Author: admin

ಪರಮಪೂಜ್ಯ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ಮಂಗಳೂರು: ಸಹಕಾರಿ ಕ್ಷೇತ್ರದಲ್ಲಿ ಗ್ರಾಹಕರಿಗೆ ನೀಡುವ ನಗುಮುಖದ ಸೇವೆಯೇ ನಿಜವಾದ ಠೇವಣಿ ಇದ್ದ ಹಾಗೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಮಂಗಳೂರಿನ ಸೆಂಟ್ರಲ್‌ ಮಾರ್ಕೆಟ್‌ ರಸ್ತೆಯ ರಾಸಿಕ್‌ ಚೇಂಬರ್‌ನಲ್ಲಿ ಶುಕ್ರವಾರ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 23ನೇ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಆಶೀರ್ವಚನ ನೀಡಿದರು. https://chat.whatsapp.com/Ge11n7QCiMj5QyPvCc0H19 ಬದುಕಿನಲಿ ಎರಡು ಉದ್ದೇಶಗಳಿರಬೇಕು. ಒಂದು -ಏಕೋದ್ದೇಶ, ಇನ್ನೊಂದು ವಿವಿಧೊದ್ದೇಶ. ಅಂತರಂಗದಲ್ಲಿ ಏಕೋದ್ದೇಶ, ಬಹಿರಂಗದಲ್ಲಿ ವಿವಿಧೋದ್ದೇಶಗಳು ಬೇಕು. ಸಹಕಾರ ಎಂದರೆ ಸೌಹಾರ್ದ. ಗ್ರಾಹಕರೇ ಸಹಕಾರ ರಂಗದ ಜೀವಾಳ. ಗ್ರಾಹಕರ ಒತ್ತಾಸೆಗಳಿಗೆ ಪೂರಕವಾಗಿ ನಡೆಸುವ ಪದಾಧಿಕಾರಿಗಳು, ಆಡಳಿತ ಮಂಡಳಿಗಳು, ನಿಸ್ವಾರ್ಥವಾಗಿ ಸೇವೆ ನೀಡುವ ಸಿಬ್ಬಂದಿ ವರ್ಗ ಇದ್ದರೆ ಒಂದು ಸಹಕಾರಿ ಯಶಸ್ವಿಯಾಗಿ ಮುನ್ನಡೆಯುತ್ತದೆ ಎಂದು ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್‌ ಮುಖ್ಯ ಅತಿಥಿಯಾಗಿ ಮಾತನಾಡಿ, ಸೌಹಾರ್ದ ಸಹಕಾರಿಯನ್ನು ಬೆಳೆಸಲು…

Read More

ಮಂಗಳೂರು; ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 23ನೇ ಮಂಗಳೂರು ಸೆಂಟ್ರಲ್‌ ಮಾರ್ಕೆಟ್‌ ಶಾಖೆಯ ಉದ್ಘಾಟನಾ ಸಮಾರಂಭ ಜ.3ರಂದು ಬೆಳಗ್ಗೆ 11.15ಕ್ಕೆ ಮಂಗಳೂರು ಸೆಂಟ್ರಲ್‌ ಮಾರ್ಕೆಟ್‌ ರಸ್ತೆಯ ರಾಸಿಕ್‌ ಚೇಂಬರ್‌ನ ಒಂದನೇ ಮಹಡಿಯಲ್ಲಿ ನಡೆಯಲಿದೆ. ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಶಾಖೆ ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ. ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಗೌರವ ಮಾರ್ಗದರ್ಶಕಿ ಸಾಧ್ವಿ ಮಾತಾನಂದಮಯೀ ಉಪಸ್ಥಿತರಿರಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಕ್ಯಾ.ಬ್ರಿಜೇಶ್‌ ಚೌಟ, ಶಾಸಕ ವೇದವ್ಯಾಸ ಕಾಮತ್‌, ಸಹಕಾರ ಸಂಘಗಳ ಉಪನಿಬಂಧಕ ಎಚ್‌.ಎನ್‌.ರಮೇಶ್‌, ರಾಸಿಕ್‌ ಚೇಂಬರ್‌ ಮಾಲೀಕ ಕಿರಣ್‌ ಸಾಂಗ್ವಿ, ದ.ಕ. ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯ ಅಧ್ಯಕ್ಷ ಭಾಸ್ಕರ ದೇವಸ್ಯ, ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಯೋಜನಾ ನಿರ್ದೇಶಕ ಕಿರಣ್‌ ಯು, ಸೋಮಯಾಜಿ ಎಸ್ಟೇಟ್‌ನ ಸಿಎಂಡಿ ರಘುನಾಥ ಸೋಮಯಾಜಿ ಬಂಟ್ವಾಳ, ಮಂಗಳೂರು ಮೇಯರ್‌ ಮನೋಜ್‌ ಕುಮಾರ್‌ ಕೋಡಿಕಲ್‌, ಕಲ್ಪನಾ ಸ್ವೀಟ್ಸ್‌ ಮಾಲೀಕ ವರದರಾಯ ನಾಗ್ವೇಕರ್‌, ಕರ್ನಾಟಕ…

Read More

ಸಾಕ್ಷ್ಯಚಿತ್ರ ಪ್ರದರ್ಶನ, ವಿಚಾರಗೋಷ್ಠಿ, ಸಾಧಕ ಸಹಕಾರಿಗಳಿಗೆ ಗೌರವಾರ್ಪಣೆ ಉಡುಪಿ: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಬೆಂಗಳೂರು, ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟ ಇವರ ಜಂಟಿ ಆಶ್ರಯದಲ್ಲಿ ಶ್ರೀ ಜೈ ಗಣೇಶ್ ಕ್ರೆಡಿಟ್ ಸೌಹಾರ್ದ ಸಹಕಾರಿ, ಶ್ರೀ ಕೃಷ್ಣ ಸೌಹಾರ್ದ ಸಹಕಾರಿ ಸಂಘ ಸಾಲಿಗ್ರಾಮ, ಶ್ರೀ ರಾಮಾಂಜನೇಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ ಕೋಡಿ, ಕನ್ಯಾಣ ಇವರ ಸಹಕಾರದೊಂದಿಗೆ ಜನವರಿ 4ರಂದು ಸೌಹಾರ್ದ ಸಹಕಾರಿ ದಿನಾಚರಣೆ, ಬೆಳ್ಳಿ ಹಬ್ಬದ ವರ್ಷ ಕಾರ್ಯಕ್ರಮ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮದ ಗಿರಿಜಾ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. https://chat.whatsapp.com/Ge11n7QCiMj5QyPvCc0H19 ಬೆಳಗ್ಗೆ 10.30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಅದಕ್ಕೆ ಮೊದಲು 10ರಿಂದ ಸಾಕ್ಷ್ಯಚಿತ್ರ ಪ್ರದರ್ಶನಗೊಳ್ಳಲಿದೆ. ಉಡುಪಿ ಶಾಸಕ ಯಶ್‌ಪಾಲ್ ಎ.ಸುವರ್ಣ ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕ ಮಂಜುನಾಥ್ ಎಸ್.ಕೆ. ಅಧ್ಯಕ್ಷತೆ ವಹಿಸಲಿದ್ದಾರೆ. ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಸಹಕಾರಿಗಳಿಗೆ ಸನ್ಮಾನ ನೆರವೇರಿಸಲಿದ್ದಾರೆ. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಸಹಕಾರಿಗಳಿಗೆ…

Read More

ಸೌಹಾರ್ದ ಸಹಕಾರಿ ದಿನ, ಸೌಹಾರ್ದ ಆಂದೋಲನದ ರಜತ ಮಹೋತ್ಸವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯಿಂದ ಧ್ವಜಾರೋಹಣ  ಬೆಂಗಳೂರು: ಸೌಹಾರ್ದ ಸಹಕಾರಿ ದಿನ, ಸೌಹಾರ್ದ ಆಂದೋಲನದ ರಜತ ಮಹೋತ್ಸವದ ಪ್ರಾರಂಭ ಮತ್ತು ಹೊಸ ಕ್ಯಾಲೆಂಡರ್ ವರ್ಷವನ್ನು ಸಂಯುಕ್ತ ಸಹಕಾರಿ ಹಾಗೂ ಕರ್ನಾಟಕದ 2000ಕ್ಕೂ ಹೆಚ್ಚು ಸೌಹಾರ್ದ ಸಹಕಾರಿಗಳಲ್ಲಿ ಬುಧವಾರ ಬೆಳಗ್ಗೆ 10ರಿಂದ 11 ಗಂಟೆವರೆಗೆ ಏಕಕಾಲದಲ್ಲಿ ಆಚರಿಸಲಾಗಿದ್ದು ಇದು ಇಂಡಿಯಾ ಬುಕ್ ಆಫ್ ರೆಕಾರ್ಡ್ ಪಟ್ಟಿಗೆ ದಾಖಲಾಗಿದೆ. https://chat.whatsapp.com/Ge11n7QCiMj5QyPvCc0H19 ಸಂಯುಕ್ತ ಸಹಕಾರಿಯ ಅಧ್ಯಕ್ಷ ಜಿ.ನಂಜನ ಗೌಡ ಸೌಹಾರ್ದ ಸಹಕಾರಿ ರಜತ ಮಹೋತ್ಸವದ ಅಂಗವಾಗಿ ಸಹಕಾರಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಕರ್ನಾಟಕದಲ್ಲಿ ಸೌಹಾರ್ದ ಸಹಕಾರಿ ಚಳುವಳಿಯು ಸ್ವಾಯತ್ತತೆ, ಸ್ವಯಂ ಆಡಳಿತ, ಸ್ವಯಂ ನಿಯಂತ್ರಣದ ದೃಷ್ಟಿಕೋನದಿಂದ ವೇಗವಾಗಿ ಬೆಳೆಯುತ್ತಿದೆ. ಪ್ರಸ್ತುತ ರಾಜ್ಯದಲ್ಲಿ 6500 ಸೌಹಾರ್ದ ಸಹಕಾರಿ ಸಂಘಗಳಿದ್ದು ಹೊಂದಿದ್ದು, ಇಂದಿನ ಆಚರಣೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಸೇರಿದೆ ಎಂದು ಹೇಳಿದರು. ಕರ್ನಾಟಕದ ಎಲ್ಲಾ ಸೌಹಾರ್ದ ಸಹಕಾರಿ ಸಂಘಗಳು ಈ ನಿರ್ದಿಷ್ಟ ವರ್ಷದಲ್ಲಿ…

Read More

ಮಂಗಳೂರು/ ಉಡುಪಿ: ಸೌಹಾರ್ದ ಸಹಕಾರಿ ದಿನಾಚರಣೆಯ ಅಮೃತ ಮಹೋತ್ಸವ ಅಂಗವಾಗಿ ಬುಧವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸೌಹಾರ್ದ ಸಹಕಾರಿ ಸಂಘಗಳಲ್ಲಿ ಸೌಹಾರ್ದ ದಿನ ಆಚರಣೆ ಹಾಗೂ ಧ್ವಜಾರೋಹಣ ಹಮ್ಮಿಕೊಳ್ಳಲಾಯಿತು. https://chat.whatsapp.com/Ge11n7QCiMj5QyPvCc0H19 ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯ ವತಿಯಿಂದ ಜನತಾ ಬಜಾರ್‌ನಲ್ಲಿರುವ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ದಕ್ಷಿಣ ಕನ್ನಡ ಜಿಲ್ಲಾ ಸಂಪರ್ಕ ಕಚೇರಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಎಚ್.ಎನ್ ರಮೇಶ್ ಸಹಕಾರಿ ಧ್ವಜಾರೋಹಣ ಮಾಡಿ ಪುಷ್ಪಾರ್ಚನೆಯ ಮಾಡಿದರು. ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯ ಅಧ್ಯಕ್ಷ ಭಾಸ್ಕರ್ ದೇವಸ್ಯ, ಉಪಾಧ್ಯಕ್ಷ ಸಂಜೀವ ಅಡ್ಯಾರ್, ಮುಖ್ಯ ಕಾರ್ಯನಿರ್ವಾಹಕ ಚೇತನ್ ಕೊಟ್ಟಾರಿ, ಯುವ ಸ್ಪಂದನ ಸೌಹಾರ್ದ ಸಹಕಾರಿಯ ಸಿಇಒ ರಾಜೇಶ್ ಎ.ಎಲ್ ಉಪಸ್ಥಿತರಿದ್ದರು. ಈ ಸಂದರ್ಭ ಎಲ್ಲಾ ಸೌಹಾರ್ದ ಸಹಕಾರಿಗಳಿಗೆ ಶುಭ ಕೋರಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯ ಗುರುಪುರ ಕೈಕಂಬದ ಸಫಲ ಸೌಹಾರ್ದ ಸಹಕಾರಿ ಸಂಘದಲ್ಲಿ…

Read More

ಮಂಗಳೂರು: ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘ ಕರಿಂಜೆ ಇದರ ಪ್ರಥಮ ಶಾಖೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ವಿಶ್ರುತ್‌ ಕಾಂಪ್ಲೆಕ್ಸ್‌ ಮೊದಲನೇ ಮಹಡಿ ಮದ್ದಡ್ಕದಲ್ಲಿ ಆರಂಭವಾಗಲಿದ್ದು ಜನವರಿ 5ರಂದು ಉದ್ಘಾಟನೆಗೊಳ್ಳಲಿದೆ. https://chat.whatsapp.com/Ge11n7QCiMj5QyPvCc0H19 ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದ್ದು ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ. ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿಯ ಸಂಸ್ಥಾಪಕರಾದ ಕರಿಂಜೆ ಶ್ರೀ ಮುಕ್ತಾನಂದ ಸ್ವಾಮೀಜಿ ಉಪಸ್ಥಿತರಿರಲಿದ್ದಾರೆ. ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ನೂಯಿ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಹರೀಶ್‌ ಪೂಂಜ, ಕರ್ನಾಟಕ ರಾಜ್ಯ ಸಂಯುಕ್ತ ಸಹಕಾರಿಯ ಮೈಸೂರು ಪ್ರಾಂತೀಯ ಅಧಿಕಾರಿ ಗುರುಪ್ರಸಾದ್‌ ಬಂಗೇರ, ದ.ಕ. ಜಿಲ್ಲಾ ಸೌಹಾರ್ದ ಅಭಿವೃದ್ಧಿ ಅಧಿಕಾರಿ ವಿಜಯ್‌ ಬಿ.ಎಸ್‌., ಕುವೆಟ್ಟು ಗ್ರಾಮ ಪಂಚಾಯತ್‌ ಅಧ್ಯಕ್ಷೆ ಭಾರತಿ ಎಸ್‌.ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಭಾಸ್ಕರ ದೇವಸ್ಯ, ಉದ್ಯಮಿ ಕೆ.ಶ್ರೀಪತಿ ಭಟ್‌, ಕರಿಂಜೆಗುತ್ತು ಕೆ.ಕೃಷ್ಣರಾಜ ಹೆಗ್ಡೆ, ಮೂಡುಬಿದಿರೆ ಎಂಎಸ್‌ಸಿ ಬ್ಯಾಂಕ್‌…

Read More

ಮೂಡುಬಿದಿರೆ: ಸಮಷ್ಟಿ ಸೌಹಾರ್ದ ಸಹಕಾರಿ ಸಂಘದ ಸ್ಥಳಾಂತರಗೊಳ್ಳಲಿರುವ ನೂತನ ಪ್ರಧಾನ ಕಚೇರಿಯ ಉದ್ಘಾಟನಾ ಸಮಾರಂಭ ಜನವರಿ 6ರಂದು ನಡೆಯಲಿದೆ. https://chat.whatsapp.com/Ge11n7QCiMj5QyPvCc0H19 ಬೆಳಗ್ಗೆ 11ಕ್ಕೆ ಮೂಡುಬಿದಿರೆಯ ಕ್ರಿಸ್ಟಲ್‌ ಕೋರ್ಟ್‌ ಕಮರ್ಷಿಯಲ್‌ ಕಾಂಪ್ಲೆಕ್ಸ್‌ನಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕರ್ನಾಟಕ ರಾಜ್ಯ ಕ್ವಾರಿ ಮತ್ತು ಕ್ರಶರ್‌ ಅಸೋಸಿಯೇಶನ್‌ ಅಧ್ಯಕ್ಷ ಡಾ.ರವೀಂದ್ರ ಶೆಟ್ಟಿ ಬಜಗೋಳಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಮಷ್ಟಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಅಮೃತ್‌ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ರಾಜ್ಯ ಸಂಯುಕ್ತ ಸಹಕಾರಿಯ ಮೈಸೂರು ಪ್ರಾಂತೀಯ ಅಧಿಕಾರಿ ಗುರುಪ್ರಸಾದ್‌ ಬಂಗೇರ, ದ.ಕ. ಜಿಲ್ಲಾ ಸೌಹಾರ್ದ ಅಭಿವೃದ್ಧಿ ಅಧಿಕಾರಿ ವಿಜಯ್‌ ಬಿ.ಎಸ್‌., ಕ್ರಿಸ್ಟಲ್‌ ಕೋರ್ಟ್‌ ಕಾಂಪ್ಲೆಕ್ಸ್‌ ಮಾಲೀಕ ಹರ್ಷ ಚೇತನ್‌ ವರ್ಮ, ತೋಡಾರ್‌ ಶೆಟ್ಟಿ ಬಿಲ್ಡರ್ಸ್‌ ಮಾಲೀಕ ದಿವಾಕರ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಘದ ಉಪಾಧ್ಯಕ್ಷ ಡಾ.ಗಣನಾಥ ಶೆಟ್ಟಿ ಬಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೇಮಚಂದ್ರ ಜಿ, ನಿರ್ದೇಶಕರು, ಶಾಖಾ ಪ್ರಬಂಧಕರು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಲಿದ್ದಾರೆ. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ:…

Read More

ಅಂತರರಾಷ್ಟ್ರೀಯ ಕ್ರೀಡಾಪಟು ಸುಕನ್ಯಾ ಜಗದೀಶ್ ಆಚಾರ್ಯ ಅಭಿಪ್ರಾಯ ಮಂಗಳೂರು: ಎಸ್.ಕೆ.ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ- ಆಪರೇಟಿವ್ ಸೊಸೈಟಿ ಮಂಗಳೂರು ಇದರ ವಜ್ರಮಹೋತ್ಸವ ಪ್ರಯುಕ್ತ ಸದಸ್ಯರಿಗೆ ಮತ್ತು ಸಿಬ್ಬಂದಿಯವರಿಗೆ ಭಾನುವಾರ ಮಂಗಳಾ ಕ್ರೀಡಾಂಗಣದಲ್ಲಿ ಕ್ರೀಡೋತ್ಸವ ನಡೆಯಿತು. ಸಂಸ್ಥೆಯ ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯ ಅಧ್ಯಕ್ಷತೆಯಲ್ಲಿ , ಅಂತರಾಷ್ಟ್ರೀಯ ಕ್ರೀಡಾಪಟು ಸುಕನ್ಯಾ ಜಗದೀಶ್ ಆಚಾರ್ಯ ಉದ್ಘಾಟಿಸಿ, ಪಾರಿವಾಳ ಹಾರಿಸುವ ಮೂಲಕ ಕ್ರೀಡೋತ್ಸವಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸುಕನ್ಯಾ ಜಗದೀಶ್ ಆಚಾರ್ಯ, ಕ್ರೀಡೆಯು ಮಾನಸಿಕ ಮತ್ತು ದೈಹಿಕ ಸಮತೋಲನಕ್ಕೆ ಸಹಕಾರಿ ಎಂದು ಹೇಳಿದರು. ಮುಖ್ಯ ಅತಿಥಿ ಮಂಗಳೂರು ಮಹಾನಗರ ಪಾಲಿಕೆಯ ಮಣ್ಣಗುಡ್ಡೆ ವಾರ್ಡಿನ ಸದಸ್ಯೆ ಸಂಧ್ಯಾ ಮೋಹನ್ ಆಚಾರ್ಯ ಮಾತನಾಡಿ ಒತ್ತಡದ ಜೀವನವನ್ನು ನಿಭಾಯಿಸಲು ಕ್ರೀಡೆ ಅಗತ್ಯ ಎಂದು ಹೇಳಿದರು. ಶ್ರೀ ಕಾಳಿಕಾಂಬಾ ಸೇವಾ ಸಮಿತಿ ರಥಬೀದಿ ಮಂಗಳೂರು ಇದರ ಅಧ್ಯಕ್ಷ ಜಗದೀಶ್ ಆಚಾರ್ಯ ಸಿದ್ದಕಟ್ಟೆ ಶುಭ ಹಾರೈಸಿದರು. ಸಂಸ್ಥೆಯ ಉಪಾಧ್ಯಕ್ಷ ಎ.ಆನಂದ ಆಚಾರ್ಯ ಮತ್ತು ಪ್ರಧಾನ ವ್ಯವಸ್ಥಾಪಕ ಯಜ್ಞೇಶ್ವರ ಕೃಷ್ಣಾಪುರ ವೇದಿಕೆಯಲ್ಲಿ…

Read More

ಸಹಕಾರಿ ಸಂಘಗಳ ಕುಂದಾಪುರ ವಿಭಾಗ ಸಹಾಯಕ ನಿಬಂಧಕಿ ಸುಕನ್ಯಾ ರಾವ್‌ ಅಭಿಮತ ಉಡುಪಿ: ಜಾಗತಿಕ ವಲಯದಲ್ಲಿ ಆರ್ಥಿಕ ಸ್ಥಿತಿಗತಿಗಳು ಕಾಲಕಾಲಕ್ಕೆ ಬದಲಾಗುತ್ತಿರುತ್ತವೆ. ಸೌಹಾರ್ದ ಸಹಕಾರಿಗಳ ಸಿಬ್ಬಂದಿಗಳು ಆರ್ಥಿಕ ವಿದ್ಯಮಾನಗಳ ಸ್ಥಿತಿಗತಿಗಳಿಗೆ ಅನುಗುಣವಾಗಿ ಸಹಕಾರಿಯ ಬೆಳವಣಿಗೆಯ ಬಗ್ಗೆ ಹೆಚ್ಚು ಗಮನ ಹರಿಸಬೇಕು ಎಂದು ಸಹಕಾರಿ ಸಂಘಗಳ ಕುಂದಾಪುರ ವಿಭಾಗ ಸಹಾಯಕ ನಿಬಂಧಕಿ ಸುಕನ್ಯಾ ರಾವ್‌ ಹೇಳಿದರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿಗಳ ಮುಖ್ಯ ಕಾರ್ಯನಿರ್ವಾಹಕರ ಸಭೆಯನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು. https://chat.whatsapp.com/Ge11n7QCiMj5QyPvCc0H19 ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕ ಮಂಜುನಾಥ ಎಸ್‌.ಕೆ ದೂರದೃಷ್ಟಿಯ ಯೋಜನೆಗಳ ಮೂಲಕ ಸಹಕಾರ ರಂಗದ ಪ್ರಗತಿ ಸಾಧ್ಯ ಎಂದು ಬಣ್ಣಿಸಿದರು. ಮುಖ್ಯ ಅತಿಥಿಯಾಗಿ ಮಾತನಾಡಿದ ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟದ ಅಧ್ಯಕ್ಷ ಅಂಪಾರು ಜಗನ್ನಾಥ ಶೆಟ್ಟಿ ಮಾತನಾಡಿದ, ಜನವರಿ ೪ರಂದು ಉಡುಪಿ ಜಿಲ್ಲೆಯ ಸಾಲಿಗ್ರಾಮದಲ್ಲಿ ಸೌಹಾರ್ದ ಸಹಕಾರಿ ಕಾಯ್ದೆಯ ಬೆಳ್ಳಿಹಬ್ಬದ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.…

Read More

ಮಂಗಳೂರು: ಮೂಡುಬಿದಿರೆಯ ಲಾಡಿಯಲ್ಲಿರುವ ಕರ್ನಾಟಕ ಇನ್‌ಸ್ಟಿಟ್ಯೂಟ್‌ ಆಫ್‌ ಕೋ ಆಪರೇಟಿವ್‌ ಮ್ಯಾನೇಜ್‌ಮೆಂಟ್‌ನಲ್ಲಿ ಸಹಕಾರ ಇಲಾಖೆ, ಸಹಕಾರ ಲೆಕ್ಕಪರಿಶೋಧನಾ ಇಲಾಖೆ ಮತ್ತು ದಕ್ಷಿಣ ಕನ್ನಡ, ಉಡುಪಿ, ಹಾಗೂ ಕೇರಳದ ಕಾಸರಗೋಡು ಜಿಲ್ಲೆಯ ವಿವಿಧ ಸಹಕಾರ ಸಂಘಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಮತ್ತು ಖಾಸಗಿ ಅಭ್ಯರ್ಥಿಗಳಿಗೆ ಆರು ತಿಂಗಳ ಅವಧಿಯ ಡಿಪ್ಲೊಮಾ ಇನ್‌ ಕೋ ಆಪರೇಟಿವ್‌ ಮ್ಯಾನೇಜ್‌ಮೆಂಟ್‌ ಕೋರ್ಸ್‌ ತರಬೇತಿ ನೀಡಲಾಗುತ್ತಿದೆ. ಜನವರಿ -ಜೂನ್‌ ತಿಂಗಳ ಅವಧಿಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. https://chat.whatsapp.com/Ge11n7QCiMj5QyPvCc0H19 ಸುಸಜ್ಜಿತ ಕೊಠಡಿ ಸಹಿತ ಆರು ತಿಂಗಳ ಕಂಪ್ಯೂಟರ್‌ ತರಬೇತಿ ನೀಡಲಾಗುವುದು. ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕ ಉಚಿತ ವಸತಿ ನಿಲಯದ ವ್ಯವಸ್ಥೆ, ವೈಫೈ ಸೌಲಭ್ಯಗಳಿವೆ. ನೇರವಾಗಿ ಸಂಸ್ಥೆಯಲ್ಲಿ ಅಥವಾ ಆನ್‌ಲೈನ್‌ ಮೂಲಕ ಪ್ರವೇಶಕ್ಕಾಗಿ ಡಿಸೆಂಬರ್‌ 31ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಪ್ರವೇಶಾತಿ ಲಿಂಕ್‌: www.kscfdcm.co.in ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com

Read More