇವರ ನುರಿತ ವೈದರ ತಂಡದೊಂದಿಗೆ ಉಚಿತ ವೈದ್ಯಕೀಯ ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರ ಜನವರಿ ೫ರಂದು ಭಾನುವಾರ ಬೆಳಗ್ಗೆ 9.30ರಿಂದ ಮಧ್ಯಾಹ್ನ 12.30ರವರೆಗೆ ಕಲಾ ಸಭಾಂಗಣ, ಶ್ರೀ ದುರ್ಗಾ ಕಾಂಪ್ಲೆಕ್ಸ್ ಮುಖ್ಯ ರಸ್ತೆ ಮಡಂತ್ಯಾರು ಇಲ್ಲಿ ಆಯೋಜಿಸಲಾಗಿದೆ. https://chat.whatsapp.com/Ge11n7QCiMj5QyPvCc0H19 ಈ ವೈದ್ಯಕೀಯ ಶಿಬಿರದಲ್ಲಿ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ, ಉಚಿತ ಕನ್ನಡಕ ವಿತರಣೆ, ಇ.ಸಿ.ಜಿ, ಮಧುಮೇಹ ತಪಾಸಣೆ , ಬಿ.ಪಿ. ತಪಾಸಣೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಕಿವಿ -ಮೂಗು, ಗಂಟಲು ತಪಾಸಣೆ, ಚರ್ಮರೋಗ ತಪಾಸಣೆ, ಬಾಯಿ ಮತ್ತು ಹಲ್ಲುಗಳ ತಪಾಸಣೆ, ಹುಳುಕು ಹಲ್ಲುಗಳನ್ನು ಭರ್ತಿ ಮಾಡುವುದು, ಹಲ್ಲುಗಳ ಶುಚಿ, ಇತರ ವೈದ್ಯಕೀಯ ಸೇವೆಗಳು ಹಾಗೂ ಹೆಚ್ಚಿನ…
