Author: admin

ಸೌಹಾರ್ದ ಸಹಕಾರಿಯ ಮುಖ್ಯ ಕಾರ್ಯನಿರ್ವಾಹಕರ ಸಭೆಯಲ್ಲಿ ಭಾಸ್ಕರ ದೇವಸ್ಯ ಅಭಿಪ್ರಾಯ ಮಂಗಳೂರು: ಯಾವುದೇ ಒಂದು ಸಹಕಾರಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಜವಾಬ್ದಾರಿಯುತ ಸ್ಥಾನದಲ್ಲಿ ಕೆಲಸ ಮಾಡುವವರು. ಸಿಇಒಗಳಿಂದ ಆಯಾ ಸಂಸ್ಥೆಗಳು ಉನ್ನತ ಸ್ಥಾನಕ್ಕೇರಬಲ್ಲದು. ಅದಕ್ಕೆ ತಕ್ಕಂತೆ ಸಿಇಒಗಳ ಕಾರ್ಯನಿರ್ವಹಣೆ ಇರಬೇಕು ಎಂದು ದ.ಕ. ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯ ಅಧ್ಯಕ್ಷ ಭಾಸ್ಕರ ದೇವಸ್ಯ ಅಭಿಪ್ರಾಯಪಟ್ಟರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ವತಿಯಿಂದ ಗುರುವಾರ ಮಂಗಳೂರಿನ ಹೋಟೆಲ್‌ ಶ್ರೀನಿವಾಸದಲ್ಲಿ ಹಮ್ಮಿಕೊಂಡ ದಕ್ಷಿಣ ಕನ್ನಡ ಜಿಲ್ಲಾ ಸೌಹಾರ್ದ ಸಹಕಾರಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ವಾರ್ಷಿಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. https://chat.whatsapp.com/Ge11n7QCiMj5QyPvCc0H19 ಯಾವುದೇ ಸೊಸೈಟಿಯ ಆಡಳಿತ ಮಂಡಳಿಗಳು ಐದು ವರ್ಷ ಮಾತ್ರ ಕಾರ್ಯನಿರ್ವಹಿಸುವುದು. ಆದರೆ ಸಿಇಒಗಳು ಹಲವು ವರ್ಷ ಕೆಲಸ ಮಾಡಬಹುದು. ಮುಖ್ಯ ಕಾರ್ಯನಿರ್ಹಣಾಧಿಕಾರಿಗಳು ಸಮಾಜ, ಸೊಸೈಟಿಯ ಆಡಳಿತ ಮಂಡಳಿಗಳು, ಸದಸ್ಯರು ಹಾಗೂ ಜನರ ನಡುವಿನ ಸೇತುವೆಯಂತೆ ಕಾರ್ಯನಿರ್ವಹಿಸುತ್ತಾರೆ. ಸೌಹಾರ್ದ ಸಹಕಾರಿ ಸಂಸ್ಥೆಗಳ ಮೇಲೆ ಜನ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿ…

Read More

ನಿಪ್ಪಾಣಿ ಪೀಠದ ಶ್ರೀ ಅರುಣಾನಂದ ಸ್ವಾಮೀಜಿ ಅಭಿಪ್ರಾಯ ಹಳೆಯಂಗಡಿ: ಪ್ರಿಯದರ್ಶಿನಿ ಸೊಸೈಟಿಯು ಅತ್ಯಲ್ಪ ಅವಧಿಯಲ್ಲೇ ಉತ್ತಮ ಸಾಧನೆ ಮಾಡಿ ಕರಾವಳಿ ಜಿಲ್ಲೆಯಲ್ಲಿ ಜನಮನ್ನಣೆ ಗಳಿಸುತ್ತಿದೆ. ಇಂತಹ ಸೇವೆ ಸದಾ ಮುಂದುವರಿದು ಗ್ರಾಮೀಣ ಪ್ರದೇಶದ ಜನರಿಗೆ ಇನ್ನಷ್ಟು ಉದ್ಯೋಗಾವಕಾಶ ದೊರೆಯಲಿ ಎಂದು ಬೆಳಗಾವಿಯ ಶ್ರೀ ಕ್ಷೇತ್ರ ಮಹಾಕಾಳಿ ಮಹಾಸಂಸ್ಥಾನ ನಿಪ್ಪಾಣಿ ಪೀಠದ ಶ್ರೀ ಅರುಣಾನಂದ ತೀರ್ಥ ಸ್ವಾಮೀಜಿ ಹೇಳಿದರು. https://chat.whatsapp.com/Ge11n7QCiMj5QyPvCc0H19 ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿದರು. ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಎಚ್.ವಸಂತ್ ಬೆರ್ನಾರ್ಡ್ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ವಂದಿಸಿದರು. ನಿರ್ದೇಶಕ ಎಂ.ಗೌತಮ್ ಜೈನ್, ಶಾಖಾ ಪ್ರಬಂಧಕಿ ಅಕ್ಷತಾ ಶೆಟ್ಟಿ, ಮೋಹನ್‌ದಾಸ್‌ ಪೂಜಾರಿ, ಅಂಜಲಿ ದೇವಾಡಿಗ ಹಾಜರಿದ್ದರು. ಪ್ರಥಮ ಕಚೇರಿ ಸಿಬ್ಬಂದಿ ಲೋಲಾಕ್ಷಿ ಕಾರ್ಯಕ್ರಮ ನಿರ್ವಹಿಸಿದರು. ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694 ಇಮೇಲ್: sahakaraspandana@gmail.com

Read More

ಹಿರಿಯಡ್ಕದಲ್ಲಿ ಎಸ್‌ಕೆ ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ ಆಪರೇಟಿವ್‌ ಸೊಸೈಟಿ 17ನೇ ಶಾಖೆ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಶಿವಸುಜ್ಞಾನ ಸ್ವಾಮೀಜಿ ಆಶೀರ್ವಚನ ಉಡುಪಿ: ಮನುಷ್ಯ ಪಾಲಿಸುವ ಚತುರ್ವಿಧ ಪುರುಷಾರ್ಥಗಳಿಂದ ಜೀವನ ಸಾರ್ಥಕವಾಗುತ್ತದೆ. ಅರ್ಥವನ್ನು ಧಾರ್ಮಿಕ ನೆಲೆಗಟ್ಟಿನಲ್ಲಿ ವಿನಿಯೋಗಿಸಿದಾಗ ಮೋಕ್ಷ ಪ್ರಾಪ್ತಿಯಾಗುತ್ತದೆ. ಪರದೇಶಗಳಲ್ಲಿ ಶ್ರೀಮಂತಿಕೆಯನ್ನು ಕಾಣಬಹುದಾದರೂ ಭಾರತದ ಆಧ್ಯಾತ್ಮಿಕ ಚಿಂತನೆ ಬೇರಾವ ನೋಡಲು ಸಾಧ್ಯವಿಲ್ಲ ಎಂದು ಅರೆಮಾದನಹಳ್ಳಿ ವಿಶ್ವಬ್ರಾಹ್ಮಣ ಮಹಾಸಂಸ್ಥಾನ ಮಠದ ಶ್ರೀ ಶಿವಸುಜ್ಞಾನ ತೀರ್ಥ ಸ್ವಾಮೀಜಿ ಹೇಳಿದರು. ಹಿರಿಯಡ್ಕದಲ್ಲಿ ಸೋಮವಾರ ಎಸ್.ಕೆ. ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರೀಯಲ್ ಕೋ-ಆಪರೇಟಿವ್ ಸೊಸೈಟಿಯ 17ನೇ ಬ್ಯಾಂಕಿಂಗ್ ಶಾಖೆ ಉದ್ಘಾಟಿಸಿ ಅಶೀರ್ವಚನ ನೀಡಿದರು. https://chat.whatsapp.com/Ge11n7QCiMj5QyPvCc0H19 ಶ್ರೀಮದ್‌ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿಯವರು ಆಶೀರ್ವಚನ ನೀಡಿ, ಮಠದಲ್ಲಿ ಜ.6ರಿಂದ 12ರವರೆಗೆ ಕೋಟಿ ಕುಂಕುಮಾರ್ಚನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹಿಂದು ಸಮಾಜದ ಏಳಿಗೆಗಾಗಿ ತಾಯಿಯ ಅನುಗ್ರಹಕ್ಕಾಗಿ ಅಮ್ಮನ ಬಳಿ ಪ್ರಾರ್ಥನೆ ಸಲ್ಲಿಸಲಾಗುವುದು ಎಂದರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಯಾವುದೇ ಸಂಸ್ಥೆಗಳು…

Read More

ಮಂಗಳೂರು; ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 23ನೇ ಮಂಗಳೂರು ಸೆಂಟ್ರಲ್‌ ಮಾರ್ಕೆಟ್‌ ಶಾಖೆಯ ಉದ್ಘಾಟನಾ ಸಮಾರಂಭ ಜ.3ರಂದು ಬೆಳಗ್ಗೆ 11.15ಕ್ಕೆ ಮಂಗಳೂರು ಸೆಂಟ್ರಲ್‌ ಮಾರ್ಕೆಟ್‌ ರಸ್ತೆಯ ರಾಸಿಕ್‌ ಚೇಂಬರ್‌ನ ಒಂದನೇ ಮಹಡಿಯಲ್ಲಿ ನಡೆಯಲಿದೆ. https://chat.whatsapp.com/Ge11n7QCiMj5QyPvCc0H19 ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಶಾಖೆ ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ. ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಗೌರವ ಮಾರ್ಗದರ್ಶಕಿ ಸಾಧ್ವಿ ಮಾತಾನಂದಮಯೀ ಉಪಸ್ಥಿತರಿರಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಕ್ಯಾ.ಬ್ರಿಜೇಶ್‌ ಚೌಟ, ಶಾಸಕ ವೇದವ್ಯಾಸ ಕಾಮತ್‌, ಸಹಕಾರ ಸಂಘಗಳ ಉಪನಿಬಂಧಕ ಎಚ್‌.ಎನ್‌.ರಮೇಶ್‌, ರಾಸಿಕ್‌ ಚೇಂಬರ್‌ ಮಾಲೀಕ ಕಿರಣ್‌ ಸಾಂಗ್ವಿ, ದ.ಕ. ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯ ಅಧ್ಯಕ್ಷ ಭಾಸ್ಕರ ದೇವಸ್ಯ, ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಯೋಜನಾ ನಿರ್ದೇಶಕ ಕಿರಣ್‌ ಯು, ಸೋಮಯಾಜಿ ಎಸ್ಟೇಟ್‌ನ ಸಿಎಂಡಿ ರಘುನಾಥ ಸೋಮಯಾಜಿ ಬಂಟ್ವಾಳ, ಮಂಗಳೂರು ಮೇಯರ್‌ ಮನೋಜ್‌ ಕುಮಾರ್‌ ಕೋಡಿಕಲ್‌, ಕಲ್ಪನಾ ಸ್ವೀಟ್ಸ್‌ ಮಾಲೀಕ ವರದರಾಯ ನಾಗ್ವೇಕರ್‌,…

Read More

ಮೂಡುಬಿದಿರೆ: ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘ ಕರಿಂಜೆ, ಹೊಸಂಗಡಿ ಗ್ರಾಮ ಪಂಚಾಯತ್‌, ಶ್ರೀ ಜಗದ್ಗುರು ರಾಘವೇಂದ್ರ ಚಾರಿಟೇಬಲ್‌ ಟ್ರಸ್ಟ್‌ ಕರಿಂಜೆ, ಶ್ರೀಕೃಷ್ಣ ಗೆಳೆಯರ ಬಳಗ ಮಾರೂರು ಹೊಸಂಗಡಿ, ರೋಟರಿ ಕ್ಲಬ್‌ ಸಿದ್ದಕಟ್ಟೆ ಫಲ್ಗುಣಿ ಇವರ ಸರಿಯುಕ್ತ ಆಶ್ರಯದಲ್ಲಿ ವೆನ್ಲಾಕ್‌ ರಕ್ತನಿಧಿ ಕೇಂದ್ರ ಮಂಗಳೂರು ಇವರ ಸಹಕಾರದೊಂದಿಗೆ ಭಾನುವಾರ ಸ್ವಯಂಪ್ರೇರಿತ ರಕ್ತಾದನ ಶಿಬಿರ ಆಯೋಜಿಸಲಾಯಿತು. https://chat.whatsapp.com/Ge11n7QCiMj5QyPvCc0H19 ಗ್ರಾಮಸಮೃದ್ಧಿ ಸೌಹಾರ್ದ ಸಹಕಾರಿ ಸಂಘದ ಸಂಸ್ಥಾಪಕ ಕರಿಂಜೆ ಶ್ರೀ ಮುಕ್ತಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ಹೊಸಂಗಡಿ ಗ್ರಾಮ ಪಂಚಾಯತ್‌ ಅಧ್ಯಕ್ಷ ಜಗದೀಶ್‌ ಆರ್‌.ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ನೂಯಿ, ರೋಟರಿ ಕ್ಲಬ್ ಸಿದ್ದಕಟ್ಟೆ ಫಲ್ಗುಣಿಯ ಅಧ್ಯಕ್ಷ ಶಿವಯ್ಯ ಎಸ್.ಎಲ್ , ವೆನ್ಲಾಕ್‌ ಆಸ್ಪತ್ರೆಯ ವೈದ್ಯ.ರಾದ ಡಾ.ಅಂತೋಣಿ, ಡಾ.ಫಾತಿಮಾ, ಗ್ರಾಮ ಪಂಚಾಯತ್ ಪಿಡಿಒ ಗಣೇಶ್ ಶೆಟ್ಟಿ, ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿಯ ಸಿಇಒ ಶಶಿಕಲಾ ಉಪಸ್ಥಿತರಿದ್ದರು. ವೆನ್ಲಾಕ್‌ ಆಸ್ಪತ್ರೆಯ ವೈದ್ಯ ಡಾ.ಅಂತೋಣಿ ಮಾತನಾಡಿ, ರಕ್ತದಾನ ಶ್ರೇಷ್ಠವಾದ ದಾನ.…

Read More

ಎಸ್‌ಸಿಡಿಸಿಸಿ ಬ್ಯಾಂಕ್‌ ನಿರ್ದೇಶಕ ಐಕಳಬಾವ ದೇವಿಪ್ರಸಾದ್‌ ಶೆಟ್ಟಿ ಶ್ಲಾಘನೆ ಕಾಪು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಲ್ಪಾವಧಿಯಲ್ಲೇ ೩೩ ಶಾಖೆಗಳನ್ನು ತೆರೆದು, ಠೇವಣಿ ಮತ್ತು ಸಾಲ ನೀಡುವಿಕೆಯಲ್ಲಿ ಪ್ರತಿವರ್ಷ ಲಾಭ ಗಳಿಸಿ, ಪ್ರಗತಿಯ ಪಥದಲ್ಲಿ ಸಾಗುತ್ತಿದೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಆತ್ಮಕ್ಕೆ ಹತ್ತಿರವಾಗಿರುವ ಸಹಕಾರಿ ಸಂಘವಾಗಿ ಎಲ್ಲ ಜನರ ವಿಶ್ವಾಸ ಗಳಿಸಿ ರಾಜ್ಯಕ್ಕೆ ಮಾದರಿ ಸಂಸ್ಥೆಯಾಗಿ ಮೂಡಿಬರುತ್ತಿದೆ. ಬ್ಯಾಂಕಿಂಗ್ ಕ್ಷೇತ್ರದ ಜೊತೆಗೆ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನೂ ಹಮ್ಮಿಕೊಂಡು ಬರುತ್ತಿದ್ದು, ಕಾಪುವಿನ ಜನರ ಪೂರ್ಣ ಆಶೀರ್ವಾದ ಮತ್ತು ಸಹಕಾರ ಸಂಘದ ಮೇಲಿರಲಿ ಎಂದು ಬೆಳಪು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ ಅಧ್ಯಕ್ಷ, ಎಸ್‌ಸಿಡಿಸಿಸಿ ಬ್ಯಾಂಕ್‌ ನಿರ್ದೇಶಕ ಐಕಳಬಾವ ದೇವಿಪ್ರಸಾದ್‌ ಶೆಟ್ಟಿ ಹೇಳಿದರು. https://chat.whatsapp.com/Ge11n7QCiMj5QyPvCc0H19 ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕಾಪು ಶಾಖೆಯ ದ್ವಿತೀಯ ವಾರ್ಷಿಕೋತ್ಸವ ಅಂಗವಾಗಿ ಭಾನುವಾರ ಕಾಪು ರೋಟರಿ ಕ್ಲಬ್ ಸಹಭಾಗಿತ್ವದಲ್ಲಿ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ದಿ ಕೇಂದ್ರ, ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಹಾಗೂ ಸಮುದಾಯ ದಂತ…

Read More

ಸಾಧನಾ ಪಥದಲ್ಲಿ ಗಂಗೊಳ್ಳಿ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಗಂಗೊಳ್ಳಿ: ಆರು ಕೋಟಿ ಮೀಸಲು ನಿಧಿಯೊಂದಿಗೆ ಆರಂಭಿಸಿ 100 ಕೋಟಿ ರೂ. ದುಡಿಯುವ ಬಂಡವಾಳ ಸಾಧಿಸಿದ ಉಡುಪಿ ಜಿಲ್ಲೆಯ ಮೊತ್ತಮೊದಲ ಸೌಹಾರ್ದ ಸಹಕಾರಿ ಸಂಘವೆಂಬ ಗೌರವಕ್ಕೆ ಗಂಗೊಳ್ಳಿ ಟೌನ್ ಸೌಹಾರ್ದ ಕೋಆಪರೇಟಿವ್ ಸೊಸೈಟಿ ಲಿಮಿಟೆಡ್ ಪಾತ್ರವಾಗಿದೆ. 1920ರಲ್ಲಿ ಪ್ರಾರಂಭವಾದ ಗಂಗೊಳ್ಳಿ ಟೌನ್ ಸೌಹಾರ್ದ ಕೋಆಪರೇಟಿವ್ ಸೊಸೈಟಿ ಪ್ರಸಕ್ತ 101 ಕೋಟಿ ರೂ. ದುಡಿಯುವ ಬಂಡವಾಳವನ್ನು ದಾಖಲಿಸಿದ್ದು, ಉಡುಪಿ ಜಿಲ್ಲೆಯಲ್ಲಿ 100 ಕೋಟಿ ರೂ. ದುಡಿಯುವ ಬಂಡವಾಳ ಹೊಂದಿದ ಮೊದಲ ಸೌಹಾರ್ದ ಸಹಕಾರಿ ಸಂಘವೆಂಬ ಗೌರವ ಪಡೆದುಕೊಂಡಿದೆ. https://chat.whatsapp.com/Ge11n7QCiMj5QyPvCc0H19 23 ಸೆಂಟ್ಸ್ ಸ್ವಂತ ನಿವೇಶನದಲ್ಲಿ ಪ್ರಧಾನ ಕಚೇರಿ, ಗಂಗೊಳ್ಳಿ ಶಾಖೆ ಹಾಗೂ ಸಭಾಭವನವನ್ನು ಹೊಂದಿರುವ ಸುಸಜ್ಜಿತ ಕಟ್ಟಡವನ್ನು ಹೊಂದಿ ಕೋಟೇಶ್ವರ ಹಾಗೂ ಉಪ್ಪುಂದದಲ್ಲಿ ಶಾಖೆಗಳನ್ನು ಹೊಂದಿರುವ ಗಂಗೊಳ್ಳಿ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯು, ಚಿನ್ನಾಭರಣ ಸಾಲ, ಮೊಬೈಲ್ ಮೂಲಕ ಪಿಗ್ಮಿ ಸಂಗ್ರಹ, ಕೋರ್ ಬ್ಯಾಂಕಿಂಗ್, ಸಂಪೂರ್ಣ ಗಣಕೀಕೃತ ಲೆಕ್ಕಪತ್ರ, ಸನ್ನದು ಲೆಕ್ಕ ಪರಿಶೋಧಕರಿಂದ…

Read More

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮತ್ತು ರೋಟರಿ ಕ್ಲಬ್ ಕಾಪು ಇವರ ಜಂಟಿ ಸಹಯೋಗದೊಂದಿಗೆ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ದಿ ಕೇಂದ್ರ, ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ, ದೇರಳಕಟ್ಟೆ ಹಾಗೂ ಸಮುದಾಯ ದಂತ ವಿಭಾಗ , ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ ಇವರ ನುರಿತ ತಜ್ಞ ವೈದ್ಯರ ತಂಡದೊಂದಿಗೆ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಮತ್ತು ದಂತ ತಪಾಸಣೆ ಶಿಬಿರ ಡಿಸೆಂಬರ್‌ 22ರಂದು ಬೆಳಗ್ಗೆ 9.30ರಿಂದ ಅಪರಾಹ್ನ 12.30ರವರೆಗೆ ನೆಲಮಹಡಿ, ವಿವೇಕ್ ಕಾಂಪ್ಲೆಕ್ಸ್, ಹೊಸ ಮಾರಿಗುಡಿ ಹತ್ತಿರ, ಕಾಪು (ಸಂಘದ ವಠಾರ) ಇಲ್ಲಿ ನಡೆಯಲಿದೆ. https://chat.whatsapp.com/Ge11n7QCiMj5QyPvCc0H19 ಈ ವೈದ್ಯಕೀಯ ಶಿಬಿರದಲ್ಲಿ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ, ಉಚಿತ ಕನ್ನಡಕ ವಿತರಣೆ, ಮಧುಮೇಹ ತಪಾಸಣೆ, ಬಿ.ಪಿ ತಪಾಸಣೆ, ಸಾಮಾನ್ಯ ವೈದ್ಯಕೀಯ ತಪಾಸಣೆ, ಕಿವಿ, ಮೂಗು ಮತ್ತು ಗಂಟಲು ತಪಾಸಣೆ, ಎಲುಬು ಮತ್ತು ಕೀಲು ತಪಾಸಣೆ, ಹುಳುಕು ಹಲ್ಲುಗಳನ್ನು ಭರ್ತಿ ಮಾಡುವುದು, ರೋಗಗ್ರಸ್ಥ ಹಲ್ಲುಗಳನ್ನು ಕೀಳುವುದು, ಹಲ್ಲುಗಳನ್ನು…

Read More

ಮಡಿಕೇರಿಯಲ್ಲಿ ಕೇರಳ ತಂಡದ ವ್ಯವಸ್ಥಿತ ಜಾಲ ಬೇಧಿಸಿದ ಕೊಡಗು ಜಿಲ್ಲಾ ಪೊಲೀಸ್‌ ತಂಡ ಮಡಿಕೇರಿ: ನಕಲಿ ಚಿನ್ನ ಅಡಮಾನವಿರಿಸಿ ಬ್ಯಾಂಕ್‌ ಮತ್ತು ಹಣಕಾಸು ಸಂಸ್ಥೆಗಳಿಗಹೆ ವಂಚಿಸುತ್ತಿರುವ ಪ್ರಕರಣಗಳು ಆಗಿಂದಾಗ್ಗೆ ವರದಿಯಾಗುತ್ತಲೇ ಇರುತ್ತವೆ. ಇದೀಗ ಅಂಥದೇ ಪ್ರಕರಣವೊಂದನ್ನು ಬೇಧಿಸಿರುವ ಕೊಡಗು ಜಿಲ್ಲಾ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿ 12 ಆರೋಪಿಗಳನ್ನು ಬಂಧಿಸಿದ್ದಾರೆ. https://chat.whatsapp.com/Ge11n7QCiMj5QyPvCc0H19 ಕೊಡಗು ಜಿಲ್ಲೆಯ ವಿವಿಧ ಬ್ಯಾಂಕ್‌ ಹಾಗೂ ಹಣಕಾಸು ಸಂಸ್ಥೆಗಳಲ್ಲಿ ನಕಲಿ ಚಿನ್ನ ಅಡಮಾನ ಇರಿಸಿ ಸಾಲ ಪಡೆದುಕೊಂಡು ವಂಚಿಸಿರುವ ಆರೋಪಿಗಳು 625 ಗ್ರಾಂ ತೂಕದ ನಕಲಿ ಚಿನ್ನಾಭರಣವನ್ನು ಅಡವು ಇರಿಸಿ 34.95 ಲಕ್ಷ ರೂ. ಸಾಲ ಪಡೆದಿದ್ದರು. ಈ ಪ್ರಕರಣವನ್ನು ಪತ್ತೆ ಹಚ್ಚಿರುವ ಬಗ್ಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ರಾಮರಾಜನ್‌ ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ನಕಲಿ ಚಿನ್ನ ಅಡಮಾನವಿಟ್ಟು ಸಾಲ ಪಡೆದ ಪ್ರಕರಣದ ಪ್ರಮುಖ ರೂವಾರಿ ಕೇರಳದ ಮೊಹಮ್ಮದ್ ಕುಂಞ (48). ಈತ ಆಭರಣ ತಯಾರಕನಾಗಿದ್ದು, ಪ್ರದೀಪ್ (60) ಎಂಬಾತನಿಗೆ ಹಣ ನೀಡಿ ನುರಿತ ಚಿನ್ನ ಪರೀಕ್ಷಕರಿಗೂ…

Read More

ಮಂಗಳೂರು: ಎಸ್‌.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ ಆಪರೇಟಿವ್‌ ಸೊಸೈಟಿಯ 17ನೇ ಬ್ಯಾಂಕಿಂಗ್‌ ಶಾಖೆಯು ಡಿಸೆಂಬರ್‌ 23ರಂದು ಸೋಮವಾರ ಹಿರಿಯಡ್ಕ ರಾಜರಾಜೇಶ್ವರಿ ಕಟ್ಟಡದ ಮೊದಲ ಮಹಡಿಯಲ್ಲಿ ಕಾರ್ಯಾರಂಭಗೊಳ್ಳಲಿದೆ. ಡಿಸೆಂಬರ್‌ 23ರಂದು ಬೆಳಗ್ಗೆ 11ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಆ ಬಳಿಕ ಹಿಡಿಯಡ್ಕದ ದೇವಾಡಿಗ ಭವನ ಶ್ರೀ ವೀರಭದ್ರ ಸ್ವಾಮಿ ಸಾಂಸ್ಕೃತಿಕ ಕಲಾಕೇಂದ್ರದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಶ್ರೀಮದ್‌ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿಯವರು ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ. ಹಾಸನ ಜಿಲ್ಲೆ ಅರಕಲಗೂಡಿನ ಅರೆಮಾದನಹಳ್ಳಿ ಶ್ರೀ ವಿಶ್ವಕರ್ಮ ಜಗದ್ಗುರು ಪೀಠ, ವಿಶ್ವಬ್ರಾಹ್ಮಣ ಮಹಾಸಂಸ್ಥಾನದ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. https://chat.whatsapp.com/Ge11n7QCiMj5QyPvCc0H19 ಎಸ್‌.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ ಆಪರೇಟಿವ್‌ ಸೊಸೈಟಿಯ ಅಧ್ಯಕ್ಷ ಉಪೇಂದ್ರ ಆಚಾರ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಸುರೇಶ್‌ ಶೆಟ್ಟಿ ಗುರ್ಮೆ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ ಗಣಕೀಕರಣ ಘಟಕ ಉದ್ಘಾಟಿಸಲಿದ್ದಾರೆ. ಉಡುಪಿ…

Read More